ಅಪೊಸ್ತಲರ ಕೃತ್ಯಗ 18 : 1 (IRVKN)
{ಕೊರಿಂಥದಲ್ಲಿ ಪೌಲನ ಸೇವೆ} [PS] ಇದಾದ ಮೇಲೆ ಪೌಲನು ಅಥೇನೆಯನ್ನು ಬಿಟ್ಟು ಕೊರಿಂಥಕ್ಕೆ ಹೋದನು.
ಅಪೊಸ್ತಲರ ಕೃತ್ಯಗ 18 : 2 (IRVKN)
ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯನನ್ನು ಅಲ್ಲಿ ಕಂಡನು. ಯೆಹೂದ್ಯರೆಲ್ಲರೂ ರೋಮಾಪುರವನ್ನು ಬಿಟ್ಟುಹೋಗಬೇಕೆಂದು ಕ್ಲೌದಿಯ ಚಕ್ರವರ್ತಿಯು ಆಜ್ಞೆ ವಿಧಿಸಿದ ಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿನಗಳ ಮೊದಲೇ ಇತಾಲ್ಯ ದೇಶದಿಂದ ಅಲ್ಲಿಗೆ ಬಂದಿದ್ದರು.
ಅಪೊಸ್ತಲರ ಕೃತ್ಯಗ 18 : 3 (IRVKN)
ಪೌಲನು ಅವರ ಮನೆಗೆ ಹೋಗಿ ತಾನೂ, ಅವರೂ ಒಂದೇ ಕಸುಬಿನವರಾಗಿದ್ದುದರಿಂದ ಅವರ ಸಂಗಡವಿದ್ದು ಅವರೊಂದಿಗೆ ಕೆಲಸಮಾಡುತ್ತಿದ್ದನು; ಗುಡಾರಮಾಡುವುದು ಅವರ ಕಸುಬಾಗಿತ್ತು.
ಅಪೊಸ್ತಲರ ಕೃತ್ಯಗ 18 : 4 (IRVKN)
ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು. [PE][PS]
ಅಪೊಸ್ತಲರ ಕೃತ್ಯಗ 18 : 5 (IRVKN)
ಸೀಲನೂ ಮತ್ತು ತಿಮೊಥೆಯನೂ ಮಕೆದೋನ್ಯದಿಂದ ಬಂದಾಗ ಪೌಲನು ದೇವರ ವಾಕ್ಯವನ್ನು ಬೋಧಿಸುವುದರಲ್ಲಿ ಅತ್ಯಾಸಕ್ತಿಯುಳ್ಳವನಾಗಿ ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಖಚಿತವಾಗಿ ಸಾಕ್ಷಿಹೇಳಿದನು.
ಅಪೊಸ್ತಲರ ಕೃತ್ಯಗ 18 : 6 (IRVKN)
ಅವರು ಎದುರಿಸಿ, ದೂಷಿಸಲಾಗಿ ಅವನು ತನ್ನ ವಸ್ತ್ರಗಳನ್ನು ಝಾಡಿಸಿ ಅವರಿಗೆ; “ನಿಮ್ಮ ನಾಶನಕ್ಕೆ ನೀವೇ ಹೊಣೆ. ನಾನು ಶುದ್ಧನು. ನಾನು ಇಂದಿನಿಂದ ಅನ್ಯಜನರ ಬಳಿಗೆ ಹೋಗುತ್ತೇನೆ” ಎಂದು ಹೇಳಿ,
ಅಪೊಸ್ತಲರ ಕೃತ್ಯಗ 18 : 7 (IRVKN)
ಆ ಸ್ಥಳವನ್ನು ಬಿಟ್ಟು ದೇವರಿಗೆ ಭಯಪಡುವವನಾಗಿದ್ದ ತೀತ ಯುಸ್ತನೆಂಬುವನ ಮನೆಗೆ ಹೋದನು. ಅವನ ಮನೆಯು ಸಭಾಮಂದಿರದ ಬದಿಯಲ್ಲಿ ಇತ್ತು.
ಅಪೊಸ್ತಲರ ಕೃತ್ಯಗ 18 : 8 (IRVKN)
ಸಭಾಮಂದಿರದ ಅಧ್ಯಕ್ಷನಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಮತ್ತು ಕೊರಿಂಥದವರಲ್ಲಿ ಅನೇಕ ಜನರು ಪೌಲನ ಬೋಧನೆಯನ್ನು ಕೇಳಿ ವಿಶ್ವಾಸವಿಟ್ಟು ದೀಕ್ಷಾಸ್ನಾನ ಮಾಡಿಸಿಕೊಂಡರು.
ಅಪೊಸ್ತಲರ ಕೃತ್ಯಗ 18 : 9 (IRVKN)
ಇದಲ್ಲದೆ ಕರ್ತನು ರಾತ್ರಿ ಪೌಲನಿಗೆ ದರ್ಶನ ಕೊಟ್ಟು; “ನೀನು ಹೆದರಬೇಡ; ಆದರೆ ಸುಮ್ಮನಿರದೆ ಸುವಾರ್ತೆಯನ್ನು ಸಾರುತ್ತಲೇ ಇರು,
ಅಪೊಸ್ತಲರ ಕೃತ್ಯಗ 18 : 10 (IRVKN)
ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನಗೆ ಕೇಡು ಮಾಡುವುದಿಲ್ಲ; ಈ ಪಟ್ಟಣದಲ್ಲಿ ನನಗೆ ಬಹಳ ಮಂದಿ ಇದ್ದಾರೆ” ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 18 : 11 (IRVKN)
ಅವನು ಒಂದು ವರ್ಷ ಆರು ತಿಂಗಳು ಅಲ್ಲೇ ಇದ್ದುಕೊಂಡು ಆ ಜನರಿಗೆ ದೇವರ ವಾಕ್ಯವನ್ನು ಉಪದೇಶಮಾಡುತ್ತಿದ್ದನು. [PE][PS]
ಅಪೊಸ್ತಲರ ಕೃತ್ಯಗ 18 : 12 (IRVKN)
ಗಲ್ಲಿಯೋನನು ಅಖಾಯ ಪ್ರಾಂತ್ಯಕ್ಕೆ ಅಧಿಪತಿಯಾಗಿರಲು ಯೆಹೂದ್ಯರು ಒಗ್ಗಟ್ಟಾಗಿ ಪೌಲನ ಮೇಲೆ ಬಿದ್ದು ಅವನನ್ನು ನ್ಯಾಯಾಸ್ಥಾನದ ಮುಂದೆ ಹಿಡಿದು ತಂದು;
ಅಪೊಸ್ತಲರ ಕೃತ್ಯಗ 18 : 13 (IRVKN)
“ಇವನು ದೇವರನ್ನು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿ ಆರಾಧಿಸುವುದಕ್ಕೆ ಜನರನ್ನು ಒಡಂಬಡಿಸುತ್ತಾನೆಂದು” ದೂರುಹೇಳಿದರು.
ಅಪೊಸ್ತಲರ ಕೃತ್ಯಗ 18 : 14 (IRVKN)
ಪೌಲನು ಪ್ರತಿವಾದ ಮಾಡಬೇಕೆಂದಿದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ; “ಎಲೈ ಯೆಹೂದ್ಯರೇ, ಅನ್ಯಾಯವು, ದುಷ್ಕರ್ಮವು ಇಂಥದೇನಾದರೂ ಇದ್ದಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನೆಯಿಂದ ಕೇಳುವುದು ನ್ಯಾಯವೇ.
ಅಪೊಸ್ತಲರ ಕೃತ್ಯಗ 18 : 15 (IRVKN)
ಆದರೆ ನೀವು ಮಾಡುವ ವಿವಾದವು ಬೋಧನೆಯನ್ನೂ, ಹೆಸರುಗಳನ್ನೂ, ನಿಮ್ಮ ಧರ್ಮಶಾಸ್ತ್ರವನ್ನೂ ಕುರಿತದ್ದಾಗಿರುವುದರಿಂದ ಅವುಗಳನ್ನು ನೀವೇ ನೋಡಿಕೊಳ್ಳಿರಿ. ಇಂಥ ವಿಷಯಗಳನ್ನು ವಿಚಾರಣೆಮಾಡುವುದಕ್ಕೆ ನನಗಂತೂ ಮನಸ್ಸಿಲ್ಲ” ಎಂದು ಹೇಳಿ,
ಅಪೊಸ್ತಲರ ಕೃತ್ಯಗ 18 : 16 (IRVKN)
ಅವರನ್ನು ನ್ಯಾಯಾಸ್ಥಾನದ ಸ್ಥಳದಿಂದ ಹೊರಡಿಸಿಬಿಟ್ಟನು.
ಅಪೊಸ್ತಲರ ಕೃತ್ಯಗ 18 : 17 (IRVKN)
ಆಗ ಜನರೆಲ್ಲರು ಸಭಾಮಂದಿರದ ಅಧ್ಯಕ್ಷನಾದ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋನನು ಅವುಗಳಲ್ಲಿ ಒಂದನ್ನೂ ಲಕ್ಷ್ಯಕ್ಕೆ ತೆಗೆದುಕೊಳ್ಳಲಿಲ್ಲ. [PE][PS]
ಅಪೊಸ್ತಲರ ಕೃತ್ಯಗ 18 : 18 (IRVKN)
ಪೌಲನು ಇನ್ನು ಅನೇಕ ದಿನಗಳ ಕಾಲ ಅಲ್ಲಿದ್ದ ಅನಂತರ ಸಹೋದರರಿಂದ ಅಪ್ಪಣೆತೆಗೆದುಕೊಂಡು ತನಗೆ ದೀಕ್ಷೆ ಇದ್ದುದರಿಂದ ಕೆಂಖ್ರೆಯ ಪಟ್ಟಣದಲ್ಲಿ ಕ್ಷೌರಮಾಡಿಸಿಕೊಂಡು ಹಡಗನ್ನು ಹತ್ತಿ ಸಿರಿಯಕ್ಕೆ ಹೊರಟನು. ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಅವನ ಸಂಗಡ ಹೊರಟರು.
ಅಪೊಸ್ತಲರ ಕೃತ್ಯಗ 18 : 19 (IRVKN)
ಎಫೆಸಕ್ಕೆ ಬಂದಾಗ ಅವರನ್ನು ಅಲ್ಲೇ ಬಿಟ್ಟು, ತಾನು ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ವಾದಿಸಿದನು.
ಅಪೊಸ್ತಲರ ಕೃತ್ಯಗ 18 : 20 (IRVKN)
ಅವರು ಅವನನ್ನು ಇನ್ನು ಕೆಲವು ಕಾಲ ಇರಬೇಕೆಂದು ಕೇಳಿಕೊಂಡಾಗ ಅವನು ಒಪ್ಪದೆ,
ಅಪೊಸ್ತಲರ ಕೃತ್ಯಗ 18 : 21 (IRVKN)
“ದೇವರ ಚಿತ್ತವಾದರೆ ಪುನಃ ನಿಮ್ಮ ಬಳಿಗೆ ಬರುತ್ತೇನೆಂದು” ಹೇಳಿ ಅವರ ಅಪ್ಪಣೆ ತೆಗೆದುಕೊಂಡು ಹೊರಟುಹೋದನು. ಅನಂತರ ಎಫೆಸದಿಂದ ಸಮುದ್ರಪ್ರಯಾಣ ಮಾಡಿ ಕೈಸರೈಯದಲ್ಲಿ ಇಳಿದು,
ಅಪೊಸ್ತಲರ ಕೃತ್ಯಗ 18 : 22 (IRVKN)
ಯೆರೂಸಲೇಮಿಗೆ ಹೋಗಿ ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಬಂದನು. ಸುವಾರ್ತೆಯನ್ನು ಸಾರುವುದಕ್ಕೆ ಪೌಲನು ಮಾಡಿದ ಮೂರನೆಯ ಪ್ರಯಾಣ (18:23, 21:17) [PE][PS]
ಅಪೊಸ್ತಲರ ಕೃತ್ಯಗ 18 : 23 (IRVKN)
ಪೌಲನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ಪುನಃ ಅಲ್ಲಿಂದ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ, ಫ್ರುಗ್ಯದಲ್ಲಿಯೂ ಸಂಚಾರಮಾಡುತ್ತಾ ಶಿಷ್ಯರೆಲ್ಲರನ್ನು ದೃಢಪಡಿಸಿದನು. [PE][PS]
ಅಪೊಸ್ತಲರ ಕೃತ್ಯಗ 18 : 24 (IRVKN)
ಅಷ್ಟರೊಳಗೆ ಅಲೆಕ್ಸಾಂದ್ರಿಯದಲ್ಲಿ ಹುಟ್ಟಿದ ಅಪೊಲ್ಲೋಸನೆಂಬ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದನು. ಅವನು ವಾಕ್ಚಾತುರ್ಯವುಳ್ಳವನೂ ಧರ್ಮಶಾಸ್ತ್ರಗಳಲ್ಲಿ ಪ್ರವೀಣನೂ ಆಗಿದ್ದನು.
ಅಪೊಸ್ತಲರ ಕೃತ್ಯಗ 18 : 25 (IRVKN)
ಅವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದವನಾಗಿದ್ದನು ಮತ್ತು ಆಸಕ್ತ ಮನಸ್ಸುಳ್ಳವನಾಗಿದ್ದು ಯೋಹಾನನು ಮಾಡಿಸಿದ ದೀಕ್ಷಾಸ್ನಾನವನ್ನು ಮಾತ್ರ ಬಲ್ಲವನಾದರೂ ಯೇಸುವಿನ ಸಂಗತಿಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸಿದನು.
ಅಪೊಸ್ತಲರ ಕೃತ್ಯಗ 18 : 26 (IRVKN)
ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಕೇಳಿ ಅವನನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಸೂಕ್ಷ್ಮವಾಗಿ ವಿವರಿಸಿದರು.
ಅಪೊಸ್ತಲರ ಕೃತ್ಯಗ 18 : 27 (IRVKN)
ಆ ಮೇಲೆ ಅಖಾಯಕ್ಕೆ ಹೋಗಬೇಕೆಂದು ಅವನಿಗೆ ಮನಸ್ಸಾದಾಗ ಸಹೋದರರು ಅವನನ್ನು ಪ್ರೋತ್ಸಾಹಗೊಳಿಸಿ ಅಲ್ಲಿದ್ದ ಶಿಷ್ಯರಿಗೆ ಇವನನ್ನು ಸೇರಿಸಿಕೊಳ್ಳಬೇಕೆಂದು ಪತ್ರಿಕೆಯನ್ನು ಬರೆದುಕೊಟ್ಟರು.
ಅಪೊಸ್ತಲರ ಕೃತ್ಯಗ 18 : 28 (IRVKN)
ಅವನು ಹೋಗಿ ಯೇಸುವೇ ಕ್ರಿಸ್ತನೆಂದು ದೇವರ ವಾಕ್ಯದಿಂದ ಯೆಹೂದ್ಯರಿಗೆ ತೋರಿಸಿಕೊಟ್ಟು ಎಲ್ಲರ ಮುಂದೆ ಬಲವಾಗಿ ಈ ವಿಷಯವನ್ನು ರುಜುವಾತುಪಡಿಸುತ್ತಾ ಯೆಹೂದ್ಯರನ್ನು ಖಂಡಿಸಿ ದೇವರ ಕೃಪೆಯಿಂದ ನಂಬಿದವರಿಗೆ ಬಹಳ ಸಹಾಯಮಾಡಿದನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28

BG:

Opacity:

Color:


Size:


Font: