ಧರ್ಮೋಪದೇಶಕಾಂಡ 11 : 1 (IRVKN)
ಇಸ್ರಾಯೇಲರ ಹಿಂದಿನ ಅನುಭವಗಳು
ಧರ್ಮೋಪದೇಶಕಾಂಡ 11 : 2 (IRVKN)
ಆದುದರಿಂದ ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನ ನಿಯಮಗಳನ್ನು ಕೈಕೊಂಡು, ಆತನ ಆಜ್ಞಾವಿಧಿನಿಯಮಗಳನ್ನು ಯಾವಾಗಲೂ ಅನುಸರಿಸಬೇಕು. ನೀವು ನಿಮ್ಮ ದೇವರಾದ ಯೆಹೋವನ ಶಿಕ್ಷಣ ಕ್ರಮವನ್ನೂ, ಮಹಿಮೆಯನ್ನೂ, ಭುಜಬಲವನ್ನೂ ಮತ್ತು ಶಿಕ್ಷಾಹಸ್ತವನ್ನೂ ಅಂದರೆ,
ಧರ್ಮೋಪದೇಶಕಾಂಡ 11 : 3 (IRVKN)
ಆತನು ಐಗುಪ್ತದೇಶದಲ್ಲಿ ಫರೋಹನನ್ನೂ ಹಾಗೂ ಅವನ ದೇಶವನ್ನೂ ಶಿಕ್ಷಿಸುವುದಕ್ಕಾಗಿ ನಡಿಸಿದ ಸೂಚಕಕಾರ್ಯಗಳನ್ನೂ ಮತ್ತು ಮಹತ್ಕಾರ್ಯಗಳನ್ನೂ,
ಧರ್ಮೋಪದೇಶಕಾಂಡ 11 : 4 (IRVKN)
ಐಗುಪ್ತ್ಯರ ಸೈನ್ಯ ಅಂದರೆ, ಅವರ ರಥಾಶ್ವಬಲಗಳು ನಿಮ್ಮನ್ನು ಹಿಂದಟ್ಟಿ ಬಂದಾಗ ಆತನು ಕೆಂಪು ಸಮುದ್ರದ ನೀರನ್ನು ಅವರ ಮೇಲೆ ಬರಮಾಡಿ ಸಂಪೂರ್ಣವಾಗಿ ನಾಶಮಾಡಿದ್ದನ್ನೂ,
ಧರ್ಮೋಪದೇಶಕಾಂಡ 11 : 5 (IRVKN)
ನೀವು ಈ ಸ್ಥಳಕ್ಕೆ ಸೇರುವ ತನಕ ಆತನು ನಿಮಗೋಸ್ಕರ ಅರಣ್ಯದಲ್ಲಿ ಉಪಕಾರಮಾಡಿದ್ದನ್ನೂ,
ಧರ್ಮೋಪದೇಶಕಾಂಡ 11 : 6 (IRVKN)
ರೂಬೇನನ ಮೊಮ್ಮಕ್ಕಳೂ, ಎಲೀಯಾಬನ ಮಕ್ಕಳೂ ಆದ ದಾತಾನ್ ಮತ್ತು ಅಬೀರಾಮರು ತಿರುಗಿ ಬಿದ್ದಾಗ ಭೂಮಿಯು ಬಾಯ್ದೆರೆದು ಅವರನ್ನೂ, ಅವರ ಮನೆಯವರನ್ನೂ, ಅವರ ಡೇರೆಗಳನ್ನೂ ಮತ್ತು ಅವರಿಗೆ ಸೇರಿದ ಎಲ್ಲಾ ಪ್ರಾಣಿಗಳನ್ನೂ ಇಸ್ರಾಯೇಲರ ನಡುವೆ ನುಂಗಿಬಿಟ್ಟದ್ದನ್ನೂ ಈಗ ಜ್ಞಾಪಕಮಾಡಿಕೊಳ್ಳಿರಿ.
ಧರ್ಮೋಪದೇಶಕಾಂಡ 11 : 7 (IRVKN)
ಯೆಹೋವನು ನಡಿಸಿದ ಆ ವಿಶೇಷ ಕಾರ್ಯಗಳನ್ನು ಪ್ರತ್ಯಕ್ಷವಾಗಿ ನೋಡಿದವರಾದ ನಿಮಗೇ ಹೇಳುತ್ತಿದ್ದೇನೆ.
ಧರ್ಮೋಪದೇಶಕಾಂಡ 11 : 8 (IRVKN)
ವಾಗ್ದತ್ತ ದೇಶದ ಸೌಭಾಗ್ಯ ಆದುದರಿಂದಲೇ ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಆಗ ನೀವು ಬಲವುಳ್ಳವರಾಗಿ ಈ ನದಿಯನ್ನು ದಾಟಿ ಆಚೆಯಿರುವ
ಧರ್ಮೋಪದೇಶಕಾಂಡ 11 : 9 (IRVKN)
ದೇಶವನ್ನು ಸೇರಿ ಸ್ವಾಧೀನ ಮಾಡಿಕೊಳ್ಳುವಿರಿ. ಯೆಹೋವನು ನಿಮ್ಮ ಪೂರ್ವಿಕರಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ಆ ದೇಶದಲ್ಲಿ ನೀವು ಬಹುಕಾಲ ಬದುಕುವಿರಿ. ಅದು ಹಾಲೂ ಮತ್ತು ಜೇನೂ ಹರಿಯುವ ದೇಶ.
ಧರ್ಮೋಪದೇಶಕಾಂಡ 11 : 10 (IRVKN)
ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶವು ಬಿಟ್ಟುಬಂದ ಐಗುಪ್ತದೇಶದ ಹಾಗಲ್ಲ. ಐಗುಪ್ತದೇಶದಲ್ಲಿ ನೀವು ಹೊಲಗದ್ದೆಗಳಲ್ಲಿ ಬೀಜ ಬಿತ್ತಿದ ಮೇಲೆ ಕಾಯಿಪಲ್ಯಗಳ ತೋಟವನ್ನು ವ್ಯವಸಾಯ ಮಾಡುವ ರೀತಿಯಲ್ಲಿ ಏತವನ್ನು ತುಳಿದು ನೀರು ಕಟ್ಟುತ್ತಿದ್ದಿರಿ.
ಧರ್ಮೋಪದೇಶಕಾಂಡ 11 : 11 (IRVKN)
ಆದರೆ ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ದೇಶವೋ ಹಳ್ಳದಿಣ್ಣೆಗಳ ದೇಶ; ಆಕಾಶದಿಂದ ಮಳೆಬಿದ್ದ ಪ್ರಕಾರವೇ ಅದಕ್ಕೆ ನೀರು ದೊರೆಯುವುದು.
ಧರ್ಮೋಪದೇಶಕಾಂಡ 11 : 12 (IRVKN)
ಅದು ನಿಮ್ಮ ದೇವರಾದ ಯೆಹೋವನು ಪರಾಂಬರಿಸುವ ದೇಶ; ವರ್ಷದ ಪ್ರಾರಂಭ ಮೊದಲುಗೊಂಡು ಕೊನೆಯ ವರೆಗೂ ಆತನು ಅದನ್ನು ಸದಾ ಕಟಾಕ್ಷಿಸುವನು.
ಧರ್ಮೋಪದೇಶಕಾಂಡ 11 : 13 (IRVKN)
ನಾನು ಈಗ ನಿಮಗೆ ಬೋಧಿಸುವ ಯೆಹೋವನ ಆಜ್ಞೆಗಳಿಗೆ ನೀವು ಲಕ್ಷ್ಯಕೊಟ್ಟು, ನಿಮ್ಮ ದೇವರಾದ ಯೆಹೋವನನ್ನು ಸಂಪೂರ್ಣ ಹೃದಯದಿಂದಲೂ, ಸಂಪೂರ್ಣ ಮನಸ್ಸಿನಿಂದಲೂ ಪ್ರೀತಿಸಿ ಆತನನ್ನು ಸೇವಿಸಿದರೆ,
ಧರ್ಮೋಪದೇಶಕಾಂಡ 11 : 14 (IRVKN)
ನಿಮಗೆ ಗೋದಿ, ದ್ರಾಕ್ಷಿ, ಎಣ್ಣೇಕಾಯಿ ಇವುಗಳ ಬೆಳೆ ಚೆನ್ನಾಗಿ ಉಂಟಾಗುವಂತೆ ಆತನು ನಿಮ್ಮ ಭೂಮಿಗೆ ಬೇಕಾದ ಮುಂಗಾರು ಮತ್ತು ಹಿಂಗಾರು ಮಳೆಯನ್ನು ಸರಿಯಾಗಿ ಕೊಡುವನು.
ಧರ್ಮೋಪದೇಶಕಾಂಡ 11 : 15 (IRVKN)
ಅಡವಿಯಲ್ಲಿ ದನಕರುಗಳಿಗೆ ಬೇಕಾದಷ್ಟು ಹುಲ್ಲನ್ನು ಕೊಡುವನು; ನೀವು ಆಹಾರದಿಂದ ತೃಪ್ತರಾಗಿರುವಿರಿ.
ಧರ್ಮೋಪದೇಶಕಾಂಡ 11 : 16 (IRVKN)
ಆದರೆ ನೀವು ಎಚ್ಚರದಿಂದಿರಬೇಕು; ನಿಮ್ಮ ಹೃದಯವು ಮರುಳುಗೊಂಡು ಯೆಹೋವನು ಹೇಳಿದ ಮಾರ್ಗವನ್ನು ಬಿಟ್ಟು, ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ,
ಧರ್ಮೋಪದೇಶಕಾಂಡ 11 : 17 (IRVKN)
ಆತನು ನಿಮ್ಮ ಮೇಲೆ ಸಿಟ್ಟುಗೊಂಡು ಮಳೆಬಾರದಂತೆ ಆಕಾಶವನ್ನು ಮುಚ್ಚಿಬಿಟ್ಟಾನು; ಆಗ ಭೂಮಿಯಲ್ಲಿ ಬೆಳೆಯಾಗದೆ ಯೆಹೋವನು ನಿಮಗೆ ಕೊಡುವ ಆ ಉತ್ತಮ ದೇಶದಲ್ಲಿ ನೀವು ಉಳಿಯದೆ ಬೇಗ ನಾಶವಾಗಿ ಹೋಗುವಿರಿ.
ಧರ್ಮೋಪದೇಶಕಾಂಡ 11 : 18 (IRVKN)
ಆದುದರಿಂದ ನೀವು ಈ ನನ್ನ ಮಾತುಗಳನ್ನು ನಿಮ್ಮ ಹೃದಯದಲ್ಲಿಯೂ, ಮನಸ್ಸಿನಲ್ಲಿಯೂ ಇಟ್ಟುಕೊಳ್ಳಬೇಕು. ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು. ಇವು ನಿಮ್ಮ ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತಿರಬೇಕು.
ಧರ್ಮೋಪದೇಶಕಾಂಡ 11 : 19 (IRVKN)
ನೀವು ಮನೆಯಲ್ಲಿರುವಾಗಲೂ, ಪ್ರಯಾಣದಲ್ಲಿರುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡುತ್ತಾ ನಿಮ್ಮ ಮಕ್ಕಳಿಗೆ ಇವುಗಳನ್ನು ಅಭ್ಯಾಸಮಾಡಿಸಬೇಕು.
ಧರ್ಮೋಪದೇಶಕಾಂಡ 11 : 20 (IRVKN)
ನಿಮ್ಮ ಮನೆ ಬಾಗಿಲಿನ ನಿಲುವುಪಟ್ಟಿಗಳಲ್ಲಿಯೂ ಮತ್ತು ಹೆಬ್ಬಾಗಿಲುಗಳ ಮೇಲೆಯೂ ಇವುಗಳನ್ನು ಬರೆಯಬೇಕು.
ಧರ್ಮೋಪದೇಶಕಾಂಡ 11 : 21 (IRVKN)
ಹೀಗೆ ಮಾಡಿದರೆ ಭೂಮಿಯ ಮೇಲೆ ಆಕಾಶವು ಎಷ್ಟು ಕಾಲ ಇರುವುದೋ, ಅಷ್ಟು ಕಾಲದ ವರೆಗೆ ನೀವೂ ಮತ್ತು ನಿಮ್ಮ ಸಂತತಿಯವರೂ ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ಆ ದೇಶದಲ್ಲಿ ಬಾಳುವಿರಿ.
ಧರ್ಮೋಪದೇಶಕಾಂಡ 11 : 22 (IRVKN)
ನಾನು ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸುವವರಾಗಿ, ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆದು, ಆತನನ್ನೇ ಹೊಂದಿಕೊಂಡಿರಬೇಕು.
ಧರ್ಮೋಪದೇಶಕಾಂಡ 11 : 23 (IRVKN)
ಆಗ ಆತನು ಆ ಜನಾಂಗಗಳನ್ನೆಲ್ಲಾ ನಿಮ್ಮ ಎದುರಿನಿಂದ ಹೊರಡಿಸುವನು. ನಿಮಗಿಂತಲೂ ಮಹಾಬಲಿಷ್ಠ ಜನಾಂಗಗಳ ದೇಶವನ್ನು ನೀವು ಸ್ವಾಧೀನ ಮಾಡಿಕೊಳ್ಳುವಿರಿ.
ಧರ್ಮೋಪದೇಶಕಾಂಡ 11 : 24 (IRVKN)
ನೀವು ಹೆಜ್ಜೆಯಿಡುವ ಎಲ್ಲಾ ಸ್ಥಳಗಳು ನಿಮ್ಮದಾಗುವವು. ಅರಣ್ಯ ಮೊದಲುಗೊಂಡು ಲೆಬನೋನ್ ಪರ್ವತದ ವರೆಗೂ ಮತ್ತು ಯೂಫ್ರೆಟಿಸ್ ನದಿಯಿಂದ ಪಶ್ಚಿಮ ಸಮುದ್ರದವರೆಗೂ ನಿಮ್ಮ ಸೀಮೆ ವ್ಯಾಪಿಸುವುದು.
ಧರ್ಮೋಪದೇಶಕಾಂಡ 11 : 25 (IRVKN)
ಯಾರೂ ನಿಮ್ಮ ಮುಂದೆ ನಿಲ್ಲುವುದಿಲ್ಲ. ತಾನು ನಿಮಗೆ ಹೇಳಿದಂತೆ ನೀವು ಕಾಲಿಡುವ ಎಲ್ಲಾ ಪ್ರದೇಶಗಳ ಜನಗಳಿಗೂ ನಿಮ್ಮಿಂದ ದಿಗಿಲೂ ಮತ್ತು ಹೆದರಿಕೆಯೂ ಉಂಟಾಗುವಂತೆ ನಿಮ್ಮ ದೇವರಾದ ಯೆಹೋವನು ಮಾಡುವನು.
ಧರ್ಮೋಪದೇಶಕಾಂಡ 11 : 26 (IRVKN)
ಇಗೋ ನೋಡಿರಿ, ಈ ಹೊತ್ತು ನಾನು ಆಶೀರ್ವಾದವನ್ನೂ ಮತ್ತು ಶಾಪವನ್ನೂ ನಿಮ್ಮ ಮುಂದೆ ಇಡುತ್ತಾ ಇದ್ದೇನೆ.
ಧರ್ಮೋಪದೇಶಕಾಂಡ 11 : 27 (IRVKN)
ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಯೆಹೋವನ ಆಜ್ಞೆಗಳಿಗೆ ನೀವು ವಿಧೇಯರಾಗಿ ನಡೆದರೆ ಆಶೀರ್ವಾದವೂ,
ಧರ್ಮೋಪದೇಶಕಾಂಡ 11 : 28 (IRVKN)
ಈ ಆಜ್ಞೆಗಳಿಗೆ ಅವಿಧೇಯರಾಗಿ, ನಾನು ಈಗ ಬೋಧಿಸುವ ಮಾರ್ಗವನ್ನು ಬಿಟ್ಟು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ಅವಲಂಬಿಸಿದರೆ ಶಾಪವೂ ನಿಮಗುಂಟಾಗುವವು.
ಧರ್ಮೋಪದೇಶಕಾಂಡ 11 : 29 (IRVKN)
ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ಆ ದೇಶಕ್ಕೆ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿದ ನಂತರ ನೀವು ಗೆರಿಜ್ಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಮತ್ತು ಏಬಾಲ್ ಬೆಟ್ಟದ ಮೇಲೆ ಶಾಪವನ್ನೂ ಪ್ರಕಟಿಸಬೇಕು.
ಧರ್ಮೋಪದೇಶಕಾಂಡ 11 : 30 (IRVKN)
ಆ ಬೆಟ್ಟಗಳು ಯೊರ್ದನ್ ನದಿಯ ಆಚೆ, ಪಡುವಣ ದಾರಿಯ ಪಶ್ಚಿಮದಲ್ಲಿ ಕಾನಾನ್ಯರು ವಾಸಿಸುವ ಅರಾಬಾ ಪ್ರದೇಶದಲ್ಲಿ, ಗಿಲ್ಗಾಲಿಗೆ ಎದುರಾಗಿ ಮೋರೆ ಎಂಬ ವೃಕ್ಷದ ಬಳಿಯಲ್ಲಿ ಇವೆ.
ಧರ್ಮೋಪದೇಶಕಾಂಡ 11 : 31 (IRVKN)
ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟಬೇಕು. ನೀವು ಆ ದೇಶವನ್ನು ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸಮಾಡುವಾಗ
ಧರ್ಮೋಪದೇಶಕಾಂಡ 11 : 32 (IRVKN)
ನಾನು ಈಗ ನಿಮಗೆ ತಿಳಿಸುವ ಎಲ್ಲಾ ಆಜ್ಞಾವಿಧಿಗಳನ್ನು ಅನುರಿಸಿ ನಡೆಯಲೇಬೇಕು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32