ಅಪೊಸ್ತಲರ ಕೃತ್ಯಗ 10 : 1 (IRVKN)
{ಪೇತ್ರನು ಮತ್ತು ಕೊರ್ನೇಲ್ಯನು} [PS] ಕೈಸರೈಯ ಪಟ್ಟಣದಲ್ಲಿ ಇತಾಲ್ಯ ಸೈನ್ಯದ ಶತಾಧಿಪತಿಯಾದ ಕೊರ್ನೆಲ್ಯನೆಂಬ ಒಬ್ಬ ಮನುಷ್ಯನಿದ್ದನು.
ಅಪೊಸ್ತಲರ ಕೃತ್ಯಗ 10 : 2 (IRVKN)
ಅವನು ದೈವಭಕ್ತನೂ, ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳುವವನು ಆಗಿದ್ದು, ಜನರಿಗೆ ಬಹಳವಾಗಿ ದಾನಧರ್ಮಮಾಡುತ್ತಾ, ದೇವರಿಗೆ ನಿತ್ಯವೂ ಪ್ರಾರ್ಥನೆಮಾಡುತ್ತಾ ಇದ್ದನು.
ಅಪೊಸ್ತಲರ ಕೃತ್ಯಗ 10 : 3 (IRVKN)
ಒಂದು ದಿನ ಮಧ್ಯಾಹ್ನ ಸುಮಾರು ಮೂರು ಘಂಟೆಗೆ ಅವನಿಗೆ ಒಂದು ದರ್ಶನ ಉಂಟಾಗಿ ಒಬ್ಬ ದೇವದೂತನು ತನ್ನ ಬಳಿಗೆ ಬಂದು; “ಕೊರ್ನೆಲ್ಯನೇ” ಎಂದು ಕರೆಯುವುದನ್ನು ಅವನು ಪ್ರತ್ಯಕ್ಷವಾಗಿ ಕಂಡನು.
ಅಪೊಸ್ತಲರ ಕೃತ್ಯಗ 10 : 4 (IRVKN)
ಅವನು ಆ ದೂತನನ್ನು ದೃಷ್ಟಿಸಿನೋಡಿ ಭಯಹಿಡಿದವನಾಗಿ; “ಕರ್ತನೇ, ಇದೇನು?” ಎಂದು ಕೇಳಲು, ಆ ದೂತನು ಅವನಿಗೆ; “ನಿನ್ನ ಪ್ರಾರ್ಥನೆಗಳೂ, ನಿನ್ನ ದಾನಧರ್ಮಗಳೂ ದೇವರ ಸನ್ನಿಧಿಗೆ ಜ್ಞಾಪರ್ಥಕವಾಗಿ ಬಂದು ತಲುಪಿದೆ.
ಅಪೊಸ್ತಲರ ಕೃತ್ಯಗ 10 : 5 (IRVKN)
ಈಗ ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ, ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು.
ಅಪೊಸ್ತಲರ ಕೃತ್ಯಗ 10 : 6 (IRVKN)
ಅವನು ಚಮ್ಮಾರನಾದ ಸೀಮೋನನ ಬಳಿಯಲ್ಲಿ ಇಳುಕೊಂಡಿದ್ದಾನೆ; ಈ ಸೀಮೋನನ ಮನೆಯು ಸಮುದ್ರತೀರದ ಬಳಿಯಲ್ಲಿ ಇದೆ” ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 10 : 7 (IRVKN)
ಕೊರ್ನೇಲ್ಯನು ತನ್ನ ಸಂಗಡ ಮಾತನಾಡಿದ ದೇವದೂತನು ಹೊರಟುಹೋದ ಮೇಲೆ, ತನ್ನ ಮನೆಯಲ್ಲಿದ್ದ ಸೇವಕರಲ್ಲಿ ಇಬ್ಬರನ್ನೂ ಮತ್ತು ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸಿಪಾಯಿಗಳಲ್ಲಿ ಒಬ್ಬ ದೈವಭಕ್ತನನ್ನೂ ಕರೆದು,
ಅಪೊಸ್ತಲರ ಕೃತ್ಯಗ 10 : 8 (IRVKN)
ಅವರಿಗೆ ಈ ಸಂಗತಿಗಳನ್ನೆಲ್ಲಾ ವಿವರವಾಗಿ ಹೇಳಿ, ಅವರನ್ನು ಯೊಪ್ಪ ಎಂಬ ಪಟ್ಟಣಕ್ಕೆ ಕಳುಹಿಸಿದನು. [PS]
ಅಪೊಸ್ತಲರ ಕೃತ್ಯಗ 10 : 9 (IRVKN)
{ಪೇತ್ರನಿಗಾದ ದರ್ಶನ} [PS] ಮರುದಿನ ಅವರು ಪ್ರಯಾಣಮಾಡಿ ಆ ಪಟ್ಟಣದ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಮಧ್ಯಾಹ್ನ ಹನ್ನೆರಡು ಗಂಟೆಗೆ ಪ್ರಾರ್ಥನೆಮಾಡುವುದಕ್ಕಾಗಿ ಮಹಡಿಯನ್ನು ಹತ್ತಿದನು.
ಅಪೊಸ್ತಲರ ಕೃತ್ಯಗ 10 : 10 (IRVKN)
ಅವನಿಗೆ ಬಹಳ ಹಸಿವಾಗಿ ಊಟಮಾಡ ಬಯಸಿದನು. ಅವರು ಊಟಕ್ಕೆ ಸಿದ್ಧಮಾಡುತ್ತಿರುವಷ್ಟರಲ್ಲಿ,
ಅಪೊಸ್ತಲರ ಕೃತ್ಯಗ 10 : 11 (IRVKN)
ಅವನು ಧ್ಯಾನಪರವಶನಾಗಿ ಆಕಾಶವು ತೆರೆದಿರುವುದನ್ನೂ, ನಾಲ್ಕು ಮೂಲೆಗಳನ್ನು ಕಟ್ಟಿದ್ದ ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ಭೂಮಿಯ ಮೇಲೆ ಇಳಿಯುವುದನ್ನೂ ಕಂಡನು.
ಅಪೊಸ್ತಲರ ಕೃತ್ಯಗ 10 : 12 (IRVKN)
ಅದರೊಳಗೆ ಸಕಲ ವಿಧವಾದ ಪಶುಗಳೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳೂ ಇದ್ದವು.
ಅಪೊಸ್ತಲರ ಕೃತ್ಯಗ 10 : 13 (IRVKN)
ಆಗ; “ಪೇತ್ರನೇ, ಎದ್ದು, ಕೊಯ್ದು ತಿನ್ನು” ಎಂದು ಅವನಿಗೆ ಒಂದು ವಾಣಿ ಕೇಳಿಸಿತು.
ಅಪೊಸ್ತಲರ ಕೃತ್ಯಗ 10 : 14 (IRVKN)
ಅದಕ್ಕೆ ಪೇತ್ರನು; “ಬೇಡವೇ ಬೇಡ ಕರ್ತನೇ, ನಾನು ಎಂದೂ ಹೊಲೆ ಪದಾರ್ಥವನ್ನಾಗಲಿ, ಅಶುದ್ಧವಾದವುಗಳನ್ನಾಗಲಿ ತಿಂದವನಲ್ಲ” ಅಂದನು.
ಅಪೊಸ್ತಲರ ಕೃತ್ಯಗ 10 : 15 (IRVKN)
ಅದಕ್ಕೆ; “ದೇವರು ಶುದ್ಧಮಾಡಿದ್ದನ್ನು ನೀನು ಹೊಲೆ ಎನ್ನಬಾರದೆಂದು” ಪುನಃ ಎರಡನೆಯ ಸಾರಿ ಅವನಿಗೆ ವಾಣಿ ಕೇಳಿಸಿತು.
ಅಪೊಸ್ತಲರ ಕೃತ್ಯಗ 10 : 16 (IRVKN)
ಹೀಗೆ ಮೂರು ಸಾರಿ ಆಯಿತು. ಆದ ಮೇಲೆ ಆ ವಸ್ತುವು ಆಕಾಶದೊಳಗೆ ಸೇರಿಕೊಂಡಿತು. [PE][PS]
ಅಪೊಸ್ತಲರ ಕೃತ್ಯಗ 10 : 17 (IRVKN)
ಪೇತ್ರನು ತನಗಾದ ದರ್ಶನವು ಏನಾಗಿರಬಹುದೆಂದು ತನ್ನಲ್ಲಿ ಕಳವಳ ಪಡುತ್ತಿರುವಾಗಲೇ, ಆಗೋ, ಕೊರ್ನೆಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋನನ ಮನೆ ಯಾವುದು ಎಂದು ಕೇಳಿಕೊಂಡು ಬಂದು ಆ ಮನೆಯ ಬಾಗಿಲಲ್ಲಿ ನಿಂತು;
ಅಪೊಸ್ತಲರ ಕೃತ್ಯಗ 10 : 18 (IRVKN)
ಪೇತ್ರನೆನಿಸಿಕೊಳ್ಳುವ ಸೀಮೋನನು ಇಲ್ಲಿ ಇಳುಕೊಂಡಿದ್ದಾನೋ ಎಂದು ಕೂಗಿ ಕೇಳಿದರು.
ಅಪೊಸ್ತಲರ ಕೃತ್ಯಗ 10 : 19 (IRVKN)
ಪೇತ್ರನು ಆ ದರ್ಶನದ ಕುರಿತಾಗಿ ಯೋಚನೆ ಮಾಡುತ್ತಿರಲು ದೇವರಾತ್ಮನು ಅವನಿಗೆ; “ಅಗೋ, ಮೂವರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ;
ಅಪೊಸ್ತಲರ ಕೃತ್ಯಗ 10 : 20 (IRVKN)
ನೀನೆದ್ದು ಕೆಳಗಿಳಿದು ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗು; ನಾನೇ ಅವರನ್ನು ಕಳುಹಿಸಿದ್ದೇನೆ” ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 10 : 21 (IRVKN)
ಪೇತ್ರನು ಕೆಳಗಿಳಿದು ಆ ಮನುಷ್ಯರ ಬಳಿಗೆ ಬಂದು; “ಇಗೋ, ನೀವು ವಿಚಾರಿಸುವವನು ನಾನೇ; ನೀವು ಬಂದ ಕಾರಣವೇನು?” ಎಂದು ಕೇಳಲು,
ಅಪೊಸ್ತಲರ ಕೃತ್ಯಗ 10 : 22 (IRVKN)
ಅವರು; “ಕೊರ್ನೆಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ, ದೇವರಿಗೆ ಭಯಪಡುವವನೂ, ಯೆಹೂದ್ಯ ಜನರೆಲ್ಲರಿಂದ ಒಳ್ಳೆಯ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಆಹ್ವಾನಿಸಿ ನಿನ್ನಿಂದ ಸುವಾರ್ತೆಯನ್ನು ಕೇಳಬೇಕೆಂದು ಪರಿಶುದ್ಧ ದೇವದೂತನ ಮುಖಾಂತರವಾಗಿ ಅಪ್ಪಣೆ ಹೊಂದಿದ್ದಾನೆ” ಎಂದು ಹೇಳಿದರು.
ಅಪೊಸ್ತಲರ ಕೃತ್ಯಗ 10 : 23 (IRVKN)
ಪೇತ್ರನು ಇದನ್ನು ಕೇಳಿ ಅವರನ್ನು ಒಳಕ್ಕೆ ಕರೆದು ಉಪಚರಿಸಿದನು. ಮರುದಿನ ಅವನು ಎದ್ದು ಅವರ ಜೊತೆಯಲ್ಲಿ ಹೊರಟನು; ಯೊಪ್ಪ ಪಟ್ಟಣದ ಸಹೋದರರಲ್ಲಿ ಕೆಲವರು ಅವನ ಕೂಡ ಹೋದರು. [PS]
ಅಪೊಸ್ತಲರ ಕೃತ್ಯಗ 10 : 24 (IRVKN)
{ಕೊರ್ನೇಲ್ಯನ ಮನೆಯಲ್ಲಿ ಪೇತ್ರನು} [PS] ಮರುದಿನ ಅವನು ಕೈಸರೈಯಕ್ಕೆ ಬಂದು ಸೇರಿದನು. ಕೊರ್ನೆಲ್ಯನು ತನ್ನ ಬಂಧುಬಳಗದವರನ್ನೂ ಮತ್ತು ಅಪ್ತಮಿತ್ರರನ್ನೂ ಕರೆಯಿಸಿ ಪೇತ್ರನಿಗಾಗಿ ಎದುರುನೋಡುತ್ತಿದ್ದನು.
ಅಪೊಸ್ತಲರ ಕೃತ್ಯಗ 10 : 25 (IRVKN)
ಪೇತ್ರನು ಬಂದಾಗ ಕೊರ್ನೆಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕಾರ ಮಾಡಿದನು.
ಅಪೊಸ್ತಲರ ಕೃತ್ಯಗ 10 : 26 (IRVKN)
ಆದರೆ ಪೇತ್ರನು; “ಏಳು, ನಾನೂ ಸಹಾ ಮನುಷ್ಯನೇ” ಎಂದು ಹೇಳಿ, ಅವನನ್ನು ಎತ್ತಿ,
ಅಪೊಸ್ತಲರ ಕೃತ್ಯಗ 10 : 27 (IRVKN)
ಅವನ ಸಂಗಡ ಸಂಭಾಷಣೆಮಾಡುತ್ತಾ ಮನೆಯೊಳಕ್ಕೆ ಬಂದನು.
ಅಪೊಸ್ತಲರ ಕೃತ್ಯಗ 10 : 28 (IRVKN)
ಅಲ್ಲಿ ಬಹು ಜನರು ಸೇರಿ ಬಂದಿರುವುದನ್ನು ಕಂಡು ಅವರಿಗೆ; “ಯೆಹೂದ್ಯರು, ಅನ್ಯ ಜನರೊಂದಿಗೆ ಸಂಪರ್ಕ ಇಟ್ಟುಕೊಳ್ಳುವುದು, ಅವರೊಂದಿಗೆ ವ್ಯವಹರಿಸುವುದು ಯೆಹೂದ್ಯರ ಸಂಪ್ರದಾಯಕ್ಕೆ ನಿಷಿದ್ಧವಾಗಿದೆ ಎಂಬುದು ನಿಮಗೆ ತಿಳಿದಿದೆ. ನನಗಂತೂ ಯಾವ ಮನುಷ್ಯನನ್ನೂ ಹೊಲೆಯಾದವನು, ಇಲ್ಲವೆ ಅಶುದ್ಧನು ಎಂದು ಅನ್ನಬಾರದೆಂದು ದೇವರು ತೋರಿಸಿಕೊಟ್ಟಿದ್ದಾನೆ.
ಅಪೊಸ್ತಲರ ಕೃತ್ಯಗ 10 : 29 (IRVKN)
ಆದಕಾರಣ ನೀವು ನನ್ನನ್ನು ಕರೆಕಳುಹಿಸಿದಾಗ ನಾನು ಯಾವ ಎದುರುಮಾತನ್ನೂ ಆಡದೆ ಬಂದೆನು. ಈಗ ನೀವು ನನ್ನನ್ನು ಕರೆಯಿಸಿದ ಉದ್ದೇಶವೇನು ಎಂದು ನನಗೆ ತಿಳಿಸಬೇಕು” ಎಂದು ಕೇಳಿದನು. [PE][PS]
ಅಪೊಸ್ತಲರ ಕೃತ್ಯಗ 10 : 30 (IRVKN)
ಅದಕ್ಕೆ ಕೊರ್ನೇಲ್ಯನು; “ನಾನು ನಾಲ್ಕು ದಿನಗಳ ಹಿಂದೆ ಇದೇ ಹೊತ್ತಿನಲ್ಲಿ ಮೂರನೇ ಗಳಿಗೆಯ ದೇವರ ಪ್ರಾರ್ಥನೆಯನ್ನು ನನ್ನ ಮನೆಯಲ್ಲಿ ಮಾಡುತ್ತಿದ್ದಾಗ ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತುಕೊಂಡು;
ಅಪೊಸ್ತಲರ ಕೃತ್ಯಗ 10 : 31 (IRVKN)
ಕೊರ್ನೆಲ್ಯನೇ ‘ನಿನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನೆ, ನಿನ್ನ ದಾನಧರ್ಮಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.
ಅಪೊಸ್ತಲರ ಕೃತ್ಯಗ 10 : 32 (IRVKN)
ನೀನು ಯಾರನ್ನಾದರು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು, ಅವನು ಚಮ್ಮಾರನಾದ ಸೀಮೋನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರ ತೀರದ ಸಮೀಪವಿದೆ’ ಅಂದನು.
ಅಪೊಸ್ತಲರ ಕೃತ್ಯಗ 10 : 33 (IRVKN)
ನಾನು ತಡಮಾಡದೆ ನಿಮ್ಮ ಹತ್ತಿರ ಜನರನ್ನು ಕಳುಹಿಸಿದೆನು. ನೀವು ಬಂದದ್ದು ಒಳ್ಳೆಯದಾಯಿತು. ಹೀಗಿರುವುದರಿಂದ ಕರ್ತನು ನಿನಗೆ ಅಪ್ಪಣೆಕೊಟ್ಟಿರುವ ಎಲ್ಲಾ ಮಾತುಗಳನ್ನು ಕೇಳುವುದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಸೇರಿಬಂದಿದ್ದೇವೆ” ಅಂದನು. [PE][PS]
ಅಪೊಸ್ತಲರ ಕೃತ್ಯಗ 10 : 34 (IRVKN)
ಆಗ ಪೇತ್ರನು ಉಪದೇಶಮಾಡಲಾರಂಭಿಸಿ ಹೇಳಿದ್ದೇನಂದರೆ; “ನಿಜವಾಗಿಯೂ, ದೇವರು ಪಕ್ಷಪಾತಿಯಲ್ಲ,
ಅಪೊಸ್ತಲರ ಕೃತ್ಯಗ 10 : 35 (IRVKN)
ಯಾವ ಜನಾಂಗದವರೇ ಆಗಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವರು ಆತನಿಗೆ ಮೆಚ್ಚಿಗೆಯಾಗಿದ್ದಾರೆಂದು ಈಗ ಸಂದೇಹವಿಲ್ಲದೆ ನನಗೆ ತಿಳಿದುಬಂದಿದೆ.
ಅಪೊಸ್ತಲರ ಕೃತ್ಯಗ 10 : 36 (IRVKN)
ಎಲ್ಲಾ ಜನರಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನದ ಶುಭಸಮಾಚಾರವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ಅನುಗ್ರಹಿಸಿದ ವಾಕ್ಯವು ನಿಮಗೇ ತಿಳಿದಿದೆ.
ಅಪೊಸ್ತಲರ ಕೃತ್ಯಗ 10 : 37 (IRVKN)
ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಯೋಹಾನನು ಸಾರಿದ ತರುವಾಯ ಈ ವಾಕ್ಯವು ಗಲಿಲಾಯದಿಂದ ಪ್ರಾರಂಭವಾಗಿ, ಯೂದಾಯದಲ್ಲೆಲ್ಲಾ ಪ್ರಬಲವಾಯಿತು.
ಅಪೊಸ್ತಲರ ಕೃತ್ಯಗ 10 : 38 (IRVKN)
ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ.
ಅಪೊಸ್ತಲರ ಕೃತ್ಯಗ 10 : 39 (IRVKN)
ಆತನು ಯೆಹೂದ್ಯರ ಸೀಮೆಯಲ್ಲಿಯೂ, ಯೆರೂಸಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ.
ಅಪೊಸ್ತಲರ ಕೃತ್ಯಗ 10 : 40 (IRVKN)
ಆತನನ್ನು ಮರದ ಕಂಬಕ್ಕೆ ತೂಗುಹಾಕಿ ಕೊಂದರು. ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ, ಪ್ರತ್ಯಕ್ಷನಾಗುವಂತೆ ಮಾಡಿದನು.
ಅಪೊಸ್ತಲರ ಕೃತ್ಯಗ 10 : 41 (IRVKN)
ಆತನು ಎಲ್ಲರಿಗೂ ಪ್ರತ್ಯಕ್ಷನಾಗದೆ, ದೇವರು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾದ ನಮಗೆ ಪ್ರತ್ಯಕ್ಷನಾದನು. ಆತನು ಸತ್ತವರೊಳಗಿಂದ ಜೀವಿತನಾಗಿ ಎದ್ದು ಬಂದ ಮೇಲೆ ನಾವು ಆತನ ಸಂಗಡ ಊಟ ಮಾಡಿದೆವು.
ಅಪೊಸ್ತಲರ ಕೃತ್ಯಗ 10 : 42 (IRVKN)
ಆತನೇ ಜೀವವಿರುವವರಿಗೂ, ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನು ಎಂಬುದನ್ನು ಜನರಿಗೆ ಸಾರಿ, ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.
ಅಪೊಸ್ತಲರ ಕೃತ್ಯಗ 10 : 43 (IRVKN)
ಆತನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ಆತನ ಹೆಸರಿನ ಮೂಲಕವಾಗಿ ಪಾಪ ಕ್ಷಮಾಪಣೆಯನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿಗಳೆಲ್ಲರು ಸಾಕ್ಷಿ ಹೇಳಿದ್ದಾರೆ” ಅಂದನು. [PE][PS]
ಅಪೊಸ್ತಲರ ಕೃತ್ಯಗ 10 : 44 (IRVKN)
ಪೇತ್ರನು, ಈ ವಾಕ್ಯಗಳನ್ನು ಇನ್ನೂ ಹೇಳುತ್ತಿರುವಾಗಲೇ, ಅವನ ವಾಕ್ಯಗಳನ್ನು ಕೇಳಿದವರೆಲ್ಲರ ಮೇಲೆ ಪವಿತ್ರಾತ್ಮನು ಇಳಿದನು.
ಅಪೊಸ್ತಲರ ಕೃತ್ಯಗ 10 : 45 (IRVKN)
ಅವರು ನಾನಾ ಭಾಷೆಗಳನ್ನಾಡುತ್ತಾ, ದೇವರನ್ನು ಕೊಂಡಾಡುತ್ತಾ ಇರುವುದನ್ನು ಪೇತ್ರನ ಸಂಗಡ ಬಂದಿದ್ದ ಯೆಹೂದ್ಯರಾದ ವಿಶ್ವಾಸಿಗಳು ನೋಡಿ,
ಅಪೊಸ್ತಲರ ಕೃತ್ಯಗ 10 : 46 (IRVKN)
ಅನ್ಯಜನಗಳಿಗೂ ಪವಿತ್ರಾತ್ಮನ ದಾನವಾಯಿತಲ್ಲಾ ಎಂದು ಅತ್ಯಾಶ್ಚರ್ಯಪಟ್ಟರು.
ಅಪೊಸ್ತಲರ ಕೃತ್ಯಗ 10 : 47 (IRVKN)
ನಡೆದ ಸಂಗತಿಯನ್ನು ಪೇತ್ರನು ನೋಡಿ; “ನಮ್ಮ ಹಾಗೆಯೇ ಪವಿತ್ರಾತ್ಮವರವನ್ನು ಹೊಂದಿದ ಇವರಿಗೆ ದೀಕ್ಷಾಸ್ನಾನವಾಗದಂತೆ ಅಡ್ಡಿಪಡಿಸುವವರು ಯಾರು?” ಎಂದು ಹೇಳಿ ಅವರಿಗೆ,
ಅಪೊಸ್ತಲರ ಕೃತ್ಯಗ 10 : 48 (IRVKN)
ನೀವು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಅಪ್ಪಣೆಕೊಟ್ಟನು. ಆ ಮೇಲೆ ಅವರು ಅವನನ್ನು ಇನ್ನೂ ಕೆಲವು ದಿನ ಅವರೊಂದಿಗೆ ಇರಬೇಕೆಂದು ಬೇಡಿಕೊಂಡರು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48

BG:

Opacity:

Color:


Size:


Font: