ಅಪೊಸ್ತಲರ ಕೃತ್ಯಗ 8 : 1 (IRVKN)
ಸೌಲನಿಗೆ ಅವನ ಕೊಲೆಗೆ ಸಮ್ಮತಿಸಿದನು. [PS] ಆ ದಿನದಲ್ಲಿ ಯೆರೂಸಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರು ಹೊರತಾಗಿ ಎಲ್ಲರೂ ಯೂದಾಯ, ಸಮಾರ್ಯ ಸೀಮೆಗಳಿಗೆ ಚದರಿಹೋದರು.
ಅಪೊಸ್ತಲರ ಕೃತ್ಯಗ 8 : 2 (IRVKN)
{ಸಭೆ ಹಿಂಸೆಗೆ ಗುರಿಯಾದದ್ದು ಮತ್ತು ಚದರಿಹೋದದ್ದು} [PS] ಭಕ್ತರಾದ ಜನರು ಸ್ತೆಫನನ ದೇಹವನ್ನು ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.
ಅಪೊಸ್ತಲರ ಕೃತ್ಯಗ 8 : 3 (IRVKN)
ಆದರೆ ಸೌಲನು ಮನೆಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದುಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ನಾಶಮಾಡುತ್ತಿದ್ದನು. ಫಿಲಿಪ್ಪನು ಸಮಾರ್ಯದಲ್ಲಿ ಸುವಾರ್ತೆಯನ್ನು ಘೋಷಿಸಿದ್ದು; ಹಾಗು ಸೀಮೋನನೆಂಬ ಮಂತ್ರವಾದಿಯನ್ನು ಕುರಿತದ್ದು [PE][PS]
ಅಪೊಸ್ತಲರ ಕೃತ್ಯಗ 8 : 4 (IRVKN)
ಚದರಿಹೋದವರು ಅಲ್ಲಲ್ಲಿ ಹೋಗಿ ಸುವಾರ್ತೆಯನ್ನು ಸಾರುತ್ತಿದ್ದರು.
ಅಪೊಸ್ತಲರ ಕೃತ್ಯಗ 8 : 5 (IRVKN)
ಫಿಲಿಪ್ಪನು ಸಮಾರ್ಯವೆಂಬ ಪಟ್ಟಣಕ್ಕೆ ಹೋಗಿ ಕ್ರಿಸ್ತನ ವಿಷಯವಾಗಿ ಅಲ್ಲಿರುವವರಿಗೆ ಪ್ರಚುರಪಡಿಸಿದನು.
ಅಪೊಸ್ತಲರ ಕೃತ್ಯಗ 8 : 6 (IRVKN)
ಗುಂಪಾಗಿ ಕೂಡಿದ ಜನಗಳು ಫಿಲಿಪ್ಪನ ಮಾತುಗಳನ್ನು ಕೇಳಿ ಅವನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಅವನು ಹೇಳಿದ ಸಂಗತಿಗಳಿಗೆ ಒಮ್ಮನಸ್ಸಿನಿಂದ ಗಮನಕೊಟ್ಟರು.
ಅಪೊಸ್ತಲರ ಕೃತ್ಯಗ 8 : 7 (IRVKN)
ಏಕೆಂದರೆ ಅನೇಕರೊಳಗಿಂದ ದೆವ್ವಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಮತ್ತು ಅನೇಕ ಪಾರ್ಶ್ವವಾಯು ರೋಗಿಗಳೂ ವಿಕಲಾಂಗರು ಸ್ವಸ್ಥರಾದರು.
ಅಪೊಸ್ತಲರ ಕೃತ್ಯಗ 8 : 8 (IRVKN)
ಆ ಪಟ್ಟಣದಲ್ಲಿ ಬಹು ಸಂತೋಷವುಂಟಾಯಿತು. [PE][PS]
ಅಪೊಸ್ತಲರ ಕೃತ್ಯಗ 8 : 9 (IRVKN)
ಆದರೆ ಕೆಲವು ಕಾಲದಿಂದ ಆ ಪಟ್ಟಣದಲ್ಲಿದ್ದ ಸೀಮೋನನೆಂಬ ಒಬ್ಬ ಮನುಷ್ಯನು ತಾನು ಏನೋ ಒಬ್ಬ ಮಹಾತ್ಮನೆಂದು ಹೇಳಿಕೊಂಡು ಮಂತ್ರತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರಗನ್ನು ಹುಟ್ಟಿಸುತ್ತಿದ್ದನು.
