ಧರ್ಮೋಪದೇಶಕಾಂಡ 25 : 1 (IRVKN)
ಅಪರಾಧಿಗೆ ಆಗಬೇಕಾದ ಶಿಕ್ಷೆ ಇಬ್ಬರು ವ್ಯಾಜ್ಯವಾಡುತ್ತಾ ನ್ಯಾಯಾಧಿಪತಿಗಳ ಬಳಿಗೆ ಬಂದರೆ, ನ್ಯಾಯಾಧಿಪತಿಗಳು ತಪ್ಪಿಲ್ಲದವನನ್ನು ನಿರಪರಾಧಿ ಎಂದೂ ತಪ್ಪುಳ್ಳವನನ್ನು ಅಪರಾಧಿ ಎಂದೂ ತೀರ್ಮಾನಿಸಬೇಕು.
ಧರ್ಮೋಪದೇಶಕಾಂಡ 25 : 2 (IRVKN)
ಅಪರಾಧಿಗೆ ಪೆಟ್ಟಿನ ಶಿಕ್ಷೆ ತೀರ್ಮಾನವಾದರೆ ನ್ಯಾಯಾಧಿಪತಿಯು ಅವನನ್ನು ಮಲಗಿಸಿ, ಅವನ ಅಪರಾಧಕ್ಕೆ ಅನುಸಾರವಾಗಿ ಪೆಟ್ಟುಗಳನ್ನು ತನ್ನ ಮುಂದೆಯೇ ಹೊಡಿಸಿ ಲೆಕ್ಕಿಸಬೇಕು.
ಧರ್ಮೋಪದೇಶಕಾಂಡ 25 : 3 (IRVKN)
ಪೆಟ್ಟುಗಳ ಶಿಕ್ಷೆಯು ನಲ್ವತ್ತಕ್ಕಿಂತ ಹೆಚ್ಚಿರಬಾರದು. ಅದಕ್ಕಿಂತ ಹೆಚ್ಚು ಪೆಟ್ಟುಗಳನ್ನು ನೀವು ಹೊಡಿಸಿದರೆ ನಿಮ್ಮ ಸ್ವದೇಶದವನನ್ನು ನೀವು ಕೇವಲ ನೀಚನನ್ನಾಗಿ ಕಂಡಂತೆ ಆಗುವುದು.
ಧರ್ಮೋಪದೇಶಕಾಂಡ 25 : 4 (IRVKN)
ಧರ್ಮೋಪದೇಶಕಾಂಡ 25 : 5 (IRVKN)
ಕಣತುಳಿಯುವ ಎತ್ತಿನ ಬಾಯಿಯನ್ನು ಕಟ್ಟಬಾರದು. ಮೈದುನನಿಂದ ವಂಶಾಭಿವೃದ್ಧಿ ಆಗಬೇಕೆಂಬ ವಿಷಯ ಅಣ್ಣತಮ್ಮಂದಿರು ಒಂದೇ ಕುಟುಂಬದಲ್ಲಿರುವಾಗ ಅಣ್ಣನು ಮಗನಿಲ್ಲದೆ ಸತ್ತರೆ, ಅವನ ಹೆಂಡತಿ ಬೇರೆ ಪುರುಷನನ್ನು ಮದುವೆಯಾಗಬಾರದು. ಅವಳ ಮೈದುನನು ಅವಳನ್ನು ಹೆಂಡತಿಯನ್ನಾಗಿ ತೆಗೆದುಕೊಂಡು ಮೈದುನಧರ್ಮವನ್ನು ನೆರವೇರಿಸಬೇಕು.
ಧರ್ಮೋಪದೇಶಕಾಂಡ 25 : 6 (IRVKN)
ಅವಳಲ್ಲಿ ಹುಟ್ಟುವ ಚೊಚ್ಚಲಮಗನು ಸತ್ತವನ ಮಗನೆಂದು ಎಣಿಸಲ್ಪಡಬೇಕು. ಹೀಗೆ ಮಾಡುವುದರಿಂದ ಸತ್ತವನ ಹೆಸರು ಇಸ್ರಾಯೇಲರೊಳಗಿಂದ ಅಳಿಸಿ ಹೋಗುವುದಿಲ್ಲ.
