ದಾನಿಯೇಲನು 6 : 1 (IRVKN)
{#1ದಾನಿಯೇಲನು ಸಿಂಹಗಳ ಗವಿಯಲ್ಲೂ ರಕ್ಷಿತನಾದದ್ದು } [PS]ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವುದಕ್ಕೋಸ್ಕರ ನೂರಿಪ್ಪತ್ತು ಮಂದಿ ಪ್ರಧಾನರನ್ನು ಆಯಾ ರಾಜ್ಯದ ಆಯಾ ಭಾಗಗಳ ಮೇಲೆ ಆಳಲು ನೇಮಿಸಿದನು.
ದಾನಿಯೇಲನು 6 : 2 (IRVKN)
ರಾಜರಿಗೆ ನಷ್ಟವಾಗದಂತೆ ಆ ದೇಶಾಧಿಪತಿಗಳ ಮೇಲೆ ಅವರಿಂದ ಲೆಕ್ಕ ತೆಗೆದುಕೊಳ್ಳುವ ಮೂವರು ಮುಖ್ಯಾಧಿಕಾರಿಗಳನ್ನೂ ನೇಮಿಸಬೇಕೆಂದು ನಿಶ್ಚಯಿಸಿಕೊಂಡನು; ಆ ಮುಖ್ಯಾಧಿಕಾರಿಗಳಲ್ಲಿ ದಾನಿಯೇಲನು ಒಬ್ಬನು.
ದಾನಿಯೇಲನು 6 : 3 (IRVKN)
ಈ ದಾನಿಯೇಲನಲ್ಲಿ ಪರಮಬುದ್ಧಿ ಇದ್ದುದರಿಂದ ಅವನು ಉಳಿದ ಮುಖ್ಯಾಧಿಕಾರಿಗಳಿಗಿಂತಲೂ, ದೇಶಾಧಿಪತಿಗಳಿಗಿಂತಲೂ ಅಧಿಕ ಸಮರ್ಥನೆನಿಸಿಕೊಂಡಿದ್ದನು. ಅವನನ್ನು ರಾಜನು ಸಮಸ್ತ ರಾಜ್ಯದ ಮೇಲ್ವಿಚಾರಕನನ್ನಾಗಿ ನೇಮಿಸಲು ಉದ್ದೇಶಿಸಿದ್ದನು. [PE]
ದಾನಿಯೇಲನು 6 : 4 (IRVKN)
[PS]ಹೀಗಿರಲು ಮುಖ್ಯಾಧಿಕಾರಿಗಳೂ, ದೇಶಾಧಿಪತಿಗಳೂ ಅಸೂಯೆಯಿಂದ ರಾಜ್ಯಭಾರದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ತಪ್ಪುಹೊರಿಸುವ ಯಾವ ಸಂದರ್ಭವನ್ನೂ, ಯಾವ ತಪ್ಪನ್ನೂ ಕಾಣಲಾರದೆ ಹೋದರು. ಅವನು ನಂಬಿಗಸ್ತನೇ ಆಗಿದ್ದನು, ಅವನಲ್ಲಿ ಆಲಸ್ಯವಾಗಲಿ, ಅಕ್ರಮವಾಗಲಿ ಸಿಕ್ಕಲಿಲ್ಲ.
ದಾನಿಯೇಲನು 6 : 5 (IRVKN)
ಆಗ ಆ ಮನುಷ್ಯರು, “ಈ ದಾನಿಯೇಲನ ಮೇಲೆ ತಪ್ಪುಹೊರಿಸಲು ಇವನ ದೇವಧರ್ಮದ ಮೂಲಕವೇ ಹೊರತು ಇನ್ಯಾವುದರಲ್ಲಿಯೂ ನಮಗೆ ಅವಕಾಶ ದೊರೆಯದು” ಎಂದುಕೊಂಡರು. [PE]
ದಾನಿಯೇಲನು 6 : 6 (IRVKN)
[PS]ಹೀಗೆ ಆ ಮುಖ್ಯಾಧಿಕಾರಿಗಳೂ, ದೇಶಾಧಿಪತಿಗಳೂ ರಾಜನ ಸಮ್ಮುಖದಲ್ಲಿ ನೆರೆದುಬಂದು ಅವನಿಗೆ, “ಅರಸನಾದ ದಾರ್ಯಾವೆಷನೇ, ಚಿರಂಜೀವಿಯಾಗಿರು!
ದಾನಿಯೇಲನು 6 : 7 (IRVKN)
ಯಾವನಾದರೂ ಮೂವತ್ತು ದಿನಗಳ ತನಕ ರಾಜನಾದ ನಿನ್ನ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ವಿಜ್ಞಾಪನೆ ಮಾಡಿಕೊಂಡರೆ ಅವನನ್ನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ಖಂಡಿತ ನಿಬಂಧನೆಯನ್ನು ರಾಜಾಜ್ಞೆಯ ರೂಪವಾಗಿ ವಿಧಿಸುವುದು ಒಳ್ಳೆಯದೆಂದು ರಾಜ್ಯದ ಸಕಲ ಮುಖ್ಯಾಧಿಕಾರಿ, ನಾಯಕ, ದೇಶಾಧಿಪತಿ, ಮಂತ್ರಿ, ಸಂಸ್ಥಾನಾಧ್ಯಕ್ಷರೂ ಆಲೋಚನೆ ಮಾಡಿಕೊಂಡಿದ್ದಾರೆ.
ದಾನಿಯೇಲನು 6 : 8 (IRVKN)
ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ, ಇದು ಮೇದ್ಯರ ಮತ್ತು ಪಾರಸಿಯರ ಧರ್ಮವಿಧಿಗಳಂತೆ ಎಂದಿಗೂ ರದ್ದಾಗದ ಧರ್ಮವಿಧಿಗಳ ಪ್ರಕಾರ ಬೇರೆಯಾಗದಂತೆ ಶಾಸನಕ್ಕೆ ಹಸ್ತಾಕ್ಷರ ಮಾಡು” ಎಂದು ಬಿನ್ನವಿಸಿದರು.
ದಾನಿಯೇಲನು 6 : 9 (IRVKN)
ಆದುದರಿಂದ ರಾಜನಾದ ದಾರ್ಯಾವೆಷನು ಆ ನಿಬಂಧನಶಾಸನಕ್ಕೆ ರುಜು ಹಾಕಿದನು. [PE]
ದಾನಿಯೇಲನು 6 : 10 (IRVKN)
[PS]ಶಾಸನಕ್ಕೆ ರುಜುವಾದದ್ದು ದಾನಿಯೇಲನಿಗೆ ತಿಳಿದಾಗ ಅವನು ತನ್ನ ಮನೆಗೆ ಹೋಗಿ ಯೆರೂಸಲೇಮಿನ ಕಡೆಗೆ ಕದವಿಲ್ಲದೆ ಕಿಟಕಿಗಳುಳ್ಳ ತನ್ನ ಮಹಡಿಯ ಕೋಣೆಯಲ್ಲಿ ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಮೊಣಕಾಲೂರಿ ತನ್ನ ದೇವರಿಗೆ ಪ್ರಾರ್ಥನೆಮಾಡಿ ಸ್ತೋತ್ರ ಸಲ್ಲಿಸುತ್ತಿದ್ದನು
ದಾನಿಯೇಲನು 6 : 11 (IRVKN)
ಆಗ ಆ ಜನರು ಗುಂಪಾಗಿ ಕೂಡಿ ದಾನಿಯೇಲನು ತನ್ನ ದೇವರ ಸಮ್ಮುಖದಲ್ಲಿ ಪ್ರಾರ್ಥಿಸಿ ವಿಜ್ಞಾಪಿಸುತ್ತಿರುವುದನ್ನು ಕಂಡರು. [PE]
ದಾನಿಯೇಲನು 6 : 12 (IRVKN)
ದಾನಿಯೇಲನು 6 : 13 (IRVKN)
[PS]ಅವರು ರಾಜನ ಬಳಿಗೆ ಬಂದು ರಾಜಾಜ್ಞೆಯ ಪ್ರಸ್ತಾಪವನ್ನೆತ್ತಿ, “ರಾಜನೇ, ಯಾರಾದರೂ ಮೂವತ್ತು ದಿನಗಳ ತನಕ ನಿನ್ನ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ಪ್ರಾರ್ಥನೆವಿಜ್ಞಾಪನೆ ಮಾಡಿದರೆ ಅವನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ನಿಬಂಧನೆಗೆ ರುಜು ಹಾಕಿದ್ದೀಯಲ್ಲಾ” ಎಂದು ಕೇಳಲು, ರಾಜನು, “ಹೌದು, ಮೇದ್ಯರ ಮತ್ತು ಪಾರಸಿಯರ ರದ್ದಾಗದ ಧರ್ಮವಿಧಿಗಳಂತೆ ಇದು ಸ್ಥಿರವಾದ ನಿಬಂಧನೆ” ಎಂದು ಉತ್ತರಕೊಟ್ಟನು. [PE][PS]ಆಗ ಅವರು ರಾಜನ ಸನ್ನಿಧಿಯಲ್ಲಿ, “ರಾಜನೇ, ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ಒಬ್ಬನಾದ ಆ ದಾನಿಯೇಲನು ನಿನ್ನನ್ನಾಗಲಿ, ನಿನ್ನ ಹಸ್ತಾಕ್ಷರದ ನಿಬಂಧನೆಯನ್ನಾಗಲಿ, ಲಕ್ಷ್ಯಕ್ಕೆ ತಾರದೆ ದಿನಕ್ಕೆ ಮೂರಾವರ್ತಿ ಅವನ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದಾನೆ” ಎಂದು ಅರಿಕೆ ಮಾಡಿದರು.
ದಾನಿಯೇಲನು 6 : 14 (IRVKN)
ಆದರೆ ರಾಜನು ಈ ಮಾತುಗಳನ್ನು ಕೇಳಿ ಬಹಳ ವ್ಯಸನಗೊಂಡು ದಾನಿಯೇಲನನ್ನು ಇದರಿಂದ ತಪ್ಪಿಸಬೇಕೆಂದು ಮನಸ್ಸುಮಾಡಿ ಇವನನ್ನು ಹೇಗೆ ರಕ್ಷಿಸಲಿ ಎಂದು ಸೂರ್ಯಾಸ್ತಮಾನದ ತನಕ ಆಲೋಚಿಸುತ್ತಿದ್ದನು. [PE]
ದಾನಿಯೇಲನು 6 : 15 (IRVKN)
ದಾನಿಯೇಲನು 6 : 16 (IRVKN)
[PS]ಇದನ್ನು ತಿಳಿದು ಆ ಜನರು ರಾಜನ ಬಳಿಗೆ ಕೂಡಿಬಂದು, “ಪ್ರಭುವೇ, ರಾಜನು ವಿಧಿಸಿದ ಯಾವ ನಿಬಂಧನೆಯಾಗಲಿ, ನಿಯಮವಾಗಲಿ ರದ್ದಾಗಬಾರದು ಎಂಬ ಧರ್ಮಸೂತ್ರವು ಮೇದ್ಯಯರಲ್ಲಿಯೂ, ಪಾರಸಿಯರಲ್ಲಿಯೂ ಉಂಟೆಂಬುದು ನಿನಗೆ ಗೊತ್ತಿರಲಿ” ಎಂದು ಹೇಳಿದರು. ಇದರಿಂದ ಅನಿವಾರ್ಯವಾಗಿ ರಾಜನು ಅಪ್ಪಣೆ ಕೊಡಲೇ ಬೇಕಾಯಿತು. [PE]
ದಾನಿಯೇಲನು 6 : 17 (IRVKN)
[PS]ದಾನಿಯೇಲನನ್ನು ತಂದು ಸಿಂಹಗಳ ಗವಿಯಲ್ಲಿ ರಾಜನ ಅಪ್ಪಣೆಯಂತೆ ಹಾಕಿಬಿಟ್ಟರು. ಆಗ ರಾಜನು ದಾನಿಯೇಲನಿಗೆ, “ನೀನು ನಿತ್ಯವೂ ಆರಾಧಿಸುವ ದೇವರು ನಿನ್ನನ್ನುದ್ಧರಿಸಲಿ” ಎಂದು ಹರಸಿದನು. [PE][PS]ಕೂಡಲೆ ಬಂಡೆಯನ್ನು ತಂದು ಗವಿಯ ಬಾಯನ್ನು ಮುಚ್ಚಿದರು. ದಾನಿಯೇಲನ ಈ ಶಿಕ್ಷೆಯನ್ನು ಯಾರು ಬದಲಾಯಿಸದಂತೆ ರಾಜನ ಮುದ್ರೆಯಿಂದಲೂ, ತನ್ನ ಮುಖಂಡರ ಮುದ್ರೆಯಿಂದಲೂ ಅದಕ್ಕೆ ಮುದ್ರೆಯನ್ನು ಹಾಕಿ ಭದ್ರ ಮಾಡಲಾಯಿತು.
ದಾನಿಯೇಲನು 6 : 18 (IRVKN)
ರಾಜನು ಅರಮನೆಯಲ್ಲಿ ವಿನೋದವಾದ್ಯಗಳನ್ನು ತನ್ನ ಮುಂದೆ ತರಿಸದೆ, ಉಪವಾಸವಾಗಿ ರಾತ್ರಿಯನ್ನು ಕಳೆದನು; ಅವನಿಗೆ ನಿದ್ರೆ ಬರಲಿಲ್ಲ. [PE]
ದಾನಿಯೇಲನು 6 : 19 (IRVKN)
[PS]ಮರುದಿನ ಬೆಳಿಗ್ಗೆ ರಾಜನು ಉದಯದಲ್ಲೇ ಎದ್ದು ಸಿಂಹಗಳ ಗವಿಯ ಬಳಿಗೆ ತ್ವರೆಯಾಗಿ ಹೋದನು.
ದಾನಿಯೇಲನು 6 : 20 (IRVKN)
ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು, ಅವನು ದುಃಖ ಧ್ವನಿಯಿಂದ ದಾನಿಯೇಲನನ್ನು ಕೂಗಿ, “ದಾನಿಯೇಲನೇ, ಜೀವ ಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಭಜಿಸುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉದ್ಧರಿಸಲು ಶಕ್ತನಾದನೋ?” ಎಂದು ಕೇಳಿದನು. [PE]
ದಾನಿಯೇಲನು 6 : 21 (IRVKN)
[PS]ಅದಕ್ಕೆ ದಾನಿಯೇಲನು ರಾಜನಿಗೆ, “ಅರಸನೇ, ಚಿರಂಜೀವಿಯಾಗಿರು!
ದಾನಿಯೇಲನು 6 : 22 (IRVKN)
ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು. ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ” ಎಂದು ಹೇಳಿದನು. [PE]
ದಾನಿಯೇಲನು 6 : 23 (IRVKN)
ದಾನಿಯೇಲನು 6 : 24 (IRVKN)
[PS]ಅದನ್ನು ಕೇಳಿ ರಾಜನು ಬಹಳ ಸಂತೋಷಪಟ್ಟು, ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆ ಎತ್ತಬೇಕೆಂದು ಅಪ್ಪಣೆಮಾಡಲು ಅವನನ್ನು ಅಲ್ಲಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಭರವಸವಿಟ್ಟ ಕಾರಣ ಅವನಿಗೆ ಯಾವ ಹಾನಿಯೂ ಆಗಿರಲಿಲ್ಲ. [PE]
ದಾನಿಯೇಲನು 6 : 25 (IRVKN)
[PS]ಅನಂತರ ರಾಜನು ಆಜ್ಞಾಪಿಸಲು ದಾನಿಯೇಲನ ಮೇಲೆ ದೂರು ಹೊರಿಸಿದವರನ್ನು ತಂದು ಅವರನ್ನೂ, ಅವರ ಹೆಂಡತಿ ಮಕ್ಕಳನ್ನು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಅವರು ಗವಿಯ ತಳವನ್ನು ಮುಟ್ಟುವುದರೊಳಗೆ ಸಿಂಹಗಳು ಅವರ ಮೇಲೆ ಹಾರಿ, ಅವರ ಎಲ್ಲಾ ಎಲುಬುಗಳನ್ನು ಚೂರುಚೂರು ಮಾಡಿದವು. [PE][PS]ಆಗ ರಾಜನಾದ ದಾರ್ಯಾವೆಷನು ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ, ಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿ, ಅದನ್ನು ಅನುಸರಿಸಿ ನಡೆಯಲು ಆಜ್ಞೆಮಾಡಿದನು. [PE][QS]ದಾನಿಯೇಲನ ದೇವರ ದಯೆಯಿಂದ ನಿಮಗೆ ಸುಖವು ಹೆಚ್ಚೆಚ್ಚಾಗಲಿ! [QE]
ದಾನಿಯೇಲನು 6 : 26 (IRVKN)
[PS]“ನಾನು ಆಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; [PE][QS]ಆತನೇ ಜೀವಸ್ವರೂಪನಾದ ಸನಾತನ ದೇವರು, [QE][QS]ಆತನ ರಾಜ್ಯವು ಎಂದಿಗೂ ಅಳಿಯದು, [QE][QS]ಆತನ ಆಳ್ವಿಕೆಯು ಶಾಶ್ವತವಾಗಿರುವುದು; [QE]
ದಾನಿಯೇಲನು 6 : 27 (IRVKN)
[QS]ಆತನು ಉದ್ಧರಿಸುವವನೂ, ರಕ್ಷಿಸುವವನೂ, [QE][QS]ಭೂಮ್ಯಾಕಾಶಗಳಲ್ಲಿ ಅದ್ಭುತಮಹತ್ವಗಳನ್ನು ನಡೆಸುವವನೂ ಆಗಿದ್ದಾನೆ; [QE][QS]ಆತನೇ ದಾನಿಯೇಲನನ್ನು ಸಿಂಹಗಳ ಬಾಯಿಂದ ತಪ್ಪಿಸಿದನು.” [QE]
ದಾನಿಯೇಲನು 6 : 28 (IRVKN)
[PS]ಈ ದಾನಿಯೇಲನು ದಾರ್ಯಾವೆಷನ ಆಳ್ವಿಕೆಯಲ್ಲಿಯೂ, ಪಾರಸಿಯನಾದ ಕೋರೆಷನ ಆಳ್ವಿಕೆಯಲ್ಲಿಯೂ ಸನ್ಮಾನ, ಗೌರವಗಳಿಂದ ಬಾಳಿದನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28

BG:

Opacity:

Color:


Size:


Font: