2 ಸಮುವೇಲನು 17 : 1 (IRVKN)
ಹೂಷೈಯು ಅಹೀತೋಫೆಲನ ಆಲೋಚನೆ ನಿರರ್ಥಕಪಡಿಸಿದ್ದು ತರುವಾಯ ಅಹೀತೋಫೆಲನು ಅಬ್ಷಾಲೋಮನಿಗೆ, “ಅಪ್ಪಣೆಯಾಗಲಿ, ನಾನು ಹನ್ನೆರಡು ಸಾವಿರ ಜನರನ್ನು ಆರಿಸಿಕೊಂಡು ಈ ರಾತ್ರಿಯೇ ದಾವೀದನನ್ನು ಹಿಂದಟ್ಟುವೆನು.
2 ಸಮುವೇಲನು 17 : 2 (IRVKN)
ಅವನು ದಣಿದವನೂ, ಧೈರ್ಯಗುಂದಿದವನೂ ಆಗಿರುವಾಗಲೇ ಪಕ್ಕನೇ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು. ಅವನ ಜನರೆಲ್ಲರೂ ಓಡಿಹೋಗುವರು.
2 ಸಮುವೇಲನು 17 : 3 (IRVKN)
ನಾನು ಅರಸನೊಬ್ಬನನ್ನೇ ಕೊಂದು, ನಿನ್ನ ಅಪೇಕ್ಷೆಯಂತೆ ಎಲ್ಲಾ ಜನರನ್ನು ನಿನ್ನ ಬಳಿಗೆ ತಿರುಗಿ ಬರಮಾಡುವೆನು. ನಿನ್ನ ದೇಶದಲ್ಲೆಲ್ಲಾ ಸಮಾಧಾನವುಂಟಾಗುವುದು” ಎಂದು ಹೇಳಿದನು.
2 ಸಮುವೇಲನು 17 : 4 (IRVKN)
ಈ ಮಾತು ಅಬ್ಷಾಲೋಮನಿಗೂ, ಇಸ್ರಾಯೇಲರ ಎಲ್ಲಾ ಹಿರಿಯರಿಗೂ ಸರಿಯಾಗಿ ಕಂಡಿತು.
2 ಸಮುವೇಲನು 17 : 5 (IRVKN)
ಆಮೇಲೆ ಅಬ್ಷಾಲೋಮನು, “ಅರ್ಕೀಯನಾದ ಹೂಷೈಯನ್ನು ಕರೆದು ಅವನ ಅಭಿಪ್ರಾಯವನ್ನು ಕೇಳೋಣ” ಎಂದು ಹೇಳಿದನು.
2 ಸಮುವೇಲನು 17 : 6 (IRVKN)
ಹೂಷೈಯನು ಅಬ್ಷಾಲೋಮನ ಬಳಿಗೆ ಬಂದಾಗ ಅವನನ್ನು, “ಅಹೀತೋಫೆಲನು ಹೀಗೆ ಹೇಳುತ್ತಿದ್ದಾನೆ, ಇದರಂತೆ ಮಾಡಿದರೆ ಒಳ್ಳೆಯದಾಗುವುದೋ, ಇಲ್ಲವಾದರೆ ನಿನ್ನ ಅಭಿಪ್ರಾಯವೇನು?” ಎಂದು ಕೇಳಿದನು.
2 ಸಮುವೇಲನು 17 : 7 (IRVKN)
ಹೂಷೈಯು ಅಬ್ಷಾಲೋಮನಿಗೆ, “ಈ ಸಾರಿ ಅಹೀತೋಫೆಲನು ಹೇಳಿದ ಆಲೋಚನೆ ಒಳ್ಳೆಯದಲ್ಲ.
2 ಸಮುವೇಲನು 17 : 8 (IRVKN)
ನಿನ್ನ ತಂದೆಯೂ ಮತ್ತು ಅವನ ಜನರೂ ಶೂರರಾಗಿದ್ದಾರೆ, ಈಗ ಅವರು ಮರಿಯನ್ನು ಕಳೆದುಕೊಂಡ ಕರಡಿಯಂತೆ ರೋಷವುಳ್ಳವರಾಗಿದ್ದಾರೆಂದು ನಿನಗೆ ಗೊತ್ತಿದೆ. ಇದಲ್ಲದೆ ಅವನು ಯುದ್ಧದಲ್ಲಿ ನಿಪುಣನು, ಜನರ ಮಧ್ಯದಲ್ಲಿ ರಾತ್ರಿ ಕಳೆಯುವವನಲ್ಲ.
2 ಸಮುವೇಲನು 17 : 9 (IRVKN)
ಅವನು ಈಗ ಒಂದು ಗುಹೆಯಲ್ಲಾಗಲಿ, ಬೇರೆ ಯಾವುದಾದರೊಂದು ಸ್ಥಳದಲ್ಲಾಗಲಿ ಅಡಗಿಕೊಂಡಿರುವನು. ಮೊದಲು ನಮ್ಮವರಲ್ಲೇ ಕೆಲವರು ಸತ್ತರೆ, ಜನರು ಇದನ್ನು ಕೇಳಿ ಅಬ್ಷಾಲೋಮನ ಪಕ್ಷದವರಿಗೆ ಅಪಜಯವುಂಟಾಯಿತೆಂದು ಸುದ್ದಿ ಹಬ್ಬಿಸುವರು.
2 ಸಮುವೇಲನು 17 : 10 (IRVKN)
ಆಗ ಸಿಂಹಹೃದಯಿಗಳಾದ ಶೂರರ ಎದೆಯು ಕರಗಿ ನೀರಾಗುವುದು. ನಿನ್ನ ತಂದೆಯು ರಣವೀರನೆಂದೂ, ಅವನ ಸಂಗಡ ಇದ್ದವರು ಪರಾಕ್ರಮಶಾಲಿಗಳೆಂದೂ ಎಲ್ಲಾ ಇಸ್ರಾಯೇಲರು ಬಲ್ಲರಷ್ಟೆ.
2 ಸಮುವೇಲನು 17 : 11 (IRVKN)
ಹೀಗಿರುವುದರಿಂದ ನನ್ನ ಆಲೋಚನೆಯನ್ನು ಕೇಳು. ದಾನಿನಿಂದ ಬೇರ್ಷೆಬದ ವರೆಗೆ ವಾಸವಾಗಿರುವ ಇಸ್ರಾಯೇಲರೊಳಗಿನಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ಕೂಡಿಸಿ, ನೀನೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗಬೇಕು.
2 ಸಮುವೇಲನು 17 : 12 (IRVKN)
ನಾವು ಅವನಿರುವ ಸ್ಥಳವನ್ನು ಗೊತ್ತುಮಾಡಿಕೊಂಡು ಹೋಗಿ, ಇಬ್ಬನಿಯು ನೆಲದ ಮೇಲೆ ಹೇಗೊ, ಹಾಗೆಯೇ ನಾವು ಅವರ ಮೇಲೆ ಬೀಳೋಣ. ಆಗ ಅವನೂ ಮತ್ತು ಅವನ ಜನರೂ ನಮ್ಮ ಕೈಗೆ ಸಿಕ್ಕುವರು. ಒಬ್ಬನೂ ತಪ್ಪಿಸಿಕೊಳ್ಳಲಾರನು.
2 ಸಮುವೇಲನು 17 : 13 (IRVKN)
ಅವನು ಒಂದು ಪಟ್ಟಣವನ್ನು ಹೊಕ್ಕಿರುವುದಾದರೆ, ಇಸ್ರಾಯೇಲ್ಯರೆಲ್ಲರೂ ಹಗ್ಗಗಳನ್ನು ತೆಗೆದುಕೊಂಡು ಅಲ್ಲಿಗೆ ಬರಲಿ. ಆಗ ಆ ಊರನ್ನು ಒಂದು ಹರಳಾದರೂ ಉಳಿಯದಂತೆ ಹಗ್ಗಗಳಿಂದ ಎಳೆದುಕೊಂಡು ಹೋಗಿ ಹೊಳೆಯಲ್ಲಿ ಹಾಕಿ ಬಿಡೋಣ” ಎಂದನು.
