ಅಪೊಸ್ತಲರ ಕೃತ್ಯಗ 25 : 1 (IRVKN)
ಪೌಲನು ಫೆಸ್ತನ ಮುಂದೆ ವಿಚಾರಣೆಗೆ ಫೆಸ್ತನು ಅಧಿಕಾರ ವಹಿಸಿಕೊಂಡು, ಮೂರು ದಿನಗಳಾದ ನಂತರ ಕೈಸರೈಯದಿಂದ ಯೆರೂಸಲೇಮಿಗೆ ಹೋದನು.
ಅಪೊಸ್ತಲರ ಕೃತ್ಯಗ 25 : 2 (IRVKN)
ಅಲ್ಲಿ ಮುಖ್ಯಯಾಜಕನೂ, ಯೆಹೂದ್ಯರಲ್ಲಿ ಪ್ರಮುಖರೂ, ಅವನಿಗೆ ಪೌಲನ ಮೇಲೆ ದೂರು ಹೇಳಿ,
ಅಪೊಸ್ತಲರ ಕೃತ್ಯಗ 25 : 3 (IRVKN)
ನೀನು ದಯಮಾಡಿ ಅವನನ್ನು ಯೆರೂಸಲೇಮಿಗೆ ಕಳುಹಿಸಬೇಕೆಂದು ಪೌಲನ ಕೇಡಿಗಾಗಿ ಬಲವಾದ ಬಿನ್ನಹವನ್ನು ಮಾಡಿದರು. ಏಕೆಂದರೆ, ದಾರಿಯಲ್ಲಿ ಅವನನ್ನು ಕೊಲ್ಲುವುದಕ್ಕಾಗಿ ಹೊಂಚುಹಾಕಿಕೊಂಡಿದ್ದರು.
ಅಪೊಸ್ತಲರ ಕೃತ್ಯಗ 25 : 4 (IRVKN)
ಫೆಸ್ತನು ಅವರಿಗೆ; ಪೌಲನು ಕೈಸರೈಯದಲ್ಲಿ ಸೆರೆಮನೆಯೊಳಗಿದ್ದಾನೆ, ನಾನೇ ಬೇಗ ಅಲ್ಲಿಗೆ ಹೊರಟು ಹೋಗಬೇಕೆಂದಿದ್ದೇನೆ.
ಅಪೊಸ್ತಲರ ಕೃತ್ಯಗ 25 : 5 (IRVKN)
ಆದಕಾರಣ ನಿಮ್ಮಲ್ಲಿ ಪ್ರಮುಖರು, ನನ್ನೊಂದಿಗೆ ಬಂದು ಆ ಮನುಷ್ಯನಲ್ಲಿ ಅಪವಾದ ಏನಾದರೂ ಇದ್ದರೆ ಅವನ ಮೇಲೆ ತಪ್ಪುಹೊರಿಸಲಿ ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 25 : 6 (IRVKN)
ಅವನು ಯೆರುಸಲೇಮಿನಲ್ಲಿ ಎಂಟು ಹತ್ತಕ್ಕಿಂತ ಹೆಚ್ಚು ದಿನಗಳು ನಿಲ್ಲದೆ ಕೈಸರೈಯಕ್ಕೆ ಹೋಗಿ ಮರುದಿನ ನ್ಯಾಯಸ್ಥಾನದಲ್ಲಿ ಕುಳಿತುಕೊಂಡು, ಪೌಲನನ್ನು ಕರತರಬೇಕೆಂದು ಅಪ್ಪಣೆಮಾಡಿದನು.
ಅಪೊಸ್ತಲರ ಕೃತ್ಯಗ 25 : 7 (IRVKN)
ಅವನು ಬಂದ ಮೇಲೆ ಯೆರೂಸಲೇಮಿನಿಂದ ಬಂದಿದ್ದ ಯೆಹೂದ್ಯರು, ಅವನ ಸುತ್ತಲು ನಿಂತುಕೊಂಡು ತಾವು ಸಾಬೀತುಪಡಿಸಲಾರದ ಅನೇಕ ದೊಡ್ಡ ದೊಡ್ಡ ತಪ್ಪುಗಳನ್ನು ಹೊರಿಸುತ್ತಿರಲು,
ಅಪೊಸ್ತಲರ ಕೃತ್ಯಗ 25 : 8 (IRVKN)
ಪೌಲನು; “ಯೆಹೂದ್ಯರ ಧರ್ಮಶಾಸ್ತ್ರದ ವಿಷಯದಲ್ಲಾಗಲಿ, ದೇವಾಲಯದ ವಿಷಯದಲ್ಲಾಗಲಿ, ಚಕ್ರವರ್ತಿಯ ವಿಷಯದಲ್ಲಾಗಲಿ ನಾನು ಯಾವ ತಪ್ಪನ್ನೂ ಮಾಡಲಿಲ್ಲವೆಂದು” ಪ್ರತ್ಯುತ್ತರ ಹೇಳಿದನು.
ಅಪೊಸ್ತಲರ ಕೃತ್ಯಗ 25 : 9 (IRVKN)
ಅಪೊಸ್ತಲರ ಕೃತ್ಯಗ 25 : 10 (IRVKN)
ಆದರೆ ಫೆಸ್ತನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಿಕೊಳ್ಳಬೇಕೆಂದು ಅಪೇಕ್ಷಿಸಿ ಪೌಲನನ್ನು; “ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಈ ಕಾರ್ಯಗಳ ವಿಷಯವಾಗಿ ನನ್ನ ಮುಂದೆ ವಿಚಾರಿಸಲ್ಪಡುವುದಕ್ಕೆ ನಿನಗೆ ಮನಸ್ಸುಂಟೋ?” ಎಂದು ಕೇಳಲು, ಪೌಲನು; “ನಾನು ಕೈಸರನ ನ್ಯಾಯಸ್ಥಾನದ ಮುಂದೆ ನಿಂತಿದ್ದೇನೆ; ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ಯೆಹೂದ್ಯರಿಗೆ ನಾನು ಅನ್ಯಾಯವೇನೂ ಮಾಡಲಿಲ್ಲ; ಅದು ನಿನಗೂ ಚೆನ್ನಾಗಿ ತಿಳಿದೇ ಇದೆ.
ಅಪೊಸ್ತಲರ ಕೃತ್ಯಗ 25 : 11 (IRVKN)
ನಾನು ಅನ್ಯಾಯ ಮಾಡಿದವನಾಗಿ ಮರಣದಂಡನೆಗೆ ಕಾರಣವಾದ ಏನನ್ನಾದರೂ ಮಾಡಿದ್ದೇಯಾದರೆ ಮರಣ ದಂಡನೆಯನ್ನು ನಿರಾಕರಿಸುವುದಿಲ್ಲ. ಆದರೆ ಇವರು ನನ್ನ ಮೇಲೆ ಹೊರಿಸುವ ಅಪವಾದಗಳು ಪೊಳ್ಳಾಗಿದ್ದ ಪಕ್ಷದಲ್ಲಿ, ಯಾರೂ ನನ್ನನ್ನು ಇವರ ಕೈಗೊಪ್ಪಿಸಲಾಗದು. ನಾನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ” ಎಂದನು.
ಅಪೊಸ್ತಲರ ಕೃತ್ಯಗ 25 : 12 (IRVKN)
ಅಪೊಸ್ತಲರ ಕೃತ್ಯಗ 25 : 13 (IRVKN)
ಆಗ, ಫೆಸ್ತನು ತನ್ನ ಸಭೆಯವರ ಸಂಗಡ ಸಮಾಲೋಚನೆಮಾಡಿದ ಮೇಲೆ ಪೌಲನಿಗೆ; “ನೀನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ ಎಂದೆಯಲ್ಲಾ, ಆದುದರಿಂದ ಕೈಸರನ ಬಳಿಗೇ ಹೋಗಬೇಕು” ಎಂದು ಹೇಳಿದನು. ಫೆಸ್ತನು ಅಗ್ರಿಪ್ಪರಾಜನ ಸಲಹೆ ಪಡೆದದ್ದು ಕೆಲವು ದಿನಗಳು ಕಳೆದನಂತರ ಅಗ್ರಿಪ್ಪರಾಜನೂ, ಬೆರ್ನಿಕೆರಾಣಿಯೂ, ಫೆಸ್ತನನ್ನು ಭೇಟಿಯಾಗುವುದಕ್ಕೆ ಕೈಸರೈಯಕ್ಕೆ ಬಂದರು.
ಅಪೊಸ್ತಲರ ಕೃತ್ಯಗ 25 : 14 (IRVKN)
ಅವರು ಅನೇಕ ದಿನಗಳು ಅಲ್ಲಿ ತಂಗಿರಲಾಗಿ ಫೆಸ್ತನು ಪೌಲನ ಸಂಗತಿಯನ್ನು ರಾಜನಿಗೆ ತಿಳಿಸಿ ಹೇಳಿದ್ದೇನಂದರೆ; “ಫೇಲಿಕ್ಸನು ಬಿಟ್ಟುಹೋದ ಒಬ್ಬ ಸೆರೆಯವನು ಇದ್ದಾನೆ.
ಅಪೊಸ್ತಲರ ಕೃತ್ಯಗ 25 : 15 (IRVKN)
ನಾನು ಯೆರೂಸಲೇಮಿನಲ್ಲಿದ್ದಾಗ, ಯೆಹೂದ್ಯರ ಮುಖ್ಯಯಾಜಕರೂ, ಹಿರಿಯರೂ ಅವನ ವಿಷಯವಾಗಿ ನನಗೆ ದೂರುಹೇಳಿ ಅವನಿಗೆ ವಿರುದ್ಧವಾಗಿ ತೀರ್ಪು ಆಗಬೇಕೆಂದು ಬೇಡಿಕೊಂಡರು.
ಅಪೊಸ್ತಲರ ಕೃತ್ಯಗ 25 : 16 (IRVKN)
“ನಾನು ಅವರಿಗೆ; ಪ್ರತಿವಾದಿಯು ವಾದಿಗಳಿಗೆ, ಮುಖಾಮುಖಿಯಾಗಿ ನಿಂತು ತನ್ನ ಮೇಲೆ ಆರೋಪಿಸಿದ ದೋಷದ ವಿಷಯದಲ್ಲಿ ಪ್ರತಿವಾದಮಾಡುವುದಕ್ಕೆ ಎಡೆಕೊಡದೆ, ಅವನನ್ನು ಒಪ್ಪಿಸಿಬಿಡುವುದು ರೋಮಾಯರ ಪದ್ಧತಿಯಲ್ಲವೆಂದು” ಹೇಳಿದೆನು.
ಅಪೊಸ್ತಲರ ಕೃತ್ಯಗ 25 : 17 (IRVKN)
ಅವರು ಇಲ್ಲಿಗೆ ಕೂಡಿಬಂದಾಗ ನಾನು ಸ್ವಲ್ಪವೂ ತಡಮಾಡದೆ ಮರುದಿನವೇ ನ್ಯಾಯಸ್ಥಾನದ ಮೇಲೆ ಕುಳಿತುಕೊಂಡು ಆ ಮನುಷ್ಯನನ್ನು ಕರತರಬೇಕೆಂದು ಅಪ್ಪಣೆಕೊಟ್ಟೆನು.
ಅಪೊಸ್ತಲರ ಕೃತ್ಯಗ 25 : 18 (IRVKN)
ತಪ್ಪು ಹೊರಿಸುವವರು ನಿಂತುಕೊಂಡು ನಾನು ಭಾವಿಸಿದ್ದ ಅಪರಾಧಗಳಲ್ಲಿ ಒಂದನ್ನಾದರೂ ಅವನ ಮೇಲೆ ಹೊರಿಸದೆ,
ಅಪೊಸ್ತಲರ ಕೃತ್ಯಗ 25 : 19 (IRVKN)
ಅವರ ಮತದ ವಿಷಯದಲ್ಲಿಯೂ, ಜೀವಿಸಿದ್ದಾನೆ ಎಂದು, ಪೌಲನು ಹೇಳುವ ಸತ್ತುಹೋದಂಥ ಯೇಸುವೆಂಬ ಒಬ್ಬನ ವಿಷಯದಲ್ಲಿಯೂ, ಅವನ ಮೇಲೆ ಕೆಲವು ವಿವಾದದ ಮಾತುಗಳನ್ನು ತಂದರು.
ಅಪೊಸ್ತಲರ ಕೃತ್ಯಗ 25 : 20 (IRVKN)
ಇಂಥ ಕಾರ್ಯಗಳನ್ನು ಹೇಗೆ ವಿಚಾರಣೆಮಾಡಬೇಕೆಂಬುದು ನನಗೆ ತೋಚದೆ; ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಇವುಗಳ ವಿಷಯವಾಗಿ ವಿಚಾರಣೆಹೊಂದುವುದಕ್ಕೆ ನಿನಗೆ ಮನಸ್ಸುಂಟೋ? ಎಂದು ನಾನು ಕೇಳಿದೆ.
ಅಪೊಸ್ತಲರ ಕೃತ್ಯಗ 25 : 21 (IRVKN)
ಅದಕ್ಕೆ ಪೌಲನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುವ ತನಕ, ತನ್ನನ್ನು ಕಾಯಬೇಕೆಂದು ಕೇಳಿಕೊಂಡಾಗ ನಾನು ಕೈಸರನ ಬಳಿಗೆ ಕಳುಹಿಸುವ ತನಕ, ಅವನನ್ನು ಕಾಯುವುದಕ್ಕೆ ಅಪ್ಪಣೆಕೊಟ್ಟೆನು ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 25 : 22 (IRVKN)
ಅಪೊಸ್ತಲರ ಕೃತ್ಯಗ 25 : 23 (IRVKN)
ಅದಕ್ಕೆ ಅಗ್ರಿಪ್ಪನು; “ಆ ಮನುಷ್ಯನು ಹೇಳಿಕೊಳ್ಳುವುದನ್ನು ಕೇಳುವುದಕ್ಕೆ ನನಗೂ ಮನಸ್ಸಿದೆ” ಎಂದು ಹೇಳಲು, ಫೆಸ್ತನು; “ನಾಳೆ ಕೇಳಬಹುದು” ಎಂದನು. ಅಗ್ರಿಪ್ಪನ ಮುಂದೆ ಪೌಲನು ಮರುದಿನ ಅಗ್ರಿಪ್ಪರಾಜನೂ, ಬೆರ್ನಿಕೆರಾಣಿಯೂ ಬಹು ಆಡಂಬರದಿಂದ ಬಂದು ಸಹಸ್ರಾಧಿಪತಿಗಳ ಮತ್ತು ಪಟ್ಟಣದ ಮುಖಂಡರ ಸಂಗಡ ಸಭಾಂಗಣದೊಳಗೆ ಸೇರಿಬಂದಾಗ ಫೆಸ್ತನು ಅಪ್ಪಣೆ ಕೊಡಲು, ಪೌಲನನ್ನು ಕರತಂದರು.
ಅಪೊಸ್ತಲರ ಕೃತ್ಯಗ 25 : 24 (IRVKN)
ಆಗ ಫೆಸ್ತನು; “ಅಗ್ರಿಪ್ಪರಾಜನೇ, ನಮ್ಮ ಸಂಗಡ ಕೂಡಿಬಂದಿರುವ ಎಲ್ಲಾ ಜನರೇ, ಈ ಮನುಷ್ಯನನ್ನು ನೋಡುತ್ತೀರಲ್ಲಾ, ಇವನ ವಿಷಯದಲ್ಲಿ ಯೆಹೂದ್ಯರೆಲ್ಲರೂ, ಇವನು ಇನ್ನು ಮೇಲೆ ಬದುಕಬಾರದೆಂದು ಕೂಗುತ್ತಾ ಯೆರೂಸಲೇಮಿನಲ್ಲಿಯೂ, ಇಲ್ಲಿಯೂ ನನ್ನನ್ನು ಬೇಡಿಕೊಂಡರು.
ಅಪೊಸ್ತಲರ ಕೃತ್ಯಗ 25 : 25 (IRVKN)
ಇವನು ಮರಣದಂಡನೆಗೆ ಕಾರಣವಾದದ್ದೇನೂ ಮಾಡಲಿಲ್ಲವೆಂದು ನನಗೆ ಕಂಡುಬಂದಿತು. ಅವನೇ ಕೈಸರನಿಗೆ ವಿಜ್ಞಾಪನೆಮಾಡಿಕೊಂಡದ್ದರಿಂದ, ಇವನನ್ನು ಕೈಸರನ ಬಳಿಗೆ ಕಳುಹಿಸುವುದಕ್ಕೆ ತೀರ್ಮಾನಿಸಿದೆನು.
ಅಪೊಸ್ತಲರ ಕೃತ್ಯಗ 25 : 26 (IRVKN)
ಆದರೆ ಇವನ ಕುರಿತಾಗಿ ಕೈಸರನಿಗೆ ಬರೆಯುವುದಕ್ಕೆ ನಿರ್ದಿಷ್ಟವಾದ ಕಾರಣವೇನೂ ಕಂಡು ಬರಲಿಲ್ಲ. ಸೆರೆಯಲ್ಲಿರುವವನ ವಿರುದ್ಧ ಆರೋಪಿಸಿರುವ ದೋಷಗಳನ್ನು ಸೂಚಿಸದೆ, ಅವನನ್ನು ಕಳುಹಿಸುವುದು ಯುಕ್ತವಲ್ಲವೆಂದು ನನಗೆ ತೋರುತ್ತದೆ.
ಅಪೊಸ್ತಲರ ಕೃತ್ಯಗ 25 : 27 (IRVKN)
ಆದುದರಿಂದ ವಿಚಾರಣೆಯಾದ ಮೇಲೆ ಬರೆಯುವುದಕ್ಕೆ ಏನಾದರೂ ಸಿಕ್ಕೀತೆಂದು, ಇವನನ್ನು ನಿಮ್ಮ ಮುಂದೆ ಮುಖ್ಯವಾಗಿ ಅಗ್ರಿಪ್ಪರಾಜನೇ ನಿನ್ನ ಮುಂದೆ ಕರೆಯಿಸಿದ್ದೇನೆ” ಅಂದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27