ದಾನಿಯೇಲನು 2 : 1 (IRVKN)
ನೆಬೂಕದ್ನೆಚ್ಚರನ ಕನಸು ನೆಬೂಕದ್ನೆಚ್ಚರನು ತನ್ನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಕನಸು ಕಂಡು ತತ್ತರಗೊಂಡನು, ಅವನಿಗೆ ನಿದ್ರೆ ತಪ್ಪಿತು.
ದಾನಿಯೇಲನು 2 : 2 (IRVKN)
ಆಗ ರಾಜನು ತನ್ನ ಕನಸುಗಳ ಅಭಿಪ್ರಾಯವನ್ನು ತಿಳಿದುಕೊಳ್ಳಲು ಜೋಯಿಸರನ್ನೂ, ಮಂತ್ರವಾದಿಗಳನ್ನೂ, ಮಾಟಗಾರರನ್ನೂ, ಪಂಡಿತರನ್ನೂ ಕರೆಯಿಸಲು ಅವರು ಸನ್ನಿಧಿಗೆ ಬಂದು ರಾಜನ ಮುಂದೆ ನಿಂತುಕೊಂಡರು.
ದಾನಿಯೇಲನು 2 : 3 (IRVKN)
ರಾಜನು ಅವರಿಗೆ, “ನಾನು ಕನಸುಕಂಡೆನು, ಅದರ ಅರ್ಥವೇನೋ ಎಂದು ನನ್ನ ಮನಸ್ಸು ತತ್ತರಿಸುತ್ತದೆ” ಎಂಬುದಾಗಿ ಹೇಳಿದನು.
ದಾನಿಯೇಲನು 2 : 4 (IRVKN)
* 2:4 ವಚನದಿಂದ 7:28 ವಚನಗಳು ಅರಮಾಯ ಭಾಷೆಯಲ್ಲಿ ಬರೆಯಲ್ಪಟ್ಟಿವೆ. ಆಗ ಆ ಪಂಡಿತರು ಅರಮಾಯ ಭಾಷೆಯಲ್ಲಿ ರಾಜನಿಗೆ, “ಅರಸನೇ, ಚಿರಂಜೀವಿಯಾಗಿರು; ಆ ಕನಸನ್ನು ನಿನ್ನ ದಾಸರಿಗೆ ಹೇಳು; ಅದರ ತಾತ್ಪರ್ಯವನ್ನು ತಿಳಿಸುವೆವು” ಎಂದು ಅರಿಕೆಮಾಡಿದರು.
ದಾನಿಯೇಲನು 2 : 5 (IRVKN)
ಆಗ ರಾಜನು ಪಂಡಿತರಿಗೆ ಪ್ರತ್ಯುತ್ತರವಾಗಿ, “ನನ್ನ ಮಾತು ಖಂಡಿತ; ನೀವೇ ಆ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸದಿದ್ದರೆ ನಿಮ್ಮನ್ನು ತುಂಡುತುಂಡಾಗಿ ಕತ್ತರಿಸುವೆನು, ನಿಮ್ಮ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಿಬಿಡುವೆನು.
ದಾನಿಯೇಲನು 2 : 6 (IRVKN)
ನೀವು ಆ ಕನಸನ್ನೂ, ಅದರ ಅರ್ಥವನ್ನೂ ತಿಳಿಸಿದರೆ ನನ್ನಿಂದ ನಿಮಗೆ ದಾನ ಮತ್ತು ಬಹುಮಾನಗಳೂ, ವಿಶೇಷ ಸನ್ಮಾನಗಳೂ ಲಭಿಸುವವು. ಆದಕಾರಣ ಆ ಕನಸನ್ನೂ, ಅದರ ಅಭಿಪ್ರಾಯವನ್ನೂ ನನಗೆ ತಿಳಿಸಿರಿ” ಎಂದು ಹೇಳಿದನು.
ದಾನಿಯೇಲನು 2 : 7 (IRVKN)
ಪಂಡಿತರು ಉತ್ತರವಾಗಿ, “ರಾಜನು ತನ್ನ ದಾಸರಿಗೆ ಕನಸನ್ನು ತಿಳಿಸಲಿ, ನಾವು ಅದರ ತಾತ್ಪರ್ಯವನ್ನು ವಿವರಿಸುವೆವು” ಎಂಬ ಉತ್ತರವನ್ನೇ ಪುನಃ ಕೊಟ್ಟರು.
ದಾನಿಯೇಲನು 2 : 8 (IRVKN)
ಅದಕ್ಕೆ ರಾಜನು, “ನೀವು ಆ ಕನಸನ್ನು ನನಗೆ ತಿಳಿಸದಿದ್ದರೆ ಮರಣದಂಡನೆಯ ನಿಯಮವೇ ನಿಮಗೆ ಗತಿಯಾಗುವುದು ಎಂಬ ನನ್ನ ಮಾತು ಖಂಡಿತವೆಂದು ನೀವು ತಿಳಿದುಕೊಂಡು ಕಾಲಹರಣ ಮಾಡುತ್ತಿದ್ದೀರಿ, ಇದು ನನಗೆ ಚೆನ್ನಾಗಿ ಗೊತ್ತು.
ದಾನಿಯೇಲನು 2 : 9 (IRVKN)
ಕಾಲಾಂತರವನ್ನು ನಿರೀಕ್ಷಿಸಿಕೊಂಡೇ ನನ್ನ ಮುಂದೆ ಕೆಟ್ಟ ಸುಳ್ಳುಗಳನ್ನು ಆಡುತ್ತಿರಬೇಕೆಂದು ಒಪ್ಪಂದ ಮಾಡಿಕೊಂಡಿದ್ದೀರಿ; ಅಂತು ಆ ಕನಸನ್ನು ತಿಳಿಸಬೇಕು; ಆದುದರಿಂದ ನೀವು ಅದರ ಅರ್ಥವನ್ನೂ ವಿವರಿಸಬಲ್ಲಿರೆಂದು ತಿಳಿದುಕೊಳ್ಳುವೆನು” ಎಂದು ಹೇಳಿದನು.
ದಾನಿಯೇಲನು 2 : 10 (IRVKN)
ಆಗ ಆ ಪಂಡಿತರು ರಾಜನ ಸನ್ನಿಧಿಯ ಮುಂದೆ, “ರಾಜನು ಕೇಳಿದ ಸಂಗತಿಯನ್ನು ತಿಳಿಸಬಲ್ಲವನು ಲೋಕದಲ್ಲಿ ಯಾರೂ ಇಲ್ಲ; ಎಷ್ಟೇ ಬಲಿಷ್ಠನು, ಎಷ್ಟೇ ಪ್ರಬಲನು ಆದ ಯಾವ ಅರಸನೂ ಜೋಯಿಸರನ್ನಾಗಲಿ, ಮಾಟಗಾರನನ್ನಾಗಲಿ, ಪಂಡಿತನನ್ನಾಗಲಿ, ಇಂಥ ಸಂಗತಿಯನ್ನು ಎಂದೂ ಕೇಳಿದ್ದಿಲ್ಲ.
ದಾನಿಯೇಲನು 2 : 11 (IRVKN)
ರಾಜನು ಕೇಳುವ ಸಂಗತಿಯು ಅತಿ ಕಷ್ಟವಾದದ್ದು. ನರಜನ್ಮದವರ ಮಧ್ಯೆ ವಾಸಿಸುವ ದೇವರುಗಳೇ ಹೊರತು ಇನ್ಯಾರೂ ರಾಜನ ಸಮ್ಮುಖದಲ್ಲಿ ಅದನ್ನು ತಿಳಿಸಲಾರರು” ಎಂದು ಉತ್ತರಕೊಟ್ಟರು.
ದಾನಿಯೇಲನು 2 : 12 (IRVKN)
ಇದನ್ನು ಕೇಳಿ, ರಾಜನು ಉಗ್ರರೋಷವುಳ್ಳವನಾಗಿ ಬಾಬೆಲಿನ ಸಕಲ ವಿದ್ವಾಂಸರನ್ನು ಕೊಲ್ಲಬೇಕೆಂದು ಆಜ್ಞಾಪಿಸಿದನು.
ದಾನಿಯೇಲನು 2 : 13 (IRVKN)
ಕೂಡಲೆ ಆ ಆಜ್ಞೆಯು ಪ್ರಕಟವಾಯಿತು. ವಿದ್ವಾಂಸರು ಪ್ರಾಣಾಪಾಯಕ್ಕೆ ಗುರಿಯಾದರು; ದಾನಿಯೇಲನನ್ನೂ, ಅವನ ಸ್ನೇಹಿತರನ್ನೂ ಕೊಲ್ಲುವುದಕ್ಕೆ ಹುಡುಕಿದರು.
ದಾನಿಯೇಲನು 2 : 14 (IRVKN)
ರಾಜನ ಮೈಗಾವಲಿನವರ ದಳವಾಯಿಯಾದ ಅರ್ಯೋಕನು ಬಾಬೆಲಿನ ವಿದ್ವಾಂಸರ ಸಂಹಾರಕ್ಕೆ ಹೊರಟಾಗ, ದಾನಿಯೇಲನು ಬುದ್ಧಿವಿವೇಕಗಳಿಂದ ಅವನ ಸಂಗಡ ಮಾತನಾಡಿ,
ದಾನಿಯೇಲನು 2 : 15 (IRVKN)
“ಈ ರಾಜಾಜ್ಞೆಯು ಏಕೆ ಇಷ್ಟು ಉಗ್ರವಾಗಿದೆ?” ಎಂದು ಕೇಳಲು ಅರ್ಯೋಕನು ನಡೆದ ಸಂಗತಿಯನ್ನು ದಾನಿಯೇಲನಿಗೆ ತಿಳಿಸಿದನು.
ದಾನಿಯೇಲನು 2 : 16 (IRVKN)
ಆ ಮೇಲೆ ದಾನಿಯೇಲನು ಅರಮನೆಗೆ ಬಂದು, “ನನಗೆ ಸಮಯವನ್ನು ಕೊಟ್ಟರೆ ನಾನು ಆ ಕನಸಿನ ಅರ್ಥವನ್ನು ರಾಜನಿಗೆ ವಿವರಿಸುವೆನು” ಎಂದು ಅರಿಕೆ ಮಾಡಿದನು.
ದಾನಿಯೇಲನು 2 : 17 (IRVKN)
ಬಳಿಕ ದಾನಿಯೇಲನು ತನ್ನ ಮನೆಗೆ ಹೋಗಿ ಹನನ್ಯ, ಮೀಶಾಯೇಲ, ಅಜರ್ಯ ಎಂಬ ತನ್ನ ಸ್ನೇಹಿತರಿಗೆ,
ದಾನಿಯೇಲನು 2 : 18 (IRVKN)
“ದಾನಿಯೇಲನು ಆ ಸಮಾಚಾರವನ್ನು ತಿಳಿಸಿ, ನಾವು ಬಾಬೆಲಿನ ಇತರ ವಿದ್ವಾಂಸರೊಂದಿಗೆ ನಾಶವಾಗದಂತೆ ಪರಲೋಕ ದೇವರು ಈ ರಹಸ್ಯದ ವಿಷಯವಾಗಿ ಕೃಪೆತೋರಿಸಲು ಆತನನ್ನು ಬೇಡಿಕೊಳ್ಳೋಣ” ಎಂದನು.
ದಾನಿಯೇಲನು 2 : 20 (IRVKN)
ಆಗ ಆ ರಹಸ್ಯವು ರಾತ್ರಿಯ ಸ್ವಪ್ನದಲ್ಲಿ ದಾನಿಯೇಲನಿಗೆ ಪ್ರಕಟವಾಯಿತು. ಕೂಡಲೆ ದಾನಿಯೇಲನು ಪರಲೋಕ ದೇವರನ್ನು ಹೀಗೆ ಸ್ತುತಿಸಿದನು, “ದೇವರ ನಾಮಕ್ಕೆ ಯುಗಯುಗಾಂತರಗಳಲ್ಲಿಯೂ ಸ್ತುತಿಸ್ತೋತ್ರ ಉಂಟಾಗಲಿ! ಜ್ಞಾನ ತ್ರಾಣಗಳು ಆತನವುಗಳೇ.
ದಾನಿಯೇಲನು 2 : 21 (IRVKN)
ಕಾಲ ಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ಕಡೆಗಣಿಸುತ್ತಾನೆ, ನೆಲೆಸುವಂತೆ ಮಾಡುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ.
ದಾನಿಯೇಲನು 2 : 22 (IRVKN)
ಆತನು ಅಗಾಧ ವಿಷಯಗಳನ್ನೂ ಗೂಢಾರ್ಥಗಳನ್ನೂ ಬಯಲಿಗೆ ತರುತ್ತಾನೆ; ಕಗ್ಗತ್ತಲೆಯಲ್ಲಿ ಅಡಗಿರುವುದೂ ಆತನಿಗೆ ಗೋಚರವಾಗುವುದು; ತೇಜಸ್ಸು ಆತನಲ್ಲೇ ನೆಲೆಗೊಂಡಿದೆ.
ದಾನಿಯೇಲನು 2 : 23 (IRVKN)
ನನ್ನ ಪೂರ್ವಿಕರ ದೇವರೇ, ನಿನ್ನನ್ನು ಸ್ತುತಿಸುತ್ತೇನೆ, ಕೊಂಡಾಡುತ್ತೇನೆ, ನೀನು ನನಗೆ ಜ್ಞಾನತ್ರಾಣಗಳನ್ನು ದಯಪಾಲಿಸಿ ನಾವು ಬೇಡಿದ್ದನ್ನು ನನಗೆ ತೋರ್ಪಡಿಸಿದ್ದಿಯಲ್ಲಾ; ಹೌದು, ರಾಜನ ರಹಸ್ಯವನ್ನು ನಮಗೆ ಪ್ರಕಟಪಡಿಸಿರುವೆ” ಎಂದನು.
ದಾನಿಯೇಲನು 2 : 24 (IRVKN)
ದಾನಿಯೇಲನು ಕನಸಿನ ಅರ್ಥವನ್ನು ವಿವರಿಸಿದ್ದು
ದಾನಿಯೇಲನು 2 : 25 (IRVKN)
ನಂತರ ದಾನಿಯೇಲನು ಬಾಬೆಲಿನ ವಿದ್ವಾಂಸರನ್ನು ಕೊಲ್ಲುವುದಕ್ಕೆ ರಾಜನು ನೇಮಿಸಿದ ಅರ್ಯೋಕನ ಬಳಿಗೆ ಹೋಗಿ ಅವನಿಗೆ, “ಬಾಬೆಲಿನ ವಿದ್ವಾಂಸರನ್ನು ಕೊಲ್ಲಬೇಡ; ನನ್ನನ್ನು ರಾಜನ ಸನ್ನಿಧಿಗೆ ಬಿಡು; ನಾನು ಕನಸಿನ ಅಭಿಪ್ರಾಯವನ್ನು ರಾಜನಿಗೆ ತಿಳಿಸುವೆನು” ಎಂದು ಹೇಳಿದನು. ಕೂಡಲೆ ಅರ್ಯೋಕನು ದಾನಿಯೇಲನನ್ನು ರಾಜನ ಬಳಿಗೆ ಶೀಘ್ರವಾಗಿ ಕರೆದುಕೊಂಡು ಹೋಗಿ, “ರಾಜನೇ, ಕನಸಿನ ಅಭಿಪ್ರಾಯವನ್ನು ನಿನಗೆ ತಿಳಿಸಬಲ್ಲವನೊಬ್ಬನು ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ನನಗೆ ಸಿಕ್ಕಿದ್ದಾನೆ” ಎಂದು ಅರಿಕೆಮಾಡಿದನು.
ದಾನಿಯೇಲನು 2 : 26 (IRVKN)
ರಾಜನು ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನನ್ನು, “ನಾನು ಕಂಡ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸಬಲ್ಲೆಯಾ?” ಎಂದು ಕೇಳಿದನು.
ದಾನಿಯೇಲನು 2 : 27 (IRVKN)
ಅದಕ್ಕೆ ದಾನಿಯೇಲನು ರಾಜನನ್ನು ಕುರಿತು, “ರಾಜನು ಕೇಳುವ ರಹಸ್ಯವನ್ನು ವಿದ್ವಾಂಸರಾಗಲಿ, ಮಾಟಗಾರರಾಗಲಿ, ಜೋಯಿಸರಾಗಲಿ, ಶಕುನದವರಾಗಲಿ ಯಾರೂ ರಾಜನಿಗೆ ತಿಳಿಸಲಾರರು.
ದಾನಿಯೇಲನು 2 : 28 (IRVKN)
ಆದರೆ ರಹಸ್ಯಗಳನ್ನು ಪ್ರಕಟಗೊಳಿಸುವ ಒಬ್ಬನಿದ್ದಾನೆ, ಆತನು ದೇವರು, ಆತನು ಪರಲೋಕದಲ್ಲಿದ್ದಾನೆ. ಮುಂದೆ ನಡೆಯತಕ್ಕದ್ದನ್ನು ಆತನೇ ರಾಜನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸಿದ್ದಾನೆ. ನಿನ್ನ ಕನಸು, ಹಾಸಿಗೆಯ ಮೇಲೆ ನಿನ್ನ ಮನಸ್ಸಿನಲ್ಲಿ ಬಿದ್ದ ಸ್ವಪ್ನಗಳು ಇವೇ.
ದಾನಿಯೇಲನು 2 : 29 (IRVKN)
“ರಾಜನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ ಮುಂದೆ ಏನಾಗುವುದೋ? ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತಲ್ಲಾ; ರಹಸ್ಯಗಳನ್ನು ವ್ಯಕ್ತಗೊಳಿಸುವಾತನು ಮುಂದೆ ಸಂಭವಿಸುವುದನ್ನು ನಿನಗೆ ಗೋಚರಮಾಡಿದ್ದಾನೆ.
ದಾನಿಯೇಲನು 2 : 30 (IRVKN)
ನಾನೇ ಎಲ್ಲಾ ಮನುಷ್ಯರಿಗಿಂತ ಹೆಚ್ಚು ಬುದ್ಧಿವಂತನಲ್ಲ, ಕನಸಿನ ಅಭಿಪ್ರಾಯವು ರಾಜನಿಗೆ ಗೋಚರವಾಗಿ ನಿನ್ನ ಮನಸ್ಸಿನ ಯೋಚನೆಯ ವಿಷಯವು ನಿನಗೆ ತಿಳಿದು ಬರಲಿ ಎಂದು ಈ ರಹಸ್ಯವು ನನಗೂ ಪ್ರಕಟವಾಗಿದೆ.
ದಾನಿಯೇಲನು 2 : 31 (IRVKN)
“ರಾಜನೇ, ನೀನು ಕಂಡದ್ದು ಆಹಾ, ಅದ್ಭುತಪ್ರತಿಮೆ; ಥಳಥಳನೆ ಹೊಳೆಯುವ ಆ ದೊಡ್ಡ ಪ್ರತಿಮೆಯು ನಿನ್ನೆದುರಿಗೆ ನಿಂತಿತ್ತು; ಭಯಂಕರವಾಗಿ ಕಾಣಿಸಿತು.
ದಾನಿಯೇಲನು 2 : 32 (IRVKN)
ಆ ಪ್ರತಿಮೆಯ ತಲೆಯು ಅಪರಂಜಿ, ಎದೆತೋಳುಗಳು ಬೆಳ್ಳಿ, ಹೊಟ್ಟೆಸೊಂಟಗಳು ತಾಮ್ರ,
ದಾನಿಯೇಲನು 2 : 33 (IRVKN)
ಕಾಲುಗಳು ಕಬ್ಬಿಣ, ಪಾದಗಳು ಕಬ್ಬಿಣ ಮತ್ತು ಮಣ್ಣು.
ದಾನಿಯೇಲನು 2 : 34 (IRVKN)
“ನೀನು ನೋಡುತ್ತಿರಲಾಗಿ ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು, ಸಿಡಿದು ಬಂದು ಆ ಪ್ರತಿಮೆಯ ಕಬ್ಬಿಣ ಮಣ್ಣಿನ ಪಾದಗಳಿಗೆ ಬಡಿದು, ಚೂರುಚೂರು ಮಾಡಿತು.
ದಾನಿಯೇಲನು 2 : 35 (IRVKN)
ಆಗ ಕಬ್ಬಿಣ, ಮಣ್ಣು, ತಾಮ್ರ, ಬೆಳ್ಳಿ ಬಂಗಾರಗಳೆಲ್ಲವೂ ಪುಡಿಪುಡಿಯಾಗಿ ಸುಗ್ಗಿಯ ಕಣಗಳ ಹೊಟ್ಟಿನಂತಾದವು; ಗಾಳಿಯು ತೂರಿಕೊಂಡು ಹೋಗಲು ಅವುಗಳಿಗೆ ನೆಲೆಯೇ ಇಲ್ಲವಾಯಿತು; ಪ್ರತಿಮೆಗೆ ಬಡಿದ ಆ ಬಂಡೆಯು ಮಹಾ ಪರ್ವತವಾಗಿ ಲೋಕದಲ್ಲೆಲ್ಲಾ ತುಂಬಿಕೊಂಡಿತು.
ದಾನಿಯೇಲನು 2 : 36 (IRVKN)
“ಕನಸು ಇದೇ; ಇದರ ಅರ್ಥವನ್ನೂ ನಿನ್ನಲ್ಲಿ ಅರಿಕೆಮಾಡುತ್ತೇನೆ.
ದಾನಿಯೇಲನು 2 : 37 (IRVKN)
ಅರಸನೇ, ನೀನು ರಾಜಾಧಿರಾಜ, ಪರಲೋಕ ದೇವರು ನಿನಗೆ ರಾಜ್ಯಬಲ, ಪರಾಕ್ರಮ, ವೈಭವಗಳನ್ನು ದಯಪಾಲಿಸಿದ್ದಾನೆ.
ದಾನಿಯೇಲನು 2 : 38 (IRVKN)
ನರಜಾತಿಯವರು ವಾಸಿಸುವ ಸಕಲ ಪ್ರಾಂತ್ಯಗಳಲ್ಲಿ ಆಕಾಶಪಕ್ಷಿಗಳನ್ನೂ, ಭೂಜಂತುಗಳನ್ನೂ ನಿನ್ನ ಕೈಗೆ ಒಪ್ಪಿಸಿ ನೀನು ಅವುಗಳನ್ನೆಲ್ಲಾ ಆಳುವಂತೆ ಮಾಡಿದ್ದಾನೆ; ನೀನೇ ಆ ಬಂಗಾರದ ತಲೆ.
ದಾನಿಯೇಲನು 2 : 40 (IRVKN)
“ನಿನ್ನ ಕಾಲವಾದ ಮೇಲೆ ನಿನಗಿಂತ ಬಿಳುಪಾದ (ಬೆಳ್ಳಿ) ಮತ್ತೊಂದು ರಾಜ್ಯವು ಉಂಟಾಗುವುದು. ಅನಂತರ ಬೇರೊಂದು ಮೂರನೆಯ ರಾಜ್ಯವು ತಾಮ್ರದ್ದಾಗಿ ತಲೆದೋರಿ ಭೂಮಂಡಲವನ್ನೆಲ್ಲಾ ಆಳುವುದು.
ದಾನಿಯೇಲನು 2 : 41 (IRVKN)
“ನಾಲ್ಕನೆಯ ರಾಜ್ಯವು ಕಬ್ಬಿಣದಷ್ಟು ಗಟ್ಟಿ; ಕಬ್ಬಿಣವು ಎಲ್ಲಾ ವಸ್ತುಗಳನ್ನು ಚೂರುಚೂರಾಗಿ ಒಡೆದು ಹಾಕುತ್ತದಷ್ಟೆ; ಸಕಲವನ್ನೂ ಧ್ವಂಸಮಾಡುವ ಕಬ್ಬಿಣದಂತೆಯೇ ಅದು ಚೂರುಚೂರಾಗಿ ಧ್ವಂಸಮಾಡುವುದು. “ಪಾದಗಳಲ್ಲಿ ಮತ್ತು ಬೆರಳುಗಳಲ್ಲಿ ಒಂದಂಶವು ಕುಂಬಾರನ ಮಣ್ಣೂ, ಒಂದಂಶವು ಕಬ್ಬಿಣವೂ ಆಗಿದ್ದುದನ್ನು ನೀನು ನೋಡಿದ ಪ್ರಕಾರ ಆ ರಾಜ್ಯವು ಭಿನ್ನ ಭಿನ್ನವಾಗಿರುವುದು; ಜೇಡಿಮಣ್ಣಿನೊಂದಿಗೆ ಕಬ್ಬಿಣವು ಮಿಶ್ರವಾಗಿದ್ದದ್ದನ್ನು ನೀನು ನೋಡಿದಂತೆ ಆ ರಾಜ್ಯದಲ್ಲಿ ಕಬ್ಬಿಣದ ಬಲವು ಸೇರಿರುವುದು.
ದಾನಿಯೇಲನು 2 : 42 (IRVKN)
ಕಾಲ್ಬೆರಳುಗಳ ಒಂದಂಶವು ಕಬ್ಬಿಣ, ಒಂದಂಶವು ಮಣ್ಣು ಆಗಿದ್ದ ಹಾಗೆ ಆ ರಾಜ್ಯದ ಒಂದಂಶವು ಗಟ್ಟಿ, ಒಂದಂಶವು ಜೊಂಡಾಗಿರುವುದು.
ದಾನಿಯೇಲನು 2 : 43 (IRVKN)
ಕಬ್ಬಿಣವು ಜೇಡಿಮಣ್ಣಿನೊಂದಿಗೆ ಬೆರೆತಿರುವುದನ್ನು ನೀನು ನೋಡಿದ ಮೇರೆಗೆ, ಆ ರಾಜ್ಯಾಗಳ ಸಂತತಿ ಸಂಬಂಧದಿಂದ ಬೆರೆತುಕೊಳ್ಳುವವು. ಆದರೆ ಕಬ್ಬಿಣವು ಮಣ್ಣಿನೊಂದಿಗೆ ಹೇಗೆ ಕೂಡಿಕೊಳ್ಳುವುದಿಲ್ಲವೋ ಹಾಗೆ ಅವು ಒಂದಕ್ಕೊಂದು ಹೊಂದಿಕೊಳ್ಳುವುದಿಲ್ಲ.
ದಾನಿಯೇಲನು 2 : 44 (IRVKN)
“ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.
ದಾನಿಯೇಲನು 2 : 45 (IRVKN)
ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು ಕಬ್ಬಿಣ, ತಾಮ್ರ, ಮಣ್ಣು, ಬೆಳ್ಳಿಬಂಗಾರಗಳನ್ನು ಚೂರುಚೂರು ಮಾಡಿದ್ದು ನಿನ್ನ ಕಣ್ಣಿಗೆ ಬಿತ್ತಲ್ಲಾ. ಇದರಿಂದ ಪರಲೋಕದೇವರು ಮುಂದೆ ನಡೆಯುವ ವಿಷಯಗಳನ್ನು ರಾಜನಿಗೆ ತಿಳಿಯಪಡಿಸಿದ್ದಾನೆ. ಕನಸು ನಿಜ, ಅದರ ಅರ್ಥವು ನಂಬತಕ್ಕದು” ಎಂದು ಹೇಳಿದನು.
ದಾನಿಯೇಲನು 2 : 46 (IRVKN)
ದಾನಿಯೇಲನನ್ನು ಸನ್ಮಾನಿಸಿದ್ದು ಆಗ ರಾಜನಾದ ನೆಬೂಕದ್ನೆಚ್ಚರನು ಅಡ್ಡಬಿದ್ದು, “ದಾನಿಯೇಲನನ್ನು ಪೂಜಿಸಿ, ಅವನಿಗೆ ನೈವೇದ್ಯಮಾಡಿ ಧೂಪ ಹಾಕಬೇಕು” ಎಂದು ಆಜ್ಞಾಪಿಸಿದನು.
ದಾನಿಯೇಲನು 2 : 47 (IRVKN)
ಅರಸನು ದಾನಿಯೇಲನಿಗೆ ಪ್ರತ್ಯುತ್ತರವಾಗಿ, “ನೀನು ಈ ರಹಸ್ಯವನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ, ರಾಜರ ಒಡೆಯನೂ, ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆ ಎಂಬುದು ನಿಶ್ಚಯ” ಎಂದು ಹೇಳಿದನು.
ದಾನಿಯೇಲನು 2 : 48 (IRVKN)
ಬಳಿಕ ರಾಜನು ದಾನಿಯೇಲನನ್ನು ಸನ್ಮಾನಿಸಿ, ಅವನಿಗೆ ಅಮೂಲ್ಯವಾದ ಅನೇಕ ಬಹುಮಾನಗಳನ್ನೂ ದಾನಗಳನ್ನು ಕೊಟ್ಟು, ಬಾಬೆಲ್ ಸಂಸ್ಥಾನವನ್ನೆಲ್ಲಾ ಅಧೀನಪಡಿಸಿ, ಬಾಬೆಲಿನ ವಿದ್ವಾಂಸರ ಸಕಲ ಮುಖ್ಯಸ್ಥರಿಗೂ ಅವನನ್ನು ಮುಖ್ಯಸ್ಥನನ್ನಾಗಿ ನೇಮಿಸಿದನು.
ದಾನಿಯೇಲನು 2 : 49 (IRVKN)
ದಾನಿಯೇಲನು ಬಿನ್ನಹ ಮಾಡಲು ರಾಜನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನು ಅರಮನೆಯಲ್ಲಿ ಉಳಿದನು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48
49