ಅಪೊಸ್ತಲರ ಕೃತ್ಯಗ 2 : 1 (IRVKN)
{ಪವಿತ್ರಾತ್ಮನು ಬಂದದ್ದು} [PS] ಪಂಚಾಶತ್ತಮ ದಿನದ ಹಬ್ಬವು ಬಂದಿರಲಾಗಿ ಅವರೆಲ್ಲರೂ ಒಮ್ಮಸ್ಸಿನಿಂದ ಒಂದೇ ಸ್ಥಳದಲ್ಲಿ ಕೂಡಿಬಂದಿದ್ದರು.
ಅಪೊಸ್ತಲರ ಕೃತ್ಯಗ 2 : 2 (IRVKN)
ಆಗ ಬಿರುಗಾಳಿ ಬೀಸುತ್ತಿದೆಯೋ ಎಂಬಂತೆ ಫಕ್ಕನೆ ಆಕಾಶದೊಳಗಿಂದ ಒಂದು ಶಬ್ದವುಂಟಾಗಿ ಅವರು ಕುಳಿತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.
ಅಪೊಸ್ತಲರ ಕೃತ್ಯಗ 2 : 3 (IRVKN)
ಉರಿಯುವ ಬೆಂಕಿಯೂ ವಿಂಗಡಿಸಿಕೊಳ್ಳುವ ನಾಲಿಗೆಗಳ ಹಾಗೆ ಅವರಿಗೆ ಕಾಣಿಸಿ ಕೊಂಡು ಅವರಲ್ಲಿ ಒಬ್ಬೊಬ್ಬರ ಮೇಲೆ ಒಂದೊಂದಾಗಿ ಕುಳಿತುಕೊಂಡವು.
ಅಪೊಸ್ತಲರ ಕೃತ್ಯಗ 2 : 4 (IRVKN)
ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾದರು, ಅವರಿಗೆ ಆ ಪವಿತ್ರಾತ್ಮನು ನೀಡಿದ ಶಕ್ತಿಯ ಪ್ರಕಾರ ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವುದಕ್ಕೆ ಪ್ರಾರಂಭಿಸಿದರು. [PE][PS]
ಅಪೊಸ್ತಲರ ಕೃತ್ಯಗ 2 : 5 (IRVKN)
ಆಕಾಶದ ಕೆಳಗಿರುವ ಎಲ್ಲಾ ದೇಶಗಳಿಂದ ಬಂದ ಸದ್ಭಕ್ತರಾದ ಯೆಹೂದ್ಯರು ಯೆರೂಸಲೇಮಿನಲ್ಲಿ ವಾಸವಾಗಿದ್ದರು.
ಅಪೊಸ್ತಲರ ಕೃತ್ಯಗ 2 : 6 (IRVKN)
ಆ ಸಪ್ಪಳವಾದಾಗ ಆ ಜನರೆಲ್ಲರೂ ಗುಂಪು ಗುಂಪಾಗಿ ಕೂಡಿಬಂದು ಪ್ರತಿಯೊಬ್ಬರೂ ತಮ್ಮತಮ್ಮ ಭಾಷೆಯಲ್ಲೇ ಇವರು ಮಾತನಾಡುವುದನ್ನು ಕೇಳಿ ದಿಗ್ಭ್ರಮೆಗೊಂಡರು.
ಅಪೊಸ್ತಲರ ಕೃತ್ಯಗ 2 : 7 (IRVKN)
ಎಲ್ಲರೂ ವಿಸ್ಮಯದಿಂದ ಬೆರಗಾಗಿ, “ಇಗೋ, ಮಾತನಾಡುತ್ತಿರುವ ಇವರೆಲ್ಲರೂ ಗಲಿಲಾಯದವರಲ್ಲವೇ.
ಅಪೊಸ್ತಲರ ಕೃತ್ಯಗ 2 : 8 (IRVKN)
ಆದರೆ ನಾವು ಪ್ರತಿಯೊಬ್ಬರು ನಮ್ಮ ನಮ್ಮ ಮಾತೃಭಾಷೆಯಲ್ಲಿ ಇವರು ಮಾತನಾಡುವುದನ್ನು ಕೇಳುತ್ತಿದ್ದೇವಲ್ಲಾ, ಇದು ಹೇಗೆ?
ಅಪೊಸ್ತಲರ ಕೃತ್ಯಗ 2 : 9 (IRVKN)
ಪಾರ್ಥ್ಯರೂ, ಮೇದ್ಯರೂ, ಏಲಾಮ್ಯರೂ, ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ,
ಅಪೊಸ್ತಲರ ಕೃತ್ಯಗ 2 : 10 (IRVKN)
ಫ್ರುಗ್ಯ, ಪಂಫುಲ್ಯ, ಐಗುಪ್ತ ಮತ್ತು ಕುರೇನೆಯ ಮಗ್ಗುಲಲ್ಲಿರುವ ಲಿಬ್ಯ, ಈ ಸೀಮೆಗಳಲ್ಲಿ ವಾಸವಾಗಿರುವವರೂ, ರೋಮಾಪುರದಿಂದ ಬಂದಿರುವ ಯೆಹೂದ್ಯರೂ, ಯೆಹೂದ್ಯ ಮತಾವಲಂಬಿಗಳೂ, ಕ್ರೇತ್ಯರೂ, ಅರಬ್ಬೀದೇಶದವರೂ
ಅಪೊಸ್ತಲರ ಕೃತ್ಯಗ 2 : 11 (IRVKN)
ಆಗಿರುವ ನಾವು ನಮ್ಮ ನಮ್ಮ ಭಾಷೆಗಳಲ್ಲಿ ಇವರು ದೇವರ ಮಹತ್ತುಗಳ ವಿಷಯವಾಗಿ ಹೇಳುವುದನ್ನು ಕೇಳುತ್ತಿದ್ದೇವಲ್ಲಾ” ಎಂದು ಅಂದುಕೊಂಡರು.
ಅಪೊಸ್ತಲರ ಕೃತ್ಯಗ 2 : 12 (IRVKN)
ಎಲ್ಲರೂ ಬೆರಗಾಗಿ ಕಳವಳಗೊಂಡು, “ಇದೇನಾಗಿರಬಹುದು ಎಂದು ಒಬ್ಬರನ್ನೊಬ್ಬರು ಕೇಳುತ್ತಿದ್ದರು?”
ಅಪೊಸ್ತಲರ ಕೃತ್ಯಗ 2 : 13 (IRVKN)
ಆದರೆ ಬೇರೆ ಕೆಲವರು, “ಇವರು ಮದ್ಯಪಾನ ಮಾಡಿ ಮತ್ತರಾಗಿದ್ದಾರೆಂದು ಹಾಸ್ಯ” ಮಾಡಿದರು. [PS]
ಅಪೊಸ್ತಲರ ಕೃತ್ಯಗ 2 : 14 (IRVKN)
{ಜನಸಮೂಹಕ್ಕೆ ಪೇತ್ರನ ಪ್ರಬೋಧನೆ} [PS] ಆಗ ಪೇತ್ರನು ಹನ್ನೊಂದು ಮಂದಿ ಅಪೊಸ್ತಲರ ಸಹಿತ ಎದ್ದು ನಿಂತು ಗಟ್ಟಿಯಾದ ಧ್ವನಿಯಿಂದ ಅವರಿಗೆ ಹೀಗೆ ಬೋಧನೆಮಾಡಿದನು; “ಯೆಹೂದ್ಯರೇ, ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಜಾತಿ-ಜನಾಂಗದವರೇ, ಈ ಸಂಗತಿಯು ಏನೆಂದು ನೀವು ತಿಳಿದುಕೊಳ್ಳಲು ನನ್ನ ಮಾತಿಗೆ ಕಿವಿಗೊಡಿರಿ.
ಅಪೊಸ್ತಲರ ಕೃತ್ಯಗ 2 : 15 (IRVKN)
ನೀವು ಭಾವಿಸಿದಂತೆ ಇವರು ಮದ್ಯಪಾನಮಾಡಿ ಅಮಲೇರಿದವರಲ್ಲ, ಈಗ ಬೆಳಗ್ಗೆ ಒಂಭತ್ತು ಘಂಟೆಯಾಗಿದೆಯಷ್ಟೆ.
ಅಪೊಸ್ತಲರ ಕೃತ್ಯಗ 2 : 16 (IRVKN)
ಆದರೆ ಇದು ಪ್ರವಾದಿಯಾದ ಯೋವೇಲನ ಮೂಲಕವಾಗಿ ಹೇಳಿಸಿದ ಸಂಗತಿಯಾಗಿದೆ; ಅದೇನೆಂದರೆ, [QBR]
ಅಪೊಸ್ತಲರ ಕೃತ್ಯಗ 2 : 17 (IRVKN)
“ಕಡೆ ದಿನಗಳಲ್ಲಿ ನಾನು ಎಲ್ಲಾ ಜನರ ಮೇಲೆ ನನ್ನ ಆತ್ಮವನ್ನು ಸುರಿಸುವೆನು, [QBR2] ಆಗ ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; [QBR2] ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು; [QBR2] ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು; [QBR]
ಅಪೊಸ್ತಲರ ಕೃತ್ಯಗ 2 : 18 (IRVKN)
ಇದಲ್ಲದೆ ಆ ದಿನಗಳಲ್ಲಿ ನನ್ನ ದಾಸದಾಸಿಯರ ಮೇಲೆಯೂ [QBR2] ನನ್ನ ಆತ್ಮವನ್ನು ಸುರಿಸುವೆನು, [QBR2] ಅವರೂ ಪ್ರವಾದಿಸುವರು. [QBR]
ಅಪೊಸ್ತಲರ ಕೃತ್ಯಗ 2 : 19 (IRVKN)
(19-20) ಕರ್ತನ ಆಗಮನದ ಗಂಭೀರವಾದ ಮಹಾ ದಿನವು ಬರುವುದಕ್ಕೆ ಮೊದಲೇ [QBR2] ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನ್ನೂ [QBR2] ಕೆಳಗೆ ಭೂಮಿಯಲ್ಲಿ ಸೂಚಕಕಾರ್ಯಗಳನ್ನೂ ಉಂಟುಮಾಡುವೆನು. [QBR2] ರಕ್ತ, ಬೆಂಕಿ, ಹಬೆಯಂತೆ ಏರುವ ಹೊಗೆ ಇವು ಉಂಟಾಗುವವು. [QBR2] ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು. [QBR]
ಅಪೊಸ್ತಲರ ಕೃತ್ಯಗ 2 : 20 (IRVKN)
ಅಪೊಸ್ತಲರ ಕೃತ್ಯಗ 2 : 21 (IRVKN)
ಆದರೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದೆಂದು ದೇವರು ಹೇಳುತ್ತಾನೆ” ಎಂಬುದೇ. [PE][PS]
ಅಪೊಸ್ತಲರ ಕೃತ್ಯಗ 2 : 22 (IRVKN)
“ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಕೇಳಿರಿ;, ನಜರೇತಿನ ಯೇಸು ಇದ್ದನಲ್ಲಾ, ನಿಮಗೂ ತಿಳಿದಿರುವಂತೆ ದೇವರು ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.
ಅಪೊಸ್ತಲರ ಕೃತ್ಯಗ 2 : 23 (IRVKN)
ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ.
ಅಪೊಸ್ತಲರ ಕೃತ್ಯಗ 2 : 24 (IRVKN)
ಆತನನ್ನು ದೇವರು ಮರಣದ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಏಕೆಂದರೆ ಮರಣವು ಆತನನ್ನು ಹಿಡಿದುಕೊಂಡಿರುವುದು ಅಸಾಧ್ಯವಾಗಿತ್ತು.
ಅಪೊಸ್ತಲರ ಕೃತ್ಯಗ 2 : 25 (IRVKN)
ಆತನ ವಿಷಯದಲ್ಲಿ ದಾವೀದನು;, [QBR] “ ‘ಕರ್ತನು ಯಾವಾಗಲೂ ನನ್ನೆದುರಿನಲ್ಲಿರುವುದನ್ನು ನೋಡುತ್ತಿದ್ದೆನು; [QBR2] ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ. [QBR]
ಅಪೊಸ್ತಲರ ಕೃತ್ಯಗ 2 : 26 (IRVKN)
ಆದಕಾರಣ ನನ್ನ ಹೃದಯವು ಹರ್ಷಿಸಿತು; [QBR2] ನನ್ನ ನಾಲಿಗೆಯು ಉಲ್ಲಾಸಧ್ವನಿಯನ್ನು ಮಾಡಿತು, [QBR2] ನನ್ನ ಶರೀರವೂ ನಿರೀಕ್ಷೆಯಿಂದ ನೆಲೆಯಾಗಿರುವುದು; [QBR]
ಅಪೊಸ್ತಲರ ಕೃತ್ಯಗ 2 : 27 (IRVKN)
ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ, [QBR2] ನಿನ್ನ ಪವಿತ್ರನಿಗೆ ಕೊಳೆಯಲು ಬಿಡಲಾರೆ. [QBR]
ಅಪೊಸ್ತಲರ ಕೃತ್ಯಗ 2 : 28 (IRVKN)
ಜೀವದ ಮಾರ್ಗಗಳನ್ನು ನನಗೆ ತಿಳಿಯಪಡಿಸಿದ್ದೀ; [QBR2] ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನನ್ನಾಗಮಾಡುವಿ’ ಎಂದು ಹೇಳಿದ್ದಾನೆ. [PE][PS]
ಅಪೊಸ್ತಲರ ಕೃತ್ಯಗ 2 : 29 (IRVKN)
“ಸಹೋದರರೇ, ಮೂಲಪಿತೃವಾದ ದಾವೀದನ ವಿಷಯದಲ್ಲಿ ನಾನು ಧೈರ್ಯದಿಂದ ನಿಮ್ಮ ಸಂಗಡ ಮಾತನಾಡಬಹುದು ಏನೆಂದರೆ,, ಅವನು ಮರಣಹೊಂದಿ ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿ ಇದೆ.
ಅಪೊಸ್ತಲರ ಕೃತ್ಯಗ 2 : 30 (IRVKN)
ಆದಕಾರಣ ಅವನು ಪ್ರವಾದಿಯಾಗಿದ್ದು, ನಿನ್ನ ಸಂತತಿಯವರೊಳಗೆ ಒಬ್ಬನನ್ನು ನಾನು ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು ಎಂದು ತನಗೆ ದೇವರು ಆಣೆಯಿಟ್ಟು ಹೇಳಿದ್ದನ್ನು ಬಲ್ಲವನಾಗಿದನು.
ಅಪೊಸ್ತಲರ ಕೃತ್ಯಗ 2 : 31 (IRVKN)
ಕ್ರಿಸ್ತನ ಪುನರುತ್ಥಾನವನ್ನೇ ಕುರಿತು, ಆತನು ಪಾತಾಳದಲ್ಲಿ ಬಿಡಲ್ಪಡಲಿಲ್ಲವೆಂತಲೂ, ಆತನ ಶರೀರವು ಕೊಳೆಯುವ ಅವಸ್ಥೆಯನ್ನು ಅನುಭವಿಸುವುದಿಲ್ಲವೆಂತಲೂ ಹೇಳಿದನು.
ಅಪೊಸ್ತಲರ ಕೃತ್ಯಗ 2 : 32 (IRVKN)
ಈ ಯೇಸುವನ್ನೇ ದೇವರು ಎಬ್ಬಿಸಿದನು; ಇದಕ್ಕೆ ನಾವೆಲ್ಲರು ಸಾಕ್ಷಿಗಳಾಗಿದ್ದೇವೆ.
ಅಪೊಸ್ತಲರ ಕೃತ್ಯಗ 2 : 33 (IRVKN)
ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು, ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ ನೀವು ನೋಡಿ ಕೇಳುವುದನ್ನು ಸುರಿಸಿದ್ದಾನೆ.
ಅಪೊಸ್ತಲರ ಕೃತ್ಯಗ 2 : 34 (IRVKN)
(34-35) ದಾವೀದನು ಸ್ವರ್ಗಾರೋಹಣ ಮಾಡಲಿಲ್ಲವಲ್ಲಾ. ತಾನೇ ಹೇಳುವ ಮಾತೇನಂದರೆ, [QBR] “ ‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದ ಪೀಠವಾಗಿ ಮಾಡುವ ತನಕ [QBR2] ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ದೇವರಾದ ಕರ್ತನು ನನ್ನ ಕರ್ತನಿಗೆ ನುಡಿದನು’ ಎಂಬುದೇ. [PE][PS]
ಅಪೊಸ್ತಲರ ಕೃತ್ಯಗ 2 : 35 (IRVKN)
ಅಪೊಸ್ತಲರ ಕೃತ್ಯಗ 2 : 36 (IRVKN)
“ಆದುದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬುದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ” ಎಂದು ಹೇಳಿದನು. [PE][PS]
ಅಪೊಸ್ತಲರ ಕೃತ್ಯಗ 2 : 37 (IRVKN)
ಅವರು ಇದನ್ನು ಕೇಳಿದಾಗ ಅವರ ಹೃದಯಗಳಲ್ಲಿ ಅಲಗು ನೆಟ್ಟಂತಾಯಿತು. ಅಲ್ಲದೆ ಅವರು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ, “ಸಹೋದರರೇ, ನಾವೇನು ಮಾಡಬೇಕು” ಎಂದು ಕೇಳಲು;
ಅಪೊಸ್ತಲರ ಕೃತ್ಯಗ 2 : 38 (IRVKN)
ಪೇತ್ರನು ಅವರಿಗೆ, “ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.
ಅಪೊಸ್ತಲರ ಕೃತ್ಯಗ 2 : 39 (IRVKN)
ಆ ವಾಗ್ದಾನವು ನಿಮಗೂ, ನಿಮ್ಮ ಮಕ್ಕಳಿಗೂ, ಅಂತೂ ನಮ್ಮ ದೇವರಾಗಿರುವ ಕರ್ತನು ತನ್ನ ಕಡೆಗೆ ಕರೆಯುವ ದೂರದಲ್ಲಿರುವ ಎಲ್ಲರಿಗೂ ಇರುವುದಾಗಿದೆ” ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 2 : 40 (IRVKN)
ಬೇರೆ ಅನೇಕ ವಿಧವಾದ ಮಾತುಗಳಿಂದ ಅವನು ಖಂಡಿತವಾಗಿ ಸಾಕ್ಷಿನುಡಿದು, “ಈ ದುಷ್ಟ ಪೀಳಿಗೆಯಿಂದ ನಿಮ್ಮನ್ನು ಸಂರಕ್ಷಿಸಿಕೊಳ್ಳಿರಿ” ಎಂದು ಅವರನ್ನು ಎಚ್ಚರಿಸಿದನು.
ಅಪೊಸ್ತಲರ ಕೃತ್ಯಗ 2 : 41 (IRVKN)
ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನಮಾಡಿಸಿ ಕೊಂಡರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಕೊಂಡರು. [PE][PS]
ಅಪೊಸ್ತಲರ ಕೃತ್ಯಗ 2 : 42 (IRVKN)
ಅವರು ಅಪೊಸ್ತಲರ ಬೋಧನೆಯಲ್ಲಿಯೂ, ಸಹೋದರರೊಂದಿಗೆ ಅನ್ಯೋನ್ಯತೆಯಲ್ಲಿಯೂ, ರೊಟ್ಟಿಮುರಿಯುವುದರಲ್ಲಿಯೂ, ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು. [PE][PS]
ಅಪೊಸ್ತಲರ ಕೃತ್ಯಗ 2 : 43 (IRVKN)
ಎಲ್ಲರೂ ಭಯ ಪರವಶರಾದರು. ಇದಲ್ಲದೆ ಅನೇಕ ಅದ್ಭುತಕಾರ್ಯಗಳೂ, ಸೂಚಕಕಾರ್ಯಗಳೂ ಅಪೊಸ್ತಲರ ಮುಖಾಂತರ ನಡೆದವು.
ಅಪೊಸ್ತಲರ ಕೃತ್ಯಗ 2 : 44 (IRVKN)
ನಂಬಿದವರೆಲ್ಲರು ಒಗ್ಗಟ್ಟಾಗಿದ್ದು, ತಮ್ಮಲ್ಲಿರುವುದೆಲ್ಲವನ್ನೂ ಸಂತೋಷವಾಗಿ ಹಂಚಿಕೊಂಡು ಅನುಭೋಗಿಸುತ್ತಿದ್ದರು.
ಅಪೊಸ್ತಲರ ಕೃತ್ಯಗ 2 : 45 (IRVKN)
ತಮ್ಮತಮ್ಮ ಚರಸ್ಥಿರಸೊತ್ತುಗಳನ್ನು ಮಾರಿ ಬಂದ ಹಣವನ್ನು ಎಲ್ಲರಿಗೂ ಅವರವರಿಗೆ ಅಗತ್ಯವಿದ್ದ ಹಾಗೆ ಹಂಚಿಕೊಳ್ಳುತ್ತಾ ಇದ್ದರು.
ಅಪೊಸ್ತಲರ ಕೃತ್ಯಗ 2 : 46 (IRVKN)
ಅವರು ಪ್ರತಿದಿನ ಏಕಮನಸ್ಸಿನಿಂದ ದೇವಾಲಯದಲ್ಲಿ ಸೇರಿಬರುತ್ತಾ, ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ, ಸರಳ ಸಹೃದಯದಿಂದಲೂ ಸಹಭೋಜನ ಮಾಡುತ್ತಾ ಇದ್ದರು.
ಅಪೊಸ್ತಲರ ಕೃತ್ಯಗ 2 : 47 (IRVKN)
ಅವರೆಲ್ಲರೂ ದೇವರನ್ನು ಕೊಂಡಾಡುವವರಾಗಿಯೂ, ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ಪ್ರತಿದಿನ ಅವರೊಂದಿಗೆ ಸಭೆಗೆ ಸೇರಿಸುತ್ತಿದ್ದನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47

BG:

Opacity:

Color:


Size:


Font: