ಅಪೊಸ್ತಲರ ಕೃತ್ಯಗ 13 : 1 (IRVKN)
ಸುವಾರ್ತೆ ಸಾರುವುದಕ್ಕೆ ಪೌಲನು ಮಾಡಿದ ಮೊದಲನೆಯ ಪ್ರಯಾಣ (13:1, 14:28) ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ, ಬೋಧಕರೂ ಇದ್ದರು; ಅವರು ಯಾರೆಂದರೆ; ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಸಾಮಂತ ಹೆರೋದನ ಜೊತೆಯಲ್ಲಿ ಬೆಳೆದ ಮೆನಹೇನ, ಸೌಲ ಇವರೇ.
ಅಪೊಸ್ತಲರ ಕೃತ್ಯಗ 13 : 2 (IRVKN)
ಇವರು ಕರ್ತನನ್ನು ಆರಾಧಿಸುತ್ತಾ, ಉಪವಾಸಮಾಡುತ್ತಾ ಇದ್ದಾಗ ಪವಿತ್ರಾತ್ಮನು; “ನಾನು ಬಾರ್ನಬ ಮತ್ತು ಸೌಲರನ್ನು ಕರೆದ ಸೇವೆಗಾಗಿ ಅವರನ್ನು ಬೇರ್ಪಡಿಸಿರಿ” ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 13 : 3 (IRVKN)
ಆಗ ಅವರು ಉಪವಾಸವಿದ್ದು ಪ್ರಾರ್ಥಿಸಿ ಆ ಇಬ್ಬರ ಮೇಲೆ ಹಸ್ತಗಳನ್ನಿಟ್ಟು ಅವರನ್ನು ಕಳುಹಿಸಿಕೊಟ್ಟರು.
ಅಪೊಸ್ತಲರ ಕೃತ್ಯಗ 13 : 4 (IRVKN)
ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವರಾಗಿ ಸೆಲ್ಯೂಕ್ಯಕ್ಕೆ ಬಂದರು; ಅಲ್ಲಿಂದ ಸಮುದ್ರದಲ್ಲಿ ಪ್ರಯಾಣವಾಗಿ ಕುಪ್ರದ್ವೀಪಕ್ಕೆ ಹೋದರು.
ಅಪೊಸ್ತಲರ ಕೃತ್ಯಗ 13 : 5 (IRVKN)
ಸಲಮೀಸ್ ಎಂಬ ಸ್ಥಳಕ್ಕೆ ಸೇರಿ ಅಲ್ಲಿ ಯೆಹೂದ್ಯರ ಸಭಾಮಂದಿರಗಳಲ್ಲಿ ದೇವರ ವಾಕ್ಯವನ್ನು ಬೋಧಿಸಿದರು. ಮಾರ್ಕನೆನಿಸಿಕೊಳ್ಳುವ ಯೋಹಾನನು ಸಹಾಯಕನಾಗಿ ಅವರ ಸಂಗಡ ಇದ್ದನು.
ಅಪೊಸ್ತಲರ ಕೃತ್ಯಗ 13 : 6 (IRVKN)
ಅವರು ದ್ವೀಪದಲ್ಲೆಲ್ಲಾ ಸಂಚಾರಮಾಡಿ ಪಾಫೋಸ್ ಎಂಬ ಊರಿನ ತನಕ ಬಂದು ಅಲ್ಲಿ ಸುಳ್ಳುಪ್ರವಾದಿಯೂ, ಮಂತ್ರವಾದಿಯೂ ಆಗಿದ್ದ ‘ಬಾರ್‍ಯೇಸು’ ಎಂಬ ಒಬ್ಬ ಯೆಹೂದ್ಯ ಮನುಷ್ಯನನ್ನು ಕಂಡರು.
ಅಪೊಸ್ತಲರ ಕೃತ್ಯಗ 13 : 7 (IRVKN)
ಅವನು ರಾಜ್ಯ ಪಾಲನಾಗಿದ್ದ ಸೆರ್ಗ್ಯ ಪೌಲನೆಂಬ ಅಧಿಪತಿಯ ಜೊತೆಯಲ್ಲಿದ್ದನು. ಆ ಅಧಿಪತಿಯು ಬುದ್ಧಿವಂತನಾಗಿದ್ದು, ಬಾರ್ನಬ ಮತ್ತು ಸೌಲನನ್ನು ತನ್ನ ಬಳಿಗೆ ಕರೆಸಿ ದೇವರ ವಾಕ್ಯವನ್ನು ಕೇಳುವುದಕ್ಕೆ ಅಪೇಕ್ಷೆ ಪಟ್ಟನು.
ಅಪೊಸ್ತಲರ ಕೃತ್ಯಗ 13 : 8 (IRVKN)
ಆದರೆ ಆ ಮಂತ್ರವಾದಿಯಾದ ಎಲುಮನು (ಎಲುಮನೆಂಬ ಹೆಸರಿಗೆ ಮಂತ್ರವಾದಿಯೆಂದರ್ಥ) ಅವರನ್ನು ವಿರೋಧಿಸಿದನು; ಅಧಿಪತಿಯು ಕ್ರಿಸ್ತನಲ್ಲಿ ನಂಬಿಕೆಯಿಡದಂತೆ ಅಡ್ಡಿಮಾಡಲು ಪ್ರಯತ್ನಿಸಿದನು.
ಅಪೊಸ್ತಲರ ಕೃತ್ಯಗ 13 : 9 (IRVKN)
ಆಗ ಪೌಲನೆನಿಸಿಕೊಳ್ಳುವ ಸೌಲನು ಪವಿತ್ರಾತ್ಮಭರಿತನಾಗಿ,
ಅಪೊಸ್ತಲರ ಕೃತ್ಯಗ 13 : 10 (IRVKN)
ಅವನನ್ನು ದೃಷ್ಟಿಸಿನೋಡಿ; “ಸೈತಾನನ ಮಗನೇ, ಮೋಸದಿಂದಲೂ, ಎಲ್ಲಾ ಕೆಟ್ಟತನದಿಂದಲೂ ತುಂಬಿರುವವನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೇರವಾದ ಮಾರ್ಗಗಳನ್ನು ಡೊಂಕು ಮಾಡುವುದನ್ನು ಬಿಡುವುದಿಲ್ಲವೋ?
ಅಪೊಸ್ತಲರ ಕೃತ್ಯಗ 13 : 11 (IRVKN)
ಇಗೋ, ಕರ್ತನು ನಿನಗೆ ವಿರುದ್ಧವಾಗಿ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ನೋಡದೆ ಇರುವಿ” ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಕಣ್ಣು ಮೊಬ್ಬಾಗಿ ಕತ್ತಲೆ ಕವಿಯಿತು; ಅವನು ಕೈಹಿಡಿದು ಆಧಾರ ಕೊಡುವವರನ್ನು ಹುಡುಕುತ್ತಾ ತಿರುಗಾಡಿದನು.
ಅಪೊಸ್ತಲರ ಕೃತ್ಯಗ 13 : 12 (IRVKN)
ಅಧಿಪತಿಯು ಆ ಸಂಗತಿಯನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬುವವನಾದನು.
ಅಪೊಸ್ತಲರ ಕೃತ್ಯಗ 13 : 13 (IRVKN)
ಪಿಸಿದ್ಯದ ಅಂತಿಯೋಕ್ಯದಲ್ಲಿ ಪೌಲ ಮತ್ತು ಬಾರ್ನಬ ತರುವಾಯ ಪೌಲನೂ ಅವನ ಜೊತೆಯಲ್ಲಿದ್ದವರೂ ಪಾಫೋಸೂರನ್ನು ಬಿಟ್ಟು ಸಮುದ್ರಪ್ರಯಾಣಮಾಡಿ ಪಂಫುಲ್ಯ ಸೀಮೆಗೆ ಸೇರಿದ ಪೆರ್ಗೆ ಪಟ್ಟಣಕ್ಕೆ ಬಂದರು; ಮಾರ್ಕನೆಂಬ ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇಮಿಗೆ ಹೋದನು.
ಅಪೊಸ್ತಲರ ಕೃತ್ಯಗ 13 : 14 (IRVKN)
ಆ ಮೇಲೆ ಅವರು ಪೆರ್ಗೆಯಿಂದ ಸಂಚಾರಮಾಡಿ ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ ದಿನದಲ್ಲಿ ಅವರು ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.
ಅಪೊಸ್ತಲರ ಕೃತ್ಯಗ 13 : 15 (IRVKN)
ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥ ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ನಾಯಕರು; “ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ” ಎಂದು ಅವರಿಗೆ ಹೇಳಿ ಕಳುಹಿಸಿದರು.
ಅಪೊಸ್ತಲರ ಕೃತ್ಯಗ 13 : 16 (IRVKN)
ಆಗ ಪೌಲನು ಎದ್ದು ಕೈಸನ್ನೆ ಮಾಡಿ ಹೇಳಿದ್ದೇನಂದರೆ;
ಅಪೊಸ್ತಲರ ಕೃತ್ಯಗ 13 : 17 (IRVKN)
“ಇಸ್ರಾಯೇಲ್ ಜನರೇ, ಮತ್ತು ಯೆಹೂದ್ಯ ಮತಾವಲಂಬಿಗಳೇ, ಕೇಳಿರಿ. ನಮ್ಮ ಇಸ್ರಾಯೇಲ್ ಜನರ ದೇವರು ಆರಿಸಿಕೊಂಡ ನಮ್ಮ ಪೂರ್ವಿಕರು ಐಗುಪ್ತದೇಶದಲ್ಲಿ ವಾಸಿಸುತ್ತಿದ್ದಾಗ ಅವರನ್ನು ಪ್ರಬಲರನ್ನಾಗಿ ಮಾಡಿ, ಅಭಿವೃದ್ಧಿಗೆ ತಂದು ತನ್ನ ಭುಜಬಲದಿಂದ ಅವರನ್ನು ಆ ದೇಶದಿಂದ ಬರಮಾಡಿದನು.
ಅಪೊಸ್ತಲರ ಕೃತ್ಯಗ 13 : 18 (IRVKN)
ಆತನು ಸುಮಾರು ನಲವತ್ತು ವರ್ಷಗಳವರೆಗೂ ಅಡವಿಯಲ್ಲಿ ಅವರ ನಡವಳಿಕೆಯನ್ನು ಸಹಿಸಿಕೊಂಡು,
ಅಪೊಸ್ತಲರ ಕೃತ್ಯಗ 13 : 19 (IRVKN)
ಕಾನಾನ್ ದೇಶದಲ್ಲಿದ್ದ ಅನ್ಯಜನಗಳ ಏಳು ರಾಜ್ಯಗಳನ್ನು ನಿರ್ಮೂಲಮಾಡಿ, ಆ ಜನರ ದೇಶವನ್ನು ಅವರಿಗೆ ಸ್ವತ್ತಾಗಿ ಹಂಚಿಕೊಟ್ಟನು.
ಅಪೊಸ್ತಲರ ಕೃತ್ಯಗ 13 : 20 (IRVKN)
ಇಷ್ಟರೊಳಗೆ ಸುಮಾರು ನಾನೂರೈವತ್ತು ವರ್ಷಗಳು ಗತಿಸಿದವು. ಇದಾದ ಮೇಲೆ ಪ್ರವಾದಿಯಾದ ಸಮುವೇಲನ ಕಾಲದ ವರೆಗೆ ನ್ಯಾಯಾಧಿಪತಿಗಳನ್ನು ಕೊಟ್ಟನು.
ಅಪೊಸ್ತಲರ ಕೃತ್ಯಗ 13 : 21 (IRVKN)
ತರುವಾಯ ಅವರು ತಮಗೆ ಅರಸನು ಬೇಕೆಂದು ಕೇಳಿಕೊಳ್ಳಲು, ದೇವರು ಅವರಿಗೆ ಬೆನ್ಯಾಮೀನನ ಕುಲದ ಕೀಷನ ಮಗನಾದ ಸೌಲನನ್ನು ರಾಜನನ್ನಾಗಿ ಕೊಟ್ಟನು. ಅವನು ಅವರನ್ನು ನಲವತ್ತು ವರ್ಷ ಆಳಿದನು.
ಅಪೊಸ್ತಲರ ಕೃತ್ಯಗ 13 : 22 (IRVKN)
ಆ ಮೇಲೆ ದೇವರು ಅವನನ್ನು ತೆಗೆದುಹಾಕಿ ದಾವೀದನನ್ನು ಅವರ ಮೇಲೆ ಅರಸನನ್ನಾಗಿ ನೇಮಕಮಾಡಿ; ‘ಇಷಯನ ಮಗನಾದ ದಾವೀದನು ನನಗೆ ಸಿಕ್ಕಿದನು, ಅವನು ನನ್ನ ಹೃದಯಕ್ಕೆ ಒಪ್ಪುವ ಮನುಷ್ಯನು, ಅವನು ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವನು’ ಎಂಬುದಾಗಿ ಅವನ ವಿಷಯವಾಗಿ ಸಾಕ್ಷಿಹೇಳಿದನು.
ಅಪೊಸ್ತಲರ ಕೃತ್ಯಗ 13 : 23 (IRVKN)
“ಅವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲರಿಗೆ ಒಬ್ಬ ರಕ್ಷಕನನ್ನು ಹುಟ್ಟಿಸಿದ್ದಾನೆ.
ಅಪೊಸ್ತಲರ ಕೃತ್ಯಗ 13 : 24 (IRVKN)
ಆ ರಕ್ಷಕನೇ ಯೇಸು, ಆತನ ಆಗಮನಕ್ಕೆ ಮೊದಲು ಯೋಹಾನನು ಇಸ್ರಾಯೇಲ್ ಜನರೆಲ್ಲರಿಗೆ, ನೀವು ದೇವರ ಕಡೆಗೆ ತಿರುಗಿಕೊಂಡು ಪಶ್ಚಾತ್ತಾಪದ ದೀಕ್ಷಾಸ್ನಾನಮಾಡಿಸಿಕೊಳ್ಳಬೇಕೆಂದು ಸಾರಿದನು.
ಅಪೊಸ್ತಲರ ಕೃತ್ಯಗ 13 : 25 (IRVKN)
ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರುವಾಗ ಜನರಿಗೆ; ‘ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ, ಆದರೆ ನನ್ನ ಹಿಂದೆ ಒಬ್ಬನು ಬರುತ್ತಾನೆ, ಆತನ ಪಾದರಕ್ಷೆಯನ್ನು ಬಿಚ್ಚುವುದಕ್ಕೆ ನಾನು ಯೋಗ್ಯನಲ್ಲ’ ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 13 : 26 (IRVKN)
“ಸಹೋದರರೇ, ಅಬ್ರಹಾಮನ ವಂಶಸ್ಥರೇ, ಮತ್ತು ನಿಮ್ಮೊಂದಿಗಿರುವ ಯೆಹೂದ್ಯಮತಾವಲಂಬಿಗಳೇ, ನಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಲ್ಪಟ್ಟಿದೆ.
ಅಪೊಸ್ತಲರ ಕೃತ್ಯಗ 13 : 27 (IRVKN)
ಯೆರೂಸಲೇಮಿನಲ್ಲಿ ವಾಸವಾಗಿರುವವರೂ, ಅವರ ಅಧಿಕಾರಿಗಳೂ, ಆತನನ್ನಾಗಲಿ, ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ಮಾತುಗಳನ್ನಾಗಲಿ ಗ್ರಹಿಸದೆ, ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ಮಾತುಗಳನ್ನೇ ನೆರವೇರಿಸಿದರು.
ಅಪೊಸ್ತಲರ ಕೃತ್ಯಗ 13 : 28 (IRVKN)
ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ, ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.
ಅಪೊಸ್ತಲರ ಕೃತ್ಯಗ 13 : 29 (IRVKN)
ಆತನ ವಿಷಯವಾಗಿ ಶಾಸ್ತ್ರದಲ್ಲಿ ಬರೆದಿರುವುದೆಲ್ಲಾ ನೆರವೇರಿಸಿದ ಮೇಲೆ, ಆತನನ್ನು ಮರದ ಕಂಬದಿಂದ ಇಳಿಸಿ ಸಮಾಧಿಯಲ್ಲಿಟ್ಟರು.
ಅಪೊಸ್ತಲರ ಕೃತ್ಯಗ 13 : 30 (IRVKN)
“ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು.
ಅಪೊಸ್ತಲರ ಕೃತ್ಯಗ 13 : 31 (IRVKN)
ಮತ್ತು ಆತನು ಗಲಿಲಾಯದಿಂದ ಯೆರೂಸಲೇಮಿಗೆ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿನಗಳವರೆಗೂ ಕಾಣಿಸಿಕೊಂಡನು; ಈಗ ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ.
ಅಪೊಸ್ತಲರ ಕೃತ್ಯಗ 13 : 32 (IRVKN)
“ದೇವರು ನಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನಮ್ಮ ಮಕ್ಕಳಿಗೋಸ್ಕರ ನೆರವೇರಿಸಿದ್ದಾನೆಂಬ ಶುಭಸಮಾಚಾರವನ್ನು ನಾವು ನಿಮಗೆ ಸಾರುವವರಾಗಿದ್ದೇವೆ. ಆತನು ಯೇಸುವನ್ನು ಮರಣದಿಂದ ಎಬ್ಬಿಸಿದ್ದರಲ್ಲಿ;
ಅಪೊಸ್ತಲರ ಕೃತ್ಯಗ 13 : 33 (IRVKN)
‘ನನಗೆ ನೀನು ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ’ ಎಂದು ಎರಡನೆಯ ಕೀರ್ತನೆಯಲ್ಲಿ ಬರೆದಿರುವ ಮಾತು ನೆರವೇರಿತು.
ಅಪೊಸ್ತಲರ ಕೃತ್ಯಗ 13 : 34 (IRVKN)
“ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರತಕ್ಕವನಲ್ಲವೆಂಬುದರ ಕುರಿತು ದೇವರು ಹೇಳಿರುವುದು ಏನೆಂದರೆ; ‘ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೂ ಕೊಡುತ್ತೇನೆ, ಅವು ನಂಬತಕ್ಕವುಗಳೇ’ ಎಂಬುದೆ.
ಅಪೊಸ್ತಲರ ಕೃತ್ಯಗ 13 : 35 (IRVKN)
ಅದಕ್ಕೆ ಅನುಸಾರವಾಗಿ ಆತನು; ‘ನೀನು ನಿನ್ನ ಪ್ರಿಯನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವುದಿಲ್ಲವೆಂದು’ ಬೇರೊಂದು ಕೀರ್ತನೆಯಲ್ಲಿ ಹೇಳಿದ್ದಾನೆ.
ಅಪೊಸ್ತಲರ ಕೃತ್ಯಗ 13 : 36 (IRVKN)
“ದಾವೀದನಾದರೋ ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕನುಸಾರವಾಗಿ ಸೇವೆಮಾಡಿದ ನಂತರ, ಸತ್ತಾಗ ತನ್ನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು, ಅವನ ದೇಹವು ಕೊಳೆಯುವ ಅವಸ್ಥೆಯನ್ನು ಅನುಭವಿಸಿತು.
ಅಪೊಸ್ತಲರ ಕೃತ್ಯಗ 13 : 37 (IRVKN)
ಆದರೆ ದೇವರು ಮರಣದಿಂದ ಎಬ್ಬಿಸಿದ ಯೇಸುವು ಕೊಳೆಯುವ ಅವಸ್ಥೆಯನ್ನು ಅನುಭವಿಸಲಿಲ್ಲ.
ಅಪೊಸ್ತಲರ ಕೃತ್ಯಗ 13 : 38 (IRVKN)
“ಆದುದರಿಂದ ಸಹೋದರರೇ, ಆತನ ಮೂಲಕವಾಗಿ ಪಾಪ ಕ್ಷಮಾಪಣೆಯು ದೊರೆಯುತ್ತದೆಂಬುದು ನಿಮಗೆ ಸಾರೋಣವಾಗಿತ್ತೆಂದು ನಿಮಗೆ ತಿಳಿದಿರಲಿ.
ಅಪೊಸ್ತಲರ ಕೃತ್ಯಗ 13 : 39 (IRVKN)
ಮೋಶೆಯ ಧರ್ಮಶಾಸ್ತ್ರದ ಮೂಲಕ ನೀವು ಬಿಡುಗಡೆಯಾಗಿ ನೀತಿವಂತರೆನಿಸಿಕೊಳ್ಳದೆ ಇದ್ದಿರಿ. ಆದರೆ ಆತನನ್ನು ನಂಬುವವರೆಲ್ಲರೂ ಆತನ ಮೂಲಕವಾಗಿ ಬಿಡುಗಡೆಹೊಂದಿ ನೀತಿವಂತರೆನಿಸಿ ಕೊಳ್ಳುತ್ತಾರೆ.
ಅಪೊಸ್ತಲರ ಕೃತ್ಯಗ 13 : 40 (IRVKN)
ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವುದು ನಿಮಗೆ ಸಂಭವಿಸದಂತೆ ನೋಡಿಕೊಳ್ಳಿರಿ. ಆದೇನಂದರೆ;
ಅಪೊಸ್ತಲರ ಕೃತ್ಯಗ 13 : 41 (IRVKN)
“ ‘ಎಲೈ, ತಿರಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿಹೋಗಿರಿ. ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಸ್ವಲ್ಪವೂ ನಂಬುವುದಿಲ್ಲ’ ” ಎಂಬುದೇ ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 13 : 42 (IRVKN)
ಪೌಲನೂ, ಬಾರ್ನಬನೂ ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಜನರು ಈ ಮಾತುಗಳನ್ನು ಬರುವ ಸಬ್ಬತ್ ದಿನದಲ್ಲಿಯೂ ತಮಗೆ ಹೇಳಬೇಕೆಂದು ಕೇಳಿಕೊಂಡರು.
ಅಪೊಸ್ತಲರ ಕೃತ್ಯಗ 13 : 43 (IRVKN)
ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿ, ದೈವಭಕ್ತರಾಗಿದ್ದ ಯೆಹೂದ್ಯ ಮತಾವಲಂಬಿಗಳಲ್ಲಿ ಅನೇಕರು ಪೌಲ ಮತ್ತು ಬಾರ್ನಬನನ್ನು ಹಿಂಬಾಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪಾಶ್ರಯದಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.
ಅಪೊಸ್ತಲರ ಕೃತ್ಯಗ 13 : 44 (IRVKN)
ಮುಂದಿನ ಸಬ್ಬತ್ ದಿನದಲ್ಲಿ ಹೆಚ್ಚುಕಡಿಮೆ ಇಡೀ ಊರಿನವರು ದೇವರ ವಾಕ್ಯವನ್ನು ಕೇಳುವುದಕ್ಕೆ ಸೇರಿಬಂದರು.
ಅಪೊಸ್ತಲರ ಕೃತ್ಯಗ 13 : 45 (IRVKN)
ಆದರೆ ಜನರು ಗುಂಪುಗುಂಪಾಗಿ ಬರುವುದನ್ನು ನೋಡಿ ಯೆಹೂದ್ಯರು ಮತ್ಸರವುಳ್ಳವರಾಗಿ ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುತ್ತಾ ಇದ್ದರು.
ಅಪೊಸ್ತಲರ ಕೃತ್ಯಗ 13 : 46 (IRVKN)
ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.
ಅಪೊಸ್ತಲರ ಕೃತ್ಯಗ 13 : 47 (IRVKN)
ಹಾಗೆಯೇ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ, ಹೇಗೆಂದರೆ; ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಕನಾಗಿರುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ದೇವರು ಹೇಳಿದ್ದಾನೆ ಎಂದರು.
ಅಪೊಸ್ತಲರ ಕೃತ್ಯಗ 13 : 48 (IRVKN)
ಅಲ್ಲಿದ್ದ ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು, ದೇವರ ವಾಕ್ಯವನ್ನು ಹೊಗಳಿದರು. ಮತ್ತು ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.
ಅಪೊಸ್ತಲರ ಕೃತ್ಯಗ 13 : 49 (IRVKN)
ಕರ್ತನ ವಾಕ್ಯವು ಆ ಸೀಮೆಯ ಎಲ್ಲಾ ಕಡೆಗಳಲ್ಲಿ ಹಬ್ಬುತ್ತಾ ಬಂದಿತು.
ಅಪೊಸ್ತಲರ ಕೃತ್ಯಗ 13 : 50 (IRVKN)
ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಭಕ್ತೆಯರಾದ ಕುಲೀನ ಸ್ತ್ರೀಯರನ್ನೂ, ಊರಿನ ಪ್ರಮುಖರನ್ನೂ, ಹುರಿದುಂಬಿಸಿ ಪೌಲ ಮತ್ತು ಬಾರ್ನಬರ ವಿರೋಧವಾಗಿ ಹಿಂಸೆಯನ್ನೆಬ್ಬಿಸಿ ಅವರನ್ನು ತಮ್ಮ ಪ್ರದೇಶದಿಂದ ಆಚೆಗೆ ಅಟ್ಟಿಬಿಟ್ಟರು.
ಅಪೊಸ್ತಲರ ಕೃತ್ಯಗ 13 : 51 (IRVKN)
ಪೌಲ ಬಾರ್ನಬರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಝಾಡಿಸಿಬಿಟ್ಟು ಇಕೋನ್ಯಕ್ಕೆ ಹೋದರು.
ಅಪೊಸ್ತಲರ ಕೃತ್ಯಗ 13 : 52 (IRVKN)
ಶಿಷ್ಯರಾದವರು ಸಂತೋಷಭರಿತರೂ, ಪವಿತ್ರಾತ್ಮಭರಿತರೂ ಆಗಿದ್ದರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52