ಅಪೊಸ್ತಲರ ಕೃತ್ಯಗ 8 : 10 (IRVKN)
ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೂ ಎಲ್ಲರೂ, “ಇವನು ಮಹಾಶಕ್ತಿ ಎನಿಸಿಕೊಂಡಿರುವ ದೇವರ ಶಕ್ತಿಯೇ” ಎಂದು ಹೇಳುತ್ತಾ ಅವನಿಗೆ ಲಕ್ಷ್ಯಕೊಡುತ್ತಿದ್ದರು. [PE][PS]
ಅಪೊಸ್ತಲರ ಕೃತ್ಯಗ 8 : 11 (IRVKN)
ಬಹುಕಾಲದಿಂದಲೂ ಅವನ ಮಂತ್ರತಂತ್ರಗಳಿಗೆ ಮಾರುಹೋಗಿದ್ದ ಜನರು ಇವನ ಮಾತಿಗೆ ಕಿವಿಗೊಡುತ್ತಿದ್ದರು. [PE][PS]
ಅಪೊಸ್ತಲರ ಕೃತ್ಯಗ 8 : 12 (IRVKN)
ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯದಲ್ಲಿಯೂ ಶುಭವರ್ತಮಾನವನ್ನು ಸಾರಲು ಗಂಡಸರೂ ಹೆಂಗಸರೂ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.
ಅಪೊಸ್ತಲರ ಕೃತ್ಯಗ 8 : 13 (IRVKN)
ಆಗ ಸೀಮೋನನೂ ಕೂಡ ನಂಬಿ ದೀಕ್ಷಾಸ್ನಾನಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಆಗುತ್ತಿದ್ದುದನ್ನು ನೋಡಿ ಬೆರಗಾಗುತ್ತಿದ್ದನು. [PE][PS]
ಅಪೊಸ್ತಲರ ಕೃತ್ಯಗ 8 : 14 (IRVKN)
ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ, ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.
ಅಪೊಸ್ತಲರ ಕೃತ್ಯಗ 8 : 15 (IRVKN)
ಇವರು ಅಲ್ಲಿಗೆ ಬಂದು ಆ ಜನರಿಗೆ ಪವಿತ್ರಾತ್ಮವರವು ದೊರೆಯಬೇಕೆಂದು ಅವರಿಗೋಸ್ಕರ ಪ್ರಾರ್ಥನೆಮಾಡಿದರು.
ಅಪೊಸ್ತಲರ ಕೃತ್ಯಗ 8 : 16 (IRVKN)
ಏಕೆಂದರೆ ಪವಿತ್ರಾತ್ಮವರವು ಅವರಲ್ಲಿ ಒಬ್ಬನ ಮೇಲಾದರೂ ಇನ್ನೂ ಬಂದಿರಲಿಲ್ಲ. ಅವರು ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನವನ್ನು ಮಾತ್ರ ಮಾಡಿಸಿಕೊಂಡಿದ್ದರು
ಅಪೊಸ್ತಲರ ಕೃತ್ಯಗ 8 : 17 (IRVKN)
ಅಪೊಸ್ತಲರು ಅವರ ಮೇಲೆ ಕೈಗಳನ್ನಿಡಲು ಅವರು ಪವಿತ್ರಾತ್ಮವರವನ್ನು ಹೊಂದಿದರು.
ಅಪೊಸ್ತಲರ ಕೃತ್ಯಗ 8 : 18 (IRVKN)
ಅಪೊಸ್ತಲರು ಕೈಗಳನ್ನಿಡುವುದರ ಮೂಲಕವಾಗಿ ಪವಿತ್ರಾತ್ಮದಾನವಾಗುವುದನ್ನು ಸೀಮೋನನು ಕಂಡು ಹಣವನ್ನು ತಂದು ಅವರ ಮುಂದಿಟ್ಟು,
ಅಪೊಸ್ತಲರ ಕೃತ್ಯಗ 8 : 19 (IRVKN)
“ನಾನು ಯಾರ ಮೇಲೆ ಕೈಗಳನ್ನಿಡುತ್ತೇನೋ ಅವರು ಪವಿತ್ರಾತ್ಮವರವನ್ನು ಹೊಂದುವಂತೆ ಈ ಅಧಿಕಾರವನ್ನು ನನಗೂ ಕೊಡಿರಿ” ಅಂದನು.
ಅಪೊಸ್ತಲರ ಕೃತ್ಯಗ 8 : 20 (IRVKN)
ಆದರೆ ಪೇತ್ರನು ಅವನಿಗೆ, “ನಿನ್ನ ಬೆಳ್ಳಿಯು ನಿನ್ನ ಕೂಡ ಹಾಳಾಗಿಹೋಗಲಿ. ದೇವರ ವರವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಭಾವಿಸುತ್ತೀಯೋ?
ಅಪೊಸ್ತಲರ ಕೃತ್ಯಗ 8 : 21 (IRVKN)
ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಯಾವ ಪಾಲೂ ಇಲ್ಲ; ಏಕೆಂದರೆ ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ.
ಅಪೊಸ್ತಲರ ಕೃತ್ಯಗ 8 : 22 (IRVKN)
ಆದುದರಿಂದ ಈ ನಿನ್ನ ಕೆಟ್ಟತನವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೋ ಕರ್ತನು ನಿನ್ನ ಮನಸ್ಸಿನ ಆಲೋಚನೆಯನ್ನು ಕ್ಷಮಿಸುವನೋ ಏನೋ ಆತನನ್ನು ಬೇಡಿಕೋ.
ಅಪೊಸ್ತಲರ ಕೃತ್ಯಗ 8 : 23 (IRVKN)
ನೀನು ಕಡು ಕಹಿಯಾದ ದ್ವೇಷದಿಂದಲೂ ಮತ್ತು ವಿಷಕಾರಕವಾದ ಅನೀತಿಯಿಂದಲೂ ತುಂಬಿದವನಾಗಿರುವುದನ್ನು ನಾನು ಕಾಣುತ್ತಿದ್ದೇನೆ” ಅಂದನು
ಅಪೊಸ್ತಲರ ಕೃತ್ಯಗ 8 : 24 (IRVKN)
ಅದಕ್ಕೆ ಸೀಮೋನನು, “ನೀವು ಹೇಳಿರುವ ಸಂಗತಿಗಳಲ್ಲಿ ಯಾವುದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ಕರ್ತನನ್ನು ಬೇಡಿಕೊಳ್ಳಿರಿ” ಎಂದು ಹೇಳಿದನು. [PE][PS]
ಅಪೊಸ್ತಲರ ಕೃತ್ಯಗ 8 : 25 (IRVKN)
ಹೀಗಿರಲಾಗಿ ಅವರು ಕರ್ತನ ವಾಕ್ಯವನ್ನು ಪ್ರಮಾಣಪೂರ್ವಕವಾಗಿ ಹೇಳಿದ ಮೇಲೆ ಯೆರೂಸಲೇಮಿಗೆ ಹಿಂತಿರುಗಿ ಬಂದು ಸಮಾರ್ಯದವರ ಅನೇಕ ಊರುಗಳಲ್ಲಿ ಸುವಾರ್ತೆಯನ್ನು ಸಾರಿದರು. [PS]
ಅಪೊಸ್ತಲರ ಕೃತ್ಯಗ 8 : 26 (IRVKN)
{ಫಿಲಿಪ್ಪನು ಇಥಿಯೋಪ್ಯದವನಿಗೆ ಸುವಾರ್ತೆಯನ್ನು ತಿಳಿಸಿದ್ದು} [PS] ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ, “ನೀನು ಎದ್ದು ದಕ್ಷಿಣದ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ” ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 8 : 27 (IRVKN)
ಅವನು ಎದ್ದು ಹೊರಟು ಹೋಗುತ್ತಿರುವಾಗ ಇಥಿಯೋಪ್ಯ ದೇಶದ ಒಬ್ಬ ಮನುಷ್ಯನನ್ನು ಕಂಡನು. ಅವನು ಕಂಚುಕಿಯೂ ಇಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾರಿಯೂ ಹಾಗೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದನು.
ಅಪೊಸ್ತಲರ ಕೃತ್ಯಗ 8 : 28 (IRVKN)
ಅವನು ದೇವಾರಾಧನೆಗೋಸ್ಕರ ಯೆರೂಸಲೇಮಿಗೆ ಬಂದು ಹಿಂತಿರುಗಿ ಹೋಗುವಾಗ ತನ್ನ ರಥದಲ್ಲಿ ಕುಳಿತುಕೊಂಡು ಪ್ರವಾದಿ ಯೆಶಾಯನ ಗ್ರಂಥವನ್ನು ಓದುತ್ತಿದ್ದನು.
ಅಪೊಸ್ತಲರ ಕೃತ್ಯಗ 8 : 29 (IRVKN)
ದೇವರಾತ್ಮನು ಫಿಲಿಪ್ಪನಿಗೆ, “ನೀನು ಆ ರಥದ ಹತ್ತಿರ ಹೋಗಿ ಅದರೊಂದಿಗೆ ಸೇರಿ ನಡೆ” ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 8 : 30 (IRVKN)
ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಪ್ರವಾದಿಯಾದ ಯೆಶಾಯನ ಗ್ರಂಥವನ್ನು ಓದುತ್ತಿರುವುದನ್ನು ಕೇಳಿ, “ಎಲೈ, ನೀನು ಓದುತ್ತಿರುವುದು ನಿನಗೆ ಅರ್ಥವಾಗುತ್ತಿದೆಯೋ?” ಎಂದು ಕೇಳಿದನು.
ಅಪೊಸ್ತಲರ ಕೃತ್ಯಗ 8 : 31 (IRVKN)
ಅದಕ್ಕೆ ಅವನು, “ಯಾರಾದರೂ ನನಗೆ ಅರ್ಥ ತಿಳಿಸಿಕೊಡದ ಹೊರತು ಅದು ನನಗೆ ಹೇಗೆ ತಿಳಿದೀತು?” ಎಂದು ಹೇಳಿ, ನೀನು ರಥವನ್ನು ಹತ್ತಿ ನನ್ನ ಬಳಿಯಲ್ಲಿ ಕುಳಿತುಕೋ ಎಂಬುದಾಗಿ ಫಿಲಿಪ್ಪನನ್ನು ಕೇಳಿಕೊಂಡನು.
ಅಪೊಸ್ತಲರ ಕೃತ್ಯಗ 8 : 32 (IRVKN)
ಅವನು ಓದುತ್ತಿದ್ದ ಶಾಸ್ತ್ರವಚನವು ಯಾವುದೆಂದರೆ, [QBR] “ವಧಿಸುವಸ್ಥಾನಕ್ಕೆ ಒಯ್ಯಲ್ಪಡುವ ಕುರಿಮರಿಯಂತೆ ಆತನು ಒಯ್ಯಲ್ಪಟ್ಟನು; [QBR] ಮತ್ತು ಕುರಿಮರಿಯು ಉಣ್ಣೆ ಕತ್ತರಿಸುವವನ ಮುಂದೆ ಮೌನವಾಗಿರುವಂತೆ [QBR] ಆತನು ಬಾಯಿ ತೆರೆಯದೆ ಮೌನವಾಗಿದ್ದನು. [QBR]
ಅಪೊಸ್ತಲರ ಕೃತ್ಯಗ 8 : 33 (IRVKN)
ಆತನಿಗಾದ ಅವಮಾನದ ನ್ಯಾಯವಿಚಾರಣೆಯಲ್ಲಿ ಆತನಿಗೆ ನ್ಯಾಯ ಸಿಗಲಿಲ್ಲ. [QBR] ಆತನ ಪೀಳಿಗೆಯ ಕುರಿತಾಗಿ ಯಾರು ವಿವರಿಸಬಲ್ಲರು? [QBR] ಆತನ ಜೀವವನ್ನು ಭೂಮಿಯಿಂದ ತೆಗೆದುಬಿಟ್ಟರಲ್ಲಾ” ಎಂಬುದೇ. [PE][PS]
ಅಪೊಸ್ತಲರ ಕೃತ್ಯಗ 8 : 34 (IRVKN)
ಕಂಚುಕಿಯು ಈ ವಚನವನ್ನು ಕುರಿತು, “ಪ್ರವಾದಿಯು ಇದನ್ನು ಯಾರ ಬಗ್ಗೆ ಹೇಳಿದ್ದಾನೆ? ತನ್ನನ್ನು ಕುರಿತೋ ಅಥವಾ ಮತ್ತೊಬ್ಬನ ವಿಷಯದಲ್ಲಿಯೋ?” ದಯಮಾಡಿ ಹೇಳಬೇಕು ಎಂದು ಫಿಲಿಪ್ಪನನ್ನು ಕೇಳಲು
ಅಪೊಸ್ತಲರ ಕೃತ್ಯಗ 8 : 35 (IRVKN)
ಫಿಲಿಪ್ಪನು ಬೋಧಿಸುವುದಕ್ಕೆ ತೊಡಗಿ ಅದೇ ವಚನವನ್ನು ಆಧಾರಮಾಡಿಕೊಂಡು ಅವನಿಗೆ ಯೇಸುವಿನ ವಿಷಯವಾದ ಸುವಾರ್ತೆಯನ್ನು ತಿಳಿಸಿದನು. [PE][PS]
ಅಪೊಸ್ತಲರ ಕೃತ್ಯಗ 8 : 36 (IRVKN)
ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿರುವ ಜಾಗಕ್ಕೆ ಬಂದರು.
ಅಪೊಸ್ತಲರ ಕೃತ್ಯಗ 8 : 37 (IRVKN)
ಕಂಚುಕಿಯು, “ಆಗೋ, ನೀರು; ನನಗೆ ದೀಕ್ಷಾಸ್ನಾನವಾಗುವುದಕ್ಕೆ ಅಡ್ಡಿ ಏನು?” ಎಂದು ಹೇಳಿ ರಥವನ್ನು ನಿಲ್ಲಿಸು ಎಂದು ಅಪ್ಪಣೆ ಕೊಟ್ಟನು;
ಅಪೊಸ್ತಲರ ಕೃತ್ಯಗ 8 : 38 (IRVKN)
ಫಿಲಿಪ್ಪನು ಕಂಚುಕಿಯು ಇಬ್ಬರೂ ನೀರಿನೊಳಗೆ ಇಳಿದರು. ಫಿಲಿಪ್ಪನು ಅವನಿಗೆ ದೀಕ್ಷಾಸ್ನಾನ ಮಾಡಿಸಿದನು.
ಅಪೊಸ್ತಲರ ಕೃತ್ಯಗ 8 : 39 (IRVKN)
ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮ ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಆ ಕಂಚುಕಿಯು ಫಿಲಿಪ್ಪನನ್ನು ಪುನಃ ಕಾಣಲಿಲ್ಲ. ಅವನು ಸಂತೋಷವುಳ್ಳವನಾಗಿ ತನ್ನ ಪ್ರಯಾಣವನ್ನು ಮುಂದುವರಿಸಿದನು.
ಅಪೊಸ್ತಲರ ಕೃತ್ಯಗ 8 : 40 (IRVKN)
ತರುವಾಯ ಫಿಲಿಪ್ಪನು ಅಜೋತ್ ಎಂಬಲ್ಲಿ ಕಾಣಿಸಿಕೊಂಡು ಅಲ್ಲಿಂದ ಕೈಸರೈಯದ ತನಕ ಎಲ್ಲಾ ಊರುಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40

BG:

Opacity:

Color:


Size:


Font: