ಆಮೋಸ 5 : 2 (IRVKN)
ಇಸ್ರಾಯೇಲ್ ವಂಶದವರೇ, ನಾನು ನಿಮ್ಮ ವಿಷಯದಲ್ಲಿ ಶೋಕಗೀತವಾಗಿ ಹಾಡುವ ಈ ಮಾತನ್ನು ಕೇಳಿರಿ: ಇಸ್ರಾಯೇಲೆಂಬ ಯುವತಿಯು ಬಿದ್ದಿದ್ದಾಳೆ; ಮತ್ತೆ ಏಳುವುದೇ ಇಲ್ಲ; ದಿಕ್ಕಿಲ್ಲದೆ ತನ್ನ ನೆಲದ ಮೇಲೆ ಒರಗಿದ್ದಾಳೆ; ಅವಳನ್ನು ಎತ್ತಲು ಯಾರೂ ಇಲ್ಲ.
ಆಮೋಸ 5 : 3 (IRVKN)
ಪಶ್ಚಾತ್ತಾಪಕ್ಕೆ ಕರೆ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಒಂದು ಪಟ್ಟಣದಿಂದ ಯುದ್ಧಕ್ಕೆ ಹೊರಟ ಸಾವಿರ ಸೈನಿಕರಲ್ಲಿ ನೂರು ಮಂದಿ ಉಳಿಯುವರು, ಒಂದು ಊರಿನಿಂದ ಹೊರಟ ನೂರು ಸೈನಿಕರಲ್ಲಿ ಇಸ್ರಾಯೇಲರ ವಂಶಕ್ಕೆ ಹತ್ತು ಜನ ನಿಲ್ಲುವರು.”
ಆಮೋಸ 5 : 4 (IRVKN)
ಯೆಹೋವನು ಇಸ್ರಾಯೇಲರ ವಂಶಕ್ಕೆ ಹೀಗೆ ನುಡಿಯುತ್ತಾನೆ: “ನೀವು ನನ್ನನ್ನು ಆಶ್ರಯಿಸಿ ಬದುಕಿಕೊಳ್ಳಿರಿ!
ಆಮೋಸ 5 : 5 (IRVKN)
ಬೇತೇಲನ್ನು ಆಶ್ರಯಿಸಬೇಡಿರಿ; ಗಿಲ್ಗಾಲನ್ನು ಸೇರಬೇಡಿರಿ; ಬೇರ್ಷೆಬಕ್ಕೆ ಯಾತ್ರೆ ಹೋಗಬೇಡಿರಿ. ಗಿಲ್ಗಾಲು ನಿಶ್ಚಯವಾಗಿ ಸೆರೆಗೆ ಹೋಗುವುದು. ಬೇತೇಲು ಬಯಲಾಗುವುದು.
ಆಮೋಸ 5 : 6 (IRVKN)
ಯೆಹೋವನ ಕಡೆಗೆ ತಿರುಗಿಕೊಂಡು ಬದುಕಿರಿ, ತಿರುಗಿಕೊಳ್ಳದಿದ್ದರೆ ಆತನು ಬೆಂಕಿಯೋಪಾದಿಯಲ್ಲಿ ಯೋಸೇಫನ ವಂಶದೊಳಗೆ ಪ್ರವೇಶಿಸುವನು. ಅದು ದಹಿಸಿಬಿಡುವುದು, ಅದನ್ನು ಆರಿಸುವುದಕ್ಕೆ ಬೇತೇಲಿನಲ್ಲಿ ಯಾರೂ ಇರುವುದಿಲ್ಲ.
ಆಮೋಸ 5 : 7 (IRVKN)
ಅವರು ನ್ಯಾಯವನ್ನು ಕಹಿಮಾಡುವವರು ಮತ್ತು ಧರ್ಮವನ್ನು ನೆಲಕ್ಕೆ ಕೆಡವಿಬಿಡುವವರು!”
ಆಮೋಸ 5 : 8 (IRVKN)
ಕೃತ್ತಿಕಾ ಮತ್ತು ಒರಿಯನ್ ಎಂಬ ಪ್ರಕಾಶಮಾನವಾದ ನಕ್ಷತ್ರಗಳನ್ನು ಸೃಷ್ಟಿಸಿ, ಕಾರ್ಗತ್ತಲನ್ನು ಬೆಳಕನ್ನಾಗಿ ಮಾಡಿ, ಹಗಲನ್ನು ಇರುಳಾಗಿ ಮಾರ್ಪಡಿಸಿ, ಸಾಗರದ ಜಲವನ್ನು ಬರಮಾಡಿಕೊಂಡು, ಭೂಮಂಡಲದ ಮೇಲೆ ಸುರಿಯುವಾತನ ಕಡೆಗೆ ತಿರುಗಿಕೊಳ್ಳಿರಿ, ಯೆಹೋವನೆಂಬುದೇ ಆತನ ನಾಮಧೇಯ!
ಆಮೋಸ 5 : 9 (IRVKN)
ಬಲಿಷ್ಠರಿಗೆ ಧ್ವಂಸವನ್ನು ತಟ್ಟನೇ ತಂದೊಡ್ಡಿ, ಕೋಟೆಗೆ ನಾಶನವನ್ನು ತರುವವನು ಆತನೇ.
ಆಮೋಸ 5 : 10 (IRVKN)
ಕಂಡ ದೋಷವನ್ನು ಚಾವಡಿಯಲ್ಲಿ ಖಂಡಿಸುವವನ ಮೇಲೆ ಹಗೆತೋರಿಸುತ್ತೀರಿ, ಯಥಾರ್ಥರನ್ನು ದ್ವೇಷಿಸುತ್ತೀರಿ.
ಆಮೋಸ 5 : 11 (IRVKN)
ನೀವು ಬಡವರನ್ನು ತುಳಿದು, ಅವರಿಂದ ಗೋದಿಯನ್ನು ಬಿಟ್ಟಿ ತೆಗೆದುಕೊಂಡ ಕಾರಣ ಕೆತ್ತಿದ ಕಲ್ಲಿನಿಂದ ನೀವು ಕಟ್ಟಿಕೊಂಡ ಮನೆಗಳಲ್ಲಿ, ವಾಸಿಸದೆ ಇರುವಿರಿ. ಒಳ್ಳೆಯ ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಅದರ ದ್ರಾಕ್ಷಾರಸವನ್ನು ಕುಡಿಯುವಿರಿ.
ಆಮೋಸ 5 : 12 (IRVKN)
ನೀತಿವಂತರನ್ನು ಹಿಂಸಿಸುವವರೇ, ಲಂಚತೆಗೆದುಕೊಳ್ಳುವವರೇ, ಚಾವಡಿಯಲ್ಲಿ ದರಿದ್ರರ ನ್ಯಾಯವನ್ನು ತಪ್ಪಿಸುವವರೇ. ನಿಮ್ಮ ದ್ರೋಹಗಳು ಬಹಳ, ನಿಮ್ಮ ಪಾಪಗಳು ನನಗೆ ಗೊತ್ತಿದೆ.
ಆಮೋಸ 5 : 13 (IRVKN)
ಇಂಥ ಕಾಲದಲ್ಲಿ ವಿವೇಕಿಯು ಸುಮ್ಮನಿರುವನು, ಇದು ದುಷ್ಟ ಕಾಲವೇ ಸರಿ.
ಆಮೋಸ 5 : 14 (IRVKN)
ಕೆಟ್ಟದ್ದನಲ್ಲ ಒಳ್ಳೆಯದನ್ನು, ಅನುಸರಿಸಿ ಬಾಳಿರಿ. ನೀವು ಅಂದುಕೊಂಡಂತೆ, ಸೇನಾಧೀಶ್ವರ ದೇವರಾದ ಯೆಹೋವನು ನಿಮ್ಮ ಸಂಗಡ ಇರುವನು.
ಆಮೋಸ 5 : 15 (IRVKN)
ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸೇನಾಧೀಶ್ವರ ದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದನು.
ಆಮೋಸ 5 : 16 (IRVKN)
ಸೇನಾಧೀಶ್ವರ ದೇವರಾದ, ಯೆಹೋವನು ಇಂತೆನ್ನುತ್ತಾನೆ: “ಎಲ್ಲಾ ಚೌಕಗಳಲ್ಲಿ ಕಿರುಚಾಟವಾಗುವುದು ಮತ್ತು ಸಕಲ ಬೀದಿಗಳಲ್ಲಿ, ‘ಅಯ್ಯೋ! ಅಯ್ಯೋ!’ ಎಂದು ಅರಚಿಕೊಳ್ಳುವರು. ರೈತರನ್ನು ಪ್ರಲಾಪಿಸುವುದಕ್ಕೂ ಗೋಳಾಟದವರನ್ನು ಗೋಳಾಡುವುದಕ್ಕೂ ಕರೆಯುವರು.
ಆಮೋಸ 5 : 17 (IRVKN)
ಎಲ್ಲಾ ದ್ರಾಕ್ಷಿಯ ತೋಟಗಳಲ್ಲಿ ರೋದನವಾಗುವುದು. ಏಕೆಂದರೆ ನಾನು ನಿಮ್ಮ ನಡುವೆ ಸಂಹಾರಕನಾಗಿ ಹಾದುಹೋಗುವೆನು” ಇದು ಯೆಹೋವನ ನುಡಿ.
ಆಮೋಸ 5 : 18 (IRVKN)
ಯೆಹೋವನ ದಿನವು ದುಷ್ಟರಿಗೆ ದುರ್ದಿನ ಯೆಹೋವನ ದಿನವನ್ನು ನಿರೀಕ್ಷಿಸಿಕೊಂಡವರೇ, ನಿಮ್ಮ ಗತಿಯನ್ನು ಏನು ಹೇಳಲಿ! ಯೆಹೋವನ ದಿನವು ನಿಮಗೇಕೆ? ಅದು ಬೆಳಕಲ್ಲ ಕತ್ತಲೆಯೇ.
ಆಮೋಸ 5 : 19 (IRVKN)
ಸಿಂಹದ ಕಡೆಯಿಂದ ಓಡಿದವನಿಗೆ, ಕರಡಿಯು ಎದುರುಬಿದ್ದಂತಾಗುವುದು, ಅವನು ಮನೆಗೆ ಓಡಿಬಂದು, ಕೈಯನ್ನು ಗೋಡೆಯ ಮೇಲೆ ಇಡಲು, ಹಾವು ಕಚ್ಚಿದ ಹಾಗಾಗುವುದು.
ಆಮೋಸ 5 : 20 (IRVKN)
ಯೆಹೋವನ ದಿನವು ಬೆಳಕಲ್ಲ; ಕತ್ತಲೆಯೇ! ಯಾವ ಪ್ರಕಾಶ ಇಲ್ಲದ ಗಾಢಾಂಧಕಾರವೇ!
ಆಮೋಸ 5 : 21 (IRVKN)
“ನಿಮ್ಮ ಜಾತ್ರೆಗಳನ್ನು ಹಗೆಮಾಡುತ್ತೇನೆ, ತುಚ್ಛೀಕರಿಸುತ್ತೇನೆ, ನಿಮ್ಮ ಉತ್ಸವಗಳ ವಾಸನೆಯೇ ನನಗೆ ಬೇಡ.
ಆಮೋಸ 5 : 22 (IRVKN)
ನೀವು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ, ನಾನು ಅದನ್ನು ಸ್ವೀಕರಿಸುವುದಿಲ್ಲ, ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸಿದ ಕೊಬ್ಬಿದ ಪಶುಗಳನ್ನು ನೋಡುವುದಿಲ್ಲ.
ಆಮೋಸ 5 : 23 (IRVKN)
ನಿಮ್ಮ ಗೀತೆಗಳ ಧ್ವನಿಯನ್ನು ನನ್ನಿಂದ ತೊಲಗಿಸಿರಿ; ನಿಮ್ಮ ವೀಣೆಗಳ ಮಧುರನಾದಕ್ಕೆ ಕಿವಿಗೊಡುವುದಿಲ್ಲ.
ಆಮೋಸ 5 : 24 (IRVKN)
ಅದರ ಬದಲಾಗಿ ನ್ಯಾಯವು ಹೊಳೆಯ ಹಾಗೆ ಹರಿಯಲಿ, ಧರ್ಮವು ಮಹಾನದಿಯಂತೆ ಹರಿಯಲಿ.
ಆಮೋಸ 5 : 25 (IRVKN)
ಇಸ್ರಾಯೇಲರ ವಂಶದವರೇ ನೀವು ಅರಣ್ಯದಲ್ಲಿ ನಲ್ವತ್ತು ವರ್ಷ ನನಗೆ ಯಜ್ಞಗಳನ್ನೂ, ಧಾನ್ಯನೈವೇದ್ಯಗಳನ್ನೂ ಅರ್ಪಿಸಿದ್ದೀರೋ?
ಆಮೋಸ 5 : 26 (IRVKN)
ಸಿಕ್ಕೊತ್ ಎಂಬ ನಿಮ್ಮ ಒಡೆಯನನ್ನು, ಕಿಯೂನ್ ಎಂಬ ನಿಮ್ಮ ನಕ್ಷತ್ರ ದೇವತೆಯನ್ನು, ನಿರ್ಮಿಸಿಕೊಂಡಿರುವ ನಿಮ್ಮ ಮೂರ್ತಿಗಳನ್ನು ನೀವು ಹೊತ್ತುಕೊಂಡು ಹೋಗಬೇಕಾಗುವುದು.
ಆಮೋಸ 5 : 27 (IRVKN)
ನಾನು ನಿಮ್ಮನ್ನು ದಮಸ್ಕದ ಆಚೆ ಸೆರೆಗೆ ಕಳುಹಿಸುವೆನು” ಸೇನಾಧೀಶ್ವರ ದೇವರೆಂಬ, ಯೆಹೋವನು ಇದನ್ನು ನುಡಿದಿದ್ದಾನೆ.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27