ಧರ್ಮೋಪದೇಶಕಾಂಡ 25 : 7 (IRVKN)
ತಮ್ಮನು ಅಣ್ಣನ ಹೆಂಡತಿಯನ್ನು ಪರಿಗ್ರಹಿಸದೆ ಹೋದರೆ ಅವಳು ಊರ ಬಾಗಿಲಿಗೆ ಹೋಗಿ ಅಲ್ಲಿಯ ಹಿರಿಯರಿಗೆ, “ನನ್ನ ಗಂಡನ ತಮ್ಮನು ತನ್ನ ಅಣ್ಣನ ಹೆಸರನ್ನು ಉಳಿಸುವುದಕ್ಕೆ ಸಿದ್ಧನಿಲ್ಲ. ಅವನು ಮೈದುನಧರ್ಮವನ್ನು ನಡೆಸುವುದಿಲ್ಲ ಅನ್ನುತ್ತಾನೆ” ಎಂದು ತಿಳಿಸಬೇಕು.
ಧರ್ಮೋಪದೇಶಕಾಂಡ 25 : 8 (IRVKN)
ಆಗ ಆ ಊರಿನ ಹಿರಿಯರು ಅವನನ್ನು ಕರೆಯಿಸಿ ವಿಚಾರಿಸಿದಲ್ಲಿ ಅವನು ಅವರ ಮುಂದೆ ನಿಂತು, “ಈಕೆಯನ್ನು ಪರಿಗ್ರಹಿಸುವುದಕ್ಕೆ ನನಗೆ ಇಷ್ಟವಿಲ್ಲ” ಎಂದು ಹೇಳುವ ಪಕ್ಷಕ್ಕೆ,
ಧರ್ಮೋಪದೇಶಕಾಂಡ 25 : 9 (IRVKN)
ಅವನ ಅತ್ತಿಗೆ ಹಿರಿಯರ ಎದುರಿನಲ್ಲಿ ಅವನ ಕೆರವನ್ನು ಅವನ ಕಾಲಿನಿಂದ ತೆಗೆದುಬಿಟ್ಟು, ಅವನ ಮುಖದ ಮೇಲೆ ಉಗುಳಿ, “ಅಣ್ಣನಿಗೋಸ್ಕರ ಸಂತಾನವನ್ನು ವೃದ್ಧಿಗೊಳಿಸುವುದಕ್ಕೆ ಮನಸ್ಸಿಲ್ಲದವರೆಲ್ಲರಿಗೆ ಇಂಥ ಅವಮಾನವಾಗಲಿ” ಎಂದು ಹೇಳಬೇಕು.
ಧರ್ಮೋಪದೇಶಕಾಂಡ 25 : 10 (IRVKN)
ಇಸ್ರಾಯೇಲರಲ್ಲಿ ಆ ಮನುಷ್ಯನ ಮನೆಯವರಿಗೆ, “ಕೆರವನ್ನು ಬಿಚ್ಚಿಸಿಕೊಂಡವನ ಮನೆಯವರು” ಎಂದು ಹೆಸರುಂಟಾಗುವುದು.
ಧರ್ಮೋಪದೇಶಕಾಂಡ 25 : 11 (IRVKN)
ಲಜ್ಜಾಹೀನಳಿಗೆ ಆಗಬೇಕಾದ ಶಿಕ್ಷೆ ಇಬ್ಬರು ಜಗಳವಾಡುತ್ತಿರಲಾಗಿ ಅವರಲ್ಲಿ ಒಬ್ಬನ ಹೆಂಡತಿ ಬಂದು ತನ್ನ ಗಂಡನನ್ನು ಬಿಡಿಸಬೇಕೆಂದು ಆ ಪರಪುರುಷನ ಜನನೇಂದ್ರಿಯವನ್ನು ಹಿಡಿದುಕೊಂಡರೆ,
ಧರ್ಮೋಪದೇಶಕಾಂಡ 25 : 12 (IRVKN)
ಅವನು ಅವಳನ್ನು ಕನಿಕರಿಸದೆ ಅವಳ ಕೈಯನ್ನು ಕಡಿದುಹಾಕಬೇಕು.
ಧರ್ಮೋಪದೇಶಕಾಂಡ 25 : 13 (IRVKN)
ವ್ಯಾಪಾರದ ಅಳತೆತೂಕಗಳ ವಿಧಿ ಹೆಚ್ಚು ಕಡಿಮೆಯಾಗಿರುವ ಎರಡು ವಿಧವಾದ ತೂಕದ ಕಲ್ಲುಗಳನ್ನು ನಿಮ್ಮ ಚೀಲದಲ್ಲಿ ಇಟ್ಟುಕೊಳ್ಳಬಾರದು.
ಧರ್ಮೋಪದೇಶಕಾಂಡ 25 : 14 (IRVKN)
ಹೆಚ್ಚುಕಡಿಮೆಯಾದ ಎರಡು ವಿಧವಾದ ಸೇರುಗಳು ಹಾಗೂ ಮೋಸ ಮಾಡುವ ತೂಕದ ಕಲ್ಲುಗಳು ನಿಮ್ಮ ಮನೆಯಲ್ಲಿ ಇರಬಾರದು.
ಧರ್ಮೋಪದೇಶಕಾಂಡ 25 : 15 (IRVKN)
ನಿಮ್ಮ ತೂಕದ ಕಲ್ಲೂ ಮತ್ತು ನಿಮ್ಮ ಅಳತೆಯ ಸೇರೂ ನ್ಯಾಯವಾಗಿಯೇ ಇರಬೇಕು. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಬಹುಕಾಲ ಬಾಳುವಿರಿ.
ಧರ್ಮೋಪದೇಶಕಾಂಡ 25 : 16 (IRVKN)
ನ್ಯಾಯವಿರುದ್ಧವಾದ ಅಳತೆತೂಕಗಳನ್ನು ಮಾಡುವವರೆಲ್ಲರೂ ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯರಾಗಿದ್ದಾರೆ.
ಧರ್ಮೋಪದೇಶಕಾಂಡ 25 : 17 (IRVKN)
ಅಮಾಲೇಕ್ಯರನ್ನು ಸಂಹಾರಮಾಡಬೇಕೆಂಬ ವಿಧಿ ನೀವು ಐಗುಪ್ತದೇಶದಿಂದ ಬರುವಾಗ ದಾರಿಯಲ್ಲಿ ಅಮಾಲೇಕ್ಯರು ನಿಮ್ಮನ್ನು ಎದುರಿಸಿದ್ದನ್ನು ಜ್ಞಾಪಿಸಿಕೊಳ್ಳಿರಿ.
ಧರ್ಮೋಪದೇಶಕಾಂಡ 25 : 18 (IRVKN)
ಅವರು ದೇವರಲ್ಲಿ ಸ್ವಲ್ಪವೂ ಭಯಭಕ್ತಿಯಿಲ್ಲದವರಾಗಿ, ನೀವು ದಣಿದು ಮತ್ತು ಬಳಲಿದಾಗ ನಿಮ್ಮವರಲ್ಲಿ ಹಿಂದೆಬಿದ್ದ ಬಲಹೀನರನ್ನು ಸಂಹಾರ ಮಾಡಿದರು.
ಧರ್ಮೋಪದೇಶಕಾಂಡ 25 : 19 (IRVKN)
ಆದಕಾರಣ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿಮ್ಮನ್ನು ಸೇರಿಸಿ ಸುತ್ತಲು ಯಾವ ಶತ್ರುಗಳೂ ಇಲ್ಲದಂತೆ ಮಾಡಿದಾಗ ಭೂಮಿಯ ಮೇಲೆ ಅಮಾಲೇಕ್ಯರ ಹೆಸರೇ ಉಳಿಯದಂತೆ ನೀವು ಮಾಡಬೇಕು; ಇದನ್ನು ಮರೆಯಬಾರದು.

1 2 3 4 5 6 7 8 9 10 11 12 13 14 15 16 17 18 19