ಧರ್ಮೋಪದೇಶಕಾಂಡ 31 : 1 (IRVKN)
ಮೋಶೆಯ ಉತ್ತರಾಧಿಕಾರಿ ಯೆಹೋಶುವನು ಮೋಶೆ ಹೋಗಿ ಈ ಮಾತುಗಳನ್ನು ಇಸ್ರಾಯೇಲರೆಲ್ಲರಿಗೆ ತಿಳಿಸಿದನು.
ಧರ್ಮೋಪದೇಶಕಾಂಡ 31 : 2 (IRVKN)
ಅವನು ಅವರಿಗೆ, “ನಾನು ಈಗ ನೂರಿಪ್ಪತ್ತು ವರ್ಷದವನಾಗಿದ್ದೇನೆ; ವಿಶೇಷವಾದ ಕಾರ್ಯಗಳನ್ನು ನಿರ್ವಹಿಸುವುದು ಇನ್ನು ನನ್ನಿಂದಾಗದು. ಯೆಹೋವನು ನನಗೆ, ‘ನೀನು ಈ ಯೊರ್ದನ್ ನದಿಯನ್ನು ದಾಟಬಾರದು’ ಎಂದು ಆಜ್ಞಾಪಿಸಿದ್ದಾನೆ.
ಧರ್ಮೋಪದೇಶಕಾಂಡ 31 : 3 (IRVKN)
ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಮುಂದೆ ಹೋಗುವನು; ಆತನು ಆ ಜನಾಂಗಗಳನ್ನು ನಿಮ್ಮ ಎದುರಿನಲ್ಲಿ ನಿಲ್ಲದಂತೆ ನಾಶಮಾಡುವುದರಿಂದ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ. ಯೆಹೋವನು ಆಜ್ಞಾಪಿಸಿದಂತೆ ಯೆಹೋಶುವನು ನಿಮ್ಮ ನಾಯಕನಾಗಿ ನದಿಯನ್ನು ದಾಟಿಹೋಗುವನು.
ಧರ್ಮೋಪದೇಶಕಾಂಡ 31 : 4 (IRVKN)
ಯೆಹೋವನು ಅಮೋರಿಯರ ಅರಸನಾದ ಸೀಹೋನ್ ಮತ್ತು ಓಗರನ್ನು ನಾಶಮಾಡಿ, ಅವರ ದೇಶವನ್ನು ನಿಮಗೆ ಸ್ವಾಧೀನಪಡಿಸಿದಂತೆ ಆ ಜನಾಂಗಗಳನ್ನೂ ನಾಶಮಾಡಿ ಅವರ ದೇಶವನ್ನು ನಿಮಗೆ ವಶಪಡಿಸುವನು.
ಧರ್ಮೋಪದೇಶಕಾಂಡ 31 : 5 (IRVKN)
ಯೆಹೋವನು ಅವರನ್ನು ನಿಮ್ಮಿಂದ ಪರಾಜಯಪಡಿಸಿದಾಗ ನೀವು ಅವರ ವಿಷಯದಲ್ಲಿ ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದುಕೊಳ್ಳಬೇಕು.
ಧರ್ಮೋಪದೇಶಕಾಂಡ 31 : 6 (IRVKN)
ನೀವು ಶೂರರಾಗಿ ಧೈರ್ಯದಿಂದ ಇರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ” ಎಂದು ಹೇಳಿದನು.
ಧರ್ಮೋಪದೇಶಕಾಂಡ 31 : 7 (IRVKN)
ಆಗ ಮೋಶೆ ಯೆಹೋಶುವನನ್ನು ಕರೆದು ಇಸ್ರಾಯೇಲರ ಮುಂದೆ ಅವನಿಗೆ, “ಯೆಹೋವನು ಇವರ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶಕ್ಕೆ ನೀನೇ ಇವರೊಡನೆ ಹೋಗಿ ಅದನ್ನು ಅವರಿಗೆ ಸ್ವಾಧೀನಪಡಿಸಬೇಕು. ಆದುದರಿಂದ ಶೂರನಾಗಿ ಧೈರ್ಯದಿಂದಿರು;
ಧರ್ಮೋಪದೇಶಕಾಂಡ 31 : 8 (IRVKN)
ಯೆಹೋವನು ತಾನೇ ನಿನ್ನ ಮುಂದೆ ಹೋಗುವನು; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ, ಕೈಬಿಡುವುದಿಲ್ಲ; ಅಂಜಬೇಡ, ಧೈರ್ಯದಿಂದಿರು” ಎಂದು ಹೇಳಿದನು.
ಧರ್ಮೋಪದೇಶಕಾಂಡ 31 : 9 (IRVKN)
ಧರ್ಮಶಾಸ್ತ್ರವನ್ನು ಸಾವರ್ಜನಿಕವಾಗಿ ಓದಬೇಕೆಂಬ ನಿಯಮ ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಇಸ್ರಾಯೇಲರ ಹಿರಿಯರ ವಶಕ್ಕೆ ಕೊಟ್ಟನು.
ಧರ್ಮೋಪದೇಶಕಾಂಡ 31 : 10 (IRVKN)
ಆತನು ಅವರಿಗೆ, “ಪ್ರತಿ ಏಳು ವರ್ಷಗಳು ಪೂರ್ತಿಯಾದಾಗ ಬಿಡುಗಡೆಯ ಸಂವತ್ಸರದ ನೇಮಕ ಕಾಲದಲ್ಲಿ ಅಂದರೆ ಪರ್ಣಶಾಲೆಗಳ ಜಾತ್ರೆಯಲ್ಲಿ
ಧರ್ಮೋಪದೇಶಕಾಂಡ 31 : 11 (IRVKN)
ನಿಮ್ಮ ದೇವರಾದ ಯೆಹೋವನು ಆದುಕೊಂಡ ಸ್ಥಳದಲ್ಲಿ ಇಸ್ರಾಯೇಲರೆಲ್ಲರು ಆತನ ಸನ್ನಿಧಿಗೆ ಕೂಡಿಬಂದಾಗ ನೀವು ಅವರೆಲ್ಲರಿಗೆ ಕೇಳಿಸುವಂತೆ ಈ ಧರ್ಮಶಾಸ್ತ್ರವನ್ನು ಅವರ ಮುಂದೆ ಓದಬೇಕು.
ಧರ್ಮೋಪದೇಶಕಾಂಡ 31 : 12 (IRVKN)
ಜನರೆಲ್ಲರೂ ಈ ಧರ್ಮಶಾಸ್ತ್ರವನ್ನು ಕೇಳಿ ತಿಳಿದುಕೊಳ್ಳುವಂತೆ ಸ್ತ್ರೀಯರನ್ನೂ, ಪುರುಷರನ್ನೂ, ಮಕ್ಕಳನ್ನೂ ಮತ್ತು ನಿಮ್ಮ ಊರುಗಳಲ್ಲಿರುವ ಅನ್ಯರನ್ನೂ ಕೂಡಿಸಬೇಕು. ಆಗ ಅವರು ತಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಿ ನಡೆಯುವರು.
ಧರ್ಮೋಪದೇಶಕಾಂಡ 31 : 13 (IRVKN)
ಮತ್ತು ಯೆಹೋವನ ಮಹತ್ಕಾರ್ಯಗಳನ್ನು ನೋಡದಿರುವ ನಿಮ್ಮ ಸಂತತಿಯವರೂ ಕೇಳಿ ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನ್ ನದಿಯನ್ನು ದಾಟಿ ಹೋಗುವ ದೇಶದಲ್ಲಿ ವಾಸವಾಗಿರುವವರೆಗೂ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರುವುದಕ್ಕೆ ಕಲಿತುಕೊಳ್ಳುವರು” ಎಂದು ಹೇಳಿದನು.
ಧರ್ಮೋಪದೇಶಕಾಂಡ 31 : 14 (IRVKN)
ಯೆಹೋವನು ಯೆಹೋಶುವನನ್ನು ನೇಮಿಸಿದ್ದು ಯೆಹೋವನು ಮೋಶೆಗೆ, “ನೀನು ಸಾಯಬೇಕಾದ ದಿನಗಳು ಸಮೀಪವಾದವು, ಆದಕಾರಣ ನೀನು ಯೆಹೋಶುವನನ್ನು ಕರೆದುಕೊಂಡು ಬಂದು ದೇವದರ್ಶನದ ಗುಡಾರದಲ್ಲಿ ನನ್ನ ಸನ್ನಿಧಿಯಲ್ಲಿ ನಿಲ್ಲಬೇಕು; ಆಗ ನಾನು ಅವನಿಗೆ ಅಧಿಕಾರವನ್ನು ಕೊಡುವೆನು” ಎಂದು ಹೇಳಿದನು. ಆಗ ಮೋಶೆ ಮತ್ತು ಯೆಹೋಶುವನೂ ದೇವದರ್ಶನದ ಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಂತುಕೊಂಡರು.
ಧರ್ಮೋಪದೇಶಕಾಂಡ 31 : 15 (IRVKN)
ಅಲ್ಲಿ ಯೆಹೋವನು ಮೇಘಸ್ತಂಭದಲ್ಲಿ ಕಾಣಿಸಿದನು; ಆ ಮೇಘಸ್ತಂಭವು ಗುಡಾರದ ಬಾಗಿಲಿನ ಬಳಿಯಲ್ಲಿ ನಿಂತಿತು.
ಧರ್ಮೋಪದೇಶಕಾಂಡ 31 : 16 (IRVKN)
ಇಸ್ರಾಯೇಲರನ್ನು ಕುರಿತು ಮೋಶೆ ರಚಿಸಬೇಕಾದ ಸಾಕ್ಷ್ಯಗೀತೆ ಯೆಹೋವನು ಮೋಶೆಗೆ, “ನೀನು ಪೂರ್ವಿಕರಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.
ಧರ್ಮೋಪದೇಶಕಾಂಡ 31 : 17 (IRVKN)
ಆಗ ನಾನು ಅವರ ಮೇಲೆ ಬಲುಕೋಪಗೊಂಡು ಅವರನ್ನು ಬಿಟ್ಟು ಅವರಿಗೆ ವಿಮುಖನಾಗಿರುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಮತ್ತು ಅನೇಕ ಕಷ್ಟಗಳೂ ಹಾಗು ವಿಪತ್ತುಗಳೂ ಅವರಿಗೆ ಒದಗುವವು. ಆಗ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿತ್ತಲ್ಲ’ ಅಂದುಕೊಳ್ಳುವರು.
ಧರ್ಮೋಪದೇಶಕಾಂಡ 31 : 18 (IRVKN)
ಅವರು ನನ್ನನ್ನು ಬಿಟ್ಟು ಇತರ ದೇವರುಗಳನ್ನು ಆಶ್ರಯಿಸಿ ಬಹಳ ದುಷ್ಕಾರ್ಯಗಳನ್ನು ನಡೆಸುವುದರಿಂದ ನಾನು ಆ ಕಾಲದಲ್ಲಿ ಖಂಡಿತವಾಗಿ ಅವರಿಗೆ ವಿಮುಖನಾಗಿರುವೆನು.
ಧರ್ಮೋಪದೇಶಕಾಂಡ 31 : 19 (IRVKN)
“ಆದಕಾರಣ ನೀನು ಈ ಪದ್ಯವನ್ನು ಬರೆದುಕೊಂಡು ಇಸ್ರಾಯೇಲರಿಗೆ ಕಲಿಸಿಕೊಡಬೇಕು. ಈ ಪದ್ಯವು ಇಸ್ರಾಯೇಲರಿಗೆ ವಿರುದ್ಧವಾಗಿ ನನ್ನ ಪಕ್ಷದಲ್ಲಿ ಸಾಕ್ಷಿಯಾಗಿರುವಂತೆ ಇದನ್ನು ಅವರಿಗೆ ಬಾಯಿಪಾಠಮಾಡಿಸು.
ಧರ್ಮೋಪದೇಶಕಾಂಡ 31 : 20 (IRVKN)
ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವುದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆನು. ನಾನು ಇವರ ಪೂರ್ವಿಕರಿಗೆ ಪ್ರಮಾಣಮಾಡಿದಂತೆ * ಬಹಳಷ್ಟು ಫಲವತ್ತಾದ ದೇಶ. ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಊಟಮಾಡಿ ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ, ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು.
ಧರ್ಮೋಪದೇಶಕಾಂಡ 31 : 21 (IRVKN)
ಅನಂತರ ಅನೇಕ ಕಷ್ಟಗಳೂ ಮತ್ತು ವಿಪತ್ತುಗಳೂ ಸಂಭವಿಸಿದಾಗ ಈ ಪದ್ಯವು ಇವರ ಸಂತತಿಯವರ ಬಾಯಲ್ಲಿ ಇದ್ದುಕೊಂಡು ಅವರ ಮುಂದೆ ಸಾಕ್ಷಿಕೊಡುವುದು” ಎಂದು ಹೇಳಿದನು.
ಧರ್ಮೋಪದೇಶಕಾಂಡ 31 : 22 (IRVKN)
ಆದಕಾರಣ ಮೋಶೆ ಆ ದಿನದಲ್ಲೇ ಈ ಪದ್ಯವನ್ನು ಬರೆದು ಇಸ್ರಾಯೇಲರಿಗೆ ಕಲಿಸಿದನು.
ಧರ್ಮೋಪದೇಶಕಾಂಡ 31 : 23 (IRVKN)
ಧರ್ಮೋಪದೇಶಕಾಂಡ 31 : 24 (IRVKN)
ಆಗ ಯೆಹೋವನು ನೂನನ ಮಗನಾದ ಯೆಹೋಶುವನಿಗೆ, “ನಾನು ಇಸ್ರಾಯೇಲರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನೀನೇ ಅವರನ್ನು ಸೇರಿಸಬೇಕು; ಆದುದರಿಂದ ಶೂರನಾಗಿ ಧೈರ್ಯದಿಂದಿರು; ನಾನೇ ನಿನ್ನ ಸಂಗಡ ಇರುವೆನು” ಎಂದು ಆಜ್ಞಾಪಿಸಿದನು. ಅವಿಧೇಯತೆಯನ್ನು ಮುಂತಿಳಿಸಿದ್ದು ಮೋಶೆ ಈ ಧರ್ಮಶಾಸ್ತ್ರವನ್ನು ಗ್ರಂಥರೂಪವಾಗಿ ಬರೆದು ಪೂರೈಸಿದಾಗ,
ಧರ್ಮೋಪದೇಶಕಾಂಡ 31 : 25 (IRVKN)
ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಿಗೆ,
ಧರ್ಮೋಪದೇಶಕಾಂಡ 31 : 26 (IRVKN)
“ನೀವು ಈ ಧರ್ಮಶಾಸ್ತ್ರ ಪುಸ್ತಕವನ್ನು ನಿಮ್ಮ ವಶಕ್ಕೆ ತೆಗೆದುಕೊಂಡು ನಿಮ್ಮ ದೇವರಾದ ಯೆಹೋವನ ಆಜ್ಞಾಶಾಸನಗಳ ಮಂಜೂಷದ ಬಳಿಯಲ್ಲಿ ಇಡಿರಿ. ಇಸ್ರಾಯೇಲರೇ, ಅಲ್ಲಿ ಇದು ನಿಮಗೆ ವಿರುದ್ಧವಾಗಿ ಸಾಕ್ಷಿಕೊಡುವುದಾಗಿರಲಿ.
ಧರ್ಮೋಪದೇಶಕಾಂಡ 31 : 27 (IRVKN)
ಯಾಕೆಂದರೆ ನೀವು ಹಟಮಾರಿಗಳು, ಆಜ್ಞೆಗೆ ಒಳಗಾಗದವರೆಂಬುದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಯೆಹೋವನಿಗೆ ವಿರುದ್ಧವಾಗಿ ಪ್ರತಿಭಟಿಸಿದ್ದೀರಿ; ನಾನು ಹೋದ ತರುವಾಯ ನೀವು ಪುನಃ ಬೀಳುವುದು ಮತ್ತಷ್ಟು ನಿಶ್ಚಯ.
ಧರ್ಮೋಪದೇಶಕಾಂಡ 31 : 28 (IRVKN)
ನಿಮ್ಮ ಕುಲಗಳ ಹಿರಿಯರನ್ನೂ, ಅಧಿಪತಿಗಳನ್ನೂ ನನ್ನ ಬಳಿಗೆ ಕೂಡಿಸಿರಿ; ನಾನು ಈ ಮಾತುಗಳನ್ನು ಅವರಿಗೆ ತಿಳಿಸಿ ಅವರಿಗೆ ವಿರುದ್ಧವಾಗಿ ಸಾಕ್ಷಿಗಳಾಗುವುದಕ್ಕೆ ಭೂಮಿ ಮತ್ತು ಆಕಾಶಗಳನ್ನು ಕರೆಯುವೆನು.
ಧರ್ಮೋಪದೇಶಕಾಂಡ 31 : 29 (IRVKN)
ನಾನು ಹೋದ ಮೇಲೆ ನೀವು ದ್ರೋಹಿಗಳಾಗಿ ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರೆಂದೂ ತಿಳಿದಿದೆ, ಅನಂತರದಲ್ಲಿ ನೀವು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ದುರಾಚಾರಿಗಳಾಗಿ ಆತನನ್ನು ಕೋಪಗೊಳಿಸುವುದರಿಂದ ನಿಮಗೆ ಆಪತ್ತುಗಳು ಉಂಟಾಗುವವೆಂದೂ ನಾನು ಬಲ್ಲೆ” ಎಂದು ಹೇಳಿದನು.
ಧರ್ಮೋಪದೇಶಕಾಂಡ 31 : 30 (IRVKN)
ಮೋಶೆಯ ಗೀತೆ ಆಗ ಮೋಶೆ ಇಸ್ರಾಯೇಲರ ಸರ್ವಸಮೂಹದವರಿಗೆ ಕೇಳಿಸುವಂತೆ ಈ ಪದ್ಯದ ಮಾತುಗಳನ್ನೆಲ್ಲಾ ಹೇಳಿದನು.
❮
❯