ಧರ್ಮೋಪದೇಶಕಾಂಡ 17 : 1 (IRVKN)
ಯಾವುದೇ ಕುಂದುಕೊರತೆ ಅಥವಾ ಊನ ಇರುವ ಎತ್ತು ಮತ್ತು ಕುರಿಗಳನ್ನು ನಿಮ್ಮ ದೇವರಾದ ಯೆಹೋವನಿಗೆ ಸಮರ್ಪಿಸಬಾರದು. ಅಂಥವುಗಳನ್ನು ಸಮರ್ಪಿಸುವುದು ಆತನಿಗೆ ಅಸಹ್ಯವಾಗಿದೆ. [PE][PS]
ಧರ್ಮೋಪದೇಶಕಾಂಡ 17 : 2 (IRVKN)
ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಯಾವುದೇ ಊರಿನಲ್ಲಿ, ಯಾವ ಪುರುಷನಾಗಲಿ ಅಥವಾ ಸ್ತ್ರೀಯಾಗಲಿ ನಿಮ್ಮ ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ,
ಧರ್ಮೋಪದೇಶಕಾಂಡ 17 : 3 (IRVKN)
ಆತನಿಂದ ದೂರಹೋಗಿ ಅನ್ಯದೇವರುಗಳನ್ನು ಪೂಜಿಸಬಾರದೆಂದು ಮತ್ತು ಆತನು ನಿಷೇಧಿಸಿರುವ ಸೂರ್ಯ, ಚಂದ್ರ ಅಥವಾ ನಕ್ಷತ್ರಮಂಡಲವನ್ನಾಗಲಿ ಸೇವಿಸಿ, ಪೂಜಿಸಿ ಯೆಹೋವನ ದೃಷ್ಟಿಯಲ್ಲಿ ಅಸಹ್ಯವಾದದ್ದನ್ನು ನಡಿಸಿದರೆ,
ಧರ್ಮೋಪದೇಶಕಾಂಡ 17 : 4 (IRVKN)
ನೀವು ಆ ಸಂಗತಿಯನ್ನು ಕೇಳಿದಾಗ ಸೂಕ್ಷ್ಮವಾಗಿ ವಿಚಾರಣೆಯನ್ನು ಮಾಡಬೇಕು. ಆಗ ಇಸ್ರಾಯೇಲರಲ್ಲಿ ಯಾರಿಂದಾದರೂ ಆ ನಿಷಿದ್ಧಕಾರ್ಯವು ನಡೆದದ್ದು ನಿಜವೆಂದು ತಿಳಿದು ಬಂದರೆ,
ಧರ್ಮೋಪದೇಶಕಾಂಡ 17 : 5 (IRVKN)
ಆಗ ಆ ಪುರುಷನನ್ನಾಗಲಿ ಅಥವಾ ಸ್ತ್ರೀಯನ್ನಾಗಲಿ ಹಿಡಿದು ಊರ ಹೊರಗೆ ತಂದು ಕಲ್ಲೆಸೆದು ಕೊಲ್ಲಬೇಕು.
ಧರ್ಮೋಪದೇಶಕಾಂಡ 17 : 6 (IRVKN)
ಒಬ್ಬನೇ ಒಬ್ಬನ ಸಾಕ್ಷಿಯ ಮಾತಿನ ಮೇಲೆ ಯಾರಿಗೂ ಮರಣಶಿಕ್ಷೆಯಾಗಬಾರದು. ಮರಣಶಿಕ್ಷೆಯನ್ನು ವಿಧಿಸುವುದಕ್ಕೆ ಇಬ್ಬರು ಇಲ್ಲವೆ ಮೂವರ ಸಾಕ್ಷಿಗಳು ಬೇಕು.
ಧರ್ಮೋಪದೇಶಕಾಂಡ 17 : 7 (IRVKN)
ಅಪರಾಧಿಯನ್ನು ಕೊಲ್ಲುವುದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು. [PS]
ಧರ್ಮೋಪದೇಶಕಾಂಡ 17 : 8 (IRVKN)
{ನ್ಯಾಯವಿಚಾರಣೆಯ ಕ್ರಮ} [PS] ವಿಧವಿಧವಾದ ಕೊಲೆ, ನ್ಯಾಯ, ಹೊಡೆದಾಟ ಇವುಗಳ ವಿಷಯದಲ್ಲಿ ಅನುಮಾನ ಅಥವಾ ಚರ್ಚೆಗಳು ನಿಮ್ಮ ಊರಿನಲ್ಲಿ ಉಂಟಾದಾಗ, ನ್ಯಾಯ ತೀರಿಸುವುದು ಕಷ್ಟವಾದರೆ, ನೀವು ಊರಿನಿಂದ ಹೊರಟು ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳಕ್ಕೆ ಹೋಗಬೇಕು.
ಧರ್ಮೋಪದೇಶಕಾಂಡ 17 : 9 (IRVKN)
ಅಲ್ಲಿ ಯಾಜಕಸೇವೆಯನ್ನು ಮಾಡುವ ಲೇವಿಯರ ಮತ್ತು ಆ ಕಾಲದ ನ್ಯಾಯಾಧಿಪತಿಯ ಬಳಿಗೆ ಹೋಗಿ ವಿಚಾರಿಸಲು ನೀವು ಕೊಡಬೇಕಾದ ತೀರ್ಪನ್ನು ಅವರು ತಿಳಿಸುವರು.
ಧರ್ಮೋಪದೇಶಕಾಂಡ 17 : 10 (IRVKN)
ಯೆಹೋವನು ಆರಿಸಿಕೊಂಡ ಆ ಸ್ಥಳದಿಂದ ಅವರು ನಿಮಗೆ ತಿಳಿಸುವ ಮಾತಿನ ಪ್ರಕಾರ ನೀವು ಮಾಡಬೇಕು. ಅವರು ಬೋಧಿಸುವುದನ್ನೇ ನೀವು ಅನುಸರಿಸಬೇಕು.
ಧರ್ಮೋಪದೇಶಕಾಂಡ 17 : 11 (IRVKN)
ಅವರು ಕಲಿಸಿಕೊಡುವ ಆಜ್ಞೆಗಳನ್ನು ಅನುಸರಿಸಿ, ಅವರು ಹೇಳಿಕೊಡುವ ತೀರ್ಪಿನಂತೆ ನೀವು ಮಾಡಬೇಕು; ಅವರು ತಿಳಿಸುವ ಮಾತನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತಿರುಗಬಾರದು.
ಧರ್ಮೋಪದೇಶಕಾಂಡ 17 : 12 (IRVKN)
ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸೇವೆ ಮಾಡುವ ಯಾಜಕರ ಅಥವಾ ನ್ಯಾಯಾಧಿಪತಿಯ ಮಾತನ್ನು ಯಾರು ಅಹಂಕಾರದಿಂದ ನಿರಾಕರಿಸುತ್ತಾರೋ ಅವರಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ಇಸ್ರಾಯೇಲರ ಮಧ್ಯದಿಂದ ತೆಗೆದುಹಾಕಬೇಕು.
ಧರ್ಮೋಪದೇಶಕಾಂಡ 17 : 13 (IRVKN)
ಆಗ ಜನರೆಲ್ಲರೂ ಕೇಳಿ ಭಯಪಟ್ಟು ಇನ್ನು ಅಹಂಕಾರದಿಂದ ನಡೆಯದೆ ಇರುವರು. [PS]
ಧರ್ಮೋಪದೇಶಕಾಂಡ 17 : 14 (IRVKN)
{ಅರಸನನ್ನು ನೇಮಿಸುವ ವಿಷಯ} [PS] ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ನೀವು ಸೇರಿ ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸವಾಗಿರುವಾಗ, “ಸುತ್ತಲಿರುವ ಎಲ್ಲಾ ಜನಾಂಗಗಳಂತೆ ನಾವೂ ಅರಸನನ್ನು ನೇಮಿಸಿಕೊಳ್ಳೋಣ” ಎಂದು ಹೇಳಿಕೊಳ್ಳುವ ಸಂದರ್ಭದಲ್ಲಿ,
ಧರ್ಮೋಪದೇಶಕಾಂಡ 17 : 15 (IRVKN)
ನೀವು ಅಗತ್ಯವಾಗಿ ನಿಮ್ಮ ದೇವರಾದ ಯೆಹೋವನು ಆರಿಸಿಕೊಂಡ ವ್ಯಕ್ತಿಯನ್ನೇ ನೇಮಿಸಿಕೊಳ್ಳಬೇಕು. ನಿಮ್ಮ ಬಂಧುಗಳಾದ ಸ್ವಜನರಲ್ಲೇ ಒಬ್ಬನನ್ನು ಅರಸನನ್ನಾಗಿ ನೇಮಿಸಿಕೊಳ್ಳಬೇಕೇ ಹೊರತು ಅನ್ಯದೇಶದವನನ್ನು ನೇಮಿಸಬಾರದು. [PE][PS]
ಧರ್ಮೋಪದೇಶಕಾಂಡ 17 : 16 (IRVKN)
ಅವನು ಕುದುರೆಯ ದಂಡನ್ನು ಕೂಡಿಸಿಕೊಳ್ಳಬಾರದು. [* ಬಹಳ ಕುದುರೆಗಳನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ದಾಸರನ್ನಾಗಿ ಕಳುಹಿಸಿ ವಿನಿಮಯ ಮಾಡಿಕೊಳ್ಳಬಾರದು.] ಕುದುರೆಗಳನ್ನು ಕೊಂಡುಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಐಗುಪ್ತದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಬಾರದು ಎಂದು ಯೆಹೋವನು ಆಜ್ಞಾಪಿಸಿದ್ದಾನಲ್ಲಾ.
ಧರ್ಮೋಪದೇಶಕಾಂಡ 17 : 17 (IRVKN)
ಅವನು ಅನೇಕ ಸ್ತ್ರೀಯರನ್ನು ಮದುವೆ ಮಾಡಿಕೊಳ್ಳಬಾರದು; ಮಾಡಿಕೊಂಡರೆ ಅವನ ಮನಸ್ಸು ಯೆಹೋವನ ಕಡೆಯಿಂದ ತಿರುಗುವುದಕ್ಕೆ ಅವಕಾಶವಾಗುವುದು. ಅವನು ಹೆಚ್ಚು ಬೆಳ್ಳಿಬಂಗಾರವನ್ನು ಕೂಡಿಸಿಟ್ಟುಕೊಳ್ಳಬಾರದು. [PE][PS]
ಧರ್ಮೋಪದೇಶಕಾಂಡ 17 : 18 (IRVKN)
ಅವನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆಮಾಡುವ ಲೇವಿಯರ ವಶದಲ್ಲಿರುವ ಈ ಧರ್ಮಶಾಸ್ತ್ರಗ್ರಂಥದ ಒಂದು ಪ್ರತಿಯನ್ನು ತನಗೋಸ್ಕರ ಪುಸ್ತಕರೂಪವಾಗಿ ಬರೆಯಿಸಿಕೊಳ್ಳಬೇಕು.
ಧರ್ಮೋಪದೇಶಕಾಂಡ 17 : 19 (IRVKN)
ಅವನು ತನ್ನ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆ ಧರ್ಮಶಾಸ್ತ್ರದ ಎಲ್ಲಾ ವಾಕ್ಯಗಳನ್ನೂ ಮತ್ತು ವಿಧಿಗಳನ್ನೂ ಅನುಸರಿಸುವುದಕ್ಕೆ ಅಭ್ಯಾಸಮಾಡಿಕೊಳ್ಳುವಂತೆ ಆ ಗ್ರಂಥವು ಅವನ ಬಳಿಯಲ್ಲೇ ಇರಬೇಕು. ಅವನು ತನ್ನ ಜೀವಮಾನದ ದಿನಗಳೆಲ್ಲಾ ಅದನ್ನು ಓದಿಕೊಳ್ಳುತ್ತಾ ಇರಬೇಕು.
ಧರ್ಮೋಪದೇಶಕಾಂಡ 17 : 20 (IRVKN)
ಅವನೂ ಮತ್ತು ಅವನ ಸಂತತಿಯವರೂ ಬಹುಕಾಲ ರಾಜ್ಯಾಧಿಕಾರವನ್ನು ನಡಿಸುತ್ತಾ, ಇಸ್ರಾಯೇಲರ ನಡುವೆ ಬಾಳುವಂತೆಯೂ ಮತ್ತು ಅವನು ಮದದಿಂದ ತನ್ನ ಸ್ವದೇಶದವರನ್ನು ಹೀಯಾಳಿಸದಂತೆಯೂ ಅವನು ಯೆಹೋವನ ಆಜ್ಞೆಗಳನ್ನು ಅನುಸರಿಸಬೇಕು. ಅದನ್ನು ಮೀರಿ ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳಬಾರದು. [PE]

1 2 3 4 5 6 7 8 9 10 11 12 13 14 15 16 17 18 19 20

BG:

Opacity:

Color:


Size:


Font: