ದಾನಿಯೇಲನು 3 : 1 (IRVKN)
{ಬಂಗಾರದ ಪತ್ರಿಮೆಯನ್ನು ಆರಾಧಿಸಲು ಆಜ್ಞೆ} [PS] ರಾಜನಾದ ನೆಬೂಕದ್ನೆಚ್ಚರನು ಅರುವತ್ತು ಮೊಳ ಎತ್ತರದ, ಆರು ಮೊಳ ಅಗಲದ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ, ಬಾಬೆಲ್ ಸಂಸ್ಥಾನದ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.
ದಾನಿಯೇಲನು 3 : 2 (IRVKN)
ಆಗ ರಾಜನಾದ ನೆಬೂಕದ್ನೆಚ್ಚರನು ತಾನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೋತ್ಸವಕ್ಕೆ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಮುಂತಾದವರನ್ನೂ, ಸಮಸ್ತ ಸಂಸ್ಥಾನಾಧಿಕಾರಿಗಳನ್ನೂ ಒಟ್ಟುಗೂಡಿಸುವಂತೆ ಸಮಾಚಾರವನ್ನು ಕಳುಹಿಸಿದನು. [PE][PS]
ದಾನಿಯೇಲನು 3 : 3 (IRVKN)
ಆ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಇವರೂ ಸಮಸ್ತ ಸಂಸ್ಥಾನಾಧಿಕಾರಿಗಳೂ ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೋತ್ಸವಕ್ಕೆ ನೆರೆದು, ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಮುಂದೆ ನಿಂತುಕೊಂಡರು.
ದಾನಿಯೇಲನು 3 : 4 (IRVKN)
ಆಗ ಸಾರುವವನು ಗಟ್ಟಿಯಾಗಿ ಕೂಗಿ, “ವಿವಿಧ ಜನಾಂಗ, ಕುಲ, ಭಾಷೆಗಳವರೇ, ನಿಮಗೆ ರಾಜಾಜ್ಞೆಯಾಗಿದೆ.
ದಾನಿಯೇಲನು 3 : 5 (IRVKN)
ನೀವು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಪೂಜಿಸಬೇಕು.
ದಾನಿಯೇಲನು 3 : 6 (IRVKN)
ಯಾವನು ಅಡ್ಡಬಿದ್ದು ಪೂಜಿಸುವುದಿಲ್ಲವೋ ಅವನು ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವನು” ಎಂದು ಸಾರಿದನು.
ದಾನಿಯೇಲನು 3 : 7 (IRVKN)
ಆದಕಾರಣ ಅದೇ ಕಾಲದಲ್ಲಿ ಸಮಸ್ತ ಜನಾಂಗ, ಕುಲ, ಭಾಷೆಗಳವರು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಎಲ್ಲರೂ ಅಡ್ಡಬಿದ್ದು ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸಿದರು. [PE][PS]
ದಾನಿಯೇಲನು 3 : 8 (IRVKN)
ಹೀಗಿರಲು ಆ ಸಮಯದಲ್ಲಿ ಕೆಲವು ಮಂದಿ ಪಂಡಿತರು ಯೆಹೂದ್ಯರ ಮೇಲೆ ದೂರು ಹೊರಿಸುವುದಕ್ಕೆ ರಾಜನ ಸನ್ನಿಧಿಗೆ ಬಂದು
ದಾನಿಯೇಲನು 3 : 9 (IRVKN)
ರಾಜನಾದ ನೆಬೂಕದ್ನೆಚ್ಚರನಿಗೆ, “ಅರಸನೇ, ಚಿರಂಜೀವಿಯಾಗಿರು!
ದಾನಿಯೇಲನು 3 : 10 (IRVKN)
ಪ್ರಭುವೇ, ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಪ್ರತಿಯೊಬ್ಬನೂ ಅಡ್ಡಬಿದ್ದು, ಬಂಗಾರದ ಪ್ರತಿಮೆಯನ್ನು ಪೂಜಿಸಲಿ. [PE][PS]
ದಾನಿಯೇಲನು 3 : 11 (IRVKN)
“ಯಾರು ಅಡ್ಡಬಿದ್ದು ಪೂಜಿಸುವುದಿಲ್ಲವೋ ಅವನು ಧಗಧಗಿಸುವ ಬೆಂಕಿಯೊಳಗೆ ಹಾಕಲ್ಪಡಲಿ ಎಂದು ಆಜ್ಞೆಮಾಡಿದಿಯಲ್ಲಾ.
ದಾನಿಯೇಲನು 3 : 12 (IRVKN)
ನೀನು ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿಕೊಟ್ಟ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬ ಕೆಲವು ಮಂದಿ ಯೆಹೂದ್ಯರು ಇದ್ದಾರೆ. ರಾಜನೇ, ಇವರು ನಿನ್ನನ್ನು ಲಕ್ಷಿಸುವುದಿಲ್ಲ, ನಿನ್ನ ದೇವರುಗಳನ್ನು ಸೇವಿಸುವುದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವುದಿಲ್ಲ” ಎಂದು ಅರಿಕೆಮಾಡಿದರು. [PE][PS]
ದಾನಿಯೇಲನು 3 : 13 (IRVKN)
ನೆಬೂಕದ್ನೆಚ್ಚರನು ಉಗ್ರರೋಷವುಳ್ಳವನಾಗಿ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು.
ದಾನಿಯೇಲನು 3 : 14 (IRVKN)
ಹಾಗೆ ಅವರನ್ನು ಹಿಡಿದು ತರಲು ನೆಬೂಕದ್ನೆಚ್ಚರನು ಅವರಿಗೆ, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ, ನೀವು ನನ್ನ ದೇವರನ್ನು ಸೇವಿಸದೆ, ನಾನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸದೆ ಇರುವುದು ಬೇಕೆಂದೇ ಮಾಡಿದ್ದೋ? [PE][PS]
ದಾನಿಯೇಲನು 3 : 15 (IRVKN)
“ಈಗಲಾದರೂ ನೀವು ಸಿದ್ಧವಾಗಿದ್ದು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು?” ಎಂದು ಹೇಳಿದನು. [PE][PS]
ದಾನಿಯೇಲನು 3 : 16 (IRVKN)
ಇದನ್ನು ಕೇಳಿ ಶದ್ರಕ್ ಮೇಶಕ್, ಅಬೇದ್ನೆಗೋ ಎಂಬುವವರು ರಾಜನಿಗೆ, “ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಏನೂ ಹೇಳಬೇಕಾಗಿಲ್ಲ.
ದಾನಿಯೇಲನು 3 : 17 (IRVKN)
‘ಅರಸನೇ, ನಾವು ಆರಾಧಿಸುವ ದೇವರಿಗೆ ಚಿತ್ತವಿದ್ದರೆ ಆತನು ಧಗಧಗನೆ ಉರಿಯುವ ಬೆಂಕಿಯೊಳಗಿಂದ ನಮ್ಮನ್ನು ಬಿಡಿಸಬಲ್ಲನು; ಹೇಗೂ ನಿನ್ನ ಕೈಯಿಂದ ನಮ್ಮನ್ನು ಬಿಡಿಸುವನು.
ದಾನಿಯೇಲನು 3 : 18 (IRVKN)
ಚಿತ್ತವಿಲ್ಲದಿದ್ದರೂ ರಾಜನೇ, ಇದು ನಿನಗೆ ತಿಳಿದಿರಲಿ, ನಾವು ನಿನ್ನ ದೇವರುಗಳನ್ನು ಆರಾಧಿಸುವುದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವುದಿಲ್ಲ’ ” ಎಂದು ಉತ್ತರಕೊಟ್ಟರು. [PS]
ದಾನಿಯೇಲನು 3 : 19 (IRVKN)
{ದೇವಭಕ್ತರನ್ನು ಅಗ್ನಿಯು ಸುಡದೆ ಇದ್ದದ್ದು} [PS] ಆಗ ನೆಬೂಕದ್ನೆಚ್ಚರನು ಕೋಪೋದ್ರೇಕದಿಂದ ಮುಖಭಾವವನ್ನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ಕಡೆಗೆ ತಿರುಗಿಸಿಕೊಂಡು ಬೆಂಕಿಯನ್ನು ನಿತ್ಯಕ್ಕಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕು ಎಂದು ಆಜ್ಞಾಪಿಸಿದನು.
ದಾನಿಯೇಲನು 3 : 20 (IRVKN)
ಇದಲ್ಲದೆ ತನ್ನ ಸೈನ್ಯದ ಕೆಲವು ಮಂದಿ ಶೂರರಿಗೆ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಕಟ್ಟಿ ಧಗಧಗನೆ ಉರಿಯುವ ಬೆಂಕಿಯೊಳಗೆ ಎತ್ತಿಹಾಕಬೇಕೆಂದು ಅಪ್ಪಣೆಕೊಟ್ಟನು.
ದಾನಿಯೇಲನು 3 : 21 (IRVKN)
ಅದರಂತೆ ಶಲ್ಯ, ಇಜಾರು, ಮುಂಡಾಸ ಮೊದಲಾದ ಉಡುಪನ್ನು ಧರಿಸಿಕೊಂಡಿದ್ದ ಹಾಗೆಯೇ ಅವರನ್ನು ಕಟ್ಟಿ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಿಬಿಟ್ಟರು.
ದಾನಿಯೇಲನು 3 : 22 (IRVKN)
ಹೀಗಾಗಿ ರಾಜಾಜ್ಞೆಯು ಖಂಡಿತವಾಗಿದ್ದುದರಿಂದಲೂ ಬೆಂಕಿಯ ಕಾವು ಅತಿ ತೀಕ್ಷ್ಣವಾಗಿದ್ದುದರಿಂದಲೂ ಅಗ್ನಿಜ್ವಾಲೆಯು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಎತ್ತಿ ಹಾಕಿದವರನ್ನೇ ದಹಿಸಿಬಿಟ್ಟಿತು.
ದಾನಿಯೇಲನು 3 : 23 (IRVKN)
ಶದ್ರಕ್, ಮೇಶಕ್, ಅಬೇದ್ನೆಗೋ ಈ ಮೂವರು ಕಟ್ಟಲ್ಪಟ್ಟವರಾಗಿ ಧಗಧಗನೆ ಉರಿಯುವ ಬೆಂಕಿಯ ಮಧ್ಯದಲ್ಲಿ ಬಿದ್ದುಬಿಟ್ಟರು. [PE][PS]
ದಾನಿಯೇಲನು 3 : 24 (IRVKN)
ಆಗ ರಾಜನಾದ ನೆಬೂಕದ್ನೆಚ್ಚರನು ಬೆಚ್ಚಿಬಿದ್ದು, ತಟ್ಟನೆ ಎದ್ದು ತನ್ನ ಮಂತ್ರಿಗಳಿಗೆ, “ಕಟ್ಟಿದ ಮೂವರನ್ನು ನಾವು ಬೆಂಕಿಯೊಳಗೆ ಹಾಕಿಸಲಿಲ್ಲವೋ?” ಎಂದು ಕೇಳಲು ಅವರು ರಾಜನಿಗೆ, “ಅರಸನೇ, ಹೌದು, ಹಾಕಿರುವುದು ಸತ್ಯ” ಎಂದು ಉತ್ತರಕೊಟ್ಟರು.
ದಾನಿಯೇಲನು 3 : 25 (IRVKN)
ಅದಕ್ಕೆ ಅವನು, “ಇಗೋ, ಕಟ್ಟಿಲ್ಲದ ನಾಲ್ವರನ್ನು ನೋಡುತ್ತೇನೆ, ಬೆಂಕಿಯಲ್ಲಿ ತಿರುಗಾಡುತ್ತಿದ್ದಾರೆ, ಅವರಿಗೆ ಯಾವ ಹಾನಿಯೂ ಇಲ್ಲ; ನಾಲ್ಕನೆಯವನ ರೂಪವು ದೇವಕುಮಾರನ ರೂಪದಂತಿದೆ” ಎಂದು ಹೇಳಿದನು. [PE][PS]
ದಾನಿಯೇಲನು 3 : 26 (IRVKN)
ಆಗ ನೆಬೂಕದ್ನೆಚ್ಚರನು ಧಗಧಗನೆ ಉರಿಯುವ ಬೆಂಕಿಯ ಬಾಯಿಯ ಬಳಿಗೆ ಹೋಗಿ, “ಪರಾತ್ಪರದೇವರ ಸೇವಕರಾದ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ ಬನ್ನಿ, ಹೊರಗೆ ಬನ್ನಿ ಎಂದು ಕೂಗಲು, ಶದ್ರಕ್ ಮೇಶಕ್ ಅಬೇದ್ನೆಗೋ ಎಂಬುವವರು ಬೆಂಕಿಯೊಳಗಿಂದ ಹೊರಟು ಬಂದರು.
ದಾನಿಯೇಲನು 3 : 27 (IRVKN)
ಅಲ್ಲಿ ಕೂಡಿದ್ದ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿಗಳು ಅವರನ್ನು ನೋಡಿ ಅವರ ಮೇಲೆ ಬೆಂಕಿಯ ಅಧಿಕಾರವು ನಡೆದಿಲ್ಲ, ಅವರ ತಲೆಕೂದಲೂ ಸುಟ್ಟಿಲ್ಲ, ಅವರ ಶಲ್ಯಗಳಿಗೆ ವಿಕಾರವಿಲ್ಲ, ಬೆಂಕಿಯ ವಾಸನೆಯೇ ಮುಟ್ಟಿಲ್ಲ” ಎಂದು ತಿಳಿದುಕೊಂಡರು. [PE][PS]
ದಾನಿಯೇಲನು 3 : 28 (IRVKN)
ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲವೇ.
ದಾನಿಯೇಲನು 3 : 29 (IRVKN)
ಸಕಲ ಜನಾಂಗ, ಕುಲ, ಭಾಷೆಗಳವರಲ್ಲಿ ಯಾರಾದರೂ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರ ವಿಷಯದಲ್ಲಿ ಅಲ್ಲ ಸಲ್ಲದ ಮಾತುಗಳನ್ನಾಡಿದರೆ ಅವರನ್ನು ತುಂಡುತುಂಡಾಗಿ ಕತ್ತರಿಸಿ, ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ; ಹೀಗೆ ಉದ್ಧರಿಸಲು ಸಮರ್ಥನಾದ ಇನ್ಯಾವ ದೇವರೂ ಇಲ್ಲವಲ್ಲಾ” ಎಂದು ಹೇಳಿದನು.
ದಾನಿಯೇಲನು 3 : 30 (IRVKN)
ಬಳಿಕ ರಾಜನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಬಾಬೆಲ್ ಸಂಸ್ಥಾನದಲ್ಲಿ ಉನ್ನತ ಪದವಿ ನೀಡಿ ಗೌರವಿಸಿದನು. [PE]
❮
❯