ಅಪೊಸ್ತಲರ ಕೃತ್ಯಗ 1 : 1 (IRVKN)
{ಯೇಸು ಸ್ವರ್ಗಾರೋಹಣವಾದದ್ದು} [PS] ಥೆಯೊಫಿಲನೇ, ನಾನು ಮೊದಲು ಬರೆದ ಪುಸ್ತಕದಲ್ಲಿ, ಯೇಸು ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಪವಿತ್ರಾತ್ಮನ ಮೂಲಕ ಅಪ್ಪಣೆಕೊಟ್ಟು,
ಅಪೊಸ್ತಲರ ಕೃತ್ಯಗ 1 : 2 (IRVKN)
ಆತನು ಸ್ವರ್ಗಾರೋಹಣವಾದ ದಿನದವರೆಗೆ ಆತನು ಮಾಡಿದ ಎಲ್ಲಾ ಕಾರ್ಯಗಳನ್ನೂ, ಉಪದೇಶಿಸಿದ ಎಲ್ಲಾ ಬೋಧನೆಗಳನ್ನೂ ಬರೆದಿದ್ದೇನೆ. [PE][PS]
ಅಪೊಸ್ತಲರ ಕೃತ್ಯಗ 1 : 3 (IRVKN)
ಯೇಸುವು ಬಾಧೆಪಟ್ಟು ಸತ್ತ ನಂತರ ತಾನು ಜೀವಂತನಾಗಿ ಎದ್ದು ಬಂದಿದ್ದೇನೆ ಎಂದು ಅನೇಕ ಸಂಭವಗಳ ಮೂಲಕ ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಸ್ಪಷ್ಟಪಡಿಸಿದನು. ಸತತವಾಗಿ ನಲವತ್ತು ದಿನಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯದ ವಿಷಯವನ್ನು ಕುರಿತು ಅವರಿಗೆ ಬೋಧಿಸಿದನು.
ಅಪೊಸ್ತಲರ ಕೃತ್ಯಗ 1 : 4 (IRVKN)
ಒಮ್ಮೆ ಅವರೆಲ್ಲರೂ ಒಂದುಗೂಡಿದ್ದ ಸಂದರ್ಭದಲ್ಲಿ, “ನೀವು ಯೆರೂಸಲೇಮನ್ನು ಬಿಟ್ಟುಹೋಗದೆ, ನನ್ನಿಂದ ಕೇಳಿದಂಥ ಮತ್ತು ತಂದೆಯು ಮಾಡಿದ ವಾಗ್ದಾನಗಳಿಗಾಗಿ ಇಲ್ಲೇ ಕಾದುಕೊಂಡಿರಿ,
ಅಪೊಸ್ತಲರ ಕೃತ್ಯಗ 1 : 5 (IRVKN)
ಏಕೆಂದರೆ, ಯೋಹಾನನಂತೂ ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತಿದ್ದನು ಆದರೆ ಇನ್ನು ಕೆಲವೇ ದಿನಗಳಲ್ಲಿ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನವಾಗುವುದು” ಎಂದು ಅಪ್ಪಣೆ ಕೊಟ್ಟನು. [PE][PS]
ಅಪೊಸ್ತಲರ ಕೃತ್ಯಗ 1 : 6 (IRVKN)
ಕೂಡಿಬಂದವರು ಆತನನ್ನು,, “ಕರ್ತನೇ, ನೀನು ಇದೇ ಕಾಲದಲ್ಲಿ ಇಸ್ರಾಯೇಲ್ ಜನರಿಗೆ ರಾಜ್ಯವನ್ನು ಪುನಃ ಸ್ಥಾಪಿಸಿಕೊಡುವಿಯೋ?” ಎಂದು ಕೇಳಲು
ಅಪೊಸ್ತಲರ ಕೃತ್ಯಗ 1 : 7 (IRVKN)
ಆತನು ಅವರಿಗೆ, “ತಂದೆಯು ತನ್ನ ಅಧಿಕಾರದಲ್ಲಿಟ್ಟುಕೊಂಡಿರುವ ಕಾಲಗಳನ್ನೂ, ಸಮಯಗಳನ್ನೂ ತಿಳಿದುಕೊಳ್ಳುವುದು ನಿಮ್ಮ ಕಾರ್ಯವಲ್ಲ.
ಅಪೊಸ್ತಲರ ಕೃತ್ಯಗ 1 : 8 (IRVKN)
ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಅಂದನು.
ಅಪೊಸ್ತಲರ ಕೃತ್ಯಗ 1 : 9 (IRVKN)
ಈ ಮಾತುಗಳನ್ನು ಅವನು ಹೇಳಿದ ಬಳಿಕ ಅವರು ನೋಡುತ್ತಿದ್ದ ಹಾಗೆಯೇ ಆತನು ಪರಲೋಕಕ್ಕೆ ಎತ್ತಲ್ಪಟ್ಟನು, ಮೋಡವೊಂದು ಆತನನ್ನು ಕವಿದುಕೊಂಡಿದ್ದರಿಂದ, ಯೇಸುವು ಅವರ ಕಣ್ಣಿಗೆ ಮರೆಯಾದನು. [PE][PS]
ಅಪೊಸ್ತಲರ ಕೃತ್ಯಗ 1 : 10 (IRVKN)
ಆತನು ಹೋಗುತ್ತಿರುವಾಗ ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಾ ಇರಲಾಗಿ ಶುಭ್ರ ವಸ್ತ್ರಧಾರಿಗಳಾದ ಇಬ್ಬರು ಪುರುಷರು ಫಕ್ಕನೆ ಅವರ ಹತ್ತಿರ ನಿಂತುಕೊಂಡರು.
ಅಪೊಸ್ತಲರ ಕೃತ್ಯಗ 1 : 11 (IRVKN)
“ಗಲಿಲಾಯದವರೇ, ನೀವು ಏಕೆ ಹೀಗೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಗೆ ಸೇರಿಸಲ್ಪಟ್ಟಿರುವ ಈ ಯೇಸುವು ಯಾವ ರೀತಿಯಲ್ಲಿ ಆಕಾಶದೊಳಗೆ ಹೋಗಿರುವುದನ್ನು ನೀವು ಕಂಡಿರೋ ಹಾಗೆಯೇ ಆತನು ಹಿಂತಿರುಗಿ ಬರುವನು” ಎಂದು ಹೇಳಿದರು. [PE][PS]
ಅಪೊಸ್ತಲರ ಕೃತ್ಯಗ 1 : 12 (IRVKN)
ಆಗ ಅವರು ಆಲೀವ್ ಮರಗಳ ಗುಡ್ಡದಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದರು. ಆ ಗುಡ್ಡಕ್ಕೂ ಯೆರೂಸಲೇಮಿಗೂ [* ದೂರ ಸಬ್ಬತ್ ದಿನದಲ್ಲಿ ಪ್ರಯಾಣಿಸಲು ಧರ್ಮಗುರುಗಳಿಂದ ನೇಮಿಸಲ್ಪಟ್ಟ ದೂರ ಅಂದರೆ ಸುಮಾರು ಒಂದೂವರೆ ಮೈಲು] ಸಬ್ಬತ್ ದಿನದಲ್ಲಿ ಪ್ರಯಾಣಮಾಡುವಷ್ಟು ದೂರವಿತ್ತು.
ಅಪೊಸ್ತಲರ ಕೃತ್ಯಗ 1 : 13 (IRVKN)
ಅವರು ಅಲ್ಲಿಗೆ ಬಂದು ತಾವು ವಾಸಮಾಡುತ್ತಿದ್ದ ಮೇಲಂತಸ್ತಿಗೆ ಹೋದರು; ಅವರು ಯಾರಾರೆಂದರೆ, ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಾಕೋಬ, ಮತಾಭಿಮಾನಿ ಎನಿಸಿಕೊಂಡ ಸೀಮೋನ, ಯಾಕೋಬನ ಸಹೋದರನಾದ ಯೂದ, ಇವರೇ.
ಅಪೊಸ್ತಲರ ಕೃತ್ಯಗ 1 : 14 (IRVKN)
ಅಲ್ಲಿ ಕೆಲವು ಮಂದಿ ಸ್ತ್ರೀಯರೂ, ಯೇಸುವಿನ ತಾಯಿಯಾದ ಮರಿಯಳೂ, ಆತನ ತಮ್ಮಂದಿರೂ ಅವರ ಸಂಗಡ ಇದ್ದರು, ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗಿದ್ದರು. [PS]
ಅಪೊಸ್ತಲರ ಕೃತ್ಯಗ 1 : 15 (IRVKN)
{ಇಸ್ಕರಿಯೂತ ಯೂದನ ಬದಲಾಗಿ ಮತ್ತೀಯನನ್ನು ಆರಿಸಿಕೊಂಡದ್ದು} [PS] ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗೆಂದನು,
ಅಪೊಸ್ತಲರ ಕೃತ್ಯಗ 1 : 16 (IRVKN)
“ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವುದು ಅವಶ್ಯವಾಗಿತ್ತು.
ಅಪೊಸ್ತಲರ ಕೃತ್ಯಗ 1 : 17 (IRVKN)
ಯೂದನು ನಮ್ಮೊಂದಿಗೆ ಸೇರಿ ಈ ಸೇವೆಯಲ್ಲಿ ಪಾಲು ಹೊಂದಿದವನಾಗಿದ್ದನು.”
ಅಪೊಸ್ತಲರ ಕೃತ್ಯಗ 1 : 18 (IRVKN)
(ಈ ಮನುಷ್ಯನು ತನ್ನ ದ್ರೋಹದ ಪ್ರತಿಫಲವಾಗಿ ಹೊಲವನ್ನು ಪಡೆದನು ಮತ್ತು ತಲೆಕೆಳಗಾಗಿ ಬಿದ್ದು ಹೊಟ್ಟೆ ಒಡೆದು ಕರುಳುಗಳೆಲ್ಲಾ ಹೊರಗೆ ಚೆಲ್ಲಿದವು.
ಅಪೊಸ್ತಲರ ಕೃತ್ಯಗ 1 : 19 (IRVKN)
ಇದು ಯೆರೂಸಲೇಮ್ ಪಟ್ಟಣದ ನಿವಾಸಿಗಳಿಗೆಲ್ಲಾ ತಿಳಿದುಬಂದುದರಿಂದ ಆ ಹೊಲಕ್ಕೆ ಅವರ [† ಅರಾಮಿಕ್ ಭಾಷೆಯಲ್ಲಿ. ] ಭಾಷೆಯಲ್ಲಿ ‘ಅಕೆಲ್ದಾಮಾ,’ ಅಂದರೆ ರಕ್ತದ ಹೊಲ ಎಂಬ ಹೆಸರು ಬಂದಿತು.) [PE][PS]
ಅಪೊಸ್ತಲರ ಕೃತ್ಯಗ 1 : 20 (IRVKN)
ಅವನ ವಿಷಯವಾಗಿ, [QBR] ಅವನ ಮನೆ ಹಾಳಾಗಲಿ, [QBR2] ಅದು ಜನರಿಲ್ಲದೆ ಪಾಳುಬೀಳಲಿ ಎಂತಲೂ [QBR] ಅವನ [QBR2] ನಾಯಕತ್ವದ ಹುದ್ದೆಯು ಮತ್ತೊಬ್ಬನಿಗಾಗಲಿ ಎಂತಲೂ ಕೀರ್ತನೆಗಳ ಗ್ರಂಥದಲ್ಲಿ ಬರೆದಿದೆಯಲ್ಲಾ. [PE][PS]
ಅಪೊಸ್ತಲರ ಕೃತ್ಯಗ 1 : 21 (IRVKN)
(21-22) ಆದುದರಿಂದ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದಕಾಲವೆಲ್ಲಾ, ಅಂದರೆ ಯೋಹಾನನು ದೀಕ್ಷಾಸ್ನಾನ ಮಾಡಿಸಿದ್ದು ಮೊದಲುಗೊಂಡು ಯೇಸು ನಮ್ಮ ಬಳಿಯಿಂದ ಪರಲೋಕವನ್ನೇರಿ ಹೋದ ದಿನದ ವರೆಗೂ ನಮ್ಮ ಜೊತೆಯಲ್ಲಿದ್ದವರೊಳಗೆ ಒಬ್ಬನು ನಮ್ಮೊಂದಿಗೆ ಆತನ ಪುನರುತ್ಥಾನದ ವಿಷಯದಲ್ಲಿ ಸಾಕ್ಷಿಹೇಳುವವನಾಗಬೇಕು ಅಂದನು
ಅಪೊಸ್ತಲರ ಕೃತ್ಯಗ 1 : 22 (IRVKN)
ಅಪೊಸ್ತಲರ ಕೃತ್ಯಗ 1 : 23 (IRVKN)
ಈ ಮಾತುಗಳನ್ನು ಕೇಳಿ ಅವರು ಯೂಸ್ತನೆನಿಸಿಕೊಳ್ಳುವ ಬಾರ್ನಬನೆಂಬ ಯೋಸೇಫನನ್ನೂ ಮತ್ತೀಯನನ್ನೂ ನಿಲ್ಲಿಸಿ,
ಅಪೊಸ್ತಲರ ಕೃತ್ಯಗ 1 : 24 (IRVKN)
(24-25) “ಕರ್ತನೇ, ಎಲ್ಲರ ಹೃದಯವನ್ನು ಬಲ್ಲಾತನೇ, ಯೂದನು ಅಪೊಸ್ತಲತನವೆಂಬ ಈ ಸೇವಾಸ್ಥಾನದಿಂದ ಭ್ರಷ್ಟನಾಗಿ ತಾನು ಹೋಗ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ ಆ ಸ್ಥಾನವನ್ನು ಹೊಂದುವುದಕ್ಕೆ ಈ ಇಬ್ಬರಲ್ಲಿ ನೀನು ಆರಿಸಿ ಕೊಂಡವನನ್ನು ತೋರಿಸಿಕೊಡು” ಎಂದು ಪ್ರಾರ್ಥಿಸಿದರು.
ಅಪೊಸ್ತಲರ ಕೃತ್ಯಗ 1 : 25 (IRVKN)
ಅಪೊಸ್ತಲರ ಕೃತ್ಯಗ 1 : 26 (IRVKN)
ಆನಂತರ ಅವರಿಗೋಸ್ಕರ ಚೀಟುಹಾಕಿದರು; ಚೀಟು ಮತ್ತೀಯನ ಪರವಾಗಿ ಬಿದ್ದುದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಸೇರಿಕೊಂಡನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26

BG:

Opacity:

Color:


Size:


Font: