3 ಯೋಹಾನನು 1 : 1 (IRVKN)
ಪೀಠಿಕೆ * 2 ಯೋಹಾ 1: ಸಭೆಯ ಹಿರಿಯನಾದ ನಾನು, † 1 ಯೋಹಾ 3:18; 2 ಯೋಹಾ 1: ಪೂರ್ಣಹೃದಯದಿಂದ ಪ್ರೀತಿಸುವ ಪ್ರಿಯ ಗಾಯನಿಗೆ ಬರೆಯುವುದೇನಂದರೆ;
3 ಯೋಹಾನನು 1 : 2 (IRVKN)
ಪ್ರಿಯನೇ, ನೀನು, ನಿನ್ನ ಆತ್ಮ ವಿಷಯದಲ್ಲಿ ಅಭಿವೃದ್ಧಿ ಹೊಂದಿರುವ ಪ್ರಕಾರವೇ, ಎಲ್ಲಾ ವಿಷಯಗಳಲ್ಲಿಯೂ ಅಭಿವೃದ್ಧಿಹೊಂದಿ, ಸುಕ್ಷೇಮವಾಗಿ ಇರಬೇಕೆಂದು ನಾನು ಪ್ರಾರ್ಥಿಸುತ್ತೇನೆ.
3 ಯೋಹಾನನು 1 : 3 (IRVKN)
ಸಹೋದರರು ಆಗಾಗ್ಗೆ ನನ್ನ ಬಳಿಗೆ ಬಂದು, ನಿನ್ನಲ್ಲಿರುವ ಸತ್ಯವನ್ನು ಕುರಿತು ಮತ್ತು ನೀನು ಸತ್ಯವಂತನಾಗಿ ಜೀವಿಸುವವನು ಎಂದು ಹೇಳುವುದನ್ನು ಕೇಳುವಾಗ, 2 ಯೋಹಾ 4: ನಾನು ಬಹಳ ಸಂತೋಷಪಟ್ಟೆನು.
3 ಯೋಹಾನನು 1 : 4 (IRVKN)
§ 1 ಕೊರಿ 4:14, 15; ಗಲಾ. 4:19; 1 ತಿಮೊ. 1:2; 2 ತಿಮೊ. 1:2; ತೀತ. 1:4; ಫಿಲೆ. 10: ನನ್ನ ಮಕ್ಕಳು ಸತ್ಯವನ್ನನುಸರಿಸಿ ಜೀವಿಸುವವರಾಗಿದ್ದಾರೆಂಬುದನ್ನು ಕೇಳಿಸಿಕೊಳ್ಳುವುದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ.
3 ಯೋಹಾನನು 1 : 5 (IRVKN)
ಗಾಯನ ಬಗ್ಗೆ ಶ್ಲಾಘನೆ ಪ್ರಿಯನೇ, ನೀನು * ಗಲಾ. 6:10; ಇಬ್ರಿ. 13:1: ಸಹೋದರರಿಗೂ ಅದಕ್ಕಿಂತಲೂ ಹೆಚ್ಚಾಗಿ ಅತಿಥಿಗಳನ್ನು † ಮತ್ತಾ 25:35: ಸತ್ಕಾರ ಮಾಡುವುದರಲ್ಲಿ ನಂಬಿಗಸ್ತನಾಗಿ ನಡೆಯುತ್ತಿರುವಿ.
3 ಯೋಹಾನನು 1 : 6 (IRVKN)
ಅವರು ಸಭೆಯ ಮುಂದೆ ನೀನು ತೋರಿಸಿದ ಪ್ರೀತಿಯ ಕುರಿತು ಸಾಕ್ಷಿ ಹೇಳಿದ್ದಾರೆ. ಅವರು ತಮ್ಮ ಸಂಚಾರವನ್ನು ಇನ್ನೂ ಮುಂದುವರಿಸುವಂತೆ ದೇವರು ಮೆಚ್ಚುವ ರೀತಿಯಲ್ಲಿ ನೀನು ನೆರವಾಗಬೇಕು.
3 ಯೋಹಾನನು 1 : 7 (IRVKN)
ಏಕೆಂದರೆ, ಅವರು ಕ್ರಿಸ್ತನ ಅ. ಕೃ. 5:41: ಹೆಸರನ್ನು ಪ್ರಚುರಪಡಿಸುವ ನಿಮಿತ್ತವಾಗಿ ಹೊರಟಿದ್ದಾರೆ. § 1 ಕೊರಿ 9:12, 15: ಅನ್ಯಜನಗಳಿಂದ ಏನೂ ತೆಗೆದುಕೊಳ್ಳುವವರಲ್ಲ.
3 ಯೋಹಾನನು 1 : 8 (IRVKN)
ಆದುದರಿಂದ, ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ, ಅಂಥವರನ್ನು ಸೇರಿಸಿಕೊಳ್ಳುವ ಹಂಗಿನಲ್ಲಿದ್ದೇವೆ.
3 ಯೋಹಾನನು 1 : 9 (IRVKN)
ದಿಯೊತ್ರೇಫನ ಖಂಡನೆಯೂ ದೇಮೇತ್ರಿಯ ಬಗ್ಗೆ ಶ್ಲಾಘನೆಯೂ ನಿಮ್ಮ ಸಭೆಗೆ ನಾನು ಕೆಲವು ಮಾತುಗಳನ್ನು ಬರೆದಿದ್ದೆನು; ಅಲ್ಲಿಯ ಸಭೆಗೆ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮ ಮಾತನ್ನು ಅಂಗೀಕರಿಸುತ್ತಿಲ್ಲ.
3 ಯೋಹಾನನು 1 : 10 (IRVKN)
ಆದಕಾರಣ, ನಾನು ಅಲ್ಲಿಗೆ ಬಂದಾಗ ಅವನು ಮಾಡುವ ಕೃತ್ಯಗಳನ್ನು ಕುರಿತು ಎಲ್ಲರಿಗೂ ತಿಳಿಸುವೆನು. ಅವನು ಹರಟೆಕೊಚ್ಚುವವನಾಗಿ, ನಮ್ಮ ವಿಷಯದಲ್ಲಿ ಅಪ ಪ್ರಚಾರ ಮಾಡುತ್ತಿದ್ದಾನೆ. ಇದರ ಜೊತೆಗೆ ಯಾವ ಸಹೋದರರನ್ನು ಸೇರಿಸಿಕೊಳ್ಳುವುದಿಲ್ಲ ಹಾಗೂ ನಾನು ಸೇರಿಸಿಕೊಳ್ಳಬೇಕೆಂದಿರುವವರಿಗೆ ಅಡ್ಡಿಮಾಡಿ ಅವರನ್ನು ಸಭೆಯೊಳಗಿಂದ ಬಹಿಷ್ಕರಿಸುತ್ತಾನೆ.
3 ಯೋಹಾನನು 1 : 11 (IRVKN)
ಪ್ರಿಯನೇ, * ಕೀರ್ತ 34:14; 37:27; ಯೆಶಾ 1:16, 17: ನೀನು ಕೆಟ್ಟ ನಡತೆಯನ್ನು ಅನುಸರಿಸದೆ, ಒಳ್ಳೆಯ ನಡತೆಯನ್ನು ಅನುಸರಿಸು; † 1 ಯೋಹಾ 2:29: ಒಳ್ಳೆಯದನ್ನು ಮಾಡುವವನು ದೇವರ ಮಗನಾಗಿರುತ್ತಾನೆ. ‡ 1 ಯೋಹಾ 3:6: ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.
3 ಯೋಹಾನನು 1 : 12 (IRVKN)
ದೇಮೇತ್ರಿಯನು ಎಲ್ಲರಿಂದಲೂ, ಒಳ್ಳೆಯವನೆಂದು ಗುರುತಿಸಲ್ಪಟ್ಟಿದ್ದಾನೆ. ಅಲ್ಲದೆ ಸಾಕ್ಷಿಹೊಂದಿದವನಾಗಿದ್ದಾನೆ. ಅಷ್ಟೇ ಅಲ್ಲದೆ ನಾವು ಅವನ ಪರವಾಗಿ ಸಾಕ್ಷಿಕೊಡುತ್ತದೆ; § ಯೋಹಾ 21:24: ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀನು ಬಲ್ಲವನಾಗಿದ್ದೀಯ.
3 ಯೋಹಾನನು 1 : 13 (IRVKN)
ವಂದನೆಗಳು ನಾನು * 2 ಯೋಹಾ 12: ನಿನಗೆ ಬರೆಯಬೇಕಾದ ಅನೇಕ ವಿಷಯಗಳಿವೆ, ಆದರೆ ಮಸಿಯಿಂದ ಕಾಗದದ ಮೇಲೆ ಬರೆಯುವುದಕ್ಕೆ ನನಗಿಷ್ಟವಿಲ್ಲ.
3 ಯೋಹಾನನು 1 : 14 (IRVKN)
ನಾನು ಬೇಗನೆ ಬಂದು ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ. ಆಗ ನಾವು ಮುಖಾ ಮುಖಿಯಾಗಿ ಮಾತನಾಡೋಣ. (15) ನಿನಗೆ ಶಾಂತಿ ಇರಲಿ. ಸ್ನೇಹಿತರು ನಿನಗೆ ವಂದನೆ ಹೇಳುತ್ತಾರೆ. ಅಲ್ಲಿರುವ ಪ್ರತಿಯೊಬ್ಬ ಸ್ನೇಹಿತರೆಲ್ಲರನ್ನೂ ಹೆಸರಿಸಿ ವಂದಿಸು.

1 2 3 4 5 6 7 8 9 10 11 12 13 14