ಧರ್ಮೋಪದೇಶಕಾಂಡ 27 : 1 (IRVKN)
ಕಲ್ಲಿನ ಕಂಬಗಳ ಮೇಲೆ ಕೆತ್ತಿಸಬೇಕಾದ ಧರ್ಮಶಾಸ್ತ್ರವಾಕ್ಯಗಳು ಮೋಶೆ ಮತ್ತು ಇಸ್ರಾಯೇಲರ ಹಿರಿಯರ ಸಹಿತ ಜನರಿಗೆ, “ನಾನು ಈಗ ನಿಮಗೆ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು.
ಧರ್ಮೋಪದೇಶಕಾಂಡ 27 : 2 (IRVKN)
ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಪ್ರವೇಶಿಸುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟುವಾಗ ನೀವು ದೊಡ್ಡ ಕಲ್ಲುಗಳನ್ನು ನಿಲ್ಲಿಸಿ, ಅವುಗಳಿಗೆ ಗಿಲಾವು ಮಾಡಿಸಬೇಕು.
ಧರ್ಮೋಪದೇಶಕಾಂಡ 27 : 3 (IRVKN)
ನಿಮ್ಮ ಪೂರ್ವಿಕರ ದೇವರಾದ ಯೆಹೋವನು ತಾನು ವಾಗ್ದಾನಮಾಡಿದಂತೆ ನಿಮಗೆ ಕೊಡುವ * ಬಹಳಷ್ಟು ಫಲವತ್ತಾದ ದೇಶ. ಹಾಲೂ ಮತ್ತು ಜೇನೂ ಹರಿಯುವ ದೇಶವನ್ನು ಪ್ರವೇಶಿಸುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟುವಾಗ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಆ ದೊಡ್ಡ ಕಲ್ಲುಗಳ ಮೇಲೆ ಬರೆಯಿಸಬೇಕು.
ಧರ್ಮೋಪದೇಶಕಾಂಡ 27 : 4 (IRVKN)
ನೀವು ಯೊರ್ದನ್ ನದಿಯನ್ನು ದಾಟಿದ ನಂತರ ನಾನು ಈಗ ಆಜ್ಞಾಪಿಸಿದ ಕಲ್ಲುಗಳನ್ನು ಏಬಾಲ್ ಬೆಟ್ಟದ ಮೇಲೆ ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಬೇಕು.
ಧರ್ಮೋಪದೇಶಕಾಂಡ 27 : 5 (IRVKN)
“ಅಲ್ಲಿ ನಿಮ್ಮ ದೇವರಾದ ಯೆಹೋವನಿಗೋಸ್ಕರ ನೀವು ಕಲ್ಲುಗಳಿಂದ ಯಜ್ಞವೇದಿಯನ್ನು ಕಟ್ಟಿಸಬೇಕು.
ಧರ್ಮೋಪದೇಶಕಾಂಡ 27 : 6 (IRVKN)
ಉಳಿ ಮುಂತಾದದ್ದನ್ನು ಉಪಯೋಗಿಸದೆ ಹುಟ್ಟುಕಲ್ಲುಗಳಿಂದಲೇ ನಿಮ್ಮ ದೇವರಾದ ಯೆಹೋವನ ಯಜ್ಞವೇದಿಯನ್ನು ಕಟ್ಟಿಸಬೇಕು.
ಧರ್ಮೋಪದೇಶಕಾಂಡ 27 : 7 (IRVKN)
ಅಲ್ಲಿ ಸರ್ವಾಂಗಹೋಮಗಳನ್ನೂ ಮತ್ತು ಸಮಾಧಾನಯಜ್ಞಗಳನ್ನೂ ಸಮರ್ಪಿಸಿ, ಸಹಭೋಜನಮಾಡಿ, ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮಿಸಬೇಕು.
ಧರ್ಮೋಪದೇಶಕಾಂಡ 27 : 8 (IRVKN)
ನೀವು ಆ ಕಲ್ಲುಗಳ ಮೇಲೆ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಸ್ಪಷ್ಟವಾಗಿ ಬರೆಯಬೇಕು” ಎಂದು ಆಜ್ಞಾಪಿಸಿದನು.
ಧರ್ಮೋಪದೇಶಕಾಂಡ 27 : 9 (IRVKN)
ಮೋಶೆ, ಯಾಜಕರು ಮತ್ತು ಲೇವಿಯರೊಡನೆ ಇಸ್ರಾಯೇಲರೆಲ್ಲರಿಗೆ, “ಇಸ್ರಾಯೇಲರೇ, ನಿಶ್ಯಬ್ದವಾಗಿದ್ದು ಕೇಳಿರಿ, ನೀವು ಈಗ ನಿಮ್ಮ ದೇವರಾದ ಯೆಹೋವನ ಜನರಾಗಿದ್ದೀರಷ್ಟೆ.
ಧರ್ಮೋಪದೇಶಕಾಂಡ 27 : 10 (IRVKN)
ಆದುದರಿಂದ ಈಗ ನಾನು ನಿಮಗೆ ಹೇಳುವ ನಿಮ್ಮ ದೇವರಾದ ಯೆಹೋವನ ಮಾತುಗಳಿಗೆ ಕಿವಿಗೊಟ್ಟು ಆತನ ಆಜ್ಞಾವಿಧಿಗಳನ್ನು ಅನುಸರಿಸಬೇಕು” ಎಂದು ಹೇಳಿದನು.
ಧರ್ಮೋಪದೇಶಕಾಂಡ 27 : 11 (IRVKN)
ಅವಿಧೇಯರಿಗೆ ಶಾಪಗಳು ಮೋಶೆ ಆ ದಿನದಲ್ಲಿ ಜನರಿಗೆ ಆಜ್ಞಾಪಿಸಿದ್ದೇನೆಂದರೆ,
ಧರ್ಮೋಪದೇಶಕಾಂಡ 27 : 12 (IRVKN)
“ನೀವು ಯೊರ್ದನ್ ನದಿಯನ್ನು ದಾಟಿದಾಗ ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಯೋಸೇಫ್ ಮತ್ತು ಬೆನ್ಯಾಮೀನ್ ಎಂಬ ಈ ಕುಲಗಳವರು ಗೆರಿಜ್ಜೀಮ್ ಬೆಟ್ಟದ ಮೇಲೆ ನಿಂತುಕೊಂಡು ಆಶೀರ್ವಾದಗಳನ್ನು ಉಚ್ಚರಿಸಬೇಕು.
ಧರ್ಮೋಪದೇಶಕಾಂಡ 27 : 13 (IRVKN)
ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್ ಮತ್ತು ನಫ್ತಾಲಿ ಎಂಬ ಈ ಕುಲಗಳವರು ಏಬಾಲ್ ಬೆಟ್ಟದ ಮೇಲೆ ನಿಂತುಕೊಂಡು ಶಾಪೋಕ್ತಿಗಳನ್ನು ಉಚ್ಚರಿಸಬೇಕು.
ಧರ್ಮೋಪದೇಶಕಾಂಡ 27 : 14 (IRVKN)
“ಲೇವಿಯರು ಗಟ್ಟಿಯಾದ ಸ್ವರದಿಂದ ಇಸ್ರಾಯೇಲರೆಲ್ಲರಿಗೂ,
ಧರ್ಮೋಪದೇಶಕಾಂಡ 27 : 15 (IRVKN)
‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’ ” ಅನ್ನಬೇಕು.
ಧರ್ಮೋಪದೇಶಕಾಂಡ 27 : 16 (IRVKN)
ಧರ್ಮೋಪದೇಶಕಾಂಡ 27 : 17 (IRVKN)
“ಲೇವಿಯರು, ತಂದೆತಾಯಿಗಳನ್ನು ಅವಮಾನಪಡಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
ಧರ್ಮೋಪದೇಶಕಾಂಡ 27 : 18 (IRVKN)
“ಅವರು, ಮತ್ತೊಬ್ಬನ ಗಡಿಮೇರೆಯನ್ನು ಮೀರಿಬಂದವನು ಶಾಪಗ್ರಸ್ತನು” ಎಂದು ಹೇಳಲು, “ಆಮೆನ್” ಅನ್ನಬೇಕು.
ಧರ್ಮೋಪದೇಶಕಾಂಡ 27 : 19 (IRVKN)
“ಅವರು, ಕುರುಡರಿಗೆ ದಾರಿತಪ್ಪಿಸಿದವನು ಶಾಪಗ್ರಸ್ತನು” ಎಂದು ಹೇಳಲು, “ಆಮೆನ್” ಅನ್ನಬೇಕು.
ಧರ್ಮೋಪದೇಶಕಾಂಡ 27 : 20 (IRVKN)
“ಅವರು, ಪರದೇಶಿ, ಅನಾಥ, ಇವರ ವ್ಯಾಜ್ಯದಲ್ಲಿ ನ್ಯಾಯ ಬಿಟ್ಟು ತೀರ್ಪುಹೇಳಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
ಧರ್ಮೋಪದೇಶಕಾಂಡ 27 : 21 (IRVKN)
“ಅವರು, ಮಲತಾಯಿಯನ್ನು ಸಂಗಮಿಸಿ ತಂದೆಗೆ ಅವಮಾನಪಡಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
ಧರ್ಮೋಪದೇಶಕಾಂಡ 27 : 22 (IRVKN)
“ಅವರು, ಪಶುಸಂಗಮ ಮಾಡಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
ಧರ್ಮೋಪದೇಶಕಾಂಡ 27 : 23 (IRVKN)
“ಅವರು, ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಸಂಗಮಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
ಧರ್ಮೋಪದೇಶಕಾಂಡ 27 : 24 (IRVKN)
“ಅವರು, ಅತ್ತೆಯನ್ನು ಸಂಗಮಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
ಧರ್ಮೋಪದೇಶಕಾಂಡ 27 : 25 (IRVKN)
“ಅವರು, ರಹಸ್ಯವಾಗಿ ನರಹತ್ಯಮಾಡಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
ಧರ್ಮೋಪದೇಶಕಾಂಡ 27 : 26 (IRVKN)
“ಅವರು, ಹಣ ತೆಗೆದುಕೊಂಡು ನಿರಪರಾಧಿಯನ್ನು ಕೊಂದವನು ಶಾಪಗ್ರಸ್ತನು” ಎನ್ನಲಾಗಿ ಜನರೆಲ್ಲರೂ, “ಆಮೆನ್” ಅನ್ನಬೇಕು. “ಅವರು, ಈ ಧರ್ಮಶಾಸ್ತ್ರವಾಕ್ಯಗಳಿಗೆ ಒಡಂಬಟ್ಟು ಕೈಕೊಳ್ಳದೆ ಇರುವವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
❮
❯