ಆಮೋಸ 7 : 1 (IRVKN)
ಮಿಡತೆಯ ದರ್ಶನ ಕರ್ತನಾದ ಯೆಹೋವನು ಇದನ್ನು ನನಗೆ ತೋರಿಸಿದನು. ಹಿಂಗಾರು ಮಳೆಬಿದ್ದು ಪೈರು ಸೊಂಪಾಗುವುದಕ್ಕೆ ಆರಂಭವಾದಾಗ ಅಂದರೆ ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ ಬೆಳೆಯು ವೃದ್ಧಿಯಾಗುತ್ತಿದ್ದಾಗ ಇಗೋ, ಯೆಹೋವನು ಮಿಡತೆಗಳನ್ನು ಉಂಟುಮಾಡಿದನು.
ಆಮೋಸ 7 : 2 (IRVKN)
ಅವು ದೇಶದ ಹುಲ್ಲನ್ನೆಲ್ಲಾ ತಿಂದುಬಿಟ್ಟ ಮೇಲೆ ನಾನು, “ಕರ್ತನಾದ ಯೆಹೋವನೇ, ಲಾಲಿಸು, ನನ್ನನ್ನು ಕ್ಷಮಿಸು. ಯಾಕೋಬ ಜನಾಂಗವು ಹೇಗೆ ಉಳಿಯುವುದು? ಏಕೆಂದರೆ ಅದು ಚಿಕ್ಕದಾದ ಜನಾಂಗ” ಎಂದು ವಿಜ್ಞಾಪಿಸಿಕೊಂಡೆನು.
ಆಮೋಸ 7 : 3 (IRVKN)
ಯೆಹೋವನು ಮನಮರುಗಿ, “ಈ ದರ್ಶನವು ನೆರವೇರುವುದಿಲ್ಲ” ಎಂದನು.
ಆಮೋಸ 7 : 4 (IRVKN)
ಕ್ಷಾಮದ ದರ್ಶನ ಕರ್ತನಾದ ಯೆಹೋವನು ಇನ್ನೊಂದು ದರ್ಶನವನ್ನು ನನಗೆ ತೋರಿಸಿದನು. ಇಗೋ, ಕರ್ತನಾದ ಯೆಹೋವನು ತನ್ನ ಜನರನ್ನು ದಂಡಿಸುವುದಕ್ಕಾಗಿ ಅಗ್ನಿಯನ್ನು ಕರೆದನು. ಅದು ಮಹಾ ಸಾಗರವನ್ನು ನುಂಗಿ ದೇಶವನ್ನೂ ತಿಂದುಬಿಟ್ಟಿತು.
ಆಮೋಸ 7 : 5 (IRVKN)
ಆಗ ನಾನು, “ಕರ್ತನಾದ ಯೆಹೋವನೇ, ಲಾಲಿಸು. ಇದನ್ನು ನಿಲ್ಲಿಸಿಬಿಡು. ಯಾಕೋಬ ಜನಾಂಗ ಹೇಗೆ ಉಳಿಯುವುದು? ಏಕೆಂದರೆ ಅದು ಚಿಕ್ಕದಾದ ಜನಾಂಗವಾಗಿದೆ” ಎಂದು ಆಜ್ಞಾಪಿಸಲು
ಆಮೋಸ 7 : 6 (IRVKN)
ಕರ್ತನಾದ ಯೆಹೋವನು ಮನಮರುಗಿ, “ಈ ದರ್ಶನವು ನೆರವೇರುವುದಿಲ್ಲ” ಎಂದನು.
ಆಮೋಸ 7 : 7 (IRVKN)
ನೂಲುಗುಂಡಿನ ದರ್ಶನ ಕರ್ತನು ಮತ್ತೊಂದು ದರ್ಶನವನ್ನು ನನಗೆ ತೋರಿಸಿದನು. ಇಗೋ, ಯೆಹೋವನು ನೂಲುಮಟ್ಟದ ನೆಟ್ಟಗಿರುವ ಗೋಡೆಯ ಮೇಲೆ ನಿಂತಿದ್ದನು. ಆತನ ಕೈಯಲ್ಲಿ ನೂಲುಗುಂಡಿತ್ತು.
ಆಮೋಸ 7 : 8 (IRVKN)
ಯೆಹೋವನು ನನಗೆ, “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಲು ನಾನು, “ಒಂದು ನೂಲುಗುಂಡು” ಎಂದು ಉತ್ತರ ಕೊಟ್ಟೆನು. ಆಗ ಕರ್ತನು, “ಇಗೋ, ನನ್ನ ಜನರಾದ ಇಸ್ರಾಯೇಲಿನ ಮಧ್ಯದಲ್ಲಿ ನೂಲುಗುಂಡನ್ನು ಇಡುತ್ತೇನೆ. ಇನ್ನು ಅವರನ್ನು ಕಂಡುಕಾಣದಂತೆ ದಂಡಿಸುವೆನು.
ಆಮೋಸ 7 : 9 (IRVKN)
ಇಸಾಕನ ವಂಶದವರ ಪೂಜಾಸ್ಥಳಗಳು ಹಾಳಾಗುವವು, ಇಸ್ರಾಯೇಲಿನ ಪವಿತ್ರಾಲಯಗಳು ಪಾಳುಬೀಳುವವು, ಮತ್ತು ನಾನು ಕತ್ತಿ ಹಿಡಿದು ಯಾರೊಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು” ಅಂದನು.
ಆಮೋಸ 7 : 10 (IRVKN)
ಆಮೋಸನು ಯಾಜಕನನ್ನು ಮುಖಾಮುಖಿಯಾಗಿ ಎದುರಿಸಿದ್ದು ಆಗ ಬೇತೇಲಿನ ಯಾಜಕನಾದ ಅಮಚ್ಯನು, ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ, “ಆಮೋಸನು ಇಸ್ರಾಯೇಲರ ಮಧ್ಯದಲ್ಲಿ ನಿನ್ನ ಮೇಲೆ ಒಳಸಂಚು ಮಾಡಿದ್ದಾನೆ. ದೇಶವು ಅವನ ವಿಪರೀತವಾದ ಮಾತುಗಳನ್ನು ತಾಳಲಾರದು” ಅಂದನು.
ಆಮೋಸ 7 : 11 (IRVKN)
ಅದಕ್ಕೆ ಆಮೋಸನು, “ಯಾರೊಬ್ಬಾಮನು ಖಡ್ಗದಿಂದ ಹತನಾಗುವನು. ಇಸ್ರಾಯೇಲರು ಖಂಡಿತವಾಗಿ ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವರು” ಎಂದು ಹೇಳಿಕಳುಹಿಸಿದನು.
ಆಮೋಸ 7 : 12 (IRVKN)
ಅನಂತರ ಅಮಚ್ಯನು ಆಮೋಸನಿಗೆ, “ಕಣಿ ಹೇಳುವವನೇ, ಯೆಹೂದ ದೇಶಕ್ಕೆ ಓಡಿಹೋಗು. ಅಲ್ಲಿಯೇ ರೊಟ್ಟಿತಿಂದು ಪ್ರವಾದಿಸು.
ಆಮೋಸ 7 : 13 (IRVKN)
ಆದರೆ ಬೇತೇಲಿನಲ್ಲಿ ಇನ್ನು ಪ್ರವಾದನೆ ಮಾಡಬೇಡ. ಇದು ರಾಜಕೀಯ ಪವಿತ್ರಾಲಯ, ಇದು ಅರಮನೆ* ಅರಮನೆ ದೇವಾಲಯ. ” ಎಂದು ಹೇಳಿದನು.
ಆಮೋಸ 7 : 14 (IRVKN)
ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ, “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ಆದರೆ ನಾನು ಕುರುಬನು, ಅತ್ತಿಹಣ್ಣುಗಳನ್ನು ಕೂಡಿಸುವವನೂ ಕೂಡಿಸುವವನೂ ನೋಡಿಕೊಳ್ಳುವವನು. ಆಗಿದ್ದೇನೆ.
ಆಮೋಸ 7 : 15 (IRVKN)
ಯೆಹೋವನು ನನ್ನನ್ನು ಮಂದೆ ಕಾಯುವವರಿಂದ ತಪ್ಪಿಸಿ, ‘ನೀನು ಹೋಗಿ ನನ್ನ ಜನರಾದ ಇಸ್ರಾಯೇಲರಿಗೆ ಪ್ರವಾದನೆ ಮಾಡು’ ಎಂದು ನನಗೆ ಅಪ್ಪಣೆ ಕೊಟ್ಟನು.
ಆಮೋಸ 7 : 16 (IRVKN)
ಆಮೋಸ 7 : 17 (IRVKN)
“ಈಗ ಯೆಹೋವನ ವಾಕ್ಯವನ್ನು ಕೇಳು ‘ಇಸ್ರಾಯೇಲರಿಗೆ ವಿರುದ್ಧವಾಗಿ ಪ್ರವಾದನೆಮಾಡಬೇಡ. ಇಸಾಕನ ವಂಶಕ್ಕೆ ಖಂಡನೆಯಾಗಿ ಬಾಯಿ ಎತ್ತಬೇಡ’ ಎಂದು ನಿನಗೆ ಹೇಳಿದ ಕಾರಣ ಯೆಹೋವನು ಇಂತೆನ್ನುತ್ತಾನೆ, ‘ನಿನ್ನ ಹೆಂಡತಿಯು ಈ ಪಟ್ಟಣದಲ್ಲಿ ಸೂಳೆಯಾಗುವಳು; ನಿನ್ನ ಗಂಡು ಮತ್ತು ಹೆಣ್ಣು ಮಕ್ಕಳು ಖಡ್ಗದಿಂದ ಹತರಾಗುವರು; ನಿನ್ನ ದೇಶವನ್ನು ಶತ್ರುಗಳು ನೂಲಿನಿಂದ ವಿಭಾಗಿಸಿಕೊಳ್ಳುವರು; ನೀನಂತೂ ಅಜ್ಞಾತವಾದ ಅಜ್ಞಾತವಾದ ಅಥವಾ ಅಪವಿತ್ರವಾದ ದೇಶದಲ್ಲಿ ಸಾಯುವಿ, ಇಸ್ರಾಯೇಲರು ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವುದು ಖಂಡಿತ’ ” ಎಂಬುದಾಗಿ ಯೆಹೋವನು ಹೇಳಿದನು.

1 2 3 4 5 6 7 8 9 10 11 12 13 14 15 16 17