ಧರ್ಮೋಪದೇಶಕಾಂಡ 15 : 1 (IRVKN)
{ಏಳನೆಯ ವರ್ಷದಲ್ಲಿ ಸಾಲಗಳ ಮನ್ನಾ} [PS] ಪ್ರತಿ ಏಳನೆಯ ವರ್ಷದ ಕೊನೆಯಲ್ಲಿ ಸಾಲವನ್ನು ಬಿಟ್ಟುಬಿಡಬೇಕು.
ಧರ್ಮೋಪದೇಶಕಾಂಡ 15 : 2 (IRVKN)
ಹೇಗೆಂದರೆ ಯೆಹೋವನು ನೇಮಿಸಿದ ಬಿಡುಗಡೆಯ ವರ್ಷವು ಬಂತೆಂದು ಪ್ರಕಟವಾದುದರಿಂದ ಸಾಲಕೊಟ್ಟವನು ತೆಗೆದುಕೊಂಡವನಿಗೆ ಆ ಸಾಲವನ್ನು ಬಿಟ್ಟುಬಿಡಬೇಕು. ಅವನು ಸ್ವದೇಶದವನಿಗೆ ಕೊಟ್ಟ ಸಾಲವನ್ನು ಕೇಳಬಾರದು.
ಧರ್ಮೋಪದೇಶಕಾಂಡ 15 : 3 (IRVKN)
ಅನ್ಯದೇಶದವರಿಗೆ ಕೊಟ್ಟ ಸಾಲವನ್ನು ಕೇಳಿ ತೆಗೆದುಕೊಳ್ಳಬಹುದೇ ಹೊರತು ಸ್ವದೇಶದವನಿಗೆ ಕೊಟ್ಟಿರುವುನ್ನು ಕೇಳಬಾರದು. [PE][PS]
ಧರ್ಮೋಪದೇಶಕಾಂಡ 15 : 4 (IRVKN)
ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು, ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ಅನುಸರಿಸಿದರೆ,
ಧರ್ಮೋಪದೇಶಕಾಂಡ 15 : 5 (IRVKN)
ಯೆಹೋವನು ತಾನು ನಿಮಗೆ ಸ್ವದೇಶವಾಗಿ ಕೊಡುವ ದೇಶದಲ್ಲಿ ನೀವು ಅಭಿವೃದ್ಧಿ ಹೊಂದುವುದರಿಂದ ನಿಮ್ಮಲ್ಲಿ ಬಡವರೇ ಇರುವುದಿಲ್ಲ.
ಧರ್ಮೋಪದೇಶಕಾಂಡ 15 : 6 (IRVKN)
ನಿಮ್ಮ ದೇವರಾದ ಯೆಹೋವನು ವಾಗ್ದಾನಮಾಡಿದಂತೆ ನಿಮ್ಮನ್ನು ಅಭಿವೃದ್ಧಿಪಡಿಸುವನು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಅವರಿಂದ ಸಾಲ ತೆಗೆದುಕೊಳ್ಳುವುದಿಲ್ಲ. ನೀವು ಅನೇಕ ಜನಾಂಗಗಳ ಮೇಲೆ ದೊರೆತನ ಮಾಡುವಿರೇ ಹೊರತು ಅವರು ನಿಮ್ಮ ಮೇಲೆ ದೊರೆತನ ಮಾಡುವುದಿಲ್ಲ. [PE][PS]
ಧರ್ಮೋಪದೇಶಕಾಂಡ 15 : 7 (IRVKN)
ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಯಾವ ಊರಿನಲ್ಲಾದರೂ ಸ್ವದೇಶದವನಾದ ಬಡವನು ಇದ್ದರೆ, ನೀವು ಆ ಬಡ ಸಹೋದರನಿಗೆ ಮನಸ್ಸನ್ನು ಕಠಿಣಮಾಡಿಕೊಂಡು ಅವನಿಗೆ ಸಹಾಯಮಾಡದೆ ಇರಬಾರದು.
ಧರ್ಮೋಪದೇಶಕಾಂಡ 15 : 8 (IRVKN)
ನೀವು ಕೈತೆರೆದು ಅವನಿಗೆ ಅವಶ್ಯವಾಗಿ ಬೇಕಾದದ್ದನ್ನು ಕೊಟ್ಟು ಸಹಾಯ ಮಾಡಬೇಕು.
ಧರ್ಮೋಪದೇಶಕಾಂಡ 15 : 9 (IRVKN)
ನೀವು “ಬಿಡುಗಡೆಯುಂಟಾಗುವ ಏಳನೆಯ ವರ್ಷವು ಸಮೀಪವಾಯಿತು” ಎಂಬ ನೀಚವಾದ ಆಲೋಚನೆಯನ್ನು ಮಾಡಿ, ಆ ಬಡ ಸಹೋದರನಿಗೆ ಏನೂ ಕೊಡದೆ ಇರಬಾರದು, ಎಚ್ಚರಿಕೆ! ಹಾಗೆ ಧಿಕ್ಕರಿಸಿದರೆ ಅವನು ಒಂದು ವೇಳೆ ನಿಮ್ಮ ವಿಷಯದಲ್ಲಿ ಯೆಹೋವನಿಗೆ ಮೊರೆಯಿಟ್ಟಾನು, ನೀವು ದೋಷಿಗಳಾಗಿ ಕಂಡುಬರುವಿರಿ.
ಧರ್ಮೋಪದೇಶಕಾಂಡ 15 : 10 (IRVKN)
ನೀವು ಕೊಡುವಾಗ ಬೇಸರಗೊಳ್ಳದೆ ಉದಾರವಾದ ಮನಸ್ಸಿನಿಂದಲೇ ಕೊಡಬೇಕು. ಇದರಿಂದ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ಮತ್ತು ಪ್ರಯತ್ನಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು.
ಧರ್ಮೋಪದೇಶಕಾಂಡ 15 : 11 (IRVKN)
ದೇಶದಲ್ಲಿ ಯಾವಾಗಲೂ ಬಡವರು ಇರುವರಷ್ಟೆ; ಆದುದರಿಂದ, “ನೀವು ಸ್ವದೇಶದವರಾದ ನಿಮ್ಮ ಸಹೋದರರಿಗೂ, ಬಡವರಿಗೂ ಮತ್ತು ಗತಿಯಿಲ್ಲದವರಿಗೂ ಕೈನೀಡಿ ಸಹಾಯಮಾಡಬೇಕು” ಎಂದು ನಾನು ನಿಮಗೆ ಆಜ್ಞಾಪಿಸಿದ್ದೇನೆ. [PS]
ಧರ್ಮೋಪದೇಶಕಾಂಡ 15 : 12 (IRVKN)
{ದಾಸರಿಗೆ ಬಿಡುಗಡೆ} [PS] ಸ್ವದೇಶದವರೊಳಗೆ ಯಾವ ಇಬ್ರಿಯ ಪುರುಷನಾಗಲಿ, ಸ್ತ್ರೀಯಾಗಲಿ ನಿಮಗೆ ದಾಸರಾಗಿರುವುದಕ್ಕಾಗಿ ಮಾರಲ್ಪಡುವ ಪಕ್ಷಕ್ಕೆ, ಅಂಥವರು ಆರು ವರ್ಷಗಳವರೆಗೂ ನಿಮ್ಮ ಸೇವೆ ಮಾಡಲಿ; ಏಳನೆಯ ವರ್ಷದಲ್ಲಿ ನೀವು ಅವರನ್ನು ಬಿಡುಗಡೆ ಮಾಡಬೇಕು.
ಧರ್ಮೋಪದೇಶಕಾಂಡ 15 : 13 (IRVKN)
ಬಿಡುಗಡೆ ಮಾಡುವಾಗ ಬರಿಗೈಯಲ್ಲಿ ಕಳುಹಿಸಿಬಿಡಬಾರದು.
ಧರ್ಮೋಪದೇಶಕಾಂಡ 15 : 14 (IRVKN)
ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿರುವ ಮೇರೆಗೆ ನಿಮಗಿರುವ ಹಿಂಡು, ದವಸ, ದ್ರಾಕ್ಷಿ ಆಲೆ ಮತ್ತು ಕಣ ಇವುಗಳಲ್ಲಿ ಉದಾರವಾಗಿ ಕೊಟ್ಟು ಕಳುಹಿಸಿಬಿಡಬೇಕು.
ಧರ್ಮೋಪದೇಶಕಾಂಡ 15 : 15 (IRVKN)
ಐಗುಪ್ತದೇಶದಲ್ಲಿ ನೀವೇ ದಾಸರಾಗಿರಲು ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡುಗಡೆಮಾಡಿದನು ಎಂಬುದನ್ನು ಜ್ಞಾಪಕಮಾಡಿಕೊಳ್ಳಿರಿ. ಇದಕ್ಕೋಸ್ಕರವಾಗಿಯೇ ನಾನು ಈ ಆಜ್ಞೆಯನ್ನು ನಿಮಗೆ ಈಗ ಕೊಟ್ಟಿದ್ದೇನೆ. [PS]
ಧರ್ಮೋಪದೇಶಕಾಂಡ 15 : 16 (IRVKN)
{ಶಾಶ್ವತ ದಾಸರಾಗಲು ಕ್ರಮ} [PS] ಒಂದು ವೇಳೆ ಆ ದಾಸನು ನಿಮ್ಮ ಬಳಿಯಲ್ಲಿ ಸುಖವಾಗಿದ್ದು, ನಿಮ್ಮನ್ನೂ ಮತ್ತು ನಿಮ್ಮ ಮನೆಯವರನ್ನೂ ಪ್ರೀತಿಸಿ, ತಾನು ಬಿಡುಗಡೆಯಾಗಿ ಹೋಗುವುದಿಲ್ಲ ಎಂದು ಹೇಳುವ ಪಕ್ಷಕ್ಕೆ,
ಧರ್ಮೋಪದೇಶಕಾಂಡ 15 : 17 (IRVKN)
ನೀವು ದಬ್ಬಳದಿಂದ ಅವನ ಕಿವಿಯನ್ನು ಚುಚ್ಚಿ, ಕದಕ್ಕೆ ಸಿಕ್ಕಿಸಬೇಕು. ಆ ದಿನದಿಂದ ಅವನು ನಿಮಗೆ ಶಾಶ್ವತ ದಾಸನಾಗಿರಬೇಕು. ಅದೇ ರೀತಿಯಾಗಿ ದಾಸಿಯರ ವಿಷಯದಲ್ಲಿಯೂ ನಡೆದುಕೊಳ್ಳಬೇಕು. [PE][PS]
ಧರ್ಮೋಪದೇಶಕಾಂಡ 15 : 18 (IRVKN)
ದಾಸನನ್ನು ಬಿಡುಗಡೆಮಾಡುವುದು ಕಷ್ಟವೆಂದು ಹೇಳಿಕೊಳ್ಳಬಾರದು. ಅವನು ಆರು ವರ್ಷಗಳು ನಿಮ್ಮ ದಾಸನಾಗಿದ್ದು ಕೂಲಿಯಾಳಿಗಿಂತ ಎರಡರಷ್ಟು ಪ್ರಯೋಜನವನ್ನು ಉಂಟುಮಾಡಿದನಲ್ಲಾ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಗೊಳಿಸುವನು. [PS]
ಧರ್ಮೋಪದೇಶಕಾಂಡ 15 : 19 (IRVKN)
{ದನಕುರಿಗಳಲ್ಲಿ ಚೊಚ್ಚಲಾದ ಗಂಡು ಯೆಹೋವನಿಗೆ ಸಮರ್ಪಿವಾದುದು} [PS] ದನಗಳಲ್ಲಿಯೂ ಮತ್ತು ಆಡುಕುರಿಗಳಲ್ಲಿಯೂ ಚೊಚ್ಚಲಾದ ಗಂಡನ್ನು ನಿಮ್ಮ ದೇವರಾದ ಯೆಹೋವನಿಗಾಗಿ ಪ್ರತಿಷ್ಠಿಸಬೇಕು. ಚೊಚ್ಚಲಾದ ಹೋರಿಯಿಂದ ಕೆಲಸಮಾಡಿಸಬಾರದು; ಚೊಚ್ಚಲಾದ ಕುರಿಯ ಉಣ್ಣೆಯನ್ನು ಕತ್ತರಿಸಬಾರದು.
ಧರ್ಮೋಪದೇಶಕಾಂಡ 15 : 20 (IRVKN)
ಪ್ರತಿ ವರ್ಷದಲ್ಲಿ ನೀವೂ ಮತ್ತು ನಿಮ್ಮ ಮನೆಯವರೂ ಅವುಗಳನ್ನು ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳದಲ್ಲಿ ಆತನ ಸನ್ನಿಧಿಯಲ್ಲೇ ಕೊಯಿದು ತಿನ್ನಬೇಕು. [PE][PS]
ಧರ್ಮೋಪದೇಶಕಾಂಡ 15 : 21 (IRVKN)
ಅದು ಕುಂಟಾಗಿ, ಕುರುಡಾಗಿ ಇಲ್ಲವೆ ಬೇರೆ ವಿಧದಿಂದ ವಿರೂಪವಾಗಿದ್ದರೆ ಅದನ್ನು ನಿಮ್ಮ ದೇವರಾದ ಯೆಹೋವನಿಗೆ ಸಮರ್ಪಿಸಬಾರದು.
ಧರ್ಮೋಪದೇಶಕಾಂಡ 15 : 22 (IRVKN)
ಅದನ್ನು ನಿಮ್ಮ ಊರಲ್ಲೇ ತಿನ್ನಬೇಕು. ಶುದ್ಧರೂ ಮತ್ತು ಅಶುದ್ಧರೂ ಜಿಂಕೆ ದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನೂ ತಿನ್ನಬಹುದು.
ಧರ್ಮೋಪದೇಶಕಾಂಡ 15 : 23 (IRVKN)
ನೀವು ರಕ್ತವನ್ನು ಮಾತ್ರ ಊಟಮಾಡಬಾರದು; ಅದನ್ನು ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23

BG:

Opacity:

Color:


Size:


Font: