ಅಪೊಸ್ತಲರ ಕೃತ್ಯಗ 17 : 1 (IRVKN)
ಥೆಸಲೋನಿಕ ಪಟ್ಟಣದಲ್ಲಿ ಪೌಲನ ಸೇವೆ ಪೌಲ ಮತ್ತು ಸೀಲರು ಮುಂದೆ ಪ್ರಯಾಣಮಾಡಿ ಅಂಫಿಫೊಲಿ ಮತ್ತು ಅಪೊಲೋನ್ಯ ಎಂಬ ಪಟ್ಟಣಗಳನ್ನು ದಾಟಿ ಥೆಸಲೋನಿಕಕ್ಕೆ ಬಂದರು. ಅಲ್ಲಿ ಯೆಹೂದ್ಯರ ಒಂದು ಸಭಾಮಂದಿರವಿತ್ತು.
ಅಪೊಸ್ತಲರ ಕೃತ್ಯಗ 17 : 2 (IRVKN)
ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ದೇವರ ವಾಕ್ಯದಿಂದ ಅವರ ಸಂಗಡ ವಾದಿಸಿ,
ಅಪೊಸ್ತಲರ ಕೃತ್ಯಗ 17 : 3 (IRVKN)
ಆಯಾ ವಾಕ್ಯಗಳ ಅರ್ಥವನ್ನು ವಿವರಿಸಿ; ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತು, ಎದ್ದು ಬರುವುದು ಅಗತ್ಯವೆಂತಲೂ “ನಾನು ನಿಮಗೆ ಪ್ರಸಿದ್ಧಿಪಡಿಸುವ ಯೇಸುವೇ ಆ ಕ್ರಿಸ್ತನೆಂತಲೂ” ಸ್ಥಿರಪಡಿಸಿದನು.
ಅಪೊಸ್ತಲರ ಕೃತ್ಯಗ 17 : 4 (IRVKN)
ಅವರಲ್ಲಿ ಕೆಲವರೂ ದೈವಭಕ್ತರಾದ ಗ್ರೀಕರ ದೊಡ್ಡ ಗುಂಪು ಮತ್ತು ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ಒಡಂಬಟ್ಟು ಪೌಲ ಮತ್ತು ಸೀಲರನ್ನು ಸೇರಿಕೊಂಡರು.
ಅಪೊಸ್ತಲರ ಕೃತ್ಯಗ 17 : 5 (IRVKN)
ನಂಬದಿರುವ ಯೆಹೂದ್ಯರು ಹೊಟ್ಟೆಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪುಂಡರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಮತ್ತು ಸೀಲರನ್ನು ಪಟ್ಟಣದ ಸಭೆ ಎದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯನ್ನು ಮುತ್ತಿದರು.
ಅಪೊಸ್ತಲರ ಕೃತ್ಯಗ 17 : 6 (IRVKN)
ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಮತ್ತು ಕೆಲವು ಮಂದಿ ಸಹೋದರರನ್ನೂ ಊರಿನ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋಗಿ; “ಲೋಕವನ್ನು ಅಲ್ಲಕಲ್ಲೋಲ ಮಾಡಿದ ಆ ಮನುಷ್ಯರು ಇಲ್ಲಿಗೂ ಬಂದಿದ್ದಾರೆ.
ಅಪೊಸ್ತಲರ ಕೃತ್ಯಗ 17 : 7 (IRVKN)
ಯಾಸೋನನು ಅವರನ್ನು ಸೇರಿಸಿಕೊಂಡಿದ್ದಾನೆ, ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಚಕ್ರವರ್ತಿಯ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ” ಎಂದು ಕೂಗಿದರು.
ಅಪೊಸ್ತಲರ ಕೃತ್ಯಗ 17 : 8 (IRVKN)
ಪಟ್ಟಣದವರು ಮತ್ತು ಪಟ್ಟಣದ ಅಧಿಕಾರಿಗಳು ಈ ಮಾತುಗಳನ್ನು ಕೇಳಿ ಕಳವಳಪಟ್ಟು
ಅಪೊಸ್ತಲರ ಕೃತ್ಯಗ 17 : 9 (IRVKN)
ಯಾಸೋನ ಮೊದಲಾದವರಿಂದ ಜಾಮೀನು ತೆಗೆದುಕೊಂಡು ತರುವಾಯ ಅವರನ್ನು ಬಿಟ್ಟುಬಿಟ್ಟರು.
ಅಪೊಸ್ತಲರ ಕೃತ್ಯಗ 17 : 10 (IRVKN)
ಬೆರೋಯ ಪಟ್ಟಣದಲ್ಲಿ ಪೌಲನ ಸೇವೆ ಆ ಸಹೋದರರು ರಾತ್ರಿಯಲ್ಲಿ ಪೌಲ ಮತ್ತು ಸೀಲರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು. ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.
ಅಪೊಸ್ತಲರ ಕೃತ್ಯಗ 17 : 11 (IRVKN)
ಆ ಸಭೆಯವರು ದೇವರ ವಾಕ್ಯವನ್ನು ಸಿದ್ಧ ಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಅಲ್ಲವೋ ಎಂದು ಕಂಡುಕೊಳ್ಳಲು ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದದರಿಂದ ಅವರು ಥೆಸಲೋನಿಕದವರಿಗಿಂತ ಸದ್ಗುಣವುಳವರಾಗಿದ್ದರು.
ಅಪೊಸ್ತಲರ ಕೃತ್ಯಗ 17 : 12 (IRVKN)
ಹೀಗಿರಲಾಗಿ ಅವರಲ್ಲಿ ಕುಲೀನರಾದ ಅನೇಕ ಗ್ರೀಕ್ ಹೆಂಗಸರು, ಗಂಡಸರು ನಂಬಿದರು.
ಅಪೊಸ್ತಲರ ಕೃತ್ಯಗ 17 : 13 (IRVKN)
ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಪ್ರಸಿದ್ಧಪಡಿಸುತ್ತಾನೆಂಬ ವರ್ತಮಾನವು ಥೆಸಲೋನಿಕದ ಯೆಹೂದ್ಯರಿಗೆ ತಿಳಿದು ಬಂದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ಪ್ರಚೋದಿಸಿ ಕದಡಿದರು.
ಅಪೊಸ್ತಲರ ಕೃತ್ಯಗ 17 : 14 (IRVKN)
ಕೂಡಲೇ ಸಹೋದರರು ಪೌಲನನ್ನು ಸಮುದ್ರದ ತನಕ ಹೋಗುವುದಕ್ಕೆ ಕಳುಹಿಸಿಕೊಟ್ಟರು. ಆದರೆ ಸೀಲನೂ, ತಿಮೊಥೆಯನೂ ಅಲ್ಲೇ ನಿಂತರು.
ಅಪೊಸ್ತಲರ ಕೃತ್ಯಗ 17 : 15 (IRVKN)
ಪೌಲನನ್ನು ಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡು ಹೋದರು, ಸೀಲನನ್ನೂ, ತಿಮೊಥೆಯನನ್ನೂ ಭೇಟಿಯಾದ ಕೂಡಲೆ ಬೇಗ ತನ್ನ ಬಳಿಗೆ ಬರಬೇಕೆಂಬ ಅಪ್ಪಣೆಯನ್ನು ಪೌಲನಿಂದ ಹೊಂದಿ ಹೊರಟುಬಂದರು.
ಅಪೊಸ್ತಲರ ಕೃತ್ಯಗ 17 : 16 (IRVKN)
ಅಥೇನೆ ಪಟ್ಟಣದಲ್ಲಿ ಪೌಲನ ಸೇವೆ ಪೌಲನು ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣದಲ್ಲಿ ಎಲ್ಲೆಲ್ಲಿಯೂ ವಿಗ್ರಹಗಳೇ ಇರುವುದನ್ನು ನೋಡಿ ಅವನ ಆತ್ಮವು ಕುದಿಯಿತು.
ಅಪೊಸ್ತಲರ ಕೃತ್ಯಗ 17 : 17 (IRVKN)
ಆದುದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರ ಮತ್ತು ಯೆಹೂದ್ಯ ಮತಾವಲಂಬಿಗಳೊಂದಿಗೆ ಮತ್ತು ಪ್ರತಿದಿನ ಪೇಟೆಯಲ್ಲಿ ಕಂಡುಬಂದವರ ಸಂಗಡಲೂ ಚರ್ಚಿಸಿದನು.
ಅಪೊಸ್ತಲರ ಕೃತ್ಯಗ 17 : 18 (IRVKN)
ಇದಲ್ಲದೆ ಎಪಿಕೂರಿಯನ್ನರು, ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು; “ಈ ವಾಚಾಳಿ ಏನು ಹೇಳ ಬೇಕೆಂದಿದ್ದಾನೆ?” ಅಂದರು. ಅವನು ಯೇಸುವಿನ ವಿಷಯವಾಗಿ ಮತ್ತು ಸತ್ತವರು ಎದ್ದು ಬರುವರೆಂಬುದರ ಕುರಿತು ಸಾರುತ್ತಿದ್ದುದರಿಂದ; “ಇವನು ಅನ್ಯದೇಶದ ದೇವರುಗಳನ್ನು ಪ್ರಚಾರಮಾಡುವವನಾಗಿ ಕಂಡುಬರುತ್ತಾನೆಂದು” ಬೇರೆ ಕೆಲವರು ಹೇಳಿದರು.
ಅಪೊಸ್ತಲರ ಕೃತ್ಯಗ 17 : 19 (IRVKN)
ಅವರು ಅವನನ್ನು ಹಿಡಿದು ಅರಿಯೊಪಾಗಕ್ಕೆ* ಅಂದರೆ, ಹಿರೀಸಭೆಯು ಕೂಡುವ ಸ್ಥಳಕ್ಕೆ. ಕರೆದುಕೊಂಡು ಹೋಗಿ; “ನೀನು ಹೇಳುವ ಈ ಹೊಸ ಉಪದೇಶವನ್ನು ನಾವು ತಿಳಿದುಕೊಳ್ಳಬಹುದೇ?
ಅಪೊಸ್ತಲರ ಕೃತ್ಯಗ 17 : 20 (IRVKN)
ಅಪೂರ್ವವಾದ ಸಂಗತಿಗಳನ್ನು ನಮಗೆ ತಿಳಿಸುತ್ತಿದ್ದೀಯಲ್ಲಾ; ಆದಕಾರಣ ಅದೇನು ಎಂಬುದರ ಕುರಿತು ತಿಳಿಯಬೇಕೆಂದು ನಮಗೆ ಅಪೇಕ್ಷೆಯಿದೆ” ಅಂದರು.
ಅಪೊಸ್ತಲರ ಕೃತ್ಯಗ 17 : 21 (IRVKN)
ಅಥೇನೆಯರೂ ಅಲ್ಲಿ ವಾಸವಾಗಿದ್ದ ಪರಸ್ಥಳದವರೂ ಹೊಸ ಹೊಸ ಸಂಗತಿಗಳನ್ನು ಹೇಳುವುದನ್ನೂ, ಕೇಳುವುದನ್ನೂ ಬಿಟ್ಟು, ಬೇರೆ ಯಾವುದಕ್ಕೂ ಸಮಯ ಕೊಡುತ್ತಿರಲಿಲ್ಲ.
ಅಪೊಸ್ತಲರ ಕೃತ್ಯಗ 17 : 22 (IRVKN)
ಪೌಲನು ಅರಿಯೊಪಾಗದ ಮಧ್ಯದಲ್ಲಿ ನಿಂತುಕೊಂಡು ಹೇಳಿದ್ದೇನಂದರೆ; “ಅಥೇನೆಯ ಜನರೇ, ನೀವು ಎಲ್ಲಾದರಲ್ಲಿಯೂ ಅತಿ ದೈವಭಕ್ತಿವಂತರೆಂದು ನನಗೆ ತೋರುತ್ತಿದೆ.
ಅಪೊಸ್ತಲರ ಕೃತ್ಯಗ 17 : 23 (IRVKN)
ನಾನು ನಿಮ್ಮ ಪಟ್ಟಣದಲ್ಲಿ ತಿರುಗಾಡುತ್ತಾ ನೀವು ಪೂಜಿಸುವ ದೇವತಾ ಪ್ರತಿಮೆಗಳನ್ನು ಚೆನ್ನಾಗಿ ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ ‘ತಿಳಿಯದ ದೇವರಿಗೆ’ ಎಂದು ಬರೆದಿತ್ತು; ಆದಕಾರಣ ನೀವು ಯಾವುದನ್ನು ತಿಳಿಯದೆ ಪೂಜಿಸುತ್ತಿದ್ದೀರೋ ಅದನ್ನೇ ನಿಮಗೆ ತಿಳಿಯಪಡಿಸುತ್ತೇನೆ, ಕೇಳಿರಿ ಅಂದನು.
ಅಪೊಸ್ತಲರ ಕೃತ್ಯಗ 17 : 24 (IRVKN)
“ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ, ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯನಾಗಿರುವುದರಿಂದ ಆತನು ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವವನಲ್ಲ;
ಅಪೊಸ್ತಲರ ಕೃತ್ಯಗ 17 : 25 (IRVKN)
ತಾನೇ ಎಲ್ಲರಿಗೂ ಜೀವಶ್ವಾಸ ಹಾಗೂ ಜೀವಿಸುವುದಕ್ಕೆ ಬೇಕಾದದ್ದೆಲ್ಲವನ್ನೂ ಕೊಡುವವನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಸೇವೆಹೊಂದುವವನೂ ಅಲ್ಲ.
ಅಪೊಸ್ತಲರ ಕೃತ್ಯಗ 17 : 26 (IRVKN)
ದೇವರು ಒಬ್ಬ ಮನುಷ್ಯನಿಂದ ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ, ಅವರವರು ಇರತಕ್ಕ ಕಾಲಗಳನ್ನೂ ಹಾಗು ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ಅವರನ್ನು ಇರಿಸಿ,
ಅಪೊಸ್ತಲರ ಕೃತ್ಯಗ 17 : 27 (IRVKN)
ಒಂದು ವೇಳೆ ಅವರು ತಡವಾಗಿಯಾದರೂ ತನ್ನನ್ನು ಕಂಡುಕೊಂಡಾರೇನೋ ಎಂದು ತನ್ನನ್ನು ಹುಡುಕುವವರನ್ನಾಗಿ ಮಾಡಿದನು. ಆತನು ನಮ್ಮಲ್ಲಿ ಒಬ್ಬನಿಗೂ ದೂರವಾದವನಲ್ಲ.
ಅಪೊಸ್ತಲರ ಕೃತ್ಯಗ 17 : 28 (IRVKN)
ಏಕೆಂದರೆ ಆತನಲ್ಲಿಯೇ ನಾವು ಜೀವಿಸುತ್ತೇವೆ, ಚಲಿಸುತ್ತೇವೆ ಮತ್ತು ಇರುತ್ತೇವೆ. ನಿಮ್ಮ ಕವಿಗಳಲ್ಲಿ ಕೆಲವರು, ‘ನಾವು ಆತನ ಸಂತಾನದವರೇ’ ಎಂದು ಹೇಳಿದ್ದಾರೆ.
ಅಪೊಸ್ತಲರ ಕೃತ್ಯಗ 17 : 29 (IRVKN)
“ನಾವು ದೇವರ ಸಂತಾನದವರಾದ ಮೇಲೆ ದೇವರು ಮನುಷ್ಯನ ಶಿಲ್ಪವಿದ್ಯೆಯಿಂದಲೂ, ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ, ಬೆಳ್ಳಿ ಮತ್ತು ಕಲ್ಲುಗಳಿಗೆ ಸಮಾನವೆಂದು ನಾವು ಭಾವಿಸಬಾರದು.
ಅಪೊಸ್ತಲರ ಕೃತ್ಯಗ 17 : 30 (IRVKN)
ಆ ಆಜ್ಞಾನದ ಕಾಲಗಳನ್ನು ದೇವರು ಗಣನೆಗೆ ತೆಗೆದುಕೊಳ್ಳಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ಪಶ್ಚಾತ್ತಾಪಪಟ್ಟು ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಿದ್ದಾನೆ.
ಅಪೊಸ್ತಲರ ಕೃತ್ಯಗ 17 : 31 (IRVKN)
ಏಕೆಂದರೆ, ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವುದಕ್ಕೆ ಒಂದು ದಿನವನ್ನು ಗೊತ್ತು ಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವುದಕ್ಕೆ ಎಲ್ಲರಿಗೂ ದೃಷ್ಟಾಂತವನ್ನು ಕೊಟ್ಟಿದ್ದಾನೆ” ಅಂದನು.
ಅಪೊಸ್ತಲರ ಕೃತ್ಯಗ 17 : 32 (IRVKN)
ಸತ್ತವರು ಎದ್ದುಬರುವ ವಿಷಯವನ್ನು ಕೇಳಿದಾಗ ಕೆಲವರು ಪೌಲನನ್ನು ಅಪಹಾಸ್ಯಮಾಡಿದರು, ಬೇರೆ ಕೆಲವರು; “ನೀನು ಈ ವಿಷಯದಲ್ಲಿ ಹೇಳುವುದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ” ಅಂದರು.
ಅಪೊಸ್ತಲರ ಕೃತ್ಯಗ 17 : 33 (IRVKN)
ಹೀಗಿರಲು ಪೌಲನು ಅವರ ಮಧ್ಯದಿಂದ ಹೊರಟುಹೋದನು.
ಅಪೊಸ್ತಲರ ಕೃತ್ಯಗ 17 : 34 (IRVKN)
ಕೆಲವರು ಅವನನ್ನು ಸೇರಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊಪಾಗದ ಸಭೆಯವನಾದ ದಿಯೊನುಸ್ಯನೂ, ದಾಮರಿಯೆಂಬಾಕೆಯೂ ಹಾಗು ಇನ್ನೂ ಕೆಲವರೂ ಇದ್ದರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34