ಅಪೊಸ್ತಲರ ಕೃತ್ಯಗ 26 : 1 (IRVKN)
ಆಗ ಅಗ್ರಿಪ್ಪನು, ಪೌಲನಿಗೆ; “ನೀನು ನಿನ್ನ ಪರವಾಗಿ ಮಾತನಾಡಬಹುದು” ಅನ್ನಲು, ಪೌಲನು ಕೈಯೆತ್ತಿ, ಪ್ರತಿವಾದ ಮಾಡಿದ್ದೇನಂದರೆ; [PE][PS]
ಅಪೊಸ್ತಲರ ಕೃತ್ಯಗ 26 : 2 (IRVKN)
“ಅಗ್ರಿಪ್ಪರಾಜನೇ, ಯೆಹೂದ್ಯರು ನನ್ನ ಮೇಲೆ ಆರೋಪಿಸುವ ಎಲ್ಲಾ ಆರೋಪಗಳ ವಿಷಯವಾಗಿ ನಿನ್ನ ಎದುರಿನಲ್ಲಿ ನಾನು ಈಹೊತ್ತು ಪ್ರತಿವಾದ ಮಾಡಬೇಕಾಗಿರುವುದರಿಂದ, ನನ್ನನ್ನು ಧನ್ಯನೆಂದು ಎಣಿಸಿಕೊಳ್ಳುತ್ತೇನೆ.
ಅಪೊಸ್ತಲರ ಕೃತ್ಯಗ 26 : 3 (IRVKN)
ಏಕೆಂದರೆ, ಯೆಹೂದ್ಯರಲ್ಲಿರುವ ಎಲ್ಲಾ ಆಚಾರಗಳನ್ನೂ, ವಿವಾದಗಳನ್ನೂ ನೀನು ಚೆನ್ನಾಗಿ ಬಲ್ಲವನಾಗಿರುತ್ತೀ. ನನ್ನ ಮಾತುಗಳನ್ನು ಸಹನೆಯಿಂದ ಕೇಳಬೇಕೆಂದು ಬೇಡಿಕೊಳ್ಳುತ್ತೇನೆ. [PE][PS]
ಅಪೊಸ್ತಲರ ಕೃತ್ಯಗ 26 : 4 (IRVKN)
“ನಾನು ಚಿಕ್ಕಂದಿನಿಂದಲೂ, ಯೆರೂಸಲೇಮಿನಲ್ಲಿ ನನ್ನ ದೇಶದ ಜನರೊಳಗಿದ್ದು, ಬದುಕಿದ ರೀತಿಯು ಎಲ್ಲಾ ಯೆಹೂದ್ಯರಿಗೆ ತಿಳಿದ ವಿಷಯವಾಗಿದೆ.
ಅಪೊಸ್ತಲರ ಕೃತ್ಯಗ 26 : 5 (IRVKN)
ನಾನು, ನಮ್ಮ ಧರ್ಮದಲ್ಲಿ ಬಹು ಕಟ್ಟುನಿಟ್ಟಾಗಿ ಆಚರಿಸುವ ಫರಿಸಾಯರ ಪಂಥವನ್ನನುಸರಿಸಿ ಫರಿಸಾಯನಾಗಿ ನಡೆದುಕೊಂಡೆನೆಂಬುದನ್ನು, ಪ್ರಾರಂಭದಿಂದಲೂ ಅವರು ಬಲ್ಲರು. ಸಾಕ್ಷಿ ಹೇಳುವುದಕ್ಕೆ ಅವರಿಗೆ ಮನಸ್ಸಿದ್ದರೆ ಹೇಳಬಹುದು.
ಅಪೊಸ್ತಲರ ಕೃತ್ಯಗ 26 : 6 (IRVKN)
ಈಗಲೂ ದೇವರು ನಮ್ಮ ಪೂರ್ವಿಕರಿಗೆ, ಮಾಡಿದ ವಾಗ್ದಾನವು ನೆರವೇರುವುದೆಂಬ ನಿರೀಕ್ಷೆಯ ನಿಮಿತ್ತವೇ, ನಾನು ಇಂದು ನ್ಯಾಯವಿಚಾರಣೆಗೆ ಇಲ್ಲಿ ನಿಂತಿದ್ದೇನೆ.
ಅಪೊಸ್ತಲರ ಕೃತ್ಯಗ 26 : 7 (IRVKN)
ನಮ್ಮ ಹನ್ನೆರಡು ಕುಲದವರು ಹಗಲಿರುಳು ಆಸಕ್ತಿಯಿಂದ ದೇವರನ್ನು ಆರಾಧಿಸುತ್ತಾ, ಆ ವಾಗ್ದಾನದ ಫಲವನ್ನು ಹೊಂದುವುದಕ್ಕಾಗಿ ನಿರೀಕ್ಷಿಸುತ್ತಾ ಇದ್ದಾರೆ. ಅರಸನೇ, ಅದೇ ನಿರೀಕ್ಷೆಯ ವಿಷಯದಲ್ಲಿಯೇ ಯೆಹೂದ್ಯರು, ನನ್ನ ವಿರುದ್ಧ ದೋಷಾರೋಪಣೆಮಾಡುತ್ತಿದ್ದಾರೆ.
ಅಪೊಸ್ತಲರ ಕೃತ್ಯಗ 26 : 8 (IRVKN)
ದೇವರು ಸತ್ತವರನ್ನು ಎಬ್ಬಿಸಿದ್ದು ನಂಬಲು ಅಸಾಧ್ಯವೆಂದು ನೀವು ಏಕೆ ತೀರ್ಮಾನಿಸುತ್ತೀರಿ?
ಅಪೊಸ್ತಲರ ಕೃತ್ಯಗ 26 : 9 (IRVKN)
ಒಂದು ಕಾಲದಲ್ಲಿ ನಜರೇತಿನ ಯೇಸುವಿನ ಹೆಸರಿಗೆ ವಿರುದ್ಧವಾಗಿ ಅನೇಕ ಕಾರ್ಯಗಳನ್ನು ನಡೆಸಬೇಕೆಂದು ನಾನೂ ಯೋಚಿಸಿಕೊಂಡಿದ್ದೆನು.
ಅಪೊಸ್ತಲರ ಕೃತ್ಯಗ 26 : 10 (IRVKN)
ಯೆರೂಸಲೇಮಿನಲ್ಲಿ ಹಾಗೆಯೇ ಮಾಡಿದ್ದೆನು. ಮುಖ್ಯಯಾಜಕರಿಂದ, ಅಧಿಕಾರವನ್ನು ಪಡೆದು ದೇವಜನರಲ್ಲಿ ಅನೇಕರನ್ನು ಸೆರೆಮನೆಗಳಲ್ಲಿ ಇರಿಸಿ, ಅವರಿಗೆ ಮರಣದ ತೀರ್ಪಾದಾಗ, ನಾನು ಅದಕ್ಕೆ ಸಮ್ಮತಿಯನ್ನು ಸೂಚಿಸಿದೆನು.
ಅಪೊಸ್ತಲರ ಕೃತ್ಯಗ 26 : 11 (IRVKN)
ಎಲ್ಲಾ ಸಭಾಮಂದಿರಗಳಲ್ಲಿಯೂ, ನಾನು ಅನೇಕ ಸಾರಿ ಅವರನ್ನು ದಂಡಿಸಿ ಅವರಿಂದ ದೇವದೂಷಣೆಯ ಮಾತುಗಳನ್ನಾಡಿಸುವುದಕ್ಕೆ ಪ್ರಯತ್ನಿಸಿದೆನು. ಇದಲ್ಲದೆ ಅವರ ಮೇಲೆ ಬಹು ಕೋಪಾವೇಶವುಳ್ಳವನಾಗಿ ಬೇರೆ ಪಟ್ಟಣಗಳವರೆಗೂ ಹೋಗಿ, ಅವರನ್ನು ಹಿಂಸೆಪಡಿಸಿದೆನು.
ಅಪೊಸ್ತಲರ ಕೃತ್ಯಗ 26 : 12 (IRVKN)
ಈ ಉದ್ದೇಶದಿಂದ ನಾನು ಮುಖ್ಯಯಾಜಕರಿಂದ ಅಧಿಕಾರವನ್ನೂ, ಆದೇಶವನ್ನೂ ಹೊಂದಿ ದಮಸ್ಕಕ್ಕೆ ಹೋಗುವ ದಾರಿಯಲ್ಲಿ ರಾಜನೇ,
ಅಪೊಸ್ತಲರ ಕೃತ್ಯಗ 26 : 13 (IRVKN)
ಮಧ್ಯಾಹ್ನದ ಹೊತ್ತಿನಲ್ಲಿ ಪರಲೋಕದಿಂದ ಒಂದು ಬೆಳಕು ನನ್ನ ಸುತ್ತಲೂ ಮತ್ತು ನನ್ನ ಜೊತೆಯಲ್ಲಿ ಪ್ರಯಾಣಮಾಡುತ್ತಿದ್ದವರ ಸುತ್ತಲೂ ಸೂರ್ಯನ ಹೊಳಪಿಗಿಂತ ಹೆಚ್ಚಾಗಿ ಹೊಳೆಯುವುದನ್ನು ನಾನು ಕಂಡೆನು.
ಅಪೊಸ್ತಲರ ಕೃತ್ಯಗ 26 : 14 (IRVKN)
ನಾವೆಲ್ಲರು ನೆಲಕ್ಕೆ ಬೀಳಲು; ‘ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ? ಮುಳ್ಳುಗೋಲನ್ನು ಒದೆಯುವುದರಿಂದ ನಿನಗೇ ಹಾನಿಯಲ್ಲವೇ? ಎಂದು ಇಬ್ರಿಯ ಭಾಷೆಯಿಂದ ಹೇಳುವ ವಾಣಿಯನ್ನು’ ಕೇಳಿದೆನು.
ಅಪೊಸ್ತಲರ ಕೃತ್ಯಗ 26 : 15 (IRVKN)
ಆಗ ನಾನು; ‘ಕರ್ತನೇ, ನೀನಾರು?’ ಅನ್ನಲು ಕರ್ತನು; ‘ನೀನು ಹಿಂಸೆಪಡಿಸುವ ಯೇಸುವೇ ನಾನು.
ಅಪೊಸ್ತಲರ ಕೃತ್ಯಗ 26 : 16 (IRVKN)
ನೀನು ಎದ್ದು, ನಿಂತುಕೋ. ನಿನ್ನನ್ನು ನನ್ನ ಸೇವಕನಾಗಿಯೂ, ಸಾಕ್ಷಿಯಾಗಿಯೂ ನೇಮಿಸುವುದಕ್ಕೋಸ್ಕರ ನಿನಗೆ ಕಾಣಿಸಿಕೊಂಡಿದ್ದೇನೆ. ಈಗಲೂ, ಮುಂದೆಯೂ ನಿನಗೆ ತೋರಿಸಲಿರುವ ದರ್ಶನಗಳಲ್ಲಿಯೂ, ನಿನಗೆ ಕಾಣಿಸಿಕೊಂಡದ್ದನ್ನು ಕುರಿತು ನೀನು ನನ್ನ ಸಾಕ್ಷಿಯಾಗಿರಬೇಕು.
ಅಪೊಸ್ತಲರ ಕೃತ್ಯಗ 26 : 17 (IRVKN)
ನಾನು ನಿನ್ನ ಸ್ವಂತ ಜನರಿಂದಲೂ, ಅನ್ಯಜನರಿಂದಲೂ ನಿನ್ನನ್ನು ರಕ್ಷಿಸುವೆನು.
ಅಪೊಸ್ತಲರ ಕೃತ್ಯಗ 26 : 18 (IRVKN)
ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’ ಅಂದನು.
ಅಪೊಸ್ತಲರ ಕೃತ್ಯಗ 26 : 19 (IRVKN)
ಆದಕಾರಣ ಅಗ್ರಿಪ್ಪರಾಜನೇ, ಪರಲೋಕದಿಂದ ನನಗೆ ಉಂಟಾದ ಆ ದರ್ಶನಕ್ಕೆ ನಾನು ಅವಿಧೇಯನಾಗದೆ ಮೊದಲು ದಮಸ್ಕದವರಿಗೆ,
ಅಪೊಸ್ತಲರ ಕೃತ್ಯಗ 26 : 20 (IRVKN)
ಆಮೇಲೆ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ; ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.
ಅಪೊಸ್ತಲರ ಕೃತ್ಯಗ 26 : 21 (IRVKN)
ಈ ಕಾರಣದಿಂದ ಯೆಹೂದ್ಯರು ದೇವಾಲಯದಲ್ಲಿ ನನ್ನನ್ನು ಹಿಡಿದು ಕೊಲ್ಲುವುದಕ್ಕೆ ಪ್ರಯತ್ನಿಸಿದರು.
ಅಪೊಸ್ತಲರ ಕೃತ್ಯಗ 26 : 22 (IRVKN)
ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ, ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ, ಮೋಶೆಯೂ ಮುಂದೆ ಆಗುವುದನ್ನು ಕುರಿತು ತಿಳಿಸಿದ ಸಂಗತಿಗಳನ್ನೇ, ಹೊರತು ನಾನು ಇನ್ನೇನೂ ಹೇಳುವವನಲ್ಲ.
ಅಪೊಸ್ತಲರ ಕೃತ್ಯಗ 26 : 23 (IRVKN)
ಆ ಸಂಗತಿಗಳು ಏನೆಂದರೆ; ಕ್ರಿಸ್ತನು ಬಾಧೆಪಟ್ಟು ಸಾಯಬೇಕಾದವನು ಮತ್ತು ಆತನು ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದು ಯೆಹೂದ್ಯರಿಗೂ, ಅನ್ಯಜನರಿಗೂ ಬೆಳಕನ್ನು ಪ್ರಸಿದ್ಧಿಪಡಿಸುವವನಾಗಿರುವನು” ಎಂಬುದೇ. [PE][PS]
ಅಪೊಸ್ತಲರ ಕೃತ್ಯಗ 26 : 24 (IRVKN)
ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ, ಫೆಸ್ತನು ಮಹಾಶಬ್ದದಿಂದ; “ಪೌಲನೇ, ನಿನಗೆ ಹುಚ್ಚು ಹಿಡಿದಿದೆ; ಅಧಿಕ ಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿಸಿದೆ,” ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 26 : 25 (IRVKN)
ಅದಕ್ಕೆ ಪೌಲನು; “ಮಹಾ ಶ್ರೇಷ್ಠನಾದ ಫೆಸ್ತನೇ, ನಾನು ಹುಚ್ಚನಲ್ಲ; ಸ್ವಸ್ಥಬುದ್ಧಿಯುಳ್ಳವನಾಗಿ ಸತ್ಯವಾದ ಮಾತುಗಳನ್ನೇ ಹೇಳುತ್ತಿದ್ದೇನೆ.
ಅಪೊಸ್ತಲರ ಕೃತ್ಯಗ 26 : 26 (IRVKN)
ಅಗ್ರಿಪ್ಪರಾಜನು ಈ ಸಂಗತಿಗಳನ್ನೆಲ್ಲಾ ತಿಳಿದವನು; ಆದುದರಿಂದ, ಅವನ ಮುಂದೆ ಧೈರ್ಯವಾಗಿ ಮಾತನಾಡುತ್ತೇನೆ. ಇವುಗಳಲ್ಲಿ ಒಂದಾದರೂ ಅವನಿಗೆ ಮುಚ್ಚುಮರೆಯಾದುದಲ್ಲವೆಂದು ನಂಬಿದ್ದೇನೆ, ಏಕೆಂದರೆ ಇದು ಒಂದು ಮೂಲೆಯಲ್ಲಿ ನಡೆದ ಕಾರ್ಯವಲ್ಲ.
ಅಪೊಸ್ತಲರ ಕೃತ್ಯಗ 26 : 27 (IRVKN)
ಅಗ್ರಿಪ್ಪರಾಜನೇ, ಪ್ರವಾದಿಗಳಲ್ಲಿ ನಿನಗೆ ನಂಬಿಕೆಯುಂಟೋ?” ಉಂಟೆಂದು ನಾನು ಬಲ್ಲೆನು ಅಂದನು.
ಅಪೊಸ್ತಲರ ಕೃತ್ಯಗ 26 : 28 (IRVKN)
ಅದಕ್ಕೆ ಅಗ್ರಿಪ್ಪನು; “ಅಲ್ಪಪ್ರಯತ್ನದಿಂದ, ನನ್ನನ್ನು ಕ್ರೈಸ್ತನಾಗುವುದಕ್ಕೆ ಒಡಂಬಡಿಸುತ್ತೀಯಾ?” ಎಂದು ಹೇಳಲು
ಅಪೊಸ್ತಲರ ಕೃತ್ಯಗ 26 : 29 (IRVKN)
ಪೌಲನು; “ಅಲ್ಪಪ್ರಯತ್ನದಿಂದಾಗಲಿ, ಅಧಿಕ ಪ್ರಯತ್ನದಿಂದಾಗಲಿ ನೀನು ಮಾತ್ರವಲ್ಲದೆ ಈಹೊತ್ತು ನನ್ನ ಮಾತುಗಳನ್ನು ಕೇಳುವವರೆಲ್ಲರೂ, ಈ ಬೇಡಿಗಳ ಹೊರತು, ನನ್ನಂತೆ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ” ಅಂದನು. [PE][PS]
ಅಪೊಸ್ತಲರ ಕೃತ್ಯಗ 26 : 30 (IRVKN)
ಆ ಮೇಲೆ ರಾಜನೂ, ದೇಶಾಧಿಪತಿಯೂ ಮತ್ತು ಬೆರ್ನಿಕೆಯೂ ಅವರ ಸಂಗಡ ಕುಳಿತಿದ್ದವರೂ, ಎದ್ದು ಹೊರಗೆ ಹೋಗಿ;
ಅಪೊಸ್ತಲರ ಕೃತ್ಯಗ 26 : 31 (IRVKN)
“ಈ ಮನುಷ್ಯನು ಮರಣದಂಡನೆಗಾಗಲಿ, ಬೇಡಿಗಾಗಲಿ ಆಧಾರವಾದದ್ದೇನೂ ಮಾಡಿದವನಲ್ಲ” ಎಂಬುದಾಗಿ ತಮ್ಮ ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
ಅಪೊಸ್ತಲರ ಕೃತ್ಯಗ 26 : 32 (IRVKN)
ಅಗ್ರಿಪ್ಪನು ಫೆಸ್ತನಿಗೆ; “ಈ ಮನುಷ್ಯನು ಕೈಸರನಿಗೆ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡುಗಡೆ ಮಾಡಬಹುದಿತ್ತು” ಎಂದು ಹೇಳಿದನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32

BG:

Opacity:

Color:


Size:


Font: