ದಾನಿಯೇಲನು 12 : 1 (IRVKN)
ಯುಗದ ಸಮಾಪ್ತಿ “ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ದೇವದೂತ ಮೀಕಾಯೇಲನು ಆ ಕಾಲದಲ್ಲಿ ಏಳುವನು. ಮೊಟ್ಟಮೊದಲು ಜನಾಂಗವು ಉಂಟಾದ ದಿನದಿಂದ ಇಂದಿನವರೆಗೂ ಸಂಭವಿಸದಂಥ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು.
ದಾನಿಯೇಲನು 12 : 2 (IRVKN)
ಸತ್ತು ಧೂಳಿನ ನೆಲದೊಳಗೆ ದೀರ್ಘ ನಿದ್ರೆಮಾಡುವವರಲ್ಲಿ ಅನೇಕರು ಎಚ್ಚೆತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನೆ ಮತ್ತು ನಿತ್ಯತಿರಸ್ಕಾರಗಳನ್ನು ಅನುಭವಿಸುವರು.
ದಾನಿಯೇಲನು 12 : 3 (IRVKN)
ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ಬಹಳ ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು.
ದಾನಿಯೇಲನು 12 : 4 (IRVKN)
ದಾನಿಯೇಲನೇ, ನೀನು ಈ ಮಾತುಗಳನ್ನು ಮುಚ್ಚಿಡು, ಅವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆ ಹಾಕು. ಅಂತ್ಯಕಾಲದ ವರೆಗೆ ಮರೆಯಾಗಿರಲಿ. ಬಹಳ ಜನರು ಅತ್ತಿತ್ತ ತಿರುಗುವರು, ತಿಳಿವಳಿಕೆಯು ಹೆಚ್ಚುವುದು.”
ದಾನಿಯೇಲನು 12 : 5 (IRVKN)
ಕೂಡಲೆ ದಾನಿಯೇಲನಾದ ನಾನು ಮತ್ತಿಬ್ಬರನ್ನು ಕಂಡೆನು. ಅವರೊಳಗೆ ಒಬ್ಬನು ನದಿಯ ಈ ದಡದಲ್ಲಿ, ಇನ್ನೊಬ್ಬನು ಆ ದಡದಲ್ಲಿ ನಿಂತಿದ್ದರು.
ದಾನಿಯೇಲನು 12 : 6 (IRVKN)
ಇವರಲ್ಲಿ ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡಿದ್ದ ಒಬ್ಬನು, “ಈ ಅಪೂರ್ವ ಕಾರ್ಯಗಳು ಕೊನೆಗಾಣುವುದಕ್ಕೆ ಎಷ್ಟು ಕಾಲ ಹಿಡಿಯುವುದು?” ಎಂದು ಕೇಳಿದನು.
ದಾನಿಯೇಲನು 12 : 7 (IRVKN)
ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡು ನಿಂತಿದ್ದ ಪುರುಷನನ್ನು ಕೇಳಲು, ಆ ಪುರುಷನು ಎಡ ಮತ್ತು ಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಕಾಲ, ಎರಡುಕಾಲ, ಅರ್ಧಕಾಲ* ಒಂದು ಕಾಲ, ಎರಡುಕಾಲ, ಅರ್ಧಕಾಲ ಅಂದರೆ ಮೂರುವರೆ ವರ್ಷ. ಕಳೆಯಬೇಕು. ದೇವಜನರ ಬಲವನ್ನು ಸಂಪೂರ್ಣವಾಗಿ ಮುರಿದುಬಿಟ್ಟ ಮೇಲೆ ಈ ಕಾರ್ಯಗಳೆಲ್ಲಾ ಮುಕ್ತಾಯವಾಗುವವು” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.
ದಾನಿಯೇಲನು 12 : 8 (IRVKN)
ನನಗೆ ಕೇಳಿಸಿದರೂ ಅರ್ಥವಾಗಲಿಲ್ಲ. ಆಗ ನಾನು, “ಎನ್ನೊಡೆಯನೇ, ಈ ಕಾರ್ಯಗಳ ಪರಿಣಾಮವೇನು?” ಎಂದು ಪ್ರಶ್ನೆ ಮಾಡಲು,
ದಾನಿಯೇಲನು 12 : 9 (IRVKN)
ಅವನು, “ದಾನಿಯೇಲನೇ, ಈ ಮಾತುಗಳು ಅಂತ್ಯಕಾಲದ ವರೆಗೆ ಮುಚ್ಚಲ್ಪಟ್ಟು ಮುದ್ರಿತವಾಗಿವೆ, ಹೋಗು.
ದಾನಿಯೇಲನು 12 : 10 (IRVKN)
ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು; ದುಷ್ಟರು ದುಷ್ಟರಾಗಿಯೇ ನಡೆಯುವರು, ಅವರಲ್ಲಿ ಯಾರಿಗೂ ವಿವೇಕವಿರದು; ಜ್ಞಾನಿಗಳಿಗೆ ವಿವೇಕವಿರುವುದು.
ದಾನಿಯೇಲನು 12 : 11 (IRVKN)
ನಿತ್ಯಹೋಮವು ನೀಗಿಸಲ್ಪಟ್ಟು, ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ ಸಾವಿರದ ಇನ್ನೂರತ್ತೊಂಭತ್ತು ದಿನಗಳು ಕಳೆಯಬೇಕು.
ದಾನಿಯೇಲನು 12 : 12 (IRVKN)
ಕಾದುಕೊಂಡು, ಸಾವಿರದ ಮುನ್ನೂರ ಮೂವತ್ತೈದು ದಿನಗಳ ಕೊನೆಯವರೆಗೆ ತಾಳುವವನು ಧನ್ಯನು.
ದಾನಿಯೇಲನು 12 : 13 (IRVKN)
ನೀನು ಹೋಗಿ ಅಂತ್ಯದ ವರೆಗೆ ವಿಶ್ವಾಸದಿಂದ ಇರು. ನೀನು ದೀರ್ಘನಿದ್ರೆಯನ್ನು ಹೊಂದಿ, ಯುಗದ ಸಮಾಪ್ತಿಯಲ್ಲಿ ಎದ್ದು, ನಿನಗಾಗುವ ಸ್ವತ್ತಿನೊಳಗೆ ನಿಲ್ಲುವಿ” ಎಂದು ಹೇಳಿದನು.

1 2 3 4 5 6 7 8 9 10 11 12 13