2 ಸಮುವೇಲನು 22 : 1 (IRVKN)
{ದಾವೀದನ ರಚಿಸಿದ ಸ್ತುತಿಗೀತೆ} [PS] ಯೆಹೋವನು ದಾವೀದನನ್ನು ಎಲ್ಲಾ ಶತ್ರುಗಳ ಕೈಗೂ ಸೌಲನ ಕೈಗೂ ಸಿಕ್ಕದಂತೆ ತಪ್ಪಿಸಿದಾಗ ಅವನು ಯೆಹೋವನ ಘನಕ್ಕಾಗಿ ಈ ಜಯ ಗೀತೆಯನ್ನು ರಚಿಸಿ ಹೀಗೆ ಹಾಡಿದನು: [QBR]
2 ಸಮುವೇಲನು 22 : 2 (IRVKN)
ಯೆಹೋವನು ನನ್ನ ಬಂಡೆಯೂ, ನನ್ನ ಕೋಟೆಯೂ ನನ್ನ ವಿಮೋಚಕನೂ ಆಗಿದ್ದಾನೆ. [QBR]
2 ಸಮುವೇಲನು 22 : 3 (IRVKN)
ಆತನು ನನ್ನ ಆಶ್ರಯಗಿರಿಯಾಗಿರುವ ದೇವರೂ, ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ, ನನ್ನ ದುರ್ಗವೂ, ನನ್ನ ಶರಣನೂ, ಹಿಂಸೆಯಿಂದ ನನ್ನನ್ನು ರಕ್ಷಿಸುವವನೂ ಆಗಿದ್ದಾನೆ. [QBR]
2 ಸಮುವೇಲನು 22 : 4 (IRVKN)
ಯೆಹೋವನು ಸ್ತೋತ್ರಕ್ಕೆ ಅರ್ಹನು. ನಾನು ಆತನಿಗೆ ಮೊರೆಯಿಡಲು ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ. [QBR]
2 ಸಮುವೇಲನು 22 : 5 (IRVKN)
ಮರಣ ಪ್ರವಾಹದ ಅಲ್ಲಕಲ್ಲೋಲಗಳು ನನ್ನನ್ನು ಸುತ್ತಿಕೊಂಡವು. ನಾಶಪ್ರವಾಹವು ನನ್ನನ್ನು ನಡುಗಿಸಿತು. [QBR]
2 ಸಮುವೇಲನು 22 : 6 (IRVKN)
ಪಾತಾಳಪಾಶಗಳು ನನ್ನನ್ನು ಆವರಿಸಿಕೊಂಡವು, ಮರಣಕರವಾದ ಉರುಲುಗಳು ನನ್ನನ್ನು ಸುತ್ತಿಕೊಂಡವು. [QBR]
2 ಸಮುವೇಲನು 22 : 7 (IRVKN)
ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು. ನನ್ನ ದೇವರನ್ನು ಪ್ರಾರ್ಥಿಸಿದೆನು. ಆತನು ತನ್ನ ಮಂದಿರದಲ್ಲಿ ನನ್ನ ಸ್ವರವನ್ನು ಕೇಳಿದನು. ನನ್ನ ಪ್ರಾರ್ಥನೆ ಆತನ ಸನ್ನಿಧಿಗೆ ಕೇಳಿಸಿತು. [QBR]
2 ಸಮುವೇಲನು 22 : 8 (IRVKN)
ಆಗ ಆತನ ಕೋಪದಿಂದ ಭೂಮಿಯು ಕಂಪಿಸಿತು. ಆಕಾಶದ ಆಧಾರಗಳು ನಡುಗಿ ಕದಲಿದವು. [QBR]
2 ಸಮುವೇಲನು 22 : 9 (IRVKN)
ಆತನ ಮೂಗಿನಿಂದ ಹೊಗೆಯು ಬಂದಿತು. ಆತನ ಬಾಯಿಂದ ಅಗ್ನಿಜ್ವಾಲೆಯು ಹೊರಟು ಸಿಕ್ಕಿದ್ದೆಲ್ಲವನ್ನು ದಹಿಸಿ ಕೆಂಡವನ್ನಾಗಿ ಮಾಡಿತು. [QBR]
2 ಸಮುವೇಲನು 22 : 10 (IRVKN)
ಆತನು ಆಕಾಶವನ್ನು ತಗ್ಗಿಸಿ ಇಳಿದು ಬಂದನು. ಆತನ ಪಾದಗಳ ಕೆಳಗೆ ಕಾರ್ಗತ್ತಲಿತ್ತು. [QBR]
2 ಸಮುವೇಲನು 22 : 11 (IRVKN)
ಕೆರೂಬಿವಾಹನನಾಗಿ ಹಾರಿದನು. ವಾಯುವೇ ಆತನ ರೆಕ್ಕೆಗಳೋ ಎಂಬಂತೆ ಇಳಿದು ಪ್ರತ್ಯಕ್ಷನಾದನು. [QBR]
2 ಸಮುವೇಲನು 22 : 12 (IRVKN)
ಕತ್ತಲನ್ನೂ, ಜಲಮಯವಾಗಿರುವ ನೀಲಮೇಘಗಳನ್ನೂ, ತನ್ನ ಸುತ್ತಲೂ ಗುಡಾರದಂತೆ ಕವಿಸಿಕೊಂಡನು. [QBR]
2 ಸಮುವೇಲನು 22 : 13 (IRVKN)
ಆತನ ಸಾನ್ನಿಧ್ಯ ಪ್ರಕಾಶದಿಂದ ಉರಿಗೆಂಡಗಳು ಹೊರಟವು. [QBR]
2 ಸಮುವೇಲನು 22 : 14 (IRVKN)
ಯೆಹೋವನು ಆಕಾಶದಿಂದ ಗುಡುಗಿದನು. ಪರಾತ್ಪರನಾದ ದೇವರು ಧ್ವನಿಗೊಟ್ಟನು. [QBR]
2 ಸಮುವೇಲನು 22 : 15 (IRVKN)
ಆತನು ಬಾಣಗಳನ್ನೆಸೆದು ಶತ್ರುಗಳನ್ನು ಚದುರಿಸಿಬಿಟ್ಟನು. ಸಿಡಿಲಿನಿಂದ ಅವುಗಳನ್ನು ಕಳವಳಗೊಳಿಸಿದನು. [QBR]
2 ಸಮುವೇಲನು 22 : 16 (IRVKN)
ಆಗ ಯೆಹೋವನ ಗದರಿಕೆಯಿಂದಲೂ ಆತನ ಶ್ವಾಸಭರದಿಂದಲೂ ಸಮುದ್ರದ ತಳವು ಕಾಣಿಸಿತು. ಭೂಮಂಡಲದ ಅಸ್ಥಿವಾರವು ತೋರಿಬಂದವು. [QBR]
2 ಸಮುವೇಲನು 22 : 17 (IRVKN)
ಆತನು ಮೇಲಣಲೋಕದಿಂದ ಕೈಚಾಚಿ ನನ್ನನ್ನು ಹಿಡಿದು! ಮಹಾಜಲರಾಶಿಯೊಳಗಿಂದ ನನ್ನನ್ನು ಎಳೆದನು. [QBR]
2 ಸಮುವೇಲನು 22 : 18 (IRVKN)
ನನಗಿಂತ ಬಲಿಷ್ಠರೂ, ಪುಷ್ಠರೂ ಆಗಿ ದ್ವೇಷಿಸುತ್ತಿದ್ದ ಶತ್ರುಗಳಿಂದ ನನ್ನನ್ನು ಬಿಡಿಸಿ ರಕ್ಷಿಸಿದನು. [QBR]
2 ಸಮುವೇಲನು 22 : 19 (IRVKN)
ಅವರು ನನ್ನ ಆಪತ್ಕಾಲದಲ್ಲಿ ನನ್ನ ಮೇಲೆ ಬಿದ್ದರು. ಆಗ ಯೆಹೋವನು ನನಗೆ ಉದ್ಧಾರಕನಾದನು. [QBR]
2 ಸಮುವೇಲನು 22 : 20 (IRVKN)
ಆತನು ನನ್ನನ್ನು ಅಪಾಯದಿಂದ ಬಿಡಿಸಿದನು. ನನ್ನನ್ನು ಮೆಚ್ಚಿ [* ಅಥವಾ ವಿಶಾಲ ಸ್ಥಳದಲ್ಲಿ ಸೇರಿಸಿದನು.] ರಕ್ಷಿಸಿದನು. [QBR]
2 ಸಮುವೇಲನು 22 : 21 (IRVKN)
ಯೆಹೋವನು ನನ್ನ ಸನ್ನಡತೆಗೆ ತಕ್ಕ ಪ್ರತಿಫಲ ನೀಡಿದನು. ನನ್ನ ಕೈಗಳ ಶುದ್ಧತ್ವಕ್ಕೆ ತಕ್ಕಂತೆ ಪ್ರತಿಫಲಕೊಟ್ಟನು. [QBR]
2 ಸಮುವೇಲನು 22 : 22 (IRVKN)
ಯೆಹೋವನ ಮಾರ್ಗವನ್ನೇ ಅನುಸರಿಸಿದೆನಲ್ಲಾ ನನ್ನ ದೇವರನ್ನು ಬಿಟ್ಟು ದ್ರೋಹ ಮಾಡಲಿಲ್ಲ. [QBR]
2 ಸಮುವೇಲನು 22 : 23 (IRVKN)
ನಾನು ಆತನ ಆಜ್ಞೆಗಳನ್ನು ಯಾವಾಗಲೂ ನನ್ನೆದುರಿನಲ್ಲಿ ಇಟ್ಟುಕೊಂಡೆನು. ಆತನ ವಿಧಿಗಳಿಂದ ತಪ್ಪಿ ಹೋಗಲಿಲ್ಲ. [QBR]
2 ಸಮುವೇಲನು 22 : 24 (IRVKN)
ನಾನು ಆತನ ದೃಷ್ಟಿಯಲ್ಲಿ ನಿರ್ದೋಷಿಯು. ಪಾಪದಲ್ಲಿ ಬೀಳದಂತೆ ಜಾಗರೂಕತೆಯಿಂದ ನಡೆದುಕೊಂಡೆನು. [QBR]
2 ಸಮುವೇಲನು 22 : 25 (IRVKN)
ಆದ್ದರಿಂದ ನನ್ನ ನೀತಿಗೆ ತಕ್ಕಂತೆಯೂ, ಆತನ ದೃಷ್ಟಿಯಲ್ಲಿ ನನ್ನ ನಿರಪರಾಧಕ್ಕೆ ತಕ್ಕಂತೆಯೂ ಯೆಹೋವನು ನನಗೆ ತಕ್ಕ ಪ್ರತಿಫಲವನ್ನು ಕೊಟ್ಟನು. [QBR]
2 ಸಮುವೇಲನು 22 : 26 (IRVKN)
ನೀನು ಕೃಪೆಯುಳ್ಳವನಿಗೆ ಕೃಪಾವಂತನೂ, ದೋಷವಿಲ್ಲದವರಿಗೆ ನಿರ್ದೋಷಿಯೂ. [QBR]
2 ಸಮುವೇಲನು 22 : 27 (IRVKN)
ಶುದ್ಧನಿಗೆ ಪರಿಶುದ್ಧನೂ, ವಕ್ರಬುದ್ಧಿಯವನಿಗೆ ವಕ್ರನೂ ಆಗಿರುವಿ. [QBR]
2 ಸಮುವೇಲನು 22 : 28 (IRVKN)
ದೀನರನ್ನು ಉದ್ಧರಿಸುತ್ತಿ. ಹಮ್ಮಿನವರನ್ನು ಕಂಡುಹಿಡಿದು ತಗ್ಗಿಸಿಬಿಡುತ್ತಿ. [QBR]
2 ಸಮುವೇಲನು 22 : 29 (IRVKN)
ಯೆಹೋವನೇ, ನನ್ನ ದೀಪವು ನೀನೇ. ಯೆಹೋವನು ನನಗೆ ಬೆಳಕನ್ನು ಕೊಟ್ಟು ನನ್ನ ಕತ್ತಲನ್ನು ಪರಿಹರಿಸುವನು. [QBR]
2 ಸಮುವೇಲನು 22 : 30 (IRVKN)
ನಿನ್ನ ಬಲದಿಂದ [† ಅಥವಾ ನಾನು ಜಜ್ಜಿಹಾಕುವೆನು.] ನಾನು ದಂಡಿನ ಮೇಲೆ ಬೀಳುವೆನು. ನನ್ನ ದೇವರ ಸಹಾಯದಿಂದ ಪ್ರಾಕಾರಗಳನ್ನು ಹಾರುವೆನು. [QBR]
2 ಸಮುವೇಲನು 22 : 31 (IRVKN)
ದೇವರ ಮಾರ್ಗವು ಯಾವ ದೋಷವೂ ಇಲ್ಲದ್ದು ಯೆಹೋವನ ವಚನವು ಶುದ್ಧವಾದದ್ದು. ಆತನು ಆಶ್ರಿತರೆಲ್ಲರಿಗೆ ಗುರಾಣಿಯಾಗಿದ್ದಾನೆ. [QBR]
2 ಸಮುವೇಲನು 22 : 32 (IRVKN)
ಯೆಹೋವನಲ್ಲದೆ ದೇವರು ಯಾರು? ನಮ್ಮ ದೇವರ ಹೊರತು ಶರಣನು ಎಲ್ಲಿ? [QBR]
2 ಸಮುವೇಲನು 22 : 33 (IRVKN)
ದೇವರು ನನ್ನ ಬಲವಾದ ಕೋಟೆಯಾಗಿದ್ದಾನೆ. ಆತನು ನನ್ನ ಮಾರ್ಗವನ್ನು ಸರಾಗಮಾಡುತ್ತಾನೆ. [QBR]
2 ಸಮುವೇಲನು 22 : 34 (IRVKN)
ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕು ಮಾಡುತ್ತಾನೆ. ನನ್ನನ್ನು ಉನ್ನತಪ್ರದೇಶಗಳಲ್ಲಿ ನಿಲ್ಲಿಸುತ್ತಾನೆ [QBR]
2 ಸಮುವೇಲನು 22 : 35 (IRVKN)
ಆತನು ನನಗೆ ಯುದ್ಧ ವಿದ್ಯೆಯನ್ನು ಕಲಿಸಿದ್ದರಿಂದ ನಾನು ತಾಮ್ರದ ಬಿಲ್ಲನ್ನಾದರೂ ಉಪಯೋಗಿಸಬಲ್ಲೆನು. [QBR]
2 ಸಮುವೇಲನು 22 : 36 (IRVKN)
ನೀನು ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ. ನಿನ್ನ ಕೃಪಾಕಟಾಕ್ಷವು ನನ್ನನ್ನು ಉನ್ನತಕ್ಕೆ ಏರಿಸಿದೆ. [QBR]
2 ಸಮುವೇಲನು 22 : 37 (IRVKN)
ನೀನು ನನ್ನ ಕಾಲುಗಳಿಗೆ ವಿಶಾಲ ಸ್ಥಳವನ್ನು ಕೊಟ್ಟಿದ್ದರಿಂದ ನನ್ನ ಕಾಲುಗಳು ಕದಲುವುದಿಲ್ಲ. [QBR]
2 ಸಮುವೇಲನು 22 : 38 (IRVKN)
ನನ್ನ ಶತ್ರುಗಳನ್ನು ಹಿಂದಟ್ಟಿ ಸಂಹರಿಸುವೆನು. ಅವರನ್ನು ಇಲ್ಲದಂತೆ ಮಾಡುವವರೆಗೂ ಹಿಂದಿರುಗುವುದಿಲ್ಲ. [QBR]
2 ಸಮುವೇಲನು 22 : 39 (IRVKN)
ಅವರನ್ನು ನಿರ್ನಾಮಗೊಳಿಸುವೆನು, ಹೊಡೆದು ಏಳಲಾರದಂತೆ ಮಾಡುವೆನು. ಅವರು ನನ್ನ ಪಾದದ ಕೆಳಗೆ ಬೀಳುವರು. [QBR]
2 ಸಮುವೇಲನು 22 : 40 (IRVKN)
ನೀನು ನನಗೆ ಯುದ್ಧಕ್ಕಾಗಿ ಶೌರ್ಯವೆಂಬ ನಡುಕಟ್ಟನ್ನು ಬಿಗಿದಿದ್ದಿ. ಎದುರಾಳಿಗಳನ್ನು ಕುಗ್ಗಿಸಿ ನನಗೆ ಅಧೀನಮಾಡಿದ್ದಿ. [QBR]
2 ಸಮುವೇಲನು 22 : 41 (IRVKN)
ನನ್ನ ಶತ್ರುಗಳನ್ನು ಬೆಂಗೊಟ್ಟು ಓಡಮಾಡಿದ್ದೀ. ನನ್ನ ಶತ್ರುಗಳನ್ನು ನಿರ್ಮೂಲ ಮಾಡುವೆನು. [QBR]
2 ಸಮುವೇಲನು 22 : 42 (IRVKN)
ಅವರು ಸಹಾಯಕ್ಕಾಗಿ ಕೂಗಿಕೊಂಡರೂ ರಕ್ಷಿಸುವವನಿಲ್ಲ. ಯೆಹೋವನಿಗೆ ಮೊರೆಯಿಟ್ಟರೂ ಆತನು ಉತ್ತರವನ್ನು ಕೊಡಲೇ ಇಲ್ಲ. [QBR]
2 ಸಮುವೇಲನು 22 : 43 (IRVKN)
ಭೂಮಿಯ ಧೂಳನ್ನೋ ಎಂಬಂತೆ ಅವರನ್ನು ಪುಡಿಪುಡಿ ಮಾಡಿದೆನು. ಬೀದಿಯಲ್ಲಿರುವ ಕೆಸರನ್ನೋ ಎಂಬಂತೆ ಅವರನ್ನು ತುಳಿದು ಎಸೆದುಬಿಟ್ಟೆನು. [QBR]
2 ಸಮುವೇಲನು 22 : 44 (IRVKN)
ನನ್ನ ಜನರ ಕಲಹಗಳಿಗೆ ನನ್ನನ್ನು ತಪ್ಪಿಸಿದ್ದಿ. ಜನಾಂಗಗಳಿಗೆ ದೊರೆಯಾಗುವಂತೆ ನನ್ನನ್ನು ಉಳಿಸಿದ್ದಿ. ನಾನರಿಯದ ಜನಾಂಗದವರು ಸಹ ನನಗೆ ಅಧೀನರಾಗುವರು. [QBR]
2 ಸಮುವೇಲನು 22 : 45 (IRVKN)
ದೇಶಾಂತರದವರು ನನ್ನ ಮುಂದೆ ಮುದುರಿಕೊಳ್ಳುವರು. ನನ್ನ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ನನಗೆ ವಿಧೇಯರಾಗುವರು. [QBR]
2 ಸಮುವೇಲನು 22 : 46 (IRVKN)
ಅವರು ಧೈರ್ಯಗುಂದಿದವರಾಗಿ ತಮ್ಮ ತಮ್ಮ ಕೋಟೆಗಳಿಂದ ನಡುಗುತ್ತಾ ಬರುವರು. [QBR]
2 ಸಮುವೇಲನು 22 : 47 (IRVKN)
ಯೆಹೋವನು ಚೈತನ್ಯಸ್ವರೂಪನು. ನನ್ನ ಶರಣನಿಗೆ ಸ್ತೋತ್ರ. ನನ್ನ ಆಶ್ರಯಗಿರಿಯಾಗಿರುವ ದೇವರಿಗೆ ಕೊಂಡಾಟ. [QBR]
2 ಸಮುವೇಲನು 22 : 48 (IRVKN)
ಆತನು ನನ್ನ ಶತ್ರುಗಳಿಗೆ ಪ್ರತಿದಂಡನೆಮಾಡುವ ದೇವರು. ಜನಾಂಗಗಳನ್ನು ನನಗೆ ಅಧೀನಪಡಿಸುತ್ತಾನೆ. [QBR]
2 ಸಮುವೇಲನು 22 : 49 (IRVKN)
ಶತ್ರುಗಳಿಂದ ನನ್ನನ್ನು ಬಿಡಿಸುವಾತನೇ, ನೀನು ನನ್ನನ್ನು ನನ್ನ ಎದುರಾಳಿಗಳಿಂದ ತಪ್ಪಿಸಿ ಉನ್ನತಪಡಿಸುತ್ತಿ. ಬಲಾತ್ಕಾರಿಗಳಿಂದ ನನ್ನನ್ನು ರಕ್ಷಿಸುತ್ತಿ. [QBR]
2 ಸಮುವೇಲನು 22 : 50 (IRVKN)
ಈ ಕಾರಣದಿಂದ ಯೆಹೋವನೇ, ಅನ್ಯಜನಾಂಗಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು. ನಿನ್ನ ನಾಮವನ್ನು ಸಂಕೀರ್ತಿಸುವೆನು. [QBR]
2 ಸಮುವೇಲನು 22 : 51 (IRVKN)
ಆತನು ತಾನು ನೇಮಿಸಿದ ಅರಸನಿಗೋಸ್ಕರ ವಿಶೇಷ ರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ. ತಾನು ಅಭಿಷೇಕಿಸಿದ ದಾವೀದನಿಗೂ, ಅವನ ಸಂತತಿಯವರೆಗೆ ಸದಾಕಾಲವೂ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51

BG:

Opacity:

Color:


Size:


Font: