ಧರ್ಮೋಪದೇಶಕಾಂಡ 13 : 1 (IRVKN)
ಯಾವ ಪ್ರವಾದಿಯಾಗಲಿ ಅಥವಾ ಕನಸುಗಾರನೇ ಆಗಲಿ ನಿಮ್ಮ ಮಧ್ಯದಲ್ಲಿ ಬಂದು, ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತೋರಿಸಿ,
ಧರ್ಮೋಪದೇಶಕಾಂಡ 13 : 2 (IRVKN)
“ಈ ದೇವತೆಗಳನ್ನು ಅವಲಂಬಿಸಿ ಅವುಗಳನ್ನು ಸೇವಿಸೋಣ” ಎಂದು ಬೋಧಿಸುತ್ತಾ, ಆ ಬೋಧನೆಯನ್ನು ಸ್ಥಾಪಿಸುವುದಕ್ಕೆ ಒಂದು ಅದ್ಭುತವನ್ನಾಗಲಿ ಅಥವಾ ಮಹತ್ಕಾರ್ಯವನ್ನಾಗಲಿ ತೋರಿಸಿಕೊಡುತ್ತೇನೆಂದು ಹೇಳಿ ಅವನು ಹೇಳಿದಂತೆಯೇ ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು.
ಧರ್ಮೋಪದೇಶಕಾಂಡ 13 : 3 (IRVKN)
ಏಕೆಂದರೆ ನಿಮ್ಮ ದೇವರಾದ ಯೆಹೋವನು, “ಇವರು ಸಂಪೂರ್ಣ ಹೃದಯದಿಂದಲೂ ಮತ್ತು ಸಂಪೂರ್ಣ ಮನಸ್ಸಿನಿಂದಲೂ ತನ್ನನ್ನೇ ಪ್ರೀತಿಸುವವರು ಹೌದೋ ಅಲ್ಲವೋ” ಎಂಬುದನ್ನು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾನೆ.
ಧರ್ಮೋಪದೇಶಕಾಂಡ 13 : 4 (IRVKN)
ಆತನು ಹೇಳುವ ಮಾರ್ಗದಲ್ಲೇ ನೀವು ನಡೆದು, ಆತನಲ್ಲಿಯೇ ಭಯಭಕ್ತಿಯುಳ್ಳವರಾಗಿ, ಆತನ ಆಜ್ಞೆಗಳನ್ನೇ ಅನುಸರಿಸಿ, ಆತನಿಗೇ ವಿಧೇಯರಾಗಿ, ಆತನನ್ನೇ ಸೇವಿಸುತ್ತಾ ಹೊಂದಿಕೊಂಡಿರಬೇಕು.
ಧರ್ಮೋಪದೇಶಕಾಂಡ 13 : 5 (IRVKN)
ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ಅವನು ದ್ರೋಹದ ಮಾತುಗಳನ್ನಾಡಿ, ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
ಧರ್ಮೋಪದೇಶಕಾಂಡ 13 : 6 (IRVKN)
ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ ಇತರ ದೇವರುಗಳನ್ನು ತೋರಿಸಿ, “ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಆ ದೇವರುಗಳನ್ನು ಸೇವಿಸೋಣ ಬನ್ನಿರಿ” ಎಂದು ರಹಸ್ಯವಾಗಿ ಆಕರ್ಷಿಸಿ, ನಿಮಗೆ ಬೋಧಿಸಿದರೆ,
ಧರ್ಮೋಪದೇಶಕಾಂಡ 13 : 7 (IRVKN)
ಆ ದೇವರುಗಳು ಹತ್ತಿರವಿರುವ ಜನಾಂಗಗಳ ದೇವರುಗಳಾದರೂ, ದೂರವಾದವರ ದೇವರುಗಳಾದರೂ, ಭೂಲೋಕದ ಯಾವ ಭಾಗದವರ ದೇವರುಗಳಾದರೂ
ಧರ್ಮೋಪದೇಶಕಾಂಡ 13 : 8 (IRVKN)
ನೀವು ಸಮ್ಮತಿಸಲೂ ಬಾರದು ಮತ್ತು ಕಿವಿಗೊಡಲೂಬಾರದು. ಅವನನ್ನು ಕನಿಕರಿಸಲೂಬಾರದು, ತಪ್ಪಿಸಲೂಬಾರದು, ಬಚ್ಚಿಡಲೂಬಾರದು ಅವನನ್ನು ಕೊಲ್ಲಿಸಲೇಬೇಕು.
ಧರ್ಮೋಪದೇಶಕಾಂಡ 13 : 9 (IRVKN)
ಆ ಶಿಕ್ಷೆಯನ್ನು ನಡಿಸುವಾಗ ತಪ್ಪು ಕಂಡವನೇ ಮೊದಲು ಕೈಹಾಕಬೇಕು.
ಧರ್ಮೋಪದೇಶಕಾಂಡ 13 : 10 (IRVKN)
ತರುವಾಯ ಜನರೆಲ್ಲರೂ ಕೈಹಾಕಲಿ, ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನ ಆಶ್ರಯದಿಂದ ಅವನು ನಿಮ್ಮನ್ನು ತಪ್ಪಿಸಬೇಕೆಂದಿದ್ದರಿಂದ ಅವನನ್ನು ಕಲ್ಲೆಸೆದು ಕೊಲ್ಲಲೇಬೇಕು.
ಧರ್ಮೋಪದೇಶಕಾಂಡ 13 : 11 (IRVKN)
ಇದನ್ನು ಇಸ್ರಾಯೇಲರೆಲ್ಲರೂ ಕೇಳಿ ಭಯಪಟ್ಟು ಅಂಥ ದುಷ್ಕಾರ್ಯವನ್ನು ಇನ್ನು ಮುಂದೆ ಮಾಡದೆ ಇರುವರು.
ಧರ್ಮೋಪದೇಶಕಾಂಡ 13 : 12 (IRVKN)
ನಿಮ್ಮ ದೇವರಾದ ಯೆಹೋವನು ನಿಮ್ಮ ನಿವಾಸಕ್ಕಾಗಿ ಕೊಡುವ ಯಾವುದಾದರೂ ಒಂದು ಊರಿನ ವಿಷಯದಲ್ಲಿ,
ಧರ್ಮೋಪದೇಶಕಾಂಡ 13 : 13 (IRVKN)
ಅಲ್ಲಿ ವಾಸವಾಗಿರುವ ಇಸ್ರಾಯೇಲರಲ್ಲಿ ಕೆಲವು ಜನ ದುಷ್ಟರು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತಮ್ಮ ಊರಿನವರಿಗೆ ತೋರಿಸಿ, “ಆ ದೇವರುಗಳನ್ನು ಸೇವಿಸೋಣ ಬನ್ನಿರಿ” ಎಂದು ಹೇಳಿ ಅವರನ್ನು ಸನ್ಮಾರ್ಗದಿಂದ ತಪ್ಪಿಸಿದ್ದಾರೆಂಬ ಸುದ್ದಿಯನ್ನು ನೀವು ಕೇಳಿದರೆ,
ಧರ್ಮೋಪದೇಶಕಾಂಡ 13 : 14 (IRVKN)
ಆ ಸಂಗತಿಯನ್ನು ಚೆನ್ನಾಗಿ ವಿಚಾರಿಸಿ ತಿಳಿದುಕೊಳ್ಳಬೇಕು. ಅಂತಹ ಅಸಹ್ಯಕಾರ್ಯವು ಇಸ್ರಾಯೇಲರಲ್ಲಿ ನಡೆದದ್ದು
ಧರ್ಮೋಪದೇಶಕಾಂಡ 13 : 15 (IRVKN)
ನಿಜವೆಂದು ತಿಳಿದುಬಂದರೆ ಆ ಊರನ್ನು ಸಂಪೂರ್ಣವಾಗಿ ಹಾಳು ಮಾಡಿ, ಅದರಲ್ಲಿರುವ ಎಲ್ಲಾ ಜನರನ್ನೂ, ದನಗಳನ್ನೂ ಕತ್ತಿಯಿಂದ ಸಂಹರಿಸಿಡಬೇಕು.
ಧರ್ಮೋಪದೇಶಕಾಂಡ 13 : 16 (IRVKN)
ಅದರಲ್ಲಿರುವ ಎಲ್ಲಾ ಸಾಮಾನುಗಳನ್ನು ಗ್ರಾಮಮಧ್ಯದಲ್ಲಿ ಕೂಡಿಸಿ, ಊರನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಿಮ್ಮ ದೇವರಾದ ಯೆಹೋವನಿಗೋಸ್ಕರ ಸಂಪೂರ್ಣವಾಗಿ ಸುಟ್ಟುಬಿಡಬೇಕು. ಅದು ಪುನಃ ಕಟ್ಟಲ್ಪಡದೆ ಯಾವಾಗಲೂ ಹಾಳುದಿಬ್ಬವಾಗಿರಬೇಕು.
ಧರ್ಮೋಪದೇಶಕಾಂಡ 13 : 17 (IRVKN)
“ಕೇವಲ ಯೆಹೋವನಿಗೇ ಆಗಲಿ” ಎಂದು ನೀವು ಗೊತ್ತು ಮಾಡಿದ್ದರಲ್ಲಿ ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು. ನಾನು ಈಗ ನಿಮಗೆ ಬೋಧಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಗೆ ಸರಿಯಾದದ್ದನ್ನು ಮಾಡಬೇಕು.
ಧರ್ಮೋಪದೇಶಕಾಂಡ 13 : 18 (IRVKN)
ನೀವು ಹೀಗೆ ನಡೆದು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟರೆ, ಆಗ ಆತನು ತನ್ನ ರೋಷಾಗ್ನಿಯನ್ನು ಬಿಟ್ಟು ನಿಮಗೆ ದಯೆಯನ್ನು ತೋರಿಸಿ, ನಿಮ್ಮನ್ನು ಕರುಣಿಸಿ, ತಾನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂತೆ ನಿಮ್ಮ ಸಂತತಿಯನ್ನು ಹೆಚ್ಚಿಸುವನು.

1 2 3 4 5 6 7 8 9 10 11 12 13 14 15 16 17 18