2 ಸಮುವೇಲನು 2 : 1 (IRVKN)
{ದಾವೀದನಿಗೆ ಯೆಹೂದ್ಯರ ಅರಸನಾಗಿ ರಾಜಾಭಿಷೇಕವಾದದ್ದು} [PS] ಅನಂತರ ದಾವೀದನು ಯೆಹೋವನನ್ನು, “ನಾನು ಯೆಹೂದ ದೇಶದ ಯಾವುದಾದರು ಒಂದು ಪಟ್ಟಣಕ್ಕೆ ಹೋಗಬಹುದೋ?” ಎಂದು ಕೇಳಲು ಆತನು ಹೋಗಬಹುದು ಅಂದನು. ಅವನು ತಿರುಗಿ, “ಯಾವ ಊರಿಗೆ ಹೋಗಲಿ?” ಎಂದು ಕೇಳಿದ್ದಕ್ಕೆ ಹೆಬ್ರೋನಿಗೆ ಹೋಗು ಎಂದು ಉತ್ತರ ಸಿಕ್ಕಿತು.
2 ಸಮುವೇಲನು 2 : 2 (IRVKN)
ಆಗ ದಾವೀದನು ತನ್ನ ಇಬ್ಬರು ಹೆಂಡತಿಯರಾದ ಇಜ್ರೇಲಿನ ಅಹೀನೋವಮಳನ್ನೂ, ಕರ್ಮೇಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳನ್ನೂ ಕರೆದುಕೊಂಡು ಅಲ್ಲಿಗೆ ಹೋದನು.
2 ಸಮುವೇಲನು 2 : 3 (IRVKN)
ದಾವೀದನ ಜನರೂ ತಮ್ಮ ತಮ್ಮ ಕುಟುಂಬಗಳನ್ನು ಕರೆದುಕೊಂಡು ಅವನ ಜೊತೆಯಲ್ಲಿ ಹೋಗಿ ಹೆಬ್ರೋನಿಗೆ ಸೇರಿದ ಊರುಗಳಲ್ಲಿ ವಾಸಮಾಡಿದರು. [PE][PS]
2 ಸಮುವೇಲನು 2 : 4 (IRVKN)
ತರುವಾಯ ಯೆಹೂದ್ಯರು ಅಲ್ಲಿಗೆ ಬಂದು ದಾವೀದನನ್ನು ಅಭಿಷೇಕಿಸಿ, ತಮ್ಮ ಕುಲಕ್ಕೆ ಅರಸನನ್ನಾಗಿ ಮಾಡಿಕೊಂಡರು. ಸೌಲನ ಶವವನ್ನು ಸಮಾಧಿಮಾಡಿದವರು ಯಾಬೇಷ್ ಗಿಲ್ಯಾದ್ ದೇಶದವರೇ ಎಂಬ ಸಂಗತಿಯು ದಾವೀದನಿಗೆ ಗೊತ್ತಾಯಿತು.
2 ಸಮುವೇಲನು 2 : 5 (IRVKN)
ಆಗ ದಾವೀದನು ಅವರ ಬಳಿಗೆ ದೂತರನ್ನು ಕಳುಹಿಸಿ, “ನೀವು ನಿಷ್ಠೆಯಿಂದ ನಿಮ್ಮ ಒಡೆಯನಾದ ಸೌಲನ ಶವವನ್ನು ಸಮಾಧಿ ಮಾಡಿದ್ದಕ್ಕಾಗಿ ನಿಮಗೆ ಯೆಹೋವನ ಆಶೀರ್ವಾದವುಂಟಾಗಲಿ.
2 ಸಮುವೇಲನು 2 : 6 (IRVKN)
ಯೆಹೋವನ ಒಡಂಬಡಿಕೆಯ ನಂಬಿಕೆ ಮತ್ತು ಸತ್ಯ ನಿಮ್ಮೊಂದಿಗಿರಲಿ. ಈ ಕಾರ್ಯಕ್ಕಾಗಿ ನಾನೂ ನಿಮಗೆ ಉಪಕಾರ ಮಾಡುವೆನು.
2 ಸಮುವೇಲನು 2 : 7 (IRVKN)
ಯೆಹೂದ್ಯರು ನನ್ನನ್ನು ಅಭಿಷೇಕಿಸಿ, ತಮ್ಮ ಅರಸನನ್ನಾಗಿ ಮಾಡಿಕೊಂಡಿದ್ದಾರೆ. ನಿಮ್ಮ ಅರಸನಾದ ಸೌಲನು ಸತ್ತುಹೋದರೂ ನೀವು ಶೂರರಾಗಿರಿ, ನಿಮ್ಮ ಕೈಗಳು ಜೋಲುಬೀಳದಿರಲಿ” ಎಂದು ಹೇಳಿ ಕಳುಹಿಸಿದನು. [PS]
2 ಸಮುವೇಲನು 2 : 8 (IRVKN)
{ಈಷ್ಬೋಶೆತನು ಇಸ್ರಾಯೇಲಿನಲ್ಲಿ ಅರಸನಾದದ್ದು} [PS] ಸೌಲನ ಸೇನಾಧಿಪತಿಯೂ ನೇರನ ಮಗನೂ ಆದ ಅಬ್ನೇರನು ಸೌಲನ ಮಗನಾದ [* ಅಥವಾ ಈಷಬಾಲೆ.] ಈಷ್ಬೋಶೆತನನ್ನು ಹೊಳೆಯ ಆಚೆಯಲ್ಲಿರುವ ಮಹನಯಿಮಿಗೆ ಕರೆದುಕೊಂಡು ಹೋಗಿ
2 ಸಮುವೇಲನು 2 : 9 (IRVKN)
ಅವನನ್ನು ಗಿಲ್ಯಾದ್, ಆಶೇರ್, ಇಜ್ರೇಲ, ಎಫ್ರಾಯೀಮ್, ಬೆನ್ಯಾಮೀನ ಜನರಿಗೂ ಬೇರೆ ಎಲ್ಲಾ ಇಸ್ರಾಯೇಲರಿಗೂ ಅರಸನನ್ನಾಗಿ ಮಾಡಿದನು.
2 ಸಮುವೇಲನು 2 : 10 (IRVKN)
ಸೌಲನ ಮಗನಾದ ಈಷ್ಬೋಶೆತನು ನಲ್ವತ್ತು ವರ್ಷದವನಾದಾಗ ಇಸ್ರಾಯೇಲರನ್ನು ಆಳತೊಡಗಿ ಎರಡು ವರ್ಷ ರಾಜ್ಯಭಾರ ಮಾಡಿದನು. ಯೆಹೂದ್ಯರು ಮಾತ್ರ ದಾವೀದನನ್ನು ಹಿಂಬಾಲಿಸಿದರು.
2 ಸಮುವೇಲನು 2 : 11 (IRVKN)
ದಾವೀದನು ಹೆಬ್ರೋನಿನಲ್ಲಿ ಯೆಹೂದ್ಯರ ಅರಸನಾಗಿದ್ದದ್ದು ಏಳು ವರ್ಷ ಆರು ತಿಂಗಳುಗಳು. [PS]
2 ಸಮುವೇಲನು 2 : 12 (IRVKN)
{ಇಸ್ರಾಯೇಲ್ ಮತ್ತು ಯೆಹೂದ್ಯರ ನಡುವೆ ಯುದ್ಧ} [PS] ಒಂದು ದಿನ ನೇರನ ಮಗನಾದ ಅಬ್ನೇರನೂ, ಸೌಲನ ಮಗನಾದ ಈಷ್ಬೋಶೆತನ ಸೇವಕರೂ ಮಹನಯಿಮಿನಿಂದ ಹೊರಟು ಗಿಬ್ಯೋನಿಗೆ ಬಂದರು.
2 ಸಮುವೇಲನು 2 : 13 (IRVKN)
ಚೆರೂಯಳ ಮಗನಾದ ಯೋವಾಬನೂ ದಾವೀದನ ಸೇವಕರು ಹೊರಟು ಅವರನ್ನು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿ, ಒಂದು ಗುಂಪು ಕೆರೆಯ ಈಚೆಯಲ್ಲಿಯೂ ಇನ್ನೊಂದು ಗುಂಪು ಆಚೆಯಲ್ಲಿಯೂ ಕುಳಿತುಕೊಂಡರು.
2 ಸಮುವೇಲನು 2 : 14 (IRVKN)
ಆಗ ಅಬ್ನೇರನು ಯೋವಾಬನಿಗೆ, “ಎರಡು ಕಡೆಯ ತರುಣರು ಎದ್ದು ನಮ್ಮ ಮುಂದೆ ಸ್ಪರ್ಧಿಸಲಿ” ಎಂದು ಹೇಳಲು ಯೋವಾಬನು, “ಆಗಲಿ” ಅಂದನು.
2 ಸಮುವೇಲನು 2 : 15 (IRVKN)
ಆಗ ಸೌಲನ ಮಗನಾದ ಈಷ್ಬೋಶೆತನ ಕಡೆಯವರಾದ ಹನ್ನೆರಡು ಮಂದಿ ಬೆನ್ಯಾಮೀನ್ಯರು, ದಾವೀದನ ಸೇವಕರಲ್ಲಿ ಹನ್ನೆರಡು ಮಂದಿಯೂ ಸಮಸಂಖ್ಯೆಯಾಗಿ ಹೊರಟು ಬಂದರು.
2 ಸಮುವೇಲನು 2 : 16 (IRVKN)
ಅವರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಎದುರಾಳಿಯ ತಲೆಹಿಡಿದು, ಕತ್ತಿಯಿಂದ ಪಕ್ಕೆಯಲ್ಲಿ ತಿವಿದಿದ್ದರಿಂದ ಎಲ್ಲರೂ ಸತ್ತು ಬಿದ್ದರು. ಆದ್ದರಿಂದ ಗಿಬ್ಯೋನಿನಲ್ಲಿರುವ ಆ ಸ್ಥಳಕ್ಕೆ “ [† ಅಥವಾ ಹದಗತ್ತಿ ಹೊಲ.] ಹೆಲ್ಕಾತ್ ಹಸ್ಸೂರಿಂ” ಎಂದು ಹೆಸರಾಯಿತು.
2 ಸಮುವೇಲನು 2 : 17 (IRVKN)
ಅನಂತರ ಆ ದಿನ ಘೋರ ಯುದ್ಧವಾಯಿತು. ಅಬ್ನೇರನೂ ಇಸ್ರಾಯೇಲ್ಯರೂ ದಾವೀದನ ಸೇವಕರಿಂದ ಸೋಲಿಸಲ್ಪಟ್ಟರು. [PS]
2 ಸಮುವೇಲನು 2 : 18 (IRVKN)
{ಅಸಾಹೇಲನ ಮರಣ} [PS] ಚೆರೂಯಳ ಮೂರು ಮಂದಿ ಮಕ್ಕಳಾದ ಯೋವಾಬ, ಅಬೀಷೈ, ಅಸಾಹೇಲ ಎಂಬುವರು ಅಲ್ಲಿಗೆ ಬಂದಿದ್ದರು. ಅಸಾಹೇಲನು ಅಡವಿಯ ಜಿಂಕೆಯಂತೆ ಚುರುಕು ಕಾಲಿನವನಾಗಿದ್ದನು.
2 ಸಮುವೇಲನು 2 : 19 (IRVKN)
ಇವನು ಎಡಕ್ಕಾದರೂ ಬಲಕ್ಕಾದರೂ ತಿರುಗದೇ ಅಬ್ನೇರನನ್ನು ಹಿಂದಟ್ಟಿದನು.
2 ಸಮುವೇಲನು 2 : 20 (IRVKN)
ಅಬ್ನೇರನು ಹಿಂತಿರುಗಿ ನೋಡಿ, “ನೀನು ಅಸಾಹೇಲನೋ?” ಎಂದು ಕೇಳಿದ್ದಕ್ಕೆ ಅವನು ಹೌದೆಂದು ಉತ್ತರಕೊಟ್ಟನು.
2 ಸಮುವೇಲನು 2 : 21 (IRVKN)
ಆಗ ಅಬ್ನೇರನು ಅವನಿಗೆ, “ನನ್ನನ್ನು ಬಿಟ್ಟು ಎಡಕ್ಕಾಗಲಿ, ಬಲಕ್ಕಾಗಲಿ ತಿರುಗಿಕೊಂಡು ಯುವಕರಲ್ಲೊಬ್ಬನನ್ನು ಹಿಡಿದು ಸುಲಿದುಕೋ” ಎಂದು ಹೇಳಿದನು. ಆದರೆ ಅಸಾಹೇಲನು ಒಪ್ಪಲಿಲ್ಲ.
2 ಸಮುವೇಲನು 2 : 22 (IRVKN)
ಅಬ್ನೇರನು ತಿರುಗಿ ಅಸಾಹೇಲನಿಗೆ, “ನನ್ನನ್ನು ಬಿಟ್ಟು ಹೋಗು, ನಾನೇಕೆ ನಿನ್ನನ್ನು ನೆಲಕ್ಕುರುಳಿಸಬೇಕು? ಹಾಗೆ ಮಾಡಿದರೆ ನಿನ್ನ ಅಣ್ಣನಾದ ಯೋವಾಬನಿಗೆ ಹೇಗೆ ಮುಖ ತೋರಿಸಲಿ” ಅಂದನು.
2 ಸಮುವೇಲನು 2 : 23 (IRVKN)
ಅಸಾಹೇಲನು ಬಿಟ್ಟು ಹೋಗುವುದಕ್ಕೆ ಒಪ್ಪದ ಕಾರಣ ಅಬ್ನೇರನು ಬರ್ಜಿಯನ್ನು ಹಿಂದಿನಿಂದ ಅವನ ಹೊಟ್ಟೆಯೊಳಗೆ ತಿವಿದನು. ಬರ್ಜಿಯು ಅವನ ಬೆನ್ನಿನಿಂದ ಹಾಯ್ದು ಹೊರಗೆ ಬಂದಿತು. ಅವನು ಕೂಡಲೇ ಅಲ್ಲೇ ಬಿದ್ದು ಸತ್ತನು. ಅಸಾಹೇಲನು ಸತ್ತು ಬಿದ್ದ ಸ್ಥಳಕ್ಕೆ ಬಂದವರೆಲ್ಲರೂ ಅಲ್ಲೇ ನಿಂತರು.
2 ಸಮುವೇಲನು 2 : 24 (IRVKN)
ಆದರೆ ಯೋವಾಬನೂ, ಅಬೀಷೈಯೂ ಅಬ್ನೇರನನ್ನು ಹಿಂದಟ್ಟಿದರು. ಹೀಗೆ ಅವರು “ಅಮ್ಮಾ” ಎಂಬ ಗುಡ್ಡಕ್ಕೆ ಬರುವಷ್ಟರಲ್ಲಿ ಸೂರ್ಯಾಸ್ತಮಾನವಾಯಿತು. ಆ ಗುಡ್ಡವು ಗಿಬ್ಯೋನಿನ ಅರಣ್ಯ ಮಾರ್ಗದ ಬಳಿಯಲ್ಲಿರುವ ಗೀಯದ ಎದುರಿನಲ್ಲಿರುತ್ತದೆ.
2 ಸಮುವೇಲನು 2 : 25 (IRVKN)
ಬೆನ್ಯಾಮೀನ್ಯರು ಒಂದೇ ಗುಂಪಾಗಿ ಕೂಡಿಕೊಂಡು ಅಬ್ನೇರನ ಬಳಿಗೆ ಬಂದು ಗುಡ್ಡದ ಮೇಲೆ ನಿಂತರು. [PE][PS]
2 ಸಮುವೇಲನು 2 : 26 (IRVKN)
ಆಗ ಅಬ್ನೇರನು, “ಯೋವಾಬನನ್ನು ಕತ್ತಿಯು ಯಾವಾಗಲೂ ತಿನ್ನುತ್ತಲೇ ಇರಬೇಕೋ? ಹಗೆತನವೇ ಇದರ ಅಂತ್ಯಫಲವೆಂದು ನಿನಗೆ ಗೊತ್ತಾಗಲಿಲ್ಲವೋ? ಸಹೋದರರನ್ನು ಹಿಂದಟ್ಟುವುದು ಸಾಕೆಂದು ನಿನ್ನ ಜನರಿಗೆ ಯಾವಾಗ ಆಜ್ಞಾಪಿಸುವಿ” ಎಂದನು.
2 ಸಮುವೇಲನು 2 : 27 (IRVKN)
ಅದಕ್ಕೆ ಯೋವಾಬನು, “ದೇವರ ಜೀವದಾಣೆ, ಈಗ ನೀನು ಈ ಮಾತುಗಳನ್ನು ಹೇಳದಿದ್ದರೆ ಜನರು ನಾಳೆ ಬೆಳಗಾಗುವವರೆಗೆ ತಮ್ಮ ಬಂಧುಗಳನ್ನು ಹಿಂದಟ್ಟದೆ ಬಿಡುವುದಿಲ್ಲ” ಎಂದು ಉತ್ತರಕೊಟ್ಟು ಕೂಡಲೇ ತುತ್ತೂರಿಯನ್ನು ಊದಿಸಿದನು.
2 ಸಮುವೇಲನು 2 : 28 (IRVKN)
ಆಗ ಅವರು ಇಸ್ರಾಯೇಲ್ಯರನ್ನು ಹಿಂದಟ್ಟದೆ ಬಿಟ್ಟಿದ್ದರಿಂದ ಯುದ್ಧವು ನಿಂತುಹೋಯಿತು.
2 ಸಮುವೇಲನು 2 : 29 (IRVKN)
ಅಬ್ನೇರನೂ ಅವನ ಜನರೂ ಅರಾಬಾ ತಗ್ಗಿನಲ್ಲಿ ರಾತ್ರಿಯೆಲ್ಲಾ ಪ್ರಯಾಣ ಮಾಡಿ ಯೊರ್ದನ್ ಹೊಳೆದಾಟಿ, [‡ ಅಂದರೆ ಬೆಳಿಗ್ಗೆಯೆಲ್ಲಾ.] ಬಿಥ್ರೋನ ಕಣಿವೆಯನ್ನು ಹಾದು, ಮಹನಯಿಮಿಗೆ ಸೇರಿದರು. [PE][PS]
2 ಸಮುವೇಲನು 2 : 30 (IRVKN)
ಯೋವಾಬನು ಅಬ್ನೇರನನ್ನು ಹಿಂದಟ್ಟದೆ ಬಿಟ್ಟು, ಹಿಂದಿರುಗಿ ಬಂದು, ಜನರನ್ನು ಸೇರಿಸಿ ಲೆಕ್ಕಮಾಡಿದಾಗ ಅವರಲ್ಲಿ ದಾವೀದನ ಹತ್ತೊಂಬತ್ತು ಮಂದಿ ಸೈನಿಕರೂ ಅಸಾಹೇಲನೂ ಇರಲಿಲ್ಲ.
2 ಸಮುವೇಲನು 2 : 31 (IRVKN)
ಆದರೆ ದಾವೀದನ ಸೈನಿಕರು ಅಬ್ನೇರನ ಜನರಾಗಿರುವ ಬೆನ್ಯಾಮೀನ್ಯರಲ್ಲಿ ಮುನ್ನೂರ ಅರವತ್ತು ಮಂದಿಯನ್ನು ಕೊಂದಿದ್ದರು.
2 ಸಮುವೇಲನು 2 : 32 (IRVKN)
ಅವರು ಅಸಾಹೇಲನ ಶವವನ್ನು ತಂದು ಅದನ್ನು ಬೇತ್ಲೆಹೇಮಿನಲ್ಲಿರುವ ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅನಂತರ ಯೋವಾಬನೂ, ಅವನ ಜನರೂ ರಾತ್ರಿಯೆಲ್ಲಾ ಪ್ರಯಾಣಮಾಡಿ ಹೆಬ್ರೋನಿಗೆ ಬಂದರು. ಆಗ ಸೂರ್ಯೋದಯವಾಯಿತು. [PE]
❮
❯