2 ಸಮುವೇಲನು 23 : 1 (IRVKN)
{ದಾವೀದನ ಕೊನೆಯ ಮಾತುಗಳು} [PS] ದಾವೀದನ ಕೊನೆಯ ಮಾತುಗಳು - [QBR] ಇಷಯನ ಮಗನಾದ ದಾವೀದನು, [QBR] ಉನ್ನತ ಸ್ಥಾನದಲ್ಲಿ ಸ್ಥಾಪಿಸಲ್ಪಟ್ಟವನು, [QBR] ಯಾಕೋಬನ ದೇವರಿಂದ ಅಭಿಷೇಕಿಸಲ್ಪಟ್ಟವನೂ, [QBR] ಇಸ್ರಾಯೇಲ್ಯರ ವರಕವಿಯೂ ಆಗಿರುವವನ ನುಡಿಗಳು: [QBR]
2 ಸಮುವೇಲನು 23 : 2 (IRVKN)
“ಯೆಹೋವನ ಆತ್ಮವು ನನ್ನ ಮೂಲಕ ಮಾತನಾಡಿತು. [QBR] ಆತನ ವಾಕ್ಯವು ನನ್ನ ಬಾಯಲ್ಲಿತ್ತು. [QBR]
2 ಸಮುವೇಲನು 23 : 3 (IRVKN)
ಇಸ್ರಾಯೇಲರ ಶರಣನೂ, [QBR] ದೇವರೂ ಆಗಿರುವಾತನು ಹೇಳಿದ್ದೇನೆಂದರೆ, [QBR] ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಜನರನ್ನು ನೀತಿಯಿಂದ ಆಳುವವನು, [QBR]
2 ಸಮುವೇಲನು 23 : 4 (IRVKN)
ಮೋಡಗಳಿಲ್ಲದ ಪ್ರಾತಃಕಾಲದಲ್ಲಿ ತೇಜೋಮಯನಾಗಿ ಉದಯಿಸಿ, [QBR] ಮೋಡಗಳನ್ನು ಚದುರಿಸಿಬಿಟ್ಟು, [QBR] ಮಳೆಬಿದ್ದ ಭೂಮಿಯಿಂದ ಹುಲ್ಲನ್ನು ಮೊಳೆಯಿಸುವ ಸೂರ್ಯನಿಗೆ ಸಮಾನನಾಗಿದ್ದಾನೆ. [QBR]
2 ಸಮುವೇಲನು 23 : 5 (IRVKN)
ನನ್ನ ಮನೆಯು ಯೆಹೋವನ ಸನ್ನಿಧಿಯಲ್ಲಿ ಹೀಗೆಯೇ ಸ್ಥಿರವಾಗಿರುತ್ತದಲ್ಲವೇ? [QBR] ಆತನು ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿದ್ದಾನಲ್ಲವೋ? [QBR] ಅದು ಎಂದಿಗೂ ಬಿದ್ದುಹೋಗದೆ ಎಲ್ಲಾ ವಿಷಯಗಳಲ್ಲಿಯೂ ಖಚಿತವಾಗಿರುತ್ತದೆ. [QBR] ನನ್ನ ರಕ್ಷಣೆಯ ಮೂಲವೂ, ನನ್ನ ಅಭಿಲಾಷೆಯನ್ನು ಪೂರ್ತಿಗೊಳಿಸುವವನೂ ಆತನೇ ಅಲ್ಲವೋ? [QBR]
2 ಸಮುವೇಲನು 23 : 6 (IRVKN)
ದುಷ್ಟರು ದೂರಕ್ಕೆ ಬಿಸಾಡಲ್ಪಟ್ಟ ಮುಳ್ಳುಗಳಂತಿರುತ್ತಾರೆ. [QBR] ಅವುಗಳನ್ನು ಹಿಡಿಯಬೇಕೆಂದಿರುವವನು ತನ್ನ ಕೈಯಿಂದ ಹಿಡಿಯಲಾರದೆ, [QBR]
2 ಸಮುವೇಲನು 23 : 7 (IRVKN)
ಕಬ್ಬಿಣದ ಆಯುಧವನ್ನೂ, ಬರ್ಜಿಯ ಹಿಡಿಯನ್ನೂ ಉಪಯೋಗಿಸಬೇಕು. [QBR] ಅವು ಬಿದ್ದಲ್ಲಿಯೇ ಬೆಂಕಿಯಿಂದ ಸುಟ್ಟುಹೋಗುವವು.” [PS]
2 ಸಮುವೇಲನು 23 : 8 (IRVKN)
{ದಾವೀದನ ರಣವೀರರ ಶೌರ್ಯಸಾಹಸಗಳು} [PS] ದಾವೀದನೊಂದಿಗಿದ್ದ ರಣವೀರರ ಪಟ್ಟಿ: ತಹ್ಕೆಮೋನ್ಯನಾದ ಯೋಷಬ್ ಬಷ್ಬೆಬೆತನು ಸರದಾರರಲ್ಲಿ ಮುಖ್ಯಸ್ಥನು. ಎಚ್ನೀಯನಾದ ಅದೀನೋ ಅನ್ನಿಸಿಕೊಳ್ಳುವ ಇವನು ಒಂದೇ ಸಾರಿ ಎಂಟುನೂರು ಮಂದಿಯನ್ನು ಕೊಂದನು.
2 ಸಮುವೇಲನು 23 : 9 (IRVKN)
ಎರಡನೆಯವನು ಅಹೋಹ್ಯನಾದ ದೋದೋ ಎಂಬುವವನ ಮಗನಾಗಿರುವ ಎಲ್ಲಾಜಾರನು. ಫಿಲಿಷ್ಟಿಯರು ಯುದ್ಧಕ್ಕೆ ಕೂಡಿಕೊಂಡಾಗ ಅವರನ್ನು ನಿಂದಿಸುವುದಕ್ಕೆ ದಾವೀದನ ಜೊತೆಯಲ್ಲಿ ಹೋದ ಮೂರು ಮಂದಿ ಶೂರರಲ್ಲಿ ಇವನೂ ಒಬ್ಬನಾಗಿದ್ದನು.
2 ಸಮುವೇಲನು 23 : 10 (IRVKN)
ಇಸ್ರಾಯೇಲರು ಹೋದ ನಂತರ ಇವನು ನಿಂತುಕೊಂಡು, ಕತ್ತಿ ಹಿಡಿದು, ಕೈ ಸೋತು ಹೋಗುವ ತನಕ ಫಿಲಿಷ್ಟಿಯರನ್ನು ಕೊಲ್ಲುತ್ತಲೇ ಇದ್ದನು. ಆ ದಿನದಲ್ಲಿ ಯೆಹೋವನು ಮಹಾಜಯವನ್ನುಂಟುಮಾಡಲು ಇಸ್ರಾಯೇಲರು ಸುಲಿದುಕೊಳ್ಳುವುದಕ್ಕಾಗಿ ಹಿಂದಿರುಗಿದರು.
2 ಸಮುವೇಲನು 23 : 11 (IRVKN)
ಮೂರನೆಯವನು ಹರಾರ್ಯನಾದ ಆಗೇಯನ ಮಗ ಶಮ್ಮ ಎಂಬುವವನು. ಫಿಲಿಷ್ಟಿಯರು ದೊಡ್ಡ ಗುಂಪಾಗಿ ಒಂದು ಅಲಸಂದಿಯ ಹೊಲಕ್ಕೆ ಬಂದರು.
2 ಸಮುವೇಲನು 23 : 12 (IRVKN)
ಇಸ್ರಾಯೇಲ್ಯರು ಅವರ ಎದುರಿನಿಂದ ಓಡಿಹೋದಾಗ, ಇವನು ಆ ಹೊಲದ ಮಧ್ಯದಲ್ಲೇ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದು, ಹೊಲವನ್ನು ಕಾಪಾಡಿದನು. ಹೀಗೆ ಯೆಹೋವನು ಮಹಾಜಯವನ್ನುಂಟುಮಾಡಿದನು.
2 ಸಮುವೇಲನು 23 : 13 (IRVKN)
ಮೂವತ್ತು ಮಂದಿ ಪ್ರಸಿದ್ಧ ಶೂರರಲ್ಲಿ ದಾವೀದನು ಅದುಲ್ಲಾಮ್ ಗವಿಯಲ್ಲಿದ್ದಾಗ ಸುಗ್ಗಿಕಾಲದಲ್ಲಿ ಅವನ ಬಳಿಗೆ ಮೂವರು ಬಂದರು. ಫಿಲಿಷ್ಟಿಯರು ದಂಡೆತ್ತಿ ಬಂದು ರೆಫಾಯೀಮ್ ತಗ್ಗಿನಲ್ಲಿ ಪಾಳೆಯಮಾಡಿಕೊಂಡಾಗ,
2 ಸಮುವೇಲನು 23 : 14 (IRVKN)
ದಾವೀದನು ಆ ಅದುಲ್ಲಾಮ್ ದುರ್ಗದಲ್ಲಿದ್ದನು. ಫಿಲಿಷ್ಟಿಯರು ಬೇತ್ಲೆಹೇಮಿನಲ್ಲಿ ಕಾವಲುದಂಡನ್ನಿಟ್ಟಿದ್ದರು.
2 ಸಮುವೇಲನು 23 : 15 (IRVKN)
ಅದೇ ಸಮಯದಲ್ಲಿ ದಾವೀದನು ಲವಲವಿಕೆಯಿಂದ “ಬೇತ್ಲೆಹೇಮ್ ಊರಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಯಾರಾದರೂ ನನಗೆ ತಂದುಕೊಡುವುದಾದರೆ ಎಷ್ಟೋ ಒಳ್ಳೆಯದು” ಎಂದೂ ಕೇಳಿದನು.
2 ಸಮುವೇಲನು 23 : 16 (IRVKN)
ಕೂಡಲೇ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿ ಹೋಗಿ, ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತಂದು ಕೊಟ್ಟರು.
2 ಸಮುವೇಲನು 23 : 17 (IRVKN)
ಆದರೆ ಅವನು ಅದನ್ನು ಕುಡಿಯಲೊಲ್ಲದೆ, “ಯೆಹೋವನೇ, ಈ ನೀರನ್ನು ಕುಡಿಯುವುದು ನನಗೆ ದೂರವಾಗಿರಲಿ. ಜೀವದಾಶೆ ತೊರೆದವರ ರಕ್ತವನ್ನು ನಾನು ಕುಡಿಯಬೇಕೆ? ಇದನ್ನು ಕುಡಿಯುವುದೇ ಇಲ್ಲ” ಎಂದು ಹೇಳಿ, ಅದನ್ನು ಯೆಹೋವನ ಮುಂದೆ ಹೊಯ್ದನು. [PE][PS] ಆ ಮೂರು ಜನರು ಪರಾಕ್ರಮಶಾಲಿಗಳಾಗಿದ್ದರು. [PE][PS]
2 ಸಮುವೇಲನು 23 : 18 (IRVKN)
ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯು ಈ ಮೂರು ಜನರಲ್ಲಿ ಮುಖ್ಯಸ್ಥನು. ಅವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ, ಮುನ್ನೂರು ಜನರನ್ನು ಕೊಂದು ಈ ಮೂವರಲ್ಲಿ ಕೀರ್ತಿಹೊಂದಿದನು.
2 ಸಮುವೇಲನು 23 : 19 (IRVKN)
ಅ ಮೂವರಲ್ಲಿ ಘನತೆಯುಳ್ಳವನೂ, ನಾಯಕನೂ ಇವನೇ. ಇವನು ಮೊದಲಿನ ಮೂರು ಜನರಿಗಿಂತ ಹೆಚ್ಚು ಪ್ರಸಿದ್ಧನಾಗಿದ್ದನಲ್ಲವೇ?
2 ಸಮುವೇಲನು 23 : 20 (IRVKN)
ಯೆಹೋಯಾದಾವನ ಮಗನೂ ಕಬ್ಜಯೇಲಿನ ಪರಾಕ್ರಮಶಾಲಿಯೂ ಆದ ಬೆನಾಯನು ಇನ್ನೊಬ್ಬನು. ಇವನು ಅನೇಕ ಶೂರಕೃತ್ಯಗಳನ್ನು ಮಾಡಿದನು. ಅದಕ್ಕೆ ದೃಷ್ಟಾಂತವೆಂದರೆ ಒಂದು ಸಾರಿ ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಇನ್ನೊಮ್ಮೆ ಹಿಮಕಾಲದಲ್ಲಿ ಒಂದು ಸಿಂಹವು ಗುಂಡಿಯಲ್ಲಿ ಬಿದ್ದಿರಲು ಇವನು ಆ ಗುಂಡಿಗೆ ಇಳಿದು ಹೋಗಿ ಅದನ್ನು ಕೊಂದನು.
2 ಸಮುವೇಲನು 23 : 21 (IRVKN)
ಮತ್ತೊಮ್ಮೆ ಉನ್ನತನಾದ ಒಬ್ಬ ಐಗುಪ್ತ್ಯನನ್ನು ಕೊಂದನು. ಆ ಐಗುಪ್ತ್ಯನ ಕೈಯಲ್ಲಿ ಒಂದು ಬರ್ಜಿಯಿತ್ತು. ಇವನು ಕೈಯಲ್ಲಿ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ ಅವನ ಕೈಯಲ್ಲಿದ್ದ ಬರ್ಜಿಯನ್ನು ಕಿತ್ತುಕೊಂಡು ಅದರಿಂದ ಅವನನ್ನು ಕೊಂದನು.
2 ಸಮುವೇಲನು 23 : 22 (IRVKN)
ಈ ಪರಾಕ್ರಮದ ಕೃತ್ಯದಿಂದ ಯೆಹೋಯಾದಾವನ ಮಗನಾದ ಬೆನಾಯನು ಈ ಮೂವರಲ್ಲಿ ಹೆಸರುವಾಸಿಯಾದನು.
2 ಸಮುವೇಲನು 23 : 23 (IRVKN)
ಮೂವತ್ತು ಮಂದಿಯಲ್ಲಿ ಇವನು ವಿಶೇಷ ಕೀರ್ತಿಯನ್ನು ಹೊಂದಿದ್ದರೂ, ಮೊದಲಿನ ಮೂವರು ಸೈನಿಕರಿಗೆ ಸಮಾನನಾಗಿರಲಿಲ್ಲ. ದಾವೀದನು ಇವನನ್ನು ತನ್ನ ಕಾವಲುದಂಡಿನ ಮುಖ್ಯಸ್ಥನನ್ನಾಗಿ ಮಾಡಿದನು.
2 ಸಮುವೇಲನು 23 : 24 (IRVKN)
ಮೂವತ್ತು ಮಂದಿ ರಣವೀರರ ಪಟ್ಟಿ - ಯೋವಾಬನ ತಮ್ಮನಾದ ಅಸಾಹೇಲನು,
2 ಸಮುವೇಲನು 23 : 25 (IRVKN)
ಬೇತ್ಲೆಹೇಮಿನ ದೋದೋವಿನ ಮಗನಾದ ಎಲ್ಹಾನಾನ್, ಹರೋದಿನವರಾದ ಶಮ್ಮ ಮತ್ತು ಎಲೀಕರು.
2 ಸಮುವೇಲನು 23 : 26 (IRVKN)
ಪೆಲೆಟಿನವನಾದ ಹೆಲೆಚ್, ತೆಕೋವದ ಇಕ್ಕೇಷನ ಮಗನಾದ ಈರಾ,
2 ಸಮುವೇಲನು 23 : 27 (IRVKN)
ಅಣತೋತಿನವನಾದ ಅಬೀಯೆಜೆರ್, ಹುಷಾ ಊರಿನವನಾದ ಮೆಬುನ್ನೈ,
2 ಸಮುವೇಲನು 23 : 28 (IRVKN)
ಅಹೋಹಿನವನಾದ ಚಲ್ಮೋನ್, ನೆಟೋಫದವನಾದ ಮಹರೈ,
2 ಸಮುವೇಲನು 23 : 29 (IRVKN)
ನೆಟೋಫದವನಾದ ಬಾಣನ ಮಗ ಹೇಲೆಬ್, ಬೆನ್ಯಾಮೀನ್ ದೇಶದ ಗಿಬೆಯ ಊರಿನ ರೀಬೈ ಎಂಬುವನ ಮಗನಾದ ಇತ್ತೈ,
2 ಸಮುವೇಲನು 23 : 30 (IRVKN)
ಪಿರಾತೋನ್ಯನಾದ ಬೆನಾಯ, ನಹಲೇ ಗಾಷಿನವನಾದ ಹಿದ್ದೈ.
2 ಸಮುವೇಲನು 23 : 31 (IRVKN)
ಅರಾಬಾ ತಗ್ಗಿನವನಾದ ಅಬೀ ಅಲ್ಬೋನ್, ಬರ್ಹುಮ್ಯನಾದ ಅಜ್ಮಾವೇತ್,
2 ಸಮುವೇಲನು 23 : 32 (IRVKN)
ಶಾಲ್ಬೋನ್ಯನಾದ ಎಲೆಯಖ್ಬಾ, ಯಾಷೇನನ ಮಕ್ಕಳು, ಯೋನಾತಾನನು,
2 ಸಮುವೇಲನು 23 : 33 (IRVKN)
ಹರಾರ್ಯನಾದ ಶಮ್ಮ, ಅರಾರ್ಯನಾದ ಶಾರಾರನ ಮಗ ಅಹೀಯಾಮ್,
2 ಸಮುವೇಲನು 23 : 34 (IRVKN)
ಮಾಕಾ ಊರಿನ ಅಹಸ್ಬೈ ಎಂಬುವನ ಮಗನಾದ ಎಲೀಫೆಲೆಟ್, ಗಿಲೋವಿನ ಅಹೀತೋಫೆಲ ಎಂಬುವನ ಮಗನಾದ ಎಲೀಯಾಮ್,
2 ಸಮುವೇಲನು 23 : 35 (IRVKN)
ಕರ್ಮೆಲ್ಯನಾದ ಹೆಚ್ರೋ, ಅರ್ಬೀಯನಾದ ಪಾರೈ,
2 ಸಮುವೇಲನು 23 : 36 (IRVKN)
ಚೋಬ ಊರಿನ ನಾತಾನ ಎಂಬುವನ ಮಗನಾದ ಇಗಾಲ್, ಗಾದ್ಯನಾದ ಬಾನೀ,
2 ಸಮುವೇಲನು 23 : 37 (IRVKN)
ಅಮ್ಮೋನಿಯನಾದ ಚೆಲೆಕ್, ಬೇರೋತ್ಯನೂ ಚೆರೂಯಳ ಮಗನಾದ ಯೋವಾಬನ ಆಯುಧವಾಹಕನೂ ಆಗಿದ್ದ ನಹರೈ
2 ಸಮುವೇಲನು 23 : 38 (IRVKN)
ಇತ್ರೀಯರಾದ ಈರಾ ಮತ್ತು ಗಾರೇಬರು,
2 ಸಮುವೇಲನು 23 : 39 (IRVKN)
ಹಿತ್ತಿಯನಾದ ಊರೀಯ, ಒಟ್ಟಿಗೆ ಮೂವತ್ತೇಳು ಮಂದಿ. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39

BG:

Opacity:

Color:


Size:


Font: