ಧರ್ಮೋಪದೇಶಕಾಂಡ 23 : 1 (IRVKN)
{ಸಭೆಯಿಂದ ಬಹಿಷ್ಕಾರ ಮಾಡುವುದರ ವಿಷಯ} [PS] ಬೀಜಹೊಡಿಸಿಕೊಂಡವರು [* ಬೀಜಹೊಡಿಸಿಕೊಂಡವರು ವೀರ್ಯನಾಶ.] ಅಥವಾ ರಹಸ್ಯಾಂಗವನ್ನು [† ರಹಸ್ಯಾಂಗವನ್ನು ಜನನೇಂದ್ರಿಯ. ] ಛೇದಿಸಿಕೊಂಡವರು ಯೆಹೋವನ ಸಭೆಯಲ್ಲಿ ಸೇರಬಾರದು.
ಧರ್ಮೋಪದೇಶಕಾಂಡ 23 : 2 (IRVKN)
ಅನೈತಿಕ ಸಂಬಂಧದಿಂದ ಹುಟ್ಟಿದ ಸಂತತಿಯವರು, ಹತ್ತನೆಯ ತಲೆಯವರಾದರೂ ಅವರು ಯೆಹೋವನ ಸಭೆಗೆ ಸೇರಬಾರದು. [PE][PS]
ಧರ್ಮೋಪದೇಶಕಾಂಡ 23 : 3 (IRVKN)
ಅಮ್ಮೋನಿಯರಾಗಲಿ ಅಥವಾ ಮೋವಾಬ್ಯರಾಗಲಿ ಯೆಹೋವನ ಸಭೆಗೆ ಎಂದೆಂದಿಗೂ ಸೇರಬಾರದು. ಅವರ ಸಂತತಿಯವರು ಹತ್ತನೆಯ ತಲೆಯವರಾದರೂ ಯೆಹೋವನ ಸಭೆಗೆ ಸೇರಬಾರದು.
ಧರ್ಮೋಪದೇಶಕಾಂಡ 23 : 4 (IRVKN)
ಯಾಕೆಂದರೆ ನೀವು ಐಗುಪ್ತದೇಶದಿಂದ ಬಂದಾಗ ಅಮ್ಮೋನಿಯರು ಅನ್ನಪಾನಗಳನ್ನು ತಂದು ನಿಮ್ಮನ್ನು ಎದುರುಗೊಳ್ಳಲಿಲ್ಲ; ಮೋವಾಬ್ಯರು ನಿಮ್ಮನ್ನು ಶಪಿಸುವುದಕ್ಕಾಗಿ ಬೆಯೋರನ ಮಗನಾದ ಬಿಳಾಮನಿಗೆ ಹಣಕೊಟ್ಟು ಎರಡು ನದಿಗಳ ಮಧ್ಯದಲ್ಲಿರುವ ಅರಾಮಿನ ಪೆತೋರ್ ಊರಿನಿಂದ ಅವನನ್ನು ಕರೆಯಿಸಿದರು.
ಧರ್ಮೋಪದೇಶಕಾಂಡ 23 : 5 (IRVKN)
ಆದರೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸದೆ ಅವನಿಂದ ಶಾಪವನ್ನು ನುಡಿಸದೆ ಆಶೀರ್ವಾದವನ್ನೇ ಹೇಳಿಸಿದನು.
ಧರ್ಮೋಪದೇಶಕಾಂಡ 23 : 6 (IRVKN)
ನಿಮ್ಮ ಜೀವಮಾನಕಾಲವೆಲ್ಲಾ ಅವರ ಯೋಗಕ್ಷೇಮವನ್ನು ಬಯಸಲೇ ಬಾರದು. [PE][PS]
ಧರ್ಮೋಪದೇಶಕಾಂಡ 23 : 7 (IRVKN)
ಎದೋಮ್ಯರನ್ನು ಸಂಪೂರ್ಣವಾಗಿ ನಿಷೇಧಿಸಬಾರದು; ಅವರು ನಮ್ಮ ಹತ್ತಿರ ಸಂಬಂಧಿಕರು. ಐಗುಪ್ತ್ಯರನ್ನೂ ಸಂಪೂರ್ಣವಾಗಿ ನಿಷೇಧಿಸಬಾರದು; ಅವರ ದೇಶದಲ್ಲಿ ನೀವು ಪ್ರವಾಸಿಗಳಾಗಿದ್ದಿರಲ್ಲಾ.
ಧರ್ಮೋಪದೇಶಕಾಂಡ 23 : 8 (IRVKN)
ಅವರ ಸಂತತಿಯವರಲ್ಲಿ ಮೂರನೆಯ ತಲೆಯವರು ಯೆಹೋವನ ಸಭೆಗೆ ಸೇರಬಹುದು. [PS]
ಧರ್ಮೋಪದೇಶಕಾಂಡ 23 : 9 (IRVKN)
{ಯುದ್ಧಕಾಲದಲ್ಲಿ ಪಾಳೆಯವು ನಿರ್ಮಲವಾಗಿರಬೇಕೆಂಬ ನಿಯಮ} [PS] ನೀವು ಶತ್ರುಗಳೊಡನೆ ಯುದ್ಧಕ್ಕೆ ಹೊರಟು ಪಾಳೆಯದಲ್ಲಿರುವಾಗ ಯಾವ ಅಶುದ್ಧ ಕಾರ್ಯಗಳು ನಡೆಯದಂತೆ ಎಚ್ಚರದಿಂದಿರಬೇಕು.
ಧರ್ಮೋಪದೇಶಕಾಂಡ 23 : 10 (IRVKN)
ರಾತ್ರಿಕಾಲದಲ್ಲಿ ವೀರ್ಯಸ್ಖಲನದಿಂದ ಯಾವನಾದರೂ ಅಶುದ್ಧನಾದರೆ, ಅವನು ಪಾಳೆಯದೊಳಗೆ ಇರದೆ ಹೊರಗೆ ಇರಬೇಕು.
ಧರ್ಮೋಪದೇಶಕಾಂಡ 23 : 11 (IRVKN)
ಅವನು ಸಂಜೆಯ ವೇಳೆಯಲ್ಲಿ ಸ್ನಾನಮಾಡಿ ಸೂರ್ಯನು ಮುಳುಗಿದ ಮೇಲೆ ಪಾಳೆಯದೊಳಗೆ ಬರಬಹುದು.
ಧರ್ಮೋಪದೇಶಕಾಂಡ 23 : 12 (IRVKN)
ಪಾಳೆಯದ ಹೊರಗೆ ಪಾಯಖಾನೆಗಾಗಿ ಒಂದು ಸ್ಥಳವನ್ನು ಗೊತ್ತುಮಾಡಬೇಕು.
ಧರ್ಮೋಪದೇಶಕಾಂಡ 23 : 13 (IRVKN)
ಯುದ್ಧದ ಸಾಮಾನುಗಳಲ್ಲದೆ ನಿಮ್ಮ ಬಳಿಯಲ್ಲಿ ಸಲಿಕೆ ಇರಬೇಕು; ನೀವು ಬಹಿರ್ಭೂಮಿಗೆ ಹೋದಾಗ ಆ ಸಲಿಕೆಯಿಂದ ಅಗೆದು ಕಲ್ಮಷವನ್ನು ಮುಚ್ಚಿಬಿಡಬೇಕು.
ಧರ್ಮೋಪದೇಶಕಾಂಡ 23 : 14 (IRVKN)
ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಕಾಪಾಡುವುದಕ್ಕೂ, ಶತ್ರುಗಳನ್ನು ನಿಮ್ಮ ಕೈವಶಮಾಡುವುದಕ್ಕೂ ನಿಮ್ಮ ಪಾಳೆಯದೊಳಗೆ ಸಂಚಾರಮಾಡುತ್ತಾನಲ್ಲಾ; ಆದುದರಿಂದ ಪಾಳೆಯವು ನಿಮರ್ಲವಾಗಿರಬೇಕು; ನಿಮ್ಮಲ್ಲಿ ಅಶುದ್ಧವೇನಾದರೂ ಕಂಡುಬಂದರೆ ಆತನು ನಿಮ್ಮನ್ನು ಬಿಟ್ಟುಹೋದಾನು. [PS]
ಧರ್ಮೋಪದೇಶಕಾಂಡ 23 : 15 (IRVKN)
{ತಪ್ಪಿಸಿಕೊಂಡ ದಾಸರನ್ನು ದಣಿಗೆ ವಶಪಡಿಸಬಾರದೆಂಬ ವಿಧಿ} [PS] ತಪ್ಪಿಸಿಕೊಂಡ ಗುಲಾಮನು ನಿಮ್ಮಲ್ಲಿರುವುದಕ್ಕೆ ಬಂದರೆ ಅವನನ್ನು ಅವನ ದಣಿಗೆ ಪುನಃ ವಶಪಡಿಸಬಾರದು.
ಧರ್ಮೋಪದೇಶಕಾಂಡ 23 : 16 (IRVKN)
ನಿಮ್ಮ ಊರುಗಳಲ್ಲಿ ಯಾವ ಸ್ಥಳವು ಅವನಿಗೆ ಇಷ್ಟವಾಗಿದೆಯೋ ಅಲ್ಲೇ ಅವನು ವಾಸವಾಗಿರಬಹುದು; ಅವನನ್ನು ನಿರ್ಬಂಧಪಡಿಸಬಾರದು ಹಾಗೂ ನೀವು ಅವನನ್ನು ಮತ್ತೆ ಶೋಷಣೆಗೆ ಗುರಿಮಾಡಬಾರದು. [PS]
ಧರ್ಮೋಪದೇಶಕಾಂಡ 23 : 17 (IRVKN)
{ವ್ಯಭಿಚಾರ ನಿಷಿದ್ಧವಾದದ್ದು} [PS] ಇಸ್ರಾಯೇಲರಲ್ಲಿ ಯಾವ ಸ್ತ್ರೀಯೂ ದೇವದಾಸಿಯಾಗಬಾರದು; ಯಾವ ಪುರುಷನೂ ಅಂತಹ ವೇಶ್ಯೆತನಕ್ಕೆ ಇಳಿಯಬಾರದು.
ಧರ್ಮೋಪದೇಶಕಾಂಡ 23 : 18 (IRVKN)
ಇಸ್ರಾಯೇಲರ ಪುರುಷ ಅಥವಾ ಸ್ತ್ರೀಯೂ ವ್ಯಭಿಚಾರದಿಂದ ಸಂಪಾದಿಸಿದ ಹಣವನ್ನು ಹರಕೆಯಾಗಿ ನಿಮ್ಮ ದೇವರಾದ ಯೆಹೋವನ ಆಲಯದೊಳಗೆ ತರಲೇಬಾರದು. ಈ ಎರಡೂ ಯೆಹೋವನಿಗೆ ಅಸಹ್ಯವಾದ ವಿಷಯ. [PS]
ಧರ್ಮೋಪದೇಶಕಾಂಡ 23 : 19 (IRVKN)
{ಸ್ವದೇಶದವನಿಂದ ಬಡ್ಡಿ ತೆಗೆದುಕೊಳ್ಳಬಾರದೆಂಬ ವಿಧಿ} [PS] ಹಣವನ್ನಾಗಲಿ, ಆಹಾರಪದಾರ್ಥಗಳನ್ನಾಗಲಿ ಬೇರೆ ಯಾವುದನ್ನಾಗಲಿ ಪರದೇಶದವನಿಗೆ ಬಡ್ಡಿಗೆ ಕೊಡಬಹುದೇ ಹೊರತು ಸ್ವದೇಶದವನಿಗೆ ಕೊಡಬಾರದು.
ಧರ್ಮೋಪದೇಶಕಾಂಡ 23 : 20 (IRVKN)
ಹೀಗೆ ನಡೆದರೆ ನೀವು ಸ್ವದೇಶವಾಗಿ ಪಡೆಯಲಿರುವ ದೇಶದಲ್ಲಿ ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿಯೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸುವನು. [PS]
ಧರ್ಮೋಪದೇಶಕಾಂಡ 23 : 21 (IRVKN)
{ಹರಕೆಯನ್ನು ನೆರವೇರಿಸಬೇಕೆಂಬ ವಿಧಿ} [PS] ನಿಮ್ಮ ದೇವರಾದ ಯೆಹೋವನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಆತನು ತಪ್ಪದೆ ಅದನ್ನು ವಿಚಾರಿಸುವನು; ತೀರಿಸದೆ ಹೋಗುವುದು ಪಾಪ.
ಧರ್ಮೋಪದೇಶಕಾಂಡ 23 : 22 (IRVKN)
ನೀವು ಹರಕೆಮಾಡದಿದ್ದರೆ ದೋಷವೇನೂ ಇರಲಿಲ್ಲ;
ಧರ್ಮೋಪದೇಶಕಾಂಡ 23 : 23 (IRVKN)
ಆದರೆ ಬಾಯಿಂದ ನುಡಿದದ್ದನ್ನು ನೆರವೇರಿಸಲೇಬೇಕು. ನಿಮ್ಮ ದೇವರಾದ ಯೆಹೋವನಿಗೆ ಬಾಯಿಂದ ಹರಕೆಮಾಡಿಕೊಂಡಂತೆಯೇ ಅದನ್ನು ಒಪ್ಪಿಸಿಬಿಡಬೇಕು. [PS]
ಧರ್ಮೋಪದೇಶಕಾಂಡ 23 : 24 (IRVKN)
{ಮತ್ತೊಬ್ಬನ ಬೆಳೆಯ ವಿಷಯದಲ್ಲಿ ನಡೆದುಕೊಳ್ಳತಕ್ಕ ಕ್ರಮ} [PS] ಮತ್ತೊಬ್ಬನ ದ್ರಾಕ್ಷಿತೋಟದಲ್ಲಿ ನೀವು ಹೋಗುತ್ತಿರುವಾಗ ಇಷ್ಟಾನುಸಾರವಾಗಿ ಹಣ್ಣುಗಳನ್ನು ತಿನ್ನಬಹುದೇ ಹೊರತು ಪಾತ್ರೆಯಲ್ಲಿ ತುಂಬಿಕೊಂಡು ಹೋಗಬಾರದು.
ಧರ್ಮೋಪದೇಶಕಾಂಡ 23 : 25 (IRVKN)
ಮತ್ತೊಬ್ಬನ ಪೈರಿನಲ್ಲಿ ಹೋಗುತ್ತಿರುವಾಗ ತೆನೆಗಳನ್ನು ಕೈಯಿಂದ ಮುರಿದುಕೊಳ್ಳಬಹುದೇ ಹೊರತು ಆ ಪೈರಿಗೆ ಕುಡುಗೋಲು ಹಾಕಬಾರದು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25

BG:

Opacity:

Color:


Size:


Font: