ಆಮೋಸ 4 : 1 (IRVKN)
ಸಮಾರ್ಯದ ಸ್ತ್ರೀಯರ ಖಂಡನೆ ಸಮಾರ್ಯ ಬೆಟ್ಟದಲ್ಲಿನ, ಬಾಷಾನಿನ* ಬಾಷಾನಿನ ಅಂದರೆ ಬಹಳ ಫಲವತ್ತಾದ ಭೂಮಿ. ಕೊಬ್ಬಿದ ಹಸುಗಳಂತಿರುವ ಸ್ತ್ರೀಯರೇ, ಬಡವರನ್ನು ಹಿಂಸಿಸಿ, ದಿಕ್ಕಿಲ್ಲದವರನ್ನು ಜಜ್ಜಿ, ನೀವು ನಿಮ್ಮ ಪತಿಗಳಿಗೆ, “ಪಾನಗಳನ್ನು ತರಿಸಿ, ಕುಡಿಯೋಣ” ಎಂದು ಹೇಳುವವರೇ, ಈ ಮಾತನ್ನು ಕೇಳಿರಿ.
ಆಮೋಸ 4 : 2 (IRVKN)
ಕರ್ತನಾದ ಯೆಹೋವನು ತನ್ನ ಪರಿಶುದ್ಧತ್ವದ ಮೇಲೆ ಆಣೆಯಿಟ್ಟು: “ಇಗೋ ನಿಮ್ಮನ್ನು ಕೊಂಡಿಗಳಿಂದಲೂ, ನಿಮ್ಮಲ್ಲಿ ಉಳಿದವರನ್ನು ಮೀನುಗಾಳಗಳಿಂದಲೂ, ಎಳೆದುಕೊಂಡು ಹೋಗುವ ದಿನಗಳು ನಿಮಗೆ ಬರುತ್ತವೆ ಎಂದು ಪ್ರಮಾಣ ಮಾಡಿದ್ದಾನೆ.
ಆಮೋಸ 4 : 3 (IRVKN)
ಗೋಡೆಯಲ್ಲಿಯ ಬಿರುಕುಗಳ ಮೂಲಕ, ಪ್ರತಿಯೊಬ್ಬ ಸ್ತ್ರೀಯೂ ನೇರವಾಗಿ ತನ್ನ ಮುಂದೆಯೇ ಹೊರಟು ಹೋಗುವಳು, ಹರ್ಮೋನಿನ† ಹರ್ಮೋನಿನ ಅಂದರೆ ಕಸವನ್ನು ಎಸೆಯುವ ತಿಪ್ಪೆಗೆ. ದಿಕ್ಕಿನ ಕಡೆಗೆ ತಳ್ಳಲ್ಪಡುವಿರಿ” ಇದು ಯೆಹೋವನ ನುಡಿ.
ಆಮೋಸ 4 : 4 (IRVKN)
ಕೇವಲ ಆಚಾರಗಳು ವ್ಯರ್ಥ “ಬೇತೇಲಿಗೆ ಹೋಗಿ ದ್ರೋಹ ಮಾಡಿರಿ, ಗಿಲ್ಗಾಲಿನಲ್ಲಿ ಸೇರಿ ದ್ರೋಹವನ್ನು ಇನ್ನೂ ಹೆಚ್ಚಿಸಿರಿ. ಪ್ರತಿದಿನ ಬೆಳಿಗ್ಗೆ ನಿಮ್ಮ ಬಲಿಗಳನ್ನು ಅರ್ಪಿಸಿರಿ, ಮೂರು ದಿನಕ್ಕೆ ಒಂದು ಸಲ ದಶಮಾಂಶವನ್ನು ಸಲ್ಲಿಸಿರಿ.
ಆಮೋಸ 4 : 5 (IRVKN)
ಹುಳಿಹಿಟ್ಟನ್ನು ಕೃತಜ್ಞತಾರ್ಪಣವಾಗಿ ಹೋಮ ಮಾಡಿರಿ; ಕೊಟ್ಟ ಕಾಣಿಕೆಯನ್ನು ಪ್ರಕಟಿಸಿರಿ; ಸಾರಿಹೇಳಿರಿ, ಇಸ್ರಾಯೇಲರೇ ಹೀಗೆ ಮಾಡುವುದು ನಿಮಗೆ ಇಷ್ಟ” ಇದು ಕರ್ತನಾದ ಯೆಹೋವನ ನುಡಿ.
ಆಮೋಸ 4 : 6 (IRVKN)
ಸನ್ಮಾರ್ಗಕ್ಕೆ ಬಾರದವರಿಗೆ ಹೆಚ್ಚು ದಂಡನೆಯು ಅವಶ್ಯ “ನಿಮ್ಮ ಪಟ್ಟಣಗಳಲ್ಲಿ ನಿಮ್ಮ ಹಲ್ಲಿಗೆ ಏನೂ ಸಿಕ್ಕದಂತೆಯೂ ಮತ್ತು ನಿಮ್ಮ ಸಕಲ ನಿವಾಸಗಳಲ್ಲಿ ಅನ್ನದ ಕೊರತೆಯಾಗುವ ಹಾಗೆಯೂ ಮಾಡಿದೆನು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನ ನುಡಿ.
ಆಮೋಸ 4 : 7 (IRVKN)
“ಸುಗ್ಗಿಗೆ ಮೂರು ತಿಂಗಳು ಕಳೆಯಬೇಕಾದಾಗಲೂ, ನಿಮಗೆ ಮಳೆಯನ್ನು ತಡೆದೆನು. ಒಂದು ಪಟ್ಟಣದ ಮೇಲೆ ಮಳೆಯಾಗುವಂತೆಯೂ, ಇನ್ನೊಂದು ಪಟ್ಟಣದ ಮೇಲೆ ಮಳೆಯಾಗದಂತೆಯೂ ಮಾಡಿದೆನು. ಒಂದು ಭಾಗದ ಹೊಲದಲ್ಲಿ ಮಳೆಯಾಯಿತು. ಮಳೆಯಾಗದ ಹೊಲದ ಭಾಗವು ಬಾಡಿಹೋಯಿತು.
ಆಮೋಸ 4 : 8 (IRVKN)
ಎರಡು ಅಥವಾ ಮೂರು ಪಟ್ಟಣದವರು ನೀರು ಕುಡಿಯುವುದಕ್ಕೆ ಮತ್ತೊಂದು ಪಟ್ಟಣಕ್ಕೆ ಬಳಲುತ್ತಾ ಹೋಗುತ್ತಿದ್ದರು, ಬಾಯಾರಿಕೆ ತೀರಲಿಲ್ಲ. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ.” ಇದು ಯೆಹೋವನ ನುಡಿ.
ಆಮೋಸ 4 : 9 (IRVKN)
“ನಿಮ್ಮನ್ನು ಬೂದಿಯಿಂದಲೂ, ಬಿಸಿಗಾಳಿಯಿಂದಲೂ ಬಾಧಿಸಿದೆನು. ನಿಮ್ಮ ಲೆಕ್ಕವಿಲ್ಲದ ವನ, ದ್ರಾಕ್ಷಿತೋಟಗಳನ್ನು, ಅಂಜೂರದ ಗಿಡಗಳನ್ನು, ನಿಮ್ಮ ಎಣ್ಣೆಯ ಮರಗಳನ್ನು ಮಿಡತೆಯು ತಿಂದುಬಿಟ್ಟಿತು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನು ನುಡಿ.
ಆಮೋಸ 4 : 10 (IRVKN)
“ಐಗುಪ್ತದ ವ್ಯಾಧಿಗಳಂತಹ ವ್ಯಾಧಿಯನ್ನು ನಿಮ್ಮ ಮೇಲೆ ಕಳುಹಿಸಿದೆನು. ನಿಮ್ಮ ಯುವಕರನ್ನು ಖಡ್ಗದಿಂದ ಹತಿಸಿದೆನು, ನಿಮ್ಮ ಕುದರೆಗಳನ್ನು ಸೂರೆಮಾಡಿಸಿದೆನು, ನಿಮ್ಮ ದಂಡುಗಳ ದುರ್ವಾಸನೆ ನಿಮ್ಮ ಮೂಗಿಗೆ ಬಡಿಯುವಂತೆ ಮಾಡಿದೆನು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನ ನುಡಿ.
ಆಮೋಸ 4 : 11 (IRVKN)
“ಸೊದೋಮ್ ಮತ್ತು ಗೊಮೋರಗಳನ್ನು ಕೆಡವಿದಂತೆ, ನಾನು ನಿಮ್ಮ ಪಟ್ಟಣಗಳನ್ನು ಕೆಡವಿಬಿಟ್ಟಿದ್ದೇನೆ. ಬೆಂಕಿ ಉರಿಯಿಂದ ಎಳೆದ ಕೊಳ್ಳೆಯ ಹಾಗೆ ಇದ್ದೀರಿ. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನು ನುಡಿ.
ಆಮೋಸ 4 : 12 (IRVKN)
“ಆದಕಾರಣ ಇಸ್ರಾಯೇಲೇ, ನಾನು ನಿನಗೆ ಮಾಡುತ್ತೇನೆ; ನಾನು ಮಾಡಬೇಕೆಂದಿರುವುದರಿಂದ, ಇಸ್ರಾಯೇಲೇ, ನಿನ್ನ ದೇವರ ಬರುವಿಕೆಗೆ ನಿನ್ನನ್ನು ಸಿದ್ಧಮಾಡಿಕೋ!
ಆಮೋಸ 4 : 13 (IRVKN)
ಇಗೋ, ಪರ್ವತಗಳನ್ನು ರೂಪಿಸಿ, ಗಾಳಿಯನ್ನು ನಿರ್ಮಿಸಿ, ತನ್ನ ಸಂಕಲ್ಪವನ್ನು ಮನುಷ್ಯರಿಗೆ ವ್ಯಕ್ತಗೊಳಿಸಿ, ಉದಯವನ್ನು ಅಂಧಕಾರವನ್ನಾಗಿ ಮಾಡಿ ಮತ್ತು ಭೂಮಿಯ ಉನ್ನತ ಪ್ರದೇಶಗಳನ್ನು ತುಳಿದುಬಿಡುವಾತನು” ಸೇನಾಧೀಶ್ವರ ದೇವರಾದ ಯೆಹೋವನೆಂಬುದೇ ನನ್ನ ನಾಮಧೇಯ.
❮
❯
1
2
3
4
5
6
7
8
9
10
11
12
13