ಅಪೊಸ್ತಲರ ಕೃತ್ಯಗ 27 : 1 (IRVKN)
{ಪೌಲನು ರೋಮಾಪುರಕ್ಕೆ ಪ್ರಯಾಣ ಮಾಡಿದ್ದು} [PS] ನಾವು ಸಮುದ್ರಮಾರ್ಗವಾಗಿ ಇತಾಲ್ಯದೇಶಕ್ಕೆ ಹೋಗಬೇಕೆಂದು ತೀರ್ಮಾನವಾದ ಮೇಲೆ, ಪೌಲನನ್ನೂ, ಬೇರೆ ಕೆಲವು ಸೆರೆಯವರನ್ನೂ ಔಗುಸ್ತ ಸೇನೆಗೆ [* ಸೈನಿಕರ ತಂಡ] ಸೇರಿದ ಯೂಲ್ಯನೆಂಬ ಒಬ್ಬ ಶತಾಧಿಪತಿಗೆ ಒಪ್ಪಿಸಿದರು.
ಅಪೊಸ್ತಲರ ಕೃತ್ಯಗ 27 : 2 (IRVKN)
ಆಗ ಅದ್ರಮಿತ್ತಿಯದಿಂದ ಬಂದು ಆಸ್ಯಸೀಮೆಯ ಕರಾವಳಿಯ ಸ್ಥಳಗಳಿಗೆ ಹೋಗುವುದಕ್ಕಿದ್ದ ಒಂದು ಹಡಗನ್ನು ಹತ್ತಿ ಸಮುದ್ರಪ್ರಯಾಣವನ್ನು ಪ್ರಾರಂಭಿಸಿದೆವು. ಮಕೆದೋನ್ಯಕ್ಕೆ ಸೇರಿದ ಥೆಸಲೋನಿಕದ ಅರಿಸ್ತಾರ್ಕನು ನಮ್ಮ ಜೊತೆಯಲ್ಲಿದ್ದನು. [PE][PS]
ಅಪೊಸ್ತಲರ ಕೃತ್ಯಗ 27 : 3 (IRVKN)
ಮರುದಿನ ಸೀದೋನಿಗೆ ತಲುಪಿದೆವು. ಯೂಲ್ಯನು ಪೌಲನಿಗೆ ದಯೆಯನ್ನು ತೋರಿಸುವವನಾಗಿ, ಅವನನ್ನು ಸ್ನೇಹಿತರ ಬಳಿಗೆ ಹೋಗಿ ಸತ್ಕಾರ ಹೊಂದುವುದಕ್ಕೆ ಅನುಮತಿಕೊಟ್ಟನು.
ಅಪೊಸ್ತಲರ ಕೃತ್ಯಗ 27 : 4 (IRVKN)
ಅಲ್ಲಿಂದ ಹೊರಟು ವಿರುದ್ಧ ದಿಕ್ಕಿನಲ್ಲಿ ಗಾಳಿ ಬೀಸುತ್ತಿದ್ದುದರಿಂದ ಕುಪ್ರದ್ವೀಪದ ಮರೆಯಲ್ಲಿ ಸಾಗಿ,
ಅಪೊಸ್ತಲರ ಕೃತ್ಯಗ 27 : 5 (IRVKN)
ಕಿಲಿಕ್ಯಕ್ಕೂ, ಪಂಫುಲ್ಯಕ್ಕೂ ಎದುರಾಗಿರುವ ಸಮುದ್ರವನ್ನು ದಾಟಿ ಲುಕೀಯ ಸೀಮೆಯಲ್ಲಿರುವ ಮುರಕ್ಕೆ ಬಂದೆವು.
ಅಪೊಸ್ತಲರ ಕೃತ್ಯಗ 27 : 6 (IRVKN)
ಅಲ್ಲಿ ಅಲೆಕ್ಸಾಂದ್ರಿಯದಿಂದ ಬಂದು ಇತಾಲ್ಯದೇಶಕ್ಕೆ ಹೋಗುತ್ತಿದ್ದ ಒಂದು ಹಡಗನ್ನು ಶತಾಧಿಪತಿಯು ಕಂಡು ನಮ್ಮನ್ನು ಅದರೊಳಗೆ ಹತ್ತಿಸಿದನು.
ಅಪೊಸ್ತಲರ ಕೃತ್ಯಗ 27 : 7 (IRVKN)
ಅನೇಕ ದಿನಗಳ ಕಾಲ ನಿಧಾನವಾಗಿ ಸಾಗುತ್ತಾ ಎಷ್ಟೋ ಪ್ರಯಾಸದಿಂದ ಕ್ನೀದಕ್ಕೆ ಸಮೀಪವಾಗಿ ಬಂದಾಗ ಗಾಳಿಯು ನಮ್ಮನ್ನು ಅಲ್ಲಿಗೆ ಮುಟ್ಟಗೊಡಿಸದೆ ಇದ್ದುದರಿಂದ ಕ್ರೇತ ದ್ವೀಪದ ಮರೆಯಲ್ಲಿ ಸಾಗಿ ಸಲ್ಮೋನೆಗೆ ಸಮೀಪವಾಗಿ ಬಂದು,
ಅಪೊಸ್ತಲರ ಕೃತ್ಯಗ 27 : 8 (IRVKN)
ಪ್ರಯಾಸದಿಂದ ಆ ದ್ವೀಪದ ಕರಾವಳಿಯ ಮೂಲಕವಾಗಿ ಚಂದರೇವುಗಳೆಂಬ ಸ್ಥಳಕ್ಕೆ ಸೇರಿದೆವು. ಅದರ ಹತ್ತಿರದಲ್ಲಿ ಲಸಾಯವೆಂಬ ಪಟ್ಟಣವು ಇತ್ತು. [PE][PS]
ಅಪೊಸ್ತಲರ ಕೃತ್ಯಗ 27 : 9 (IRVKN)
ಹೀಗೆ ಬಹುಕಾಲ ಕಳೆದುಹೋಯಿತು; ಉಪವಾಸದ ದಿನವು ಮುಗಿದುಹೋಗಿತ್ತು. ಈ ಸಂದರ್ಭದಲ್ಲಿ ಸಮುದ್ರಪ್ರಯಾಣ ಮಾಡುವುದು ಅಪಾಯಕರವಾಗಿದ್ದುದರಿಂದ ಪೌಲನು;
ಅಪೊಸ್ತಲರ ಕೃತ್ಯಗ 27 : 10 (IRVKN)
“ಜನರೇ, ಈ ಪ್ರಯಾಣದಿಂದ ಸರಕಿಗೂ, ಹಡಗಿಗೆ ಮಾತ್ರವಲ್ಲದೆ, ನಮ್ಮ ಪ್ರಾಣಗಳಿಗೂ ಕಷ್ಟವೂ, ಬಹು ನಷ್ಟವೂ ಸಂಭವಿಸುವುದೆಂದು ನನಗೆ ತೋರುತ್ತಿದೆ” ಎಂದು ಅವರನ್ನು ಎಚ್ಚರಿಸಿದನು.
ಅಪೊಸ್ತಲರ ಕೃತ್ಯಗ 27 : 11 (IRVKN)
ಆದರೆ ಪೌಲನು ಹೇಳಿದ ಮಾತುಗಳಿಗಿಂತ, ನಾವಿಕನೂ ಹಡಗಿನ ಯಜಮಾನನೂ ಹೇಳಿದ ಮಾತಿಗೆ ಶತಾಧಿಪತಿಯು ಹೆಚ್ಚಾಗಿ ಲಕ್ಷ್ಯಕೊಟ್ಟನು. [PE][PS]
ಅಪೊಸ್ತಲರ ಕೃತ್ಯಗ 27 : 12 (IRVKN)
ಆ ಬಂದರು ಪ್ರದೇಶ; ಚಳಿಗಾಲವನ್ನು ಕಳೆಯುವುದಕ್ಕೆ ಅನುಕೂಲವಲ್ಲವಾದುದರಿಂದ, ಅಲ್ಲಿಂದ ಹೊರಟು ಸಾಧ್ಯವಾದರೆ ಹೇಗೂ ಫೊಯಿನಿಕ್ಸ ಊರನ್ನು ಸೇರಿ, ಅಲ್ಲೇ ಆ ಚಳಿಗಾಲವನ್ನು ಕಳೆಯಬೇಕೆಂದು ಹೆಚ್ಚು ಜನರು ತಮ್ಮ ಅಭಿಪ್ರಾಯಗಳನ್ನು ಹೇಳಿದರು. ಫೊಯಿನಿಕ್ಸವು ಕ್ರೇತ ದ್ವೀಪದ ಒಂದು ಬಂದರು ಪ್ರದೇಶ, ಈಶಾನ್ಯ ದಿಕ್ಕಿಗೂ, ಆಗ್ನೇಯ ದಿಕ್ಕಿಗೂ ಅಭಿಮುಖವಾಗಿದೆ. [PS]
ಅಪೊಸ್ತಲರ ಕೃತ್ಯಗ 27 : 13 (IRVKN)
{ಚಂಡಮಾರುತಕ್ಕೆ ಸಿಕ್ಕಿಕೊಂಡ ಹಡಗು} [PS] ತೆಂಕಣ ಗಾಳಿ ಮೆಲ್ಲಗೆ ಬೀಸಲಾಗಿ ತಮ್ಮ ಉದ್ದೇಶವು ಸಾರ್ಥಕವಾಯಿತೆಂದು ಭಾವಿಸಿ ಲಂಗರುಗಳನ್ನು ತೆಗೆದು ಕ್ರೇತ ದ್ವೀಪವನ್ನು ಅನುಸರಿಸಿ ತೀರದ ಮಗ್ಗುಲಲ್ಲೇ ಹೋಗುತ್ತಿದ್ದರು.
ಅಪೊಸ್ತಲರ ಕೃತ್ಯಗ 27 : 14 (IRVKN)
ಸ್ವಲ್ಪ ಹೊತ್ತಿನಮೇಲೆ ಆ ದ್ವೀಪದ ಮೇಲೆ ಈಶಾನ್ಯ ಮಾರುತ ಎಂಬ ಉರಕಲೋನ್ ಗಾಳಿಯು ಅಪ್ಪಳಿಸಿತು.
ಅಪೊಸ್ತಲರ ಕೃತ್ಯಗ 27 : 15 (IRVKN)
ಆ ಹೊಡೆತಕ್ಕೆ ಹಡಗು ಸಿಕ್ಕಿಕೊಂಡು ಗಾಳಿಗೆದುರಾಗಿ ನಿಲ್ಲುವುದಕ್ಕೆ ಆಗದೆಹೋದುದರಿಂದ ಗಾಳಿ ಬಂದ ಕಡೆಗೆ ಹಡಗನ್ನು ನೂಕಿಸಿಕೊಂಡು ಹೋದೆವು.
ಅಪೊಸ್ತಲರ ಕೃತ್ಯಗ 27 : 16 (IRVKN)
ಕ್ಲೌಡ ಎಂಬ ಒಂದು ಪುಟ್ಟ ದ್ವೀಪದ ಸಮೀಪಕ್ಕೆ ಹಾದುಹೋಗುವಾಗ ಹಡಗಿನಲ್ಲಿ ಇದ್ದ ಚಿಕ್ಕ ದೋಣಿಯನ್ನು ಸುಭದ್ರಪಡಿಸಿಕೊಳ್ಳುವುದು ಸಾಧ್ಯವಾಯಿತು.
ಅಪೊಸ್ತಲರ ಕೃತ್ಯಗ 27 : 17 (IRVKN)
ಅದನ್ನು ಮೇಲಕ್ಕೆ ಎತ್ತಿದ ನಂತರ ಹಗ್ಗಗಳನ್ನು ತೆಗೆದುಕೊಂಡು ಹಡಗಿನ ಕೆಳಭಾಗವನ್ನು ಬಿಗಿದರು. ಆ ಮೇಲೆ ಸುರ್ತಿಸ್ ಎಂಬ ಮರಳುದಿಬ್ಬಕ್ಕೆ ಎಲ್ಲಿ ಸಿಕ್ಕಿಕೊಳ್ಳುವುದೋ ಎಂಬ ಭಯ ಆವರಿಸಿತು. ಆದುದರಿಂದ ಅವರು ಹಾಯಿಯನ್ನು ಇಳಿಸಿ, ಗಾಳಿ ಬೀಸುತ್ತಿದ್ದ ಕಡೆಯೇ ಹಡಗು ತೇಲಲೆಂದು ಬಿಟ್ಟರು.
ಅಪೊಸ್ತಲರ ಕೃತ್ಯಗ 27 : 18 (IRVKN)
ಬಿರುಗಾಳಿಯ ಮಳೆಯೂ ನಮ್ಮನ್ನು ಅತ್ಯಂತವಾಗಿ ಹೊಯಿದಾಡಿಸಿದ್ದರಿಂದ ಅವರು ಮರುದಿನ ಹಡಗಿನಲ್ಲಿದ್ದ ಸರಕು ಸಾಮಗ್ರಿಗಳನ್ನು ಸಮುದ್ರಕ್ಕೆ ಎಸೆಯಲು ಆರಂಭಿಸಿದರು.
ಅಪೊಸ್ತಲರ ಕೃತ್ಯಗ 27 : 19 (IRVKN)
ಮೂರನೆಯ ದಿನದಲ್ಲಿ ಹಡಗಿನ ಕೆಲವು ಸಲಕರಣೆಗಳನ್ನು ಸ್ವತಃ ಎತ್ತಿ ಹೊರಗೆಸೆದರು.
ಅಪೊಸ್ತಲರ ಕೃತ್ಯಗ 27 : 20 (IRVKN)
ಅನೇಕ ದಿನಗಳ ತನಕ ಸೂರ್ಯನಾಗಲಿ, ನಕ್ಷತ್ರಗಳಾಗಲಿ ನಮಗೆ ಕಾಣಿಸದೆ, ದೊಡ್ಡ ಬಿರುಗಾಳಿ ಮಳೆ ನಮ್ಮ ಮೇಲೆ ಹೊಡೆದುದರಿಂದ ತಪ್ಪಿಸಿಕೊಂಡೇವೆಂಬ ಎಲ್ಲಾ ನಿರೀಕ್ಷೆಯು ವಿಫಲವಾಯಿತು. [PE][PS]
ಅಪೊಸ್ತಲರ ಕೃತ್ಯಗ 27 : 21 (IRVKN)
ಅವರು ಬಹುಕಾಲ ಊಟವಿಲ್ಲದೆ ಇದ್ದ ಮೇಲೆ, ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು; “ಎಲೈ ಜನರೇ, ನೀವು ಕ್ರೇತದಿಂದ ಹೊರಟು ಈ ಕಷ್ಟನಷ್ಟಗಳಿಗೆ ಗುರಿಯಾಗದಂತೆ ನನ್ನ ಮಾತನ್ನು ಕೇಳಬೇಕಾಗಿತ್ತು.
ಅಪೊಸ್ತಲರ ಕೃತ್ಯಗ 27 : 22 (IRVKN)
ಈಗಲಾದರೂ ನೀವು ಧೈರ್ಯದಿಂದಿರಬೇಕೆಂದು ನಿಮಗೆ ಬುದ್ಧಿಹೇಳುತ್ತೇನೆ; ಹಡಗು ನಷ್ಟವಾಗುವುದೇ ಹೊರತು, ನಿಮ್ಮಲ್ಲಿ ಒಬ್ಬರಿಗೂ ಪ್ರಾಣನಷ್ಟವಾಗುವುದಿಲ್ಲ.
ಅಪೊಸ್ತಲರ ಕೃತ್ಯಗ 27 : 23 (IRVKN)
ಏಕೆಂದರೆ, ನಾನು ಯಾರವನಾಗಿದ್ದೇನೋ, ಯಾರನ್ನು ಸ್ತುತಿಸುತ್ತೇನೋ ಆ ದೇವರಿಂದ ಬಂದ ಒಬ್ಬ ದೂತನು ಕಳೆದ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು;
ಅಪೊಸ್ತಲರ ಕೃತ್ಯಗ 27 : 24 (IRVKN)
‘ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲಬೇಕು; ಇದಲ್ಲದೆ ನಿನ್ನ ಸಂಗಡ ಈ ಹಡಗಿನಲ್ಲಿ ಪ್ರಯಾಣಮಾಡುವವರೆಲ್ಲರ ಪ್ರಾಣವನ್ನು, ದೇವರು ನಿನ್ನ ಮೇಲಣ ದಯೆಯಿಂದ ಉಳಿಸಿಕೊಟ್ಟಿದ್ದಾನೆಂದು’ ನನ್ನ ಸಂಗಡ ಹೇಳಿದನು.
ಅಪೊಸ್ತಲರ ಕೃತ್ಯಗ 27 : 25 (IRVKN)
ಆದುದರಿಂದ, ಜನರೇ ಧೈರ್ಯವಾಗಿರಿ. ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವುದೆಂದು ದೇವರನ್ನು ನಂಬಿದ್ದೇನೆ.
ಅಪೊಸ್ತಲರ ಕೃತ್ಯಗ 27 : 26 (IRVKN)
ಆದರೆ, ನಾವು ಯಾವುದೋ ಒಂದು ದ್ವೀಪದ ದಡವನ್ನು ತಾಕಬೇಕಾಗಿದೆ” ಎಂದು ಹೇಳಿದನು. [PS]
ಅಪೊಸ್ತಲರ ಕೃತ್ಯಗ 27 : 27 (IRVKN)
{ಹಡಗು ಒಡೆದುಹೊದದ್ದು} [PS] ಹದಿನಾಲ್ಕನೆಯ ರಾತ್ರಿಯಲ್ಲಿ ನಾವು ಆದ್ರಿಯ ಸಮುದ್ರದಲ್ಲಿ ಅತ್ತ ಇತ್ತ ಬಡಿಸಿಕೊಂಡು ಹೋಗುತ್ತಿರುವಾಗ ಸುಮಾರು ಮಧ್ಯರಾತ್ರಿಯಲ್ಲಿ ನಾವಿಕರು ಒಂದು ದೇಶದ ಹತ್ತಿರ ಬಂದೆವೆಂದು ನೆನಸಿ,
ಅಪೊಸ್ತಲರ ಕೃತ್ಯಗ 27 : 28 (IRVKN)
ಅಳತೆ ಮಾಪನವನ್ನು ಇಳಿಸಿ ಇಪ್ಪತ್ತು ಮಾರುದ್ದವೆಂದು ಕಂಡರು. ಸ್ವಲ್ಪ ಹೊತ್ತಿನ ಮೇಲೆ ಅವರು ತಿರುಗಿ ಮಾಪನದ ಗುಂಡನ್ನು ಇಳಿಸಿ ನೋಡಲಾಗಿ ಹದಿನೈದು ಮಾರುದ್ದವೆಂದು ಕಂಡರು.
ಅಪೊಸ್ತಲರ ಕೃತ್ಯಗ 27 : 29 (IRVKN)
ಬಂಡೆಗಳಿಗೆ ಡಿಕ್ಕಿಹೊಡೆದೆವೋ ಎಂದು ಭಯಪಟ್ಟು ಹಡಗಿನ ಹಿಂಭಾಗದಿಂದ ನಾಲ್ಕು ಲಂಗರುಗಳನ್ನು ಬಿಟ್ಟು ಬೇಗ ಬೆಳಗಾಗಲಿ ಎಂದು ಪ್ರಾರ್ಥಿಸಿದೆವು.
ಅಪೊಸ್ತಲರ ಕೃತ್ಯಗ 27 : 30 (IRVKN)
ಆದರೆ, ನಾವಿಕರು ಮುಂಭಾಗದಲ್ಲಿ ಲಂಗರುಗಳನ್ನು ಹಾಕಬೇಕೆಂಬ ಸುಳ್ಳುಕಾರಣ ಕೊಟ್ಟು ದೋಣಿಯನ್ನು ಸಮುದ್ರದಲ್ಲಿ ಇಳಿಸಿ ಹಡಗನ್ನು ಬಿಟ್ಟು ತಪ್ಪಿಸಿಕೊಂಡು ಹೋಗುವುದಕ್ಕೆ ಪ್ರಯತ್ನಿಸುತ್ತಿರುವಾಗ,
ಅಪೊಸ್ತಲರ ಕೃತ್ಯಗ 27 : 31 (IRVKN)
ಪೌಲನು ಶತಾಧಿಪತಿಗೂ, ಸಿಪಾಯಿಗಳಿಗೂ; “ಇವರು ಹಡಗಿನಲ್ಲಿ ಉಳಿಯದಿದ್ದರೆ ನಿಮ್ಮ ಪ್ರಾಣ ಉಳಿಯುವುದಿಲ್ಲವೆಂದು” ಹೇಳಿದನು.
ಅಪೊಸ್ತಲರ ಕೃತ್ಯಗ 27 : 32 (IRVKN)
ಆಗ ಸಿಪಾಯಿಗಳು ದೋಣಿಯ ಹಗ್ಗಗಳನ್ನು ಕತ್ತರಿಸಿ ಅದು ಬಿದ್ದು ಹೋಗುವಂತೆ ಮಾಡಿದರು. [PE][PS]
ಅಪೊಸ್ತಲರ ಕೃತ್ಯಗ 27 : 33 (IRVKN)
ಬೆಳಗಾಗುತ್ತಿರುವಷ್ಟರಲ್ಲಿ ಪೌಲನು ಏನಾದರೂ ಆಹಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರನ್ನು ಬೇಡಿಕೊಳ್ಳುತ್ತಾ; “ಇಂದಿಗೆ ನೀವು ಹದಿನಾಲ್ಕು ದಿನದಿಂದ ಕಾದುಕೊಂಡು ಆಹಾರವನ್ನು ತೆಗೆದುಕೊಳ್ಳದೆ, ಹಸಿದುಕೊಂಡು ಇದ್ದೀರಿ.
ಅಪೊಸ್ತಲರ ಕೃತ್ಯಗ 27 : 34 (IRVKN)
ಅದುದರಿಂದ, ಆಹಾರ ತೆಗೆದುಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಇದು ನಿಮ್ಮ ಪ್ರಾಣರಕ್ಷಣೆಗೆ ಅಗತ್ಯವಾಗಿದೆ. ನಿಮ್ಮಲ್ಲಿ ಯಾರ ತಲೆಯಿಂದಲಾದರೂ ಒಂದು ಕೂದಲೂ ಉದುರಿಹೋಗುವುದಿಲ್ಲವೆಂದು” ಹೇಳಿ,
ಅಪೊಸ್ತಲರ ಕೃತ್ಯಗ 27 : 35 (IRVKN)
ರೊಟ್ಟಿಯನ್ನು ತೆಗೆದುಕೊಂಡು, ಎಲ್ಲರ ಮುಂದೆ ದೇವರ ಸ್ತೋತ್ರಮಾಡಿ ಅದನ್ನು ಮುರಿದು ತಿನ್ನುವುದಕ್ಕೆ ಪ್ರಾರಂಭಿಸಿದನು.
ಅಪೊಸ್ತಲರ ಕೃತ್ಯಗ 27 : 36 (IRVKN)
ಆಗ ಎಲ್ಲರೂ ಧೈರ್ಯ ತಂದುಕೊಂಡು, ತಾವೂ ಆಹಾರವನ್ನು ಸೇವಿಸಿದರು.
ಅಪೊಸ್ತಲರ ಕೃತ್ಯಗ 27 : 37 (IRVKN)
ಆ ಹಡಗಿನಲ್ಲಿದ್ದ ನಾವೆಲ್ಲರೂ ಒಟ್ಟು ಇನ್ನೂರ ಎಪ್ಪತ್ತಾರು ಮಂದಿ ಇದ್ದೇವು.
ಅಪೊಸ್ತಲರ ಕೃತ್ಯಗ 27 : 38 (IRVKN)
ಸಾಕಾದಷ್ಟು ತಿಂದ ಮೇಲೆ, ಮಿಕ್ಕ ಗೋದಿಯನ್ನು ಸಮುದ್ರಕ್ಕೆ ಚೆಲ್ಲಿ, ಹಡಗನ್ನು ಹಗುರ ಮಾಡಿದರು. [PE][PS]
ಅಪೊಸ್ತಲರ ಕೃತ್ಯಗ 27 : 39 (IRVKN)
ಬೆಳಗಾದ ಮೇಲೆ ಆ ದೇಶದ ಗುರುತನ್ನು ತಿಳಿಯದೆ ಉಸುಬಿನ ದಡವುಳ್ಳ ಒಂದು ಕೊಲ್ಲಿಯನ್ನು ನೋಡಿ ಆ ದಡದ ಮೇಲೆ ಹಡಗನ್ನು ನೂಕುವುದಕ್ಕೆ ಸಾಧ್ಯವಾದೀತೆಂದು ಯೋಚಿಸಿದರು.
ಅಪೊಸ್ತಲರ ಕೃತ್ಯಗ 27 : 40 (IRVKN)
ಅವರು ಲಂಗರುಗಳನ್ನು ಸರಿಸಿ ಸಮುದ್ರದಲ್ಲೇ ಬಿಟ್ಟು, ಚುಕ್ಕಾಣಿಗಳ ಕಟ್ಟುಗಳನ್ನು ಬಿಚ್ಚಿ, ದೊಡ್ಡ ಹಾಯಿಯನ್ನು ಗಾಳಿಗೆ ಎತ್ತಿಕಟ್ಟಿ ಹಡಗನ್ನು ಆ ದಡಕ್ಕೆ ನಡಿಸುತ್ತಿದ್ದರು.
ಅಪೊಸ್ತಲರ ಕೃತ್ಯಗ 27 : 41 (IRVKN)
ಆದರೆ ಮಧ್ಯದಲ್ಲಿ ಅವರಿಗೆ ಮರಳದಿಬ್ಬ ಸಿಕ್ಕಿದಾಗ ಅದಕ್ಕೆ ನಾವೆಯನ್ನು ಹತ್ತಿಸಿದರು. ಮುಂಭಾಗವು ದಿಣ್ಣೆಗೆ ತಗಲಿಕೊಂಡು ಅಲ್ಲಾಡದೆ ನಿಂತಿತು. ಹಿಂಭಾಗವು ಹುಚ್ಚು ಅಲೆಗಳ ಹೊಡೆತದಿಂದ ಒಡೆದು ತುಂಡಾಯಿತು.
ಅಪೊಸ್ತಲರ ಕೃತ್ಯಗ 27 : 42 (IRVKN)
ಸೆರೆಯವರಲ್ಲಿ ಕೆಲವರು ಈಜಿ ತಪ್ಪಿಸಿಕೊಂಡಾರೆಂದು ಸಿಪಾಯಿಗಳು ಅವರನ್ನು ಕೊಲ್ಲಬೇಕೆಂಬುದಾಗಿ ಯೋಚಿಸಿದರು.
ಅಪೊಸ್ತಲರ ಕೃತ್ಯಗ 27 : 43 (IRVKN)
ಆದರೆ ಶತಾಧಿಪತಿಯು, ಪೌಲನನ್ನು ಉಳಿಸಬೇಕೆಂದು ಅಪೇಕ್ಷಿಸಿ ಅವರ ಆಲೋಚನೆಯನ್ನು ಬೇಡವೆಂದು ಹೇಳಿ, ಈಜಬಲ್ಲವರು ಹಡಗಿನಿಂದ ಧುಮುಕಿ ಮೊದಲು ತೀರಕ್ಕೆ ಹೋಗಬೇಕೆಂತಲೂ,
ಅಪೊಸ್ತಲರ ಕೃತ್ಯಗ 27 : 44 (IRVKN)
ಉಳಿದವರಲ್ಲಿ ಕೆಲವರು ಹಲಿಗೆಗಳ ಮೇಲೆ, ಕೆಲವರು ಹಡಗಿನ ತುಂಡುಗಳ ಮೇಲೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಈ ರೀತಿಯಿಂದ ಎಲ್ಲರೂ ಸುರಕ್ಷಿತವಾಗಿ ತೀರವನ್ನು ತಲುಪಿದರು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44

BG:

Opacity:

Color:


Size:


Font: