ಧರ್ಮೋಪದೇಶಕಾಂಡ 28 : 1 (IRVKN)
{ವಿಧೇಯತೆಯಿಂದ ಸಿಕ್ಕುವ ಆಶೀರ್ವಾದಗಳು} [PS] ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದರೆ, ಆತನು ಭೂಮಿಯ ಮೇಲಿರುವ ಎಲ್ಲಾ ಜನಾಂಗಗಳಿಗಿಂತಲೂ ನಿಮ್ಮನ್ನು ಉನ್ನತಸ್ಥಿತಿಗೆ ತರುವನು.
ಧರ್ಮೋಪದೇಶಕಾಂಡ 28 : 2 (IRVKN)
ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು ನಡೆದರೆ ಈ ಶುಭಗಳೆಲ್ಲಾ ನಿಮಗೆ ಪ್ರಾಪ್ತವಾಗುವವು. ಅವು ಯಾವುವೆಂದರೆ: [PE][PS]
ಧರ್ಮೋಪದೇಶಕಾಂಡ 28 : 3 (IRVKN)
ನಿಮಗೆ ಊರಿನಲ್ಲಿಯೂ ಮತ್ತು ಹೊಲದಲ್ಲಿಯೂ ಶುಭವುಂಟಾಗುವುದು.
ಧರ್ಮೋಪದೇಶಕಾಂಡ 28 : 4 (IRVKN)
ನಿಮ್ಮ ಸಂತಾನದವರಿಗೂ, ವ್ಯವಸಾಯಗಳಿಗೂ, ದನ, ಕುರಿ ಮುಂತಾದ ಪಶುಗಳಿಗೂ ಶುಭವುಂಟಾಗುವುದು.
ಧರ್ಮೋಪದೇಶಕಾಂಡ 28 : 5 (IRVKN)
ನಿಮ್ಮ ಪುಟ್ಟಿಗಳಿಗೂ ಮತ್ತು [* ಹಿಟ್ಟು ನಾದುವ ಬೋಗುಣಿ.] ಕೊಣವಿಗೆಗಳಿಗೂ ಶುಭವುಂಟಾಗುವುದು.
ಧರ್ಮೋಪದೇಶಕಾಂಡ 28 : 6 (IRVKN)
ನೀವು ಹೊರಗೆ ಹೋಗುವಾಗಲೂ ಒಳಗೆ ಬರುವಾಗಲೂ ಶುಭವುಂಟಾಗುವುದು. [PE][PS]
ಧರ್ಮೋಪದೇಶಕಾಂಡ 28 : 7 (IRVKN)
ನಿಮ್ಮ ವಿರುದ್ಧವಾಗಿ ಬರುವ ಶತ್ರುಗಳು ನಿಮ್ಮಿಂದ ಸೋತುಹೋಗುವಂತೆ ಯೆಹೋವನು ಮಾಡುವನು; ಅವರು ಒಂದೇ ದಾರಿಯಿಂದ ನಿಮ್ಮ ವಿರುದ್ಧವಾಗಿ ಬಂದರೂ ಏಳು ದಾರಿಗಳಿಂದ ಓಡಿಹೋಗುವರು. [PE][PS]
ಧರ್ಮೋಪದೇಶಕಾಂಡ 28 : 8 (IRVKN)
ನಿಮ್ಮ ಕಣಜಗಳು ಯಾವಾಗಲೂ ತುಂಬಿರುವಂತೆಯೂ ಮತ್ತು ನಿಮ್ಮ ಪ್ರಯತ್ನಗಳೆಲ್ಲಾ ಸಫಲವಾಗುವಂತೆಯೂ ನಿಮ್ಮ ದೇವರಾದ ಯೆಹೋವನು ನಿಮಗೆ ಶುಭವನ್ನು ಅನುಗ್ರಹಿಸುವನು. ಆತನು ನಿಮಗೆ ಕೊಡುವ ದೇಶದಲ್ಲಿ ನಿಮಗೆ ಶುಭವನ್ನೇ ಉಂಟುಮಾಡುವನು. [PE][PS]
ಧರ್ಮೋಪದೇಶಕಾಂಡ 28 : 9 (IRVKN)
ನೀವು ನಿಮ್ಮ ದೇವರಾದ ಯೆಹೋವನ ಆಜ್ಞೆಗಳನ್ನು ಅನುಸರಿಸಿ ಆತನು ಹೇಳಿದ ಮಾರ್ಗದಲ್ಲೇ ನಡೆದರೆ, ಆತನು ವಾಗ್ದಾನಮಾಡಿದಂತೆ ನಿಮ್ಮನ್ನು ತನಗೋಸ್ಕರ ಮೀಸಲಾದ ಜನರನ್ನಾಗಿ ಸ್ಥಾಪಿಸುವನು.
ಧರ್ಮೋಪದೇಶಕಾಂಡ 28 : 10 (IRVKN)
ಭೂಮಿಯಲ್ಲಿರುವ ಎಲ್ಲಾ ಜನಗಳೂ ನಿಮ್ಮನ್ನು ಯೆಹೋವನ ಜನರೆಂದು ತಿಳಿದುಕೊಂಡು ನಿಮಗೆ ಭಯಪಡುವರು. [PE][PS]
ಧರ್ಮೋಪದೇಶಕಾಂಡ 28 : 11 (IRVKN)
ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣ ಮಾಡಿದ ಮೇರೆಗೆ ನಿಮಗೆ ಕೊಡುವ ದೇಶದಲ್ಲಿ ಆತನು ನಿಮ್ಮ ಸಂತಾನ, ಪಶು ಮತ್ತು ವ್ಯವಸಾಯಗಳಲ್ಲಿ ಸಮೃದ್ಧಿಯನ್ನು ಉಂಟುಮಾಡುವನು.
ಧರ್ಮೋಪದೇಶಕಾಂಡ 28 : 12 (IRVKN)
ಯೆಹೋವನು ಆಕಾಶದಲ್ಲಿರುವ ತನ್ನ ಜಲನಿಧಿಯನ್ನು ತೆರೆದು ನಿಮ್ಮ ದೇಶದ ಮೇಲೆ ಬೆಳೆಗೆ ಬೇಕಾದ ಹಾಗೆ ಮಳೆಯನ್ನು ಸುರಿಸಿ, ನಿಮ್ಮ ಎಲ್ಲಾ ವ್ಯವಸಾಯವು ಫಲಭರಿತವಾಗುವಂತೆ ಸಾಫಲ್ಯತೆ ಉಂಟುಮಾಡುವನು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಸಾಲತೆಗೆದುಕೊಳ್ಳುವುದಿಲ್ಲ. [PE][PS]
ಧರ್ಮೋಪದೇಶಕಾಂಡ 28 : 13 (IRVKN)
ನಿಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೇ ಲಕ್ಷ್ಯವಿಟ್ಟು ಕೇಳಿದರೆ, ನೀವು ಎಲ್ಲರಿಗಿಂತಲೂ ಮೇಲಿನವರಾಗಿರುವಿರೇ ಹೊರತು ಇತರರಿಗೆ ಅಧೀನರಾಗುವುದಿಲ್ಲ.
ಧರ್ಮೋಪದೇಶಕಾಂಡ 28 : 14 (IRVKN)
ನಾನು ಈಗ ನಿಮಗೆ ಬೋಧಿಸುವ ಮಾತುಗಳನ್ನು ಬಿಟ್ಟು ಎಡಕ್ಕಾಗಲಿ ಅಥವಾ ಬಲಕ್ಕಾಗಲಿ ತಿರುಗದೆ, ಬೇರೆ ದೇವರುಗಳನ್ನು ಅವಲಂಬಿಸದೆ, ಅವುಗಳನ್ನೇ ಅನುಸರಿಸಿ ನಡೆದರೆ ಆತನು ಇತರರಿಗೆ ನಿಮ್ಮನ್ನು ಅಧೀನಮಾಡದೆ ಎಲ್ಲರಿಗೂ ಶಿರಸ್ಸನ್ನಾಗಿಯೇ ಮಾಡುವನು. [PS]
ಧರ್ಮೋಪದೇಶಕಾಂಡ 28 : 15 (IRVKN)
{ಅವಿಧೇಯತ್ವದಿಂದ ಉಂಟಾಗುವ ಶಾಪಗಳು} [PS] ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಈ ಶಾಪಗಳು ನಿಮಗೆ ಪ್ರಾಪ್ತವಾಗುವವು: [PE][PS]
ಧರ್ಮೋಪದೇಶಕಾಂಡ 28 : 16 (IRVKN)
ನಿಮಗೆ ಊರಿನಲ್ಲಿಯೂ ಮತ್ತು ಅಡವಿಯಲ್ಲಿಯೂ ಶಾಪ ಉಂಟಾಗುವುದು.
ಧರ್ಮೋಪದೇಶಕಾಂಡ 28 : 17 (IRVKN)
ನಿಮ್ಮ ಪುಟ್ಟಿಗಳಿಗೂ ಮತ್ತು ಕೊಣವಿಗೆಗಳಿಗೂ ಶಾಪ ಉಂಟಾಗುವುದು.
ಧರ್ಮೋಪದೇಶಕಾಂಡ 28 : 18 (IRVKN)
ನಿಮ್ಮ ಸಂತಾನ, ವ್ಯವಸಾಯ, ದನ ಮತ್ತು ಕುರಿಗಳಿಗೂ ಶಾಪ ಉಂಟಾಗುವುದು.
ಧರ್ಮೋಪದೇಶಕಾಂಡ 28 : 19 (IRVKN)
ನೀವು ಹೊರಗೆ ಹೋಗುವಾಗಲೂ, ಒಳಗೆ ಬರುವಾಗಲೂ ಶಾಪ ಉಂಟಾಗುವುದು. [PE][PS]
ಧರ್ಮೋಪದೇಶಕಾಂಡ 28 : 20 (IRVKN)
ನೀವು ದುರ್ನಡತೆಯುಳ್ಳವರಾಗಿ ಯೆಹೋವನನ್ನು ಬಿಟ್ಟಿದ್ದರಿಂದ ಆತನು ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿಯೂ ವಿಪತ್ತು, ಕಳವಳ, ಶಾಪ ಇವುಗಳನ್ನು ಉಂಟುಮಾಡುತ್ತಾ ನಿಮ್ಮನ್ನು ಬೇಗನೆ ನಾಶಮಾಡುವನು.
ಧರ್ಮೋಪದೇಶಕಾಂಡ 28 : 21 (IRVKN)
ವ್ಯಾಧಿಯು ನಿಮಗೆ ಹತ್ತಿಕೊಂಡೇ ಇರುವಂತೆ ಯೆಹೋವನು ಮಾಡಿ, ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮಲ್ಲಿ ಒಬ್ಬರೂ ಉಳಿಯದಂತೆ ಮಾಡುವನು.
ಧರ್ಮೋಪದೇಶಕಾಂಡ 28 : 22 (IRVKN)
ಆತನು ನಿಮ್ಮನ್ನು ಕ್ಷಯರೋಗ, ಚಳಿಜ್ವರ, ಉರಿತ, ಉಷ್ಣಜ್ವರಗಳಿಂದಲೂ, ದೇಶವನ್ನು [† ಅಥವಾ ಕತ್ತಿಯಿಂದಲೂ.] ಕ್ಷಾಮದಿಂದಲೂ ಮತ್ತು ಬೆಳೆಯನ್ನು ಕಾಡಿನ ಬಿಸಿಗಾಳಿಗಳಿಂದಲೂ ನರಳುವಂತೆ ಮಾಡುವನು. ನೀವು ಸಾಯುವ ತನಕ ಇವು ನಿಮ್ಮನ್ನು ಬೆನ್ನತ್ತುವವು.
ಧರ್ಮೋಪದೇಶಕಾಂಡ 28 : 23 (IRVKN)
ಮೇಲೆ ಆಕಾಶವು ಮಳೆಸುರಿಸದೆ ತಾಮ್ರದಂತೆಯೂ ಮತ್ತು ಕೆಳಗೆ ಭೂಮಿಯು ಬೆಳೆಕೊಡದೆ ಕಬ್ಬಿಣದಂತೆಯೂ ಇರುವವು.
ಧರ್ಮೋಪದೇಶಕಾಂಡ 28 : 24 (IRVKN)
ನಿಮ್ಮ ದೇಶದಲ್ಲಿ ಯೆಹೋವನು ಆಕಾಶದಿಂದ ಮಳೆಗೆ ಬದಲಾಗಿ ಧೂಳನ್ನೂ ಮತ್ತು ಉಸುಬನ್ನೂ ನಿಮ್ಮ ಮೇಲೆ ಸುರಿಸುವನು; ಅದುದರಿಂದ ನೀವು ನಾಶವಾಗಿ ಹೋಗುವಿರಿ.
ಧರ್ಮೋಪದೇಶಕಾಂಡ 28 : 25 (IRVKN)
ನೀವು ಶತ್ರುಗಳಿಂದ ಸೋಲನ್ನು ಅನುಭವಿಸುವಂತೆ ಯೆಹೋವನು ಮಾಡುವನು; ನೀವು ಒಂದೇ ದಾರಿಯಿಂದ ಅವರೆದುರಿಗೆ ಹೋಗಿ ಏಳು ದಾರಿಗಳಿಂದ ಓಡಿಹೋಗುವಿರಿ. ಲೋಕದ ಎಲ್ಲಾ ರಾಜ್ಯಗಳವರೂ ಇದನ್ನು ಕಂಡು ಬೆರಗಾಗುವರು.
ಧರ್ಮೋಪದೇಶಕಾಂಡ 28 : 26 (IRVKN)
ನಿಮ್ಮ ಹೆಣಗಳು ಪಕ್ಷಿಗಳಿಗೂ ಮತ್ತು ಕಾಡು ಮೃಗಗಳಿಗೂ ಆಹಾರವಾಗುವವು; ಅವುಗಳನ್ನು ಬೆದರಿಸುವವರು ಯಾರೂ ಇರುವುದಿಲ್ಲ. [PE][PS]
ಧರ್ಮೋಪದೇಶಕಾಂಡ 28 : 27 (IRVKN)
ಐಗುಪ್ತ್ಯರ ಹುಣ್ಣು, ಬಾವು, ತುರಿಕಜ್ಜಿ ಮುಂತಾದ ವಾಸಿಯಾಗದ ರೋಗಗಳಿಂದ ಯೆಹೋವನು ನಿಮ್ಮನ್ನು ಬಾಧಿಸುವನು.
ಧರ್ಮೋಪದೇಶಕಾಂಡ 28 : 28 (IRVKN)
ಚಿತ್ತಭ್ರಮಣೆ, ಕುರುಡುತನ, ಮನೋವಿಸ್ಮಯ ಇವುಗಳಿಂದ ಯೆಹೋವನು ನಿಮ್ಮನ್ನು ಬಾಧಿಸುವನು.
ಧರ್ಮೋಪದೇಶಕಾಂಡ 28 : 29 (IRVKN)
ನೀವು ಕುರುಡರಂತೆ ಮಧ್ಯಾಹ್ನದಲ್ಲಿಯೂ ಕತ್ತಲಾಯಿತೆಂದು ತಡವರಿಸುತ್ತಾ ಇರುವಿರಿ; ನೀವು ಮಾಡುವ ಯಾವ ಕೆಲಸವೂ ಕೈಗೂಡುವುದಿಲ್ಲ. ಅನ್ಯರು ಯಾವಾಗಲೂ ನಿಮ್ಮನ್ನು ಪೀಡಿಸುತ್ತಾ ನಿಮ್ಮ ಸೊತ್ತನ್ನು ಸೂರೆಮಾಡುತ್ತಾ ಇರುವರು; ತಪ್ಪಿಸುವವರು ಯಾರೂ ಇರುವುದಿಲ್ಲ.
ಧರ್ಮೋಪದೇಶಕಾಂಡ 28 : 30 (IRVKN)
ನೀವು ಮದುವೆಮಾಡಿಕೊಂಡ ಸ್ತ್ರೀಯನ್ನು ಮತ್ತೊಬ್ಬನು ಮಾನಭಂಗಪಡಿಸುವನು; ನೀವು ಕಟ್ಟಿಕೊಂಡ ಮನೆಯಲ್ಲಿ ಮತ್ತೊಬ್ಬನು ವಾಸಮಾಡುವನು; ನೀವು ಮಾಡಿಕೊಂಡ ದ್ರಾಕ್ಷಿತೋಟದ ಬೆಳೆಯು ನಿಮಗೆ ದೊರೆಯುವುದಿಲ್ಲ.
ಧರ್ಮೋಪದೇಶಕಾಂಡ 28 : 31 (IRVKN)
ನಿಮ್ಮ ದನಗಳನ್ನು ನಿಮ್ಮ ಕಣ್ಣು ಮುಂದೆ ಕೊಯ್ಯುವರು; ಅವುಗಳ ಮಾಂಸವು ನಿಮಗೆ ಸಿಕ್ಕುವುದಿಲ್ಲ. ನಿಮ್ಮ ಕತ್ತೆಯನ್ನು ನಿಮ್ಮ ಮುಂದೆಯೇ ಬಲಾತ್ಕಾರದಿಂದ ಹಿಡಿದುಕೊಂಡುಹೋಗುವರು. ಕೇಳಿದರೆ ನಿಮಗೆ ಹಿಂದಕ್ಕೆ ಕೊಡುವುದಿಲ್ಲ. ನಿಮ್ಮ ಆಡು ಮತ್ತು ಕುರಿಗಳು ಶತ್ರುಗಳ ಪಾಲಾಗುವವು. ನಿಮಗೆ ರಕ್ಷಕರು ಯಾರೂ ಇರುವುದಿಲ್ಲ.
ಧರ್ಮೋಪದೇಶಕಾಂಡ 28 : 32 (IRVKN)
ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳನ್ನು ನಿಮ್ಮ ಮುಂದೆಯೇ ಹಿಡಿದು ಅನ್ಯರಿಗೆ ವಶಪಡಿಸುವರು; ನೀವು ಹಗಲೆಲ್ಲಾ ಅವರನ್ನು ಕಾಣಬೇಕೆಂದು ಹಂಬಲಿಸುತ್ತಾ ಕಂಗೆಡುವಿರಿ; ಆದರೆ ನಿಮ್ಮ ಪ್ರಯತ್ನವೇನೂ ಸಾಗುವುದಿಲ್ಲ.
ಧರ್ಮೋಪದೇಶಕಾಂಡ 28 : 33 (IRVKN)
ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ದೇಶದ ಬೆಳೆಯನ್ನೂ ಮತ್ತು ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು. ನೀವಾದರೋ ಯಾವಾಗಲೂ ಹಿಂಸೆಗೂ ಬಲಾತ್ಕಾರಕ್ಕೂ ಗುರಿಯಾಗಿ,
ಧರ್ಮೋಪದೇಶಕಾಂಡ 28 : 34 (IRVKN)
ನಿಮ್ಮ ಮುಂದೆ ನಡೆಯುವ ಸಂಗತಿಗಳ ದೆಸೆಯಿಂದ ಹುಚ್ಚರಾಗಿ ಹೋಗುವಿರಿ. [PE][PS]
ಧರ್ಮೋಪದೇಶಕಾಂಡ 28 : 35 (IRVKN)
ಯೆಹೋವನು ನಿಮ್ಮ ಮೊಣಕಾಲುಗಳಲ್ಲಿಯೂ, ತೊಡೆಗಳಲ್ಲಿಯೂ ಮತ್ತು ಅಂಗಾಲು ಮೊದಲುಗೊಂಡು ನಡುನೆತ್ತಿಯ ವರೆಗೂ ವಾಸಿಯಾಗದ ಕೆಟ್ಟ ಹುಣ್ಣುಗಳನ್ನು ಹುಟ್ಟಿಸಿ ಬಾಧಿಸುವನು.
ಧರ್ಮೋಪದೇಶಕಾಂಡ 28 : 36 (IRVKN)
ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಜನಾಂಗದವರ ದೇಶಕ್ಕೆ ಯೆಹೋವನು ನಿಮ್ಮನ್ನೂ ಮತ್ತು ನೀವು ನೇಮಿಸಿಕೊಳ್ಳುವ ಅರಸರನ್ನೂ ಒಯ್ಯುವನು; ಅಲ್ಲಿ ನೀವು ಮರದ ದೇವರುಗಳನ್ನೂ ಮತ್ತು ಕಲ್ಲಿನ ದೇವರುಗಳನ್ನೂ ಸೇವಿಸುವಿರಿ.
ಧರ್ಮೋಪದೇಶಕಾಂಡ 28 : 37 (IRVKN)
ಯೆಹೋವನು ನಿಮ್ಮನ್ನು ನಡೆಸುವ ಜನಾಂಗಗಳಲ್ಲಿ ನೀವು ಭೀಕರತೆಗೂ, ಗಾದೆಗೂ ಮತ್ತು ಪರಿಹಾಸ್ಯಕ್ಕೂ ಗುರಿಯಾಗುವಿರಿ. [PE][PS]
ಧರ್ಮೋಪದೇಶಕಾಂಡ 28 : 38 (IRVKN)
ನೀವು ಹೊಲದಲ್ಲಿ ಎಷ್ಟು ಬೀಜವನ್ನು ಬಿತ್ತಿದ್ದರೂ ಮಿಡತೆಯ ದಂಡು ಬಂದು ಅದನ್ನು ತಿಂದು ಬಿಡುವುದರಿಂದ ನಿಮಗೆ ದೊರೆಯುವ ಬೆಳೆ ಅತ್ಯಲ್ಪವಾಗುವುದು.
ಧರ್ಮೋಪದೇಶಕಾಂಡ 28 : 39 (IRVKN)
ನೀವು ದ್ರಾಕ್ಷಿ ವ್ಯವಸಾಯವನ್ನು ಎಷ್ಟು ಮಾಡಿದರೂ ಅದರ ಹಣ್ಣುಗಳನ್ನು ಹುಳಗಳೇ ತಿಂದುಹಾಕುವುದರಿಂದ ನೀವು ಅದರ ಸಾರವನ್ನು ರುಚಿನೋಡಲು ಆಗುವುದಿಲ್ಲ.
ಧರ್ಮೋಪದೇಶಕಾಂಡ 28 : 40 (IRVKN)
ನಿಮ್ಮ ಎಲ್ಲಾ ಪ್ರದೇಶಗಳಲ್ಲಿ ಎಣ್ಣೇಮರಗಳು ಎಷ್ಟಿದ್ದರೂ ಅವುಗಳ ಕಾಯಿಗಳು ಉದುರಿಹೋಗುವುದರಿಂದ ನೀವು ಎಣ್ಣೆಯನ್ನು ಮೈಗೆ ಹಚ್ಚಿಕೊಳ್ಳುವುದಿಲ್ಲ.
ಧರ್ಮೋಪದೇಶಕಾಂಡ 28 : 41 (IRVKN)
ನಿಮಗೆ ಗಂಡು ಮತ್ತು ಹೆಣ್ಣು ಮಕ್ಕಳು ಎಷ್ಟು ಹುಟ್ಟಿದರೂ ಅವರು ಸೆರೆಯವರಾಗಿ ಒಯ್ಯಲ್ಪಡುವುದರಿಂದ ನಿಮ್ಮ ಬಳಿಯಲ್ಲಿ ಇರುವುದಿಲ್ಲ.
ಧರ್ಮೋಪದೇಶಕಾಂಡ 28 : 42 (IRVKN)
ನಿಮ್ಮ ಎಲ್ಲಾ ಮರಗಳೂ ಮತ್ತು ಪೈರುಗಳೂ ಮಿಡತೆಯ ಪಾಲಾಗುವವು.
ಧರ್ಮೋಪದೇಶಕಾಂಡ 28 : 43 (IRVKN)
ನಿಮ್ಮ ಮಧ್ಯದಲ್ಲಿರುವ ಅನ್ಯರು ನಿಮಗಿಂತಲೂ ಹೆಚ್ಚೆಚ್ಚಾಗಿ ಅಭಿವೃದ್ಧಿಗೆ ಬರುವರು; ನೀವೋ ಕಡಿಮೆಯಾಗುತ್ತಾ ಹೀನಸ್ಥಿತಿಗೆ ಬರುವಿರಿ.
ಧರ್ಮೋಪದೇಶಕಾಂಡ 28 : 44 (IRVKN)
ಅವರು ನಿಮಗೆ ಸಾಲಕೊಡುವರೇ ಹೊರತು ನೀವು ಅವರಿಗೆ ಕೊಡುವುದಿಲ್ಲ. ನೀವು ಅವರಿಗೆ ಅಧೀನರಾಗುವಿರಿ; ಅವರು ನಿಮಗೆ ಶಿರಸ್ಸಾಗುವರು. [PE][PS]
ಧರ್ಮೋಪದೇಶಕಾಂಡ 28 : 45 (IRVKN)
ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆಯೂ, ಆತನು ನೇಮಿಸಿದ ಆಜ್ಞಾವಿಧಿಗಳನ್ನು ಅನುಸರಿಸದೆಯೂ ಹೋದುದರಿಂದ ಈ ಎಲ್ಲಾ ಅಶುಭಗಳು ನಿಮಗೆ ಪ್ರಾಪ್ತವಾಗಿ ನಿಮ್ಮನ್ನು ಹಿಂದಟ್ಟಿ ಹಿಡಿದು ಕಡೆಗೆ ನಾಶಮಾಡುವವು.
