ಧರ್ಮೋಪದೇಶಕಾಂಡ 30 : 1 (IRVKN)
ಯೆಹೋವನ ಕಡೆಗೆ ತಿರುಗಿಕೊಳ್ಳುವುದರಿಂದ ಉಂಟಾಗುವ ಆಶೀರ್ವಾದಗಳು ನಾನು ನಿಮ್ಮ ಮುಂದೆ ಇಟ್ಟಿರುವ ಆಶೀರ್ವಾದವೂ ಮತ್ತು ಶಾಪವೂ ನಿಮ್ಮ ಅನುಭವಕ್ಕೆ ಬಂದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಚದರಿಸಿರುವ ದೇಶಗಳಲ್ಲಿ ನೀವು ಇವುಗಳನ್ನು ನೆನಪಿಗೆ ತಂದುಕೊಂಡು,
ಧರ್ಮೋಪದೇಶಕಾಂಡ 30 : 2 (IRVKN)
ನಿಮ್ಮ ಮಕ್ಕಳ ಸಹಿತವಾಗಿ ನಿಮ್ಮ ದೇವರಾದ ಯೆಹೋವನ ಆಶ್ರಯಕ್ಕೆ ತಿರುಗಿ ಬಂದು, ನಾನು ಈಗ ನಿಮಗೆ ಬೋಧಿಸುವ ಆತನ ಮಾತುಗಳಿಗೆ ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ವಿಧೇಯರಾದರೆ,
ಧರ್ಮೋಪದೇಶಕಾಂಡ 30 : 3 (IRVKN)
ನಿಮ್ಮ ದೇವರಾದ ಯೆಹೋವನು ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ, ನಿಮ್ಮನ್ನು ಕನಿಕರಿಸಿ, ತಾನು ನಿಮ್ಮನ್ನು ಚದರಿಸಿರುವ ಎಲ್ಲಾ ದೇಶಗಳಿಂದ ಪುನಃ ಕೂಡಿಸುವನು.
ಧರ್ಮೋಪದೇಶಕಾಂಡ 30 : 4 (IRVKN)
ನಿಮ್ಮಲ್ಲಿ ಯಾರಾದರೂ ಭೂಲೋಕದ ಕಟ್ಟಕಡೆಯವರೆಗೆ ಒಯ್ಯಲ್ಪಟ್ಟರೂ, ಅಲ್ಲಿಂದಲೂ ನಿಮ್ಮ ದೇವರಾದ ಯೆಹೋವನು ಅವರನ್ನೂ ಕರೆದುಕೊಂಡು ಬರುವನು.
ಧರ್ಮೋಪದೇಶಕಾಂಡ 30 : 5 (IRVKN)
ನಿಮ್ಮ ಪೂರ್ವಿಕರಿಗೆ ಸ್ವತ್ತಾಗಿದ್ದ ದೇಶದಲ್ಲಿ ಸೇರಿಸಿ, ಅದು ನಿಮಗೂ ಸ್ವದೇಶವಾಗುವಂತೆ ಮಾಡಿ, ನಿಮಗೆ ಮೇಲನ್ನುಂಟುಮಾಡಿ ಪೂರ್ವಿಕರಿಗಿಂತಲೂ ಅಧಿಕವಾಗಿ ನಿಮ್ಮನ್ನು ಹೆಚ್ಚಿಸುವನು.
ಧರ್ಮೋಪದೇಶಕಾಂಡ 30 : 6 (IRVKN)
ನಿಮ್ಮ ದೇವರಾದ ಯೆಹೋವನು ನಿಮ್ಮ ಮತ್ತು ನಿಮ್ಮ ಸಂತತಿಯವರ ಹೃದಯಕ್ಕೆ ಸುನ್ನತಿಮಾಡುವನು. ಆಗ ನೀವು ಆತನನ್ನು ಸಂಪೂರ್ಣವಾದ ಹೃದಯದಿಂದಲೂ ಮತ್ತು ಸಂಪೂರ್ಣವಾದ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಕೊಳ್ಳುವಿರಿ.
ಧರ್ಮೋಪದೇಶಕಾಂಡ 30 : 7 (IRVKN)
ನಿಮ್ಮ ದೇವರಾದ ಯೆಹೋವನು ಆ ಶಾಪಗಳನ್ನೆಲ್ಲಾ, ನಿಮ್ಮನ್ನು ದ್ವೇಷಿಸಿ ಹಿಂಸಿಸಿದ ನಿಮ್ಮ ಶತ್ರುಗಳ ಮೇಲೆಯೇ ಬರಮಾಡುವನು.
ಧರ್ಮೋಪದೇಶಕಾಂಡ 30 : 8 (IRVKN)
ನೀವಾದರೋ ಯೆಹೋವನ ಮಾತಿಗೆ ಪುನಃ ವಿಧೇಯರಾಗಿ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳಂತೆ ನಡೆಯುವಿರಿ.
ಧರ್ಮೋಪದೇಶಕಾಂಡ 30 : 9 (IRVKN)
ಮತ್ತು ನಿಮ್ಮ ದೇವರಾದ ಯೆಹೋವನು ನಿಮ್ಮ ಸಂತಾನ, ಪಶು ಮತ್ತು ವ್ಯವಸಾಯಗಳನ್ನು ಹೆಚ್ಚಿಸಿ ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಪಡಿಸಿ ನಿಮಗೆ ಮೇಲನ್ನು ಉಂಟುಮಾಡುವನು.
ಧರ್ಮೋಪದೇಶಕಾಂಡ 30 : 10 (IRVKN)
ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ವಿಧೇಯರಾಗಿ ಈ ಧರ್ಮಶಾಸ್ತ್ರದ ಆಜ್ಞಾವಿಧಿಗಳನ್ನು ಅನುಸರಿಸಿ ಸಂಪೂರ್ಣವಾದ ಹೃದಯದಿಂದಲೂ ಮತ್ತು ಸಂಪೂರ್ಣವಾದ ಮನಸ್ಸಿನಿಂದಲೂ ಆತನ ಕಡೆಗೆ ತಿರುಗಿಕೊಳ್ಳಲು, ಆತನು ನಿಮ್ಮ ಪೂರ್ವಿಕರ ವಿಷಯದಲ್ಲಿ ಸಂತೋಷಪಟ್ಟ ಹಾಗೆಯೇ ನಿಮ್ಮ ವಿಷಯದಲ್ಲಿಯೂ ತಿರುಗಿ ಸಂತೋಷಪಟ್ಟು ನಿಮಗೆ ಮೇಲನ್ನು ಉಂಟುಮಾಡುವನು.
ಧರ್ಮೋಪದೇಶಕಾಂಡ 30 : 11 (IRVKN)
ಜೀವಮರಣಗಳ ಆಯ್ಕೆ ನಾನು ಈಗ ನಿಮಗೆ ಬೋಧಿಸಿದ ಧರ್ಮೋಪದೇಶವು ನಿಮಗೆ ಗ್ರಹಿಸುವುದಕ್ಕೆ ಕಷ್ಟವಾದದ್ದು ಯಾವುದು ಇಲ್ಲ, ಅನುಸರಿಸುವುದಕ್ಕೆ ಅಸಾಧ್ಯವಾದದ್ದೂ ಅಲ್ಲ.
ಧರ್ಮೋಪದೇಶಕಾಂಡ 30 : 12 (IRVKN)
ಇದು ಮೇಲಣ ಲೋಕದಲ್ಲಿರುವ ಮಾತಲ್ಲ. “ನಮಗೋಸ್ಕರ ಮೇಲಣ ಲೋಕವನ್ನು ಏರಿ ಅದನ್ನು ತಿಳಿದುಕೊಂಡು ಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದರೆ ನಾವು ಕೇಳಿ ಕೈಕೊಂಡೇವು” ಅಂದುಕೊಳ್ಳುವುದಕ್ಕೆ ಅವಕಾಶವೇನೂ ಇಲ್ಲ.
ಧರ್ಮೋಪದೇಶಕಾಂಡ 30 : 13 (IRVKN)
ಮತ್ತು “ಇದು ಸಮುದ್ರದ ಆಚೆ ಇರುವ ಮಾತಲ್ಲ. ನಮಗೋಸ್ಕರ ಸಮುದ್ರವನ್ನು ದಾಟಿ ಅದನ್ನು ತೆಗೆದುಕೊಂಡುಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದರೆ ನಾವು ಕೈಕೊಂಡೇವು” ಅಂದುಕೊಳ್ಳುವುದಕ್ಕೆ ಆಸ್ಪದವೇನೂ ಇಲ್ಲ.
ಧರ್ಮೋಪದೇಶಕಾಂಡ 30 : 14 (IRVKN)
ಈ ವಾಕ್ಯವು ನಿಮ್ಮ ಸಮೀಪದಲ್ಲಿಯೇ ಇದೆ; ಇದು ನಿಮ್ಮ ಬಾಯಲ್ಲಿಯೂ ಮತ್ತು ಹೃದಯದಲ್ಲಿಯೂ ಇದೆ; ಇದನ್ನು ಅನುಸರಿಸುವುದಕ್ಕೆ ಅವಕಾಶವುಂಟಷ್ಟೆ.
ಧರ್ಮೋಪದೇಶಕಾಂಡ 30 : 15 (IRVKN)
ಶುಭವನ್ನೇ ಆರಿಸಿಕೊಳ್ಳಬೇಕೆಂದು ಮೋಶೆ ಬೋಧಿಸಿದ್ದು “ನೋಡಿರಿ, ಈಗ ನಾನು ಜೀವ ಮತ್ತು ಶುಭಗಳನ್ನೂ ಹಾಗೂ ಮರಣ ಮತ್ತು ಅಶುಭಗಳನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆ.
ಧರ್ಮೋಪದೇಶಕಾಂಡ 30 : 16 (IRVKN)
ನಾನು ಈಗ ನಿಮಗೆ ಬೋಧಿಸುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನು ಹೇಳಿದ ಮಾರ್ಗದಲ್ಲಿ ನಡೆದು, ಆತನ ಆಜ್ಞಾವಿಧಿ ನಿಯಮಗಳನ್ನು ಅನುಸರಿಸಿದರೆ ನೀವು ಬದುಕಿಕೊಂಡು ಹೆಚ್ಚುವಿರಿ; ಮತ್ತು ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸುವನು.
ಧರ್ಮೋಪದೇಶಕಾಂಡ 30 : 17 (IRVKN)
ಆದರೆ ನೀವು ಆತನನ್ನು ಬಿಟ್ಟು ಆತನ ಮಾತನ್ನು ಕೇಳಲೊಲ್ಲದೆ ಮರುಳುಗೊಂಡವರಾಗಿ, ಇತರ ದೇವರುಗಳನ್ನು ಪೂಜಿಸಿ, ಸೇವಿಸಿದರೆ,
ಧರ್ಮೋಪದೇಶಕಾಂಡ 30 : 18 (IRVKN)
ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನ್ ನದಿಯನ್ನು ದಾಟಿ ಹೋಗುವ ದೇಶದಲ್ಲಿ ಬಹುಕಾಲ ಇರದೆ ನಾಶವಾಗಿಯೇ ಹೋಗುವಿರೆಂದು ನಾನು ಈಗ ನಿಮಗೆ ಖಂಡಿತವಾಗಿ ತಿಳಿಸುತ್ತೇನೆ.
ಧರ್ಮೋಪದೇಶಕಾಂಡ 30 : 19 (IRVKN)
ನಾನು ಜೀವ ಮತ್ತು ಮರಣಗಳನ್ನೂ ಹಾಗು ಆಶೀರ್ವಾದ ಮತ್ತು ಶಾಪಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಮತ್ತು ಆಕಾಶಗಳು ಸಾಕ್ಷಿಗಳಾಗಿರಲಿ. ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಕೊಳ್ಳುವಂತೆ ಜೀವವನ್ನೇ ಆರಿಸಿಕೊಳ್ಳಿರಿ.
ಧರ್ಮೋಪದೇಶಕಾಂಡ 30 : 20 (IRVKN)
ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನ ಮಾತಿಗೆ ವಿಧೇಯರಾಗಿರಿ, ಆತನನ್ನು ಹೊಂದಿಕೊಂಡೇ ಇರಿ. ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣ ಮಾಡಿಕೊಟ್ಟ ದೇಶದಲ್ಲಿ ನೀವು ಬದುಕಿಕೊಳ್ಳುವುದಕ್ಕೂ ಬಹುಕಾಲ ಇರುವುದಕ್ಕೂ ಆತನೇ ಆಧಾರ” ಎಂದು ಹೇಳಿದನು.

1 2 3 4 5 6 7 8 9 10 11 12 13 14 15 16 17 18 19 20