ಆಮೋಸ 6 : 1 (IRVKN)
ಇಸ್ರಾಯೇಲಿನ ದೌರ್ಭಾಗ್ಯ ಅಯ್ಯೋ! ಚೀಯೋನಿನಲ್ಲಿ ನೆಮ್ಮದಿಯಾಗಿರುವವರ ಗತಿಯನ್ನು ಏನೆಂದು ಹೇಳಲಿ, ಪ್ರಮುಖ ಜನಾಂಗದಲ್ಲಿ ಹೆಸರುಗೊಂಡು ಇಸ್ರಾಯೇಲರ ನ್ಯಾಯವಿಚಾರಕರಾಗಿ, ಸಮಾರ್ಯದ ಬೆಟ್ಟದಲ್ಲಿ ನಿಶ್ಚಿಂತರಾಗಿರುವವರ, ಗತಿಯನ್ನು ಏನೆಂದು ಹೇಳಲಿ!
ಆಮೋಸ 6 : 2 (IRVKN)
ನಿಮ್ಮ ಪ್ರಮುಖರು, “ಕಲ್ನೆಗೆ ಹೋಗಿ ನೋಡಲಿ; ಅಲ್ಲಿಂದ ಮಹಾ ಪಟ್ಟಣವಾದ ಹಮಾತಿಗೆ ತೆರಳಿರಿ; ಆ ಮೇಲೆ ಫಿಲಿಷ್ಟಿಯರ ಗತ್ ಊರಿಗೆ ಇಳಿಯಿರಿ. ಅವು ಈ ರಾಜ್ಯಗಳಿಗಿಂತ ಶ್ರೇಷ್ಠವೋ? ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಗಳಿಗಿಂತ ದೊಡ್ಡದೋ?”
ಆಮೋಸ 6 : 3 (IRVKN)
ಆಹಾ! ಆ ಪ್ರಮುಖರು ಆಪತ್ತಿನ ದಿನದ ಯೋಚನೆಯನ್ನು ದೂರಕ್ಕೆ ತಳ್ಳುತ್ತಾರೆ ಮತ್ತು ಅನ್ಯಾಯದ ಪೀಠಗಳನ್ನು ಹತ್ತಿರಕ್ಕೆ ತಂದುಕೊಳ್ಳುತ್ತಾರೆ.
ಆಮೋಸ 6 : 4 (IRVKN)
ದಂತದ ಮಂಚಗಳ ಮೇಲೆ ಮಲಗುತ್ತಾರೆ ಮತ್ತು ತಮ್ಮ ಗದ್ದುಗೆಗಳಲ್ಲಿ ಹಾಯಾಗಿ ಒರಗಿಕೊಳ್ಳುತ್ತಾರೆ. ಹಿಂಡಿನ ಕುರಿಮರಿಗಳನ್ನು, ಕೊಟ್ಟಿಗೆಯ ಕರುಗಳನ್ನು ತಿನ್ನುತ್ತಾರೆ.
ಆಮೋಸ 6 : 5 (IRVKN)
ವೀಣೆಯ ಮೇಲೆ ಮನಸ್ಸು ಬಂದಂತೆ ಹಾಡುತ್ತಾರೆ; ದಾವೀದನ ಹಾಗೆ ಗಾನವಾದ್ಯಗಳನ್ನು ಕಲ್ಪಿಸಿಕೊಳ್ಳುತ್ತಾರೆ.
ಆಮೋಸ 6 : 6 (IRVKN)
ದ್ರಾಕ್ಷಾರಸವನ್ನು ಬೋಗುಣಿಯಲ್ಲಿ ಕುಡಿಯುತ್ತಾರೆ ಮತ್ತು ಉತ್ತಮ ಅಭಿಷೇಕ ತೈಲಗಳನ್ನು ಹಚ್ಚಿಕೊಳ್ಳುತ್ತಾರೆ, ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡುವುದಿಲ್ಲ.
ಆಮೋಸ 6 : 7 (IRVKN)
ಆದುದರಿಂದ ಸೆರೆಗೆ ಒಯ್ಯುವವರ ಮುಂದುಗಡೆಯೇ, ಅವರು ಸೆರೆಗೆ ಹೋಗುವರು, ಮತ್ತು ಭೋಗಮಾಡುವವರ ಹರ್ಷಧ್ವನಿಯು ನಿಂತುಹೋಗುವುದು.
ಆಮೋಸ 6 : 8 (IRVKN)
ಆಹಂಕಾರಿಗಳಾದ ಇಸ್ರಾಯೇಲರನ್ನು ದ್ವೇಷಿಸುತ್ತಾನೆ ಸೇನಾಧೀಶ್ವರ ದೇವರಾದ ಯೆಹೋವನ ನುಡಿಯನ್ನು ಕೇಳಿರಿ ಕರ್ತನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು ಹೀಗೆಂದಿದ್ದಾನೆ, “ನಾನು ಯಾಕೋಬಿನ ಅಟ್ಟಹಾಸಕ್ಕೆ ಅಸಹ್ಯಪಟ್ಟು; ಅದರ ಕೋಟೆಗಳನ್ನು ಹಗೆಮಾಡುತ್ತೇನೆ. ಆದುದರಿಂದ ನಾನು ರಾಜಧಾನಿಯನ್ನೂ, ಅದರ ಸಕಲ ಸಮೃದ್ಧಿಯನ್ನೂ ಆಪತ್ತಿಗೆ ಗುರಿಮಾಡುವೆನು”
ಆಮೋಸ 6 : 9 (IRVKN)
ಒಂದು ಮನೆಯಲ್ಲಿ ಹತ್ತು ಜನ ಉಳಿದರೂ ಅವರೆಲ್ಲರೂ ಸಾಯುವರು.
ಆಮೋಸ 6 : 10 (IRVKN)
ಶವವನ್ನು ಸುಡಲು ಬಂದ ಸಂಬಂಧಿಕರು, ಹೆಣವನ್ನು ಮನೆಯೊಳಗಿಂದ ತೆಗೆದುಕೊಂಡು ಹೋದಾಗ, “ನಿಮ್ಮ ಹತ್ತಿರ ಇನ್ನೂ ಯಾರಾದರೂ ಇದ್ದಾರೋ?” ಎಂದು ಮನೆಯಲ್ಲಿರುವವರನ್ನು ಕೇಳುವಾಗ ಅವನು, “ಇಲ್ಲ” ಎನ್ನುವನು. ಆಗ ಸಂಬಂಧಿಕನು, “ಸುಮ್ಮನಿರು, ನಾವು ಯೆಹೋವನ ಹೆಸರನ್ನು ನೆನಪುಮಾಡಿಕೊಳ್ಳಬಾರದು.”
ಆಮೋಸ 6 : 11 (IRVKN)
ಇಗೋ, ನೋಡಿರಿ, ಯೆಹೋವನು ಆಜ್ಞಾಪಿಸಲು, ದೊಡ್ಡ ಮನೆಯು ಕೆಡವಲ್ಪಟ್ಟು ಚೂರುಚೂರಾಯಿತು, ಚಿಕ್ಕ ಮನೆಯೂ ಮುರಿದುಹೋಗುವುದು.
ಆಮೋಸ 6 : 12 (IRVKN)
ಕುದುರೆಗಳು ಬಂಡೆಯ ಮೇಲೆ ಓಡಾಡುವುವೋ? ಅದನ್ನು ಎತ್ತುಗಳಿಂದ ಉಳುವರೋ? ಆದರೆ ನೀವು ನ್ಯಾಯವನ್ನು ವಿಷವನ್ನಾಗಿ ಮಾಡಿ, ಧರ್ಮದ ಸುಫಲವನ್ನು ಕಹಿಯಾಗಿಸಿದಿರಿ.
ಆಮೋಸ 6 : 13 (IRVKN)
ನೀವು ಲೋ ದೆಬಾರ್ ಪಟ್ಟಣದಲ್ಲಿ* ಲೋ ದೆಬಾರ್ ಪಟ್ಟಣದಲ್ಲಿ ಶೂನ್ಯವಾದದರಲ್ಲಿಯೇ. ಉಲ್ಲಾಸಪಡುವವರೇ, ಸ್ವಬಲದಿಂದ ಕರ್ನಾಯಿಮ್ ಕರ್ನಾಯಿಮ್ ಸ್ವಬಲ. ಪಟ್ಟಣವನ್ನು ಪಡೆದುಕೊಂಡಿಲ್ಲವೇ ಎಂದುಕೊಳ್ಳುವವರೇ.
ಆಮೋಸ 6 : 14 (IRVKN)
ಸೇನಾಧೀಶ್ವರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರ ವಂಶದವರೇ, ಇಗೋ, ನಾನು ನಿಮಗೆ ವಿರುದ್ಧವಾಗಿ ಒಂದು ಜನಾಂಗವನ್ನು ಎಬ್ಬಿಸುವೆನು; ಅವರು ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಹೊಳೆಯ ತನಕ, ನಿಮ್ಮನ್ನು ಹಿಂಸಿಸುವರು.”

1 2 3 4 5 6 7 8 9 10 11 12 13 14