ಧರ್ಮೋಪದೇಶಕಾಂಡ 28 : 46 (IRVKN)
ಇವು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಯಾವಾಗಲೂ ಪ್ರಾಪ್ತವಾಗುತ್ತಾ ಎಲ್ಲರಿಗೂ ಎಚ್ಚರಿಕೆಯನ್ನೂ ಮತ್ತು ಬೆರಗನ್ನೂ ಉಂಟುಮಾಡುವವು. [PE][PS]
ಧರ್ಮೋಪದೇಶಕಾಂಡ 28 : 47 (IRVKN)
ನಿಮಗೆ ಸರ್ವಸಮೃದ್ಧಿಯುಂಟಾದ ಕಾಲದಲ್ಲಿಯೂ ನೀವು ನಿಮ್ಮ ದೇವರಾದ ಯೆಹೋವನನ್ನು ಹರ್ಷಾನಂದಗಳುಳ್ಳವರಾಗಿ ಸೇವಿಸದೆ ಹೋದುದರಿಂದ,
ಧರ್ಮೋಪದೇಶಕಾಂಡ 28 : 48 (IRVKN)
ಯೆಹೋವನು ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವನು; ಆಗ ನೀವು ಹಸಿವೆ, ಬಾಯಾರಿಕೆಗಳುಳ್ಳವರಾಗಿ, ಬಟ್ಟೆಯೂ ಮತ್ತು ಏನೂ ಇಲ್ಲದವರಾಗಿ ಆ ಶತ್ರುಗಳಿಗೇ ಸೇವಕರಾಗಬೇಕಾಗುವುದು. [‡ ಅಥವಾ ಶತ್ರುಗಳು.] ಯೆಹೋವನು ಕಬ್ಬಿಣದ ನೊಗವನ್ನು ಹೇರಿಸಿ ನಿಮ್ಮನ್ನು ನಾಶಮಾಡುವನು.
ಧರ್ಮೋಪದೇಶಕಾಂಡ 28 : 49 (IRVKN)
ರಣಹದ್ದು ಹೇಗೆ ದೂರದಿಂದ ಹಾರಿಬರುವುದೋ ಹಾಗೆಯೇ ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗವು ನಿಮ್ಮ ಮೇಲೆ ಬರುವಂತೆ ಯೆಹೋವನು ಮಾಡುವನು.
ಧರ್ಮೋಪದೇಶಕಾಂಡ 28 : 50 (IRVKN)
ಆ ಜನಾಂಗದವರು ಕ್ರೂರಮುಖವುಳ್ಳವರಾಗಿ ನಿಮ್ಮನ್ನು ವೃದ್ಧರೆಂದು ಮರ್ಯಾದೆ ತೋರಿಸುವುದಿಲ್ಲ ಮತ್ತು ಚಿಕ್ಕವರೆಂದು ಕನಿಕರಿಸುವುದಿಲ್ಲ.
ಧರ್ಮೋಪದೇಶಕಾಂಡ 28 : 51 (IRVKN)
ಅವರು ನಿಮ್ಮ ದನಗಳನ್ನೂ ಮತ್ತು ಬೆಳೆಗಳನ್ನೂ ತಿಂದುಬಿಟ್ಟು ನಿಮಗೆ ಧಾನ್ಯವನ್ನಾಗಲಿ, ದ್ರಾಕ್ಷಾರಸವನ್ನಾಗಲಿ, ಎಣ್ಣೆಯನ್ನಾಗಲಿ, ದನ ಮತ್ತು ಕುರಿಗಳ ಸಂತಾನವನ್ನಾಗಲಿ ಉಳಿಸದೆ ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುವರು.
ಧರ್ಮೋಪದೇಶಕಾಂಡ 28 : 52 (IRVKN)
ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ದೇಶದ ಎಲ್ಲಾ ಪಟ್ಟಣಗಳಿಗೂ ಅವರು ಮುತ್ತಿಗೆಹಾಕಿ, ನೀವು ನಂಬಿಕೊಂಡಿದ್ದ ಎತ್ತರವಾದ ಕೊತ್ತಲುಗಳುಳ್ಳ ಗೋಡೆಗಳನ್ನು ಕೆಡವಿಬಿಡುವರು.
ಧರ್ಮೋಪದೇಶಕಾಂಡ 28 : 53 (IRVKN)
ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಇಕ್ಕಟ್ಟಿಗೆ ಸಿಕ್ಕಿಸುವುದರಿಂದ ನೀವು ನಿಮ್ಮ ಸಂತಾನವನ್ನೇ ಅಂದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಗಂಡು ಮತ್ತು ಹೆಣ್ಣು ಮಕ್ಕಳ ಮಾಂಸವನ್ನೇ ತಿನ್ನುವಿರಿ.
ಧರ್ಮೋಪದೇಶಕಾಂಡ 28 : 54 (IRVKN)
ನಿಮ್ಮಲ್ಲಿ ಮೃದುಸ್ವಭಾವಿಯೂ ಮತ್ತು ಸೂಕ್ಷ್ಮಗುಣವುಳ್ಳವನು ಆಗಿರುವ ಸಹೋದರನು ಆಹಾರಕ್ಕಾಗಿ ತನ್ನ ಸಹೋದರ, ಪ್ರೀತಿಯ ಹೆಂಡತಿ ಮತ್ತು ತನ್ನ ಮಕ್ಕಳನ್ನು ದ್ವೇಷಿಸುವನು.
ಧರ್ಮೋಪದೇಶಕಾಂಡ 28 : 55 (IRVKN)
ಶತ್ರುಗಳು ನಿಮ್ಮ ಎಲ್ಲಾ ಪಟ್ಟಣಗಳಿಗೆ ಮುತ್ತಿಗೆಹಾಕಿ, ನಿಮ್ಮನ್ನು ಇಕ್ಕಟ್ಟಿಗೆ ಸಿಕ್ಕಿಸುವ ಕಾಲದಲ್ಲಿ ತನಗೆ ತಿನ್ನಲಿಕ್ಕೆ ಏನೂ ಉಳಿಯದೆ ಹೋಗುವುದರಿಂದ ಅವನು ತನ್ನ ಮಕ್ಕಳ ಮಾಂಸವನ್ನು ತಾನೇ ತಿನ್ನಬೇಕೆಂದು ಅಣ್ಣತಮ್ಮಂದಿರಿಗೂ, ಪ್ರಾಣಪ್ರಿಯಳಾದ ಹೆಂಡತಿಗೂ ಮತ್ತು ಉಳಿದ ಮಕ್ಕಳಿಗೂ ಕೋಪಗೊಂಡವನಂತೆ ನಟಿಸುತ್ತಾ ಆ ಮಾಂಸದಲ್ಲಿ ಅವರಿಗೆ ಸ್ವಲ್ಪವನ್ನಾದರೂ ಕೊಡದೆ ಹೋಗುವನು.
ಧರ್ಮೋಪದೇಶಕಾಂಡ 28 : 56 (IRVKN)
ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ, ನಿಮ್ಮನ್ನು ಬಹಳವಾಗಿ ಹಿಂಸಿಸುವ ಕಾಲದಲ್ಲಿ ಕೋಮಲತೆಯ ಮತ್ತು ಅತಿಸೂಕ್ಷ್ಮತೆಯ ದೆಸೆಯಿಂದ ಅಂಗಾಲನ್ನೂ ನೆಲಕ್ಕೆ ಇಡದವಳಾದ ಸ್ತ್ರೀಯು ತಿನ್ನಲಿಕ್ಕೆ ಏನೂ ಇಲ್ಲದವಳಾಗಿ, ನರಳುವಾಗ
ಧರ್ಮೋಪದೇಶಕಾಂಡ 28 : 57 (IRVKN)
ತಾನು ಆಗಲೇ ಹೆತ್ತ ಮಗುವಿನ ಮಾಂಸವನ್ನೂ ರಹಸ್ಯವಾಗಿ ತಿನ್ನಬೇಕೆಂದು ಯೋಚಿಸಿ, ಪ್ರಾಣಪ್ರಿಯನಾದ ಗಂಡನಿಗೂ, ಮಕ್ಕಳಿಗೂ ತಿಳಿಯದಂತೆ ಆ ಕಾರ್ಯವನ್ನು ಮಾಡುವಳು. [PE][PS]
ಧರ್ಮೋಪದೇಶಕಾಂಡ 28 : 58 (IRVKN)
ಈ ಗ್ರಂಥದಲ್ಲಿ ಬರೆದಿರುವ ಧರ್ಮಶಾಸ್ತ್ರವಾಕ್ಯಗಳನ್ನೆಲ್ಲಾ ನೀವು ಅನುಸರಿಸದೆ ನಿಮ್ಮ ದೇವರಾದ ಯೆಹೋವನೆಂಬ ಮಹಾಮಹಿಮೆಯುಳ್ಳ ಅದ್ಭುತ ನಾಮದಲ್ಲಿ ನೀವು ಭಯಭಕ್ತಿಯುಳ್ಳವರಾಗಿ ನಡೆಯದೆ ಹೋದರೆ,
ಧರ್ಮೋಪದೇಶಕಾಂಡ 28 : 59 (IRVKN)
ಆತನು ನಿಮಗೂ, ನಿಮ್ಮ ಸಂತತಿಯವರಿಗೂ ದೀರ್ಘಕಾಲವಿರುವ ಬಹುಭಯಂಕರವಾದ ಉಪದ್ರವಗಳನ್ನು ಬರಮಾಡುವನು. ಬಹುಕಾಲದವರೆಗೂ ವಾಸಿಯಾಗದ ಘೋರ ವ್ಯಾಧಿಗಳಿಂದ ನಿಮ್ಮನ್ನು ಬಾಧಿಸುವನು.
ಧರ್ಮೋಪದೇಶಕಾಂಡ 28 : 60 (IRVKN)
ನೀವು ಹೆದರಿಕೊಳ್ಳುತ್ತಿದ್ದ ಐಗುಪ್ತದೇಶದ ರೋಗಗಳನ್ನೆಲ್ಲಾ ತಿರುಗಿ ನಿಮ್ಮ ಮೇಲೆ ಬರಮಾಡುವನು; ಅವು ನಿಮ್ಮನ್ನು ಅಂಟಿಕೊಂಡೇ ಇರುವವು.
ಧರ್ಮೋಪದೇಶಕಾಂಡ 28 : 61 (IRVKN)
ಇಷ್ಟು ಮಾತ್ರವಲ್ಲದೆ ಈ ಧರ್ಮಶಾಸ್ತ್ರಗ್ರಂಥದಲ್ಲಿ ಬರೆಯದೆ ಇರುವ ವಿಧವಿಧವಾದ ರೋಗಗಳನ್ನೂ ಮತ್ತು ವ್ಯಾಧಿಗಳನ್ನೂ ನಿಮ್ಮ ಮೇಲೆ ಬರಮಾಡಿ ನಿಮ್ಮನ್ನು ನಾಶಮಾಡುವನು.
ಧರ್ಮೋಪದೇಶಕಾಂಡ 28 : 62 (IRVKN)
ನಕ್ಷತ್ರಗಳಷ್ಟು ಅಸಂಖ್ಯರಾಗಿರುವ ನೀವು ನಿಮ್ಮ ದೇವರಾದ ಯೆಹೋವನ ಮಾತಿನಲ್ಲಿ ಲಕ್ಷ್ಯವಿಡದೆ ಹೋಗುವುದರಿಂದ ಸ್ವಲ್ಪ ಜನರಾಗಿಯೇ ಉಳಿಯುವಿರಿ.
ಧರ್ಮೋಪದೇಶಕಾಂಡ 28 : 63 (IRVKN)
ಹೇಗೆ ಯೆಹೋವನು ಈಗ ನಿಮ್ಮನ್ನು ಅಭಿವೃದ್ಧಿಪಡಿಸುವುದರಲ್ಲಿಯೂ, ಹೆಚ್ಚಿಸುವುದರಲ್ಲಿಯೂ ಸಂತೋಷಪಡುತ್ತಾನೋ ಹಾಗೆಯೇ ಆಗ ನಿಮ್ಮನ್ನು ಕೆಡಿಸಿ ನಾಶಮಾಡುವುದರಲ್ಲಿ ಸಂತೋಷಪಟ್ಟು, ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದೊಳಗಿಂದ ನಿಮ್ಮನ್ನು ಕಿತ್ತುಹಾಕುವನು.
ಧರ್ಮೋಪದೇಶಕಾಂಡ 28 : 64 (IRVKN)
ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲಾ ಜನಾಂಗಗಳಲ್ಲಿಯೂ ಯೆಹೋವನು ನಿಮ್ಮನ್ನು ಚದರಿಸುವನು. ಅಲ್ಲಿ ನಿಮಗಾಗಲಿ ಅಥವಾ ನಿಮ್ಮ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.
ಧರ್ಮೋಪದೇಶಕಾಂಡ 28 : 65 (IRVKN)
ಆ ದೇಶಗಳಲ್ಲಿ ನಿಮಗೆ ಯಾವ ವಿಶ್ರಾಂತಿಯೂ ದೊರೆಯುವುದಿಲ್ಲ; ಸ್ವಲ್ಪ ಹೊತ್ತು ಅಂಗಾಲಿಡುವುದಕ್ಕೂ ನಿಮಗೆ ಸ್ಥಳಸಿಕ್ಕುವುದಿಲ್ಲ. ನೀವು ನಡುಗುವ ಹೃದಯವುಳ್ಳವರಾಗಿಯೂ, ದಿಕ್ಕುತೋರದೆ ಕಂಗೆಟ್ಟವರಾಗಿಯೂ, ಮನಗುಂದಿದವರಾಗಿಯೂ ಇರುವಂತೆ ಯೆಹೋವನು ಮಾಡುವನು.
ಧರ್ಮೋಪದೇಶಕಾಂಡ 28 : 66 (IRVKN)
ಬದುಕುವೆವೋ ಇಲ್ಲವೋ ಎಂಬುದಾಗಿ ಅನುಮಾನಪಟ್ಟು ನೀವು ಹಗಲಿರುಳು ಪ್ರಾಣಭಯದಲ್ಲಿರುವಿರಿ; ಪ್ರಾಣದ ಮೇಲಣ ನಂಬಿಕೆಯನ್ನು ಬಿಟ್ಟೇಬಿಡುವಿರಿ.
ಧರ್ಮೋಪದೇಶಕಾಂಡ 28 : 67 (IRVKN)
ಮನಸ್ಸಿನಲ್ಲಿ ಯಾವಾಗಲೂ ಪ್ರಾಣಭಯವಿರುವುದರಿಂದಲೂ ಕಣ್ಣಿನಿಂದ ಭಯಂಕರವಾದ ಸಂಗತಿಗಳನ್ನು ನೋಡುವುದರಿಂದಲೂ ನೀವು ಹೊತ್ತಾರೆಯಲ್ಲಿ, “ಅಯ್ಯೋ, ಅಯ್ಯೋ ಸಾಯಂಕಾಲ ಯಾವಾಗ ಬರುವುದೋ” ಎಂದೂ, ಸಾಯಂಕಾಲದಲ್ಲಿ, “ಅಯ್ಯೋ, ಅಯ್ಯೋ! ಬೆಳಿಗ್ಗೆ ಯಾವಾಗ ಬರುವುದೋ” ಎಂದು ಕೊರಗುವಿರಿ.
ಧರ್ಮೋಪದೇಶಕಾಂಡ 28 : 68 (IRVKN)
ನೀವು ಐಗುಪ್ತದೇಶವನ್ನು ತಿರುಗಿ ಎಂದಿಗೂ ನೋಡುವುದಿಲ್ಲವೆಂದು ಯೆಹೋವನು ಹೇಳಿದ್ದರೂ ಆತನು ನಿಮ್ಮನ್ನು ಹಡಗುಗಳನ್ನೇರಿಸಿ ಅಲ್ಲಿಗೆ ತಿರುಗಿ ಹೋಗ ಮಾಡುವನು. ಅಲ್ಲಿ ನೀವು ಶತ್ರುಗಳಿಗೆ ನಿಮ್ಮನ್ನು ದಾಸದಾಸಿಯರನ್ನಾಗಿ ಮಾರಿಕೊಳ್ಳಬೇಕೆಂದು ಅಪೇಕ್ಷಿಸಿದರೂ ಯಾರೂ ನಿಮ್ಮನ್ನು ಕೊಂಡುಕೊಳ್ಳುವುದಿಲ್ಲ. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53 54 55 56 57 58 59 60 61 62 63 64 65 66 67 68

BG:

Opacity:

Color:


Size:


Font: