ಧರ್ಮೋಪದೇಶಕಾಂಡ 10 : 1 (IRVKN)
ಮೋಶೆಯು ದಶಾಜ್ಞೆಗಳನ್ನು ಪುನಃ ಪಡೆದದ್ದು ಆ ಕಾಲದಲ್ಲಿ ಯೆಹೋವನು ನನಗೆ, “ನೀನು ಮೊದಲಿನ ಕಲ್ಲಿನ ಹಲಿಗೆಗಳಂತೆ ಬೇರೆ ಎರಡು ಹಲಿಗೆಗಳನ್ನು ಸಿದ್ಧಪಡಿಸಿಕೊಂಡು, ಬೆಟ್ಟವನ್ನು ಹತ್ತಿ ನನ್ನ ಬಳಿಗೆ ಬಾ; ಮತ್ತು ಒಂದು ಮರದ ಮಂಜೂಷವನ್ನು ಮಾಡಿಸಿಕೊಳ್ಳಬೇಕು.
ಧರ್ಮೋಪದೇಶಕಾಂಡ 10 : 2 (IRVKN)
ನೀನು ಒಡೆದುಬಿಟ್ಟ ಆ ಮೊದಲಿನ ಹಲಿಗೆಗಳಲ್ಲಿ ಬರೆದಿದ್ದ ಮಾತುಗಳನ್ನು ನಾನು ಈ ಹಲಿಗೆಗಳ ಮೇಲೆ ಬರೆಯುವೆನು. ತರುವಾಯ ನೀನು ಅವುಗಳನ್ನು ಆ ಮಂಜೂಷದಲ್ಲಿ ಇಡಬೇಕು” ಎಂದು ಆಜ್ಞಾಪಿಸಿದನು.
ಧರ್ಮೋಪದೇಶಕಾಂಡ 10 : 3 (IRVKN)
ಆದಕಾರಣ ನಾನು ಜಾಲೀಮರದಿಂದ ಮಂಜೂಷವನ್ನು ಮಾಡಿಸಿ ಮೊದಲಿನ ಕಲ್ಲಿನ ಹಲಿಗೆಗಳಂತೆ ಬೇರೆ ಎರಡು ಹಲಿಗೆಗಳನ್ನು ಸಿದ್ಧಪಡಿಸಿ, ಆ ಎರಡು ಹಲಿಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟವನ್ನು ಹತ್ತಿದೆನು.
ಧರ್ಮೋಪದೇಶಕಾಂಡ 10 : 4 (IRVKN)
ಯೆಹೋವನು ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನೀವು ಸಭೆ ಕೂಡಿದ ದಿನದಲ್ಲಿ ನಿಮ್ಮ ಸಂಗಡ ಹೇಳಿದ ಮಾತುಗಳನ್ನು, ಅಂದರೆ ಆ ಹತ್ತು ಕಟ್ಟಳೆಗಳನ್ನು ಆತನು ಮೊದಲಿನಂತೆಯೇ ಆ ಹಲಿಗೆಗಳ ಮೇಲೆ ಬರೆದನು.
ಧರ್ಮೋಪದೇಶಕಾಂಡ 10 : 5 (IRVKN)
ಯೆಹೋವನು ಆ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟ ನಂತರ ನಾನು ಬೆಟ್ಟದಿಂದ ಇಳಿದು ಬಂದು ನನ್ನಿಂದ ಸಿದ್ಧವಾಗಿದ್ದ ಮಂಜೂಷದಲ್ಲಿ ಆತನ ಅಪ್ಪಣೆಯ ಮೇರೆಗೆ ಅವುಗಳನ್ನು ಇಟ್ಟೆನು; ಅವು ಇಂದಿನವರೆಗೂ ಅದರಲ್ಲೇ ಇವೆ.
ಧರ್ಮೋಪದೇಶಕಾಂಡ 10 : 6 (IRVKN)
ಆರೋನನ ಮರಣ ಮತ್ತು ಲೇವಿ ಕುಲದವರ ಜವಾಬ್ದಾರಿಕೆಗಳು (ಇಸ್ರಾಯೇಲರು * ಇಬ್ರಿಯ ಪದ ಬೇರೋತ್ ಬೆನೆ ಯಾಕಾನ್. ಯಾಕಾನ್ಯರ ಬಾವಿಗಳ ಬಳಿಯಿಂದ ಪ್ರಯಾಣಮಾಡಿ ಮೋಸೇರಕ್ಕೆ ಬಂದರು. ಅಲ್ಲಿ ಆರೋನನು ಸಾಯಲಾಗಿ ಅವನನ್ನು ಅಲ್ಲಿಯೇ ಸಮಾಧಿ ಮಾಡಿದರು. ಅವನ ಮಗನಾದ ಎಲ್ಲಾಜಾರನು ಅವನಿಗೆ ಬದಲಾಗಿ ಮಹಾಯಾಜಕನಾದನು.
ಧರ್ಮೋಪದೇಶಕಾಂಡ 10 : 7 (IRVKN)
ಅಲ್ಲಿಂದ ಅವರು ಗುದ್ಗೋದಕ್ಕೂ, ಗುದ್ಗೋದದಿಂದ ನೀರಿನ ಹಳ್ಳಗಳುಳ್ಳ ಯೊಟ್ಬಾತಕ್ಕೂ ಪ್ರಯಾಣ ಮಾಡಿದರು.)
ಧರ್ಮೋಪದೇಶಕಾಂಡ 10 : 8 (IRVKN)
ಆ ಕಾಲದಲ್ಲಿ ಯೆಹೋವನು ಲೇವಿ ಕುಲದವರನ್ನು ಪ್ರತ್ಯೇಕಿಸಿ ತನ್ನ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ತನ್ನ ಸನ್ನಿಧಿಯಲ್ಲಿ ಸೇವೆ ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದನು. ಅವರು ಇಂದಿನ ವರೆಗೂ ಆ ಕೆಲಸವನ್ನು ನಡಿಸುತ್ತಾರೆ.
ಧರ್ಮೋಪದೇಶಕಾಂಡ 10 : 9 (IRVKN)
ಆದುದರಿಂದ ಉಳಿದ ಇಸ್ರಾಯೇಲರಿಗೆ ದೊರಕಿದಂತೆ ಲೇವಿಯರಿಗೆ ಸ್ವಂತವಾದ ಭೂಸ್ಥಿತಿಯು ದೊರೆಯಲಿಲ್ಲ. ನಿಮ್ಮ ದೇವರಾದ ಯೆಹೋವನು ಅವರಿಗೆ ಹೇಳಿದಂತೆ ಯೆಹೋವನೇ ಅವರಿಗೆ ಸ್ವತ್ತು.
ಧರ್ಮೋಪದೇಶಕಾಂಡ 10 : 10 (IRVKN)
ನಾನು ಮೊದಲಿನಂತೆ ಹಗಲಿರುಳು ನಲ್ವತ್ತು ದಿನವೂ ಬೆಟ್ಟದ ಮೇಲೆ ಇರಲಾಗಿ ಯೆಹೋವನು ಆ ಕಾಲದಲ್ಲಿಯೂ ನನ್ನ ಪ್ರಾರ್ಥನೆಯನ್ನು ಕೇಳಿ ನಿಮ್ಮನ್ನು ನಾಶಮಾಡಬೇಕೆಂಬ ಆಲೋಚನೆಯನ್ನು ಬಿಟ್ಟುಬಿಟ್ಟನು.
ಧರ್ಮೋಪದೇಶಕಾಂಡ 10 : 11 (IRVKN)
ತರುವಾಯ ಯೆಹೋವನು ನನಗೆ, “ನೀನು ಈ ಜನರ ಮುಂದೆ ಹೋಗು; ನಾನು ಇವರ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶವನ್ನು ಇವರು ಸೇರಿ ಸ್ವಾಧೀನಮಾಡಿಕೊಳ್ಳಲಿ” ಎಂದು ಆಜ್ಞಾಪಿಸಿದನು.
ಧರ್ಮೋಪದೇಶಕಾಂಡ 10 : 12 (IRVKN)
ಯೆಹೋವನ ಭಯಭಕ್ತಿ ಆದುದರಿಂದ ಇಸ್ರಾಯೇಲರೇ, ನೀವು ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆಯುತ್ತಾ, ಆತನನ್ನು ಪ್ರೀತಿಸುತ್ತಾ, ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸೇವೆ ಮಾಡುತ್ತಾ,
ಧರ್ಮೋಪದೇಶಕಾಂಡ 10 : 13 (IRVKN)
ನಾನು ನಿಮ್ಮ ಮೇಲಿಗಾಗಿ ಈಗ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸುತ್ತಾ ಇರುವುದನ್ನೇ ಹೊರತು ನಿಮ್ಮ ದೇವರಾದ ಯೆಹೋವನು
ಧರ್ಮೋಪದೇಶಕಾಂಡ 10 : 14 (IRVKN)
ನಿಮ್ಮಿಂದ ಬೇರೇನೂ ಕೇಳಿಕೊಳ್ಳುತ್ತಾನೆ? ಆಲೋಚಿಸಿರಿ; ಉನ್ನತವಾದ ಆಕಾಶಮಂಡಲವೂ ಮತ್ತು ಭೂಮಿಯೂ, ಅದರಲ್ಲಿರುವ ಎಲ್ಲವೂ ನಿಮ್ಮ ದೇವರಾದ ಯೆಹೋವನವೇ.
ಧರ್ಮೋಪದೇಶಕಾಂಡ 10 : 15 (IRVKN)
ಆದರೂ ಆತನು ನಿಮ್ಮ ಪೂರ್ವಿಕರಲ್ಲಿ ಇಷ್ಟವುಳ್ಳವನಾಗಿ ಅವರನ್ನು ಪ್ರೀತಿಸಿದ್ದರಿಂದ ಈಗ ನಿಮ್ಮ ಅನುಭವಕ್ಕೆ ಬಂದಂತೆ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೇ ಎಲ್ಲಾ ಜನಾಂಗಗಳೊಳಗಿಂದ ಆರಿಸಿಕೊಂಡನು.
ಧರ್ಮೋಪದೇಶಕಾಂಡ 10 : 16 (IRVKN)
ಆದುದರಿಂದ ನೀವು ಆಜ್ಞೆಗೆ ಮಣಿಯದ ನಿಮ್ಮ ದುಷ್ಟಸ್ವಭಾವವನ್ನು ಬಿಟ್ಟು ನಿಮ್ಮ ಹೃದಯವನ್ನು ಬದಲಾಯಿಸಿಕೊಳ್ಳಿರಿ. ಹೃದಯದಲ್ಲೇ ಸುನ್ನತಿಮಾಡಿಕೊಳ್ಳಿರಿ.
ಧರ್ಮೋಪದೇಶಕಾಂಡ 10 : 17 (IRVKN)
ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ, ಕರ್ತರ ಕರ್ತನಾಗಿಯೂ ಇದ್ದಾನೆ. ಆತನು ಪರಮದೇವರೂ, ಪರಾಕ್ರಮಿಯೂ ಮತ್ತು ಭಯಂಕರನೂ ಆಗಿದ್ದಾನೆ. ಆತನು ಪಕ್ಷಪಾತ ಮಾಡುವವನಲ್ಲ ಹಾಗೂ ಲಂಚತೆಗೆದುಕೊಳ್ಳುವವನಲ್ಲ.
ಧರ್ಮೋಪದೇಶಕಾಂಡ 10 : 18 (IRVKN)
ಆತನು ಅನಾಥರ ಮತ್ತು ವಿಧವೆಯರ ನ್ಯಾಯವನ್ನು ಸ್ಥಾಪಿಸುತ್ತಾನೆ. ಪರದೇಶಿಗಳಾದವರಲ್ಲಿ ಪ್ರೀತಿಯಿಟ್ಟು ಅವರಿಗೆ ಅನ್ನವಸ್ತ್ರಗಳನ್ನು ಕೊಡುತ್ತಾನೆ.
ಧರ್ಮೋಪದೇಶಕಾಂಡ 10 : 19 (IRVKN)
ಐಗುಪ್ತದೇಶದಲ್ಲಿ ನೀವೇ ಪರದೇಶಿಗಳಾಗಿದ್ದದ್ದನ್ನು ಜ್ಞಾಪಿಸಿಕೊಂಡು ಪರದೇಶದವರಲ್ಲಿ ಪ್ರೀತಿಯಿಡಿರಿ.
ಧರ್ಮೋಪದೇಶಕಾಂಡ 10 : 20 (IRVKN)
ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಆತನನ್ನೇ ಸೇವಿಸಬೇಕು; ಆತನನ್ನು ಹೊಂದಿಕೊಂಡು, ಆತನ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು.
ಧರ್ಮೋಪದೇಶಕಾಂಡ 10 : 21 (IRVKN)
ಆತನೊಬ್ಬನೇ ನಿಮ್ಮ ಸ್ತುತಿ ಸ್ತೋತ್ರಕ್ಕೆ ಪಾತ್ರನು; ಆತನು ನಿಮ್ಮ ದೇವರು; ನೀವು ನೋಡಿದ ಆ ಅದ್ಭುತವಾದ ಮಹತ್ಕಾರ್ಯಗಳನ್ನು ನಿಮಗೋಸ್ಕರ ನಡಿಸಿದವನು ಆತನೇ.
ಧರ್ಮೋಪದೇಶಕಾಂಡ 10 : 22 (IRVKN)
ನಿಮ್ಮ ಪೂರ್ವಿಕರಲ್ಲಿ ಎಪ್ಪತ್ತು ಜನರು ಮಾತ್ರ ಐಗುಪ್ತದೇಶಕ್ಕೆ ಹೋದರು; ಈಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗಿರುವಂತೆ ಮಾಡಿದ್ದಾನೆ.

1 2 3 4 5 6 7 8 9 10 11 12 13 14 15 16 17 18 19 20 21 22