ಅಪೊಸ್ತಲರ ಕೃತ್ಯಗ 20 : 1 (IRVKN)
ಮಕೆದೋನ್ಯ ಹಾಗು ಗ್ರೀಸ್ ದೇಶದಲ್ಲಿ ಪೌಲನ ಸೇವೆ ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ಜೊತೆಗೆ ಕರೆಯಿಸಿ ಧೈರ್ಯಗೊಳಿಸಿ ಅವರ ಅಪ್ಪಣೆ ತೆಗೆದುಕೊಂಡು ಮಕೆದೋನ್ಯಕ್ಕೆ ಹೊರಟನು.
ಅಪೊಸ್ತಲರ ಕೃತ್ಯಗ 20 : 2 (IRVKN)
ಆ ಸೀಮೆಯಲ್ಲಿ ಸಂಚಾರಮಾಡಿ ಅಲ್ಲಿಯವರನ್ನು ಅನೇಕ ಸಂದೇಶಗಳಿಂದ ಧೈರ್ಯಪಡಿಸಿ ಗ್ರೀಸ್ ದೇಶಕ್ಕೆ ಬಂದನು.
ಅಪೊಸ್ತಲರ ಕೃತ್ಯಗ 20 : 3 (IRVKN)
ಅಲ್ಲಿ ಮೂರು ತಿಂಗಳು ಕಳೆದ ನಂತರ ಸಿರಿಯ ದೇಶಕ್ಕೆ ಸಮುದ್ರಮಾರ್ಗವಾಗಿ ಹೋಗಬೇಕೆಂದಿದ್ದಾಗ ಅವನಿಗೆ ವಿರುದ್ಧವಾಗಿ ಯೆಹೂದ್ಯರು ಒಳಸಂಚುಮಾಡಿದ್ದು ಅವನಿಗೆ ತಿಳಿದು ಬಂದ್ದುದರಿಂದ ಅವನು ಮಕೆದೋನ್ಯದ ಮಾರ್ಗವಾಗಿ ಹಿಂತಿರುಗಿ ಹೋಗುವುದಕ್ಕೆ ತೀರ್ಮಾನಿಸಿದನು.
ಅಪೊಸ್ತಲರ ಕೃತ್ಯಗ 20 : 4 (IRVKN)
ಪುರ್ರನ ಮಗನಾದ ಬೆರೋಯ ಪಟ್ಟಣದ ಸೋಪತ್ರನೂ, ಥೆಸಲೋನಿಕದವರಲ್ಲಿ ಅರಿಸ್ತಾರ್ಕನೂ, ಸೆಕುಂದನೂ ದೆರ್ಬೆಪಟ್ಟಣದ ಗಾಯನೂ, ತಿಮೊಥೆಯನೂ, ಆಸ್ಯಸೀಮೆಯವರಲ್ಲಿ ತುಖಿಕನೂ, ತ್ರೊಫಿಮನೂ, ಆಸ್ಯಸೀಮೆಯ ವರೆಗೂ ಅವನ ಜೊತೆಯಲ್ಲಿ ಹೋದರು.
ಅಪೊಸ್ತಲರ ಕೃತ್ಯಗ 20 : 5 (IRVKN)
ಅವರು ಮುಂಚಿತವಾಗಿ ಹೋಗಿ ನಮಗೋಸ್ಕರ ತ್ರೋವದಲ್ಲಿ ಕಾಯುತ್ತಿದ್ದರು
ಅಪೊಸ್ತಲರ ಕೃತ್ಯಗ 20 : 6 (IRVKN)
ಹುಳಿಯಿಲ್ಲದ ರೊಟ್ಟಿಯ* ಪಸ್ಕ ಹಬ್ಬ ಹಬ್ಬದ ದಿನಗಳನ್ನು ಪೂರೈಸಿದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿನಗಳಲ್ಲಿ ತ್ರೋವದಲ್ಲಿ ಬಂದು ಅವರನ್ನು ಸೇರಿದೆವು. ಅಲ್ಲಿ ಏಳು ದಿನಗಳ ಕಾಲ ತಂಗಿದ್ದೆವು.
ಅಪೊಸ್ತಲರ ಕೃತ್ಯಗ 20 : 7 (IRVKN)
ವಾರದ ಮೊದಲನೆಯ ದಿನದಲ್ಲಿ ನಾವು ರೊಟ್ಟಿ ಮುರಿಯುವ ನಿಯಮಕ್ಕಾಗಿ ಸೇರಿಬಂದಾಗ ಪೌಲನು ಅಲ್ಲಿ ನೆರೆದಂತಹ ವಿಶ್ವಾಸಿಗಳಿಗೆ ಬೋಧನೆಮಾಡಿದನು. ಮರುದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಬೋಧಿಸುತ್ತಾ ಮಧ್ಯರಾತ್ರಿಯವರೆಗೂ ಉಪನ್ಯಾಸವನ್ನು ನೀಡಿದನು.
ಅಪೊಸ್ತಲರ ಕೃತ್ಯಗ 20 : 8 (IRVKN)
ನಾವು ಕೂಡಿದ್ದ ಮೇಲಂತಸ್ತಿನಲ್ಲಿ ಅನೇಕ ದೀಪಗಳಿದ್ದವು.
ಅಪೊಸ್ತಲರ ಕೃತ್ಯಗ 20 : 9 (IRVKN)
ಯೂತಿಖನೆಂಬ ಒಬ್ಬ ಯೌವನಸ್ಥನು ಕಿಟಿಕಿಯ ಹೊಸ್ತಿಲಿನಲ್ಲಿ ಕುಳಿತುಕೊಂಡು ಗಾಢನಿದ್ರೆಯಿಂದ ತೂಕಡಿಸುತ್ತಿದ್ದನು. ಪೌಲನು ಇನ್ನೂ ಬೋಧನೆ ಮಾಡುತ್ತಾ ಇದ್ದಾಗ ಆ ಯೌವನಸ್ಥನು ಗಾಢವಾದ ನಿದ್ರೆಯಿಂದ ತೂಕಡಿಸಿ ಮೂರನೆಯ ಅಂತಸ್ತಿನಿಂದ ಕೆಳಕ್ಕೆ ಬಿದ್ದುಬಿಟ್ಟನು; ಅವನನ್ನು ಎಬ್ಬಿಸಲು ಹೋದಾಗ ಅವನು ಸತ್ತುಹೋಗಿದ್ದನು.
ಅಪೊಸ್ತಲರ ಕೃತ್ಯಗ 20 : 10 (IRVKN)
ಆದರೆ ಪೌಲನು ಇಳಿದು ಹೋಗಿ ಅವನ ಮೇಲೆ ಬಿದ್ದು ತಬ್ಬಿಕೊಂಡು; “ಗೋಳಾಡಬೇಡಿರಿ, ಅವನು ಜೀವಂತವಾಗಿದ್ದಾನೆ” ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 20 : 11 (IRVKN)
ಆಗ ಅವನು ಮೇಲಕ್ಕೆ ಹೋಗಿ ರೊಟ್ಟಿ ಮುರಿದು ಊಟಮಾಡಿ ಬಹಳ ಹೊತ್ತು ಬೆಳಗಾಗುವ ತನಕ ಮಾತನಾಡಿ ಹೊರಟುಹೋದನು.
ಅಪೊಸ್ತಲರ ಕೃತ್ಯಗ 20 : 12 (IRVKN)
ಅವರು ಜೀವಿತನಾದ ಆ ಹುಡುಗನನ್ನು ಕರೆದುಕೊಂಡು ಬರಲು ಅವರಿಗೆ ಬಹಳ ಸಮಾಧಾನವಾಯಿತು.
ಅಪೊಸ್ತಲರ ಕೃತ್ಯಗ 20 : 13 (IRVKN)
ಪೌಲನು ಮಿಲೇತ ದ್ವೀಪಕ್ಕೆ ಹೋದದ್ದು ನಾವು ಮೊದಲೇ ಅಲ್ಲಿಗೆ ಹೋಗಿ ಅಸ್ಸೊಸಿನಲ್ಲಿ ಪೌಲನನ್ನು ತಮ್ಮೊಂದಿಗೆ ಹತ್ತಿಸಿಕೊಳ್ಳಬೇಕೆಂದು ಸಮುದ್ರ ಪ್ರಯಾಣಮಾಡಿದೆವು. ಪೌಲನು ಹಾಗೆಯೇ ನಮಗೆ ಅಪ್ಪಣೆ ಮಾಡಿ ತಾನು ಕಾಲುನಡಿಗೆಯಾಗಿ ಹೋಗಬೇಕೆಂದು ಮನಸ್ಸು ಮಾಡಿದ್ದನು.
ಅಪೊಸ್ತಲರ ಕೃತ್ಯಗ 20 : 14 (IRVKN)
ಅಸ್ಸೊಸಿನಲ್ಲಿ ಅವನು ನಮ್ಮನ್ನು ಕೂಡಿಕೊಂಡಾಗ ನಾವು ಅವನನ್ನು ಹಡಗಿನಲ್ಲಿ ಸೇರಿಸಿಕೊಂಡು ಮಿತಿಲೇನೆ ಪಟ್ಟಣಕ್ಕೆ ಹೊರಟೆವು.
ಅಪೊಸ್ತಲರ ಕೃತ್ಯಗ 20 : 15 (IRVKN)
ಅಲ್ಲಿಂದ ಹೊರಟು ಮರುದಿನ ಖೀಯೊಸ್ ದ್ವೀಪಕ್ಕೆ ಎದುರಾಗಿ ಬಂದು ಅದರ ಮರುದಿನ ಸಾಮೊಸಿನ ಹತ್ತಿರ ಬಂದೆವು. ಮರುದಿನ ಮಿಲೇತಕ್ಕೆ ಸೇರಿದೆವು.
ಅಪೊಸ್ತಲರ ಕೃತ್ಯಗ 20 : 16 (IRVKN)
ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮ ದಿನದ ಹಬ್ಬಕ್ಕೆ ಯೆರೂಸಲೇಮಿನಲ್ಲಿರಬೇಕೆಂದು ಅವಸರಪಡುತ್ತಾ ಇದ್ದುದರಿಂದ ಆಸ್ಯಸೀಮೆಯಲ್ಲಿ ಕಾಲವನ್ನು ಕಳೆಯುವುದಕ್ಕೆ ಮನಸ್ಸಿಲ್ಲದೆ ಎಫೆಸ ಪಟ್ಟಣವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿಕೊಂಡಿದ್ದನು.
ಅಪೊಸ್ತಲರ ಕೃತ್ಯಗ 20 : 17 (IRVKN)
ಪೌಲನು ಎಫೆಸ ಸಭೆಯ ಹಿರಿಯರಿಗೆ ಹೇಳಿದ ಕೊನೆಯ ಮಾತು ಅವನು ಮಿಲೇತದಿಂದ ಎಫೆಸಕ್ಕೆ ಹೇಳಿಕಳುಹಿಸಿ ಅಲ್ಲಿಯ ಸಭೆಯ ಹಿರಿಯರನ್ನು ಕರಿಸಿದನು.
ಅಪೊಸ್ತಲರ ಕೃತ್ಯಗ 20 : 18 (IRVKN)
ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇನಂದರೆ; “ನಾನು ಆಸ್ಯಸೀಮೆಯಲ್ಲಿ ಕಾಲಿಟ್ಟ ಮೊದಲನೆಯ ದಿನದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲಗಳಲ್ಲಿಯೂ ಹೇಗೆ ನಡೆದುಕೊಂಡೆನೆಂಬುದನ್ನು ನೀವೇ ಬಲ್ಲಿರಿ.
ಅಪೊಸ್ತಲರ ಕೃತ್ಯಗ 20 : 19 (IRVKN)
ಯೆಹೂದ್ಯರ ಒಳಸಂಚುಗಳಿಂದ ಸಂಭವಿಸಿದ ಸಂಕಷ್ಟಗಳಲ್ಲಿ, ನಾನು ಅತಿ ನಮ್ರತೆಯಿಂದಲೂ, ಕಣ್ಣೀರಿನಿಂದಲೂ ಕರ್ತನ ಸೇವೆ ಮಾಡುತ್ತಿದ್ದೇನೆ.
ಅಪೊಸ್ತಲರ ಕೃತ್ಯಗ 20 : 20 (IRVKN)
ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳುವುದಕ್ಕೂ, ಸಭೆಯಲ್ಲಿಯೂ, ಮನೆಮನೆಯಲ್ಲಿಯೂ, ಉಪದೇಶಿಸುವದಕ್ಕೂ ಹಿಂತೆಗೆಯದೆ
ಅಪೊಸ್ತಲರ ಕೃತ್ಯಗ 20 : 21 (IRVKN)
ಯೆಹೂದ್ಯರಿಗೂ, ಗ್ರೀಕರಿಗೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ದೃಢವಾಗಿ ಬೋಧಿಸುವವನಾಗಿದ್ದೆನು, ಇದೆಲ್ಲಾ ನಿಮಗೇ ತಿಳಿದಿದೆ.
ಅಪೊಸ್ತಲರ ಕೃತ್ಯಗ 20 : 22 (IRVKN)
ಇಗೋ, ನಾನು ಈಗ ಪವಿತ್ರಾತ್ಮನ ನಿರ್ಬಂಧವುಳ್ಳವನಾಗಿ ಯೆರೂಸಲೇಮಿಗೆ ಹೋಗುತ್ತಿದ್ದೇನೆ. ಅಲ್ಲಿ ನನಗೆ ಏನು ಸಂಭವಿಸುವುದೋ ನಾನರಿಯೆನು.
ಅಪೊಸ್ತಲರ ಕೃತ್ಯಗ 20 : 23 (IRVKN)
ನಿನಗೆ ಬೇಡಿಗಳೂ, ಹಿಂಸೆಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಎಲ್ಲಾ ಪಟ್ಟಣಗಳಲ್ಲಿಯೂ ನನಗೆ ಎಚ್ಚರಿಕೆ ನೀಡಿದ್ದಾನೆ ಎಂಬುದನ್ನು ಬಲ್ಲೆನು.
ಅಪೊಸ್ತಲರ ಕೃತ್ಯಗ 20 : 24 (IRVKN)
ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ.
ಅಪೊಸ್ತಲರ ಕೃತ್ಯಗ 20 : 25 (IRVKN)
ಇಗೋ, ಇಷ್ಟು ದಿನ ನಿಮ್ಮಲ್ಲಿ ಸಂಚಾರಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ನೋಡುವುದಿಲ್ಲವೆಂದು ಬಲ್ಲೆನು.
ಅಪೊಸ್ತಲರ ಕೃತ್ಯಗ 20 : 26 (IRVKN)
ಆದಕಾರಣ ನಾನು ಈ ಹೊತ್ತು ಖಂಡಿತವಾಗಿ ಹೇಳುತ್ತೇನೆ, ನಿಮ್ಮಲ್ಲಿ ಯಾರಾದರೂ ನಾಶವಾದರೆ ಅದು ನನ್ನ ತಪ್ಪಿನಿಂದಲ್ಲ.
ಅಪೊಸ್ತಲರ ಕೃತ್ಯಗ 20 : 27 (IRVKN)
ಏಕೆಂದರೆ ಒಂದನ್ನೂ ಮರೆಮಾಡದೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ತಿಳಿಸಿದ್ದೇನೆ.
ಅಪೊಸ್ತಲರ ಕೃತ್ಯಗ 20 : 28 (IRVKN)
ಕರ್ತನು† ಕೆಲವು ಪ್ರತಿಗಳಲ್ಲಿ ‘ದೇವರು’ ಎಂದಿದೆ ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಗುಂಪಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
ಅಪೊಸ್ತಲರ ಕೃತ್ಯಗ 20 : 29 (IRVKN)
ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವುದೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸುವುದಿಲ್ಲ.
ಅಪೊಸ್ತಲರ ಕೃತ್ಯಗ 20 : 30 (IRVKN)
ಇದಲ್ಲದೆ ನಿಮ್ಮಲ್ಲೇ ಕೆಲವರು ಎದ್ದು ಅಸತ್ಯವಾದ ಬೋಧನೆಗಳನ್ನು ಮಾಡಿ ಶಿಷ್ಯರನ್ನು ತಮ್ಮ ಕಡೆಗೆ ಎಳೆದುಕೊಳ್ಳುವರು.
ಅಪೊಸ್ತಲರ ಕೃತ್ಯಗ 20 : 31 (IRVKN)
ಆದಕಾರಣ ನಾನು ಕಣ್ಣೀರು ಸುರಿಸುತ್ತಾ ಮೂರು ವರ್ಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿ ಹೇಳಿದೆನೆಂಬುದನ್ನು ನೀವು ನೆನಪಿಸಿಕೊಂಡು ಎಚ್ಚರವಾಗಿರಿ.
ಅಪೊಸ್ತಲರ ಕೃತ್ಯಗ 20 : 32 (IRVKN)
ನಾನೀಗ ನಿಮ್ಮನ್ನು ದೇವರಿಗೂ, ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ. ಆತನು ನಿಮ್ಮಲ್ಲಿ ಭಕ್ತಿವೃದ್ಧಿಯನ್ನುಂಟುಮಾಡುವುದಕ್ಕೂ, ಪರಿಶುದ್ಧರೊಂದಿಗೆ ನಿಮಗೆ ಹಕ್ಕನ್ನು ಅನುಗ್ರಹಿಸುವುದಕ್ಕೆ ಶಕ್ತನಾಗಿದ್ದಾನೆ.
ಅಪೊಸ್ತಲರ ಕೃತ್ಯಗ 20 : 33 (IRVKN)
ನಾನು ಯಾರ ಬೆಳ್ಳಿಬಂಗಾರವನ್ನಾಗಲಿ, ಉಡಿಗೆತೊಡಿಗೆಯನ್ನಾಗಲಿ ಬಯಸಲಿಲ್ಲ.
ಅಪೊಸ್ತಲರ ಕೃತ್ಯಗ 20 : 34 (IRVKN)
ಈ ಕೈಗಳಿಂದಲೇ ಕೆಲಸಮಾಡಿ, ನನ್ನ ಕೊರತೆಗಳನ್ನೂ, ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನು ನೀಗಿಸಿದ್ದನ್ನು ನೀವೇ ಬಲ್ಲಿರಿ.
ಅಪೊಸ್ತಲರ ಕೃತ್ಯಗ 20 : 35 (IRVKN)
ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವು ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು; ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಭಾಗ್ಯವೆಂಬುದಾಗಿ’ ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು” ಅಂದನು.
ಅಪೊಸ್ತಲರ ಕೃತ್ಯಗ 20 : 36 (IRVKN)
ಈ ಮಾತುಗಳನ್ನು ಅವನು ಹೇಳಿದ ಮೇಲೆ ಮೊಣಕಾಲೂರಿಕೊಂಡು ಅವರೆಲ್ಲರ ಸಂಗಡ ಪ್ರಾರ್ಥನೆಮಾಡಿದನು.
ಅಪೊಸ್ತಲರ ಕೃತ್ಯಗ 20 : 37 (IRVKN)
ಬಳಿಕ ಪೌಲನು; “ನೀವು ನನ್ನ ಮುಖವನ್ನು ಇನ್ನೆಂದೂ ಕಾಣಲಾರಿರಿ” ಅನ್ನಲು, ಅವರೆಲ್ಲರು ವ್ಯಥೆಪಟ್ಟು, ದುಃಖದಿಂದ ಅಳುತ್ತಾ, ಅವನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು.
ಅಪೊಸ್ತಲರ ಕೃತ್ಯಗ 20 : 38 (IRVKN)
ತರುವಾಯ ಅವರು ಹಡಗಿನವರೆಗೆ ಅವನ ಸಂಗಡ ಹೋಗಿ ಅವನನ್ನು ಬೀಳ್ಕೊಟ್ಟರು.
❮
❯