ಅಪೊಸ್ತಲರ ಕೃತ್ಯಗ 3 : 1 (IRVKN)
ಹುಟ್ಟುಕುಂಟನು ನಡೆದಾಡಿದ್ದು ಒಂದು ದಿನ ಪೇತ್ರ ಮತ್ತು ಯೋಹಾನನು ಮಧ್ಯಾಹ್ನದ ಮೇಲೆ ಮೂರು ಘಂಟೆಗೆ ನಡೆಯತ್ತಿದ್ದ ಪ್ರಾರ್ಥನೆಗಾಗಿ ದೇವಾಲಯಕ್ಕೆ ಹೋದರು.
ಅಪೊಸ್ತಲರ ಕೃತ್ಯಗ 3 : 2 (IRVKN)
ಅಲ್ಲಿ ಹುಟ್ಟು ಕುಂಟನಾಗಿದ್ದ ಒಬ್ಬ ಮನುಷ್ಯನನ್ನು ಕೆಲವರು ಹೊತ್ತುಕೊಂಡು ಬಂದರು; ದೇವಾಲಯದೊಳಕ್ಕೆ ಹೋಗುವವರಿಂದ ಭಿಕ್ಷೆಬೇಡುವುದಕ್ಕಾಗಿ ದೇವಾಲಯದ ಸುಂದರದ್ವಾರವೆಂಬ ಬಾಗಿಲಿನಲ್ಲಿ ಅವನನ್ನು ಪ್ರತಿದಿನ ಕೂರಿಸುತ್ತಿದ್ದರು.
ಅಪೊಸ್ತಲರ ಕೃತ್ಯಗ 3 : 3 (IRVKN)
ಅವನು ದೇವಾಲಯದೊಳಕ್ಕೆ ಹೋಗುತ್ತಿರುವ ಪೇತ್ರ ಮತ್ತು ಯೋಹಾನರನ್ನು ಕಂಡು ಭಿಕ್ಷೆ ಬೇಡಿದನು.
ಅಪೊಸ್ತಲರ ಕೃತ್ಯಗ 3 : 4 (IRVKN)
ಪೇತ್ರ, ಯೋಹಾನರಿಬ್ಬರೂ ಅವನನ್ನು ದೃಷ್ಟಿಸಿ ನೋಡಿದರು. ಪೇತ್ರನು ಅವನಿಗೆ “ನಮ್ಮನ್ನು ನೋಡು” ಅಂದನು.
ಅಪೊಸ್ತಲರ ಕೃತ್ಯಗ 3 : 5 (IRVKN)
ಅವನು ಅವರಿಂದ ಏನಾದರೂ ದೊರಕೀತೆಂದು ನಿರೀಕ್ಷಿಸಿ, ಅವರನ್ನು ಲಕ್ಷ್ಯವಿಟ್ಟು ನೋಡಿದನು.
ಅಪೊಸ್ತಲರ ಕೃತ್ಯಗ 3 : 6 (IRVKN)
ಆಗ ಪೇತ್ರನು “ಬೆಳ್ಳಿ ಬಂಗಾರವಂತೂ ನನ್ನಲ್ಲಿಲ್ಲ, ನನ್ನಲ್ಲಿರುವುದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆ” ಎಂದು ಹೇಳಿ,
ಅಪೊಸ್ತಲರ ಕೃತ್ಯಗ 3 : 7 (IRVKN)
ಅವನನ್ನು ಬಲಗೈಹಿಡಿದು ಎತ್ತಿದನು. ತಕ್ಷಣವೇ ಅವನ ಅಂಗಾಲುಗಳಿಗೆ, ಮುಂಗಾಲುಗಳಿಗೆ ಹಾಗು ಹಿಮ್ಮಡಿಗಳಿಗೂ ಬಲಬಂದಿತು.
ಅಪೊಸ್ತಲರ ಕೃತ್ಯಗ 3 : 8 (IRVKN)
ಅವನು ಹಾರಿ ನಿಂತು ನಡೆದಾಡಿದನು; ನಡೆಯುತ್ತಾ, ಕುಣಿಯುತ್ತಾ ದೇವರನ್ನು ಕೊಂಡಾಡುತ್ತಾ ಅವರ ಜೊತೆಯಲ್ಲಿ ದೇವಾಲಯದೊಳಗೆ ಹೋದನು.
ಅಪೊಸ್ತಲರ ಕೃತ್ಯಗ 3 : 9 (IRVKN)
ಅವನು ನಡೆಯುತ್ತಾ ದೇವರನ್ನು ಕೊಂಡಾಡುತ್ತಾ ಇರುವದನ್ನು ಜನರೆಲ್ಲರು ನೋಡಿ;
ಅಪೊಸ್ತಲರ ಕೃತ್ಯಗ 3 : 10 (IRVKN)
ಇವನು ದೇವಾಲಯದ ಸುಂದರ ದ್ವಾರವೆಂಬ ಬಾಗಿಲಿನಲ್ಲಿ ಕುಳಿತು ಭಿಕ್ಷೆಬೇಡುತ್ತಿದ್ದವನೆಂದು ಗುರುತುಹಿಡಿದು, ಅವನಿಗೆ ಸಂಭವಿಸಿರುವ ಅದ್ಭುತಕಾರ್ಯಕ್ಕೆ ವಿಸ್ಮಯಗೊಂಡು ಬಹಳ ಬೆರಗಾದರು.
ಅಪೊಸ್ತಲರ ಕೃತ್ಯಗ 3 : 11 (IRVKN)
ಆಶ್ಚರ್ಯಪಟ್ಟ ಜನರಿಗೆ ಪೇತ್ರನ ಸಂದೇಶ ಗುಣಹೊಂದಿದ ಕುಂಟನು ಪೇತ್ರ ಮತ್ತು ಯೋಹಾನನ್ನು ಹಿಡುಕೊಂಡೇ ಇರುವಾಗ, ಆಶ್ಚರ್ಯಪಡುತ್ತಿರುವ ಆ ಜನರೆಲ್ಲರು ಸೊಲೊಮೋನನದೆಂದು ಹೆಸರುಳ್ಳ ಮಂಟಪಕ್ಕೆ ಒಟ್ಟಾಗಿ ಓಡಿಬಂದರು.
ಅಪೊಸ್ತಲರ ಕೃತ್ಯಗ 3 : 12 (IRVKN)
ಪೇತ್ರನು ಇದನ್ನು ನೋಡಿ ಜನರಿಗೆ; “ಇಸ್ರಾಯೇಲ್ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನೀವು ನಮ್ಮನೇಕೆ ಈ ರೀತಿ ದೃಷ್ಟಿಯಿಟ್ಟು ನೋಡುತ್ತಿದ್ದಿರಿ? ನಾವು ನಮ್ಮ ಸ್ವಂತ ಶಕ್ತಿಯಿಂದಾಗಲಿ, ನಮ್ಮ ದೈವಭಕ್ತಿಯಿಂದಾಗಲಿ ಇವನನ್ನು ನಡೆಯುವಂತೆ ಮಾಡಿದೆವೆಂದು ಭಾವಿಸಬೇಡಿರಿ.
ಅಪೊಸ್ತಲರ ಕೃತ್ಯಗ 3 : 13 (IRVKN)
ನಮ್ಮ ಪೂರ್ವಿಕರಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಪಿಲಾತನಿಗೆ ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ, ಆತನ ಮುಂದೆ ಆತನನ್ನು ಧಿಕ್ಕರಿಸಿ ಬೇಡವೆಂದು ಕೂಗಿದ್ದೀರಿ.
ಅಪೊಸ್ತಲರ ಕೃತ್ಯಗ 3 : 14 (IRVKN)
ನೀವು ಪರಿಶುದ್ಧನೂ, ನೀತಿವಂತನೂ ಆಗಿರುವ * ಮನುಷ್ಯನನ್ನು ಯೇಸುವನ್ನು ಬೇಡವೆಂದು ಹೇಳಿ ಕೊಲೆಗಾರನಾದ ಒಬ್ಬನನ್ನು ಬಿಡಿಸಿಕೊಡಬೇಕೆಂದು ಬೇಡಿಕೊಂಡು ಜೀವದಾಯಕನಾದ ಕ್ರಿಸ್ತನನ್ನು ಕೊಲ್ಲಿಸಿದ್ದೀರಿ.
ಅಪೊಸ್ತಲರ ಕೃತ್ಯಗ 3 : 15 (IRVKN)
ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು; ಈ ವಿಷಯದಲ್ಲಿ ನಾವೇ ಸಾಕ್ಷಿಗಳು.
ಅಪೊಸ್ತಲರ ಕೃತ್ಯಗ 3 : 16 (IRVKN)
ನೀವು ನೋಡುತ್ತಿರುವಂತಹ, ನಿಮಗೆ ಗುರುತಿರುವಂತಹ ಈ ಮನುಷ್ಯನು ಗುಣವಾಗುವುದಕ್ಕೆ ಯೇಸುವಿನ ಹೆಸರಿನಲ್ಲಿ ಇಟ್ಟ ಅವನ ನಂಬಿಕೆಯೇ ಕಾರಣ; ಆ ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನಿಗೆ ನಿಮ್ಮೆಲ್ಲರ ಮುಂದೆ ಸಂಪೂರ್ಣಸೌಖ್ಯವನ್ನು ಕೊಟ್ಟಿತು.
ಅಪೊಸ್ತಲರ ಕೃತ್ಯಗ 3 : 17 (IRVKN)
“ಸಹೋದರರೇ, ಅದಿರಲಿ, ನೀವು ಆ ಕಾರ್ಯವನ್ನು ತಿಳಿಯದೆ ಮಾಡಿದಿರೆಂದು ಬಲ್ಲೆನು; ನಿಮ್ಮ ಅಧಿಕಾರಿಗಳೂ ಅದನ್ನು ತಿಳಿಯದೆ ಮಾಡಿದರು.
ಅಪೊಸ್ತಲರ ಕೃತ್ಯಗ 3 : 18 (IRVKN)
ಆದರೆ, ಕ್ರಿಸ್ತನು ಕಷ್ಟಗಳನ್ನನುಭವಿಸಬೇಕೆಂದು, ದೇವರು ಎಲ್ಲಾ ಪ್ರವಾದಿಗಳ ಮೂಲಕ ಮುಂಚಿತವಾಗಿ ಹೇಳಿಸಿದ ಮಾತುಗಳನ್ನು ಹೀಗೆ ನೆರವೇರಿಸಿದನು.
ಅಪೊಸ್ತಲರ ಕೃತ್ಯಗ 3 : 19 (IRVKN)
ಆದುದರಿಂದ ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ಹಾಗೆ ತಿರುಗಿದರೆ ಕರ್ತನ, ಸನ್ನಿಧಾನದಿಂದ
ಅಪೊಸ್ತಲರ ಕೃತ್ಯಗ 3 : 20 (IRVKN)
ಪುನರುಜ್ಜೀವನದ ಕಾಲಗಳು ಒದಗಿ ಆತನು ನಿಮಗೆ ನೇಮಕವಾಗಿರುವ ಕ್ರಿಸ್ತನಾದ ಯೇಸುವನ್ನು ಕಳುಹಿಸಿಕೊಡುವನು.
ಅಪೊಸ್ತಲರ ಕೃತ್ಯಗ 3 : 21 (IRVKN)
ಆದರೆ ಸಮಸ್ತವನ್ನು ಸರಿಮಾಡುವ ಕಾಲವು ಬರುವ ತನಕ ಪರಲೋಕವೇ ಕ್ರಿಸ್ತನ ಸ್ಥಾನವಾಗಿರಬೇಕು. ಆ ಕಾಲದ ವಿಷಯವಾಗಿ ದೇವರು ಪೂರ್ವದಲ್ಲಿದ್ದ ತನ್ನ ಪರಿಶುದ್ಧ ಪ್ರವಾದಿಗಳ ಮುಖಾಂತರ ಹೇಳಿಸಿದ್ದಾನೆ.
ಅಪೊಸ್ತಲರ ಕೃತ್ಯಗ 3 : 22 (IRVKN)
ಮೋಶೆಯು ಹೇಳಿದ್ದೇನಂದರೆ, ‘ದೇವರಾಗಿರುವ ಕರ್ತನು ನನ್ನ ಹಾಗೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮಗೆ ಎಬ್ಬಿಸುವನು; ಆತನು ಹೇಳುವ ಎಲ್ಲಾ ಮಾತುಗಳಿಗೆ ನೀವು ಕಿವಿಗೊಡಬೇಕು.
ಅಪೊಸ್ತಲರ ಕೃತ್ಯಗ 3 : 23 (IRVKN)
ಆ ಪ್ರವಾದಿಯ ಮಾತನ್ನು ಕೇಳದಿರುವ ಪ್ರತಿಯೊಬ್ಬನು ನಮ್ಮ ಜನರೊಳಗಿಂದ ಸಂಪೂರ್ಣವಾಗಿ ನಾಶವಾಗುವನು’ ಎಂಬುದೇ.
ಅಪೊಸ್ತಲರ ಕೃತ್ಯಗ 3 : 24 (IRVKN)
ಇದಲ್ಲದೆ ಸಮುವೇಲನೂ, ಅವನ ತರುವಾಯ ಬಂದು ಪ್ರವಾದಿಸಿದ ಎಲ್ಲಾ ಪ್ರವಾದಿಗಳೂ ಸಹ ಈಗಿನ ದಿನಗಳನ್ನು ಕುರಿತು ತಿಳಿಸಿರುವರು.
ಅಪೊಸ್ತಲರ ಕೃತ್ಯಗ 3 : 25 (IRVKN)
ನೀವು ಆ ಪ್ರವಾದಿಗಳ ಶಿಷ್ಯರು, ದೇವರು ನಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಗೆ ಬಾಧ್ಯರೂ ಆಗಿದ್ದೀರಿ. ಆತನು ಅಬ್ರಹಾಮನಿಗೆ ‘ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವುದು’ ಎಂದು ಹೇಳಿ ಆ ಒಡಂಬಡಿಕೆಯನ್ನು ಮಾಡಿಕೊಂಡನಲ್ಲಾ.
ಅಪೊಸ್ತಲರ ಕೃತ್ಯಗ 3 : 26 (IRVKN)
ಮೊದಲು ನಿಮಗಾಗಿಯೇ ದೇವರು ತನ್ನ ಸೇವಕನನ್ನು ಪ್ರತಿಷ್ಠೆಪಡಿಸಿ ಈತನು ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ಕೆಟ್ಟ ನಡತೆಗಳಿಂದ ತಿರುಗಿಸಿ ನಿಮ್ಮನ್ನು ಆಶೀರ್ವದಿಸಬೇಕೆಂದು ಆತನನ್ನು ಕಳುಹಿಸಿಕೊಟ್ಟಿದ್ದಾನೆ” ಎಂದು ಹೇಳಿದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26