ಧರ್ಮೋಪದೇಶಕಾಂಡ 21 : 1 (IRVKN)
ಅನ್ಯಾಯವಾದ ನರಹತ್ಯದೋಷವನ್ನು ನಿವಾರಿಸುವುದು ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗಿ ಕೊಡುವ ದೇಶದಲ್ಲಿ ಹತನಾದ ಮನುಷ್ಯನ ಶವವು ಅಡವಿಯಲ್ಲಿ ಬಿದ್ದಿರುವುದನ್ನು ನೀವು ಕಂಡರೆ ಮತ್ತು ಅವನನ್ನು ಕೊಂದವನು ಯಾರೆಂಬುದು ತಿಳಿಯದೆ ಹೋದರೆ,
ಧರ್ಮೋಪದೇಶಕಾಂಡ 21 : 2 (IRVKN)
ನಿಮ್ಮ ಹಿರಿಯರೂ ಮತ್ತು ನ್ಯಾಯಾಧಿಪತಿಗಳೂ ಬಂದು ಹತನಾದವನ ಶವದ ಸುತ್ತಲಿರುವ ಊರುಗಳಲ್ಲಿ ಯಾವುದು ಹತ್ತಿರವೆಂದು ತಿಳಿದುಕೊಳ್ಳುವುದಕ್ಕೆ ಅಳತೆಮಾಡಬೇಕು.
ಧರ್ಮೋಪದೇಶಕಾಂಡ 21 : 3 (IRVKN)
ಯಾವ ಊರು ಹತ್ತಿರವಾಗಿದೆಯೋ ಆ ಊರಿನ ಹಿರಿಯರು ಇನ್ನೂ ನೊಗಕ್ಕೆ ಕಟ್ಟಲ್ಪಡದೆಯೂ, ಯಾವ ಕೆಲಸವನ್ನೂ ಮಾಡದೆಯೂ ಇರುವ ಒಂದು ಮಣಕವನ್ನು ತೆಗೆದುಕೊಳ್ಳಬೇಕು.
ಧರ್ಮೋಪದೇಶಕಾಂಡ 21 : 4 (IRVKN)
ಅವರು ಅದನ್ನು ಎಂದಿಗೂ ವ್ಯವಸಾಯಕ್ಕೆ ಉಪಯೋಗಿಸದಂಥ ಅಥವಾ ನೀರು ಯಾವಾಗಲೂ ಹರಿಯುವಂಥ ತಗ್ಗಿಗೆ ತೆಗೆದುಕೊಂಡು ಹೋಗಿ, ಅಲ್ಲಿ ಅದರ ಕುತ್ತಿಗೆಯನ್ನು ಮುರಿದು ಕೊಲ್ಲಬೇಕು.
ಧರ್ಮೋಪದೇಶಕಾಂಡ 21 : 5 (IRVKN)
ಲೇವಿ ಕುಲದವರಾದ ಯಾಜಕರಲ್ಲಿ ಕೆಲವರು ಹತ್ತಿರ ಬರಬೇಕು. ನಿಮ್ಮ ದೇವರಾದ ಯೆಹೋವನು ಅವರನ್ನೇ ತನ್ನ ಸಾನ್ನಿಧ್ಯಸೇವೆಯನ್ನು ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಆರಿಸಿಕೊಂಡಿದ್ದಾನಲ್ಲಾ; ಅನುಮಾನವಾದ ಎಲ್ಲಾ ವ್ಯಾಜ್ಯಗಳ ಮತ್ತು ಹೊಡೆದಾಟಗಳ ವಿಷಯದಲ್ಲಿ ಅವರೇ ತೀರ್ಮಾನಿಸುವವರು, ಅವರ ಮಾತುಗಳನ್ನು ಕೇಳಿರಿ.
ಧರ್ಮೋಪದೇಶಕಾಂಡ 21 : 6 (IRVKN)
ಹತನಾದ ಮನುಷ್ಯನಿಗೆ ಹತ್ತಿರವಿರುವ ಗ್ರಾಮದ ಹಿರಿಯರು, ತಗ್ಗಿನಲ್ಲಿ ಕುತ್ತಿಗೆ ಮುರಿಯಲ್ಪಟ್ಟ ಆ ಮಣಕದ ಮೇಲೆ ತಮ್ಮ ಕೈಗಳನ್ನು ತೊಳೆದುಕೊಂಡು,
ಧರ್ಮೋಪದೇಶಕಾಂಡ 21 : 7 (IRVKN)
“ನಮ್ಮ ಕೈಗಳು ಈ ಹತ್ಯವನ್ನು ಮಾಡಲಿಲ್ಲ, ನಮ್ಮ ಕಣ್ಣುಗಳು ನೋಡಲಿಲ್ಲ.
ಧರ್ಮೋಪದೇಶಕಾಂಡ 21 : 8 (IRVKN)
ಯೆಹೋವನೇ ನೀನು ಬಿಡುಗಡೆಮಾಡಿದ ನಿನ್ನ ಜನರನ್ನು ಕ್ಷಮಿಸಬೇಕು; ಅನ್ಯಾಯವಾದ ನರಹತ್ಯದೋಷ ಫಲವು ನಿನ್ನ ಜನರಾದ ಇಸ್ರಾಯೇಲರಿಗೆ ತಗಲದಿರಲಿ” ಎಂದು ಹೇಳಬೇಕು.
ಧರ್ಮೋಪದೇಶಕಾಂಡ 21 : 9 (IRVKN)
ಆಗ ಆ ರಕ್ತಾಪರಾಧವು ಕ್ಷಮಿಸಲ್ಪಡುವುದು. ಹೀಗೆ ಯೆಹೋವನ ದೃಷ್ಟಿಯಲ್ಲಿ ಸರಿಯಾದುದನ್ನು ಮಾಡುವುದರಿಂದ ನೀವೇ ಅನ್ಯಾಯವಾದ ನರಹತ್ಯದೋಷವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕುವಿರಿ.
ಧರ್ಮೋಪದೇಶಕಾಂಡ 21 : 10 (IRVKN)
ಸೆರೆಯ ಸ್ತ್ರೀಯನ್ನು ಮದುವೆಮಾಡಿಕೊಳ್ಳುವ ಕ್ರಮ ನೀವು ಶತ್ರುಗಳೊಡನೆ ಯುದ್ಧಮಾಡಲಾಗಿ ನಿಮ್ಮ ದೇವರಾದ ಯೆಹೋವನ ಅನುಗ್ರಹದಿಂದ ಅವರನ್ನು ಸೋಲಿಸಿದಾಗ ನೀವು ಅವರನ್ನು ಸೆರೆಯಾಗಿ ಒಯ್ಯಬೇಕು.
ಧರ್ಮೋಪದೇಶಕಾಂಡ 21 : 11 (IRVKN)
ನಿಮ್ಮಲ್ಲಿ ಯಾವನಾದರೂ ಸೆರೆಯವರಲ್ಲಿ ಸುಂದರ ಸ್ತ್ರೀಯನ್ನು ಕಂಡು ಮೋಹಿಸಿ ಮದುವೆಮಾಡಿಕೊಳ್ಳಬೇಕೆಂದು ಅಪೇಕ್ಷಿಸಿದರೆ,
ಧರ್ಮೋಪದೇಶಕಾಂಡ 21 : 12 (IRVKN)
ಅವಳನ್ನು ಮನೆಗೆ ಕರೆದುಕೊಂಡು ಬರಲಿ, ತರುವಾಯ ಅವಳು ಕ್ಷೌರಮಾಡಿಸಿಕೊಂಡು, ಉಗುರುಗಳನ್ನು ಕತ್ತರಿಸಿಕೊಳ್ಳುವಳು.
ಧರ್ಮೋಪದೇಶಕಾಂಡ 21 : 13 (IRVKN)
ಅವಳು ಸೆರೆಯ ಬಟ್ಟೆಗಳನ್ನು ತೆಗೆದಿಟ್ಟು, ಅವನ ಮನೆಯಲ್ಲಿ ಒಂದು ತಿಂಗಳಿನ ವರೆಗೆ ತಾಯಿ ಮತ್ತು ತಂದೆಗಳ ವಿಯೋಗದ ನಿಮಿತ್ತ ಹಂಬಲಿಸಲಿ. ಆಮೇಲೆ ಅವನು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬಹುದು.
ಧರ್ಮೋಪದೇಶಕಾಂಡ 21 : 14 (IRVKN)
ತರುವಾಯ ಅವಳು ಅವನಿಗೆ ಇಷ್ಟವಾಗದೆಹೋದರೆ ಅವನು ಅವಳನ್ನು ಅವಳ ಮನಸ್ಸು ಬಂದಲ್ಲಿಗೆ ಕಳುಹಿಸಿಬಿಡಬೇಕು. ಅವಳನ್ನು ಸಂಗಮಿಸಿದ್ದರಿಂದ ಹಣ ಕೊಟ್ಟು ದಾಸತ್ವಕ್ಕೆ ಮಾರಲೂ ಬಾರದು, ದಾಸಿಯಂತೆ ನಡಿಸಲೂ ಬಾರದು.
ಧರ್ಮೋಪದೇಶಕಾಂಡ 21 : 15 (IRVKN)
ಚೊಚ್ಚಲ ಮಗನ ಹಕ್ಕು ಯಾವನಾದರು ಇಬ್ಬರು ಹೆಂಡತಿಯರನ್ನು ಮಾಡಿಕೊಂಡು ಅವರಲ್ಲಿ ಒಬ್ಬಳನ್ನು ಪ್ರೀತಿಸಿ, ಮತ್ತೊಬ್ಬಳನ್ನು ತಿರಸ್ಕರಿಸುವ ಸಂದರ್ಭ ಬಂದಾಗ ಅವರಿಬ್ಬರೂ ಅವನಿಂದ ಮಕ್ಕಳನ್ನು ಪಡೆದಿದ್ದರೆ, ಚೊಚ್ಚಲು ಮಗನು ತಿರಸ್ಕರಿಸಲ್ಪಟ್ಟವಳಲ್ಲಿಯೇ ಹುಟ್ಟಿದ್ದರೆ,
ಧರ್ಮೋಪದೇಶಕಾಂಡ 21 : 16 (IRVKN)
ತಂದೆಯಾದವನು ತನ್ನ ಆಸ್ತಿಯನ್ನು ಮಕ್ಕಳಿಗೆ ಸ್ವತ್ತಾಗಿ ಕೊಡುವಾಗ ಆ ತಿರಸ್ಕರಿಸಲ್ಪಟ್ಟವಳ ಮಗನನ್ನು ತಳ್ಳಿಬಿಟ್ಟು ತಾನು ಪ್ರೀತಿಸುವ ಹೆಂಡತಿಯ ಮಗನನ್ನೇ ಚೊಚ್ಚಲನೆಂದು ಭಾವಿಸಬಾರದು.
ಧರ್ಮೋಪದೇಶಕಾಂಡ 21 : 17 (IRVKN)
ತಿರಸ್ಕರಿಸಲ್ಪಟ್ಟವಳ ಮಗನೇ ಚೊಚ್ಚಲನೆಂದು ಒಪ್ಪಿ, ಅವನಿಗೆ ಎರಡು ಭಾಗಗಳನ್ನು ಕೊಡಬೇಕು. ಅವನೇ ತಂದೆಯ ವೀರ್ಯಕ್ಕೆ ಪ್ರಥಮಫಲವೂ ಮತ್ತು ಚೊಚ್ಚಲುತನದ ಹಕ್ಕಿಗೆ ಬಾಧ್ಯನೂ ಆಗಿದ್ದಾನಲ್ಲಾ.
ಧರ್ಮೋಪದೇಶಕಾಂಡ 21 : 18 (IRVKN)
ದುಷ್ಟಪುತ್ರನ ಶಿಕ್ಷಾಕ್ರಮ ಒಬ್ಬ ಮಗನು ತಂದೆತಾಯಿಗಳ ಆಜ್ಞೆಗೆ ಒಳಗಾಗದೆ ಶಿಕ್ಷಿಸಲ್ಪಟ್ಟರೂ, ಮೊಂಡನೂ ಮತ್ತು ಅವಿಧೇಯನೂ ಆಗಿ,
ಧರ್ಮೋಪದೇಶಕಾಂಡ 21 : 19 (IRVKN)
ಅವರ ಮಾತನ್ನು ಕೇಳದೆಹೋದರೆ ತಂದೆತಾಯಿಗಳು ಅವನನ್ನು ಹಿಡಿದು,
ಧರ್ಮೋಪದೇಶಕಾಂಡ 21 : 20 (IRVKN)
ಊರು ಬಾಗಿಲಿಗೆ ಹಿರಿಯರ ಮುಂದೆ ತಂದು ಅವರಿಗೆ, “ಈ ನಮ್ಮ ಮಗನು ನಮ್ಮ ಮಾತನ್ನು ಕೇಳುವುದೇ ಇಲ್ಲ, ಆಜ್ಞೆಗೆ ಒಳಗಾಗುವುದಿಲ್ಲ; ಇವನು ಮೊಂಡ, ಕುಡುಕ ಮತ್ತು ಹೊಟ್ಟೆಬಾಕ” ಎಂದು ಸಾಕ್ಷಿಹೇಳಬೇಕು.
ಧರ್ಮೋಪದೇಶಕಾಂಡ 21 : 21 (IRVKN)
ಆಗ ಊರಿನವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಿಬಿಡಬೇಕು. ಇಸ್ರಾಯೇಲರೆಲ್ಲರೂ ಇದನ್ನು ಕೇಳಿ ಭಯಪಡುವರು.
ಧರ್ಮೋಪದೇಶಕಾಂಡ 21 : 22 (IRVKN)
ಮರಕ್ಕೆ ತೂಗಹಾಕಲ್ಪಟ್ಟವನನ್ನು ಹೂಣಿಡುವ ಕ್ರಮ ಅಪರಾಧ ಮಾಡಿದವನು ಮರಣಶಿಕ್ಷೆಯನ್ನು ಹೊಂದಿದ ಮೇಲೆ ನೀವು ಅವನ ಶವವನ್ನು ಮರದ ಕಂಬಕ್ಕೆ ತೂಗುಹಾಕಿದರೆ,
ಧರ್ಮೋಪದೇಶಕಾಂಡ 21 : 23 (IRVKN)
ಅದು ರಾತ್ರಿಯೆಲ್ಲಾ ಮರದ ಮೇಲೆ ಇರಬಾರದು; ಅದೇ ದಿನದಲ್ಲಿ ಅದನ್ನು ನೆಲದಲ್ಲಿ ಹೂಣಿಡಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶವು ಅಪವಿತ್ರವಾಗಬಾರದು. ಮರಕ್ಕೆ ತೂಗಹಾಕಲ್ಪಟ್ಟವನು ದೇವರ ಶಾಪವನ್ನು ಹೊಂದಿದವನಾಗಿರುತ್ತಾನೆ.

1 2 3 4 5 6 7 8 9 10 11 12 13 14 15 16 17 18 19 20 21 22 23