ಧರ್ಮೋಪದೇಶಕಾಂಡ 16 : 1 (IRVKN)
{ಪಸ್ಕಹಬ್ಬ} [PS] ನೀವು [* ಇಬ್ರಿಯ ಪದ ಅಬೀಬ್. ಅಬೀಬ್ ಮಾಸವು ಇಬ್ರಿಯ ಕ್ಯಾಲೆಂಡರಿನ ವರ್ಷದ ಮೊದಲ ಮಾಸವಾಗಿದ್ದು, ಅಧುನಿಕ ಕಾಲದ ಮಾರ್ಚ್ ಮತ್ತು ಏಪ್ರಿಲ್ ಗೆ ಸಮಾನವಾಗಿದೆ. ಇದನ್ನು ನಿಸಾನ್ ಎಂದು ಕರೆಯುತ್ತಾರೆ.] ಚೈತ್ರ ಮಾಸದಲ್ಲಿ ಪಸ್ಕಹಬ್ಬವನ್ನು ನಿಮ್ಮ ದೇವರಾದ ಯೆಹೋವನಿಗೋಸ್ಕರ ಆಚರಿಸಬೇಕು. ಆ ಮಾಸದ ಒಂದು ರಾತ್ರಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಜರನ್ನು ಐಗುಪ್ತದೇಶದಿಂದ ಬಿಡಿಸಿದ ನೆನಪಿಗಾಗಿ ಪಸ್ಕಹಬ್ಬವನ್ನು ಆಚರಿಸಬೇಕು.
ಧರ್ಮೋಪದೇಶಕಾಂಡ 16 : 2 (IRVKN)
ನೀವು ಆಡು ಕುರಿಗಳಲ್ಲಾಗಲಿ, ದನಗಳಲ್ಲಾಗಲಿ ಪಸ್ಕದ ಪಶುವನ್ನು ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ ಆತನಿಗಾಗಿ ವಧಿಸಬೇಕು.
ಧರ್ಮೋಪದೇಶಕಾಂಡ 16 : 3 (IRVKN)
ಅದರೊಂದಿಗೆ ಹುಳಿಹಾಕಿದ ರೊಟ್ಟಿಯನ್ನು ತಿನ್ನಬಾರದು; ಯಾಕೆಂದರೆ ನೀವು (ರೊಟ್ಟಿಗೆ ಹುಳಿಹಾಕುವುದಕ್ಕೆ ಅವಕಾಶವಿಲ್ಲದೆ) ಅವಸರದಿಂದ ಐಗುಪ್ತದೇಶವನ್ನು ಬಿಟ್ಟು ಬಂದಿರಿ. ನಿಮಗೆ ಬಿಡುಗಡೆಯಾದ ಆ ದಿನವು ನಿಮ್ಮ ಜೀವಮಾನದಲ್ಲೆಲ್ಲಾ ನೆನಪಿನಲ್ಲಿಟ್ಟುಕೊಳ್ಳುವಂತೆ ನೀವು ಕಷ್ಟವನ್ನು ಸೂಚಿಸುವ ಹುಳಿಯಿಲ್ಲದ ರೊಟ್ಟಿಗಳನ್ನು ಏಳು ದಿನಗಳ ವರೆಗೂ ತಿನ್ನಬೇಕು.
ಧರ್ಮೋಪದೇಶಕಾಂಡ 16 : 4 (IRVKN)
ಆ ಏಳು ದಿನಗಳು ನಿಮ್ಮ ದೇಶದಲ್ಲೆಲ್ಲಾ ಹುಳಿಬೆರೆತ ಯಾವ ಪದಾರ್ಥವೂ ನಿಮ್ಮ ಬಳಿಯಲ್ಲಿ ಇರಲೇಬಾರದು. ಮೊದಲನೆಯ ದಿನದ ಸಂಜೆಯಲ್ಲಿ ನೀವು ವಧಿಸಿದ ಪಶುಮಾಂಸದಲ್ಲಿ ಸ್ವಲ್ಪವನ್ನೂ ಮರುದಿನದ ವರೆಗೆ ಉಳಿಸಬಾರದು. [PE][PS]
ಧರ್ಮೋಪದೇಶಕಾಂಡ 16 : 5 (IRVKN)
ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಯಾವ ಊರಲ್ಲಿಯಾದರೂ ಪಸ್ಕದ ಪಶುವನ್ನು ವಧಿಸದೆ,
ಧರ್ಮೋಪದೇಶಕಾಂಡ 16 : 6 (IRVKN)
ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ, ನೀವು ಐಗುಪ್ತದೇಶದಿಂದ ಹೊರಟುಬಂದ ಸಮಯ, ಅಂದರೆ ಸಾಯಂಕಾಲದಲ್ಲಿ ಪಸ್ಕದ ಯಜ್ಞವನ್ನು ಸಮರ್ಪಿಸಬೇಕು.
ಧರ್ಮೋಪದೇಶಕಾಂಡ 16 : 7 (IRVKN)
ಆ ಸ್ಥಳದಲ್ಲಿಯೇ ನೀವು ಅದನ್ನು ಅಡಿಗೆಮಾಡಿ ತಿನ್ನಬೇಕು. ಮರುದಿನ ನಿಮ್ಮ ನಿಮ್ಮ ಮನೆಗಳಿಗೆ ನೀವು ಹೊರಟು ಹೋಗಬಹುದು.
ಧರ್ಮೋಪದೇಶಕಾಂಡ 16 : 8 (IRVKN)
ಆರು ದಿನ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು; ಏಳನೆಯ ದಿನದಲ್ಲಿ ನಿಮ್ಮ ದೇವರಾದ ಯೆಹೋವನಿಗಾಗಿ ಸಭೆ ಸೇರಿಬರಬೇಕು; ಆ ದಿನದಲ್ಲಿ ಯಾವ ಕೆಲಸವ ಮಾಡಬಾರದು. [PS]
ಧರ್ಮೋಪದೇಶಕಾಂಡ 16 : 9 (IRVKN)
{ಸುಗ್ಗಿ ಹಬ್ಬ} [PS] ಬೆಳೆ ಕೊಯ್ಯುವುದಕ್ಕೆ ಕುಡುಗೋಲು ಹಾಕುವ ಕಾಲ ಮೊದಲುಗೊಂಡು ಏಳು ವಾರಗಳನ್ನು ಎಣಿಸಿ,
ಧರ್ಮೋಪದೇಶಕಾಂಡ 16 : 10 (IRVKN)
ಆ ಏಳು ವಾರಗಳಾದ ನಂತರ ಪಂಚಾಶತ್ತಮ ದಿನದ ಹಬ್ಬವನ್ನು ಆಚರಿಸಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ನೀವು ಆಗ ಆತನಿಗೋಸ್ಕರ ತರಬೇಕು.
ಧರ್ಮೋಪದೇಶಕಾಂಡ 16 : 11 (IRVKN)
ಮತ್ತು ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮಿಸಬೇಕು.
ಧರ್ಮೋಪದೇಶಕಾಂಡ 16 : 12 (IRVKN)
ಐಗುಪ್ತದೇಶದಲ್ಲಿ ದಾಸರಾಗಿದ್ದೆವೆಂಬುದನ್ನು ನೀವು ನೆನಪಿಗೆ ತಂದುಕೊಂಡು ಈ ವಿಧಿಗಳನ್ನು ಅನುಸರಿಸಿ ನಡೆಯಬೇಕು. [PS]
ಧರ್ಮೋಪದೇಶಕಾಂಡ 16 : 13 (IRVKN)
{ಪರ್ಣಶಾಲೆಗಳ ಹಬ್ಬ} [PS] ನೀವು ಕಣದ ಕೆಲಸವನ್ನೂ, ದ್ರಾಕ್ಷಿ ಆಲೆಯ ಕೆಲಸವನ್ನೂ ಪೂರೈಸಿ, ಬೆಳೆಯನ್ನು ಮನೆಗೆ ತಂದಾಗ ಏಳು ದಿನಗಳವರೆಗೂ ಪರ್ಣಶಾಲೆಗಳ ಹಬ್ಬವನ್ನು ಆಚರಿಸಬೇಕು.
ಧರ್ಮೋಪದೇಶಕಾಂಡ 16 : 14 (IRVKN)
ಅದರಲ್ಲಿ ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ಮತ್ತು ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ಸಂಭ್ರಮಿಸಬೇಕು.
ಧರ್ಮೋಪದೇಶಕಾಂಡ 16 : 15 (IRVKN)
ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳದಲ್ಲಿ ನೀವು ಏಳು ದಿನವೂ ಆ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ವ್ಯವಸಾಯವನ್ನೂ ಮತ್ತು ಬೇರೆ ಎಲ್ಲಾ ಕೆಲಸಗಳನ್ನೂ ಆತನು ಸಫಲ ಮಾಡಿದ್ದರಿಂದ ನೀವು ಬಹಳ ಆನಂದದಿಂದಿರಬೇಕು. [PE][PS]
ಧರ್ಮೋಪದೇಶಕಾಂಡ 16 : 16 (IRVKN)
ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ, ಪಂಚಾಶತ್ತಮ ದಿನದ ಹಬ್ಬದಲ್ಲಿಯೂ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿಯೂ ಅಂತು ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ಆರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ಆತನ ಸನ್ನಿಧಿಗೆ ಬರಬಾರದು.
ಧರ್ಮೋಪದೇಶಕಾಂಡ 16 : 17 (IRVKN)
ಪ್ರತಿಯೊಬ್ಬನು ತನಗೆ ಯೆಹೋವನು ಅನುಗ್ರಹಿಸಿದ ಆದಾಯದ ಮೇರೆಗೆ ತನ್ನ ಶಕ್ತ್ಯಾನುಸಾರ ಕೊಡಬೇಕು. [PS]
ಧರ್ಮೋಪದೇಶಕಾಂಡ 16 : 18 (IRVKN)
{ನ್ಯಾಯಾಧಿಪತಿಗಳ ನೇಮಕ} [PS] ಪ್ರತಿಯೊಂದು ಕುಲವು ಇರುವ ಪ್ರದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಎಲ್ಲಾ ಊರುಗಳಲ್ಲಿಯೂ, ನ್ಯಾಯಾಧಿಪತಿಗಳನ್ನೂ ಮತ್ತು ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅವರು ಜನರಿಗೋಸ್ಕರ ನ್ಯಾಯವನ್ನು ವಿಚಾರಿಸಿ ಸರಿಯಾದ ತೀರ್ಪುಕೊಡಬೇಕು. [PE][PS]
ಧರ್ಮೋಪದೇಶಕಾಂಡ 16 : 19 (IRVKN)
ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು, ಪಕ್ಷಪಾತಮಾಡಬಾರದು, ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.
ಧರ್ಮೋಪದೇಶಕಾಂಡ 16 : 20 (IRVKN)
ನೀವು ಕೇವಲ ನ್ಯಾಯವನ್ನೇ ಅನುಸರಿಸಬೇಕು. ಹಾಗೆ ನಡೆದರೆ ನೀವು ಬದುಕಿಕೊಂಡು ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ. [PS]
ಧರ್ಮೋಪದೇಶಕಾಂಡ 16 : 21 (IRVKN)
{ವಿಗ್ರಹಾರಾಧನೆಯನ್ನು ಮಾಡಬಾರದು} [PS] ನಿಮ್ಮ ದೇವರಾದ ಯೆಹೋವನಿಗೋಸ್ಕರ ನೀವು ಕಟ್ಟಿಸಿಕೊಳ್ಳುವ ಯಜ್ಞವೇದಿಯ ಬಳಿಯಲ್ಲಿ, ಅಶೇರ ವಿಗ್ರಹಕ್ಕೆ ಸಂಬಂಧಪಟ್ಟ ಯಾವ ಮರದ ಸ್ತಂಭವನ್ನೂ ನೆಡಬಾರದು.
ಧರ್ಮೋಪದೇಶಕಾಂಡ 16 : 22 (IRVKN)
ಪವಿತ್ರ ಕಲ್ಲಿನ ಕಂಬವನ್ನೂ ನಿಲ್ಲಿಸಬಾರದು; ಇದು ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾದದ್ದು. [PE]

1 2 3 4 5 6 7 8 9 10 11 12 13 14 15 16 17 18 19 20 21 22

BG:

Opacity:

Color:


Size:


Font: