ಧರ್ಮೋಪದೇಶಕಾಂಡ 18 : 1 (IRVKN)
ಯಾಜಕರಿಗೆ ಸಲ್ಲಬೇಕಾದ ಕಾಣಿಕೆಗಳ ವಿಷಯ ಯಾಜಕಸೇವೆ ಮಾಡುವ ಲೇವಿಯರಿಗಾಗಲಿ ಅಥವಾ ಲೇವಿಯ ಕುಲದವರಲ್ಲಿ ಯಾರಿಗೇ ಆಗಲಿ ಇತರ ಇಸ್ರಾಯೇಲರೊಡನೆ ಸ್ವಂತಕ್ಕಾಗಿ ಪಾಲಾಗಲಿ ಅಥವಾ ಸ್ವಾಸ್ತ್ಯವಾಗಲಿ ದೊರೆಯುವುದಿಲ್ಲ. ಯೆಹೋವನಿಗೆ ಸಮರ್ಪಿಸಲ್ಪಡುವ ಹೋಮದ್ರವ್ಯಗಳೂ ಆತನಿಗೋಸ್ಕರ ಪ್ರತ್ಯೇಕಿಸಲ್ಪಟ್ಟದ್ದೆಲ್ಲವೂ ಅವರಿಗೆ ಜೀವನಾಧಾರ.
ಧರ್ಮೋಪದೇಶಕಾಂಡ 18 : 2 (IRVKN)
ಸ್ವದೇಶಸ್ಥರೊಂದಿಗೂ ಅವರಿಗೆ ಸ್ವತ್ತು ದೊರೆಯುವುದಿಲ್ಲ; ಯೆಹೋವನು ಅವರಿಗೆ ಹೇಳಿದಂತೆ ತಾನೇ ಅವರಿಗೆ ಸ್ವತ್ತಾಗಿರುವನು.
ಧರ್ಮೋಪದೇಶಕಾಂಡ 18 : 3 (IRVKN)
ಜನರ ಕಡೆಯಿಂದ ಯಾಜಕರು ಹೊಂದಬೇಕಾದವುಗಳು ಯಾವುವೆಂದರೆ: ದನಗಳಲ್ಲಿಯಾಗಲಿ, ಆಡು ಮತ್ತು ಕುರಿಗಳಲ್ಲಿಯಾಗಲಿ ಪಶುವನ್ನು ಕೊಯಿದು ಯಜ್ಞಮಾಡುವವರೆಲ್ಲರೂ ಅದರ ಮುಂದೊಡೆಯನ್ನೂ, ಎರಡು ದವಡೆಗಳನ್ನೂ, ಕೋಷ್ಠವನ್ನೂ (ಒಳಭಾಗವನ್ನು) ಯಾಜಕರಿಗೆ ಕೊಡಬೇಕು.
ಧರ್ಮೋಪದೇಶಕಾಂಡ 18 : 4 (IRVKN)
ಧಾನ್ಯ, ದ್ರಾಕ್ಷಾರಸ ಮತ್ತು ಎಣ್ಣೆ ಇವುಗಳ ಪ್ರಥಮಫಲಗಳನ್ನು ಹಾಗೂ ಮೊದಲನೆಯ ಸಾರಿ ಕತ್ತರಿಸುವ ಕುರಿಗಳ ಉಣ್ಣೆಯನ್ನೂ ಅವರಿಗೆ ಕೊಡಬೇಕು.
ಧರ್ಮೋಪದೇಶಕಾಂಡ 18 : 5 (IRVKN)
ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕುಲಗಳಲ್ಲಿ ಇವರನ್ನೂ ಮತ್ತು ಇವರ ತರುವಾಯ ಇವರ ಸಂತತಿಯವರನ್ನೂ ತನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ಸೇವೆ ಮಾಡುವುದಕ್ಕೆ ತಾನೇ ನೇಮಿಸಿಕೊಂಡನಲ್ಲಾ.
ಧರ್ಮೋಪದೇಶಕಾಂಡ 18 : 6 (IRVKN)
ಇಸ್ರಾಯೇಲರ ಯಾವುದಾದರೂ ಒಂದು ಊರಲ್ಲಿ ಇಳಿದುಕೊಂಡಿರುವ ಲೇವಿಯನು ಸ್ವಂತ ಮನಸ್ಸಿನಿಂದ ಆ ಊರನ್ನು ಬಿಟ್ಟು, ಯೆಹೋವನು ಆರಿಸಿಕೊಂಡ ಪವಿತ್ರ ಸ್ಥಳಕ್ಕೆ ಬಂದು,
ಧರ್ಮೋಪದೇಶಕಾಂಡ 18 : 7 (IRVKN)
ಅಲ್ಲೇ ಯೆಹೋವನ ಸನ್ನಿಧಿಯಲ್ಲಿ ಸೇವೆಮಾಡುವ ತನ್ನ ಸ್ವಕುಲದವರಂತೆ ತನ್ನ ದೇವರಾದ ಯೆಹೋವನ ಹೆಸರನ್ನು ಹೇಳಿ ತಾನೂ ಸೇವೆ ನಡಿಸಿದರೆ,
ಧರ್ಮೋಪದೇಶಕಾಂಡ 18 : 8 (IRVKN)
ಅವನ ಕೈಯಲ್ಲಿ ಪಿತ್ರಾರ್ಜಿತ ಸೊತ್ತನ್ನು ಮಾರಿದ ಹಣವಿದ್ದರೂ, ಇತರ ಲೇವಿಯರೊಂದಿಗೆ ಸಮವಾಗಿ ಭೋಗಿಸುವುದಕ್ಕೆ ಬಾಧ್ಯನಾಗಿರುವನು.
ಧರ್ಮೋಪದೇಶಕಾಂಡ 18 : 9 (IRVKN)
ಅಸಹ್ಯವಾದ ಆಚಾರವಿಚಾರಗಳು ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದಾಗ ಅಲ್ಲಿರುವ ಜನಗಳು ಮಾಡುವ ಅಸಹ್ಯವಾದ ಕೆಲಸಗಳನ್ನು ನೀವು ಅನುಸರಿಸಲೇಬಾರದು.
ಧರ್ಮೋಪದೇಶಕಾಂಡ 18 : 10 (IRVKN)
ಮಕ್ಕಳನ್ನು ಬಲಿಕೊಡುವವರು, ಕಣಿಹೇಳುವವರು, ಶಕುನನೋಡುವವರು, ಯಂತ್ರ ಮಂತ್ರಗಳನ್ನು ಮಾಡುವವರು,
ಧರ್ಮೋಪದೇಶಕಾಂಡ 18 : 11 (IRVKN)
ಮಾಟಗಾರರು, ತಂತ್ರಗಾರರು, ಸತ್ತವರಲ್ಲಿ ವಿಚಾರಿಸುವವರು, ಬೇತಾಳ, ಪ್ರೇತ, ಭೂತ ಎಂದು ಪೂಜಿಸುವವರು ಯಾರೂ ನಿಮ್ಮಲ್ಲಿ ಇರಬಾರದು.
ಧರ್ಮೋಪದೇಶಕಾಂಡ 18 : 12 (IRVKN)
ಇಂಥ ಕೆಲಸಗಳನ್ನು ನಡಿಸುವವರನ್ನು ಯೆಹೋವನು ಸಹಿಸುವುದಿಲ್ಲ; ನಿಮ್ಮ ದೇವರಾದ ಯೆಹೋವನು ಇಂಥ ಹೇಯಕೃತ್ಯಗಳನ್ನು ಮಾಡುವ ಆ ಜನಾಂಗಗಳನ್ನು ನಿಮ್ಮಿಂದ ಹೊರ ಹೋಗುವಂತೆ ಮಾಡಿದ್ದಾನೆ.
ಧರ್ಮೋಪದೇಶಕಾಂಡ 18 : 13 (IRVKN)
ನೀವು ನಿಮ್ಮ ದೇವರಾದ ಯೆಹೋವನ ಮುಂದೆ ನಿರ್ದೊಷಿಗಳಾಗಿರಬೇಕು.
ಧರ್ಮೋಪದೇಶಕಾಂಡ 18 : 14 (IRVKN)
ನೀವು ಸ್ವಾಧೀನಮಾಡಿಕೊಳ್ಳುವ ದೇಶದ ಜನಾಂಗಗಳು ಶಕುನಗಳನ್ನು ನೋಡುತ್ತಾರೆ ಮತ್ತು ಯಂತ್ರ ಮಂತ್ರಗಳನ್ನು ಮಾಡುತ್ತಾರೆ. ನೀವಾದರೋ ಹಾಗೆ ಮಾಡುವುದಕ್ಕೆ ನಿಮ್ಮ ದೇವರಾದ ಯೆಹೋವನಿಂದ ಅಪ್ಪಣೆಹೊಂದಲಿಲ್ಲ.
ಧರ್ಮೋಪದೇಶಕಾಂಡ 18 : 15 (IRVKN)
ಪ್ರವಾದಿಯನ್ನು ಕಳುಹಿಸುವ ವಾಗ್ದಾನ ನಿಮ್ಮ ದೇವರಾದ ಯೆಹೋವನು ನಿಮ್ಮ ಸಹೋದರರಲ್ಲಿ ನನ್ನಂಥ ಪ್ರವಾದಿಯನ್ನು ನಿಮಗೆ ಏರ್ಪಡಿಸುವನು; ಅವನಿಗೆ ನೀವು ಕಿವಿಗೊಡಬೇಕು.
ಧರ್ಮೋಪದೇಶಕಾಂಡ 18 : 16 (IRVKN)
ಹೋರೇಬಿನಲ್ಲಿ ಸಭೆಕೂಡಿದ ದಿನದಲ್ಲಿ ನೀವು, “ನಮ್ಮ ದೇವರಾದ ಯೆಹೋವನ ಸ್ವರವನ್ನು ಇನ್ನು ಕೇಳುವುದಕ್ಕಾಗಲಿ ಅಥವಾ ಈ ಘೋರವಾದ ಅಗ್ನಿಜ್ವಾಲೆಯನ್ನು ಇನ್ನು ನೋಡವುದಕ್ಕಾಗಲಿ ನಮಗೆ ಮನಸ್ಸಿಲ್ಲ, ಹಾಗೇನಾದರು ಕೇಳಿ ನೋಡಿದರೆ ಸತ್ತು ಹೋಗುವೆವು” ಎಂದು ನೀವು ಹೇಳಿದಿರಷ್ಟೆ.
ಧರ್ಮೋಪದೇಶಕಾಂಡ 18 : 17 (IRVKN)
ಆಗ ಯೆಹೋವನು ನನಗೆ, “ಇವರು ಹೇಳಿದ ಮಾತು ಒಳ್ಳೆಯದೇ;
ಧರ್ಮೋಪದೇಶಕಾಂಡ 18 : 18 (IRVKN)
ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೋಸ್ಕರ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು.
ಧರ್ಮೋಪದೇಶಕಾಂಡ 18 : 19 (IRVKN)
ಅವನು ನನ್ನ ಹೆಸರಿನಲ್ಲಿ ಹೇಳಿದ ಮಾತುಗಳಿಗೆ ಯಾರು ಕಿವಿಗೊಡುವದಿಲ್ಲವೋ ಅಂಥವರನ್ನು ನಾನು ಶಿಕ್ಷಿಸುವೆನು.
ಧರ್ಮೋಪದೇಶಕಾಂಡ 18 : 20 (IRVKN)
ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರಹೊಂದದೆ, ನಾನು ಪ್ರೇರಣೆಮಾಡದ ಮಾತುಗಳನ್ನು ಯೆಹೋವನ ಮಾತೆಂದು ಹೇಳಿ ಜನರಿಗೆ ತಿಳಿಸುವನೋ, ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತನಾಡುವನೋ ಅವನಿಗೆ ಮರಣಶಿಕ್ಷೆಯಾಗಬೇಕೆಂದು ಹೇಳಿದನು.
ಧರ್ಮೋಪದೇಶಕಾಂಡ 18 : 21 (IRVKN)
‘ಪ್ರವಾದಿಯು ಹೇಳಿದ ಮಾತು ಯೆಹೋವನ ಮಾತಲ್ಲವೆಂದು ತಿಳಿದುಕೊಳ್ಳುವುದು ಹೇಗೆ’ ಅಂದುಕೊಳ್ಳುತ್ತೀರೋ?
ಧರ್ಮೋಪದೇಶಕಾಂಡ 18 : 22 (IRVKN)
ಪ್ರವಾದಿಯು ‘ಇದು ಯೆಹೋವನ ನುಡಿ’ ಎಂದು ಹೇಳಿ, ಆತನು ತಿಳಿಸಿದ ಸಂಗತಿಯೂ ನಡೆಯದೆ ಹೋದರೆ, ಅವನ ಮಾತು ಯೆಹೋವನದಲ್ಲವೆಂದು ನೀವು ತಿಳಿದುಕೊಳ್ಳಬೇಕು. ಅವನು ನನ್ನ ಅಪ್ಪಣೆ ಇಲ್ಲದೆ ಮಾತನಾಡಿದವನು ಮತ್ತು ನೀವು ಅವನಿಗೆ ಹೆದರಬಾರದು” ಎಂದು ಹೇಳಿದನು.

1 2 3 4 5 6 7 8 9 10 11 12 13 14 15 16 17 18 19 20 21 22