ಅಪೊಸ್ತಲರ ಕೃತ್ಯಗ 14 : 1 (IRVKN)
ಇಕೋನ್ಯ ಪಟ್ಟಣದಲ್ಲಿ ಪೌಲ ಮತ್ತು ಬಾರ್ನಬ ಇಕೋನ್ಯದಲ್ಲಿ ಪೌಲ ಮತ್ತು ಬಾರ್ನಬರು ಅದೇ ಪ್ರಕಾರವಾಗಿ ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಪ್ರೇರಣಾತ್ಮಕವಾದ ಬೋಧನೆ ನೀಡಿ ಮಾತನಾಡಿದ್ದರಿಂದ ಯೆಹೂದ್ಯರಲ್ಲಿಯೂ, ಗ್ರೀಕರಲ್ಲಿಯೂ ಬಹುಮಂದಿ ಕರ್ತನಾದ ಯೇಸುಕ್ರಿಸ್ತನನ್ನು ನಂಬುವವರಾದರು.
ಅಪೊಸ್ತಲರ ಕೃತ್ಯಗ 14 : 2 (IRVKN)
ಆದರೆ ನಂಬದೆ ಹೋದ ಯೆಹೂದ್ಯರು, ಅನ್ಯಜನರ ಮನಸ್ಸನ್ನು ಈ ಸಹೋದರರ ವಿರುದ್ಧವಾಗಿ ಪ್ರಚೋದಿಸಿ ಕೆಡಿಸಿದರು.
ಅಪೊಸ್ತಲರ ಕೃತ್ಯಗ 14 : 3 (IRVKN)
ಹೀಗಿರಲಾಗಿ ಅವರು ಬಹುಕಾಲ ಅಲ್ಲಿದ್ದು ಕರ್ತನು ಅವರ ಕೈಯಿಂದ ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ನಡೆಯುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟಿದ್ದರಿಂದ ಆತನ ಮೇಲೆ ಭರವಸವಿಟ್ಟು ಧೈರ್ಯದಿಂದ ಮಾತನಾಡುತ್ತಿದ್ದರು.
ಅಪೊಸ್ತಲರ ಕೃತ್ಯಗ 14 : 4 (IRVKN)
ಆಗ ಆ ಊರಿನ ಜನರು ಎರಡು ಭಾಗವಾದರೂ; ಕೆಲವರು ಯೆಹೂದ್ಯರ ಪಕ್ಷದವರಾದರು, ಕೆಲವರು ಅಪೊಸ್ತಲರ ಪಕ್ಷದವರಾದರು.
ಅಪೊಸ್ತಲರ ಕೃತ್ಯಗ 14 : 5 (IRVKN)
ಅನ್ಯಜನರೂ, ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳ ಸಮ್ಮತಿಯಿಂದ ಅಪೊಸ್ತಲರನ್ನು ಪೀಡಿಸುವುದಕ್ಕೂ, ಕಲ್ಲೆಸೆದು ಕೊಲ್ಲುವುದಕ್ಕೂ ಪ್ರಯತ್ನಿಸಿದಾಗ,
ಅಪೊಸ್ತಲರ ಕೃತ್ಯಗ 14 : 6 (IRVKN)
ಅಪೊಸ್ತಲರು ಅದನ್ನು ತಿಳಿದು ಅಲ್ಲಿಂದ ಓಡಿಹೋಗಿ ಲುಕವೋನ್ಯದಲ್ಲಿದ್ದ ಲುಸ್ತ್ರ ಮತ್ತು ದೆರ್ಬೆ ಎಂಬ ಊರುಗಳಿಗೂ,
ಅಪೊಸ್ತಲರ ಕೃತ್ಯಗ 14 : 7 (IRVKN)
ಅವುಗಳಿಗೆ ಸೇರಿರುವ ಸೀಮೆಗೂ ಹೋಗಿ ಅಲ್ಲಿ ಸುವಾರ್ತೆಯನ್ನು ಸಾರಿದರು.
ಅಪೊಸ್ತಲರ ಕೃತ್ಯಗ 14 : 8 (IRVKN)
ಪೌಲ ಮತ್ತು ಬಾರ್ನಬನು ಲುಸ್ತ್ರದಲ್ಲಿ ಲುಸ್ತ್ರ ಪಟ್ಟಣದಲ್ಲಿ ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಕುಳಿತಿದ್ದನು. ಅವನು ಹುಟ್ಟುಕುಂಟನಾಗಿದ್ದು, ಅದುವರೆಗೂ ನಡೆಯಲಾರದೆ ಇದ್ದವನು.
ಅಪೊಸ್ತಲರ ಕೃತ್ಯಗ 14 : 9 (IRVKN)
ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು. ಪೌಲನು ಅವನನ್ನು ದಿಟ್ಟಿಸಿ ನೋಡಿ ವಾಸಿಯಾಗುವುದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು;
ಅಪೊಸ್ತಲರ ಕೃತ್ಯಗ 14 : 10 (IRVKN)
ಅಪೊಸ್ತಲರ ಕೃತ್ಯಗ 14 : 11 (IRVKN)
“ನಿನ್ನ ಕಾಲೂರಿ ನೆಟ್ಟಗೆ ನಿಂತುಕೋ” ಎಂದು ಮಹಾಧ್ವನಿಯಿಂದ ಹೇಳಿದನು. ಕೂಡಲೆ ಆ ಮನುಷ್ಯನು ಹಾರಿ ನಡೆದಾಡಿದನು. ಪೌಲನು ಮಾಡಿದ್ದನ್ನು ಗುಂಪು ಕೂಡಿದ್ದ ಜನರು ನೋಡಿ; “ದೇವರುಗಳು ಮನುಷ್ಯರ ರೂಪದಿಂದ ನಮ್ಮ ಬಳಿಗೆ ಇಳಿದುಬಂದರು” ಎಂದು ಲುಕವೋನ್ಯ ಭಾಷೆಯಲ್ಲಿ ಕೂಗಾಡಿದರು.
ಅಪೊಸ್ತಲರ ಕೃತ್ಯಗ 14 : 12 (IRVKN)
ಬಾರ್ನಬನನ್ನು ‘ದ್ಯೌಸ್’ ದೇವರೆಂತಲೂ[* ದ್ಯೌಸ್ದೇವರು ಅಂದರೆ ಸ್ವರ್ಗಾಧಿಪತಿ ] ಪೌಲನು ಪ್ರಮುಖ ಭಾಷಣಕಾರನಾದ್ದರಿಂದ ಅವನನ್ನು ‘ಹೆರ್ಮೆ’ ದೇವರೆಂತಲೂ ಅಂದುಕೊಂಡರು.
ಅಪೊಸ್ತಲರ ಕೃತ್ಯಗ 14 : 13 (IRVKN)
ಊರ ಮುಂದಿದ್ದ ದ್ಯೌಸ್ ದೇವರ ಗುಡಿಯ ಪೂಜಾರಿಯು ಎತ್ತುಗಳನ್ನೂ, ಹೂವಿನ ಹಾರಗಳನ್ನೂ ಊರಬಾಗಿಲಿನ ಹತ್ತಿರಕ್ಕೆ ತಂದು ಜನರೊಂದಿಗೆ ಅವರಿಗೆ ಬಲಿಕೊಡಬೇಕೆಂದಿದ್ದನು.
ಅಪೊಸ್ತಲರ ಕೃತ್ಯಗ 14 : 14 (IRVKN)
ಇದನ್ನು ಕೇಳಿ ಅಪೊಸ್ತಲರಾದ ಬಾರ್ನಬ ಮತ್ತು ಪೌಲರು ತಮ್ಮ ವಸ್ತ್ರಗಳನ್ನು ಹರಿದುಕೊಂಡು ಜನರ ಗುಂಪಿನೊಳಗೆ ನುಗ್ಗಿ ಹೀಗೆಂದು ಕೂಗಿ ಹೇಳಿದರು;
ಅಪೊಸ್ತಲರ ಕೃತ್ಯಗ 14 : 15 (IRVKN)
“ಜನರೇ, ನೀವು ಹೀಗೇಕೆ ಮಾಡುತ್ತೀರೀ? ನಾವೂ ಮನುಷ್ಯರೇ, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.
ಅಪೊಸ್ತಲರ ಕೃತ್ಯಗ 14 : 16 (IRVKN)
ಗತಿಸಿಹೋದ ಕಾಲದಲ್ಲಿ ಆತನು ಎಲ್ಲಾ ಜನಾಂಗಗಳನ್ನು ತಮ್ಮ ತಮ್ಮ ಮನಸ್ಸಿಗೆ ತೋಚಿದ ಮಾರ್ಗಗಳಲ್ಲಿ ನಡೆಯುವುದಕ್ಕೆ ಬಿಟ್ಟು ಬಿಟ್ಟನು.
ಅಪೊಸ್ತಲರ ಕೃತ್ಯಗ 14 : 17 (IRVKN)
ಆದರೆ ದೇವರು ತನ್ನ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಮೂಲಕ ಸಾಕ್ಷಿ ನೀಡುತ್ತಲೇ ಬಂದಿದ್ದಾನೆ; ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ, ಸುಗ್ಗಿಕಾಲಗಳನ್ನೂ ದಯಪಾಲಿಸಿ, ಆಹಾರ ಕೊಟ್ಟು ನಿಮ್ಮ ಮನಸ್ಸುಗಳನ್ನು ಆನಂದದಿಂದ ತುಂಬಿಸಿ, ಉಪಕಾರಮಾಡುತ್ತಾ ಬಂದವನು ಆತನೇ” ಎಂದು ಹೇಳಿದರು.
ಅಪೊಸ್ತಲರ ಕೃತ್ಯಗ 14 : 18 (IRVKN)
ಬಾರ್ನಬ ಮತ್ತು ಪೌಲರು ಈ ಮಾತುಗಳನ್ನು ಹೇಳಿದರೂ ಜನರು ತಮಗೆ ಬಲಿಯರ್ಪಿಸುವುದನ್ನು ತಡೆಯಲು ಆಸಾಧ್ಯವಾಯಿತು.
ಅಪೊಸ್ತಲರ ಕೃತ್ಯಗ 14 : 19 (IRVKN)
ತರುವಾಯ ಅಂತಿಯೋಕ್ಯದಿಂದಲೂ, ಇಕೋನ್ಯದಿಂದಲೂ ಯೆಹೂದ್ಯರು ಬಂದು, ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು, ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಅವನನ್ನು ಎಳೆದುಹಾಕಿದರು.
ಅಪೊಸ್ತಲರ ಕೃತ್ಯಗ 14 : 20 (IRVKN)
ಆದರೆ ಶಿಷ್ಯರು ಅವನ ಸುತ್ತಲು ನಿಂತುಕೊಂಡಿರುವಾಗ ಅವನು ಎದ್ದು ಊರೊಳಕ್ಕೆ ಹೋದನು.
ಅಪೊಸ್ತಲರ ಕೃತ್ಯಗ 14 : 21 (IRVKN)
ಪೌಲನು ಮತ್ತು ಬಾರ್ನಬನು ಅಂತಿಯೋಕ್ಯಕ್ಕೆ ಹಿಂತಿರುಗಿದ್ದು ಮರುದಿನ ಪೌಲನು, ಬಾರ್ನಬನ ಜೊತೆಯಲ್ಲಿ ದೆರ್ಬೆಗೆ ಹೊರಟನು. ಆ ಊರಿನಲ್ಲಿ ಅವರು ಸುವಾರ್ತೆಯನ್ನು ಸಾರಿ ಅನೇಕರನ್ನು ಶಿಷ್ಯರನ್ನಾಗಿ ಮಾಡಿದ ಮೇಲೆ ಹಿಂತಿರುಗಿ ಲುಸ್ತ್ರಕ್ಕೂ, ಇಕೋನ್ಯಕ್ಕೂ, ಅಂತಿಯೋಕ್ಯಕ್ಕೂ ಬಂದರು.
ಅಪೊಸ್ತಲರ ಕೃತ್ಯಗ 14 : 22 (IRVKN)
ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.
ಅಪೊಸ್ತಲರ ಕೃತ್ಯಗ 14 : 23 (IRVKN)
ಇದಲ್ಲದೆ ಪ್ರತಿ ಕ್ರೈಸ್ತ ಸಭೆಗೂ ಹಿರಿಯರನ್ನು ನೇಮಿಸಿದರು. ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರು ನಂಬಿದ್ದ ಕರ್ತನಿಗೆ ಅವರನ್ನು ಒಪ್ಪಿಸಿದರು.
ಅಪೊಸ್ತಲರ ಕೃತ್ಯಗ 14 : 24 (IRVKN)
ತರುವಾಯ ಪಿಸಿದ್ಯ ಸೀಮೆಯನ್ನು ಹಾದು ಪಂಫುಲ್ಯ ಸೀಮೆಗೆ ಬಂದು,
ಅಪೊಸ್ತಲರ ಕೃತ್ಯಗ 14 : 25 (IRVKN)
ಅದಕ್ಕೆ ಸೇರಿರುವ ಪೆರ್ಗೆ ಊರಿನಲ್ಲಿ ಕರ್ತನ ವಾಕ್ಯವನ್ನು ಸಾರಿದ ಮೇಲೆ ಅತಾಲ್ಯ ಪಟ್ಟಣಕ್ಕೆ ಇಳಿದು ಅಲ್ಲಿಂದ ಸಮುದ್ರಮಾರ್ಗವಾಗಿ ಪ್ರಯಾಣಮಾಡಿ ಅಂತಿಯೋಕ್ಯವನ್ನು ತಲುಪಿದರು.
ಅಪೊಸ್ತಲರ ಕೃತ್ಯಗ 14 : 26 (IRVKN)
ಅವರು ಈವರೆಗೆ ನೆರವೇರಿಸಿ ಬಂದಿರುವ ಕೆಲಸಕ್ಕೋಸ್ಕರ ತಮ್ಮನ್ನೇ ದೇವರ ಕೃಪಾಶ್ರಯಕ್ಕೆ ಮೊದಲು ಒಪ್ಪಿಸಿಕೊಟ್ಟದ್ದು ಈ ಊರಿನಲ್ಲಿಯೇ.
ಅಪೊಸ್ತಲರ ಕೃತ್ಯಗ 14 : 27 (IRVKN)
ಅಲ್ಲಿ ಸಭೆಯನ್ನು ಕೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳೆಲ್ಲವನ್ನೂ, ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲು ತೆರೆದದ್ದನ್ನೂ ವಿವರವಾಗಿ ಅವರಿಗೆ ತಿಳಿಸಿದರು.
ಅಪೊಸ್ತಲರ ಕೃತ್ಯಗ 14 : 28 (IRVKN)
ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಹೆಚ್ಚುಕಾಲ ತಂಗಿದ್ದರು.
❮
❯