ಅಪೊಸ್ತಲರ ಕೃತ್ಯಗ 24 : 1 (IRVKN)
ಫೇಲಿಕ್ಸನ ಮುಂದೆ ನಡೆದ ನ್ಯಾಯವಿಚಾರಣೆ ಐದು ದಿನಗಳಾದ ಮೇಲೆ ಮಹಾಯಾಜಕನಾದ ಅನನೀಯನು, ಹಿರಿಯರಲ್ಲಿ ಕೆಲವರನ್ನೂ ತೆರ್ತುಲ್ಯನೆಂಬ ಒಬ್ಬ ವಕೀಲನನ್ನೂ ಕರೆದುಕೊಂಡು ಬಂದು, ಪೌಲನ ಮೇಲೆ ದೇಶಾಧಿಪತಿಗೆ ದೂರು ಹೇಳಿದನು.
ಅಪೊಸ್ತಲರ ಕೃತ್ಯಗ 24 : 2 (IRVKN)
ಪೌಲನನ್ನು ಕರೆಯಿಸಿದನಂತರ ತೆರ್ತುಲ್ಯನು ಅವನ ಮೇಲೆ ತಪ್ಪುಹೊರಿಸುವುದಕ್ಕೆ ಪ್ರಾರಂಭಿಸಿ ಹೀಗಂದನು; “ಮಹಾ ಶ್ರೇಷ್ಠನಾದ ಫೇಲಿಕ್ಸನೇ, ನಿನ್ನ ಮೂಲಕವಾಗಿ ನಮಗೆ ಬಹು ಸಮಾಧಾನ ಉಂಟಾಗುವುದರಿಂದಲೂ, ನಿನ್ನ ಮುಂದಾಲೋಚನೆಯಿಂದ ಈ ದೇಶದ ಜನರಿಗೆ ಎಲ್ಲಾ ವಿಧದಲ್ಲಿಯೂ, ಎಲ್ಲಾ ಸ್ಥಳಗಳಲ್ಲಿಯೂ, ಸುಧಾರಣೆಗಳು ಆಗುವುದರಿಂದಲೂ
ಅಪೊಸ್ತಲರ ಕೃತ್ಯಗ 24 : 3 (IRVKN)
ನಾವು ಈ ಉಪಕಾರಗಳನ್ನು ಕೃತಜ್ಞತೆಯಿಂದ ಒಪ್ಪಿಕೊಳ್ಳುತ್ತೇವೆ.
ಅಪೊಸ್ತಲರ ಕೃತ್ಯಗ 24 : 4 (IRVKN)
ಆದರೆ ನಿನ್ನನ್ನು ಹೆಚ್ಚಾಗಿ ಬೇಸರಗೊಳಿಸುವುದಕ್ಕೆ ಮನಸ್ಸಿಲ್ಲದೆ ನಾವು ಸಂಕ್ಷಿಪ್ತವಾಗಿ ಹೇಳುವ ಮಾತುಗಳನ್ನು ದಯೆಯಿಂದ ಕೇಳಿಸಿಕೊಳ್ಳಬೇಕೆಂದು ಬೇಡಿಕೊಳ್ಳುತ್ತೇನೆ.
ಅಪೊಸ್ತಲರ ಕೃತ್ಯಗ 24 : 5 (IRVKN)
“ಈ ಮನುಷ್ಯನನು ‘ಹಾನಿಕರವೂ ಲೋಕದ ಎಲ್ಲೆಡೆ ಇರುವ, ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೆಂತಲೂ, ನಜರೇನ ಎಂಬ ಪಂಥದ ನಾಯಕ ಎಂತಲೂ ಕಂಡೆವು.’
ಅಪೊಸ್ತಲರ ಕೃತ್ಯಗ 24 : 6 (IRVKN)
ಇದಲ್ಲದೆ ಇವನು, ದೇವಾಲಯವನ್ನು ಹೊಲೆಮಾಡುವುದಕ್ಕೆ ಪ್ರಯತ್ನಮಾಡಿದನು; ಆದಕಾರಣ ಇವನನ್ನು ನಾವು ಹಿಡಿದೆವು.
ಅಪೊಸ್ತಲರ ಕೃತ್ಯಗ 24 : 7 (IRVKN)
(ಆದರೆ ಸಹಸ್ರಾಧಿಪತಿಯಾದ ಲೂಸ್ಯನು ಮಧ್ಯೆ ಬಂದು ಬಲವಂತಮಾಡಿ, ಅವನನ್ನು ನಮ್ಮ ಕೈಯಿಂದ ಬಿಡಿಸಿಕೊಂಡು ಹೋದನು.)
ಅಪೊಸ್ತಲರ ಕೃತ್ಯಗ 24 : 8 (IRVKN)
ಇವನನ್ನು ನೀನೇ ವಿಚಾರಿಸಿದರೆ, ನಾವು ಇವನ ಮೇಲೆ ಹೊರಿಸುವ ಈ ತಪ್ಪುಗಳೆಲ್ಲಾ ನಿಜವೋ, ಸುಳ್ಳೋ ಎಂದು ಇವನಿಂದಲೇ ತಿಳಿದುಕೊಳ್ಳಬಹುದು” ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 24 : 9 (IRVKN)
ಅಪೊಸ್ತಲರ ಕೃತ್ಯಗ 24 : 10 (IRVKN)
ಆಗ ಯೆಹೂದ್ಯರು ಈ ಸಂಗತಿಗಳು ನಿಜವಾಗಿವೆ ಎಂದು ಹೇಳಿ ತಾವೂ ಆ ದೋಷಾರೋಪಣೆ ಮಾಡುವವರೊಂದಿಗೆ ಸೇರಿಕೊಂಡರು. ದೇಶಾಧಿಪತಿಯು ಪೌಲನಿಗೆ; ನೀನು ಮಾತನಾಡಬಹುದೆಂದು ಸನ್ನೆಮಾಡಲು, ಅವನು ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ; “ನೀನು ಅನೇಕ ವರ್ಷಗಳಿಂದ ಈ ದೇಶದ ಜನರಿಗೆ ನ್ಯಾಯಾಧಿಪತಿಯಾಗಿರುತ್ತೀ, ಎಂದು ತಿಳಿದು ನಾನು ಧೈರ್ಯವಾಗಿ ಪ್ರತಿವಾದ ಮಾಡುತ್ತಿದ್ದೇನೆ.
ಅಪೊಸ್ತಲರ ಕೃತ್ಯಗ 24 : 11 (IRVKN)
ನಾನು ದೇವಾರಾಧನೆಮಾಡುವುದಕ್ಕೆ, ಯೆರೂಸಲೇಮಿಗೆ ಹೋಗಿ, ಹನ್ನೆರಡು ದಿನಗಳು ಮಾತ್ರವಾಗಿದೆಯೆಂದು ನೀನು ತಿಳಿದುಕೊಳ್ಳಬಹುದು.
ಅಪೊಸ್ತಲರ ಕೃತ್ಯಗ 24 : 12 (IRVKN)
ಅಲ್ಲಿ ದೇವಾಲಯದಲ್ಲಾಗಲಿ, ಸಭಾಮಂದಿರಗಳಲ್ಲಾಗಲಿ, ಪಟ್ಟಣದಲ್ಲಾಗಲಿ ನಾನು ಯಾರ ಸಂಗಡಲಾದರೂ ವಾದಿಸುವುದನ್ನು, ಇಲ್ಲವೆ ಜನರ ಗುಂಪು ಕೂಡಿಸುವುದನ್ನು ಇವರು ನೋಡಲಿಲ್ಲ.
ಅಪೊಸ್ತಲರ ಕೃತ್ಯಗ 24 : 13 (IRVKN)
ಇದಲ್ಲದೆ ಇವರು ಈಗ ನನ್ನ ಮೇಲೆಹೊರಿಸುವ ತಪ್ಪುಗಳನ್ನು ನಿಜವೆಂದು ನಿನಗೆ ತೋರಿಸಲಾರರು.
ಅಪೊಸ್ತಲರ ಕೃತ್ಯಗ 24 : 14 (IRVKN)
ಒಂದನ್ನು ಮಾತ್ರ ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ, ಅದೇನೆಂದರೆ; ಇವರು ನನ್ನನ್ನು ಧರ್ಮವಿರೋಧಿ ಎಂದೂ ಹೇಳುವ, ಮಾರ್ಗಕ್ಕನುಸಾರವಾಗಿ ನಾನು ನಮ್ಮ ಪೂರ್ವಿಕರ ದೇವರನ್ನು ಆರಾಧಿಸುವವನಾಗಿದ್ದೇನೆ. ಧರ್ಮಶಾಸ್ತ್ರಕ್ಕನುಗುಣವಾಗಿರುವ ಮತ್ತು ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವ ಎಲ್ಲಾ ವಿಷಯಗಳನ್ನು ನಂಬುತ್ತೇನೆ.
ಅಪೊಸ್ತಲರ ಕೃತ್ಯಗ 24 : 15 (IRVKN)
ಇದಲ್ಲದೆ ನೀತಿವಂತರಿಗೂ ಮತ್ತು ಅನೀತಿವಂತರಿಗೂ ಪುನರುತ್ಥಾನವಾಗುವುದೆಂದು ಇವರು ದೇವರಲ್ಲಿ ನಿರೀಕ್ಷೆಯಿಟ್ಟಿರುವ ಪ್ರಕಾರವೇ ನಾನೂ ನಿರೀಕ್ಷೆಯುಳ್ಳವನಾಗಿದ್ದೇನೆ.
ಅಪೊಸ್ತಲರ ಕೃತ್ಯಗ 24 : 16 (IRVKN)
ಇದರ ದೆಸೆಯಿಂದ ದೇವರ ಮುಂದೆಯೂ, ಮನುಷ್ಯರ ಮುಂದೆಯೂ ನಿರ್ದೋಷವಾದ ಮನಸ್ಸಾಕ್ಷಿಯುಳ್ಳವನಾಗಿರಬೇಕೆಂದು ನಾನು ಯಾವಾಗಲೂ ಪ್ರಯತ್ನಿಸುತ್ತೇನೆ.
ಅಪೊಸ್ತಲರ ಕೃತ್ಯಗ 24 : 17 (IRVKN)
“ಕೆಲವು ವರ್ಷಗಳಾದ ಮೇಲೆ ನಾನು, ನನ್ನ ಸ್ವದೇಶದವರಿಗೆ ಧರ್ಮದ್ರವ್ಯಗಳನ್ನು, ತರುವುದಕ್ಕೂ, ಕಾಣಿಕೆಗಳನ್ನು ಒಪ್ಪಿಸುವುದಕ್ಕೂ ಬಂದೆನು.
ಅಪೊಸ್ತಲರ ಕೃತ್ಯಗ 24 : 18 (IRVKN)
ನಾನು ಶುದ್ಧಮಾಡಿಕೊಂಡವನಾಗಿ, ಅವುಗಳನ್ನು ಒಪ್ಪಿಸುತ್ತಿರುವಲ್ಲಿ, ಇವರು ನನ್ನನ್ನು ದೇವಾಲಯದಲ್ಲಿ ಕಂಡರು; ಆಗ ನನ್ನೊಂದಿಗೆ ಜನರ ಗುಂಪೇನೂ ಇರಲಿಲ್ಲ; ಗದ್ದಲವೂ ಇರಲಿಲ್ಲ. ನನ್ನನ್ನು ಕಂಡವರು ಆಸ್ಯಸೀಮೆಯಿಂದ ಬಂದ ಕೆಲವು ಯೆಹೂದ್ಯರೇ.
ಅಪೊಸ್ತಲರ ಕೃತ್ಯಗ 24 : 19 (IRVKN)
ನನ್ನ ವಿರುದ್ಧ ಅವರಿಗೆ ಏನಾದರೂ ಇದ್ದರೆ, ತಾವೇ ನಿನ್ನ ಮುಂದೆ ತಪ್ಪುಹೊರಿಸುವುದಕ್ಕೆ ಇಲ್ಲಿಗೆ ಬರಬೇಕಾಗಿತ್ತು.
ಅಪೊಸ್ತಲರ ಕೃತ್ಯಗ 24 : 20 (IRVKN)
ಇಲ್ಲವಾದ್ದರಿಂದ ನಾನು ಹಿರೀಸಭೆಯ ಎದುರಿನಲ್ಲಿ ನಿಂತಿದ್ದಾಗ, ನನ್ನಲ್ಲಿ ತಪ್ಪುಗಳೇನಾದರೂ ಕಂಡಿದ್ದರೆ ಇವರೇ ಹೇಳಲಿ.
ಅಪೊಸ್ತಲರ ಕೃತ್ಯಗ 24 : 21 (IRVKN)
ನಾನು ಇವರ ನಡುವೆ ನಿಂತು; ‘ಪುನರುತ್ಥಾನದ ವಿಷಯದಲ್ಲಿ, ಈಹೊತ್ತು ನಿಮ್ಮಿಂದ ನನಗೆ ವಿಚಾರಣೆಯಾಗುತ್ತದೆ’ ಎಂದು ಕೂಗಿ ಹೇಳಿದರ ಬಗ್ಗೆ ಹೇಳಬಹುದೇ ಹೊರತು ಬೇರೆ ಏನನ್ನೂ ಹೇಳಲಾರರು” ಅಂದನು.
ಅಪೊಸ್ತಲರ ಕೃತ್ಯಗ 24 : 22 (IRVKN)
ಫೇಲಿಕ್ಸನು ಈ ಮಾರ್ಗವನ್ನು, ತಕ್ಕ ಮಟ್ಟಿಗೆ ತಿಳಿದವನಾಗಿದ್ದರೂ ಅವರಿಗೆ; “ಸಹಸ್ರಾಧಿಪತಿಯಾದ ಲೂಸ್ಯನು ಬಂದ ಮೇಲೆ ನಿನ್ನ ಪ್ರಕರಣವನ್ನು ತೀರ್ಮಾನಿಸುತ್ತೇನೆಂದು” ಹೇಳಿ, ವಿಚಾರಣೆಯನ್ನು ತಡೆಮಾಡಿದನು.
ಅಪೊಸ್ತಲರ ಕೃತ್ಯಗ 24 : 23 (IRVKN)
ಅನಂತರ ಪೌಲನನ್ನು ಕಾವಲ್ಲಿನಲ್ಲಿ ಇಡಬೇಕೆಂದೂ, ಆದರೆ ಕಟ್ಟು ನಿಟ್ಟು ಬೇಕಿಲ್ಲವೆಂದೂ, ಅವನಿಗೆ ಸಂಬಂಧಪಟ್ಟವರು ಅವನಿಗೆ ಉಪಚಾರ ಮಾಡುವುದನ್ನು, ಅಡ್ಡಿಮಾಡಬಾರದೆಂದು ಶತಾಧಿಪತಿಗೆ ಅಪ್ಪಣೆಮಾಡಿದನು.
ಅಪೊಸ್ತಲರ ಕೃತ್ಯಗ 24 : 24 (IRVKN)
ಪೌಲನು ಎರಡು ವರ್ಷ ಕಾವಲಿನಲ್ಲಿದ್ದದ್ದು ಕೆಲವು ದಿನಗಳಾದ ಮೇಲೆ ಫೇಲಿಕ್ಸನು, ಯೆಹೂದ್ಯಳಾದ ದ್ರೂಸಿಲ್ಲಳೆಂಬ ತನ್ನ ಹೆಂಡತಿಯೊಂದಿಗೆ ಬಂದು, ಪೌಲನನ್ನು ಕರೆಯಿಸಿಕೊಂಡು ಕ್ರಿಸ್ತ ಯೇಸುವಿನಲ್ಲಿಡತಕ್ಕ ನಂಬಿಕೆಯ ವಿಷಯವಾಗಿ ಅವನು ಹೇಳಿದ ಮಾತುಗಳನ್ನು ಕೇಳಿದನು.
ಅಪೊಸ್ತಲರ ಕೃತ್ಯಗ 24 : 25 (IRVKN)
ಪೌಲನು ನೀತಿ, ಶಮೆದಮೆ, ಹಾಗೂ ಮುಂದಣ ನ್ಯಾಯವಿಚಾರಣೆ ಇವುಗಳ ವಿಷಯವಾಗಿ ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ಭಯಗ್ರಸ್ತನಾಗಿ ಅವನಿಗೆ; “ಸದ್ಯಕ್ಕೆ ಹೋಗು; ಸಮಯ ದೊರಕಿದಾಗ ನಿನ್ನನ್ನು ಕರೆಯಿಸುವೆನು” ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 24 : 26 (IRVKN)
ಅದೇ ಸಮಯದಲ್ಲಿ ಅವನು ಪೌಲನು ತನಗೇನಾದರೂ ಹಣಕೊಡುವನೋ ಎಂಬುದಾಗಿಯೂ ನಿರೀಕ್ಷಿಸಿ, ಆಗಾಗ್ಗೆ ಅವನನ್ನು ಕರೆಯಿಸಿ, ಅವನೊಂದಿಗೆ ಸಲ್ಲಾಪಮಾಡುತ್ತಿದ್ದನು.
ಅಪೊಸ್ತಲರ ಕೃತ್ಯಗ 24 : 27 (IRVKN)
ಎರಡು ವರ್ಷಗಳು ತುಂಬಿದ ಮೇಲೆ ಫೇಲಿಕ್ಸನ ಸ್ಥಾನಕ್ಕೆ ಪೋರ್ಕಿಯ ಫೆಸ್ತನು ಎಂಬವನು ಬಂದನು. ಫೇಲಿಕ್ಸನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಬೇಕೆಂದು ಪೌಲನನ್ನು ಹಾಗೆಯೇ ಸೆರೆಯಲ್ಲಿ ಬಿಟ್ಟು ಹೋದನು.
❮
❯