ಕೊಲೊಸ್ಸೆಯವರಿಗೆ 2 : 1 (IRVKN)
ನಿಮಗಾಗಿಯೂ, ಲವೊದಿಕೀಯದವರಿಗಾಗಿಯೂ ಹಾಗೂ ನನ್ನನ್ನು ಮುಖಾಮುಖಿಯಾಗಿ ನೋಡದಿರುವವರೆಲ್ಲರಿಗಾಗಿಯೂ,
ಕೊಲೊಸ್ಸೆಯವರಿಗೆ 2 : 2 (IRVKN)
ಅವರ ಹೃದಯಗಳು ಉತ್ತೇಜನಗೊಂಡು, * ಕೊಲೊ 3:14 ಪ್ರೀತಿಯಿಂದ ಒಂದಾಗಿದ್ದು, ದೇವರ ಮರ್ಮವನ್ನು ಅಂದರೆ ಕ್ರಿಸ್ತನನ್ನು ತಿಳಿದುಕೊಳ್ಳುವ ಮೂಲಕ ಬರುವ ನಿಶ್ಚಯವಾದ ಭಾಗ್ಯವನ್ನು ಪಡೆಯಬೇಕೆಂಬುದೇ ನನ್ನ ಅಪೇಕ್ಷೆ. ಅದಕ್ಕಾಗಿಯೇ ನಾನು † ಕೊಲೊ 1:29; 4:12 ಎಷ್ಟು ಪ್ರಯಾಸಪಡುತ್ತಿದ್ದೇನೆಂಬುದು ನಿಮಗೆ ತಿಳಿದಿರಬೇಕೆಂದು ಬಯಸುತ್ತೇನೆ.
ಕೊಲೊಸ್ಸೆಯವರಿಗೆ 2 : 3 (IRVKN)
ಜ್ಞಾ. 2:1-5; ಯೆಶಾ 11:2, 45:3; 1 ಕೊರಿ 1:24, 30, 2:6-7 ಈ ಕ್ರಿಸ್ತನಲ್ಲಿಯೇ ಜ್ಞಾನ ಮತ್ತು ವಿವೇಕದ ಸರ್ವಸಂಪತ್ತು ಅಡಗಿದೆ.
ಕೊಲೊಸ್ಸೆಯವರಿಗೆ 2 : 4 (IRVKN)
ಯಾರೂ ನಿಮ್ಮನ್ನು ತಮ್ಮ ಮನವೊಲಿಸುವ ಮಾತುಗಳಿಂದ ಮೋಸಗೊಳಿಸದಿರಲಿ ಎಂದು ನಾನು ನಿಮಗೆ ಇದನ್ನು ಹೇಳುತ್ತಿದ್ದೇನೆ.
ಕೊಲೊಸ್ಸೆಯವರಿಗೆ 2 : 5 (IRVKN)
§ 1 ಕೊರಿ 5:3 ನಾನು ಶರೀರದಿಂದ ನಿಮ್ಮ ಬಳಿಯಲ್ಲಿ ಇಲ್ಲದಿದ್ದರೂ ಆತ್ಮನಿಂದ ನಿಮ್ಮೊಂದಿಗಿದ್ದು * 1 ಕೊರಿ 14:40 ನೀವು ಕ್ರಮಬದ್ಧವಾಗಿ ನಡೆಯುವುದನ್ನು ಮತ್ತು † 1 ಪೇತ್ರ 5:9 ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಂತಿರುವುದನ್ನೂ ನೋಡಿ ಸಂತೋಷಪಡುತ್ತೇನೆ.
ಕೊಲೊಸ್ಸೆಯವರಿಗೆ 2 : 6 (IRVKN)
ಕ್ರಿಸ್ತನು ನಿಜವಾದ ಜೀವವನ್ನು ಕೊಡುವಾತನು ಕೊಲೊ 1:10; 1 ಥೆಸ. 4:2 ನೀವು ಕರ್ತನಾದ ಯೇಸು ಕ್ರಿಸ್ತನನ್ನು ಸ್ವೀಕರಿಸಿದಂತೆಯೇ ಆತನಲ್ಲಿದ್ದವರಾಗಿ ಬಾಳಿರಿ.
ಕೊಲೊಸ್ಸೆಯವರಿಗೆ 2 : 7 (IRVKN)
§ ಎಫೆ 3:18 ಆತನಲ್ಲಿ ಬೇರೂರಿಕೊಂಡು, ಆತನಲ್ಲಿ ಕಟ್ಟಲ್ಪಟ್ಟು ಮತ್ತು * ಎಫೆ 4:21 ನಿಮಗೆ ಬೋಧಿಸಲ್ಪಟ್ಟ ಉಪದೇಶದ ಪ್ರಕಾರವೇ ಕ್ರಿಸ್ತ ನಂಬಿಕೆಯಲ್ಲಿ ನೆಲೆಗೊಂಡು ದೇವರಿಗೆ ಹೆಚ್ಚೆಚ್ಚಾಗಿ ಸ್ತೋತ್ರ ಸಲ್ಲಿಸುವವರಾಗಿರಿ.
ಕೊಲೊಸ್ಸೆಯವರಿಗೆ 2 : 8 (IRVKN)
1 ತಿಮೊ. 6:20; ಎಫೆ 5:6 ಮೋಸಕರವಾದ ಮತ್ತು ವ್ಯರ್ಥವಾದ ತತ್ವಜ್ಞಾನ ಬೋಧನೆಯಿಂದ ಯಾರೂ ನಿಮ್ಮನ್ನು ವಶಮಾಡಿಕೊಳ್ಳದಂತೆ ಎಚ್ಚರಿಕೆಯಾಗಿರಿ. ಇವುಗಳು ‡ ಮತ್ತಾ 15:2 ಮನುಷ್ಯರ ಸಂಪ್ರದಾಯಗಳಿಗೆ ಮತ್ತು § ಕೊಲೊ 2:20; ಗಲಾ. 4:3 ಪ್ರಾಪಂಚಿಕ ಮೂಲ ಬೋಧನೆಗಳಿಗೆ ಸಂಬಂಧಿಸಿದವುಗಳೇ ಹೊರತು ಕ್ರಿಸ್ತನಿಗಲ್ಲ.
ಕೊಲೊಸ್ಸೆಯವರಿಗೆ 2 : 9 (IRVKN)
ದೇವರ ಸರ್ವಸಂಪೂರ್ಣತೆಯು * ಕೊಲೊ 1:19; ಯೋಹಾ 1:14 ಕ್ರಿಸ್ತನ ದೇಹದಲ್ಲಿ ವಾಸಮಾಡುತ್ತಿದೆ,
ಕೊಲೊಸ್ಸೆಯವರಿಗೆ 2 : 10 (IRVKN)
ಎಫೆ 1:21-22 ಆತನು ಎಲ್ಲಾ ದೊರೆತನಗಳಿಗೂ ಹಾಗೂ ಅಧಿಕಾರಿಗಳಿಗೂ ತಲೆಯಾಗಿರುವುದರಿಂದ ‡ ಎಫೆ 3:19 ಆತನಲ್ಲಿದ್ದುಕೊಂಡೇ ನೀವು ಪರಿಪೂರ್ಣತೆಯನ್ನು ಹೊಂದಿದವರಾಗಿದ್ದೀರಿ.
ಕೊಲೊಸ್ಸೆಯವರಿಗೆ 2 : 11 (IRVKN)
ದೇವರು ಆತನಲ್ಲಿ ನಿಮಗೆ ಮನುಷ್ಯರ ಕೈಯಿಂದ ಮಾಡಲಾಗದಂತಹ ಸುನ್ನತಿಯನ್ನು ಮಾಡಿದ್ದಾನೆ. ಕ್ರಿಸ್ತನ ಸುನ್ನತಿಯು ಶಾರೀರಿಕವಾದ § ಕೊಲೊ 3:9 ಪಾಪಸ್ವಭಾವವನ್ನು ತೆಗೆದುಹಾಕುವುದೇ.
ಕೊಲೊಸ್ಸೆಯವರಿಗೆ 2 : 12 (IRVKN)
* ರೋಮಾ. 6:3-4 ನೀವು ದೀಕ್ಷಾಸ್ನಾನದಲ್ಲಿ ಕ್ರಿಸ್ತನೊಂದಿಗೆ ಹೂಣಲ್ಪಟ್ಟಿದ್ದೀರಿ, ಮತ್ತು † ಅ. ಕೃ. 2:24; 1 ಕೊರಿ 6:14; ಎಫೆ 1:19 ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ಆತನ ಜೊತೆಯಲ್ಲಿ ನೀವು ಎದ್ದು ಬಂದಿದ್ದೀರಿ.
ಕೊಲೊಸ್ಸೆಯವರಿಗೆ 2 : 13 (IRVKN)
ಅಪರಾಧಗಳನ್ನು ಮಾಡುವುದರಿಂದಲೂ ಹಾಗೂ ಸುನ್ನತಿಯಿಲ್ಲದ ಶರೀರಭಾವದಿಂದಲೂ ಎಫೆ 2:1 ಸತ್ತವರಾಗಿದ್ದ ನಿಮ್ಮನ್ನು § ಎಫೆ 2:5 ದೇವರು ಕ್ರಿಸ್ತನೊಂದಿಗೆ ಬದುಕಿಸಿದ್ದಾನೆ ಮತ್ತು ನಮ್ಮ ಅಪರಾಧಗಳನ್ನೆಲ್ಲಾ ಕ್ಷಮಿಸಿದ್ದಾನೆ.
ಕೊಲೊಸ್ಸೆಯವರಿಗೆ 2 : 14 (IRVKN)
* ರೋಮಾ. 7:4 ನಮ್ಮ ಮೇಲೆ ದೋಷಾರೋಪಣೆ ಮಾಡಿದಂಥ ಆಜ್ಞಾರೂಪವಾಗಿದ್ದಂಥ ಪತ್ರವನ್ನು ತೊಡೆದುಹಾಕಿ ಅದನ್ನು ಶಿಲುಬೆಗೆ ಜಡಿದು ಇಲ್ಲದಂತಾಗಿ ಮಾಡಿದನು.
ಕೊಲೊಸ್ಸೆಯವರಿಗೆ 2 : 15 (IRVKN)
ಆತನು ದೊರೆತನಗಳನ್ನೂ ಮತ್ತು ಅಧಿಕಾರಗಳನ್ನೂ ನಿರಾಯುಧರಾಗಿ ನಿರಾಯುಧರನ್ನಾಗಿ ಮಾಡಿ, ತನ್ನ ‡ ಕ್ರಿಸ್ತನಲ್ಲಿ ಶಿಲುಬೆಯ ಮೂಲಕ ಅವುಗಳನ್ನು ಜಯಿಸಿ ಬಹಿರಂಗಪಡಿಸಿದನು.
ಕೊಲೊಸ್ಸೆಯವರಿಗೆ 2 : 16 (IRVKN)
ಹೀಗಿರುವುದರಿಂದ, § ರೋಮಾ. 14:17; ಇಬ್ರಿ. 9:10; ಯಾಜ 11:2 ಅನ್ನಪಾನಗಳ ವಿಷಯದಲ್ಲಿಯೂ ಅಥವಾ * ಯಾಜ 3:2; ರೋಮಾ. 14:5; ಮಾರ್ಕ 2:28 ಹಬ್ಬ ಅಮಾವಾಸ್ಯೆ ಹಾಗೂ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ † ರೋಮಾ. 14:3; 10, 13 ನಿಮ್ಮನ್ನು ದೋಷಿಗಳೆಂದು ಯಾರೂ ನಿರ್ಣಯಿಸದಿರಲಿ.
ಕೊಲೊಸ್ಸೆಯವರಿಗೆ 2 : 17 (IRVKN)
ಇಬ್ರಿ. 8:5; 10:1 ಇವುಗಳು ಮುಂದೆ ಬರಬೇಕಾಗಿದ್ದ ಕಾರ್ಯಗಳ ಛಾಯೆಯಾಗಿವೆ, ಇವುಗಳ ನಿಜಸ್ವರೂಪವು ಕ್ರಿಸ್ತನೇ.
ಕೊಲೊಸ್ಸೆಯವರಿಗೆ 2 : 18 (IRVKN)
§ ವ. 23 ಮಿಥ್ಯಾ ದೀನತೆಯನ್ನು ಅಪೇಕ್ಷಿಸಿ ದೇವದೂತರ ಆರಾಧನೆಯಲ್ಲಿ ಆಸಕ್ತರಾಗಿದ್ದು, * ಯೆಹೆ. 13:7 ದರ್ಶನಗಳಾದವೆಂದು ಕೊಚ್ಚಿಕೊಂಡು, † ರೋಮಾ. 8:7 ಪ್ರಾಪಂಚಿಕ ಬುದ್ಧಿಯಿಂದಾಗಿ, ಕಾರಣವಿಲ್ಲದೆ ಉಬ್ಬಿಕೊಂಡು ಇರುವಂಥವರಿಗೆ ನಿಮಗೆ ದೊರಕಿರುವ ‡ 1 ಕೊರಿ 9:24 ಬಿರುದನ್ನು ಅಪಹರಿಸುವುದಕ್ಕೆ ಅವಕಾಶಕೊಡಬೇಡಿರಿ.
ಕೊಲೊಸ್ಸೆಯವರಿಗೆ 2 : 19 (IRVKN)
ಇಂಥವನು § ಎಫೆ 4:15-16 ಕ್ರಿಸ್ತನೆಂಬ ತಲೆಯೊಂದಿಗೆ ಸಂಬಂಧ ಕಳೆದುಕೊಂಡವನಾಗಿದ್ದಾನೆ, ತಲೆಯಿಂದಲೇ ದೇಹವೆಲ್ಲಾ ಕೀಲುನರಗಳ ಮೂಲಕ ಬೇಕಾದ ಪೋಷಣೆಯನ್ನು ಹೊಂದಿ, ಒಂದಾಗಿ ಜೋಡಿಸಲ್ಪಟ್ಟ ದೇಹವಾಗಿ, ದೇವರು ಕೊಡುವ ಅಭಿವೃದ್ಧಿಯಿಂದ ಬೆಳೆಯುತ್ತಾ ಬರುತ್ತದೆ.
ಕೊಲೊಸ್ಸೆಯವರಿಗೆ 2 : 20 (IRVKN)
ಪ್ರಾಪಂಚಿಕವಾದ ಪ್ರಥಮಬೋಧನೆಯ ಪಾಲಿಗೆ ನೀವು * ರೋಮಾ. 6:4 ಕ್ರಿಸ್ತನೊಂದಿಗೆ ಸತ್ತವರಾಗಿದ್ದರೆ, † ಗಲಾ. 4:9 ಇನ್ನೂ ಪ್ರಾಪಂಚಿಕರಾಗಿ ಬದುಕುವವರಂತೆ ಮನುಷ್ಯಕಲ್ಪಿತ ಆಜ್ಞೆಗಳನ್ನು ಮತ್ತು ಉಪದೇಶಗಳನ್ನು ಅನುಸರಿಸಿ,
ಕೊಲೊಸ್ಸೆಯವರಿಗೆ 2 : 21 (IRVKN)
(21-22) ವ. 16; 1 ತಿಮೊ. 4:3; ಮತ್ತಾ 15:1-20; ಮಾರ್ಕ 7:1-23 “ಇದನ್ನು ಹಿಡಿಯಬೇಡ, ಇದರ ರುಚಿನೋಡಬೇಡ, ಅದನ್ನು ಮುಟ್ಟಬೇಡ” ಎನ್ನುವ § ಯೆಶಾ 29:13; ಮತ್ತಾ 15:9 ನಿಬಂಧನೆಗಳಿಗೆ ಅಧೀನರಾಗಿರುವುದೇತಕ್ಕೆ? ಈ ಮಾನವ ಆಜ್ಞೆಗಳೂ ಹಾಗೂ ಬೋಧನೆಗಳೂ ಉಪಯೋಗದಿಂದ ನಾಶವಾಗುವ * 1 ಕೊರಿ 6:13 ಪದಾರ್ಥಗಳಿಗೆ ಅನುಸಾರವಾಗಿದೆ.
ಕೊಲೊಸ್ಸೆಯವರಿಗೆ 2 : 22 (IRVKN)
ಕೊಲೊಸ್ಸೆಯವರಿಗೆ 2 : 23 (IRVKN)
ಇಂಥ ಉಪದೇಶಗಳು ಮನುಷ್ಯಕಲ್ಪಿತವಾದ ಆಚರಣೆಗಳಿಂದಲೂ, ವ. 18 ಕಪಟದೀನತೆಯಿಂದಲೂ ಮತ್ತು ದೇಹದಂಡನೆಯಿಂದಲೂ ಜ್ಞಾನವುಳ್ಳದೆಂದು ತೋರಿಬರುತ್ತವೆ, ಆದರೆ ಶಾರೀರಿಕ ಇಚ್ಛೆಗಳನ್ನು ನಿಯಂತ್ರಿಸುವಲ್ಲಿ ಇವುಗಳಿಂದ ‡ 1 ತಿಮೊ. 4:8 ಯಾವ ಪ್ರಯೋಜನವೂ ಉಂಟಾಗುವುದಿಲ್ಲ.

1 2 3 4 5 6 7 8 9 10 11 12 13 14 15 16 17 18 19 20 21 22 23