2 ಸಮುವೇಲನು 17 : 14 (IRVKN)
ಇದನ್ನು ಕೇಳಿ ಅಬ್ಷಾಲೋಮನೂ, ಎಲ್ಲಾ ಇಸ್ರಾಯೇಲರೂ, “ಅರ್ಕೀಯನಾದ ಹೂಷೈಯ ಆಲೋಚನೆಯು ಅಹೀತೋಫೇಲನ ಆಲೋಚನೆಗಿಂತ ಒಳ್ಳೆಯದಾಗಿದೆ” ಎಂದರು. ಯೆಹೋವನು ಅಬ್ಷಾಲೋಮನಿಗೆ ಕೇಡನ್ನುಂಟುಮಾಡಬೇಕೆಂದು ಅಹೀತೋಫೇಲನ ಆಲೋಚನೆಯನ್ನು ನಿರರ್ಥಕಮಾಡಿದನು.
2 ಸಮುವೇಲನು 17 : 15 (IRVKN)
ಹೂಷೈಯು ದಾವೀದನನ್ನು ಎಚ್ಚರಿಸಿದ್ದು ಮತ್ತು ಅಹೀತೋಫೆಲನ ಮರಣ ತರುವಾಯ ಹೂಷೈಯು ಯಾಜಕನಾದ ಚಾದೋಕ್ ಎಬ್ಯಾತಾರರಿಗೆ, “ಅಹೀತೋಫೆಲನು ಅಬ್ಷಾಲೋಮನಿಗೂ ಮತ್ತು ಇಸ್ರಾಯೇಲರ ಹಿರಿಯರಿಗೂ ಇಂಥಿಂಥ ಆಲೋಚನೆಯನ್ನು ಹೇಳಿದನು, ನಾನು ಹೀಗೆ ಹೇಳಿದ್ದೇನೆ.
2 ಸಮುವೇಲನು 17 : 16 (IRVKN)
ಆದುದರಿಂದ ನೀವು ಬೇಗನೆ ಅರಸನಾದ ದಾವೀದನಿಗೆ, ‘ನೀನು ಈ ರಾತ್ರಿ ಅಡವಿಯಲ್ಲಿ ನದಿ ದಾಟುವ ಸ್ಥಳದ ಹತ್ತಿರ ಇಳಿದುಕೊಳ್ಳಬೇಡ. ಶೀಘ್ರವಾಗಿ ನದಿದಾಟಿ ಮುಂದೆ ಹೋಗಿಬಿಡಬೇಕು. ಇಲ್ಲವಾದರೆ ನೀನೂ ನಿನ್ನ ಜನರೂ ನಾಶವಾಗುವಿರಿ’ ಎಂದು ಹೇಳಿಕಳುಹಿಸಿರಿ” ಎಂದನು
2 ಸಮುವೇಲನು 17 : 17 (IRVKN)
ಯೋನಾತಾನ ಮತ್ತು ಅಹೀಮಾಚರು ರೋಗೆಲಿನ ಬುಗ್ಗೆಯ ಬಳಿಯಲ್ಲಿದ್ದರು. ಇವರ ಮನೆಯ ದಾಸಿಯು ಎಲ್ಲಾ ವರ್ತಮಾನಗಳನ್ನು ಇವರಿಗೂ ಮತ್ತು ಇವರ ಅರಸನಾದ ದಾವೀದನಿಗೂ ಮುಟ್ಟಿಸುವಂತೆ ಗೊತ್ತುಮಾಡಿಕೊಂಡಿದ್ದರು. ತಮ್ಮನ್ನು ಯಾರೂ ನೋಡಬಾರದೆಂದು ಇವರು ತಾವಾಗಿ ಊರೊಳಕ್ಕೆ ಬರಲಿಲ್ಲ.
2 ಸಮುವೇಲನು 17 : 18 (IRVKN)
ಆದರೂ ಒಬ್ಬ ಯೌವನಸ್ಥನು ಅವರನ್ನು ನೋಡಿ ಅಬ್ಷಾಲೋಮನಿಗೆ ತಿಳಿಸಿದನು. ಅಷ್ಟರಲ್ಲಿ ಅವರಿಬ್ಬರೂ ಓಡಿಹೋಗಿ ಬಹುರೀಮಿನಲ್ಲಿ ಇದ್ದ ಒಬ್ಬನ ಮನೆಯನ್ನು ಹೊಕ್ಕರು. ಆ ಮನೆಯ ಅಂಗಳದಲ್ಲಿ ಒಂದು ಬಾವಿಯಿತ್ತು. ಅವರು ಅದರಲ್ಲಿ ಇಳಿದುಕೊಂಡರು.
2 ಸಮುವೇಲನು 17 : 19 (IRVKN)
ಕೂಡಲೆ ಆ ಮನೆಯ ಹೆಂಗಸು ಅದರ ಮೇಲೆ ಒಂದು ಬಟ್ಟೆಯನ್ನು ಹಾಸಿ, ಅದರ ಮೇಲೆ ಗೋದಿಯ ನುಚ್ಚನ್ನು ಹರಡಿದಳು. ಇದರಿಂದ ಅವರು ಅಲ್ಲಿ ಅಡಗಿರುವ ವಿಷಯ ಯಾರಿಗೂ ಗೊತ್ತಾಗಲಿಲ್ಲ.
2 ಸಮುವೇಲನು 17 : 20 (IRVKN)
ಅಬ್ಷಾಲೋಮನ ಸೇವಕರು ಆ ಸ್ತ್ರೀಯ ಮನೆಗೆ ಹೋಗಿ, “ಅಹೀಮಾಚ ಮತ್ತು ಯೋನಾತಾನರು ಎಲ್ಲಿದ್ದಾರೆ?” ಎಂದು ಆಕೆಯನ್ನು ಕೇಳಿದ್ದಕ್ಕೆ ಆಕೆಯು, “ಅವರು ಹಳ್ಳ ದಾಟಿ ಹೋಗಿಬಿಟ್ಟರು” ಎಂದು ಉತ್ತರ ಕೊಟ್ಟಳು. ಅವರು ಅಹೀಮಾಚ ಮತ್ತು ಯೋನಾತಾನರನ್ನು ಹುಡುಕುವುದಕ್ಕೆ ಹೋಗಿ, ಕಾಣದೆ ಯೆರೂಸಲೇಮಿಗೆ ಹಿಂತಿರುಗಿದರು.
2 ಸಮುವೇಲನು 17 : 21 (IRVKN)
ಅವರು ಹೋದ ಕೂಡಲೆ ಇವರಿಬ್ಬರೂ ಬಾವಿಯಿಂದ ಮೇಲಕ್ಕೆ ಬಂದು ಅರಸನಾದ ದಾವೀದನ ಬಳಿಗೆ ಹೋದರು. ಅವರು ದಾವೀದನಿಗೆ, “ಅಹೀತೋಫೆಲನು ನಿನಗೆ ವಿರೋಧವಾಗಿ ಇಂಥಿಂಥ ಆಲೋಚನೆಯನ್ನು ಹೇಳಿದ್ದಾನೆ. ಆದುದರಿಂದ ಬೇಗನೆ ಎದ್ದು ನದಿದಾಟಿ ಹೋಗು” ಎಂದು ಹೇಳಿದನು.
2 ಸಮುವೇಲನು 17 : 22 (IRVKN)
ಆಗ ದಾವೀದನೂ ಮತ್ತು ಅವನ ಜೊತೆಯಲ್ಲಿದ್ದವರೆಲ್ಲರೂ ಯೊರ್ದನ್ ನದಿಯನ್ನು ದಾಟಿದರು. ಬೆಳಗಾದಾಗ ದಾಟಬೇಕಾದವನು ಒಬ್ಬನೂ ಇರಲಿಲ್ಲ.
2 ಸಮುವೇಲನು 17 : 23 (IRVKN)
ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದಾಗ ಅವನು ಕತ್ತೆಗೆ ತಡಿಹಾಕಿಸಿ, ಅದರ ಮೇಲೆ ತನ್ನ ಊರಿಗೆ ಹೋದನು. ತನ್ನ ಮನೆಯಲ್ಲಿ ವ್ಯವಸ್ಥೆಮಾಡಿದ ನಂತರ, ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.
2 ಸಮುವೇಲನು 17 : 24 (IRVKN)
ದಾವೀದನ ಪ್ರಯಾಣ; ಅವನಿಗೆ ದೊರೆತ ಆದರಣೆ ದಾವೀದನು ಮಹನಯಿಮಿಗೆ ಹೋದನು. ಅಬ್ಷಾಲೋಮನು ಮತ್ತು ಇಸ್ರಾಯೇಲರೆಲ್ಲರೂ ಕೂಡಿಕೊಂಡು ಯೊರ್ದನ್ ನದಿಯನ್ನು ದಾಟಿದರು.
2 ಸಮುವೇಲನು 17 : 25 (IRVKN)
ಅವನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೇನಾಧಿಪತಿಯನ್ನಾಗಿ ನೇಮಿಸಿದನು. * ಅಥವಾ ಇಸ್ಮಾಯೇಲನಾದ. ಇಸ್ರಾಯೇಲನಾದ ಇತ್ರನು, ನಾಹಾಷನ ಮಗಳೂ ಯೋವಾಬನ ತಾಯಿಯಾದ ಚೆರೂಯಳ ತಂಗಿಯೂ ಆದ ಅಬೀಗೈಲ್ ಎಂಬುವಳನ್ನು ಸಂಗಮಿಸಿದ್ದರಿಂದ ಈ ಅಮಾಸನು ಹುಟ್ಟಿದನು.
2 ಸಮುವೇಲನು 17 : 26 (IRVKN)
ಇಸ್ರಾಯೇಲ್ಯರೂ ಅಬ್ಷಾಲೋಮನೂ ಗಿಲ್ಯಾದ್ ದೇಶದಲ್ಲಿ ಪಾಳೆಯಮಾಡಿಕೊಂಡರು.
2 ಸಮುವೇಲನು 17 : 27 (IRVKN)
ದಾವೀದನು ಮಹನಯಿಮಿಗೆ ಬಂದಾಗ ಅಮ್ಮೋನಿಯರ ರಬ್ಬಾ ಊರಿನವನಾದ ನಾಹಾಷನ ಮಗ ಶೋಬಿ, ಲೋದೆಬಾರಿನ ಅಮ್ಮೀಯೇಲನ ಮಗನಾದ ಮಾಕೀರ್, ರೋಗೆಲೀಮ್ ಊರಿನ ಗಿಲ್ಯಾದ್ಯನಾದ ಬರ್ಜಿಲ್ಲೈ ಎಂಬುವರು
2 ಸಮುವೇಲನು 17 : 28 (IRVKN)
ದಾವೀದನಿಗೂ ಅವನ ಜನರಿಗೂ ಹಾಸಿಗೆ, ಬಟ್ಟಲು, ಮಡಕೆ ಇವುಗಳೊಂದಿಗೆ, ಊಟಕ್ಕಾಗಿ ಗೋದಿ, ಜವೆಗೋದಿ, ಹಿಟ್ಟು, ಹುರಿಗಾಳು, ಅವರೆಕಾಳು, ಅಲಸಂದಿ, ಬೇಳೆ ಜೇನುತುಪ್ಪ,
2 ಸಮುವೇಲನು 17 : 29 (IRVKN)
ಬೆಣ್ಣೆ, ಕುರಿ ಹಸುವಿನ ಗಿಣ್ಣು ಇವುಗಳನ್ನು ತಂದುಕೊಟ್ಟರು. ಜನರು ಅರಣ್ಯ ಪ್ರಯಾಣದಿಂದ ಹಸಿದವರೂ, ದಣಿದವರೂ ಮತ್ತು ಬಾಯಾರಿದವರೂ ಆಗಿದ್ದಾರೆ ಎಂದುಕೊಂಡು ಇವುಗಳನ್ನು ತಂದರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29