ಅಪೊಸ್ತಲರ ಕೃತ್ಯಗ 6 : 1 (IRVKN)
ಸೇವಾಕಾರ್ಯಕ್ಕೆ ಏಳು ಮಂದಿಯನ್ನು ನೇಮಿಸಿದ್ದು ಆ ದಿನಗಳಲ್ಲಿ ಶಿಷ್ಯರು ಹೆಚ್ಚುತ್ತಾ ಬರಲಾಗಿ ಅವರೊಳಗೆ ಗ್ರೀಕ್ ಭಾಷೆಯವರು ಇಬ್ರಿಯ ಭಾಷೆಯವರ ಮೇಲೆ ದೂರು ನೀಡುತ್ತಾ ಅನುದಿನದ ಉಪಚಾರದಲ್ಲಿ ನಮ್ಮ ವಿಧವೆಯರನ್ನು ಸರಿಯಾಗಿ ಪರಾಂಬರಿಸುವುದಿಲ್ಲವೆಂದು ಗೊಣಗುಟ್ಟಿದರು.
ಅಪೊಸ್ತಲರ ಕೃತ್ಯಗ 6 : 2 (IRVKN)
ಆಗ ಹನ್ನೆರಡು ಮಂದಿ ಅಪೊಸ್ತಲರು ಶಿಷ್ಯರನ್ನು ಒಟ್ಟುಗೂಡಿಸಿ, “ನಾವು ದೇವರ ವಾಕ್ಯೋಪದೇಶವನ್ನು ಬಿಟ್ಟು ಉಪಚಾರಮಾಡುವುದು ಸರಿಯಲ್ಲವಲ್ಲಾ.
ಅಪೊಸ್ತಲರ ಕೃತ್ಯಗ 6 : 3 (IRVKN)
ಆದುದರಿಂದ ಸಹೋದರರೇ, ಪವಿತ್ರಾತ್ಮಭರಿತರೂ, ಜ್ಞಾನಸಂಪನ್ನರೂ ಮತ್ತು ಒಳ್ಳೆಯ ಸಾಕ್ಷಿಯನ್ನುಳಿಸಿಕೊಂಡಿರುವ ಏಳು ಮಂದಿಯನ್ನು ನಿಮ್ಮೊಳಗಿಂದ ನೋಡಿ ಆರಿಸಿಕೊಳ್ಳಿರಿ. ಅವರನ್ನು ಈ ಕೆಲಸಕ್ಕಾಗಿ ನೇಮಿಸುವೆವು.
ಅಪೊಸ್ತಲರ ಕೃತ್ಯಗ 6 : 4 (IRVKN)
ನಾವಾದರೋ ಪ್ರಾರ್ಥನೆಯನ್ನೂ, ವಾಕ್ಯೋಪದೇಶವನ್ನೂ ಮಾಡುವುದರಲ್ಲಿ ನಿರತರಾಗಿರುವೆವು” ಎಂದು ಹೇಳಿದರು.
ಅಪೊಸ್ತಲರ ಕೃತ್ಯಗ 6 : 5 (IRVKN)
ಈ ಮಾತು ಸರ್ವರಿಗೂ ಒಳ್ಳೆಯದೆಂದು ತೋಚಿತು. ಅವರು ಪವಿತ್ರಾತ್ಮಭರಿತರೂ, ನಂಬಿಕೆಯಿಂದ ತುಂಬಿದವರೂ ಆದ ಸ್ತೆಫನ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ, ಯೆಹೂದ್ಯ ಮತಾವಲಂಬಿಯಾದ ಅಂತಿಯೋಕ್ಯದ ನಿಕೊಲಾಯ ಎಂಬುವವರನ್ನೂ ಆರಿಸಿಕೊಂಡು ಅಪೊಸ್ತಲರ ಮುಂದೆ ನಿಲ್ಲಿಸಿದರು.
ಅಪೊಸ್ತಲರ ಕೃತ್ಯಗ 6 : 6 (IRVKN)
ಅಪೊಸ್ತಲರು ಅವರ ಮೇಲೆ ಕೈಗಳನ್ನಿಟ್ಟು ಪ್ರಾರ್ಥನೆಮಾಡಿ ಆ ಕಾರ್ಯಕ್ಕಾಗಿ ಅವರನ್ನು ನೇಮಿಸಿದರು.
ಅಪೊಸ್ತಲರ ಕೃತ್ಯಗ 6 : 7 (IRVKN)
ಅಪೊಸ್ತಲರ ಕೃತ್ಯಗ 6 : 8 (IRVKN)
ದೇವರ ವಾಕ್ಯವು ಪ್ರಬಲವಾಯಿತು; ಶಿಷ್ಯರ ಸಂಖ್ಯೆಯು ಯೆರೂಸಲೇಮಿನಲ್ಲಿ ಬಹಳವಾಗಿ ಹೆಚ್ಚುತ್ತಾ ಬಂದಿತು. ಯಾಜಕರಲ್ಲಿಯೂ ಬಹುಜನರು ಕ್ರಿಸ್ತ ನಂಬಿಕೆಗೆ ಒಳಗಾಗುತ್ತಾ ಬಂದರು. ಸ್ತೆಫನನ್ನು ಬಂಧಿಸಿದ್ದು ಸ್ತೆಫನನು ದೇವರ ಕೃಪೆಯಿಂದಲೂ, ಬಲದಿಂದಲೂ ತುಂಬಿದವನಾಗಿ ಜನರಲ್ಲಿ ಮಹಾ ಅದ್ಭುತ ಕಾರ್ಯಗಳನ್ನೂ, ಸೂಚಕಕಾರ್ಯಗಳನ್ನೂ ಮಾಡುತ್ತಾ ಇದ್ದನು.
ಅಪೊಸ್ತಲರ ಕೃತ್ಯಗ 6 : 9 (IRVKN)
ಆದರೆ ಲಿಬೆರ್ತೀನರೆಂಬವರ ಸಮಾಜಕ್ಕೆ ಸೇರಿದ ಕುರೇನ್ಯದವರು ಮತ್ತು ಅಲೆಕ್ಸಾಂದ್ರಿಯದವರು, ಕಿಲಿಕ್ಯ ಮತ್ತು ಆಸ್ಯ ಸೀಮೆಗಳಿಂದ ಬಂದವರಲ್ಲಿ ಕೆಲವರು ಎದ್ದು ಸ್ತೆಫನನ ಸಂಗಡ ತರ್ಕಮಾಡುತ್ತಾ ಇದ್ದರು.
ಅಪೊಸ್ತಲರ ಕೃತ್ಯಗ 6 : 10 (IRVKN)
ಅವನ ಮಾತಿನಲ್ಲಿ ಕಂಡುಬರುತ್ತಿದ್ದ ಜ್ಞಾನವನ್ನೂ, ಪವಿತ್ರಾತ್ಮ ಶಕ್ತಿಯನ್ನೂ ಎದುರಿಸಲಾರದೆ ಹೋದರು.
ಅಪೊಸ್ತಲರ ಕೃತ್ಯಗ 6 : 11 (IRVKN)
ಆಗ ಅವರು ಕೆಲವು ಜನರಿಗೆ, “ಇವನು ಮೋಶೆಗೆ ವಿರೋಧವಾಗಿಯೂ, ದೇವರಿಗೆ ವಿರೋಧವಾಗಿಯೂ ದೂಷಣೆಯ ಮಾತುಗಳನ್ನಾಡುವುದನ್ನು ಕೇಳಿದೆವೆಂದು” ಹೇಳಿರಿ ಎಂದು ಕೆಲವರನ್ನು ಮನವೊಲಿಸಿದರು.
ಅಪೊಸ್ತಲರ ಕೃತ್ಯಗ 6 : 12 (IRVKN)
ಅವರು ಜನರನ್ನೂ, ಹಿರಿಯರನ್ನೂ, ಶಾಸ್ತ್ರಿಗಳನ್ನೂ ಪ್ರಚೋದಿಸಿದರು ಮತ್ತು ಅವನನ್ನು ಹಿಡಿದು, ಎಳೆದುಕೊಂಡು, ಹಿರೀಸಭೆಗೆ ತೆಗೆದುಕೊಂಡು ಹೋಗಿ ಅವನಿಗೆ ವಿರುದ್ಧವಾಗಿ ಸುಳ್ಳುಸಾಕ್ಷಿಗಳನ್ನು ಕರತಂದು ನಿಲ್ಲಿಸಿದರು.
ಅಪೊಸ್ತಲರ ಕೃತ್ಯಗ 6 : 13 (IRVKN)
ಆ ಸಾಕ್ಷಿಗಳು, “ಈ ಮನುಷ್ಯನು ಈ ಪರಿಶುದ್ಧವಾದ ಸ್ಥಳಕ್ಕೆ ವಿರೋಧವಾಗಿಯೂ, ಧರ್ಮಶಾಸ್ತ್ರಕ್ಕೆ ವಿರೋಧವಾಗಿಯೂ ಮಾತನಾಡುವುದನ್ನು ನಿಲ್ಲಿಸುತ್ತಿಲ್ಲ ಎಂದು ಹೇಳಿದರು.
ಅಪೊಸ್ತಲರ ಕೃತ್ಯಗ 6 : 14 (IRVKN)
ಆ ನಜರೇತಿನ ಯೇಸು ಈ ಸ್ಥಳವನ್ನು ನಾಶಮಾಡಿ, ಮೋಶೆ ನಮಗೆ ನೇಮಿಸಿರುವ ಆಚಾರಗಳನ್ನು ಬೇರೆ ಮಾಡುವನೆಂಬುದಾಗಿ ಇವನು ಹೇಳುವುದನ್ನು ನಾವು ಕೇಳಿದ್ದೇವೆ” ಅಂದರು.
ಅಪೊಸ್ತಲರ ಕೃತ್ಯಗ 6 : 15 (IRVKN)
ಆಗ ಹಿರೀಸಭೆಯಲ್ಲಿ ಕುಳಿತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲು ಅವನ ಮುಖವು ದೇವದೂತನ ಮುಖದಂತೆ ಇರುವುದನ್ನು ಕಂಡರು.

1 2 3 4 5 6 7 8 9 10 11 12 13 14 15