ಅಪೊಸ್ತಲರ ಕೃತ್ಯಗ 19 : 1 (IRVKN)
{ಎಫೆಸ ಪಟ್ಟಣದಲ್ಲಿ ಪೌಲನ ಸೇವೆ} [PS] ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮಲೆನಾಡಿನಲ್ಲಿ ಸಂಚಾರಮಾಡಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡು;
ಅಪೊಸ್ತಲರ ಕೃತ್ಯಗ 19 : 2 (IRVKN)
“ನೀವು ನಂಬಿದಾಗ ಪವಿತ್ರಾತ್ಮವರವನ್ನು ಹೊಂದಿದಿರೋ?” ಎಂದು ಅವರನ್ನು ಕೇಳಲು ಅವರು ಅವನಿಗೆ; “ಇಲ್ಲ, ಪವಿತ್ರಾತ್ಮವರವು ಉಂಟೆಂಬುದನ್ನೇ ನಾವು ಕೇಳಿಲ್ಲ” ಅಂದರು.
ಅಪೊಸ್ತಲರ ಕೃತ್ಯಗ 19 : 3 (IRVKN)
ಅವನು; “ನೀವು ಏನನ್ನು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡಿರಿ” ಎಂದು ಕೇಳಿದ್ದಕ್ಕೆ ಅವರು; “ಯೋಹಾನನ ಬೋಧನೆಯನ್ನು ನಂಬಿ ದೀಕ್ಷಾಸ್ನಾನಮಾಡಿಸಿಕೊಂಡೆವು” ಅಂದರು.
ಅಪೊಸ್ತಲರ ಕೃತ್ಯಗ 19 : 4 (IRVKN)
ಅದಕ್ಕೆ ಪೌಲನು; “ಯೋಹಾನನು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡವರಿಗೆ ದೀಕ್ಷಾಸ್ನಾನ ಮಾಡಿಸಿ ತನ್ನ ಹಿಂದೆ ಬರುವ ಯೇಸುವಿನಲ್ಲಿ ನಂಬಿಕೆಯಿಡಬೇಕೆಂಬುದಾಗಿ ಜನರಿಗೆ ಹೇಳಿದನು” ಎಂದು ಹೇಳಲು,
ಅಪೊಸ್ತಲರ ಕೃತ್ಯಗ 19 : 5 (IRVKN)
ಅವರು ಆ ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡರು.
ಅಪೊಸ್ತಲರ ಕೃತ್ಯಗ 19 : 6 (IRVKN)
ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಇಳಿದುಬಂದನು; ಅವರು ನಾನಾ ಭಾಷೆಗಳನ್ನಾಡಿದರು, ಪ್ರವಾದಿಸಿದರು.
ಅಪೊಸ್ತಲರ ಕೃತ್ಯಗ 19 : 7 (IRVKN)
ಅಲ್ಲಿ ಸುಮಾರು ಹನ್ನೆರಡು ಮಂದಿ ಗಂಡಸರಿದ್ದರು. [PE][PS]
ಅಪೊಸ್ತಲರ ಕೃತ್ಯಗ 19 : 8 (IRVKN)
ಆ ಪಟ್ಟಣದಲ್ಲಿ ಪೌಲನು ಸಭಾಮಂದಿರದೊಳಗೆ ಹೋಗಿ, ಮೂರು ತಿಂಗಳು ಅಲ್ಲೇ ದೇವರ ರಾಜ್ಯದ ವಿಷಯಗಳನ್ನು ಕುರಿತು, ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.
ಅಪೊಸ್ತಲರ ಕೃತ್ಯಗ 19 : 9 (IRVKN)
ಕೆಲವರು ತಮ್ಮ ಮನಸ್ಸುಗಳನ್ನು ಕಠಿಣಮಾಡಿಕೊಂಡು ಒಡಂಬಡದೆ ಗುಂಪುಕೂಡಿದ ಜನರ ಮುಂದೆ ಈ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟುಹೋಗಿ ಶಿಷ್ಯರನ್ನು ಬೇರೆಮಾಡಿ ತುರನ್ನ ಎಂಬುವನ ತರ್ಕಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.
ಅಪೊಸ್ತಲರ ಕೃತ್ಯಗ 19 : 10 (IRVKN)
ಇದು ಎರಡು ವರ್ಷಗಳ ವರೆಗೂ ನಡೆದಿದ್ದರಿಂದ ಅಸ್ಯಸೀಮೆಯಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರೂ, ಗ್ರೀಕರೂ, ಕರ್ತನ ವಾಕ್ಯವನ್ನು ಕೇಳಿದರು. [PE][PS]
ಅಪೊಸ್ತಲರ ಕೃತ್ಯಗ 19 : 11 (IRVKN)
ದೇವರು ಪೌಲನ ಕೈಯಿಂದ ವಿಶೇಷವಾದ ಮಹತ್ಕಾರ್ಯಗಳನ್ನು ನಡಿಸುತ್ತಾ ಇದ್ದುದರಿಂದ,
ಅಪೊಸ್ತಲರ ಕೃತ್ಯಗ 19 : 12 (IRVKN)
ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ, ರುಮಾಲುಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರ ರೋಗಗಳು ವಾಸಿಯಾದವು, ದುರಾತ್ಮಗಳೂ ಬಿಟ್ಟುಹೋದವು.
ಅಪೊಸ್ತಲರ ಕೃತ್ಯಗ 19 : 13 (IRVKN)
ದುರಾತ್ಮಗಳನ್ನೂ ಬಿಡಿಸುವವರೆನಿಸಿಕೊಂಡು, ದೇಶಸಂಚಾರಿಗಳಾದ ಯೆಹೂದ್ಯರಿದ್ದರು. ಅವರಲ್ಲಿ ಕೆಲವರು ದುರಾತ್ಮ ಪೀಡಿತರ ಮೇಲೆ; “ಪೌಲನು ಸಾರುವ ಯೇಸುವಿನ ಆಣೆ” ಎಂದು ಹೇಳಿ ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗಮಾಡುವುದಕ್ಕೆ ತೊಡಗಿದರು.
ಅಪೊಸ್ತಲರ ಕೃತ್ಯಗ 19 : 14 (IRVKN)
ಮುಖ್ಯಯಾಜಕ ಸ್ಕೇವನೆಂಬ ಒಬ್ಬ ಯೆಹೂದ್ಯನ ಏಳು ಮಂದಿ ಮಕ್ಕಳೂ ಹಾಗೆ ಮಾಡುತ್ತಿದ್ದರು.
ಅಪೊಸ್ತಲರ ಕೃತ್ಯಗ 19 : 15 (IRVKN)
ಆದರೆ ದುರಾತ್ಮವು ಅವರಿಗೆ; “ಯೇಸುವಿನ ಗುರುತು ನನಗುಂಟು, ಪೌಲನನ್ನೂ ಬಲ್ಲೆನು, ಆದರೆ ನೀವು ಯಾರು?” ಎಂದು ಹೇಳಿತು;
ಅಪೊಸ್ತಲರ ಕೃತ್ಯಗ 19 : 16 (IRVKN)
ಮತ್ತು ದುರಾತ್ಮ ಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿ ಬಿದ್ದು, ಅವರನ್ನೂ ಸೋಲಿಸಿ ಸದೆಬಡಿದಿದ್ದರಿಂದ ಅವರು ಗಾಯಗೊಂಡು ಬೆತ್ತಲೆಯಾಗಿ ಆ ಮನೆಯೊಳಗಿಂದ ಓಡಿಹೋದರು.
ಅಪೊಸ್ತಲರ ಕೃತ್ಯಗ 19 : 17 (IRVKN)
ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ, ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರೂ ಭಯಭೀತರಾದರು. ಮತ್ತು ಕರ್ತನಾದ ಯೇಸುವಿನ ಹೆಸರು ಪ್ರಖ್ಯಾತಿಗೆ ಬಂದಿತು.
ಅಪೊಸ್ತಲರ ಕೃತ್ಯಗ 19 : 18 (IRVKN)
ಆತನನ್ನು ನಂಬಿದವರಲ್ಲಿ ಅನೇಕರು ಪಶ್ಚಾತ್ತಾಪದಿಂದ ಬಂದು ತಮ್ಮ ತಮ್ಮ ಪಾಪಕೃತ್ಯಗಳನ್ನು ಒಪ್ಪಿಕೊಂಡರು.
ಅಪೊಸ್ತಲರ ಕೃತ್ಯಗ 19 : 19 (IRVKN)
ಇದಲ್ಲದೆ ಮಾಟ ಮಂತ್ರಗಳನ್ನು ನಡಿಸಿದವರಲ್ಲಿ ಅನೇಕರು ತಮ್ಮ ಮಾಟಮಂತ್ರಗಳ ಪುಸ್ತಕಗಳನ್ನು ತಂದು, ಕೂಡಿಸಿ ಎಲ್ಲರ ಮುಂದೆ ಸುಟ್ಟುಬಿಟ್ಟರು. ಅವುಗಳ ಮೌಲ್ಯವನ್ನು ಲೆಕ್ಕಮಾಡಿ ಐವತ್ತು ಸಾವಿರ ಬೆಳ್ಳಿ ನಾಣ್ಯ ಆಯಿತೆಂದು ತಿಳಿದುಕೊಂಡರು.
ಅಪೊಸ್ತಲರ ಕೃತ್ಯಗ 19 : 20 (IRVKN)
ಈ ರೀತಿಯಾಗಿ ಕರ್ತನ ವಾಕ್ಯವು ಬಹಳವಾಗಿ ಹೆಚ್ಚುತ್ತಾ ಪ್ರಬಲವಾಯಿತು. [PE][PS]
ಅಪೊಸ್ತಲರ ಕೃತ್ಯಗ 19 : 21 (IRVKN)
ಈ ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ, ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇಮಿಗೆ ಹೋಗಬೇಕೆಂದು ಮನಸ್ಸಿನಲ್ಲಿ ಯೋಚಿಸಿ; “ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು” ಹೇಳಿದನು.
ಅಪೊಸ್ತಲರ ಕೃತ್ಯಗ 19 : 22 (IRVKN)
ಆದರೆ ಅವನು ತನಗೆ ಸೇವೆಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಮತ್ತು ಎರಸ್ತನನ್ನೂ ಮಕೆದೋನ್ಯಕ್ಕೆ ಕಳುಹಿಸಿ ತಾನು ಆಸ್ಯಸೀಮೆಯಲ್ಲಿ ಕೆಲವು ಕಾಲ ತಂಗಿದನು. [PS]
ಅಪೊಸ್ತಲರ ಕೃತ್ಯಗ 19 : 23 (IRVKN)
{ಎಫೆಸ ಪಟ್ಟಣದಲ್ಲಿ ದಂಗೆ} [PS] ಆ ಕಾಲದಲ್ಲಿ ಈ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.
ಅಪೊಸ್ತಲರ ಕೃತ್ಯಗ 19 : 24 (IRVKN)
ಹೇಗೆಂದರೆ, ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಅರ್ತೆಮೀ ದೇವಿಯ ಗುಡಿಯಂತೆ ಸಣ್ಣಸಣ್ಣ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸುಬಿನವರಿಗೆ ಬಹಳ ಲಾಭವನ್ನು ಕೊಡುತ್ತಿದ್ದನು.
ಅಪೊಸ್ತಲರ ಕೃತ್ಯಗ 19 : 25 (IRVKN)
ಅವನು ಅವರನ್ನೂ ಮತ್ತು ಆ ಕಸುಬಿಗೆ ಸಂಬಂಧಪಟ್ಟ ಕೆಲಸದವರನ್ನೂ ಒಟ್ಟಿಗೆ ಕರೆಸಿ ಅವರಿಗೆ; “ಜನರೇ, ಈ ಕೆಲಸದಿಂದ ನಮಗೆ ಐಶ್ವರ್ಯ ಉಂಟಾಗುತ್ತದೆಂದು ನೀವು ಬಲ್ಲಿರಿ.
ಅಪೊಸ್ತಲರ ಕೃತ್ಯಗ 19 : 26 (IRVKN)
ಆದರೆ ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲವೆಂದು ಆ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಹೆಚ್ಚುಕಡಿಮೆ ಆಸ್ಯಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿಬಿಟ್ಟಿದ್ದಾನೆ ಎಂಬುದನ್ನು ನೀವು ನೋಡುತ್ತಿದ್ದೀರಿ, ಕೇಳುತ್ತಿದ್ದೀರಿ.
ಅಪೊಸ್ತಲರ ಕೃತ್ಯಗ 19 : 27 (IRVKN)
ಇದರಿಂದ ನಮ್ಮ ಉದ್ಯೋಗಕ್ಕೆ ಕುಂದು ಬರುವುದಲ್ಲದೆ ಅರ್ತೆಮೀ ಮಹಾದೇವಿಯ ದೇವಸ್ಥಾನವು ಗಣನೆಗೆ ಬಾರದೆಹೋಗುವ ಹಾಗೆಯೂ, ಎಲ್ಲಾ ಆಸ್ಯಸೀಮೆಯೂ, ಲೋಕವೆಲ್ಲಾ ಪೂಜಿಸುವ ಈ ದೇವಿಯ ವೈಭವಕ್ಕೆ ಹಾನಿಬರುವ ಹಾಗೆ ಗಂಡಾಂತರವುಂಟಾಗುತ್ತದೆಂದು” ಹೇಳಿದನು. [PE][PS]
ಅಪೊಸ್ತಲರ ಕೃತ್ಯಗ 19 : 28 (IRVKN)
ಅವರು ಈ ಮಾತುಗಳನ್ನು ಕೇಳಿ ಕೋಪಗೊಂಡು; “ಎಫೆಸದವರ ಅರ್ತೆಮೀದೇವಿ ಮಹಾದೇವಿ” ಎಂದು ಅರ್ಭಟಿಸಿದರು.
ಅಪೊಸ್ತಲರ ಕೃತ್ಯಗ 19 : 29 (IRVKN)
ಆಗ ಊರಿನಲ್ಲೆಲ್ಲಾ ಗಲಿಬಿಲಿಯಾಯಿತು. ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನೂ, ಅರಿಸ್ತಾರ್ಕನನ್ನೂ ಜನರು ಹಿಡಿದುಕೊಂಡು ಒಟ್ಟಾಗಿ ನಾಟಕ ಶಾಲೆಯೊಳಗೆ ನುಗ್ಗಿದರು.
ಅಪೊಸ್ತಲರ ಕೃತ್ಯಗ 19 : 30 (IRVKN)
ಪೌಲನು ಜನರೊಳಗೆ ನುಗ್ಗಬೇಕೆಂದಿದ್ದಾಗ ಶಿಷ್ಯರು ಅವನನ್ನು ಬಿಡಲಿಲ್ಲ.
ಅಪೊಸ್ತಲರ ಕೃತ್ಯಗ 19 : 31 (IRVKN)
ಇದಲ್ಲದೆ ಆಸ್ಯಸೀಮೆಯ ಅಧಿಕಾರಿಗಳಲ್ಲಿ ಕೆಲವರು ಪೌಲನ ಸ್ನೇಹಿತರಾಗಿದ್ದುದರಿಂದ ಅವನ ಬಳಿಗೆ ಜನರನ್ನು ಕಳುಹಿಸಿ; ನೀನು ನಾಟಕ ಶಾಲೆಯೊಳಗೆ ಹೋಗ ಬೇಡ ಎಂದು ಬೇಡಿಕೊಂಡರು. [PE][PS]
ಅಪೊಸ್ತಲರ ಕೃತ್ಯಗ 19 : 32 (IRVKN)
ಜನಸಮೂಹದಲ್ಲಿ ಗೊಂದಲವೆದ್ದಿತು, ಕೆಲವರು ಒಂದು ವಿಧದಲ್ಲಿ ಕೂಗಾಡಿದರೆ ಮತ್ತೆ ಕೆಲವರು ಇನ್ನೊಂದು ವಿಧದಲ್ಲಿ ಕೂಗುತ್ತಿದ್ದರು. ಬಹುಜನರಿಗೆ ತಾವು ಅಲ್ಲಿ ಕೂಡಿ ಬಂದಿದ್ದ ಕಾರಣವು ಗೊತ್ತಿರಲಿಲ್ಲ.
ಅಪೊಸ್ತಲರ ಕೃತ್ಯಗ 19 : 33 (IRVKN)
ಯೆಹೂದ್ಯರು ಅಲೆಕ್ಸಾಂದ್ರನನ್ನು ಮುಂದಕ್ಕೆ ನೂಕಲು, ಗುಂಪಿನಲ್ಲಿ ಕೆಲವರು ಅವನಿಗೆ ಸೂಚನೆ ಕೊಟ್ಟರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಕೂಡಿದ್ದ ಜನರಿಗೆ ಪ್ರತಿವಾದ ಮಾಡಬೇಕೆಂದಿದ್ದನು.
ಅಪೊಸ್ತಲರ ಕೃತ್ಯಗ 19 : 34 (IRVKN)
ಆದರೆ ಅವನು ಯೆಹೂದ್ಯನೆಂದು ತಿಳಿದಾಗ ಎಲ್ಲರೂ ಒಂದೇ ಶಬ್ದದಿಂದ; “ಎಫೆಸದವರ ಅರ್ತೆಮೀದೇವಿ ಮಹಾದೇವಿ” ಎಂದು ಎರಡು ಘಂಟೆ ಹೊತ್ತು ಕೂಗಿದರು. [PE][PS]
ಅಪೊಸ್ತಲರ ಕೃತ್ಯಗ 19 : 35 (IRVKN)
ಕೊನೆಗೆ ಪಟ್ಟಣದ ಯಜಮಾನನು ಜನರ ಗುಂಪನ್ನು ಸಮಾಧಾನಪಡಿಸಿ; “ಎಫೆಸದವರೇ, ಎಫೆಸ ಪಟ್ಟಣದವರು ಅರ್ತೆಮೀ ಮಹಾದೇವಿಯ ದೇವಸ್ಥಾನಕ್ಕೂ, ಆಕಾಶದಿಂದ ಬಿದ್ದ ಆಕೆಯ ಮೂರ್ತಿಗೂ, ಪಾಲಕರಾಗಿದ್ದಾರೆಂಬುದನ್ನು ತಿಳಿಯದಿರುವ ಮನುಷ್ಯನು ಯಾವನಿದ್ದಾನೇ?
ಅಪೊಸ್ತಲರ ಕೃತ್ಯಗ 19 : 36 (IRVKN)
ಈ ಸಂಗತಿ ಅಲ್ಲವೆನ್ನುವುದಕ್ಕೆ ಯಾರಿಂದಲೂ ಆಗದಿರುವುದರಿಂದ ನೀವು ಶಾಂತಿಯಿಂದಿರಬೇಕು; ದುಡುಕಿ ಏನೂ ಮಾಡಬಾರದು.
ಅಪೊಸ್ತಲರ ಕೃತ್ಯಗ 19 : 37 (IRVKN)
ನೀವು ಹಿಡಿದುತಂದಿರುವ ಈ ಮನುಷ್ಯರು ದೇವಸ್ಥಾನದಲ್ಲಿ ಕಳ್ಳತನ ಮಾಡುವವರಲ್ಲ, ನಮ್ಮ ದೇವಿಯನ್ನು ದೂಷಿಸುವವರೂ ಅಲ್ಲ.
ಅಪೊಸ್ತಲರ ಕೃತ್ಯಗ 19 : 38 (IRVKN)
ಹೀಗಿರುವುದರಿಂದ ದೇಮೇತ್ರಿಯನಿಗೂ ಅವನ ಪಕ್ಷವನ್ನು ಹಿಡಿದಿರುವ ಅಕ್ಕಸಾಲಿಗರಿಗೂ ಯಾವನ ಮೇಲಾದರೂ ದೂರುಗಳಿದ್ದರೆ ನ್ಯಾಯಸ್ಥಾನಗಳುಂಟು, ಅಧಿಪತಿಗಳಿದ್ದಾರೆ, ಒಬ್ಬರ ಮೇಲೊಬ್ಬರು ವ್ಯಾಜ್ಯವಾಡಿಕೊಳ್ಳಲಿ.
ಅಪೊಸ್ತಲರ ಕೃತ್ಯಗ 19 : 39 (IRVKN)
ಏನಾದರೂ ಹೆಚ್ಚು ವಿಚಾರಣೆ ಬೇಕಾದರೆ ಅದು ನ್ಯಾಯವಾಗಿ ನೆರೆದ ಸಭೆಯಲ್ಲಿ ತೀರ್ಮಾನಿಸಲ್ಪಡಬೇಕು.
ಅಪೊಸ್ತಲರ ಕೃತ್ಯಗ 19 : 40 (IRVKN)
ಈ ದಿನದಲ್ಲಿ ನ್ಯಾಯವಾದ ಕಾರಣವಿಲ್ಲದೆ ನೆರೆದ ಜನರ ವಿಷಯದಲ್ಲಿ ಇದು ಒಂದು ದಂಗೆ ಎಂಬುದಾಗಿ ನಮ್ಮ ಮೇಲೆ ತಪ್ಪುಹೊರಿಸುವುದಕ್ಕೆ ಆಸ್ಪದವಾಯಿತು. ಈ ದೊಂಬಿಯನ್ನು ಕುರಿತು ವಿಚಾರಣೆನಡೆಸಿದರೆ ನಮ್ಮಿಂದ ಉತ್ತರಕೊಡುವುದಕ್ಕೆ ಆಗುವುದೇ ಇಲ್ಲ” ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 19 : 41 (IRVKN)
ಈ ಮಾತುಗಳನ್ನು ಹೇಳಿ ಜನರ ಗುಂಪನ್ನು ಕಳುಹಿಸಿಬಿಟ್ಟನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41

BG:

Opacity:

Color:


Size:


Font: