ಅಪೊಸ್ತಲರ ಕೃತ್ಯಗ 22 : 1 (IRVKN)
“ಸಹೋದರರೇ, ತಂದೆಗಳೇ, ಈಗ ನಾನು ನೀಡುವ ಸಮರ್ಥನೆಯ ಮಾತನ್ನು ಕೇಳಿರಿ” ಎಂದು ಹೇಳಿದನು. [PE][PS]
ಅಪೊಸ್ತಲರ ಕೃತ್ಯಗ 22 : 2 (IRVKN)
ಅವನು ತಮ್ಮ ಸಂಗಡ ಇಬ್ರಿಯ ಭಾಷೆಯಲ್ಲಿ ಮಾತನಾಡುವುದನ್ನು ಕೇಳಿ ಅವರು ಮತ್ತಷ್ಟು ನಿಶ್ಯಬ್ದವಾದರು. ಆಗ ಅವನು ಹೇಳಿದ್ದೇನಂದರೆ; [PE][PS]
ಅಪೊಸ್ತಲರ ಕೃತ್ಯಗ 22 : 3 (IRVKN)
“ನಾನು ಯೆಹೂದ್ಯನು, ಕಿಲಿಕ್ಯದ ತಾರ್ಸದಲ್ಲಿ ಹುಟ್ಟಿದವನು, ಆದರೆ ಈ ಪಟ್ಟಣದಲ್ಲೇ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ, ನಮ್ಮ ಪೂರ್ವಿಕರ ಧರ್ಮಶಾಸ್ತ್ರದಲ್ಲಿ ಪೂರ್ಣ ಶಿಕ್ಷಣವನ್ನು ಪಡೆದವನು; ನೀವೆಲ್ಲರೂ ಈಹೊತ್ತು ದೇವರ ವಿಷಯದಲ್ಲಿ ಅಭಿಮಾನಿಗಳಾಗಿರುವಂತೆಯೇ, ನಾನೂ ಅಭಿಮಾನಿಯಾಗಿದ್ದೆನು.
ಅಪೊಸ್ತಲರ ಕೃತ್ಯಗ 22 : 4 (IRVKN)
ಈ ಮಾರ್ಗದವರನ್ನು ಹಿಂಸಿಸುವವನಾಗಿ ಗಂಡಸರಿಗೂ, ಹೆಂಗಸರಿಗೂ ಬೇಡಿಹಾಕಿಸುತ್ತಾ, ಅವರನ್ನು ಸೆರೆಮನೆಗಳಿಗೆ ಹಾಕಿಸುತ್ತಾ ಇದ್ದೆನು, ಕೊಲೆ ಮಾಡಲಿಕ್ಕೂ ಹಿಂಜರಿಯದೆ ಹಿಂಸಿಸುತ್ತಿದ್ದೆನು.
ಅಪೊಸ್ತಲರ ಕೃತ್ಯಗ 22 : 5 (IRVKN)
ಈ ವಿಷಯದಲ್ಲಿ ಮಹಾಯಾಜಕನೂ, ಹಿರೀಸಭೆಯರೆಲ್ಲರೂ ಸಾಕ್ಷಿಗಳಾಗಿದ್ದಾರೆ; ಅವರಿಂದಲೇ ನಾನು ದಮಸ್ಕದಲ್ಲಿದ್ದ ಸಹೋದರರಿಗೆ ಪತ್ರಗಳನ್ನು ತೆಗೆದುಕೊಂಡು, ಅಲ್ಲಿಗೆ ಹೋದವರನ್ನೂ ಬೇಡಿಗಳಿಂದ ಬಂಧಿಸಿ ದಂಡನೆಗಾಗಿ ಯೆರೂಸಲೇಮಿಗೆ ತರಬೇಕೆಂದು ಹೊರಟವನು. [PE][PS]
ಅಪೊಸ್ತಲರ ಕೃತ್ಯಗ 22 : 6 (IRVKN)
“ನಾನು ಪ್ರಯಾಣಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬಂದಾಗ ಸುಮಾರು ಮಧ್ಯಾಹ್ನದಲ್ಲಿ ಫಕ್ಕನೆ ಆಕಾಶದೊಳಗಿಂದ ಒಂದು ದೊಡ್ಡ ಬೆಳಕು ನನ್ನ ಸುತ್ತಲು ಹೊಳೆಯಿತು, ನಾನು ನೆಲಕ್ಕೆ ಬಿದ್ದೆನು.
ಅಪೊಸ್ತಲರ ಕೃತ್ಯಗ 22 : 7 (IRVKN)
ಆಗ; ‘ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ’? ಎಂದು ನನಗೆ ಹೇಳಿದ ಒಂದು ಶಬ್ದವನ್ನು ಕೇಳಿದೆನು. [PE][PS]
ಅಪೊಸ್ತಲರ ಕೃತ್ಯಗ 22 : 8 (IRVKN)
“ ‘ಅದಕ್ಕೆ ನಾನು; ಕರ್ತನೇ, ನೀನಾರು?’ ಎಂದು ಕೇಳಲು ಆತನು; ‘ನೀನು ಹಿಂಸೆಪಡಿಸುವ ನಜರೇತಿನ ಯೇಸುವೇ ನಾನು’ ಎಂದು ನನಗೆ ಹೇಳಿದನು.
ಅಪೊಸ್ತಲರ ಕೃತ್ಯಗ 22 : 9 (IRVKN)
ನನ್ನ ಜೊತೆಯಲ್ಲಿದ್ದವರು ಬೆಳಕನ್ನು ಕಂಡರೇ ಹೊರತು, ನನ್ನ ಸಂಗಡ ಮಾತನಾಡಿದಾತನ ಶಬ್ದವನ್ನು ಕೇಳಲಿಲ್ಲ. [PE][PS]
ಅಪೊಸ್ತಲರ ಕೃತ್ಯಗ 22 : 10 (IRVKN)
“ಆಗ ನಾನು; ‘ಕರ್ತನೇ, ನಾನೇನು ಮಾಡಬೇಕು’? ಎಂದು ಕೇಳಲು ಕರ್ತನು ನನಗೆ; ‘ನೀನೆದ್ದು ದಮಸ್ಕದೊಳಕ್ಕೆ ಹೋಗು, ಮಾಡುವುದಕ್ಕೆ ನಿನಗೆ ನೇಮಿಸಿರುವುದನ್ನೆಲ್ಲಾ ಅಲ್ಲಿ ತಿಳಿಸಲ್ಪಡುವುದು’ ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 22 : 11 (IRVKN)
ಆ ಬೆಳಕಿನ ಮಹಿಮೆಯಿಂದ ನನಗೆ ಕಣ್ಣುಕಾಣದೆ ಇದ್ದುದರಿಂದ ನನ್ನ ಜೊತೆಯಲ್ಲಿದ್ದವರು, ನನ್ನನ್ನು ಕೈಹಿಡಿದುಕೊಂಡು ದಮಸ್ಕದೊಳಕ್ಕೆ ಕರೆದುಕೊಂಡುಹೋದರು. [PE][PS]
ಅಪೊಸ್ತಲರ ಕೃತ್ಯಗ 22 : 12 (IRVKN)
“ಅಲ್ಲಿ ಧರ್ಮಶಾಸ್ತ್ರಕ್ಕೆ ಸರಿಯಾಗಿ ನಡೆಯುವ ದೈವಭಕ್ತನೂ, ಆ ಸ್ಥಳದ ಯೆಹೂದ್ಯರೆಲ್ಲರಿಂದ
ಅಪೊಸ್ತಲರ ಕೃತ್ಯಗ 22 : 13 (IRVKN)
ಒಳ್ಳೆಯವನೆಂದು ಹೆಸರು ಹೊಂದಿದವನೂ ಆಗಿದ್ದ ಅನನೀಯನೆಂಬವನು ನನ್ನ ಬಳಿಗೆ ಬಂದು, ನಿಂತು; ‘ಸಹೋದರನಾದ ಸೌಲನೇ, ನಿನ್ನ ದೃಷ್ಟಿಯನ್ನು ಹೊಂದಿಕೋ’ ಎಂದು ಹೇಳಿದನು. ಹೇಳಿದ ತಕ್ಷಣವೇ ನನಗೆ ಕಣ್ಣು ಕಾಣಿಸಿತು, ನಾನು ಅವನನ್ನು ನೋಡಿದೆನು. [PE][PS]
ಅಪೊಸ್ತಲರ ಕೃತ್ಯಗ 22 : 14 (IRVKN)
“ಆಗ ಅವನು; ‘ನಮ್ಮ ಪೂರ್ವಿಕರ ದೇವರು, ತನ್ನ ಚಿತ್ತವನ್ನು ನೀನು ತಿಳಿದುಕೊಳ್ಳುವುದಕ್ಕೂ, ಆ ನೀತಿವಂತನನ್ನು ನೋಡುವುದಕ್ಕೂ, ಆತನ ಬಾಯಿಂದ ಬಂದ ಮಾತನ್ನು ಕೇಳುವುದಕ್ಕೂ ನಿನ್ನನ್ನು ನೇಮಿಸಿದ್ದಾನೆ.
ಅಪೊಸ್ತಲರ ಕೃತ್ಯಗ 22 : 15 (IRVKN)
ನೀನು ಕಂಡು, ಕೇಳಿದ ವಿಷಯದಲ್ಲಿ ಎಲ್ಲಾ ಮನುಷ್ಯರ ಮುಂದೆ ಆತನಿಗೆ ಸಾಕ್ಷಿಯಾಗಿರಬೇಕು.
ಅಪೊಸ್ತಲರ ಕೃತ್ಯಗ 22 : 16 (IRVKN)
ಈಗ ನೀನೇಕೆ ತಡಮಾಡುತ್ತೀ? ಎದ್ದು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೋ’ ಅಂದನು. [PE][PS]
ಅಪೊಸ್ತಲರ ಕೃತ್ಯಗ 22 : 17 (IRVKN)
“ಅನಂತರದಲ್ಲಿ ನಾನು ಯೆರೂಸಲೇಮಿಗೆ ಹಿಂತಿರುಗಿ ಬಂದು ದೇವಾಲಯದೊಳಗೆ ಪ್ರಾರ್ಥನೆಮಾಡುತ್ತಿದ್ದಾಗ, ಧ್ಯಾನಪರವಶನಾಗಿ ಅವನನ್ನು ಕಂಡೆನು.
ಅಪೊಸ್ತಲರ ಕೃತ್ಯಗ 22 : 18 (IRVKN)
ಆತನು; ‘ನೀನು ತ್ವರೆಪಟ್ಟು ಬೇಗನೆ ಯೆರೂಸಲೇಮಿನಿಂದ ಹೊರಟುಹೋಗು, ನನ್ನ ವಿಷಯದಲ್ಲಿ, ನೀನು ಹೇಳುವ ಸಾಕ್ಷಿಯನ್ನು ಅವರು ಅಂಗೀಕರಿಸುವುದಿಲ್ಲ’ ಅಂದನು. [PE][PS]
ಅಪೊಸ್ತಲರ ಕೃತ್ಯಗ 22 : 19 (IRVKN)
“ಅದಕ್ಕೆ ನಾನು; ‘ಕರ್ತನೇ, ಎಲ್ಲಾ ಸಭಾಮಂದಿರಗಳಲ್ಲಿ, ನಿನ್ನ ಮೇಲೆ ನಂಬಿಕೆಯಿಟ್ಟವರನ್ನು, ನಾನು ಸೆರೆಮನೆಯಲ್ಲಿ ಹಾಕಿಸುತ್ತಾ, ಹೊಡಿಸುತ್ತಾ ಇದ್ದೆನೆಂಬುದನ್ನು,
ಅಪೊಸ್ತಲರ ಕೃತ್ಯಗ 22 : 20 (IRVKN)
ಮತ್ತು ನಿನ್ನ ಸಾಕ್ಷಿಯಾದ ಸ್ತೆಫನನ ರಕ್ತವು ಚೆಲ್ಲಿಸಲ್ಪಟ್ಟಾಗ, ನಾನೂ ಹತ್ತಿರ ನಿಂತು ಅದನ್ನು ಸಮ್ಮತಿಸಿ, ಅವನನ್ನು ಕೊಂದವರ ವಸ್ತ್ರಗಳನ್ನು ಕಾಯುತ್ತಿದ್ದೆನಲ್ಲಾ’ ಎಂಬುದು ಅವರೇ ಬಲ್ಲವರಾಗಿದ್ದಾರೆ.
ಅಪೊಸ್ತಲರ ಕೃತ್ಯಗ 22 : 21 (IRVKN)
ಆದರೆ ಆತನು; ‘ನೀನು ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುತ್ತೇನೆಂದು’ ” ಹೇಳಿದನು. [PS]
ಅಪೊಸ್ತಲರ ಕೃತ್ಯಗ 22 : 22 (IRVKN)
{ಪೌಲನ ರೋಮನ್ ಪೌರತ್ವ ರಕ್ಷಣೆ} [PS] ಅಲ್ಲಿಯವರೆಗೆ ಪೌಲನ ಮಾತುಗಳನ್ನು ಅವರು ಕೇಳಿಸಿಕೊಳ್ಳುತ್ತಿದ್ದರು. ಆನಂತರ; “ಇಂಥವನನ್ನು ಭೂಮಿಯಿಂದ ತೆಗೆದುಹಾಕಿಬಿಡು; ಇವನು ಬದುಕುವುದು ಯುಕ್ತವಲ್ಲವೆಂದು” ಕೂಗಿ ಹೇಳಿದರು.
ಅಪೊಸ್ತಲರ ಕೃತ್ಯಗ 22 : 23 (IRVKN)
ಅವರು ಕೂಗುತ್ತಾ, ತಮ್ಮ ವಸ್ತ್ರಗಳನ್ನು ಹರಿದುಕೊಳ್ಳುತ್ತಾ, ಧೂಳನ್ನು ತೂರುತ್ತಾ ಇರಲಾಗಿ,
ಅಪೊಸ್ತಲರ ಕೃತ್ಯಗ 22 : 24 (IRVKN)
ಯಾವ ಕಾರಣದಿಂದ ಹೀಗೆ ಅವನಿಗೆ ವಿರುದ್ಧವಾಗಿ ಕೂಗಾಡುತ್ತಾರೆಂಬುದನ್ನು ಸಹಸ್ರಾಧಿಪತಿಯು ತಿಳಿದುಕೊಳ್ಳುವುದಕ್ಕಾಗಿ ಅವನನ್ನು ಕೋಟೆಯೊಳಗೆ ತಂದು, ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಆಜ್ಞಾಪಿಸಿದನು.
ಅಪೊಸ್ತಲರ ಕೃತ್ಯಗ 22 : 25 (IRVKN)
ಅವರು ಪೌಲನನ್ನು ಬಾರುಗಳಿಂದ ಕಟ್ಟುವಾಗ ಅವನು ತನ್ನ ಹತ್ತಿರ ನಿಂತಿದ್ದ ಶತಾಧಿಪತಿಯನ್ನು; “ರೋಮಾಪುರದ ಹಕ್ಕುದಾರನಾದ ಮನುಷ್ಯನನ್ನು ನ್ಯಾಯವಿಚಾರಣೆಮಾಡದೆ, ಕೊರಡೆಗಳಿಂದ ಹೊಡಿಸುವುದು ನಿಮಗೆ ನ್ಯಾಯವೋ?” ಎಂದು ಕೇಳಿದನು. [PE][PS]
ಅಪೊಸ್ತಲರ ಕೃತ್ಯಗ 22 : 26 (IRVKN)
ಶತಾಧಿಪತಿಯು ಆ ಮಾತನ್ನು ಕೇಳಿ ಸಹಸ್ರಾಧಿಪತಿಯ ಬಳಿಗೆ ಹೋಗಿ; “ನೀನು ಏನು ಮಾಡಬೇಕೆಂದಿದ್ದೀ? ಈ ಮನುಷ್ಯನು ರೋಮಾಪುರದ ಹಕ್ಕುದಾರನು” ಎಂದು ಹೇಳಲು,
ಅಪೊಸ್ತಲರ ಕೃತ್ಯಗ 22 : 27 (IRVKN)
ಸಹಸ್ರಾಧಿಪತಿಯು ಪೌಲನ ಹತ್ತಿರಕ್ಕೆ ಬಂದು; “ನೀನು ರೋಮಾಪುರದವರ ಹಕ್ಕುಳ್ಳವನೇನು? ನನಗೆ ಹೇಳು” ಎಂದು ಅವನನ್ನು ಕೇಳಿದನು. ಅವನು, “ಹೌದು” ಅಂದನು.
ಅಪೊಸ್ತಲರ ಕೃತ್ಯಗ 22 : 28 (IRVKN)
ಅದಕ್ಕೆ ಸಹಸ್ರಾಧಿಪತಿಯು; “ನಾನು ಬಹಳ ಹಣಕೊಟ್ಟು ಆ ಹಕ್ಕನ್ನು ಕೊಂಡುಕೊಂಡೆನು” ಅನ್ನಲು ಪೌಲನು; “ನಾನಾದರೋ ಹಕ್ಕುದಾರನಾಗಿ ಹುಟ್ಟಿದವನು” ಅಂದನು.
ಅಪೊಸ್ತಲರ ಕೃತ್ಯಗ 22 : 29 (IRVKN)
ಅವನನ್ನು ಹೊಡೆದು ವಿಚಾರಿಸುವುದಕ್ಕೆ ಬಂದವರು ಕೂಡಲೆ ಅವನನ್ನು ಬಿಟ್ಟುಬಿಟ್ಟರು. ಅದಲ್ಲದೆ ಅವನನ್ನು ರೋಮಾಪುರದ ಹಕ್ಕುದಾರನೆಂದು ಸಹಸ್ರಾಧಿಪತಿಗೆ ತಿಳಿದುಬಂದಾಗ ತಾನು ಅವನನ್ನು ಕಟ್ಟಿಸಿದ್ದರಿಂದ ಅವನಿಗೂ ಭಯಹಿಡಿಯಿತು. [PS]
ಅಪೊಸ್ತಲರ ಕೃತ್ಯಗ 22 : 30 (IRVKN)
{ಪೌಲನು ಹಿರೀಸಭೆಯವರ ಮುಂದೆ ನಿಂತು ಮಾತನಾಡಿದ್ದು} [PS] ಪೌಲನ ವಿರುದ್ಧ ಯೆಹೂದ್ಯರು ಯಾವ ತಪ್ಪು ಹೊರಿಸುತ್ತಾರೆಂಬುವ ವಿಷಯದಲ್ಲಿ ನಿಜವಾದ ಸಂಗತಿಯನ್ನು, ತಿಳಿಯಬೇಕೆಂದು ಅಪೇಕ್ಷಿಸಿ ಸಹಸ್ರಾಧಿಪತಿಯು ಮರುದಿನ ಅವನ ಬೇಡಿಗಳನ್ನು ಬಿಚ್ಚಿ, ಮುಖ್ಯಯಾಜಕರೂ, ಹಿರೀಸಭೆಯವರೆಲ್ಲರೂ ಕೂಡಿಬರುವುದಕ್ಕೆ ಅಪ್ಪಣೆ ಕೊಟ್ಟು, ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30

BG:

Opacity:

Color:


Size:


Font: