ಅಪೊಸ್ತಲರ ಕೃತ್ಯಗ 5 : 1 (IRVKN)
{ಅನನೀಯ ಮತ್ತು ಸಪ್ಫೈರಳು} [PS] ಅನನೀಯನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿ ಸಪ್ಫೈರಳೊಂದಿಗೆ ತನ್ನ ಒಂದು ಭೂಮಿಯನ್ನು ಮಾರಿ
ಅಪೊಸ್ತಲರ ಕೃತ್ಯಗ 5 : 2 (IRVKN)
ಹೆಂಡತಿಯ ಸಮ್ಮತಿಯಿಂದ ಅದರ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಉಳಿದ ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.
ಅಪೊಸ್ತಲರ ಕೃತ್ಯಗ 5 : 3 (IRVKN)
ಆಗ ಪೇತ್ರನು; “ಅನನೀಯನೇ, ನೀನು ಆ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಪವಿತ್ರಾತ್ಮನನ್ನು ವಂಚಿಸುವಂತೆ ಸೈತಾನನು ನಿನ್ನ ಹೃದಯದಲ್ಲಿ ಏಕೆ ತುಂಬಿಸಿಕೊಂಡಿ?
ಅಪೊಸ್ತಲರ ಕೃತ್ಯಗ 5 : 4 (IRVKN)
ಆ ಆಸ್ತಿ ಮೊದಲು ನಿನ್ನದಾಗಿಯೇ ಇತ್ತಲ್ಲವೇ. ಮಾರಿದ ಮೇಲೆ ಬಂದ ಹಣವು ನಿನ್ನ ಅಧೀನದಲ್ಲೇ ಇತ್ತಲ್ಲವೇ, ನೀನು ಈ ಕಾರ್ಯವನ್ನು ನಿನ್ನ ಹೃದಯದಲ್ಲಿ ಯೋಚಿಸಿಕೊಂಡದ್ದು ಏಕೆ? ನೀನು ಸುಳ್ಳಾಡಿದ್ದು ಮನುಷ್ಯರಿಗಲ್ಲ, ದೇವರಿಗೆ” ಅಂದನು.
ಅಪೊಸ್ತಲರ ಕೃತ್ಯಗ 5 : 5 (IRVKN)
ಈ ಮಾತುಗಳನ್ನು ಅನನೀಯನು ಕೇಳಿದ ತಕ್ಷಣವೇ ಬಿದ್ದು ಪ್ರಾಣಬಿಟ್ಟನು; ಕೇಳಿದವರೆಲ್ಲರಿಗೂ ಮಹಾ ಭಯ ಉಂಟಾಯಿತು.
ಅಪೊಸ್ತಲರ ಕೃತ್ಯಗ 5 : 6 (IRVKN)
ಆಗ ಯೌವನಸ್ಥರು ಎದ್ದು ಅವನ ಶವವನ್ನು ವಸ್ತ್ರದಲ್ಲಿ ಸುತ್ತಿ ಹೊತ್ತುಕೊಂಡು ಹೋಗಿ ಸಮಾಧಿಮಾಡಿದರು. [PE][PS]
ಅಪೊಸ್ತಲರ ಕೃತ್ಯಗ 5 : 7 (IRVKN)
ಇದಾದ ಸುಮಾರು ಮೂರು ಗಂಟೆಗಳ ನಂತರ ಅವನ ಹೆಂಡತಿಯು ನಡೆದ ಸಂಗತಿಯನ್ನು ತಿಳಿಯದೆ ಒಳಗೆ ಬಂದಳು.
ಅಪೊಸ್ತಲರ ಕೃತ್ಯಗ 5 : 8 (IRVKN)
ಪೇತ್ರನು ಆಕೆಯನ್ನು ನೋಡಿ, “ನೀವು ಆ ಹೊಲವನ್ನು ಮಾರಿದ್ದು ಇಷ್ಟೇ ಹಣಕ್ಕೋ? ನನಗೆ ಹೇಳು” ಎಂದು ಕೇಳಲು ಆಕೆಯು, “ಹೌದು, ಇಷ್ಟಕ್ಕೇ” ಅಂದಳು.
ಅಪೊಸ್ತಲರ ಕೃತ್ಯಗ 5 : 9 (IRVKN)
ಆಗ ಪೇತ್ರನು ಆಕೆಗೆ, “ನೀವಿಬ್ಬರೂ ಕರ್ತನ ಆತ್ಮನನ್ನು ಪರೀಕ್ಷಿಸುವುದಕ್ಕೆ ಏಕೆ ಒಡಂಬಟ್ಟಿರಿ? ಅಗೋ, ನಿನ್ನ ಗಂಡನನ್ನು ಸಮಾಧಿಮಾಡಿದವರು ಬಂದು ಬಾಗಿಲಿನಲ್ಲಿ ಕಾಲಿಟ್ಟಿದ್ದಾರೆ, ನಿನ್ನನ್ನೂ ಹೊತ್ತುಕೊಂಡು ಹೋಗುವರು” ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 5 : 10 (IRVKN)
ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣಬಿಟ್ಟಳು. ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿರುವುದನ್ನು ಕಂಡು ಆಕೆಯನ್ನು ಹೊತ್ತುಕೊಂಡು ಹೋಗಿ ಗಂಡನ ಮಗ್ಗುಲಲ್ಲಿ ಹೂಣಿಟ್ಟರು.
ಅಪೊಸ್ತಲರ ಕೃತ್ಯಗ 5 : 11 (IRVKN)
ಮತ್ತು ಸರ್ವ ಸಭೆಯವರೂ ಈ ಸಂಗತಿಗಳನ್ನು ಕೇಳಿದವರೆಲ್ಲರೂ ಭಯ ಭ್ರಾಂತರಾದರು. [PS]
ಅಪೊಸ್ತಲರ ಕೃತ್ಯಗ 5 : 12 (IRVKN)
{ಸೂಚಕಕಾರ್ಯಗಳು ಮತ್ತು ಅದ್ಭುತಕಾರ್ಯಗಳು} [PS] ಇದಲ್ಲದೆ ಅಪೊಸ್ತಲರ ಕೈಯಿಂದ ಅನೇಕ ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ಜನರೊಳಗೆ ನಡೆಯುತ್ತಾ ಇದ್ದವು. ಮತ್ತು ಎಲ್ಲರು ಒಗ್ಗಟ್ಟಾಗಿ ಸೊಲೊಮೋನನ ಮಂಟಪದಲ್ಲಿ ಸೇರಿಬರುತ್ತಿದ್ದರು.
ಅಪೊಸ್ತಲರ ಕೃತ್ಯಗ 5 : 13 (IRVKN)
ಅವರ ಜೊತೆಯಲ್ಲಿರುವುದಕ್ಕೆ ಉಳಿದವರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ. ಆದರೂ ಜನರು ಅವರನ್ನು ಬಹಳವಾಗಿ ಕೊಂಡಾಡುತ್ತಿದ್ದರು.
ಅಪೊಸ್ತಲರ ಕೃತ್ಯಗ 5 : 14 (IRVKN)
ಮತ್ತು ಇನ್ನು ಎಷ್ಟೋ ಮಂದಿ ಸ್ತ್ರೀಪುರುಷರು ಕರ್ತನಲ್ಲಿ ನಂಬಿಕೆಯಿಟ್ಟು ಅವರ ಮಂಡಳಿಯಲ್ಲಿ ಸೇರಿಕೊಳ್ಳುತ್ತಿದ್ದರು.
ಅಪೊಸ್ತಲರ ಕೃತ್ಯಗ 5 : 15 (IRVKN)
ಹೀಗಿರುವುದರಿಂದ ಜನರು ರೋಗಿಗಳನ್ನು ದೋಲಿಗಳ ಮೇಲೆಯೂ, ಹಾಸಿಗೆಗಳ ಮೇಲೆಯೂ ಇಟ್ಟು ಪೇತ್ರನು ಹಾದು ಹೋಗುವಾಗ, ಅವನ ನೆರಳಾದರೂ ಕೆಲವರ ಮೇಲಾದರೂ ಬೀಳಲಿ ಎಂದು ಅವರನ್ನು ಬೀದಿಗೆ ತೆಗೆದುಕೊಂಡು ಬರುತ್ತಿದ್ದರು.
ಅಪೊಸ್ತಲರ ಕೃತ್ಯಗ 5 : 16 (IRVKN)
ಯೆರೂಸಲೇಮಿನ ಸುತ್ತಮುತ್ತಲಿನ ಊರುಗಳ ಜನರು ಸಹ ರೋಗಿಗಳನ್ನೂ, ದೆವ್ವ ಪೀಡಿತರನ್ನು ಹೊತ್ತುಕೊಂಡು ಗುಂಪುಗುಂಪಾಗಿ ಬರುತ್ತಿದ್ದರು; ಅವರೆಲ್ಲರೂ ಗುಣಮುಖರಾಗುತ್ತಿದ್ದರು. [PS]
ಅಪೊಸ್ತಲರ ಕೃತ್ಯಗ 5 : 17 (IRVKN)
{ಅಪೊಸ್ತಲರಿಗೆ ಆದ ಹಿಂಸೆ} [PS] ಹೀಗಿರುವಲ್ಲಿ ಮಹಾಯಾಜಕನೂ, ಸದ್ದುಕಾಯರ ಮತಕ್ಕೆ ಸೇರಿದವರಾದ ಅವನ ಜೊತೆಯಲ್ಲಿದ್ದವರೆಲ್ಲರೂ ಎದ್ದು,
ಅಪೊಸ್ತಲರ ಕೃತ್ಯಗ 5 : 18 (IRVKN)
ಅಸೂಯೆ ತುಂಬಿದವರಾಗಿ ಅಪೊಸ್ತಲರನ್ನು ಹಿಡಿದು ಸೆರೆಯಲ್ಲಿಟ್ಟರು.
ಅಪೊಸ್ತಲರ ಕೃತ್ಯಗ 5 : 19 (IRVKN)
ಆದರೆ ಕರ್ತನ ದೂತನು ರಾತ್ರಿಯಲ್ಲಿ ಸೆರೆಮನೆಯ ದ್ವಾರಗಳನ್ನು ತೆರೆದು ಅವರನ್ನು ಹೊರಕ್ಕೆ ಕರೆದುಕೊಂಡು ಬಂದು,
ಅಪೊಸ್ತಲರ ಕೃತ್ಯಗ 5 : 20 (IRVKN)
“ನೀವು ಹೋಗಿ, ದೇವಾಲಯದಲ್ಲಿ ನಿಂತುಕೊಂಡು ಈ ಜೀವ ವಾಕ್ಯಗಳನ್ನು ಜನರಿಗೆಲ್ಲಾ ತಿಳಿಸಿರಿ” ಅಂದನು. [PE][PS]
ಅಪೊಸ್ತಲರ ಕೃತ್ಯಗ 5 : 21 (IRVKN)
ಅದನ್ನು ಕೇಳಿದ ಅವರು ಬೆಳಗಿನ ಜಾವದಲ್ಲಿಯೇ ದೇವಾಲಯದೊಳಗೆ ಹೋಗಿ ಸುವಾರ್ತೆಯನ್ನು ಸಾರಿದರು. ಇತ್ತ ಮಹಾಯಾಜಕನೂ, ಅವನ ಜೊತೆಯಲ್ಲಿದ್ದವರೂ ಬಂದು ಹಿರೀಸಭೆಯನ್ನೂ, ಇಸ್ರಾಯೇಲ್ಯರ ಹಿರಿಯರೆಲ್ಲರನ್ನೂ ಕೂಡಿಸಿ, ಅವರನ್ನು ಕರತರುವುದಕ್ಕೆ ಓಲೇಕಾರರನ್ನು ಸೆರೆಮನೆಗೆ ಕಳುಹಿಸಿದರು.
ಅಪೊಸ್ತಲರ ಕೃತ್ಯಗ 5 : 22 (IRVKN)
ಓಲೇಕಾರರು ಹೋಗಿ ಅವರನ್ನು ಸೆರೆಮನೆಯಲ್ಲಿ ಕಾಣದೆ ಹಿಂತಿರುಗಿ ಬಂದು,
ಅಪೊಸ್ತಲರ ಕೃತ್ಯಗ 5 : 23 (IRVKN)
“ಸೆರೆಮನೆಯು ಭದ್ರವಾಗಿ ಮುಚ್ಚಿರುವುದನ್ನೂ, ಕಾವಲುಗಾರರು ಬಾಗಿಲುಗಳಲ್ಲಿ ನಿಂತಿರುವುದನ್ನೂ ಕಂಡೆವು; ಆದರೆ ತೆರೆದಾಗ ಒಳಗೆ ಒಬ್ಬರನ್ನೂ ಕಾಣಲಿಲ್ಲ” ಎಂದು ತಿಳಿಸಿದರು.
ಅಪೊಸ್ತಲರ ಕೃತ್ಯಗ 5 : 24 (IRVKN)
ದೇವಾಲಯದ ಅಧಿಪತಿಯೂ, ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತೋ ಎಂದು ಕಳವಳಗೊಂಡರು. [PE][PS]
ಅಪೊಸ್ತಲರ ಕೃತ್ಯಗ 5 : 25 (IRVKN)
ಅಷ್ಟರಲ್ಲಿ ಒಬ್ಬನು ಬಂದು; “ಅಗೋ, ನೀವು ಸೆರೆಮನೆಯಲ್ಲಿಟ್ಟಿದ್ದ ಆ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಉಪದೇಶಮಾಡುತ್ತಿದ್ದಾರೆಂದು” ಅವರಿಗೆ ತಿಳಿಸಿದನು.
ಅಪೊಸ್ತಲರ ಕೃತ್ಯಗ 5 : 26 (IRVKN)
ಆಗ ಸೈನ್ಯದ ಅಧಿಕಾರಿಯು ಓಲೇಕಾರರ ಸಂಗಡ ಹೋಗಿ ಅವರನ್ನು ಕರೆದುಕೊಂಡು ಬಂದನು. ಆದರೆ ತಮಗೆ ಜನರು ಕಲ್ಲೆಸೆದಾರೆಂದು ಹೆದರಿ ಅವರನ್ನು ಹಿಂಸಿಸಲಿಲ್ಲ.
ಅಪೊಸ್ತಲರ ಕೃತ್ಯಗ 5 : 27 (IRVKN)
ಅಪೊಸ್ತಲರನ್ನು ಕರತಂದು ಹಿರೀಸಭೆಯ ಮುಂದೆ ನಿಲ್ಲಿಸಲು ಮಹಾಯಾಜಕನು ಅವರನ್ನು ವಿಚಾರಣೆಮಾಡುತ್ತಾ,
ಅಪೊಸ್ತಲರ ಕೃತ್ಯಗ 5 : 28 (IRVKN)
“ನೀವು ಈ ಹೆಸರಿನಲ್ಲಿ ಉಪದೇಶಮಾಡಲೇ ಬಾರದೆಂದು ನಾವು ನಿಮಗೆ ಕಟ್ಟಪ್ಪಣೆ ಕೊಡಲಿಲ್ಲವೇ? ಆದರೂ ನೀವು ಯೆರೂಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿದಿರಿ, ಮತ್ತು ಆ ವ್ಯಕ್ತಿಯ ರಕ್ತಕ್ಕೆ ನಾವೇ ಹೊಣೆಗಾರರು ಎಂದು ನಮ್ಮನ್ನು ಜವಾಬ್ಧಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ” ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 5 : 29 (IRVKN)
ಪೇತ್ರನೂ ಉಳಿದ ಅಪೊಸ್ತಲರೂ ಅವರಿಗೆ, “ನಾವು ಮನುಷ್ಯರಿಗಿಂತಲೂ ದೇವರಿಗೆ ಹೆಚ್ಚಾಗಿ ವಿಧೇಯರಾಗಿರಬೇಕಲ್ಲಾ.
ಅಪೊಸ್ತಲರ ಕೃತ್ಯಗ 5 : 30 (IRVKN)
ನೀವು ಮರದ ಕಂಬಕ್ಕೆ ತೂಗಹಾಕಿ ಕೊಂದ ಯೇಸುವನ್ನು ನಮ್ಮ ಪೂರ್ವಿಕರ ದೇವರು ಎಬ್ಬಿಸಿದನು.
ಅಪೊಸ್ತಲರ ಕೃತ್ಯಗ 5 : 31 (IRVKN)
ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ, ಪಾಪಕ್ಷಮಾಪಣೆಯನ್ನೂ ದಯಪಾಲಿಸುವುದಕ್ಕಾಗಿ ಅವನನ್ನು ಪ್ರಭುವನ್ನಾಗಿಯೂ, [* ಮಾನವನ ಕುಲಕ್ಕೆ ರಕ್ಷಣೆಯ ಮಾರ್ಗವನ್ನು ನಿರ್ಮಿಸಿದ ಏಕೈಕ ನಿರ್ಮಾಪಕ ] ರಕ್ಷಕನಾಗಿಯೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.
ಅಪೊಸ್ತಲರ ಕೃತ್ಯಗ 5 : 32 (IRVKN)
ಈ ಕಾರ್ಯಗಳಿಗೆ ನಾವು ಸಾಕ್ಷಿ ಹಾಗೂ ದೇವರು ತನಗೆ ವಿಧೇಯರಾಗಿರುವವರಿಗೆ ದಯಪಾಲಿಸಿರುವ ಪವಿತ್ರಾತ್ಮನು ಸಾಕ್ಷಿ” ಎಂದು ಹೇಳಿದರು. [PS]
ಅಪೊಸ್ತಲರ ಕೃತ್ಯಗ 5 : 33 (IRVKN)
{ಗಮಲಿಯೇಲನ ಸಮರ್ಥನೆ} [PS] ಸಭಿಕರು ಈ ಮಾತನ್ನು ಕೇಳಿ ರೌದ್ರಗೊಂಡು ಅವರನ್ನು ಕೊಲ್ಲಿಸಬೇಕೆಂದು ಆಲೋಚಿಸಿದರು.
ಅಪೊಸ್ತಲರ ಕೃತ್ಯಗ 5 : 34 (IRVKN)
ಆದರೆ ಎಲ್ಲಾ ಜನರಿಂದ ಗೌರವಿಸಲ್ಪಟ್ಟ ಧರ್ಮಶಾಸ್ತ್ರಿಯಾದ ಗಮಲಿಯೇಲನೆಂಬ ಒಬ್ಬ ಫರಿಸಾಯನು ಹಿರೀಸಭೆಯಲ್ಲಿ ಎದ್ದುನಿಂತು ಈ ಮನುಷ್ಯರನ್ನು ಸ್ವಲ್ಪ ಹೊತ್ತು ಹೊರಗೆ ಕಳುಹಿಸಬೇಕೆಂದು ಅಪ್ಪಣೆಕೊಟ್ಟನು.
ಅಪೊಸ್ತಲರ ಕೃತ್ಯಗ 5 : 35 (IRVKN)
ಅನಂತರ ಸಭೆಯವರಿಗೆ, “ಇಸ್ರಾಯೇಲ್ ಜನರೇ, ನೀವು ಈ ಮನುಷ್ಯರ ವಿಷಯದಲ್ಲಿ ತೆಗೆದುಕೊಳ್ಳುವ ನಿರ್ಧಾರದ ಕುರಿತು ಎಚ್ಚರಿಕೆಯುಳ್ಳವರಾಗಿರಿ.
ಅಪೊಸ್ತಲರ ಕೃತ್ಯಗ 5 : 36 (IRVKN)
ಇದಕ್ಕಿಂತ ಮೊದಲು ಥೈದನು ಎಂಬ ಒಬ್ಬನು ಎದ್ದು ತಾನೊಬ್ಬ ಮಹಾಪುರುಷನೆಂದು ಹೇಳಿಕೊಂಡನು. ಅವನ ಪಕ್ಷಕ್ಕೆ ಸುಮಾರು ನಾನೂರು ಜನರು ಸೇರಿಕೊಂಡರು, ಅವನು ಕೊಲ್ಲಲ್ಪಟ್ಟನು, ಮತ್ತು ಅವನನ್ನು ನಂಬಿದವರೆಲ್ಲರು ಚದರಿಸಲ್ಪಟ್ಟು ಇಲ್ಲವಾದರು.
ಅಪೊಸ್ತಲರ ಕೃತ್ಯಗ 5 : 37 (IRVKN)
ಅವನ ತರುವಾಯ ಜನಗಣತಿ ಕಾಲದಲ್ಲಿ ಗಲಿಲಾಯದ ಯೂದನು ತಿರುಗಿಬೀಳುವುದಕ್ಕೆ ಎದ್ದು, ಜನರನ್ನು ತನ್ನ ಪಕ್ಷ ಸೇರುವುದಕ್ಕೆ ಅನೇಕರನ್ನು ಪ್ರೇರೇಪಿಸಿದನು. ಅವನೂ ನಾಶವಾದನು, ಮತ್ತು ಅವನನ್ನು ನಂಬಿದವರೆಲ್ಲರು ಚದರಿಹೋದರು.
ಅಪೊಸ್ತಲರ ಕೃತ್ಯಗ 5 : 38 (IRVKN)
ಹೀಗಿರುವುದರಿಂದ ನಾನು ನಿಮಗೆ ಹೇಳುವುದೇನಂದರೆ ನೀವು ಆ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ. ಏಕೆಂದರೆ ಈ ಯೋಚನೆಯು ಅಥವಾ ಈ ಕೆಲಸವು ಮನುಷ್ಯರಿಂದಾಗಿದ್ದರೆ ತಾನೇ ಕೆಡುವುದು;
ಅಪೊಸ್ತಲರ ಕೃತ್ಯಗ 5 : 39 (IRVKN)
ಅದು ದೇವರಿಂದಾಗಿದ್ದರೆ ಅದನ್ನು ಕೆಡಿಸುವುದಕ್ಕೆ ನಿಮ್ಮಿಂದ ಸಾಧ್ಯವಾಗುವುದಿಲ್ಲ; ನೀವು ಒಂದು ವೇಳೆ ದೇವರ ವಿರುದ್ಧ ಯುದ್ಧಮಾಡುವವರಾಗಿ ಕಾಣಿಸಿಕೊಂಡೀರಿ” ಎಂದು ಹೇಳಿದನು. [PE][PS]
ಅಪೊಸ್ತಲರ ಕೃತ್ಯಗ 5 : 40 (IRVKN)
ಅವರು ಅವನ ಮಾತಿಗೆ ಒಪ್ಪಿ ಅಪೊಸ್ತಲರನ್ನು ಕರೆಯಿಸಿ, ಹೊಡಿಸಿ ಯೇಸುವಿನ ಹೆಸರನ್ನು ಹೇಳಿ ಮಾತನಾಡಲೇಬಾರದೆಂದು ಅಪ್ಪಣೆಕೊಟ್ಟು ಅವರನ್ನು ಬಿಟ್ಟುಬಿಟ್ಟರು.
ಅಪೊಸ್ತಲರ ಕೃತ್ಯಗ 5 : 41 (IRVKN)
ಅಪೊಸ್ತಲರು ತಾವು ಯೇಸುವಿನ ಹೆಸರಿನ ನಿಮಿತ್ತವಾಗಿ ಅವಮಾನಪಡುವುದಕ್ಕೆ ಯೋಗ್ಯರೆನಿಸಿಕೊಂಡೆವೆಂದು ಸಂತೋಷಪಟ್ಟರು.
ಅಪೊಸ್ತಲರ ಕೃತ್ಯಗ 5 : 42 (IRVKN)
ಹಿರೀಸಭೆಯ ಎದುರಿನಿಂದ ಹೊರಟುಹೋಗಿ, ಪ್ರತಿದಿನ ಎಡೆಬಿಡದೆ ದೇವಾಲಯದಲ್ಲಿಯೂ, ಮನೆಮನೆಗಳಲ್ಲಿಯೂ, ಉಪದೇಶಮಾಡುತ್ತಾ ಕ್ರಿಸ್ತನಾದ ಯೇಸುವಿನ ಕುರಿತು ಶುಭವರ್ತಮಾನವನ್ನು ಸಾರುತ್ತಾ ಇದ್ದರು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42

BG:

Opacity:

Color:


Size:


Font: