ಧರ್ಮೋಪದೇಶಕಾಂಡ 28 : 1 (IRVKN)
ವಿಧೇಯತೆಯಿಂದ ಸಿಕ್ಕುವ ಆಶೀರ್ವಾದಗಳು ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದರೆ, ಆತನು ಭೂಮಿಯ ಮೇಲಿರುವ ಎಲ್ಲಾ ಜನಾಂಗಗಳಿಗಿಂತಲೂ ನಿಮ್ಮನ್ನು ಉನ್ನತಸ್ಥಿತಿಗೆ ತರುವನು.
ಧರ್ಮೋಪದೇಶಕಾಂಡ 28 : 2 (IRVKN)
ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು ನಡೆದರೆ ಈ ಶುಭಗಳೆಲ್ಲಾ ನಿಮಗೆ ಪ್ರಾಪ್ತವಾಗುವವು. ಅವು ಯಾವುವೆಂದರೆ:
ಧರ್ಮೋಪದೇಶಕಾಂಡ 28 : 3 (IRVKN)
ನಿಮಗೆ ಊರಿನಲ್ಲಿಯೂ ಮತ್ತು ಹೊಲದಲ್ಲಿಯೂ ಶುಭವುಂಟಾಗುವುದು.
ಧರ್ಮೋಪದೇಶಕಾಂಡ 28 : 4 (IRVKN)
ನಿಮ್ಮ ಸಂತಾನದವರಿಗೂ, ವ್ಯವಸಾಯಗಳಿಗೂ, ದನ, ಕುರಿ ಮುಂತಾದ ಪಶುಗಳಿಗೂ ಶುಭವುಂಟಾಗುವುದು.
ಧರ್ಮೋಪದೇಶಕಾಂಡ 28 : 5 (IRVKN)
ನಿಮ್ಮ ಪುಟ್ಟಿಗಳಿಗೂ ಮತ್ತು * ಹಿಟ್ಟು ನಾದುವ ಬೋಗುಣಿ. ಕೊಣವಿಗೆಗಳಿಗೂ ಶುಭವುಂಟಾಗುವುದು.
ಧರ್ಮೋಪದೇಶಕಾಂಡ 28 : 6 (IRVKN)
ನೀವು ಹೊರಗೆ ಹೋಗುವಾಗಲೂ ಒಳಗೆ ಬರುವಾಗಲೂ ಶುಭವುಂಟಾಗುವುದು.
ಧರ್ಮೋಪದೇಶಕಾಂಡ 28 : 7 (IRVKN)
ಧರ್ಮೋಪದೇಶಕಾಂಡ 28 : 8 (IRVKN)
ನಿಮ್ಮ ವಿರುದ್ಧವಾಗಿ ಬರುವ ಶತ್ರುಗಳು ನಿಮ್ಮಿಂದ ಸೋತುಹೋಗುವಂತೆ ಯೆಹೋವನು ಮಾಡುವನು; ಅವರು ಒಂದೇ ದಾರಿಯಿಂದ ನಿಮ್ಮ ವಿರುದ್ಧವಾಗಿ ಬಂದರೂ ಏಳು ದಾರಿಗಳಿಂದ ಓಡಿಹೋಗುವರು.
ಧರ್ಮೋಪದೇಶಕಾಂಡ 28 : 9 (IRVKN)
ನಿಮ್ಮ ಕಣಜಗಳು ಯಾವಾಗಲೂ ತುಂಬಿರುವಂತೆಯೂ ಮತ್ತು ನಿಮ್ಮ ಪ್ರಯತ್ನಗಳೆಲ್ಲಾ ಸಫಲವಾಗುವಂತೆಯೂ ನಿಮ್ಮ ದೇವರಾದ ಯೆಹೋವನು ನಿಮಗೆ ಶುಭವನ್ನು ಅನುಗ್ರಹಿಸುವನು. ಆತನು ನಿಮಗೆ ಕೊಡುವ ದೇಶದಲ್ಲಿ ನಿಮಗೆ ಶುಭವನ್ನೇ ಉಂಟುಮಾಡುವನು. ನೀವು ನಿಮ್ಮ ದೇವರಾದ ಯೆಹೋವನ ಆಜ್ಞೆಗಳನ್ನು ಅನುಸರಿಸಿ ಆತನು ಹೇಳಿದ ಮಾರ್ಗದಲ್ಲೇ ನಡೆದರೆ, ಆತನು ವಾಗ್ದಾನಮಾಡಿದಂತೆ ನಿಮ್ಮನ್ನು ತನಗೋಸ್ಕರ ಮೀಸಲಾದ ಜನರನ್ನಾಗಿ ಸ್ಥಾಪಿಸುವನು.
ಧರ್ಮೋಪದೇಶಕಾಂಡ 28 : 10 (IRVKN)
ಭೂಮಿಯಲ್ಲಿರುವ ಎಲ್ಲಾ ಜನಗಳೂ ನಿಮ್ಮನ್ನು ಯೆಹೋವನ ಜನರೆಂದು ತಿಳಿದುಕೊಂಡು ನಿಮಗೆ ಭಯಪಡುವರು.
ಧರ್ಮೋಪದೇಶಕಾಂಡ 28 : 11 (IRVKN)
ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣ ಮಾಡಿದ ಮೇರೆಗೆ ನಿಮಗೆ ಕೊಡುವ ದೇಶದಲ್ಲಿ ಆತನು ನಿಮ್ಮ ಸಂತಾನ, ಪಶು ಮತ್ತು ವ್ಯವಸಾಯಗಳಲ್ಲಿ ಸಮೃದ್ಧಿಯನ್ನು ಉಂಟುಮಾಡುವನು.
ಧರ್ಮೋಪದೇಶಕಾಂಡ 28 : 12 (IRVKN)
ಯೆಹೋವನು ಆಕಾಶದಲ್ಲಿರುವ ತನ್ನ ಜಲನಿಧಿಯನ್ನು ತೆರೆದು ನಿಮ್ಮ ದೇಶದ ಮೇಲೆ ಬೆಳೆಗೆ ಬೇಕಾದ ಹಾಗೆ ಮಳೆಯನ್ನು ಸುರಿಸಿ, ನಿಮ್ಮ ಎಲ್ಲಾ ವ್ಯವಸಾಯವು ಫಲಭರಿತವಾಗುವಂತೆ ಸಾಫಲ್ಯತೆ ಉಂಟುಮಾಡುವನು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಸಾಲತೆಗೆದುಕೊಳ್ಳುವುದಿಲ್ಲ.
ಧರ್ಮೋಪದೇಶಕಾಂಡ 28 : 13 (IRVKN)
ನಿಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೇ ಲಕ್ಷ್ಯವಿಟ್ಟು ಕೇಳಿದರೆ, ನೀವು ಎಲ್ಲರಿಗಿಂತಲೂ ಮೇಲಿನವರಾಗಿರುವಿರೇ ಹೊರತು ಇತರರಿಗೆ ಅಧೀನರಾಗುವುದಿಲ್ಲ.
ಧರ್ಮೋಪದೇಶಕಾಂಡ 28 : 14 (IRVKN)
ನಾನು ಈಗ ನಿಮಗೆ ಬೋಧಿಸುವ ಮಾತುಗಳನ್ನು ಬಿಟ್ಟು ಎಡಕ್ಕಾಗಲಿ ಅಥವಾ ಬಲಕ್ಕಾಗಲಿ ತಿರುಗದೆ, ಬೇರೆ ದೇವರುಗಳನ್ನು ಅವಲಂಬಿಸದೆ, ಅವುಗಳನ್ನೇ ಅನುಸರಿಸಿ ನಡೆದರೆ ಆತನು ಇತರರಿಗೆ ನಿಮ್ಮನ್ನು ಅಧೀನಮಾಡದೆ ಎಲ್ಲರಿಗೂ ಶಿರಸ್ಸನ್ನಾಗಿಯೇ ಮಾಡುವನು.
ಧರ್ಮೋಪದೇಶಕಾಂಡ 28 : 15 (IRVKN)
ಅವಿಧೇಯತ್ವದಿಂದ ಉಂಟಾಗುವ ಶಾಪಗಳು
ಧರ್ಮೋಪದೇಶಕಾಂಡ 28 : 16 (IRVKN)
ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಈ ಶಾಪಗಳು ನಿಮಗೆ ಪ್ರಾಪ್ತವಾಗುವವು: ನಿಮಗೆ ಊರಿನಲ್ಲಿಯೂ ಮತ್ತು ಅಡವಿಯಲ್ಲಿಯೂ ಶಾಪ ಉಂಟಾಗುವುದು.
ಧರ್ಮೋಪದೇಶಕಾಂಡ 28 : 17 (IRVKN)
ನಿಮ್ಮ ಪುಟ್ಟಿಗಳಿಗೂ ಮತ್ತು ಕೊಣವಿಗೆಗಳಿಗೂ ಶಾಪ ಉಂಟಾಗುವುದು.
ಧರ್ಮೋಪದೇಶಕಾಂಡ 28 : 18 (IRVKN)
ನಿಮ್ಮ ಸಂತಾನ, ವ್ಯವಸಾಯ, ದನ ಮತ್ತು ಕುರಿಗಳಿಗೂ ಶಾಪ ಉಂಟಾಗುವುದು.
ಧರ್ಮೋಪದೇಶಕಾಂಡ 28 : 19 (IRVKN)
ನೀವು ಹೊರಗೆ ಹೋಗುವಾಗಲೂ, ಒಳಗೆ ಬರುವಾಗಲೂ ಶಾಪ ಉಂಟಾಗುವುದು.
ಧರ್ಮೋಪದೇಶಕಾಂಡ 28 : 20 (IRVKN)
ನೀವು ದುರ್ನಡತೆಯುಳ್ಳವರಾಗಿ ಯೆಹೋವನನ್ನು ಬಿಟ್ಟಿದ್ದರಿಂದ ಆತನು ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿಯೂ ವಿಪತ್ತು, ಕಳವಳ, ಶಾಪ ಇವುಗಳನ್ನು ಉಂಟುಮಾಡುತ್ತಾ ನಿಮ್ಮನ್ನು ಬೇಗನೆ ನಾಶಮಾಡುವನು.
ಧರ್ಮೋಪದೇಶಕಾಂಡ 28 : 21 (IRVKN)
ವ್ಯಾಧಿಯು ನಿಮಗೆ ಹತ್ತಿಕೊಂಡೇ ಇರುವಂತೆ ಯೆಹೋವನು ಮಾಡಿ, ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮಲ್ಲಿ ಒಬ್ಬರೂ ಉಳಿಯದಂತೆ ಮಾಡುವನು.
ಧರ್ಮೋಪದೇಶಕಾಂಡ 28 : 22 (IRVKN)
ಆತನು ನಿಮ್ಮನ್ನು ಕ್ಷಯರೋಗ, ಚಳಿಜ್ವರ, ಉರಿತ, ಉಷ್ಣಜ್ವರಗಳಿಂದಲೂ, ದೇಶವನ್ನು † ಅಥವಾ ಕತ್ತಿಯಿಂದಲೂ. ಕ್ಷಾಮದಿಂದಲೂ ಮತ್ತು ಬೆಳೆಯನ್ನು ಕಾಡಿನ ಬಿಸಿಗಾಳಿಗಳಿಂದಲೂ ನರಳುವಂತೆ ಮಾಡುವನು. ನೀವು ಸಾಯುವ ತನಕ ಇವು ನಿಮ್ಮನ್ನು ಬೆನ್ನತ್ತುವವು.
ಧರ್ಮೋಪದೇಶಕಾಂಡ 28 : 23 (IRVKN)
ಮೇಲೆ ಆಕಾಶವು ಮಳೆಸುರಿಸದೆ ತಾಮ್ರದಂತೆಯೂ ಮತ್ತು ಕೆಳಗೆ ಭೂಮಿಯು ಬೆಳೆಕೊಡದೆ ಕಬ್ಬಿಣದಂತೆಯೂ ಇರುವವು.
ಧರ್ಮೋಪದೇಶಕಾಂಡ 28 : 24 (IRVKN)
ನಿಮ್ಮ ದೇಶದಲ್ಲಿ ಯೆಹೋವನು ಆಕಾಶದಿಂದ ಮಳೆಗೆ ಬದಲಾಗಿ ಧೂಳನ್ನೂ ಮತ್ತು ಉಸುಬನ್ನೂ ನಿಮ್ಮ ಮೇಲೆ ಸುರಿಸುವನು; ಅದುದರಿಂದ ನೀವು ನಾಶವಾಗಿ ಹೋಗುವಿರಿ.
ಧರ್ಮೋಪದೇಶಕಾಂಡ 28 : 25 (IRVKN)
ನೀವು ಶತ್ರುಗಳಿಂದ ಸೋಲನ್ನು ಅನುಭವಿಸುವಂತೆ ಯೆಹೋವನು ಮಾಡುವನು; ನೀವು ಒಂದೇ ದಾರಿಯಿಂದ ಅವರೆದುರಿಗೆ ಹೋಗಿ ಏಳು ದಾರಿಗಳಿಂದ ಓಡಿಹೋಗುವಿರಿ. ಲೋಕದ ಎಲ್ಲಾ ರಾಜ್ಯಗಳವರೂ ಇದನ್ನು ಕಂಡು ಬೆರಗಾಗುವರು.
ಧರ್ಮೋಪದೇಶಕಾಂಡ 28 : 26 (IRVKN)
ನಿಮ್ಮ ಹೆಣಗಳು ಪಕ್ಷಿಗಳಿಗೂ ಮತ್ತು ಕಾಡು ಮೃಗಗಳಿಗೂ ಆಹಾರವಾಗುವವು; ಅವುಗಳನ್ನು ಬೆದರಿಸುವವರು ಯಾರೂ ಇರುವುದಿಲ್ಲ.
ಧರ್ಮೋಪದೇಶಕಾಂಡ 28 : 27 (IRVKN)
ಐಗುಪ್ತ್ಯರ ಹುಣ್ಣು, ಬಾವು, ತುರಿಕಜ್ಜಿ ಮುಂತಾದ ವಾಸಿಯಾಗದ ರೋಗಗಳಿಂದ ಯೆಹೋವನು ನಿಮ್ಮನ್ನು ಬಾಧಿಸುವನು.
ಧರ್ಮೋಪದೇಶಕಾಂಡ 28 : 28 (IRVKN)
ಚಿತ್ತಭ್ರಮಣೆ, ಕುರುಡುತನ, ಮನೋವಿಸ್ಮಯ ಇವುಗಳಿಂದ ಯೆಹೋವನು ನಿಮ್ಮನ್ನು ಬಾಧಿಸುವನು.
ಧರ್ಮೋಪದೇಶಕಾಂಡ 28 : 29 (IRVKN)
ನೀವು ಕುರುಡರಂತೆ ಮಧ್ಯಾಹ್ನದಲ್ಲಿಯೂ ಕತ್ತಲಾಯಿತೆಂದು ತಡವರಿಸುತ್ತಾ ಇರುವಿರಿ; ನೀವು ಮಾಡುವ ಯಾವ ಕೆಲಸವೂ ಕೈಗೂಡುವುದಿಲ್ಲ. ಅನ್ಯರು ಯಾವಾಗಲೂ ನಿಮ್ಮನ್ನು ಪೀಡಿಸುತ್ತಾ ನಿಮ್ಮ ಸೊತ್ತನ್ನು ಸೂರೆಮಾಡುತ್ತಾ ಇರುವರು; ತಪ್ಪಿಸುವವರು ಯಾರೂ ಇರುವುದಿಲ್ಲ.
ಧರ್ಮೋಪದೇಶಕಾಂಡ 28 : 30 (IRVKN)
ನೀವು ಮದುವೆಮಾಡಿಕೊಂಡ ಸ್ತ್ರೀಯನ್ನು ಮತ್ತೊಬ್ಬನು ಮಾನಭಂಗಪಡಿಸುವನು; ನೀವು ಕಟ್ಟಿಕೊಂಡ ಮನೆಯಲ್ಲಿ ಮತ್ತೊಬ್ಬನು ವಾಸಮಾಡುವನು; ನೀವು ಮಾಡಿಕೊಂಡ ದ್ರಾಕ್ಷಿತೋಟದ ಬೆಳೆಯು ನಿಮಗೆ ದೊರೆಯುವುದಿಲ್ಲ.
ಧರ್ಮೋಪದೇಶಕಾಂಡ 28 : 31 (IRVKN)
ನಿಮ್ಮ ದನಗಳನ್ನು ನಿಮ್ಮ ಕಣ್ಣು ಮುಂದೆ ಕೊಯ್ಯುವರು; ಅವುಗಳ ಮಾಂಸವು ನಿಮಗೆ ಸಿಕ್ಕುವುದಿಲ್ಲ. ನಿಮ್ಮ ಕತ್ತೆಯನ್ನು ನಿಮ್ಮ ಮುಂದೆಯೇ ಬಲಾತ್ಕಾರದಿಂದ ಹಿಡಿದುಕೊಂಡುಹೋಗುವರು. ಕೇಳಿದರೆ ನಿಮಗೆ ಹಿಂದಕ್ಕೆ ಕೊಡುವುದಿಲ್ಲ. ನಿಮ್ಮ ಆಡು ಮತ್ತು ಕುರಿಗಳು ಶತ್ರುಗಳ ಪಾಲಾಗುವವು. ನಿಮಗೆ ರಕ್ಷಕರು ಯಾರೂ ಇರುವುದಿಲ್ಲ.
ಧರ್ಮೋಪದೇಶಕಾಂಡ 28 : 32 (IRVKN)
ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳನ್ನು ನಿಮ್ಮ ಮುಂದೆಯೇ ಹಿಡಿದು ಅನ್ಯರಿಗೆ ವಶಪಡಿಸುವರು; ನೀವು ಹಗಲೆಲ್ಲಾ ಅವರನ್ನು ಕಾಣಬೇಕೆಂದು ಹಂಬಲಿಸುತ್ತಾ ಕಂಗೆಡುವಿರಿ; ಆದರೆ ನಿಮ್ಮ ಪ್ರಯತ್ನವೇನೂ ಸಾಗುವುದಿಲ್ಲ.
ಧರ್ಮೋಪದೇಶಕಾಂಡ 28 : 33 (IRVKN)
ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ದೇಶದ ಬೆಳೆಯನ್ನೂ ಮತ್ತು ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು. ನೀವಾದರೋ ಯಾವಾಗಲೂ ಹಿಂಸೆಗೂ ಬಲಾತ್ಕಾರಕ್ಕೂ ಗುರಿಯಾಗಿ,
ಧರ್ಮೋಪದೇಶಕಾಂಡ 28 : 34 (IRVKN)
ನಿಮ್ಮ ಮುಂದೆ ನಡೆಯುವ ಸಂಗತಿಗಳ ದೆಸೆಯಿಂದ ಹುಚ್ಚರಾಗಿ ಹೋಗುವಿರಿ.
ಧರ್ಮೋಪದೇಶಕಾಂಡ 28 : 35 (IRVKN)
ಯೆಹೋವನು ನಿಮ್ಮ ಮೊಣಕಾಲುಗಳಲ್ಲಿಯೂ, ತೊಡೆಗಳಲ್ಲಿಯೂ ಮತ್ತು ಅಂಗಾಲು ಮೊದಲುಗೊಂಡು ನಡುನೆತ್ತಿಯ ವರೆಗೂ ವಾಸಿಯಾಗದ ಕೆಟ್ಟ ಹುಣ್ಣುಗಳನ್ನು ಹುಟ್ಟಿಸಿ ಬಾಧಿಸುವನು.
ಧರ್ಮೋಪದೇಶಕಾಂಡ 28 : 36 (IRVKN)
ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಜನಾಂಗದವರ ದೇಶಕ್ಕೆ ಯೆಹೋವನು ನಿಮ್ಮನ್ನೂ ಮತ್ತು ನೀವು ನೇಮಿಸಿಕೊಳ್ಳುವ ಅರಸರನ್ನೂ ಒಯ್ಯುವನು; ಅಲ್ಲಿ ನೀವು ಮರದ ದೇವರುಗಳನ್ನೂ ಮತ್ತು ಕಲ್ಲಿನ ದೇವರುಗಳನ್ನೂ ಸೇವಿಸುವಿರಿ.
ಧರ್ಮೋಪದೇಶಕಾಂಡ 28 : 37 (IRVKN)
ಯೆಹೋವನು ನಿಮ್ಮನ್ನು ನಡೆಸುವ ಜನಾಂಗಗಳಲ್ಲಿ ನೀವು ಭೀಕರತೆಗೂ, ಗಾದೆಗೂ ಮತ್ತು ಪರಿಹಾಸ್ಯಕ್ಕೂ ಗುರಿಯಾಗುವಿರಿ.
ಧರ್ಮೋಪದೇಶಕಾಂಡ 28 : 38 (IRVKN)
ನೀವು ಹೊಲದಲ್ಲಿ ಎಷ್ಟು ಬೀಜವನ್ನು ಬಿತ್ತಿದ್ದರೂ ಮಿಡತೆಯ ದಂಡು ಬಂದು ಅದನ್ನು ತಿಂದು ಬಿಡುವುದರಿಂದ ನಿಮಗೆ ದೊರೆಯುವ ಬೆಳೆ ಅತ್ಯಲ್ಪವಾಗುವುದು.
ಧರ್ಮೋಪದೇಶಕಾಂಡ 28 : 39 (IRVKN)
ನೀವು ದ್ರಾಕ್ಷಿ ವ್ಯವಸಾಯವನ್ನು ಎಷ್ಟು ಮಾಡಿದರೂ ಅದರ ಹಣ್ಣುಗಳನ್ನು ಹುಳಗಳೇ ತಿಂದುಹಾಕುವುದರಿಂದ ನೀವು ಅದರ ಸಾರವನ್ನು ರುಚಿನೋಡಲು ಆಗುವುದಿಲ್ಲ.
ಧರ್ಮೋಪದೇಶಕಾಂಡ 28 : 40 (IRVKN)
ನಿಮ್ಮ ಎಲ್ಲಾ ಪ್ರದೇಶಗಳಲ್ಲಿ ಎಣ್ಣೇಮರಗಳು ಎಷ್ಟಿದ್ದರೂ ಅವುಗಳ ಕಾಯಿಗಳು ಉದುರಿಹೋಗುವುದರಿಂದ ನೀವು ಎಣ್ಣೆಯನ್ನು ಮೈಗೆ ಹಚ್ಚಿಕೊಳ್ಳುವುದಿಲ್ಲ.
ಧರ್ಮೋಪದೇಶಕಾಂಡ 28 : 41 (IRVKN)
ನಿಮಗೆ ಗಂಡು ಮತ್ತು ಹೆಣ್ಣು ಮಕ್ಕಳು ಎಷ್ಟು ಹುಟ್ಟಿದರೂ ಅವರು ಸೆರೆಯವರಾಗಿ ಒಯ್ಯಲ್ಪಡುವುದರಿಂದ ನಿಮ್ಮ ಬಳಿಯಲ್ಲಿ ಇರುವುದಿಲ್ಲ.
ಧರ್ಮೋಪದೇಶಕಾಂಡ 28 : 42 (IRVKN)
ನಿಮ್ಮ ಎಲ್ಲಾ ಮರಗಳೂ ಮತ್ತು ಪೈರುಗಳೂ ಮಿಡತೆಯ ಪಾಲಾಗುವವು.
ಧರ್ಮೋಪದೇಶಕಾಂಡ 28 : 43 (IRVKN)
ನಿಮ್ಮ ಮಧ್ಯದಲ್ಲಿರುವ ಅನ್ಯರು ನಿಮಗಿಂತಲೂ ಹೆಚ್ಚೆಚ್ಚಾಗಿ ಅಭಿವೃದ್ಧಿಗೆ ಬರುವರು; ನೀವೋ ಕಡಿಮೆಯಾಗುತ್ತಾ ಹೀನಸ್ಥಿತಿಗೆ ಬರುವಿರಿ.
ಧರ್ಮೋಪದೇಶಕಾಂಡ 28 : 44 (IRVKN)
ಅವರು ನಿಮಗೆ ಸಾಲಕೊಡುವರೇ ಹೊರತು ನೀವು ಅವರಿಗೆ ಕೊಡುವುದಿಲ್ಲ. ನೀವು ಅವರಿಗೆ ಅಧೀನರಾಗುವಿರಿ; ಅವರು ನಿಮಗೆ ಶಿರಸ್ಸಾಗುವರು.
ಧರ್ಮೋಪದೇಶಕಾಂಡ 28 : 45 (IRVKN)
ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆಯೂ, ಆತನು ನೇಮಿಸಿದ ಆಜ್ಞಾವಿಧಿಗಳನ್ನು ಅನುಸರಿಸದೆಯೂ ಹೋದುದರಿಂದ ಈ ಎಲ್ಲಾ ಅಶುಭಗಳು ನಿಮಗೆ ಪ್ರಾಪ್ತವಾಗಿ ನಿಮ್ಮನ್ನು ಹಿಂದಟ್ಟಿ ಹಿಡಿದು ಕಡೆಗೆ ನಾಶಮಾಡುವವು.
ಧರ್ಮೋಪದೇಶಕಾಂಡ 28 : 46 (IRVKN)
ಇವು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಯಾವಾಗಲೂ ಪ್ರಾಪ್ತವಾಗುತ್ತಾ ಎಲ್ಲರಿಗೂ ಎಚ್ಚರಿಕೆಯನ್ನೂ ಮತ್ತು ಬೆರಗನ್ನೂ ಉಂಟುಮಾಡುವವು.
ಧರ್ಮೋಪದೇಶಕಾಂಡ 28 : 47 (IRVKN)
ನಿಮಗೆ ಸರ್ವಸಮೃದ್ಧಿಯುಂಟಾದ ಕಾಲದಲ್ಲಿಯೂ ನೀವು ನಿಮ್ಮ ದೇವರಾದ ಯೆಹೋವನನ್ನು ಹರ್ಷಾನಂದಗಳುಳ್ಳವರಾಗಿ ಸೇವಿಸದೆ ಹೋದುದರಿಂದ,
ಧರ್ಮೋಪದೇಶಕಾಂಡ 28 : 48 (IRVKN)
ಯೆಹೋವನು ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವನು; ಆಗ ನೀವು ಹಸಿವೆ, ಬಾಯಾರಿಕೆಗಳುಳ್ಳವರಾಗಿ, ಬಟ್ಟೆಯೂ ಮತ್ತು ಏನೂ ಇಲ್ಲದವರಾಗಿ ಆ ಶತ್ರುಗಳಿಗೇ ಸೇವಕರಾಗಬೇಕಾಗುವುದು. ‡ ಅಥವಾ ಶತ್ರುಗಳು. ಯೆಹೋವನು ಕಬ್ಬಿಣದ ನೊಗವನ್ನು ಹೇರಿಸಿ ನಿಮ್ಮನ್ನು ನಾಶಮಾಡುವನು.
ಧರ್ಮೋಪದೇಶಕಾಂಡ 28 : 49 (IRVKN)
ರಣಹದ್ದು ಹೇಗೆ ದೂರದಿಂದ ಹಾರಿಬರುವುದೋ ಹಾಗೆಯೇ ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗವು ನಿಮ್ಮ ಮೇಲೆ ಬರುವಂತೆ ಯೆಹೋವನು ಮಾಡುವನು.
ಧರ್ಮೋಪದೇಶಕಾಂಡ 28 : 50 (IRVKN)
ಆ ಜನಾಂಗದವರು ಕ್ರೂರಮುಖವುಳ್ಳವರಾಗಿ ನಿಮ್ಮನ್ನು ವೃದ್ಧರೆಂದು ಮರ್ಯಾದೆ ತೋರಿಸುವುದಿಲ್ಲ ಮತ್ತು ಚಿಕ್ಕವರೆಂದು ಕನಿಕರಿಸುವುದಿಲ್ಲ.
ಧರ್ಮೋಪದೇಶಕಾಂಡ 28 : 51 (IRVKN)
ಅವರು ನಿಮ್ಮ ದನಗಳನ್ನೂ ಮತ್ತು ಬೆಳೆಗಳನ್ನೂ ತಿಂದುಬಿಟ್ಟು ನಿಮಗೆ ಧಾನ್ಯವನ್ನಾಗಲಿ, ದ್ರಾಕ್ಷಾರಸವನ್ನಾಗಲಿ, ಎಣ್ಣೆಯನ್ನಾಗಲಿ, ದನ ಮತ್ತು ಕುರಿಗಳ ಸಂತಾನವನ್ನಾಗಲಿ ಉಳಿಸದೆ ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುವರು.
ಧರ್ಮೋಪದೇಶಕಾಂಡ 28 : 52 (IRVKN)
ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ದೇಶದ ಎಲ್ಲಾ ಪಟ್ಟಣಗಳಿಗೂ ಅವರು ಮುತ್ತಿಗೆಹಾಕಿ, ನೀವು ನಂಬಿಕೊಂಡಿದ್ದ ಎತ್ತರವಾದ ಕೊತ್ತಲುಗಳುಳ್ಳ ಗೋಡೆಗಳನ್ನು ಕೆಡವಿಬಿಡುವರು.
ಧರ್ಮೋಪದೇಶಕಾಂಡ 28 : 53 (IRVKN)
ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಇಕ್ಕಟ್ಟಿಗೆ ಸಿಕ್ಕಿಸುವುದರಿಂದ ನೀವು ನಿಮ್ಮ ಸಂತಾನವನ್ನೇ ಅಂದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಗಂಡು ಮತ್ತು ಹೆಣ್ಣು ಮಕ್ಕಳ ಮಾಂಸವನ್ನೇ ತಿನ್ನುವಿರಿ.
ಧರ್ಮೋಪದೇಶಕಾಂಡ 28 : 54 (IRVKN)
ನಿಮ್ಮಲ್ಲಿ ಮೃದುಸ್ವಭಾವಿಯೂ ಮತ್ತು ಸೂಕ್ಷ್ಮಗುಣವುಳ್ಳವನು ಆಗಿರುವ ಸಹೋದರನು ಆಹಾರಕ್ಕಾಗಿ ತನ್ನ ಸಹೋದರ, ಪ್ರೀತಿಯ ಹೆಂಡತಿ ಮತ್ತು ತನ್ನ ಮಕ್ಕಳನ್ನು ದ್ವೇಷಿಸುವನು.
ಧರ್ಮೋಪದೇಶಕಾಂಡ 28 : 55 (IRVKN)
ಶತ್ರುಗಳು ನಿಮ್ಮ ಎಲ್ಲಾ ಪಟ್ಟಣಗಳಿಗೆ ಮುತ್ತಿಗೆಹಾಕಿ, ನಿಮ್ಮನ್ನು ಇಕ್ಕಟ್ಟಿಗೆ ಸಿಕ್ಕಿಸುವ ಕಾಲದಲ್ಲಿ ತನಗೆ ತಿನ್ನಲಿಕ್ಕೆ ಏನೂ ಉಳಿಯದೆ ಹೋಗುವುದರಿಂದ ಅವನು ತನ್ನ ಮಕ್ಕಳ ಮಾಂಸವನ್ನು ತಾನೇ ತಿನ್ನಬೇಕೆಂದು ಅಣ್ಣತಮ್ಮಂದಿರಿಗೂ, ಪ್ರಾಣಪ್ರಿಯಳಾದ ಹೆಂಡತಿಗೂ ಮತ್ತು ಉಳಿದ ಮಕ್ಕಳಿಗೂ ಕೋಪಗೊಂಡವನಂತೆ ನಟಿಸುತ್ತಾ ಆ ಮಾಂಸದಲ್ಲಿ ಅವರಿಗೆ ಸ್ವಲ್ಪವನ್ನಾದರೂ ಕೊಡದೆ ಹೋಗುವನು.
ಧರ್ಮೋಪದೇಶಕಾಂಡ 28 : 56 (IRVKN)
ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ, ನಿಮ್ಮನ್ನು ಬಹಳವಾಗಿ ಹಿಂಸಿಸುವ ಕಾಲದಲ್ಲಿ ಕೋಮಲತೆಯ ಮತ್ತು ಅತಿಸೂಕ್ಷ್ಮತೆಯ ದೆಸೆಯಿಂದ ಅಂಗಾಲನ್ನೂ ನೆಲಕ್ಕೆ ಇಡದವಳಾದ ಸ್ತ್ರೀಯು ತಿನ್ನಲಿಕ್ಕೆ ಏನೂ ಇಲ್ಲದವಳಾಗಿ, ನರಳುವಾಗ
ಧರ್ಮೋಪದೇಶಕಾಂಡ 28 : 57 (IRVKN)
ತಾನು ಆಗಲೇ ಹೆತ್ತ ಮಗುವಿನ ಮಾಂಸವನ್ನೂ ರಹಸ್ಯವಾಗಿ ತಿನ್ನಬೇಕೆಂದು ಯೋಚಿಸಿ, ಪ್ರಾಣಪ್ರಿಯನಾದ ಗಂಡನಿಗೂ, ಮಕ್ಕಳಿಗೂ ತಿಳಿಯದಂತೆ ಆ ಕಾರ್ಯವನ್ನು ಮಾಡುವಳು.
ಧರ್ಮೋಪದೇಶಕಾಂಡ 28 : 58 (IRVKN)
ಈ ಗ್ರಂಥದಲ್ಲಿ ಬರೆದಿರುವ ಧರ್ಮಶಾಸ್ತ್ರವಾಕ್ಯಗಳನ್ನೆಲ್ಲಾ ನೀವು ಅನುಸರಿಸದೆ ನಿಮ್ಮ ದೇವರಾದ ಯೆಹೋವನೆಂಬ ಮಹಾಮಹಿಮೆಯುಳ್ಳ ಅದ್ಭುತ ನಾಮದಲ್ಲಿ ನೀವು ಭಯಭಕ್ತಿಯುಳ್ಳವರಾಗಿ ನಡೆಯದೆ ಹೋದರೆ,
ಧರ್ಮೋಪದೇಶಕಾಂಡ 28 : 59 (IRVKN)
ಆತನು ನಿಮಗೂ, ನಿಮ್ಮ ಸಂತತಿಯವರಿಗೂ ದೀರ್ಘಕಾಲವಿರುವ ಬಹುಭಯಂಕರವಾದ ಉಪದ್ರವಗಳನ್ನು ಬರಮಾಡುವನು. ಬಹುಕಾಲದವರೆಗೂ ವಾಸಿಯಾಗದ ಘೋರ ವ್ಯಾಧಿಗಳಿಂದ ನಿಮ್ಮನ್ನು ಬಾಧಿಸುವನು.
ಧರ್ಮೋಪದೇಶಕಾಂಡ 28 : 60 (IRVKN)
ನೀವು ಹೆದರಿಕೊಳ್ಳುತ್ತಿದ್ದ ಐಗುಪ್ತದೇಶದ ರೋಗಗಳನ್ನೆಲ್ಲಾ ತಿರುಗಿ ನಿಮ್ಮ ಮೇಲೆ ಬರಮಾಡುವನು; ಅವು ನಿಮ್ಮನ್ನು ಅಂಟಿಕೊಂಡೇ ಇರುವವು.
ಧರ್ಮೋಪದೇಶಕಾಂಡ 28 : 61 (IRVKN)
ಇಷ್ಟು ಮಾತ್ರವಲ್ಲದೆ ಈ ಧರ್ಮಶಾಸ್ತ್ರಗ್ರಂಥದಲ್ಲಿ ಬರೆಯದೆ ಇರುವ ವಿಧವಿಧವಾದ ರೋಗಗಳನ್ನೂ ಮತ್ತು ವ್ಯಾಧಿಗಳನ್ನೂ ನಿಮ್ಮ ಮೇಲೆ ಬರಮಾಡಿ ನಿಮ್ಮನ್ನು ನಾಶಮಾಡುವನು.
ಧರ್ಮೋಪದೇಶಕಾಂಡ 28 : 62 (IRVKN)
ನಕ್ಷತ್ರಗಳಷ್ಟು ಅಸಂಖ್ಯರಾಗಿರುವ ನೀವು ನಿಮ್ಮ ದೇವರಾದ ಯೆಹೋವನ ಮಾತಿನಲ್ಲಿ ಲಕ್ಷ್ಯವಿಡದೆ ಹೋಗುವುದರಿಂದ ಸ್ವಲ್ಪ ಜನರಾಗಿಯೇ ಉಳಿಯುವಿರಿ.
ಧರ್ಮೋಪದೇಶಕಾಂಡ 28 : 63 (IRVKN)
ಹೇಗೆ ಯೆಹೋವನು ಈಗ ನಿಮ್ಮನ್ನು ಅಭಿವೃದ್ಧಿಪಡಿಸುವುದರಲ್ಲಿಯೂ, ಹೆಚ್ಚಿಸುವುದರಲ್ಲಿಯೂ ಸಂತೋಷಪಡುತ್ತಾನೋ ಹಾಗೆಯೇ ಆಗ ನಿಮ್ಮನ್ನು ಕೆಡಿಸಿ ನಾಶಮಾಡುವುದರಲ್ಲಿ ಸಂತೋಷಪಟ್ಟು, ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದೊಳಗಿಂದ ನಿಮ್ಮನ್ನು ಕಿತ್ತುಹಾಕುವನು.
ಧರ್ಮೋಪದೇಶಕಾಂಡ 28 : 64 (IRVKN)
ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲಾ ಜನಾಂಗಗಳಲ್ಲಿಯೂ ಯೆಹೋವನು ನಿಮ್ಮನ್ನು ಚದರಿಸುವನು. ಅಲ್ಲಿ ನಿಮಗಾಗಲಿ ಅಥವಾ ನಿಮ್ಮ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.
ಧರ್ಮೋಪದೇಶಕಾಂಡ 28 : 65 (IRVKN)
ಆ ದೇಶಗಳಲ್ಲಿ ನಿಮಗೆ ಯಾವ ವಿಶ್ರಾಂತಿಯೂ ದೊರೆಯುವುದಿಲ್ಲ; ಸ್ವಲ್ಪ ಹೊತ್ತು ಅಂಗಾಲಿಡುವುದಕ್ಕೂ ನಿಮಗೆ ಸ್ಥಳಸಿಕ್ಕುವುದಿಲ್ಲ. ನೀವು ನಡುಗುವ ಹೃದಯವುಳ್ಳವರಾಗಿಯೂ, ದಿಕ್ಕುತೋರದೆ ಕಂಗೆಟ್ಟವರಾಗಿಯೂ, ಮನಗುಂದಿದವರಾಗಿಯೂ ಇರುವಂತೆ ಯೆಹೋವನು ಮಾಡುವನು.
ಧರ್ಮೋಪದೇಶಕಾಂಡ 28 : 66 (IRVKN)
ಬದುಕುವೆವೋ ಇಲ್ಲವೋ ಎಂಬುದಾಗಿ ಅನುಮಾನಪಟ್ಟು ನೀವು ಹಗಲಿರುಳು ಪ್ರಾಣಭಯದಲ್ಲಿರುವಿರಿ; ಪ್ರಾಣದ ಮೇಲಣ ನಂಬಿಕೆಯನ್ನು ಬಿಟ್ಟೇಬಿಡುವಿರಿ.
ಧರ್ಮೋಪದೇಶಕಾಂಡ 28 : 67 (IRVKN)
ಮನಸ್ಸಿನಲ್ಲಿ ಯಾವಾಗಲೂ ಪ್ರಾಣಭಯವಿರುವುದರಿಂದಲೂ ಕಣ್ಣಿನಿಂದ ಭಯಂಕರವಾದ ಸಂಗತಿಗಳನ್ನು ನೋಡುವುದರಿಂದಲೂ ನೀವು ಹೊತ್ತಾರೆಯಲ್ಲಿ, “ಅಯ್ಯೋ, ಅಯ್ಯೋ ಸಾಯಂಕಾಲ ಯಾವಾಗ ಬರುವುದೋ” ಎಂದೂ, ಸಾಯಂಕಾಲದಲ್ಲಿ, “ಅಯ್ಯೋ, ಅಯ್ಯೋ! ಬೆಳಿಗ್ಗೆ ಯಾವಾಗ ಬರುವುದೋ” ಎಂದು ಕೊರಗುವಿರಿ.
ಧರ್ಮೋಪದೇಶಕಾಂಡ 28 : 68 (IRVKN)
ನೀವು ಐಗುಪ್ತದೇಶವನ್ನು ತಿರುಗಿ ಎಂದಿಗೂ ನೋಡುವುದಿಲ್ಲವೆಂದು ಯೆಹೋವನು ಹೇಳಿದ್ದರೂ ಆತನು ನಿಮ್ಮನ್ನು ಹಡಗುಗಳನ್ನೇರಿಸಿ ಅಲ್ಲಿಗೆ ತಿರುಗಿ ಹೋಗ ಮಾಡುವನು. ಅಲ್ಲಿ ನೀವು ಶತ್ರುಗಳಿಗೆ ನಿಮ್ಮನ್ನು ದಾಸದಾಸಿಯರನ್ನಾಗಿ ಮಾರಿಕೊಳ್ಳಬೇಕೆಂದು ಅಪೇಕ್ಷಿಸಿದರೂ ಯಾರೂ ನಿಮ್ಮನ್ನು ಕೊಂಡುಕೊಳ್ಳುವುದಿಲ್ಲ.
❮
❯