ದಾನಿಯೇಲನು 7 : 1 (IRVKN)
ದಾನಿಯೇಲನ ನಾಲ್ಕು ಮೃಗಗಳ ಬಗ್ಗೆ ಕನಸು ಬಾಬೆಲಿನ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನು ಮಲಗಿದ್ದಾಗ ಒಂದು ಸ್ವಪ್ನವಾಯಿತು. ಕೂಡಲೆ ಅವನು ಆ ಕನಸನ್ನೂ ಅದರ ಮುಖ್ಯಾಂಶಗಳನ್ನೂ ಬರೆದು ಇಟ್ಟನು.
ದಾನಿಯೇಲನು 7 : 2 (IRVKN)
ದಾನಿಯೇಲನು ಆ ಪ್ರಸ್ತಾಪವನ್ನೆತ್ತಿ ಇಂತೆಂದನು, “ನಾನು ರಾತ್ರಿ ಕಂಡ ಕನಸಿನಲ್ಲಿ ಆಹಾ, ಚತುರ್ದಿಕ್ಕಿನ ಗಾಳಿಗಳೂ ಮಹಾಸಾಗರದ ಮೇಲೆ ರಭಸವಾಗಿ ಬೀಸಿ ಬಡಿಯುತ್ತಿದ್ದವು.
ದಾನಿಯೇಲನು 7 : 3 (IRVKN)
ಒಂದಕ್ಕಿಂತ ಒಂದು ವಿಲಕ್ಷಣವಾದ ನಾಲ್ಕು ದೊಡ್ಡ ಮೃಗಗಳು ಸಾಗರದೊಳಗಿಂದ ಬಂದವು.
ದಾನಿಯೇಲನು 7 : 4 (IRVKN)
ಮೊದಲು ಕಾಣಿಸಿದ ಮೃಗವು ಸಿಂಹದ ಹಾಗಿತ್ತು, ಅದಕ್ಕೆ ಹದ್ದಿನಂತೆ ರೆಕ್ಕೆಗಳಿದ್ದವು; ನಾನು ನೋಡುತ್ತಿರುವಾಗಲೇ ಆ ರೆಕ್ಕೆಗಳು ಕೀಳಲ್ಪಟ್ಟವು; ಅದು ನೆಲದಿಂದ ಎತ್ತಲ್ಪಟ್ಟು ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲ್ಪಟ್ಟಿತು, ಅದಕ್ಕೆ ಮನುಷ್ಯನ ಹೃದಯವನ್ನು ಕೊಡಲ್ಪಟ್ಟಿತು.
ದಾನಿಯೇಲನು 7 : 5 (IRVKN)
ಆಹಾ, ಇನ್ನೊಂದು ಮೃಗ ಎರಡನೆಯದು; ಅದು ಕರಡಿಯ ಹಾಗಿತ್ತು, ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು. ತನ್ನ ಬಾಯಲ್ಲಿ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು; ನೀನೆದ್ದು ಬೇಕಾದಷ್ಟು ಮಾಂಸವನ್ನು ತಿನ್ನು ಎಂದು ಅದಕ್ಕೆ ಹೇಳೋಣವಾಯಿತು.
ದಾನಿಯೇಲನು 7 : 6 (IRVKN)
ಅನಂತರ ನಾನು ನೋಡುತ್ತಿರುವಲ್ಲಿ ಇಗೋ, ಚಿರತೆಯ ಹಾಗಿರುವ ಮತ್ತೊಂದು ಮೃಗವು ಕಾಣಿಸಿತು; ಅದರ ಪಕ್ಕಗಳಲ್ಲಿ ಪಕ್ಷಿಯ ರೆಕ್ಕೆಯಂತಿರುವ ನಾಲ್ಕು ರೆಕ್ಕೆಗಳಿದ್ದವು; ಆ ಮೃಗಕ್ಕೆ ನಾಲ್ಕು ತಲೆಗಳಿದ್ದವು, ಅದಕ್ಕೆ ದೊರೆತನವು ಕೊಡಲ್ಪಟ್ಟಿತು.
ದಾನಿಯೇಲನು 7 : 7 (IRVKN)
ನಾನು ರಾತ್ರಿ ಕಂಡ ಕನಸಿನಲ್ಲಿ ಸ್ವಲ್ಪ ಹೊತ್ತಿನ ಮೇಲೆ ಆಹಾ, ನಾಲ್ಕನೆಯ ಮೃಗವು ಕಾಣಿಸಿತು; ಅದು ಭಯಂಕರವಾಗಿತ್ತು, ಹೆದರಿಸುವಂಥದಾಗಿತ್ತು, ಅಧಿಕ ಬಲವುಳ್ಳದ್ದಾಗಿತ್ತು. ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ನುಂಗುತ್ತಾ, ಚೂರುಚೂರು ಮಾಡುತ್ತಾ ಉಳಿದದ್ದನ್ನು ಕಾಲುಗಳಿಂದ ತುಳಿಯುತ್ತಾ ಇತ್ತು. ಅದು ಹಿಂದಿನ ಎಲ್ಲಾ ಮೃಗಗಳಿಗಿಂತ ವಿಲಕ್ಷಣವಾಗಿತ್ತು. ಅದಕ್ಕೆ ಹತ್ತು ಕೊಂಬುಗಳಿದ್ದವು.
ದಾನಿಯೇಲನು 7 : 8 (IRVKN)
ನಾನು ಆ ಕೊಂಬುಗಳನ್ನು ನೋಡುತ್ತಿರುವಾಗಲೆ ಇಗೋ, ಅವುಗಳ ನಡುವೆ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು; ಅದಕ್ಕೆ ಎಡೆಮಾಡಿ ಕೊಡಲು ಮೊದಲಿನ ಕೊಂಬುಗಳಲ್ಲಿ ಮೂರು ಬೇರು ಸಹಿತ ಕೀಳಲ್ಪಟ್ಟವು. ಆಹಾ, ಈ ಕೊಂಬಿನಲ್ಲಿ ಮನುಷ್ಯನ ಕಣ್ಣುಗಳಂತಿರುವ ಕಣ್ಣುಗಳೂ, ಬಡಾಯಿ ಕೊಚ್ಚಿಕೊಳ್ಳುವ ಬಾಯಿಯೂ ಇದ್ದವು.
ದಾನಿಯೇಲನು 7 : 9 (IRVKN)
“ನಾನು ನೋಡುತ್ತಿದ್ದ ಹಾಗೆ ನ್ಯಾಯಾಸನಗಳು ಹಾಕಲ್ಪಟ್ಟವು, ಮಹಾವೃದ್ಧನೊಬ್ಬನು* ಮಹಾವೃದ್ಧನೊಬ್ಬನು ದೇವರು. ಆಸೀನನಾದನು; ಆತನ ಉಡುಪು ಹಿಮದಂತೆ ಶುಭ್ರವಾಗಿತ್ತು. ಆತನ ತಲೆಯ ಕೂದಲು ನಿರ್ಮಲವಾದ ಬಿಳಿಯ ಉಣ್ಣೆಯಂತಿತ್ತು, ಆತನ ನ್ಯಾಯಾಸನವು ಅಗ್ನಿಜ್ವಾಲೆಗಳು, ಅದರ ಚಕ್ರಗಳು ಧಗಧಗಿಸುವ ಬೆಂಕಿಯೇ.
ದಾನಿಯೇಲನು 7 : 10 (IRVKN)
ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದು ಬಂದಿತು. ಲಕ್ಷೋಪಲಕ್ಷ ದೂತರು ಆತನ ಸೇವೆಗೆ ಸಿದ್ಧರಾಗಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು. ನ್ಯಾಯಸಭೆಯವರು ಕುಳಿತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು.
ದಾನಿಯೇಲನು 7 : 11 (IRVKN)
ಆಗ ನಾನು ನೋಡುತ್ತಿರಲು ಇಗೋ, ಕೊಂಬು ಬಡಾಯಿ ಕೊಚ್ಚಿಕೊಂಡ ನಿಮಿತ್ತ ಆ ಕೊಂಬಿನ ಮೃಗವನ್ನು ಕೊಂದು, ಅದರ ಹೆಣವನ್ನು ಉರಿಯುವ ಬೆಂಕಿಗೆ ಹಾಕಿ ನಾಶಮಾಡಿದರು.
ದಾನಿಯೇಲನು 7 : 12 (IRVKN)
ಉಳಿದ ಮೃಗಗಳ ದೊರೆತನವನ್ನು ತೆಗೆದುಬಿಟ್ಟರು. ಆದರೆ ಕೆಲವು ಕಾಲದ ಮಟ್ಟಿಗೆ, ತಕ್ಕ ಸಮಯ ಬರುವ ತನಕ, ಅವುಗಳ ಜೀವವನ್ನು ಉಳಿಸಿದರು.
ದಾನಿಯೇಲನು 7 : 13 (IRVKN)
ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯ ಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು.
ದಾನಿಯೇಲನು 7 : 14 (IRVKN)
ಸಕಲ, ಜನಾಂಗ, ಕುಲ, ಭಾಷೆಗಳವರು ಅವನ ಸೇವೆ ಮಾಡಲೆಂದು ಅವನಿಗೆ ದೊರೆತನವೂ, ಘನತೆಯೂ, ರಾಜ್ಯವೂ ಕೊಡಲಾಯಿತು. ಅವನ ಆಳ್ವಿಕೆಯು ಅಂತ್ಯವಿಲ್ಲದ್ದು. ಶಾಶ್ವತವಾದದ್ದು, ಅವನ ರಾಜ್ಯವು ಎಂದಿಗೂ ಅಳಿಯದು.
ದಾನಿಯೇಲನು 7 : 15 (IRVKN)
ಕನಸಿನಲ್ಲಿ ಆದ ದರ್ಶನದ ಅರ್ಥ “ದಾನಿಯೇಲನಾದ ನನ್ನ ಆತ್ಮವು ನನ್ನ ಶರೀರದೊಳಗೆ ವ್ಯಥೆಗೊಂಡಿತು, ನನ್ನ ಮನಸ್ಸಿನಲ್ಲಿ ಬಿದ್ದ ಕನಸುಗಳು ನನ್ನನ್ನು ಕಳವಳಪಡಿಸಿದವು.
ದಾನಿಯೇಲನು 7 : 16 (IRVKN)
ನಾನು ಹತ್ತಿರ ನಿಂತಿದ್ದವರಲ್ಲಿ ಒಬ್ಬನ ಬಳಿಗೆ ಹೋಗಿ ಇವುಗಳ ಸತ್ಯಾರ್ಥವೇನೆಂದು ವಿಚಾರಿಸಲು ಅವನು ನನಗೆ,
ದಾನಿಯೇಲನು 7 : 17 (IRVKN)
‘ಆ ನಾಲ್ಕು ದೊಡ್ಡ ಮೃಗಗಳು ಲೋಕಸಾಗರದೊಳಗಿಂದ ಏರತಕ್ಕ ನಾಲ್ಕು ರಾಜ್ಯಗಳು.
ದಾನಿಯೇಲನು 7 : 18 (IRVKN)
ಆದರೆ ರಾಜ್ಯವು ಪರಾತ್ಪರನಾದ ದೇವರ ಭಕ್ತರಿಗೆ ಲಭಿಸುವುದು, ಅವರೇ ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವರು’ ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು.
ದಾನಿಯೇಲನು 7 : 19 (IRVKN)
ಆ ಮೇಲೆ ಕಬ್ಬಿಣದ ಹಲ್ಲು, ತಾಮ್ರದ ಉಗುರುಳ್ಳ ಮೃಗವು ಕೆಲವನ್ನು ನುಂಗಿ ಕೆಲವನ್ನು ಚೂರುಚೂರು ಮಾಡಿ ಉಳಿದದ್ದನ್ನು ಕಾಲುಗಳಿಂದ ತುಳಿದು, ಇತರ ಮೃಗಗಳಿಗಿಂತ ವಿಲಕ್ಷಣವಾಗಿ ಅತಿ ಭಯಂಕರವಾಗಿತ್ತು.
ದಾನಿಯೇಲನು 7 : 20 (IRVKN)
ಈ ನಾಲ್ಕನೆಯ ಮೃಗದ ವಿಷಯವಾಗಿಯೂ, ಅದರ ತಲೆಯ ಮೇಲಣ ಹತ್ತು ಕೊಂಬುಗಳ ವಿಷಯವಾಗಿಯೂ
ದಾನಿಯೇಲನು 7 : 21 (IRVKN)
ನಾನು ನೋಡುತ್ತಿದ್ದ ಹಾಗೆ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ,
ದಾನಿಯೇಲನು 7 : 22 (IRVKN)
ದೇವಭಕ್ತರೊಂದಿಗೆ ಯುದ್ಧಮಾಡಿ, ಮಹಾವೃದ್ಧನು ಬಂದು ಪರಾತ್ಪರನಾದ ದೇವರ ಭಕ್ತರಿಗಾಗಿ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದಿತ್ತು.”
ದಾನಿಯೇಲನು 7 : 23 (IRVKN)
ಆಗ ಅವನು ನನಗೆ, “ಆ ನಾಲ್ಕನೆಯ ಮೃಗವು ಲೋಕದಲ್ಲಿ ಉಂಟಾಗುವ ನಾಲ್ಕನೆಯ ರಾಜ್ಯ; ಅದು ಉಳಿದ ರಾಜ್ಯಗಳಿಗಿಂತ ವಿಲಕ್ಷಣವಾಗಿ ಲೋಕವನ್ನೆಲ್ಲಾ ನುಂಗಿ ತುಳಿದು ಚೂರುಚೂರು ಮಾಡುವುದು.
ದಾನಿಯೇಲನು 7 : 24 (IRVKN)
ಆ ಹತ್ತು ಕೊಂಬುಗಳ ವಿಷಯವೇನೆಂದರೆ ಆ ರಾಜ್ಯದಲ್ಲಿ ಹತ್ತು ಮಂದಿ ಅರಸರು ಉಂಟಾಗುವರು, ಅವರ ತರುವಾಯ ಮತ್ತೊಬ್ಬನು ತಲೆದೋರುವನು. ಅವನು ಮೊದಲಿನ ಅರಸರಿಗಿಂತ ವಿಲಕ್ಷಣನಾಗಿ ಮೂವರು ಅರಸರನ್ನು ಸದೆಬಡೆಯುವನು.
ದಾನಿಯೇಲನು 7 : 25 (IRVKN)
ಪರಾತ್ಪರನಾದ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಂಡು ಪರಾತ್ಪರನಾದ ದೇವರ ಭಕ್ತರನ್ನು ಬಾಧಿಸಿ ಕಟ್ಟಳೆಯ ಕಾಲಗಳನ್ನೂ, ಧರ್ಮವಿಧಿಗಳನ್ನೂ ಮಾರ್ಪಡಿಸಲು ಮನಸ್ಸು ಮಾಡುವನು; ಆ ಭಕ್ತರು ಒಂದುಕಾಲ, ಎರಡುಕಾಲ, ಅರ್ಧಕಾಲ ಒಂದುಕಾಲ, ಎರಡುಕಾಲ, ಅರ್ಧಕಾಲ ಅಂದರೆ ಮೂರುವರೆ ವರ್ಷ. ಅವನ ಕೈವಶವಾಗಿರುವರು.
ದಾನಿಯೇಲನು 7 : 26 (IRVKN)
ಆ ಮೇಲೆ ನ್ಯಾಯಸಭೆಯು ಕುಳಿತು ಅವನ ದೊರೆತನವನ್ನು ಕಿತ್ತು ತೀರಾ ಧ್ವಂಸಮಾಡಿ ಕೊನೆಗಾಣಿಸಿ ಬಿಡುವುದು.
ದಾನಿಯೇಲನು 7 : 27 (IRVKN)
ಆಗ ಅವನ ರಾಜ್ಯ, ಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನಾದ ದೇವರ ಭಕ್ತ ಜನರಿಗೆ ಕೊಡಲ್ಪಡುವುದು; ಆತನ ರಾಜ್ಯವು ಶಾಶ್ವತ ರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು” ಎಂದು ಹೇಳಿದನು.
ದಾನಿಯೇಲನು 7 : 28 (IRVKN)
ಈ ಕನಸಿನ ಪ್ರಸ್ತಾಪವು ಇಲ್ಲಿಗೆ ಮುಗಿಯಿತು. ದಾನಿಯೇಲನಾದ ನಾನು ನನ್ನ ಯೋಚನೆಗಳಿಂದ ಬಹು ಕಳವಳಗೊಂಡೆ. ನನ್ನ ಮುಖವು ಕಳೆಗುಂದಿತು. ಆದರೂ ನಡೆದ ಸಂಗತಿಯನ್ನು ಮನಸ್ಸಿನಲ್ಲಿ ಇಟ್ಟುಕೊಂಡೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28