ಅಪೊಸ್ತಲರ ಕೃತ್ಯಗ 15 : 1 (IRVKN)
ಯೆರೂಸಲೇಮ್ ಸಭೆಹಿರಿಯರ ಆಲೋಚನಾಸಭೆ ಬಳಿಕ ಕೆಲವರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು; “ನೀವು ಮೋಶೆಯ ಧರ್ಮಶಾಸ್ತ್ರದಲ್ಲಿ ಹೇಳಿರುವ ನಿಯಮದ ಪ್ರಕಾರ ಸುನ್ನತಿಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು” ಎಂಬುದಾಗಿ ಸಹೋದರರಿಗೆ ಉಪದೇಶಮಾಡುತ್ತಿದ್ದರು.
ಅಪೊಸ್ತಲರ ಕೃತ್ಯಗ 15 : 2 (IRVKN)
ಅವರೊಂದಿಗೆ ಪೌಲ ಮತ್ತು ಬಾರ್ನಬರಿಗೆ ಚರ್ಚೆಯೂ ಮಹಾ ವಿವಾದವೂ ಉಂಟಾದಾಗ ಇದರ ವಿಷಯವಾಗಿ ಪೌಲ, ಬಾರ್ನಬರು ಮತ್ತು ತಮ್ಮಲ್ಲಿ ಬೇರೆ ಕೆಲವರು ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಸಭೆಯ ಹಿರಿಯರ ಬಳಿಗೆ ಹೋಗಬೇಕೆಂದು ಸಹೋದರರು ತೀರ್ಮಾನಿಸಿದರು.
ಅಪೊಸ್ತಲರ ಕೃತ್ಯಗ 15 : 3 (IRVKN)
ಆದುದರಿಂದ ಸಭೆಯವರು ಅವರನ್ನು ಸಾಗ ಕಳುಹಿಸಲು, ಅವರು ಫೊಯಿನಿಕೆ ಮತ್ತು ಸಮಾರ್ಯ ಸೀಮೆಗಳನ್ನು ಹಾದು ಹೋಗುತ್ತಿರುವಾಗ ಅನ್ಯಜನರು ಕರ್ತನ ಕಡೆಗೆ ತಿರುಗಿಕೊಂಡ ಸಂಗತಿಯನ್ನು ಅಲ್ಲಿದ್ದ ಸಹೋದರರಿಗೆ ವಿವರವಾಗಿ ಹೇಳಿ ಅವರೆಲ್ಲರನ್ನು ಬಹಳವಾಗಿ ಸಂತೋಷಪಡಿಸಿದರು.
ಅಪೊಸ್ತಲರ ಕೃತ್ಯಗ 15 : 4 (IRVKN)
ಅವರು ಯೆರೂಸಲೇಮಿಗೆ ಬಂದ ಮೇಲೆ ಸಭೆಯವರೂ ಅಪೊಸ್ತಲರೂ ಸಭೆಯ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ವಿವರಿಸಿದರು.
ಅಪೊಸ್ತಲರ ಕೃತ್ಯಗ 15 : 5 (IRVKN)
ಆದರೆ ಫರಿಸಾಯ ಮತದವರಲ್ಲಿ ಯೇಸುವನ್ನು ನಂಬಿದ್ದ ಕೆಲವರು ಎದ್ದು; “ದೇವರ ಕಡೆಗೆ ತಿರುಗಿಕೊಂಡಿರುವ ಅನ್ಯಜನರಿಗೆ ಸುನ್ನತಿಮಾಡಿಸಬೇಕು, ಮತ್ತು ಮೋಶೆಯ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುವುದಕ್ಕೆ ಅವರಿಗೆ ಅಪ್ಪಣೆಕೊಡಬೇಕು” ಎಂದು ಹೇಳಿದರು.
ಅಪೊಸ್ತಲರ ಕೃತ್ಯಗ 15 : 6 (IRVKN)
ಅಪೊಸ್ತಲರೂ ಸಭೆಯ ಹಿರಿಯರೂ ಈ ವಿಷಯವನ್ನು ಕುರಿತು ಆಲೋಚಿಸುವುದಕ್ಕೆ ಸೇರಿ ಬಂದಾಗ, ಅವರಲ್ಲಿ ಬಹು ವಿವಾದವು ನಡೆದ ಮೇಲೆ ಪೇತ್ರನು ಎದ್ದು ಅವರಿಗೆ;
ಅಪೊಸ್ತಲರ ಕೃತ್ಯಗ 15 : 7 (IRVKN)
“ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬಬೇಕೆಂದು ದೇವರು ಬಹಳ ದಿನಗಳ ಹಿಂದೆ ನಿಮ್ಮೊಳಗಿಂದ ನನ್ನನ್ನು ಆರಿಸಿಕೊಂಡದ್ದು ನಿಮಗೇ ತಿಳಿದಿದೆ.
ಅಪೊಸ್ತಲರ ಕೃತ್ಯಗ 15 : 8 (IRVKN)
ಮತ್ತು ಹೃದಯವನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮವರವನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಸಾಕ್ಷಿಕೊಟ್ಟನು.
ಅಪೊಸ್ತಲರ ಕೃತ್ಯಗ 15 : 9 (IRVKN)
ಇದಲ್ಲದೆ ಆತನು ನಮಗೂ, ಅವರಿಗೂ ಏನೂ ಭೇದಮಾಡದೆ ಅವರ ಹೃದಯಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.
ಅಪೊಸ್ತಲರ ಕೃತ್ಯಗ 15 : 10 (IRVKN)
ಹೀಗಿರುವುದರಿಂದ ನಮ್ಮ ಪೂರ್ವಿಕರಾಗಲಿ, ನಾವಾಗಲಿ ಹೊರಲಾಗದ ನೋಗವನ್ನು ನೀವು ಶಿಷ್ಯರ ಹೆಗಲಿನ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವುದು ಏಕೆ?
ಅಪೊಸ್ತಲರ ಕೃತ್ಯಗ 15 : 11 (IRVKN)
ಕರ್ತನಾದ ಯೇಸುವಿನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬುದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು” ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 15 : 12 (IRVKN)
ಗುಂಪುಸೇರಿದ್ದವರೆಲ್ಲರೂ ಈ ಮಾತುಗಳನ್ನು ಕೇಳಿ ಮೌನವಾಗಿದ್ದು ಬಾರ್ನಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕ ಕಾರ್ಯಗಳನ್ನೂ, ಅದ್ಭುತಕಾರ್ಯಗಳನ್ನೂ ವಿವರಿಸಿದ್ದನ್ನು ಕಿವಿಗೊಟ್ಟು ಕೇಳಿದರು.
ಅಪೊಸ್ತಲರ ಕೃತ್ಯಗ 15 : 13 (IRVKN)
ಅವರು ಮಾತನಾಡುವುದನ್ನು ಮುಗಿಸಿದ ಮೇಲೆ ಯಾಕೋಬನು ಆ ಸಂಗತಿಯನ್ನು ಕುರಿತು ಹೇಳಿದ್ದೇನಂದರೆ;
ಅಪೊಸ್ತಲರ ಕೃತ್ಯಗ 15 : 14 (IRVKN)
“ಸಹೋದರರೇ, ನಾನು ಹೇಳುವುದನ್ನು ಕೇಳಿರಿ. ದೇವರು ಮೊದಲು ಅನ್ಯಜನರನ್ನು ಕೃಪಾಕಟಾಕ್ಷದಿಂದ ನೋಡಿ ತನ್ನ ಹೆಸರಿಗಾಗಿ ಅವರೊಳಗಿನಿಂದ ಒಬ್ಬ ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.
ಅಪೊಸ್ತಲರ ಕೃತ್ಯಗ 15 : 15 (IRVKN)
ಇದಕ್ಕೆ ಪ್ರವಾದಿಗಳ ಮಾತುಗಳೂ ಒಪ್ಪುತ್ತವೆ. ಹೇಗೆಂದರೆ;
ಅಪೊಸ್ತಲರ ಕೃತ್ಯಗ 15 : 16 (IRVKN)
“ ‘ಇದಾದ ಮೇಲೆ ನಾನು ಹಿಂತಿರುಗಿ ಬಂದು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಪುನಃ ಕಟ್ಟುವೆನು. ಪಾಳು ಬಿದ್ದದ್ದನ್ನು ಜೀರ್ಣೋದ್ಧಾರಮಾಡಿ ಸುಭದ್ರವಾಗಿ ನಿಲ್ಲಿಸುವೆನು.
ಅಪೊಸ್ತಲರ ಕೃತ್ಯಗ 15 : 17 (IRVKN)
ಮನುಷ್ಯರಲ್ಲಿ ಉಳಿದ ಜನರು ಅಂದರೆ ದೇವಜನರೆನಿಸಿಕೊಳ್ಳುವ ಸಕಲ ಜನಾಂಗಗಳೂ ಕರ್ತನನ್ನು ಹುಡುಕುವರು ಎಂದು
ಅಪೊಸ್ತಲರ ಕೃತ್ಯಗ 15 : 18 (IRVKN)
ಅನಾದಿಕಾಲದಿಂದ ಈ ಕಾರ್ಯಗಳನ್ನು ತಿಳಿಯಪಡಿಸುವ ಕರ್ತನು ನುಡಿಯುತ್ತಾನೆ’ ಎಂದು ಬರೆದದೆ.
ಅಪೊಸ್ತಲರ ಕೃತ್ಯಗ 15 : 19 (IRVKN)
“ಹೀಗಿರಲಾಗಿ ನನ್ನ ಅಭಿಪ್ರಾಯ ಏನೆಂದರೆ; ಅನ್ಯಜನರಲ್ಲಿ ದೇವರ ಕಡೆಗೆ ತಿರುಗಿಕೊಳ್ಳುವವರನ್ನು ತೊಂದರೆಪಡಿಸಬಾರದು.
ಅಪೊಸ್ತಲರ ಕೃತ್ಯಗ 15 : 20 (IRVKN)
ಆದರೆ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ಹಾದರವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ರಕ್ತವನ್ನೂ ವಿರ್ಜಿಸಬೇಕೆಂದು ನಾವು ಅವರಿಗೆ ಪತ್ರವನ್ನು ಬರೆಯೋಣ ಎಂದು ತೀರ್ಮಾನಿಸಿದರು.
ಅಪೊಸ್ತಲರ ಕೃತ್ಯಗ 15 : 21 (IRVKN)
ಏಕೆಂದರೆ ಪುರಾತನಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಧರ್ಮಶಾಸ್ತ್ರವನ್ನು ಬೋಧಿಸುವವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ” ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 15 : 22 (IRVKN)
ಆಗ ಅಪೊಸ್ತಲರೂ, ಸಭೆಯ ಹಿರಿಯರೂ ಸರ್ವಸಭೆಯ ಅನುಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಮತ್ತು ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವುದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೆನಿಸಿಕೊಳ್ಳುವ ಯೂದನನ್ನೂ, ಸೀಲನನ್ನೂ ಆರಿಸಿಕೊಂಡು,
ಅಪೊಸ್ತಲರ ಕೃತ್ಯಗ 15 : 23 (IRVKN)
ಅವರ ಕೈಯಲ್ಲಿ ಬರೆದುಕೊಟ್ಟದ್ದೇನಂದರೆ; “ಸಹೋದರರೂ, ಅಪೊಸ್ತಲರೂ ಮತ್ತು ಹಿರಿಯರೂ, ಅಂತಿಯೋಕ್ಯ, ಸಿರಿಯ, ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೂ ಮಾಡುವ ವಂದನೆ;
ಅಪೊಸ್ತಲರ ಕೃತ್ಯಗ 15 : 24 (IRVKN)
“ನಮ್ಮೊಳಗಿಂದ ಹೊರಟು ಕೆಲವರು ನಮ್ಮಿಂದ ಯಾವ ಅಪ್ಪಣೆಯನ್ನು ಹೊಂದದೆ ತಮ್ಮ ಮಾತುಗಳಿಂದ ನಿಮ್ಮಲ್ಲಿ ಅಸಮಾಧಾನವನ್ನು ಹುಟ್ಟಿಸಿ ನಿಮ್ಮ ಮನಸ್ಸುಗಳನ್ನು ಕಳವಳಗೊಳಿಸಿದ್ದಾರೆಂಬುದನ್ನು ಕೇಳಿದ್ದರಿಂದ,
ಅಪೊಸ್ತಲರ ಕೃತ್ಯಗ 15 : 25 (IRVKN)
ನಾವು ಕೆಲವರನ್ನು ಆರಿಸಿಕೊಂಡು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತ ಜೀವದ ಹಂಗನ್ನು ತೊರೆದವರಾದ,
ಅಪೊಸ್ತಲರ ಕೃತ್ಯಗ 15 : 26 (IRVKN)
ನಮ್ಮ ಪ್ರಿಯ ಬಾರ್ನಬ ಪೌಲರ ಜೊತೆಯಲ್ಲಿ ನಿಮ್ಮ ಬಳಿಗೆ ಕಳುಹಿಸಿ ಕೊಡುವುದು ಯುಕ್ತವೆಂದು ನಾವೆಲ್ಲರೂ ಒಮ್ಮನಸ್ಸಿನಿಂದ ತೀರ್ಮಾನಿಸಿದೆವು.
ಅಪೊಸ್ತಲರ ಕೃತ್ಯಗ 15 : 27 (IRVKN)
ಆದುದರಿಂದ ಯೂದನನ್ನೂ, ಸೀಲನನ್ನೂ ಕಳುಹಿಸಿಕೊಡುತ್ತಿದ್ದೇವೆ. ಅವರು ನಾವು ಬರೆದಿರುವ ಈ ಸಂಗತಿಗಳನ್ನು ಬಾಯಿಮಾತಿನಿಂದಲೂ ನಿಮಗೆ ತಿಳಿಸುವರು.
ಅಪೊಸ್ತಲರ ಕೃತ್ಯಗ 15 : 28 (IRVKN)
ಅವು ಯಾವುವೆಂದರೆ, ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ರಕ್ತವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ಅನೈತಿಕತೆಯನ್ನೂ ವಿಸರ್ಜಿಸುವುದು ಅಗತ್ಯವಾಗಿದೆ.
ಅಪೊಸ್ತಲರ ಕೃತ್ಯಗ 15 : 29 (IRVKN)
ಇದಕ್ಕಿಂತ ಹೆಚ್ಚಿನ ಹೊರೆಯನ್ನು ನಿಮ್ಮ ಮೇಲೆ ಹೊರಿಸಬಾರದೆಂದು ಪವಿತ್ರಾತ್ಮನಿಗೂ ನಮಗೂ ಹಿತವಾಗಿ ತೋರಿತು; ನೀವು ಎಚ್ಚರವಾಗಿದ್ದು ಇವುಗಳ ಗೊಡವೆಗೆ ಹೋಗದಿದ್ದರೆ ನಿಮಗೆ ಒಳ್ಳೆಯದಾಗುವುದು. ಶುಭವಾಗಲಿ.”
ಅಪೊಸ್ತಲರ ಕೃತ್ಯಗ 15 : 30 (IRVKN)
ಹೀಗೆ ಅವರು ಅಪ್ಪಣೆ ತೆಗೆದುಕೊಂಡು ಅಂತಿಯೋಕ್ಯಕ್ಕೆ ಬಂದು ಸಭೆಯನ್ನು ಸೇರಿಸಿ ಆ ಪತ್ರವನ್ನು ಅವರಿಗೆ ಒಪ್ಪಿಸಿದರು.
ಅಪೊಸ್ತಲರ ಕೃತ್ಯಗ 15 : 31 (IRVKN)
ಅವರು ಓದಿ ಅದರಿಂದ ಧೈರ್ಯ ತಂದುಕೊಂಡು ಸಂತೋಷಪಟ್ಟರು.
ಅಪೊಸ್ತಲರ ಕೃತ್ಯಗ 15 : 32 (IRVKN)
ಯೂದನೂ, ಸೀಲನೂ ತಾವೇ ಪ್ರವಾದಿಗಳಾಗಿದ್ದುದರಿಂದ ಸಹೋದರರನ್ನು ಅನೇಕ ಮಾತುಗಳಿಂದ ಉತ್ತೇಜಿಸಿ ದೃಢಪಡಿಸಿದರು.
ಅಪೊಸ್ತಲರ ಕೃತ್ಯಗ 15 : 33 (IRVKN)
ಅಲ್ಲಿ ಕೆಲವು ಕಾಲ ಕಳೆದ ನಂತರ ತಮ್ಮನ್ನು ಕಳುಹಿಸಿದವರ ಬಳಿಗೆ ಪುನಃ ಹೋಗುವುದಕ್ಕೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡರು.
ಅಪೊಸ್ತಲರ ಕೃತ್ಯಗ 15 : 34 (IRVKN)
ಆದರೆ ಸೀಲನಿಗೆ ಅಲ್ಲೇ ಇರುವುದು ಒಳ್ಳೆಯದೆಂದು ತೋಚಿತು.
ಅಪೊಸ್ತಲರ ಕೃತ್ಯಗ 15 : 35 (IRVKN)
ಆದರೆ ಪೌಲನೂ ಮತ್ತು ಬಾರ್ನಬನೂ ಅಂತಿಯೋಕ್ಯದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಉಪದೇಶಮಾಡುತ್ತಾ ಕರ್ತನ ವಾಕ್ಯವೆಂಬ ಸುವಾರ್ತೆಯನ್ನು ಸಾರುತ್ತಾ ಇದ್ದರು.
ಅಪೊಸ್ತಲರ ಕೃತ್ಯಗ 15 : 36 (IRVKN)
ಸುವಾರ್ತೆಯನ್ನು ಸಾರುವುದಕ್ಕೆ ಪೌಲನು ಮಾಡಿದ ಎರಡನೆಯ ಪ್ರಯಾಣ (15:36, 18:22) ಕೆಲವು ದಿನಗಳಾದ ಮೇಲೆ ಪೌಲನು ಬಾರ್ನಬನಿಗೆ; “ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಊರುಗಳಿಗೆ ಪುನಃ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ” ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 15 : 37 (IRVKN)
ಅದಕ್ಕೆ ಬಾರ್ನಬನು ಮಾರ್ಕನೆನಿಸಿಕೊಳ್ಳುವ ಯೋಹಾನನನ್ನು
ಅಪೊಸ್ತಲರ ಕೃತ್ಯಗ 15 : 38 (IRVKN)
ತಮ್ಮ ಸಂಗಡ ಕರೆದುಕೊಂಡುಹೋಗಬೇಕೆಂದಿದ್ದಾಗ ಪೌಲನು; ನಮ್ಮೊಂದಿಗೆ ಸೇವೆಗೆ ಬಾರದೆ ಪಂಫುಲ್ಯದಲ್ಲಿ ನಮ್ಮನ್ನು ಬಿಟ್ಟುಬಿಟ್ಟವನನ್ನು ಕರೆದುಕೊಂಡು ಹೋಗುವುದು ಸರಿಯಲ್ಲವೆಂದು ನೆನಸಿದನು.
ಅಪೊಸ್ತಲರ ಕೃತ್ಯಗ 15 : 39 (IRVKN)
ಈ ವಿಷಯದಲ್ಲಿ ತೀವ್ರವಾದ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿದರು. ಬಾರ್ನಬನು ಮಾರ್ಕನನ್ನು ಕರೆದುಕೊಂಡು ಸಮುದ್ರ ಮಾರ್ಗವಾಗಿ ಕುಪ್ರದ್ವೀಪಕ್ಕೆ ಹೋದನು.
ಅಪೊಸ್ತಲರ ಕೃತ್ಯಗ 15 : 40 (IRVKN)
ಪೌಲನು ಸೀಲನನ್ನು ಆರಿಸಿಕೊಂಡು ಸಹೋದರರಿಂದ ಕರ್ತನ ಕೃಪಾಶ್ರಯಕ್ಕೆ ಒಪ್ಪಿಸಲ್ಪಟ್ಟವನಾಗಿ ಅಲ್ಲಿಂದ
ಅಪೊಸ್ತಲರ ಕೃತ್ಯಗ 15 : 41 (IRVKN)
ಹೊರಟು ಸಿರಿಯ ಮತ್ತು ಕಿಲಿಕ್ಯ ಸೀಮೆಗಳಲ್ಲಿ ಸಂಚರಿಸುತ್ತಾ ಸಭೆಗಳನ್ನು ದೃಢಪಡಿಸಿದನು.
❮
❯