ಅಪೊಸ್ತಲರ ಕೃತ್ಯಗ 7 : 1 (IRVKN)
ಸ್ತೆಫನನ ಬೋಧನೆ ಆಗ ಮಹಾಯಾಜಕನು, “ಈ ಸಂಗತಿಗಳು ಸತ್ಯವೋ?” ಎಂದು ಸ್ತೆಫನನನ್ನು ಕೇಳಿದ್ದಕ್ಕೆ ಅವನು, “ಸಹೋದರರೇ, ತಂದೆಗಳೇ, ಕೇಳಿರಿ.
ಅಪೊಸ್ತಲರ ಕೃತ್ಯಗ 7 : 2 (IRVKN)
ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಅವನಿಗೆ ಕಾಣಿಸಿಕೊಂಡು;
ಅಪೊಸ್ತಲರ ಕೃತ್ಯಗ 7 : 3 (IRVKN)
‘ನೀನು, ನಿನ್ನ ಸ್ವದೇಶವನ್ನೂ, ನಿನ್ನ ಬಂಧುಬಳಗವನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟುಹೋಗು’ ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 7 : 4 (IRVKN)
“ಆಗ ಅವನು ಕಲ್ದೀಯರ ದೇಶದಿಂದ ಹೊರಟುಹೋಗಿ, ಖಾರಾನಿನಲ್ಲಿ ವಾಸವಾಗಿದ್ದನು. ಅವನ ತಂದೆ ಸತ್ತಮೇಲೆ, ದೇವರು ಅವನನ್ನು ಅಲ್ಲಿಂದ ನೀವು ಈಗ ವಾಸವಾಗಿರುವ ಈ ದೇಶಕ್ಕೆ ಬರಮಾಡಿದನು.
ಅಪೊಸ್ತಲರ ಕೃತ್ಯಗ 7 : 5 (IRVKN)
ಈ ದೇಶದಲ್ಲಿ ಅವನಿಗೆ ಕಾಲಿಡುವಷ್ಷ್ಟು ಭೂಮಿಯನ್ನು ಸ್ವತ್ತಾಗಿ ಕೊಡದೆ ಅವನಿಗೆ ಮಕ್ಕಳೇ ಇಲ್ಲದಿರುವಾಗ ನೀನಿರುವ ದೇಶವನ್ನು ನಿನಗೂ, ನಿನ್ನ ನಂತರ ಬರುವ ನಿನ್ನ ಸಂತತಿಗೂ ಸ್ವತ್ತಾಗಿ ಕೊಡುವೆನೆಂದು ಅವನಿಗೆ ವಾಗ್ದಾನಮಾಡಿದನು.
ಅಪೊಸ್ತಲರ ಕೃತ್ಯಗ 7 : 6 (IRVKN)
ಇದಲ್ಲದೆ ದೇವರು ಹೇಳಿದ್ದೇನಂದರೆ, ‘ನಿನ್ನ ಸಂತಾನದವರು ಅನ್ಯದೇಶದಲ್ಲಿ ಪ್ರವಾಸಿಗಳಾಗಿರುವರು. ಆ ಅನ್ಯದೇಶದವರು ಅವರನ್ನು ದಾಸರನ್ನಾಗಿ ಮಾಡಿಕೊಂಡು ನಾನೂರು ವರ್ಷಗಳ ತನಕ ಕ್ರೂರವಾಗಿ ನಡಿಸುವರು.’
ಅಪೊಸ್ತಲರ ಕೃತ್ಯಗ 7 : 7 (IRVKN)
ಮತ್ತು ‘ನಿನ್ನ ಸಂತಾನದವರು ದಾಸರಾಗಿ ಸೇವೆಸಲ್ಲಿಸುವ ಅನ್ಯಜನರಿಗೆ ನಾನೇ ನ್ಯಾಯತೀರಿಸುವೆನು. ಆ ಮೇಲೆ ಅವರು ಹೊರಟುಬಂದು ಈ ಸ್ಥಳದಲ್ಲಿ ನನ್ನನ್ನು ಆರಾಧಿಸುವರು’ ಎಂಬುದೇ.
ಅಪೊಸ್ತಲರ ಕೃತ್ಯಗ 7 : 8 (IRVKN)
ಇದಲ್ಲದೆ ದೇವರು ಅವನ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅದಕ್ಕೆ ಗುರುತಾಗಿ ಸುನ್ನತಿಯನ್ನು ಏರ್ಪಡಿಸಿದನು. ಅದಕ್ಕನುಸಾರವಾಗಿ ಅಬ್ರಹಾಮನು ಇಸಾಕನನ್ನು ಪಡೆದು ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿದನು. ಮುಂದೆ ಇಸಾಕನು ಯಾಕೋಬನನ್ನು ಪಡೆದನು, ಯಾಕೋಬನು ಹನ್ನೆರಡು ಮಂದಿ ಪೂರ್ವಿಕರನ್ನು ಪಡೆದನು.
ಅಪೊಸ್ತಲರ ಕೃತ್ಯಗ 7 : 9 (IRVKN)
“ಪೂರ್ವಿಕರು ಹೊಟ್ಟೆಕಿಚ್ಚಿನಿಂದ ಯೋಸೇಫನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಚರು. ಅಲ್ಲಿ ದೇವರು ಅವನ ಸಂಗಡ ಇದ್ದು,
ಅಪೊಸ್ತಲರ ಕೃತ್ಯಗ 7 : 10 (IRVKN)
ಅವನಿಗೆ ಬಂದ ಎಲ್ಲಾ ಕಷ್ಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯೆಗೆ ಪಾತ್ರನೂ, ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ, ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಮಾಡಿದನು.
ಅಪೊಸ್ತಲರ ಕೃತ್ಯಗ 7 : 11 (IRVKN)
“ಆಗ ಐಗುಪ್ತ ಮತ್ತು ಕಾನಾನ್ ದೇಶಗಳಲ್ಲಿ ಎಲ್ಲೆಲ್ಲಿಯೂ ಬರಗಾಲ ಬಂದು ಜನರಿಗೆ ಬಹಳ ಸಂಕಟವಾಯಿತು; ಅಲ್ಲಿ ನಮ್ಮ ಪೂರ್ವಿಕರಿಗೆ ಆಹಾರ ಸಿಕ್ಕಲಿಲ್ಲ.
ಅಪೊಸ್ತಲರ ಕೃತ್ಯಗ 7 : 12 (IRVKN)
ಆದರೆ ಐಗುಪ್ತದೇಶದಲ್ಲಿ ದವಸಧಾನ್ಯ ಉಂಟೆಂಬುದನ್ನು ಯಾಕೋಬನು ಕೇಳಿ, ನಮ್ಮ ಪೂರ್ವಿಕರನ್ನು ಮೊದಲ ಸಾರಿ ಅಲ್ಲಿಗೆ ಕಳುಹಿಸಿದನು.
ಅಪೊಸ್ತಲರ ಕೃತ್ಯಗ 7 : 13 (IRVKN)
ಅವರು ಎರಡನೆಯ ಸಾರಿ ಬಂದಾಗ ಯೋಸೇಫನು ಅಣ್ಣತಮ್ಮಂದಿರಿಗೆ ತನ್ನ ಗುರುತು ಸಿಕ್ಕುವಂತೆ ಮಾಡಿದನು. ಮತ್ತು ಯೋಸೇಫನ ವಂಶವು ಫರೋಹನಿಗೆ ತಿಳಿದು ಬಂದಿತು.
ಅಪೊಸ್ತಲರ ಕೃತ್ಯಗ 7 : 14 (IRVKN)
ಆ ಮೇಲೆ ಯೋಸೇಫನು ತನ್ನ ತಂದೆಯಾದ ಯಾಕೋಬನನ್ನೂ ಮತ್ತು ತನ್ನ ಎಲ್ಲಾ ಬಂಧುಬಳಗವನ್ನೂ ಒಟ್ಟಿಗೆ ಎಪ್ಪತ್ತೈದು ಮಂದಿಯನ್ನು ಐಗುಪ್ತದೇಶಕ್ಕೆ ಕರೆಸಿಕೊಂಡನು.
ಅಪೊಸ್ತಲರ ಕೃತ್ಯಗ 7 : 15 (IRVKN)
ಯಾಕೋಬನು ಐಗುಪ್ತದೇಶಕ್ಕೆ ಬಂದು. ಅಲ್ಲಿ ಅವನೂ ಮತ್ತು ನಮ್ಮ ಪೂರ್ವಿಕರೂ ತೀರಿಹೋದರು.
ಅಪೊಸ್ತಲರ ಕೃತ್ಯಗ 7 : 16 (IRVKN)
ಅವರನ್ನು ಶೇಕೆಮಿಗೆ ತೆಗೆದುಕೊಂಡು ಹೋಗಿ ಅಲ್ಲಿ ಹಮೋರನ ಮಕ್ಕಳಿಂದ ಅಬ್ರಹಾಮನು ಬೆಳ್ಳಿಯನ್ನು ಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು.
ಅಪೊಸ್ತಲರ ಕೃತ್ಯಗ 7 : 17 (IRVKN)
“ಆದರೆ ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ್ದ ಕಾಲವು ಸಮೀಪಿಸುವಷ್ಟರಲ್ಲಿ ನಮ್ಮ ಜನರು ಐಗುಪ್ತ ದೇಶದಲ್ಲಿ ಹೆಚ್ಚಿ ಬಹಳವಾದರು.
ಅಪೊಸ್ತಲರ ಕೃತ್ಯಗ 7 : 18 (IRVKN)
ಕಡೆಗೆ ಯೋಸೇಫನನ್ನು ಅರಿಯದ ಬೇರೊಬ್ಬ ಅರಸನು ಆಳ್ವಿಕೆಗೆ ಬಂದನು.
ಅಪೊಸ್ತಲರ ಕೃತ್ಯಗ 7 : 19 (IRVKN)
ಈ ಅರಸನು ನಮ್ಮ ಪೂರ್ವಿಕರ ವಿರುದ್ಧವಾಗಿ ಕುಯುಕ್ತಿಯನ್ನು ಯೋಚಿಸಿ ಅವರ ಕೂಸುಗಳನ್ನು ಜೀವದಿಂದುಳಿಸಬಾರದೆಂದು ಹೊರಗೆ ಹಾಕಿಸಿ, ನಮ್ಮ ಪೂರ್ವಿಕರನ್ನು ಕ್ರೂರವಾಗಿ ಹಿಂಸಿಸಿಸನು.
ಅಪೊಸ್ತಲರ ಕೃತ್ಯಗ 7 : 20 (IRVKN)
ಆ ಸಮಯದಲ್ಲೇ ಮೋಶೆಯು ಹುಟ್ಟಿದನು. ಅವನು ದಿವ್ಯಸುಂದರನಾಗಿದ್ದನು ಮತ್ತು ತಂದೆಯ ಮನೆಯಲ್ಲಿ ಮೂರು ತಿಂಗಳು ಸಾಕಲ್ಪಟ್ಟನು.
ಅಪೊಸ್ತಲರ ಕೃತ್ಯಗ 7 : 21 (IRVKN)
ಆ ಮೇಲೆ ಅವನನ್ನು ಹೊರಗೆ ಹಾಕಿದಾಗ, ಫರೋಹನ ಮಗಳು ಅವನನ್ನು ಎತ್ತಿಕೊಂಡು ಹೋಗಿ ತನ್ನ ಮಗನಾಗಿ ಸಾಕಿದಳು.
ಅಪೊಸ್ತಲರ ಕೃತ್ಯಗ 7 : 22 (IRVKN)
ಮೋಶೆಯು ಐಗುಪ್ತದೇಶದವರ ಸರ್ವವಿದ್ಯೆಗಳಲ್ಲಿಯೂ ತಿಳಿವಳಿಕೆಯುಳ್ಳವನಾಗಿ ಮಾತುಗಳಲ್ಲಿಯೂ, ಕಾರ್ಯಗಳಲ್ಲಿಯೂ ಸಮರ್ಥನಾದನು.
ಅಪೊಸ್ತಲರ ಕೃತ್ಯಗ 7 : 23 (IRVKN)
“ಅವನಿಗೆ ನಲವತ್ತು ವರ್ಷ ವಯಸ್ಸು ತುಂಬುತ್ತಾ ಇರಲು, ಇಸ್ರಾಯೇಲ್ ವಂಶಸ್ಥರಾದ ತನ್ನ ಸಹೋದರರನ್ನು ಹೋಗಿ ನೋಡಬೇಕೆಂಬ ಆಸೆಯು ಅವನ ಹೃದಯದಲ್ಲಿ ಹುಟ್ಟಿತು.
ಅಪೊಸ್ತಲರ ಕೃತ್ಯಗ 7 : 24 (IRVKN)
ಅವರಲ್ಲಿ ಒಬ್ಬನಿಗೆ ಅನ್ಯಾಯವಾಗುವುದನ್ನು ಅವನು ನೋಡಿ, ಅವನಿಗೆ ಆಶ್ರಯಕೊಟ್ಟು ಪೀಡಿಸುವ ಐಗುಪ್ತ್ಯನನ್ನು ಹೊಡೆದುಹಾಕಿ ಮುಯ್ಯಿಗೆ ಮುಯ್ಯಿ ತೀರಿಸಿದನು.
ಅಪೊಸ್ತಲರ ಕೃತ್ಯಗ 7 : 25 (IRVKN)
ಹೀಗೆ ದೇವರು ತನ್ನ ಕೈಯಿಂದ ಬಿಡುಗಡೆಯನ್ನು ಉಂಟುಮಾಡುತ್ತಾನೆಂಬುದು ತನ್ನ ಸಹೋದರರಿಗೆ ತಿಳಿದುಬರುವುದೆಂದು ಭಾವಿಸಿದನು; ಆದರೆ ಅವರು ಹಾಗೆ ತಿಳಿದುಕೊಳ್ಳಲಿಲ್ಲ.
ಅಪೊಸ್ತಲರ ಕೃತ್ಯಗ 7 : 26 (IRVKN)
ಮರುದಿನ ತಾವು ತಾವೇ ಹೊಡೆದಾಡಿಕೊಳ್ಳುತ್ತಿರುವಾಗ ಅವನು ಅವರಿಗೆ ಎದುರಾಗಿ ಬಂದು, ‘ಜನರೇ, ನೀವು ಸಹೋದರರಲ್ಲವೇ, ನೀವೇಕೆ ಒಬ್ಬರಿಗೊಬ್ಬರು ಅನ್ಯಾಯ ಮಾಡುತ್ತೀರಿ?’ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಲು ಬಂದನು.
ಅಪೊಸ್ತಲರ ಕೃತ್ಯಗ 7 : 27 (IRVKN)
“ಆದರೆ ತನ್ನ ಸ್ವಕುಲದವನಿಗೆ ಅನ್ಯಾಯಮಾಡುತ್ತಿದ್ದವನು, ‘ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?
ಅಪೊಸ್ತಲರ ಕೃತ್ಯಗ 7 : 28 (IRVKN)
ನಿನ್ನೆ ಆ ಐಗುಪ್ತ್ಯನನ್ನು ಕೊಂದಂತೆ ನನ್ನನ್ನೂ ಕೊಲ್ಲಬೇಕೆಂದಿದ್ದೀಯೋ?’ ಎಂದು ಅವನನ್ನು ನೂಕಿಬಿಟ್ಟನು.
ಅಪೊಸ್ತಲರ ಕೃತ್ಯಗ 7 : 29 (IRVKN)
ಈ ಮಾತನ್ನು ಕೇಳಿ ಮೋಶೆಯು ಓಡಿಹೋಗಿ ಮಿದ್ಯಾನ್ ದೇಶದಲ್ಲಿ ಪ್ರವಾಸಿಯಾಗಿದ್ದನು. ಅಲ್ಲಿ ಅವನು ಇಬ್ಬರು ಗಂಡು ಮಕ್ಕಳನ್ನು ಪಡೆದನು.
ಅಪೊಸ್ತಲರ ಕೃತ್ಯಗ 7 : 30 (IRVKN)
“ನಲವತ್ತು ವರ್ಷ ತುಂಬಿದ ಮೇಲೆ ದೇವದೂತನು ಸೀನಾಯಿಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಅವನಿಗೆ ಕಾಣಿಸಿಕೊಂಡನು.
ಅಪೊಸ್ತಲರ ಕೃತ್ಯಗ 7 : 31 (IRVKN)
ಮೋಶೆಯು ಅದನ್ನು ಕಂಡು ಆ ನೋಟಕ್ಕೆ ಆಶ್ಚರ್ಯಪಟ್ಟು ಇದೇನೆಂದು, ಅದನ್ನು ಸ್ಪಷ್ಟವಾಗಿ ನೋಡಬೇಕೆಂದು ಹತ್ತಿರ ಬರಲು,
ಅಪೊಸ್ತಲರ ಕೃತ್ಯಗ 7 : 32 (IRVKN)
‘ನಾನು ನಿನ್ನ ಪೂರ್ವಿಕರಾದ, ಅಬ್ರಹಾಮ ಇಸಾಕ ಯಾಕೋಬರ ದೇವರು’ ಎಂಬ ಕರ್ತನ ಶಬ್ದವುಂಟಾಯಿತು. ಆಗ ಮೋಶೆಯು ನಡುಗುತ್ತಾ ಸ್ಥಿರನಾಗಿ ನೋಡುವುದಕ್ಕೆ ಧೈರ್ಯವಿಲ್ಲದವನಾದನು.
ಅಪೊಸ್ತಲರ ಕೃತ್ಯಗ 7 : 33 (IRVKN)
ಮತ್ತು ಕರ್ತನು ಅವನಿಗೆ, ‘ನಿನ್ನ ಕಾಲಿನ ಕೆರಗಳನ್ನು ತೆಗೆ; ನೀನು ನಿಂತಿರುವ ಸ್ಥಳವು ಪರಿಶುದ್ಧವಾದದ್ದು.
ಅಪೊಸ್ತಲರ ಕೃತ್ಯಗ 7 : 34 (IRVKN)
ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವುದಕ್ಕೆ ಇಳಿದುಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತದೇಶಕ್ಕೆ ಕಳುಹಿಸುತ್ತೇನೆ, ಬಾ’ ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 7 : 35 (IRVKN)
“ಅವರು ಯಾವ ಮೋಶೆಯನ್ನು ಬೇಡವೆಂದು ನಿರಾಕರಿಸಿ ‘ನಿನ್ನನ್ನು ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?’ ಎಂದು ಕೇಳಿದರೋ, ಅವನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿಯೂ, ಬಿಡುಗಡೆಮಾಡುವವನನ್ನಾಗಿಯೂ ನೇಮಿಸಿದನು.
ಅಪೊಸ್ತಲರ ಕೃತ್ಯಗ 7 : 36 (IRVKN)
ಅವನೇ ಐಗುಪ್ತ ದೇಶದಲ್ಲಿಯೂ, ಕೆಂಪು ಸಮುದ್ರದಲ್ಲಿಯೂ, ನಲವತ್ತು ವರ್ಷ ಮರುಭೂಮಿಯಲ್ಲಿಯೂ, ಅದ್ಭುತಕಾರ್ಯಗಳನ್ನೂ ಸೂಚಕ ಕಾರ್ಯಗಳನ್ನೂ ಮಾಡುತ್ತಾ ಅವರನ್ನು ನಡೆಸಿಕೊಂಡು ಬಂದನು.
ಅಪೊಸ್ತಲರ ಕೃತ್ಯಗ 7 : 37 (IRVKN)
“ಆ ಮೋಶೆಯೇ, ‘ದೇವರು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮ್ಮೊಳಗೆ ಎಬ್ಬಿಸುವನು’ ಎಂದು ಇಸ್ರಾಯೇಲ್ ಜನರಿಗೆ ಹೇಳಿದನು.
ಅಪೊಸ್ತಲರ ಕೃತ್ಯಗ 7 : 38 (IRVKN)
ಅವನೇ ಸೀನಾಯಿಬೆಟ್ಟದಲ್ಲಿ, ತನ್ನೊಡನೆ ಮಾತನಾಡಿದ ದೇವದೂತನಿಗೂ ನಮ್ಮ ಪೂರ್ವಿಕರಿಗೂ ಅಡವಿಯಲ್ಲಿದ್ದ ಸಭೆಯೊಳಗೆ ಇದ್ದು ಜೀವಕರವಾದ ದೈವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು ಆಗಿದ್ದಾನೆ.
ಅಪೊಸ್ತಲರ ಕೃತ್ಯಗ 7 : 39 (IRVKN)
ಅಪೊಸ್ತಲರ ಕೃತ್ಯಗ 7 : 40 (IRVKN)
“ಆದರೆ ನಮ್ಮ ಪೂರ್ವಿಕರು ಅವನ ಮಾತುಗಳನ್ನು ಕೇಳುವುದಕ್ಕೆ ಮನಸ್ಸಿಲ್ಲದೆ ಅವನನ್ನು ತಳ್ಳಿಬಿಟ್ಟು, ಪುನಃ ಐಗುಪ್ತದೇಶದ ಕಡೆಗೆ ಮನಸ್ಸಿಟ್ಟರು. “ಅವರು ಆರೋನನಿಗೆ, ‘ಐಗುಪ್ತ ದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ, ಆದುದರಿಂದ ನಮಗೆ ಮುಂದಾಗಿ ಹೋಗುವುದಕ್ಕೆ ದೇವರುಗಳನ್ನು ನಮಗೆ ಮಾಡಿಕೊಡು’ ಎಂದು ಕೇಳಿಕೊಂಡರು.
ಅಪೊಸ್ತಲರ ಕೃತ್ಯಗ 7 : 41 (IRVKN)
ಆ ದಿನಗಳಲ್ಲಿ ಅವರು ಒಂದು ಬಸವನನ್ನು ಮಾಡಿ ಆ ವಿಗ್ರಹಕ್ಕೆ ಬಲಿಯನ್ನು ಅರ್ಪಿಸಿ ತಮ್ಮ ಕೈಗಳಿಂದ ನಿರ್ಮಿಸಿದ ವಸ್ತುವಿನಲ್ಲಿ ಉಲ್ಲಾಸ ಪಟ್ಟರು.
ಅಪೊಸ್ತಲರ ಕೃತ್ಯಗ 7 : 42 (IRVKN)
ಆದರೆ ದೇವರು ಅವರಿಗೆ ವಿಮುಖನಾಗಿ, ಆಕಾಶದ ನಕ್ಷತ್ರಗಣಗಳನ್ನು ಪೂಜಿಸುವುದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವುದೇನಂದರೆ, “ ‘ಇಸ್ರಾಯೇಲ್ ವಂಶದವರೇ, ನೀವು ಅರಣ್ಯದಲ್ಲಿದ್ದ ನಲವತ್ತು ವರ್ಷ ನನಗೆ ಯಜ್ಞಗಳನ್ನೂ, ಬಲಿಗಳನ್ನೂ ಅರ್ಪಿಸುತ್ತಿದ್ದಿರೋ? ಇಲ್ಲವಲ್ಲಾ;
ಅಪೊಸ್ತಲರ ಕೃತ್ಯಗ 7 : 43 (IRVKN)
ಅದಕ್ಕೆ ಬದಲಾಗಿ ನೀವು ಆರಾಧಿಸಬೇಕೆಂದು ಮಾಡಿಕೊಂಡ ಮೂರ್ತಿಗಳನ್ನು ಅಂದರೆ ಮೊಲೋಖನ ಗುಡಾರವನ್ನೂ ರೆಫಾನ್ ದೇವತೆಯ ನಕ್ಷತ್ರರೂಪವನ್ನೂ ಹೊತ್ತುಕೊಂಡು ಹೋಗುತ್ತಿದ್ದಿರಲ್ಲಾ. ಆದುದರಿಂದ ನಾನು ನಿಮ್ಮನ್ನು ಬಾಬಿಲೋನಿನ ಆಚೆಗೆ ಗಡಿಪಾರು ಮಾಡುವೆನು’ ಎಂಬುದೇ ಆಗಿದೆ.
ಅಪೊಸ್ತಲರ ಕೃತ್ಯಗ 7 : 44 (IRVKN)
“ದೇವದರ್ಶನ ಗುಡಾರವು ಮರುಭೂಮಿಯಲ್ಲಿ ನಮ್ಮ ಪೂರ್ವಿಕರ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದವನು, ನೀನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸಬೇಕೆಂದು ಆಜ್ಞಾಪಿಸಿದ್ದನು.
ಅಪೊಸ್ತಲರ ಕೃತ್ಯಗ 7 : 45 (IRVKN)
ನಮ್ಮ ಹಿರಿಯರು ಅದನ್ನು ತಮ್ಮ ಪೂರ್ವಿಕರಿಂದ ಹೊಂದಿದ್ದರು. ಅವರು ಯೆಹೋಶುವನನ್ನು ಅನುಸರಿಸಿ ಬಂದು ದೇವರು ತಳ್ಳಿಬಿಟ್ಟ ಅನ್ಯಜನಗಳ ದೇಶವನ್ನು ಸ್ವಾಧೀನಮಾಡಿಕೊಂಡಾಗ ಆ ಗುಡಾರವನ್ನು ಕೂಡ ತಂದರು. ಅದು ದಾವೀದನ ಕಾಲದವರೆಗೂ ಅಲ್ಲೇ ಇತ್ತು.
ಅಪೊಸ್ತಲರ ಕೃತ್ಯಗ 7 : 46 (IRVKN)
ದಾವೀದನು ದೇವರ ಸನ್ನಿಧಾನದಲ್ಲಿ ಕೃಪೆ ಹೊಂದಿ ಯಾಕೋಬನ ವಂಶದವರಿಗೋಸ್ಕರ ದೇವಾಲಯವನ್ನು ಕಟ್ಟಿಸುವುದಕ್ಕೆ ಅಪ್ಪಣೆಯಾಗಬೇಕೆಂದು ಕೇಳಿಕೊಂಡನು.
ಅಪೊಸ್ತಲರ ಕೃತ್ಯಗ 7 : 47 (IRVKN)
ಆದರೆ ದೇವರಿಗೋಸ್ಕರ ಆಲಯವನ್ನು ಕಟ್ಟಿಸಿದವನು ಸೊಲೊಮೋನನು.
ಅಪೊಸ್ತಲರ ಕೃತ್ಯಗ 7 : 48 (IRVKN)
ಆದರೂ ಪರಾತ್ಪರನಾದ ದೇವರು ಮನುಷ್ಯರ ಕೈಯಿಂದ ಕಟ್ಟಿದ ನಿವಾಸಗಳಲ್ಲಿ ವಾಸಮಾಡುವವನಲ್ಲ.
ಅಪೊಸ್ತಲರ ಕೃತ್ಯಗ 7 : 49 (IRVKN)
“ ‘ಆಕಾಶವು ನನಗೆ ಸಿಂಹಾಸನ, ಭೂಮಿಯು ನನ್ನ ಪಾದಗಳಿಗೆ ಪೀಠ; ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವುದು?
ಅಪೊಸ್ತಲರ ಕೃತ್ಯಗ 7 : 50 (IRVKN)
ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತಲ್ಲಾ ಎಂಬುದಾಗಿ ಕರ್ತನು ಹೇಳುತ್ತಾನೆ’ ಎಂದು ಪ್ರವಾದಿಯು ನುಡಿದಿದ್ದಾನೆ.
ಅಪೊಸ್ತಲರ ಕೃತ್ಯಗ 7 : 51 (IRVKN)
“ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.
ಅಪೊಸ್ತಲರ ಕೃತ್ಯಗ 7 : 52 (IRVKN)
ಪ್ರವಾದಿಗಳಲ್ಲಿ ನಿಮ್ಮ ಪೂರ್ವಿಕರು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ.
ಅಪೊಸ್ತಲರ ಕೃತ್ಯಗ 7 : 53 (IRVKN)
ದೇವದೂತರ ಮೂಲಕ ನೇಮಕವಾದ ಧರ್ಮಶಾಸ್ತ್ರವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸುವುದಿಲ್ಲ” ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 7 : 54 (IRVKN)
ಸ್ತೆಫನನ ಮೇಲೆ ಕಲ್ಲೆಸೆದದ್ದು ಈ ಮಾತುಗಳನ್ನು ಕೇಳಿ ಅವರು ರೌದ್ರಮನಸ್ಸುಳ್ಳವರಾಗಿ ಅವನ ಮೇಲೆ ಹಲ್ಲು ಕಡಿದರು.
ಅಪೊಸ್ತಲರ ಕೃತ್ಯಗ 7 : 55 (IRVKN)
ಆದರೆ ಅವನು ಪವಿತ್ರಾತ್ಮಭರಿತನಾಗಿ ಆಕಾಶದ ಕಡೆಗೆ ದೃಷ್ಟಿಸಿ ನೋಡಿ, ದೇವರ ಮಹಿಮೆಯನ್ನೂ, ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು;
ಅಪೊಸ್ತಲರ ಕೃತ್ಯಗ 7 : 56 (IRVKN)
“ಅಗೋ, ಆಕಾಶವು ತೆರೆದಿರುವುದನ್ನೂ, ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ನಾನು ನೋಡುತ್ತಿದ್ದೇನೆ” ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 7 : 57 (IRVKN)
ಆದರೆ ಅವರು ಮಹಾಶಬ್ದದಿಂದ ಕೂಗಿ, ಕಿವಿಗಳನ್ನು ಮುಚ್ಚಿಕೊಂಡು, ಒಟ್ಟಾಗಿ ಅವನ ಮೇಲೆ ಬಿದ್ದು,
ಅಪೊಸ್ತಲರ ಕೃತ್ಯಗ 7 : 58 (IRVKN)
ಅವನನ್ನು ಊರ ಹೊರಕ್ಕೆ ನೂಕಿಕೊಂಡು ಹೋಗಿ ಕೊಲ್ಲುವುದಕ್ಕೆ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಕಾಲುಗಳ ಬಳಿಯಲ್ಲಿ ಇಟ್ಟರು.
ಅಪೊಸ್ತಲರ ಕೃತ್ಯಗ 7 : 59 (IRVKN)
ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು, ಅವನು ಕರ್ತನ ಹೆಸರನ್ನು ಹೇಳಿ, “ಕರ್ತನಾದ, ಯೇಸುವೇ, ನನ್ನಾತ್ಮವನ್ನು ಸೇರಿಸಿಕೋ” ಎಂದು ಪ್ರಾರ್ಥಿಸಿ,
ಅಪೊಸ್ತಲರ ಕೃತ್ಯಗ 7 : 60 (IRVKN)
ಮೊಣಕಾಲೂರಿ, “ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು” ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿ ನಿದ್ರೆಹೋದನು.
❮
❯